ಚಿಕ್ಕಮಗಳೂರು: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರುಗಳ ಹಾಗೂ ಎಲ್ಲಾ ಘಟಕದ ಪದಾಧಿಕಾರಿಗಳ ಚಿಂತನಾ ಸಭೆಯನ್ನು ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು.
ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗಧೀಶ್ ಮಾತನಾಡಿ ಕರವೇ ವೇದಿಕೆಯು ೨೫ ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಇದೇ ತಿಂಗಳ ೨೪ರ ಶುಕ್ರವಾರ ಬೆಂಗಳೂರಿನ ಅರಮನೆ ಆವರಣದಲ್ಲಿ ಬೆಳ್ಳಿಹಬ್ಬ ಸಂಭ್ರಮಾಚರಣೆಯನ್ನು ರಾಜ್ಯಮಟ್ಟದಲ್ಲಿ ನಾರಾಯಣಗೌಡ ರವರ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಎರಡು ಸಾವಿರ ಕಾರ್ಯಕರ್ತರು ಹೋಗುತ್ತಿದ್ದು, ಜತೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಬೆಳ್ಳಿಹಬ್ಬದ ಪ್ರಯುಕ್ತ ಜಿಲ್ಲಾ ಸಮಾವೇಶವನ್ನು ನಡೆಸಲಾಗುವುದು ಎಂದರು.
ಬೆಳ್ಳಿಹಬ್ಬವನ್ನು ದಾಖಲೆ ನಿರ್ಮಾಣ ಮಾಡುವ ರೀತಿಯಲ್ಲಿ ನಾಡಿನ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನ ಇರುವ ಪರಂಪರೆ ಅನಾವರಣವನ್ನು ಮಾಡಲಾಗುವುದು, ನ್ಯಾಯಕ್ಕಾಗಿ ಹೋರಾಡಿದ ವಿಚಾರ ಮಂಡನೆ ಮತ್ತು ಕರ್ನಾಟಕ ರಾಜ್ಯದಲ್ಲಿ ಕನ್ನಡ ಕಡ್ಡಾಯವಾಗಿ ಮಾತನಾಡುವುದರ ಜತೆಗೆ ಖಾಸಗಿ ಹಾಗೂ ಸರ್ಕಾರಿ ಕೆಲಸದಲ್ಲಿ ಕನ್ನಡಿಗರಿಗೆ ಮೊದಲು ಆದ್ಯತೆ ನೀಡುವಂತೆ ಸರ್ಕಾರಕ್ಕೆ ತಿಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ದಶರಥರಾಜ್, ಜಿಲ್ಲಾ ವಕ್ತಾರ ಕೋಟೆ ಸೋಮಣ್ಣ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಪಂಚಾಕ್ಷರಿ, ತಾಲ್ಲೂಕು ಅಧ್ಯಕ್ಷರಾದ ನಾಗಲತಾ, ಹೇಮ, ಪ್ರಸನ್ನಗೌಡ, ಅಹಮದ್, ಅರುಣಾಕ್ಷಿ, ಶೃತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Silver Festival of Karnataka Defense Forum