ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ತೇಜು ಎಂಬ ಯುವಕನ ಬದುಕಲ್ಲಿ ಎಷ್ಟೇ ವರ್ಷಗಳು ಕಳೆದರೂ ಆ ೨,೦೦೦ ರೂಪಾಯಿ ಮುಖಬೆಲೆಯ ನೋಟು ಅಚ್ಚಹಸಿರಾಗೇ ಇರಲಿದೆ.
ಆರ್ಬಿಐ ೨,೦೦೦ ರೂ. ಮುಖಬೆಲೆಯ ನೋಟುಗಳ ಚಲಾವಣೆಗೆ ಬ್ರೇಕ್ ಹಾಕಿದ್ದು, ಬ್ಯಾಂಕ್ಗಳಲ್ಲಿ ನೋಟುಗಳ ವಿನಿಯಮಕ್ಕೆ ದೇಶದ ಜನರಿಗೆ ಗಡುವು ನೀಡಿದೆ. ಇನ್ನು ೪ ತಿಂಗಳಲ್ಲಿ ೨,೦೦೦ ರೂ. ಮುಖಬೆಲೆ ನೋಟಿಗೆ ಕೊನೆ ಮೊಳೆ ಕೂಡ ಬೀಳಲಿದೆ.
ತನ್ನ ಮದುವೆಯ ಆಮಂತ್ರಣ ಪತ್ರಿಕೆಯ ಫ್ರೆಂಡ್ಸ್ ಕಾರ್ಡ್ನ್ನ ೨,೦೦೦ ರೂ. ನೋಟಿನಲ್ಲೇ ಮುದ್ರಣ ಹಾಕಿಸಿದ್ದ. ಆ ಮದುವೆ ಆಮಂತ್ರಣ ಪತ್ರಿಕೆಯನ್ನ ನೋಡಿದರೆ ೨,೦೦೦ ರೂ. ನೋಟನ್ನ ನೋಡುವುದೇ ಬೇಡ. ಅಷ್ಟು ಅಚ್ಚುಕಟ್ಟಾಗಿ ಮಾಡಿಸಿದ್ದರು.
ನೋಟಿನಲ್ಲಿರುವ ನಂಬರ್, ನೋಟಿನ ಮಧ್ಯ ಭಾಗದಲ್ಲಿ ಇರುವ ಎಲ್ಲಾ ಭಾಷೆಯಲ್ಲಿ ೨,೦೦೦ ರೂ. ಎಂದು ಇರುವ ಜಾಗದಲ್ಲಿ ತನ್ನ ಹೆಸರಿನ ಜೊತೆ ಮದುವೆಯಾಗುವ ಹುಡುಗಿಯ ಹೆಸರನ್ನ ಹಾಕಿಸಿದ್ದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ಇರುವ ಜಾಗದಲ್ಲಿ ಲವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದು ಮಾಡಿಸಿದ್ದರು
ನೋಟಿನ ಮಧ್ಯದಲ್ಲಿ ಮಹಾತ್ಮ ಗಾಂಧಿಜೀಯವರ ಫೋಟೋ ಇರುವ ಜಾಗದಲ್ಲಿ ವಧು-ವರರನ್ನ ಆಶೀರ್ವದಿಸುತ್ತಿರುವ ಗಣಪತಿಯ ಭಾವಚಿತ್ರವಿದೆ. ನೋಟಿನ ಮತ್ತೊಂದು ಬದಿಯಲ್ಲಿ ಸ್ಕ್ಯಾನರ್ ಕೂಡ ಇದ್ದು, ಅದನ್ನ ಸ್ಕ್ಯಾನ್ ಮಾಡಿದರೆ ಕಳಸ ತಾಲೂಕಿನ ಮದುವೆ ಮಂಟಪಕ್ಕೆ ಬರುವ ಮಾರ್ಗ ತೋರಿಸುವಂತಿತ್ತು.
ಸುಮಾರು ೧,೫೦೦ ಕಾರ್ಡ್ ಮಾಡಿಸಿದ್ದ ಯುವಕ ಸ್ನೇಹಿತರಿಗೆಲ್ಲಾ ಅದೇ ಕಾರ್ಡ್ ಹಂಚಿದ್ದ. ಇದೀಗ ಆರ್ಬಿಐ ೨,೦೦೦ ನೋಟನ್ನ ಹಿಂಪಡೆಯುತ್ತಿರುವಂತೆ ಯುವಕ ತೇಜು ಸ್ನೇಹಿತರು ಆ ನೋಟಿನ ಇನ್ವಿಟೇಷನ್ ಕಾರ್ಡ್ ಕಳಿಸಿ ನೆನಪಿಸಿಕೊಳ್ಳುತ್ತಿದ್ದಾರೆ.ಉಡುಪಿಯಲ್ಲಿ ಪ್ರಿಂಟ್ ಹಾಕಿಸಿದ್ದ ಈ ಕಾರ್ಡನ್ನ ಅಚ್ಚುಕಟ್ಟಾಗಿ ಪ್ರಿಂಟ್ ಹಾಕಿಕೊಡಲು ಉಡುಪಿಯ ಆಪ್ಸೆಟ್ ಪ್ರಿಂಟರ್ನವರು ಕೂಡ ವಾರಗಟ್ಟಲೇ ಟೈಂ ತೆಗೆದುಕೊಂಡಿದ್ದರು.
ಇನ್ಮುಂದೆ ಅದೆಲ್ಲ ನೆನಪಷ್ಟೆ. ಮೋದಿ ಮೇಲಿನ ಅಭಿಮಾನಕ್ಕಾಗಿ ವಿಶೇಷವಾಗಿ ಮದುವೆ ಆಮಂತ್ರಣ ಕಾರ್ಡ್ ಮಾಡಿಸಬೇಕೆಂದು ಡಿಫರೆಂಟ್ ಆಗಿ ಕಾರ್ಡ್ ಮಾಡಿಸಿದ್ದ ಕಳಸ ತಾಲೂಕಿನ ಯುವಕನ ಬಾಳಲ್ಲಿ ೨,೦೦೦ ರೂಪಾಯಿ ನೋಟು ಎಂದೆಂದೂ ಅಚ್ಚಹಸಿರಾಗಿರಲಿದೆ.
2000 Rs. Invitation letter of face value note