ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಘಟನೆ ನಡೆದಿದೆ. ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ ನಡೆದು ಚಾಕುವಿನಿಂದ ಇರಿಯಲಾಗಿದೆ.
ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅಭಿನಂದನಾ ಸಮಾರಂಭದಲ್ಲಿ ೨೮ ವರ್ಷದ ವರುಣ್ ನನ್ನು ಹತ್ಯೆ ಮಾಡಲಾಗಿದೆ. ಗಲಾಟೆ ವೇಳೆಯಲ್ಲಿ ಮಂಜು ಹಾಗೂ ಸಂಜು ಎಂಬುವರಿಗೆ ಗಾಯಗಳಾಗಿವೆ.
ಅಭಿಮಾನಿಗಳು ಶಾಸಕ ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಈ ವೇಳೆ ಗಲಾಟೆ ನಡೆದು ವರುಣ್ ನನ್ನು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಎಸ್.ಪಿ. ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
೭ ಮಂದಿ ಬಂಧನ: ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಉಂಟಾದ ಗಲಾಟೆಯಲ್ಲಿ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ೭ ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್??, ಧನು, ಈಶ್ವರ್?, ಪರಮೇಶ್ವರ್?, ನಿತಿನ್?ನನ್ನು ಬಂಧಿತರು ಎಂದು ತಿಳಿದು ಬಂದಿದೆ
ಘಟನೆ ವಿವರ: ತರೀಕೆರೆ ಕಾಂಗ್ರೆಸ್ ಶಾಸಕ ಜಿ.ಎಚ್?.ಶ್ರೀನಿವಾಸ್? ರಿಗೆ ಅವರ ಅಭಿಮಾನಿಗಳು ಶನಿವಾರ ತರೀಕೆರೆಯಲ್ಲಿ ಅಭಿನಂದನೆಸಮಾರಂಭವನ್ನು ಏರ್ಪಡಿಸಿದ್ದರು. ಶಾಸಕರಿಗೆ ಅಭಿನಂದನೆ ಮುಗಿದ ಬಳಿಕ ಆರ್ಕೆಸ್ಟ್ರಾ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹಾಡು ಬದಲಿಸುವ ವಿಚಾರದಲ್ಲಿ ವರುಣ್ ಮತ್ತು ಕಬಾಬ್ ಮೂರ್ತಿ ನಡುವೆ ಗಲಾಟೆ ನಡೆದಿತ್ತು ಎಂದು ಹೇಳಲಾಗಿದೆ.
ಕ್ಷುಲ್ಲಕ ವಿಚಾರದಲ್ಲಿ ಇವರಿಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ಉಂಟಾಗಿದೆ. ಆ ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್?ನ ಹೊಟ್ಟೆ ಹಾಗೂ ಪಕ್ಕೆಲುಬಿಗೆ ಆರೋಪಿ ಕಬಾಬ್ ಮೂರ್ತಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ವರುಣ್ ರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.
Man stabbed to death – 7 arrested