ಬೀರೂರು: ತಾಲ್ಲೂಕು ಘಟಕದ ವತಿಯಿಂದ ಜು.10ರ ಬುಧವಾರ ಬೆಳಿಗ್ಗೆ 10ಗಂಟೆಗೆ ಬೀರೂರು ಪಟ್ಟಣದ ಸರ್ವಪಲ್ಲಿ ರಾಧಾಕೃಷ್ಣನ್ ಗುರುಭವನದಲ್ಲಿ ಜಿಲ್ಲಾ ಪತ್ರಕರ್ತರ ಸಮ್ಮಿಲನ ಹಾಗೂ ತಾಲ್ಲೂಕು ಪತ್ರಿಕಾ ದಿನಾಚರಣೆ ಸಮಾರಂಭವನ್ನು ಆಯೋಜಿಸಲಾಗಿದೆ.\
ಸಮಾರಂಭವನ್ನು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದತಗಡೂರು ಅವರು ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎನ್.ಗಿರೀಶ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಡಿ.ವಿ. ಗುಂಡಪ್ಪನವರ ಭಾವಚಿತ್ರವನ್ನು ಶಾಸಕ ಕೆ.ಎಸ್. ಆನಂದ್ ಉದ್ಘಾಟಿಸಲಿದ್ದಾರೆ. ವಿಶೇಷ ಸಾಧಕರಿಗೆ ಮಾಜಿ ಶಾಸಕರಾದ ಬೆಳ್ಳಿಪ್ರಕಾಶ್, ವೈ.ಎಸ್.ವಿ ದತ್ತ ಪುರಸ್ಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರ ಅಧ್ಯಕ್ಷ ಬಿ. ಗುರುಪ್ರಸಾದ್ ಭಾಗವಹಿಸಲಿದ್ದು. ಸಂಘದ ಜಿಲ್ಲಾಧ್ಯಕ್ಷರಾದ ಟಿ.ಎನ್.ಎ. ಮೊದಲಿಯಾರ್ ಸೇರಿದಂತೆ ಜಿಲ್ಲೆಯ ಪತ್ರಕರ್ತ ಮಿತ್ರರು ಮತ್ತು ಗಣ್ಯರು ಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಸಾಧಕರಿಗೆ ಪುರಸ್ಕರಿಲಾಗುವುದು.
ರಾಜ್ಯಾಧ್ಯಕ್ಷರೊಂದಿಗೆ ಪ್ರಸ್ತುತ ಮಾಧ್ಯಮದೊಂದಿಗೆ ಯುವಜನರ ಪಾತ್ರ ಕುರಿತಾಗಿ ಸಂವಾದಿಸಲಿದ್ದಾರೆ ಎಂದರು.
ಪತ್ರಿಕಾ ಪ್ರೇಮಿಗಳು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಸಿಬೇಕಿದೆ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ದೇವರಾಜ್, ಉಪಾಧ್ಯಕ್ಷರಾದ ಎಸ್. ಸುಬ್ರಹ್ಮಣ್ಯ, ಟಿ.ಆರ್. ಭೈರೇಶ್, ಖಜಾಂಚಿ ಹುಲ್ಲೇಹಳ್ಳಿ ಲಕ್ಷ್ಮಣ್, ಹಿರೇನಲ್ಲೂರು ಶಿವು, ಕೆ.ಜಿ.ಲೋಕೇಶ್ವರ್ ಮತ್ತಿತರಿದ್ದರು.
10th July is Kadur Working Journalist Association’s Press Day