ಮೂಡಿಗೆರೆ: ಜಿ.ಪಂ. ಮಾಜಿ ಸದಸ್ಯ ಬಣಕಲ್ ಶಾಮಣ್ಣ (೫೭) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.
ಬಣಕಲ್ ಗ್ರಾಮದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಣಕಲ್, ಮೂಡಿಗೆರೆ, ಚಿಕ್ಕಮಗಳೂರು ಆಸ್ಪತ್ರೆ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಅಷ್ಟರಲ್ಲಿ ಅವರು ಕೊನೆ ಉಸಿರೆಳೆದಿದ್ದರೆನ್ನಲಾಗಿದೆ. ಅವರ ಪಾರ್ಥೀವ ಶರೀರ ಗುರುವಾರ ಬಣಕಲ್ ಸಮೀಪದ ಸಬ್ಲಿ ಗ್ರಾಮದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಂಜೆ ಸಬ್ಲಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ಬಣಕಲ್ ಶಾಮಣ್ಣ ಅವರು ಜಿ.ಪಂ. ಸದಸ್ಯರಾಗಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಬಣಕಲ್ ಗ್ರಾ.ಪಂ. ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಸ್ತುತ ನಿರ್ದೇಶಕರಾಗಿದ್ದು, ಅಪಾರ ಸ್ನೇಹ ಬಳಗ ಹೊಂದಿದ್ದರು.
ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
Former Zilla Panchayat member Banakal Shamanna passed away