ಚಿಕ್ಕಮಗಳೂರು: ರಾಜ್ಯದಲ್ಲಿ ಉಗಮಗೊಂಡ ಪಂಚಗ್ಯಾರAಟಿ ಯೋಜನೆಗಳು ನಿರೀಕ್ಷೆ ಗೂ ಮೀರಿ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಪ್ರಣಾಳಿಕೆಯಾಗಿ ಬಳಸಿಕೊಂಡು ಮುನ್ನೆಡೆಯಲು ಕಾರಣವಾಗುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ನೂತನ ಕಚೇರಿ ಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಜನತೆಗೆ ಆರ್ಥಿಕ ಬದುಕನ್ನು ಹಂತ ಹಂತವಾಗಿ ಸುಧಾರಿಸಲು ಮೂಲವಾಗಿದೆ. ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ, ದೈನಂದಿನ ಖರ್ಚುವೆಚ್ಚಗಳನ್ನು ಸರಿದೂಗಿಸ ಲು ಆಧಾರವಾಗುವ ಜೊತೆಗೆ ಸ್ವಾಲವಂಬಿ ಬದುಕಿಗೆ ಪೂರಕವಾಗಿದೆ ಎಂದರು.
ಬಾಲ್ಯದಿAದಲೇ ಸಂಕಷ್ಟ ದಿನಗಳನ್ನು ಅರಿತಿದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊಟ್ಟಮೊದಲು ಅನ್ನಭಾಗ್ಯ ಜಾರಿಗೆ ತಂದು ಹಸಿವಿನಿಂದ ಬಳಲದಂತೆ ಆದ್ಯತೆ ಕೊಟ್ಟರು. ಇದರಿಂದ ರಾಜ್ಯದ ಕೋಟ್ಯಾಂತರ ಜನರು ಇಂದಿಗೂ ಮುಖ್ಯಮಂತ್ರಿಗಳು ಸ್ಮರಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ನಾಡಿನ ಹಲವಾರು ಮಹಿಳೆಯರು ಹಣಕಾಸಿನ ಒತ್ತಡದಿಂದ ತೀರ್ಥಕ್ಷೇತ್ರಗಳಿಗೆ ತೆರಳಲು ಅಡ್ಡಿಯಾ ಗುತ್ತಿತ್ತು. ಇದೀಗ ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿ ಅನೇಕ ಪುಣ್ಯಸ್ಥಳಗಳಿಗೆ ಭೇಟಿ ನೀಡಿ ದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ನಷ್ಟವೇನಿಲ್ಲ. ದೇಗುಲದ ಕಾಣಿಕೆ ಹುಂಡಿಯಿAದ ಮುಜರಾಯಿ ಇಲಾ ಖೆಗೆ ದ್ವಿಗುಣ ಲಾಭವಾಗಿದೆ ಎಂದರು.
ಗ್ಯಾರAಟಿ ಯೋಜನೆಗಳು ಅನುಷ್ಟಾನಗೊಳಿಸಿ ಯಶಸ್ವಿಗೊಂಡ ಬಳಿಕ ದೇಶದಲ್ಲಿ ನಡೆದಂಥ ಹಲವಾ ರು ಚುನಾವಣೆಗಳಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ಸೂತ್ರವನ್ನು ಬಳಸುತ್ತಿದೆ. ಈ ಯೋಜನೆಗಳು ಜನಸಾಮಾನ್ಯ ರಿಗೆ ಒಳಿತಿಗೂ ಪೂರಕವಾದ ಕಾರಣ ಬಹುತೇಕ ರಾಜಕೀಯ ಪಕ್ಷಗಳು ಕಾಂಗ್ರೆಸ್ ನಡೆಯನ್ನೇ ಪಾಲಿಸು ತ್ತಿದೆ ಎಂದರು.
ರಾಜ್ಯಸರ್ಕಾರ ವೈಯಕ್ತಿಕವಾಗಿ ಹಣ ವ್ಯಯಿಸಿಲ್ಲ. ಬದಲಾಗಿ ಜನರಿಂದ ಸಂಗ್ರಹಗೊAಡ ತೆರಿಗೆ ಹಣ ವನ್ನು ಜನರಿಗಾಗಿಯೇ ವ್ಯಯಿಸುವ ಮೂಲಕ ಯಾವುದೇ ಏಜೆಂಟರಿಲ್ಲದೇ ನೇರವಾಗಿ ಖಾತೆಗೆ ಜಮಾವಣೆ ಮಾಡುತ್ತಿದೆ. ಜೊತೆಗೆ ಅಭಿವೃದ್ದಿ ವಿಚಾರದಲ್ಲೂ ಸರ್ಕಾರ ಹಿಂದೇಟು ಹಾಕದೇ ಕ್ಷೇತ್ರಕ್ಕೆ ೨೫ ಕೋಟಿ ಆಡಳಿ ತಾತ್ಮಕ ಅನುಮೋದನೆ ಸಿಕ್ಕಿದ್ದು ಸದ್ಯದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಭದ್ರಾಕಾಡ ಅಧ್ಯಕ್ಷ ಡಾ|| ಕೆ.ಪಿ.ಅಂಶುಮAತ್ ಮಾತನಾಡಿ ಗ್ಯಾರಂಟಿ ಬಗ್ಗೆ ಕೆಲವು ವಿರೋಧ ಪಕ್ಷದ ಮುಖಂಡರು ಬಿಟ್ಟಿ ಭಾಗ್ಯವೆಂದು ಅಪಹಾಸ್ಯದಲ್ಲಿ ತೊಡಗಿವೆೆ. ಬಡವರಿಗಾಗಿ ಮುಡಿಪಿಟ್ಟ ಯೋಜನೆಗಳು ವಿರೋಧಿಸುವವರು ಸೌಲಭ್ಯವನ್ನು ಸರ್ಕಾರಕ್ಕೆ ವಾಪಸ್ ಮಾಡಲಿ. ಈ ಹೊರತಾಗಿ ಪುಕ್ಕಟ್ಟೆ ಪ್ರಚಾರಕ್ಕೆ ಟೀಕಿ ಸುವುದು ಸರಿಯಲ್ಲ ಎಂದರು.
ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ ಮಾತನಾಡಿ ಗ್ಯಾರಂಟಿ ಸೌಲಭ್ಯಗಳು ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಗೊಳ್ಳಲು ಜನಪ್ರತಿನಿಧಿಗಳು, ಅಧಿಕಾರಿಗಳೇ ನೇರಕಾರಣ. ಹಾಗಾಗಿ ರಾಜ್ಯ ದಲ್ಲೇ ಗ್ಯಾರಂಟಿ ತಲುಪಿಸುವಲ್ಲಿ ಜಿಲ್ಲೆ ಮೊದಲ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ರಾಜ್ಯ ಪರಿಸರ ತಜ್ಞರ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ ರಾಜ್ಯದ ಜನತೆಗೆ ತಾರತಮ್ಯ ಎಸಗದೇ ಎಲ್ಲರೂ ಒಂದೇ ಎಂಬ ಮನೋಭಾವದಿಂದ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಕರ‍್ಯ ಮಾಡಲಾಗಿದೆ. ಈ ತಂತ್ರಗಾರಿಕೆಯನ್ನು ಹಲವಾರು ರಾಜ್ಯಗಳಲ್ಲಿ ಬಳಸಿಕೊಳ್ಳಲು ರಾಜ್ಯದಲ್ಲಿನ ಹಿರಿಯ ಕಾಂಗ್ರೆಸ್ಸಿಗರ ನೇರಕಾರಣ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ. ಮಲ್ಲೇಶ್ ಅತ್ಯಂತ ದೊಡ್ಡ ಜವಾಬ್ದಾರಿಯನ್ನು ಸರ್ಕಾರ ಹೊರೆಸಿರುವ ಕಾರಣ ತಾಲ್ಲೂಕಿನ ಹೋಬಳಿ, ಗ್ರಾಮಗಳಲ್ಲಿ ತೆರಳಿ ಸೌಲಭ್ಯದಿಂದ ವಂಚಿತರಾಗಿ ಫಲಾನುಭವಿಗಳಿಗೆ ಸೇರ್ಪಡಿಸುವ ಕಾರ್ಯಕ್ಕೆ ಮುಂದಾ ಗುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯ್‌ಕುಮಾರ್, ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಅನ್ಸರ್ ಆಲಿ, ಸದಸ್ಯರುಗಳಾದ ವಿಂದ್ಯಾ, ಜಯಂತಿ, ಗೌಸ್‌ಮೊಹಿಯುದ್ದೀನ್, ನಾಗೇಶ್‌ರಾಜ್ ಅರಸ್, ಧ ರ್ಮಯ್ಯ, ಕೃಷ್ಣ ಉಪಸ್ಥಿತರಿದ್ದರು.
Inauguration of the new office of the Taluk Guarantee Authority
