ಚಿಕ್ಕಮಗಳೂರು: ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳನ್ನು ಹೆಚ್ಚು ಸ್ಥಾಪಿಸುವ ಮೂಲಕ ಮಹಿಳೆಯರು ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲು ಗುರಿ ಹೊಂದಲಾಗಿದೆ ಎಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ತಿಳಿಸಿದರು.
ಅವರು ಇಂದು ನಗರಸಭೆ ಆವರಣದಲ್ಲಿ ಡೇ-ನಲ್ಮ್ ಯೋಜನೆಯಡಿ ರಚನೆಯಾಗಿರುವ ಪ್ರದೇಶ ಮಟ್ಟದ ಒಕ್ಕೂಟಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ಸೌಲತ್ತುಗಳನ್ನು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಫಲಾನುಭವಿಗಳಿಗೆ ತಲುಪಬೇಕೆಂಬ ಉದ್ದೇಶದಿಂದ ಇಂದು ಕಾರ್ಯಾಗಾರವನ್ನು ಆಯೋಜಿಸಿದ್ದು, ಈ ನಿಟ್ಟಿನಲ್ಲಿ ಮಹಿಳೆಯರು ಸಾಮಾಜಿಕ, ರಾಜಕೀಯವಾಗಿ ಆರ್ಥಿಕ ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದೊಂದಿಗೆ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬಂತೆ ಮಹಿಳೆ ಸ್ವಾವಲಂಬಿಯಾದಾಗ ಕುಟುಂಬ ನಿರ್ವಹಣೆ ಸುಗಮವಾಗಲಿದೆ ಎಂದು ಹೇಳಿದರು.
ಸರ್ಕಾರ ಮಹಿಳೆರಿಗಾಗಿ ಬ್ಯಾಂಕ್‌ಗಳ ಮೂಲಕ ಸಾಲಸೌಲಭ್ಯವನ್ನು ಕಲ್ಪಿಸಿದ್ದು, ಮಹಿಳೆಯರು ಸ್ವ-ಉದ್ಯೋಗ ಸ್ಥಾಪಿಸಿ ಗುಡಿ ಕೈಗಾರಿಕೆ, ಗೃಹೋಪಯೋಗಿ ವಸ್ತುಗಳ ತಯಾರಿಕೆ, ಆಟಿಕೆಗಳ ತಯಾರಿಕೆ ಮುಂತಾದವುಗಳ ಮೂಲಕ ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಿ ಎಂದು ಸಲಹೆ ನೀಡಿದರು.
ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಕ್ರಿಯಾಶೀಲರಾದ ಮಹಿಳೆಯರು ಮೊದಲು ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ ಸರ್ಕಾರದಿಂದ ದೊರೆಯುವ ಸಹಾಯಧನದ ಸಾಲಸೌಲಭ್ಯ ಪಡೆದುಕೊಂಡು ಆರ್ಥಿಕ ಸದೃಢರಾಗಬೇಕೆಂದು ಕರೆನೀಡಿದರು.
ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಸ್ವ-ಉದ್ಯೋಗದಡಿ ಕುಟುಂಬವನ್ನು ನಿರ್ವಹಣೆ ಮಾಡಲು ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು.
ನಗರಸಭೆ ವತಿಯಿಂದ ಮನೆ ಮನೆ ಕಸ ಸಂಗ್ರಹದ ಬಿಲ್ ಕಲೆಕ್ಟ್ ಮಾಡುವ ಜವಾಬ್ದಾರಿಯನ್ನು ಸ್ತ್ರೀಶಕ್ತಿ ಗುಂಪುಗಳ ಪದಾಧಿಕಾರಿಗಳಿಗೆ ನೀಡಲಾಗಿದ್ದು, ಜೊತೆಗೆ ನೀರಿನ ಕರ, ಆಸ್ತಿ ತೆರಿಗೆ, ಮನೆ ಕಂದಾಯ, ನಗರಸಭೆ ಮಳಿಗೆ ಬಾಡಿಗೆ ವಸೂಲಿ ಸೇರಿದಂತೆ ಇನ್ನೂ ಮುಂತಾದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಹೇಳಿದರು.
ನಗರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಮನೆ ಕಸವನ್ನು ಎಲ್ಲೆಂದರಲ್ಲಿ ಚೆಲ್ಲದಂತೆ ನೋಡಿಕೊಳ್ಳಬೇಕು, ಸ್ವಚ್ಚತೆಯನ್ನು ಕಾಪಾಡುವ ಮೂಲಕ ಆದ್ಯತೆ ಮೇಲೆ ಕೆಲಸ ಮಾಡುವಂತೆ ಸೂಚನೆ ನೀಡಿದರು. ಕೌಶಲ್ಯಾಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ, ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
Women should become financially independent through self-employment.

Leave a Reply