ನಟ ದರ್ಶನ್‌ ಜಾಮೀನು – ಸುಪ್ರೀಂ ಕೋರ್ಟ್‌ ಅತೃಪ್ತಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತನ್ನ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಪ್ರಕರಣದಲ್ಲಿ ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಹೈಕೋರ್ಟ್ ತನ್ನ ಆದೇಶವನ್ನು ಹೇಗೆ ನಿರ್ದೇಶಿಸಿದೆ ಎಂಬುದನ್ನು ನೀವೇ ನೋಡಿರಬೇಕು ಎಂದು ದರ್ಶನ್‌ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಜು.22ಕ್ಕೆ ಮುಂದೂಡಿದೆ.

2024ರ ಜೂ.8ರಂದು ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧನವಾಗಿ 6 ತಿಂಗಳ ಬಳಿಕ ಅಂದರೆ 2024ರ ಡಿ.13ರಂದು ಕರ್ನಾಟಕ ಹೈಕೋರ್ಟ್‌ ಅವರಿಗೆ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ದರ್ಶನ್‌ ಪರ ಹಿರಿಯ ನ್ಯಾಯವಾದಿ ಕಪಿಲ್‌ ಸಿಬಲ್‌ ಕೋರ್ಟ್‌ಗೆ ಹಾಜರಾಗಿದ್ದರು.

ಗುರುವಾರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ನೇತೃತ್ವದ ವಿಭಾಗೀಯ ಪೀಠ, ‘ಹೈಕೋರ್ಟ್‌ ಆದೇಶದ ಬಗ್ಗೆ ನೀವು ಏನು ಹೇಳುತ್ತೀರಿ ಸಿಬಲ್?’ ಎಂದು ದರ್ಶನ್‌ ಪರ ವಕೀಲರನ್ನೇ ಪ್ರಶ್ನಿಸಿತು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿಲ್ಲ ಎಂದು ನಾವು ಭಾವಿಸುತ್ತೇವೆ. ಹೈಕೋರ್ಟ್, ಆದೇಶವನ್ನು ಹೇಗೆ ನಿರ್ದೇಶಿಸಿದೆ ಎಂಬುದನ್ನು ನೀವು ನೋಡಿರಬೇಕು ಎಂದಿತು.

Actor Darshan’s bail – Supreme Court dissatisfied

Comments

Leave a Reply

Your email address will not be published. Required fields are marked *