ಬೆಂಗಳೂರು: ರಾಜ್ಯದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್‌ಗಳ ಪೈಕಿ 3.65 ಲಕ್ಷ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಅವರು ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮತನಾಡಿ ಇನ್ನೂ ಸಾಕಷ್ಟು ಮಂದಿ ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದು, ಅವುಗಳನ್ನೂ ರದ್ದುಪಡಿಸಿ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ‘ಈ ಕಾರ್ಯಾ ಚರಣೆಯಲ್ಲಿ ಅರ್ಹರಿಗೆ ಯಾವುದೇ ತೊಂದರೆ ಆಗಬಾರದು. ಒಬ್ಬ ಅರ್ಹ ವ್ಯಕ್ತಿಯ ಬಿಪಿಎಲ್ ಕಾರ್ಡ್ ಸಹ ರದ್ದಾಗಬಾರದು. ಅರ್ಹರಿಗೆ ಈವರೆಗೆ ಬಿಪಿಎಲ್ ಕಾರ್ಡ್ ನೀಡಿಲ್ಲದೇ ಇದ್ದರೆ, ವಿತರಿಸಲು ತಕ್ಷಣವೇ ಕ್ರಮ ತೆಗೆದುಕೊಳ್ಳ ಬೇಕು’ ಎಂದು ತಾಕೀತು ಮಾಡಿದರು.
‘ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಸೂಚಿಸಿದರು.
‘ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿಯ ಜತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಬಗ್ಗೆ ಪ್ರಸ್ತಾವ ಸಲ್ಲಿಸಿ’ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
‘ಕನಿಷ್ಠ ಬೆಂಬಲ ಬೆಲೆ ಕಾರ್ಯಕ್ರಮದ ಅಡಿಯಲ್ಲಿ, ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಮತ್ತು ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರ ಧಾನ್ಯಗಳನ್ನು ಖರೀದಿಸಬೇಕು’ ಎಂದಿದ್ದಾರೆ.
3.65 lakh ineligible cards cancelled in the state
