ರಾಮನಗರ: ‘ಬಿಗ್‌ಬಾಸ್’ ರಿಯಾಲಿಟಿ ಷೋ ನಡೆಯುತ್ತಿರುವ ಬಿಡದಿಯ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್‌ಗೆ ತಾಲ್ಲೂಕು ಆಡಳಿತ ಮಂಗಳವಾರ ಬೀಗಮುದ್ರೆ ಹಾಕಿದೆ. ಈ ದಿಢೀರ್ ಬೆಳವಣಿಗೆಯಿಂದಾಗಿ ಬಿಗ್‌ಬಾಸ್ ಷೋ ಅತಂತ್ರ ಸ್ಥಿತಿ ತಲುಪಿದೆ ಎನ್ನಲಾಗಿದೆ.
‘ಬಿಗ್‌ಬಾಸ್’ ಮನೆಯಲ್ಲಿದ್ದ ಸ್ಪರ್ಧಿಗಳು ಹಾಗೂ ಸಿಬ್ಬಂದಿಯನ್ನು ಆಯೋಜಕರು ಸಮೀಪದ ಈಗಲ್ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಿದ್ದಾರೆ. ಪಾರ್ಕ್‌ಗೆ ಬಂದಿದ್ದ ಪ್ರವಾಸಿಗರನ್ನು ಸಹ ಸ್ಥಳದಿಂದ ಹೊರಕ್ಕೆ ಕಳುಹಿಸಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ತಹಶೀಲ್ದಾರ್ ತೇಜಸ್ವಿನಿ ಹಾಗೂ ಸಿಬ್ಬಂದಿ ಜಾಲಿವುಡ್ ಸ್ಟುಡಿಯೊಕ್ಕೆ ಬೀಗ ಜಡಿದರು.
‘ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸಂಸ್ಥೆಯು ಮನರಂಜನೆ ಹಾಗೂ ಇತರ ಸಾಹಸ ಚಟುವಟಿಕೆ ನಡೆಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರಲಿಲ್ಲ. ಈ ಕುರಿತು, ಮಂಡಳಿಯ ಅಧಿಕಾರಿಗಳು ಸ್ಥಳ ಪರೀಶಿಲನೆ ನಡೆಸಿ ವರದಿ ನೀಡಿದ್ದರು. ಆ ಮೇರೆಗೆ, ಮಂಡಳಿಯು ಜಾಲಿವುಡ್‌ನಲ್ಲಿ ನಡೆಯುತ್ತಿರುವ ಚಟುವಟಿಕೆ ಸ್ಥಗಿತಗೊಳಿಸಿ ಬೀಗಮುದ್ರೆ ಹಾಕುವಂತೆ ಆದೇಶ ಮಾಡಿತ್ತು. ಪೊಲೀಸ್ ಭದ್ರತೆಯಲ್ಲಿ ಜಾಲಿವುಡ್‌ಗೆ ಬೀಗ ಹಾಕಿ ಮೊಹರು ಮಾಡಿದ್ದೇವೆ. ಮುಂದೇನು ಮಾಡಬೇಕೆಂಬುದನ್ನು ಮಂಡಳಿ ನಿರ್ಧರಿಸಲಿದೆ’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದರು.
ಬಿಗ್‌ಬಾಸ್ ಸ್ಪರ್ಧೆ ಶುರುವಾಗಿ 11 ದಿನವಾಗಿದೆ. ಈಗ ಜಿಲ್ಲಾಡಳಿತ ಬೀಗಮುದ್ರೆ ಹಾಕಿದ್ದು, ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ಜಾಲಿವುಡ್ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೋರ್ಟ್‌ನಲ್ಲಿ ಮಂಡಳಿ ಆದೇಶಕ್ಕೆ ತಡೆಯಾಜ್ಞೆ ಸಿಗುವ ವಿಶ್ವಾಸ ಇರುವುದರಿಂದ, ಮತ್ತೆ ಬಿಗ್‌ಬಾಸ್ ಷೋ ಮುಂದುವರಿಸಲು ಸ್ಪರ್ಧಿಗಳನ್ನು ಸಮೀಪದ ಈಗಲ್ಟನ್ ರೆಸಾರ್ಟ್‌ನಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
The house where the ‘Bigg Boss’ reality show is being held is locked.

Leave a Reply