ಮೈಸೂರು: ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪರಿಹಾರವನ್ನು ಗಾಯಾಳು ಲೆಕ್ಕದಲ್ಲಿ ಕೊಡಬಾರದು. ಬದುಕು ಕಳೆದುಕೊಂಡ, ಕುಟುಂಬದ ಆಸರೆ ಕಳೆದುಕೊಂಡವರ ಲೆಕ್ಕದಲ್ಲಿ ಪೂರ್ತಿ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
Chief Minister Siddaramaiah suggests to provide full compensation as per rules