October 26, 2025
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನ.26 ರಿಂದ ಡಿ.4 ರವರೆಗೆ ದತ್ತಜಯಂತಿ ಆಚರಣೆ

ಚಿಕ್ಕಮಗಳೂರು: : ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ ದತ್ತಮಾಲೆ ಹಾಗೂ ದತ್ತಜಯಂತಿಯು ನ.೨೬ ರಿಂದ ಡಿ.೪ ರವರೆಗೆ ಶ್ರದ್ಧಾಭಕ್ತಿಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರಾಂತ ಸಂಯೋಜಕ ಎಸ್.ಆರ್ ಪ್ರಭಂಜನ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದತ್ತಜಯಂತಿ ನಾಡ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಸಾಧು-ಸಂತರು, ಮಾತೆಯರು, ದತ್ತಮಾಲಾಧಾರಿಗಳು, ದತ್ತಭಕ್ತರು ಸೇರಿದಂತೆ ರಾಜ್ಯಾದ್ಯಂತ ಸುಮಾರು ೨೫ ಸಾವಿರ ದತ್ತಮಾಲಾಧಾರಿಗಳು ಆಗಮಿಸಲಿದ್ದಾರೆಂದು ಹೇಳಿದರು.

ದತ್ತಪೀಠದಲ್ಲಿ ಹೈಕೋರ್ಟ್ ನಿರ್ದೇಶನದ ಅನುಸಾರ ಹೋಮ ಹವನ ಪೂಜೆ ನಡೆಯಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದತ್ತಜಯಂತಿ ಉತ್ಸವ ನಡೆಯಲಿದೆ. ಡಿ.೩ ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಕಾರ್ಯದರ್ಶಿ ಗೋಪಾಲ್ ನಾಗರಕಟ್ಟೆ ಭಾಗವಹಿಸಲಿದ್ದಾರೆಂದರು.

ಡಿ.೨ ರಂದು ಅನುಸೂಯದೇವಿ ಪೂಜೆಯ ಅಂಗವಾಗಿ ನಗರದ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ಸಭೆಯ ನಂತರ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ಬೆಳಗ್ಗೆ ೯.೩೦ ಕ್ಕೆ ನಡೆಯಲಿದೆ. ಇದೇ ದಿನ ದತ್ತಪೀಠದಲ್ಲಿ ಬೆಳಗ್ಗೆ ಗಣಪತಿ ಪೂಜೆ, ಪುಣ್ಯಹವಾಚನ, ಪಂಚಗವ್ಯ ಶುದ್ಧಿ, ಋತ್ವಗ್ವರ್ಣ, ಗಣಪತಿ ಹೋಮ, ಚಂಡಿಕಾ ಪಾರಾಯಣ, ದುರ್ಗಾಹೋಮ, ಕಲಶಾಭಿಷೇಕ ಹಾಗೂ ಮಹಾಪೂಜೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ದತ್ತಪೀಠದಲ್ಲಿ ಸಂಜೆ ಪಾದುಕಾ ಶುದ್ಧಿ, ಪ್ರಕಾರ ಶುದ್ಧಿ, ವಾಸ್ತುರಾಕ್ಷೆಜ್ಞ ಹೋಮ, ಸುದರ್ಶನ ಹೋಮ, ದುರ್ಗಾದೀಪ ನಮಸ್ಕಾರ, ಕಲಶಾಭಿಷೇಕ ಹಾಗೂ ಮಹಾಪೂಜೆ ನಡೆಯಲಿದೆ ಎಂದು ಹೇಳಿದರು. ಡಿ.೩ ರಂದು ದತ್ತಪೀಠದಲ್ಲಿ ನವಕಲಶ ಕಲಾವಾಹನಂ, ಕಲಾತತ್ವಾದಿ ವಾಸ ಪೂಜೆ, ಕಲಾಹೋಮ, ಕಲಶಾಭಿಷೇಕ ಮಹಾಪೂಜೆ ನಡೆಯಲಿದೆ. ಇದೇ ದಿನ ಮಧ್ಯಾಹ್ನ ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಧಾರ್ಮಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.

ಡಿ.೪ ರಂದು ದತ್ತಪೀಠದಲ್ಲಿ ದತ್ತಾತ್ರೇಯ ಜಯಂತಿ ಅಂಗವಾಗಿ ದಶಸಹಸ್ರ ಸಂಖ್ಯೆಯಲ್ಲಿ ರುದ್ರಾಹೋಮ, ಶ್ರೀ ದತ್ತಾತ್ರೇಯ ಮಹಾಮಂತ್ರ, ಮಹಾಯಾಗ, ಕಲಶಾಭಿಷೇಕ, ಮಹಾಪೂಜೆ, ತಂತ್ರಿಗಳಿಂದ ಆಶೀರ್ವಚನ, ಪ್ರಸಾದ ವಿನಿಯೋಗ ಹಾಗೂ ದತ್ತಜಯಂತಿ ಆಚರಣೆ ಬಹಳ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಈ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ದತ್ತಭಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ ಅವರು, ದತ್ತಜಯಂತಿ ಆಚರಣೆಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ ಶ್ರೀಕಾಂತ್ ಪೈ, ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಮುಖಂಡರಾದ ಮಹಿಪಾಲ್, ಆರ್.ಡಿ ಮಹೇಂದ್ರ, ಯೋಗೀಶ್ ರಾಜ್ ಅರಸ್, ಶ್ಯಾಮ್ ವಿ ಗೌಡ ಉಪಸ್ಥಿತರಿದ್ದರು.

Datta Jayanti celebrations from Nov. 26 to Dec. 4

Related posts

ವ್ಯಾಪಾರಸ್ಥರು ನಗರಸಭೆ ನಿಬಂಧನೆಗಳ ಪಾಲಿಸಬೇಕು

Team Suddigara

ಶ್ರೀ ರಂಭಾಪುರಿ ಜಗದ್ಗುರುಗಳವರ ಫೆಬ್ರುವರಿ ಮಾಹೆಯ ಪ್ರವಾಸ ವಿವರ

Team Suddigara

ಅಹಲ್ಯರ ಉತ್ತಮ ಆಡಳಿತವು ಸಮಾಜಕ್ಕೆ ಮಾದರಿ

Team Suddigara

Leave a Comment

[t4b-ticker] [t4b-ticker]