ಚಿಕ್ಕಮಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ ಅವರ 150ನೇ ಜನ್ಮ ದಿನಾಚರಣೆ ಸ್ಮರಣಾ ರ್ಥ ನ.13 ರಂದು ನಗರದಲ್ಲಿ ಏಕತಾ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬೆಳಿಗ್ಗೆ 7.30ಕ್ಕೆ ಶ್ರೀಕಂಠಪ್ಪ ವೃತ್ತದಿಂದ ಹೊರಟು ಬಸವನಹಳ್ಳಿ ರಸ್ತೆ, ಎಂ.ಜಿ.ರಸ್ತೆ, ಆಜಾದ್ ಪಾರ್ಕ್ ಮೂಲಕ ಹೊಸಮನೆ ಬಡಾವಣೆ ತನಕ ಪಾದಯಾತ್ರೆ ನಡೆಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವಿದ್ಯಾರ್ಥಿಗಳು, ನಾಗರಿಕರು, ಸಂಘ-ಸಂಸ್ಥೆಗಳ ಮುಖಂಡರು ಏಕತಾ ನಡಿಗೆಯಲ್ಲಿ ಭಾಗವಹಿಸುವರು. ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ನ.20 ರಂದು ಮೂಡಿಗೆರೆ ಪಟ್ಟಣದಲ್ಲಿ ಬೆಳಿಗ್ಗೆ 7.30ಕ್ಕೆ ಏಕತಾ ನಡಿಗೆ ಏರ್ಪಡಿಸಲಾಗಿದೆ. ಶಾಲಾ–ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
‘ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಇಷ್ಟೊಂದು ಹದಗೆಟ್ಟಿರುವುದನ್ನು ನಾನು ನೋಡಿರಲಿಲ್ಲ’ ಎಂದು ಶ್ರೀನಿವಾಸ ಪೂಜಾರಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕಲ್ಮರುಡಪ್ಪ, ನಗರ ಘಟಕದ ಅಧ್ಯಕ್ಷ ಪುಷ್ಪರಾಜ್, ಪ್ರಧಾನ ಕಾರ್ಯದರ್ಶಿ ರವಿಂದ್ರ ಬೆಳವಾಡಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ರಾಜು, ದಿಶಾ ಸಮಿತಿ ಸದಸ್ಯ ಮಣಿಕಂಠ, ಶಶಿ ಆಲ್ದೂರು, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಪುಣ್ಯಪಾಲ್ ಇದ್ದರು.
Unity walk in the city on November 13th
