ಚಿಕ್ಕಮಗಳೂರು: ಲೋಕಸಭಾ ಚುನಾವಣೆ ೨೦೨೪ರ ಮತಎಣಿಕೆ ಚುರುಕಾಗಿ ಸಾಗಿದ್ದು, ಭಾರಿ ಕುತೂಹಲ ಮೂಡಿಸಿದ್ದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ೨೫೯೧೭೫ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ (ಬಿಜೆಪಿ): ೭೩೨೨೩೪ ಮತಗಳು ಜಯಪ್ರಕಾಶ್ ಹೆಗ್ಡೆ (ಕಾಂಗ್ರೆಸ್): ೪೭೩೦೫೯ ಮತಗಳು ಗೆಲುವಿನ ಅಂತರ: ೨೫೯೧೭೫ ಮತಗಳು ಕಳೆದ ಚುನಾವಣೆಯಲ್ಲಿ ಅಭ್ಯರ್ಥಿ ಯಾರೇ ಆಗಿದ್ದರೂ, ಬಿಜೆಪಿ ಗೆಲುವು ಫಲಿತಾಂಶಕ್ಕೂ ಮುನ್ನವೇ ಖಚಿತವಾಗಿತ್ತು. ಈ ಬಾರಿ ಹಾಗಿರಲಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಬಲದ ಪೈಪೋಟಿ ನಿರೀಕ್ಷೆ ಇತ್ತು. ಬಿಜೆಪಿ ಪರ ಈ ಬಾರಿ ಹೊಸ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ. ಇವರಿಗೆ ಎದುರಾಗಿ ಮಾಜಿ ಸಂಸದ ಅವರನ್ನು ಕಣಕ್ಕಿಳಿಸಲಾಗಿತ್ತು.
ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ಶೋಭಾ ಕರಂದ್ಲಾಜೆ ೩ ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೋಲು ಕಂಡಿದ್ದರು. ಈ ಬಾರಿ ಎರಡೂ ಪಕ್ಷಗಳು ಸರಳ ಜನನಾಯಕರನ್ನು ಕಣಕ್ಕಿಳಿಸಿದ್ದು, ಕ್ಷೇತ್ರದ ಚುನಾವಣೆ ಹೆಚ್ಚು ನಿರೀಕ್ಷೆ ಮೂಡಿಸಿತ್ತು.
ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೆ, ಉಡುಪಿ ಜಿಲ್ಲೆಯ ನಾಲ್ಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಬರುತ್ತದೆ. ಉಡುಪಿಯ ನಾಲ್ಕುಚಿಕ್ಕಮಗಳೂರಿನ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಹೀಗಾಗಿ ಈ ಫಲಿತಾಂಶದ ಲೆಕ್ಕಾಚಾರ ಅಷ್ಟು ಸುಲಭವಾಗಿರಲಿಲ್ಲ.
ಕೋಟ ಶ್ರೀನಿವಾಸ ಪೂಜಾರಿ ಪರಿಚಯ: ಕರಾವಳಿ ಕರ್ನಾಟಕದ ಸರಳ ಸಜ್ಜನಿಕೆಯ ಜನನಾಯಕ ಎಂದೇ ಜನಪ್ರಿಯರಾಗಿರುವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯರಾಗಿದ್ದುಕೊಂಡೇ ಸಚಿವರಾದವರು. ಇದೀಗ ಸಂಸತ್ ಪ್ರವೇಶಿಸಲು ಸಜ್ಜಾಗಿದ್ದಾರೆ. ಒಂದು ಕಾಲದಲ್ಲಿ ಫೊಟೋಗ್ರಾಫರ್ ಆಗಿದ್ದ ಶ್ರೀನಿವಾಸ ಪೂಜಾರಿ ಹಂತಹಂತವಾಗಿ ರಾಜಕೀಯದಲ್ಲಿ ಮೇಲೆ ಬಂದವರು. ಸರಳ ವ್ಯಕ್ತಿತ್ವದಿಂದಲೇ ಗಮನ ಸೆಳೆದ ನಾಯಕ ಕರಾವಳಿಯಲ್ಲಿ ಬಿಲ್ಲವ ಸಮುದಾಯದ ಪ್ರಬಲ ನಾಯಕ.
೭ನೇ ತರಗತಿ ಓದಿದರೂ ರಾಜಕೀಯದಲ್ಲಿ ನಿಪುಣ. ೧೯೯೩ರಲ್ಲಿ ಗ್ರಾಮ ಪಂಚಾಯಿತ್ ಸದಸ್ಯರಾಗಿದ್ದ ಕೋಟಾ, ೧೯೯೬ರಲ್ಲಿ ತಾಲೂಕು ಪಂಚಾಯಿತಿ ಸದಸ್ಯರಾದರು. ೨೦೦೬ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದರು. ೨೦೦೯ರಲ್ಲಿ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದರು.
ಹೀಗೆ ಹಂತಹಂತವಾಗಿ ಕೋಟ ಬಿಜೆಪಿಯಲ್ಲಿ ಬೆಳೆದವರು. ೨೦೦೯ರಲ್ಲಿ ವಿಧಾನಪರಿಷತ್ ಸದಸ್ಯರಾದ ಅವರಿಗೆ ೨೦೧೨ರಲ್ಲಿ ಸಚಿವ ಸ್ಥಾನ ನೀಡಲಾಯ್ತು. ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಗಮನ ಸೆಳೆದರು.
ಒಟ್ಟು ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಕರಾವಳಿ ಕುವರ, ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾಗಿದ್ದರು. ಸದನದಲ್ಲಿ ಪರಿಣಾಮಕಾರಿ ಚರ್ಚೆಗಳ ಮೂಲಕ ಗಮನ ಸೆಳೆಯುತ್ತಿದ್ದ ಕೋಟ, ಇದೀಗ ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಲು ಬಾರಿಸಿದ್ದಾರೆ.
ಕ್ಷೇತ್ರ ಪರಿಚಯ: ೨೦೦೨ರಲ್ಲಿ ಡಿಲಿಮಿಟೇಷನ್ ಕಮಿಷನ್ ಆಫ್ ಇಂಡಿಯಾ ಶಿಫಾರಸಿನ ಮೇಲೆ ೨೦೦೮ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ರಚನೆಯಾಯಿತು. ಈ ಕ್ಷೇತ್ರದಿಂದ ೨೦೦೯ರಲ್ಲಿ ನಡದ ಮೊದಲ ಚುನಾವಣೆಯಲ್ಲಿ ಕರಾವಳಿ ಕುವರ ಡಿವಿ ಸದಾನಂದ ಗೌಡ ಬಿಜೆಪಿಯಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು.
ಸಿಎಂ ಆಗಿ ಆಯ್ಕೆಯಾದ ಬಳಿಕ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ೨೦೧೨ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಣಕ್ಕಿಳಿದ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ನಿಂದ ಗೆದ್ದು ಗೆಲುವು ಸಾಧಿಸಿದರು. ಆ ಬಳಿಕ ಈ ಕ್ಷೇತ್ರದಲ್ಲಿ ೨೦೧೪ ಹಾಗೂ ೨೦೧೯ರಲ್ಲಿ ನಡೆದ ಎರಡೂ ಚುನಾವಣೆಯಲ್ಲಿ ಸತತವಾಗಿ ಪ್ರಸ್ತುತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿಯಿಂದ ಕಣಕ್ಕಿಳಿದು ಗೆದ್ದ ದಾಖಲೆ ಹೊಂದಿದ್ದಾರೆ.
Kota Srinivasa Pujari wins in Udupi-Chikkamagaluru Lok Sabha constituency