ಚಿಕ್ಕಮಗಳೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು. ಕಾಂಗ್ರೆಸ್ ಸೋಲನುಭವಿಸಿತು.
ಒಟ್ಟು 9,829 ಮತ ಗಳಿಸಿದ ಭೋಜೇಗೌಡ, ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ 4,562 ಮತಗಳನ್ನು ಗಳಿಸಿ 2ನೇ ಸ್ಥಾನ ಪಡೆದರು.
ಪಕ್ಷೇತರ ಅಭ್ಯರ್ಥಿ ಎಸ್.ಆರ್.ಹರೀಶ್ ಆಚಾರ್ಯ 2,101 ಮತಗಳೊಂದಿಗೆ 3ನೇ ಸ್ಥಾನ ಗಳಿಸಿದರು.
ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಗುರುವಾರ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಒಟ್ಟು 19,479 ಮತಗಳಲ್ಲಿ 821 ಮತಗಳು ತಿರಸ್ಕೃತಗೊಂಡವು (ಕುಲಗೆಟ್ಟ ಮತಗಳು) ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದರು.
ಭೋಜೇಗೌಡ ಅವರು ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ಅವರಿಂದ ಪ್ರಮಾಣಪತ್ರ ಸ್ವೀಕರಿಸಿದರು.
SL Bhoje Gowda wins Vidhan Parishad South West Teachers Constituency election