June 27, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕ್ರೀಡಾ ಚಟುವಟಿಕೆ ದೈಹಿಕ-ಮಾನಸಿಕ ಆರೋಗ್ಯ ವೃದ್ದಿ

ಚಿಕ್ಕಮಗಳೂರು:  ಕ್ರೀಡಾ ಚಟುವಟಿಕೆ ದೈಹಿಕ, ಮಾನಸಿಕ ಆರೋಗ್ಯವನ್ನು ವೃದ್ದಿಸು ತ್ತದೆ. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯ ನಿರ್ವಹಣೆಯ ಪಾಠವನ್ನು ಬೋಧಿಸುತ್ತದೆ ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಕೆ.ಸುಂದರಗೌಡ ಹೇಳಿದರು.

ನಗರದ ಎಸ್.ಟಿ.ಜೆ ಮಹಿಳಾ ಪದವಿ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನೆಯನ್ನು ಈಚೆಗೆ ನೆರವೇರಿಸಿ ಅವ ರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿ ಕೊಳ್ಳಬೇಕು. ಪಠ್ಯದ ಜೊತೆಗೆ ಆಸಕ್ತಿ ಹೊಂದಿರುವ ರಂಗದಲ್ಲಿ ಗುರುತಿಸಿಕೊಂಡಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಎಸ್ ಟಿ ಜೆ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲೆ ಭಾರತಿ ಮಾತನಾಡಿ ಉತ್ತಮ ಆರೋಗ್ಯಕ್ಕೆ ನಿಯಮಿತ ದೈಹಿಕ ಚಟುವಟಿಕೆ ಅತ್ಯಗತ್ಯ, ಇಂದಿನ ಮಕ್ಕಳು ಹಿಂದೆಗಿಂತಲೂ ಹೆಚ್ಚು ಸಮಯವನ್ನು ಕೇವಲ ಮೊಬೈಲ್‌ಗಳಿಗೆ ಅಂಟಿಕೊಂಡಿದ್ದು ಈ ಹೊರತಾಗಿ ಕ್ರೀಡೆ ಮತ್ತು ವ್ಯಾಯಾಮಕ್ಕೆ ಪ್ರಮುಖ ಆದ್ಯತೆ ಕೊಡ ಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಎಸ್.ಟಿ.ಜೆ. ಮಹಿಳಾ ಪದವಿ ಕಾಲೇಜಿನ ಸಲಹಾ ಸಮಿತಿ ಅಧ್ಯಕ್ಷ ವಿನಾಯಕ್, ಎಸ್‌ಟಿಜೆ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಿವನಗೌಡ, ಮುಖ್ಯೋಪಾಧ್ಯಾ ಯರಾದ ಚೇತನ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Improving mental health through sports activities

Related posts

9 ಕೋಟಿ ರೂ ವೆಚ್ಚದಲ್ಲಿ ನಗರದ ಎಲ್ಲಾ ರಸ್ತೆಗಳು ಡಾಂಬರೀಕರಣ

Team Suddigara

ಸರ್ಕಾರ ನೀಡುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳನೇಕು

Team Suddigara

ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ

Team Suddigara

Leave a Comment