May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅನುಸೂಚಿತ ಜಾತಿ-ಪಂಗಡಗಳ 108 ದೌರ್ಜನ್ಯ ಪ್ರಕರಣಗಳಿಗೆ 1.44 ಕೋಟಿ ರೂ. ಪರಿಹಾರ

ಚಿಕ್ಕಮಗಳೂರು: ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯದ ೧೦೮ ಪ್ರಕರಣಗಳಿಗೆ ಸಂಬಂಧಿಸಿದಂತೆ ೨೦೨೨ ರಿಂದ ೨೦೨೫ರ ಸೆಪ್ಟಂಬರ್ ೧೭ ರವರೆಗೆ ೧ ಕೋಟಿ ೪೪ ಲಕ್ಷ ೬೩ ಸಾವಿರ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.

ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪರಿಶಿಷ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ಪರಿಶಿ? ಜಾತಿ ಮತ್ತು ಪರಿಶಿ? ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದಲ್ಲಿನ ಸಮಸ್ಯೆಗಳನ್ನು ತಾಲ್ಲೂಕು ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳುವಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ತಾಲೂಕುಗಳಲ್ಲಿ ಸಭೆ ನಡೆಸುವುದರಿಂದ ಪ್ರಕರಣಗಳ ಮೇಲಿನ ನಿಗಾಕ್ಕೆ ಹಾಗೂ ನಿಯತ್ರಣಕ್ಕೆ ತುಂಬಾ ಅನುಕೂಲವಾಗಲಿದೆ.

ಪರಿಶಿಷ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಎಸಗಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳಿಗೆ ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾತನಾಡಿ, ದೌರ್ಜನ್ಯ ಪ್ರಕರಣಕ್ಕೆ ಒಳಗದವರು ಬಡವರು, ಕೂಲಿ ಕಾರ್ಮಿಕರೂ ಆಗಿರುತ್ತಾರೆ. ಪ್ರಕರಣ ದಾಖಲಿಸಲು ಬರುವಾಗ ಗುರುತಿನ ಚೀಟಿ, ಆಧಾರ್ ಕಾರ್ಡ್‌ಗಳನ್ನು ತರುವಂತೆ ತಿಳಿಸಿದ ಅವರು, ಬಂದು ಹೋಗುವ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸಲಿದೆ ಎಂದು ತಿಳಿಸಿದರು.

ಮುಖಂಡರುಗಳು ತಮ್ಮ ವ್ಯಾಪ್ತಿಗೆ ಬರುವ ಸಮುದಾಯದಲ್ಲಿ ಸಭೆಯನ್ನು ಕರೆದು ಅವರಿಗೆ ಕಾನೂನಿನ ಅರಿವು ಮೂಡಿಸುವಂತೆ ಸೂಚಿಸಿದರು.
ಇತ್ತೀಚಿನ ದಿನದಲ್ಲಿ ಪೋಕ್ಸೊ ಪ್ರಕರಣ ಹೆಚ್ಚಾಗಿದ್ದು, ೧೫, ೧೬, ೧೭, ೧೮ ವರ್ಷದ ಮಕ್ಕಳು ಹೆಚ್ಚಾಗಿ ಈ ಪ್ರಕರಣಕ್ಕೆ ತುತ್ತಾಗುತ್ತಿದ್ದಾರೆ ಎಂದ ಅವರು, ಕೆಲವೊಂದು ಸಮುದಾಯದಲ್ಲಿ ಈ ಪ್ರಕರಣಗಳು ತಲೆಯೆತ್ತುತ್ತಿವೆ. ಶಾಲೆ ಬಿಟ್ಟ ಹೆಣ್ಣು ಮಕ್ಕಳನ್ನು ಶಾಲೆಗೆ ಹೋಗಲು ಪ್ರೇರೇಪಿಸಬೇಕು. ಸ್ಥಳೀಯ ಮುಖಂಡರು ಇಂತಹ ಮಕ್ಕಳನ್ನು ಗುರುತಿಸಿ ಅಧಿಕಾರಿಗಳ ಗಮನಕ್ಕೆ ತಂದರೆ ಅಂತವರನ್ನು ಪುನಃ ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಮುಂದುವರಿಸಲು ಕ್ರಮ ವಹಿಸುವರು ಎಂದು ಹೇಳಿದರು.

ಸಭೆಯಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಶಂಕರ ಕೊರವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ, ಸರ್ಕಾರಿ ಅಭಿಯೋಜಕರಾದ ಲೋಹಿತಾಚಾರ್ಯ, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

೧೯ಸಿಕೆಎಂ೧: ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಪರಿಶಿಷ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಜಿ.ಪಂ.ಉಪ ಕಾರ್ಯದರ್ಶಿ ಶಂಕರ ಕೊರವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ, ಸರ್ಕಾರಿ ಅಭಿಯೋಜಕರಾದ ಲೋಹಿತಾಚಾರ್ಯ, ತಾಲ್ಲೂಕುಗಳ ತಹಸೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Rs 1.44 crore compensation for 108 cases of atrocities against Scheduled Castes and Scheduled Tribes

Related posts

ರಾಜ್ಯದ ಕಾಂಗ್ರೆಸ್ ವರಿಷ್ಟ ನಾಯಕರ ಅವಹೇಳನ ಖಂಡಿಸಿ ಪ್ರತಿಭಟನೆ

Team Suddigara

ತಂದೆ-ತಾಯಿ ಪೋಷಣೆ ಮಾಡದಿದ್ದರೆ ಆಸ್ತಿ ವಾಪಸು

Team Suddigara

drama:ನೋಡುಗರ ಗಮನ ಸೆಳೆದ ಶ್ರೀ ದೇವಿ ಮಹಾತ್ಮೆ ನಾಟಕ

Team Suddigara

Leave a Comment