ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಲೋಕಾಯುಕ್ತ ಪೊಲೀಸರು ಭೇಟಿ ನೀಡಿದ್ದಾರೆ. ಶಾಸಕ ಟಿ.ಡಿ. ರಾಜೇಗೌಡರ ಪತ್ನಿ ಹಾಗೂ ಪುತ್ರನ ವಿರುದ್ಧ ಎಫ್.ಐ.ಆರ್ ದಾಖಲಾದ ಬೆನ್ನಲ್ಲೇ ಈ ದಾಳಿ ತನಿಖೆಯ ಭಾಗವಾಗಿದೆ. ಶಾಸಕರಾಗಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪ ರಾಜೇಗೌಡರ ಮೇಲಿದೆ.
ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಜೇಗೌಡರು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ ಘೋಷಣೆ ಮಾಡಿಲ್ಲ ಎಂದು ದೂರಿನ್ನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಭಂದ ಬಿಜೆಪಿ ಮುಖಂಡ ದಿನೇಶ್ ಹೊಸೂರು ಅವರು ದೂರು ನೀಡಿದ್ದರು. ದಿನೇಶ್ ಹೊಸೂರು ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಾಲಯದ ನಿರ್ದೇಶನದಂತೆ ಟಿ.ಡಿ. ರಾಜೇಗೌಡ, ಅವರ ಪತ್ನಿ ಪುಷ್ಪ ಮತ್ತು ಮಗನ ವಿರುದ್ಧ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್. ಐ.ಆರ್ ದಾಖಲಾದ ನಂತರ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ತೀವ್ರಗೊಳಿಸದ್ದು, ಅದರ ಭಾಗವಾಗಿ ಎಂದು ಶಾಸಕರ ನಿವಾಸ ಪರಿಶೀಲನೆಗೆ ಮುಂದಾಗಿದ್ದಾರೆ.
ಲೋಕಾಯುಕ್ತ ಪೊಲೀಸರು, ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದಲ್ಲಿರುವ ಟಿ.ಡಿ.ರಾಜೇಗೌಡರ ಮನೆಯಲ್ಲಿ ಮಾಹಿತಿ ಸಂಗ್ರಹಿಸೆ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
Lokayukta raids T.D. Rajegowda’s residence

Leave a Reply