ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಅಖಾಡ ಸಜ್ಜಾಗುತ್ತಿದ್ದು, ಇಂದು ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 124 ಕ್ಷೇತ್ರಗಳಿಗೆ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕ್ಷೇತ್ರ ಹುಡುಕಾಟದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ಪರ್ಧೆಯ ಕಣವೂ ಫಿಕ್ಸ್ ಆಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರದಿಂದ ಸ್ಪರ್ಧಿಸಿದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣ ವಿಧಾನಸಭಾ ಕೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಜಿಲ್ಲೆಯ ಶೃಂಗೇರಿ ಕ್ಷೇತ್ರದಿಂದ ಟಿ.ಡಿ. ರಾಜೇಗೌಡ ಹೆಸರು ಘೋಷಣೆಯಾಗಿದ್ದು ಉಳಿದ ಕ್ಷೇತ್ರಗಳ ಬಗ್ಗೆ ಪಕ್ಷ ಕಾದು ನೋಡುವ ತಂತ್ರ ಅನುಸರಿಸಿದೆ.