ಚಿಕ್ಕಮಗಳೂರು: ಜೆಎಡಿಎಸ್ ಮೊದಲ ಪಟ್ಟಿಯಲ್ಲಿ ಘೋಷಿತ ಅಭ್ಯರ್ಥಿಯಾಗಿದ್ದ ಬಿ.ಬಿ ನಿಂಗಯ್ಯ ಬುಧವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ಬಂದ ಅವರು, ಜೆಡಿಎಸ್ ನ ಕೆಲವು ಮುಖಂಡರೊಂದಿಗೆ ಚುನಾವ ಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಎಚ್.ಡಿ ಕುಮಾರಸ್ವಾಮಿ ನೃತೃತ್ವದಲ್ಲಿ ಅಡ್ಯಂತಾಯ ರಂಗಮಂದಿರದಲ್ಲಿ ನಡೆದ ಜೆಡಿಎಸ್ ಬಹಿರಂಗ ಸಭೆಯಲ್ಲಿ ಗೈರಾಗುವ ಮೂಲಕ ಗಮನ ಸೆಳೆದರು.
ಮೊದಲ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ್ದ ಮಾಜಿ ಸಚಿವ ನಿಂಗಯ್ಯ ಅವರನ್ನು ಕೈಬಿಟ್ಟು ಎಂ.ಪಿ.ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಟಿಕೆಟ್ ಕೈತಪ್ಪಿ ಎಂ.ಪಿ.ಕುಮಾರಸ್ವಾಮಿ ಅವರು ಜೆಡಿಎಸ್ ಸೇರಿದ್ದರು. ಅವರು ಲಾಬಿ ನಡೆಸಿ ಈಗಾಗಲೇ ಟಿಕೆಟ್ ಘೋಷಣೆಯಾಗಿದ್ದ ಅಭ್ಯರ್ಥಿ ಬದಲಾಯಿಸಿ ಟಿಕೆಟ್ ಗಿಟ್ಟಿಸಿದ್ದಾರೆ. ನಿಂಗಯ್ಯ ಅವರ ಮುಂದಿನ ನಡೆ ಯಾವ ಕಡೆ ಎಂಬ ಪ್ರಶ್ನೆ ಎದ್ದಿದೆ.
‘ತರೀಕೆರೆ ಕ್ಷೇತ್ರದಲ್ಲಿ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿರುವ ಎಚ್.ಎಂ.ಗೋಪಿಕೃಷ್ಣ ಅವರು ತಮಗೆ ಬೆಂಬಲ ನೀಡುವಂತೆ ಕೋರಿದ್ದಾರೆ. ಈ ಕ್ಷೇತ್ರದ ಟಿಕೆಟ್ ಘೋಷಣೆಗೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಧರಿಸುತ್ತೇವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಭೋಜೇಗೌಡ ತಿಳಿಸಿದರು.
B.B. Ningaiah has submitted nomination papers as a non-party candidate