ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಚುನಾವಣೆಯಲ್ಲಿ ಮತದಾರರಿಗೆ ಹಣ ಸಹಿತ ಮೊದಲಾದ ಆಮಿಷ ನೀಡಿ ಮತದಾರರನ್ನು ಮತದಾನದಿಂದ ವಂಚಿಸಲು ತಂತ್ರ ರೂಪಿಸಿದೆ ಈ ಬಗ್ಗೆ ಕ್ರಮವಹಿಸುವಂತೆ ಕಾಂಗ್ರೆಸ್ ಮುಖಂಡರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಕೆಲವು ಮುಖಂಡರು ಖಾಸಗಿ ಬಸ್ಗಳ ಮೂಲಕ ರಾಜ್ಯದ ಪ್ರೇಕ್ಷಣೀಯ ಸ್ಥಳಗಳಿಗೆ ಕರೆದೊಯ್ಯುಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಮತದಾನ ಮಾಡದಿದ್ದರೂ ಮತದಾರರ ಬೆರಳಿಗೆ ಶಾಯಿ ಹಚ್ಚಿ ಮತದಾನ ಮಾಡಿದಂತೆ ತಂತ್ರ ರೂಪಿಸಿರುವುದು ಗೊತ್ತಾಗಿದೆ ಎಂದು ಆರೋಪಿಸಿದ್ದಾರೆ.
ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಯಬೇಕು. ಪಾರದರ್ಶಕ ಚುನಾವಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮವಹಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಮುಖಂಡರಾದ ಎಂ.ಎಲ್ .ಮೂರ್ತಿ, ಎಂ.ಸಿ. ಶಿವಾನಂದಸ್ವಾಮಿ, ರೂಬೆನ್ ಮೊಸಸ್, ಎಚ್.ಪಿ. ಮಂಜೇಗೌಡ,ಶ್ರೀಕಾಂತ್ ಇದ್ದರು.
Congress appeals to prevent election irregularities