ಭಾನುವಾರ ಬೆಳಿಗ್ಗೆ ಪಟ್ಟಣದ ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ವಿವಿಧ ವಿಭಾಗಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
‘ಎಲ್ಲಾ ರೋಗಿಗಳಿಗೂ ತಾಲ್ಲೂಕಿನಲ್ಲಿಯೇ ಚಿಕಿತ್ಸೆ ಸಿಗಬೇಕು ಎಂಬುದು ನಮ್ಮ ಯೋಜನೆಯಾಗಿದೆ. 2004ರಲ್ಲಿಯೇ ಎಂಜಿಎಂ ಆಸ್ಪತ್ರೆಯನ್ನು ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿದ್ದರೂ, ರೋಗಿಗಳನ್ನು ಚಿಕ್ಕಮಗಳೂರು, ಹಾಸನ, ಮಂಗಳೂರಿಗೆ ಕಳುಹಿಸಿ ಕೊಡುವ ವ್ಯವಸ್ಥೆ ಬದಲಾಗಿಲ್ಲ. ನಮ್ಮ ಯೋಜನೆಗೆ ಅನುಗುಣವಾಗಿ ಕೆಲಸ ಮಾಡಲು ಎಲ್ಲರೂ ಸಹಕಾರ ನೀಡಬೇಕು. ಎಲ್ಲರೂ ಒಂದಾಗಿ ದುಡಿದರೆ ತಾಲ್ಲೂಕಿಗೆ ಉತ್ತಮ ಹೆಸರು ತಂದುಕೊಡಲು ಸಾಧ್ಯವಾಗುತ್ತದೆ. ಅದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯ’ ಎಂದರು.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ ಬಳಿ ಮಾತನಾಡಿ, ಆಸ್ಪತ್ರೆಯಲ್ಲಿನ ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಶವಗಾರ, ಅಡುಗೆಮನೆ, ವಿಶೇಷ ವಾರ್ಡ್ಗಳಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಶಾಸಕಿಗೆ ಮಾಹಿತಿ ನೀಡಿದರು.
ಕಾಂಗ್ರೆಸ್ ಮುಖಂಡರಾದ ಚಿಕ್ಕಳ್ಳಶಂಕರ್, ಕೆ.ವೆಂಕಟೇಶ್, ಟಿ.ಎ ಮದೀಶ್, ಹೊಸ್ಕೆರೆ ರಮೇಶ್, ಮಹಮ್ಮದ್ ಬಾವಾ, ಕುನ್ನಳ್ಳಿ ರವಿ, ಪ್ರಕಾಶ್ ಹೆಸ್ಗಲ್ ಇದ್ದರು.