Category: ಚಿಕ್ಕಮಗಳೂರು ನಗರ

  • ಹಾಸನ ಅಪಘಾತ ಪ್ರಕರಣ ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ

    ಹಾಸನ ಅಪಘಾತ ಪ್ರಕರಣ ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ

    ಮೈಸೂರು : ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

    ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು.

    ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಸತ್ತವರು ಹೆಚ್ಚಾಗಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿದ್ದರು ಹಾಗಾಗಿ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸರ್ಕಾರ ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಎಂದರು.

    ವಿರೋಧಪಕ್ಷದವರ ಒತ್ತಡದಿಂದ ಪ್ರಧಾನಿಗಳು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಆಯ್ಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ವಿರೋಧಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.

    ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ವಿಳಂಬವಾಗುತ್ತಿಲ್ಲ : ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ವಿಳಂಬವಾಗುತ್ತಿಲ್ಲ. ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.

    ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ:  ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿ ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.
    ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೋಲಿಸಿನವರು ಕ್ರಮ ಕೈಗೊಳ್ಳುತ್ತಾರೆ ಎಂದರು.

    ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ:ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದರು. ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.

    ರಾಜಕಾರಣಕ್ಕಾಗಿ ಆಕ್ಷೇಪ : ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು 2010 ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದರು.

    ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಎಂದರು.

    ಜಾತಿ ಗಣತಿ: ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

    ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.

    Hassan accident case: Compensation is not equal to death

  • ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    ಮೈಸೂರು :  ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

    ಅವರು ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ಇವರ ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದರು.

    ಜೆಎಸ್ಎಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿ ಗೃಹ ನಿರ್ಮಾಣ ಸಂಘವನ್ನು ಸ್ಥಾಪಿಸಿದ್ದಾರೆ. ಸಂಘದ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡಿದ್ದಾರೆ. ಸಂಘವು ಹಿಂದೆ ಜಮೀನು ಕೊಂಡ ದರದಲ್ಲಿಯೇ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಸಹಕಾರ ಸಂಘಗಳ ಇತಿಹಾಸದಲ್ಲಿಯೇ ಪ್ರಥಮ ಎಂದು ತಿಳಿಸಿದ ಮುಖ್ಯಮಂತ್ರಿಗಳು ಸಂಘದ ಸದಸ್ಯರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

    ಶಿವರಾತ್ರಿ ರಾಜೇಂದ್ರ ಮಠದ ಅಧ್ಯಕ್ಷರಾದ ನಂತರ ಸ್ವಾಮೀಜಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಕರ್ನಾಟಕ ದೇಶ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಠದಲ್ಲಿಯೂ ಶಿಕ್ಷಣ ಕ್ಷೇತ್ರಗಳನ್ನು ಸ್ಥಾಪಿಸಿದ್ದಾರೆ. ಇದಕ್ಕೆ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಹಾಕಿದಾ
    ಅಡಿಪಾಯವೇ ಕಾರಣ. ಶಿಕ್ಷಣ ಬಹಳ ಮುಖ್ಯ ಎಂದರು.

    ನಮ್ಮ ಸಮಾಜ ಸಾಮಾಜಿಕ ಜಾತಿ ವ್ಯವಸ್ಥೆಯಿಂದ ಕೂಡಿದೆ. ಈ ಕಾರಣದಿಂದ ಬಸವಣ್ಣನವರ ಕಾಲಕ್ಕಿಂತಲೂ ಹಿಂದೆ ಶೂದ್ರ ಜನಾಂಗದವರು ಮತ್ತು ಮಹಿಳೆಯರು, ಶಿಕ್ಷಣದಿಂದ ವಂಚಿತರಾಗಿದ್ದರು. ಮಹಿಳೆಯರಿಗೆ ಶಿಕ್ಷಣದ ಹಕ್ಕು ಸಿಕ್ಕಿದ್ದು ಬಸವಣ್ಣನವರ ಕಾಲದಲ್ಲಿ ಎನ್ನುವುದನ್ನು ನಾವು ಮರೆಯಬಾರದು. ಅನುಭವ ಮಂಟಪ ಎಂದು ಹೆಸರಿಟ್ಟಿರುವುದು ಸೂಕ್ತವಾಗಿದೆ ಎಂದು ಅಭಿಪ್ರಾಯ ಪಟ್ಟ ಮುಖ್ಯಮಂತ್ರಿಗಳು, ಅನುಭವ ಮಂಟಪ ಜಗತ್ತಿನ ಮೊದಲನೇ ಸಂಸತ್ತು ಎಂದು ಕರೆಸಿಕೊಂಡಿದೆ. ಈ ಸಂಸತ್ತಿನಲ್ಲಿ ಜಾತಿ, ಧರ್ಮಗಳು ಇರಲಿಲ್ಲ. ಎಲ್ಲಾ ಧರ್ಮದವರೂ ಇಲ್ಲಿನ ಸಂಸತ್ತಿನಲ್ಲಿ ಪಾಲ್ಗೊಳ್ಳುತ್ತಿದ್ದರು. ಬಸವಣ್ಣನವರು ಅದಕ್ಕಾಗಿಯೇ ಅನುಭವ ಮಂಟಪ ನಿರ್ಮಿಸಿ ಜನರ ಸಾಮಾಜಿಕ ಅನುಭವಗಳನ್ನು ಚರ್ಚೆ ಮಾಡಿ ಅದಕ್ಕೆ ರೂಪ ಕೊಡುವ ಕೆಲಸವನ್ನು ಮಾಡಿದ್ದರು ಎಂದರು.

    ಸ್ವತಂತ್ರ ಭಾರತದಲ್ಲಿ ಇಂದು ಸಂಸತ್ತು, ವಿಧಾನಸಭೆಗಳಾಗಿವೆ. ಜನಪ್ರತಿನಿಧಿಗಳು ಸಂಸತ್ತು, ವಿಧಾನಸಭೆಗಳಲ್ಲಿ ಚರ್ಚೆ ಮಾಡುತ್ತೇವೆ. ಇಂಥ ವ್ಯವಸ್ಥೆ ಬಸವಣ್ಣನವರ ಕಾಲದಲ್ಲಿಯೇ ಇತ್ತು. ಸಮಾಜದ ಭವಿಷ್ಯದ ಬಗ್ಗೆ, ಕೊಳಕುಗಳನ್ನು ತೆಗೆದುಹಾಕುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಇರಿಸಲು ಆದೇಶ ಹೊರಡಿಸಲಾಗಿತ್ತು. ಈ ಬಾರಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ತೀರ್ಮಾನಿಸಿದೆ ಎಂದರು.

    ಬಸವಣ್ಣನವರು ಯಾವುದೇ ಜಾತಿ, ಧರ್ಮ, ಪಂಗಡಕ್ಕೆ ಸೇರಿದವರಲ್ಲ. ಅವರು ವಿಶ್ವ ಮಾನವರಾಗಿದ್ದವರು. ಸಮಾಜ ಜಾತ್ಯತೀತ, ಅಸಮಾನತೆಯಿಂದ ಮುಕ್ತವಾಗಬೇಕೆಂಬ ಕನಸನ್ನು ಕಂಡಿದ್ದರು. ಸಮ ಸಮಾಜ ನಿರ್ಮಾಣದ ಕನಸನ್ನು ಕಂಡಿದ್ದಷ್ಟೇ ಅಲ್ಲದೇ ಅನುಭವ ಮಂಟಪದಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳನ್ನು ಒದಗಿಸಿದ್ದರು. ತಾವು ಅಧ್ಯಕ್ಷರಾಗದೇ ತಳಸಮುದಾಯದಿಂದ ಬಂದ ಅಲ್ಲಮ ಪ್ರಭುವನ್ನು ಅಧ್ಯಕ್ಷನನ್ನಾಗಿ ಮಾಡಿದರು. ಜಾತ್ಯತೀಯ, ಸಮಾನತೆ, ಸ್ವತಂತ್ರ, ಮೇಲು ಕೀಳು ಎಂಬ ಬೇಧಭಾವವಿಲ್ಲದೆ ಎಲ್ಲರೂ ಮನುಷ್ಯರಾಗಿ ಬಾಳುವ ಕನಸು ಬಸವಣ್ಣ ಕಂಡಿದ್ದರು. ಇದಕ್ಕೂ ಹಿಂದೆ ಬುದ್ಧ ಕೂಡ ಇಡೀ ಪ್ರಯತ್ನ ಮಾಡಿದ್ದರು. ಇಷ್ಟೆಲ್ಲಾ ಆದರೂ ಜಾತಿ ವ್ಯವಸ್ಥೆ ನಮ್ಮಲ್ಲಿ ಬೇರೂರಿದೆ. ಸ್ವಾತಂತ್ರ್ಯ ದೊರೆತು 78 ವರ್ಷಗಳಾದರೂ ಜಾತಿ ಹೋಗಿಲ್ಲವೆಂದರೆ ಜಾತಿ ಅಷ್ಟು ಆಳವಾಗಿ ಬೇರೂರಿದೆ ಎಂದರು.

    ಆರ್ಥಿಕ, ಸಾಮಾಜಿಕ ಶಕ್ತಿ ದೊರೆತಾಗ ಮಾತ್ರ ಜಾತಿ ವ್ಯವಸ್ಥೆಗೆ ಚಲನೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಈ ವ್ಯವಸ್ಥೆಗೆ ಚಲನೆ ಬರುತ್ತದೆ. ನಮ್ಮ ನಡುವಿನ ಪಟ್ಟಭದ್ರ ಹಿತಾಸಕ್ತಿಗಳು ಈ ಜಾತಿ ವ್ಯವಸ್ಥೆಗೆ ಸಾಮಾಜಿಕ, ಆರ್ಥಿಕ ಶಕ್ತಿ ಬರದ ಹಾಗೆ ನೋಡಿಕೊಳ್ಳುತ್ತಿದ್ದಾರೆ ಎಂದರು.

    ಜಾತಿ ವ್ಯವಸ್ಥೆ ಬಾವಿಯೊಳಗಿನ ಸತ್ತೆಯ ಹಾಗೆ. ಬಾವಿಗೆ ಬಿಂದಿಗೆ ಹಾಕಿದಾಗ ಸತ್ತೆ ದೂರ ಸರಿಯುತ್ತದೆ. ಬಿಂದಿಗೆ ಮೇಲೆತ್ತಿದ್ದರೆ ಸತ್ತೆ ಮತ್ತೆ ಕೂಡಿಕೊಳ್ಳುತ್ತದೆ. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕೂಡಾ ಹೀಗಿದೆ ಎಂದರು.

    ಅದಕ್ಕೆ ಬಸವಣ್ಣನವರು 850 ವರ್ಷಗಳ ಹಿಂದೆಯೇ “ಇವನಾರವ ಇವನಾರವ ಎಂದೆಣಿಸದರಿ, ಇವ ನಮ್ಮವ ಇವ ನಮ್ಮವ ಎಂದೆಣಿಸಯ್ಯಾ” ಎಂದು ಹೇಳಿದ್ದರು. ಈ ವಚನ ಎಲ್ಲರಿಗೂ ಗೊತ್ತಿದ್ದರೂ. ಈಗಲೂ ವಿದ್ಯಾವಂತರಾದ ನಾವೂ ಸಹ ನೀವು ಯಾವ ಜಾತಿಗೆ ಸೇರಿದವರು ಎಂದು ಕೇಳುವುದು ಸಾಮಾನ್ಯವಾಗಿದೆ . ಬಸವಾದಿ ಶರಣರು ಇದನ್ನು ಬಯಸಿರಲಿಲ್ಲ. ಜಾತಿ, ವರ್ಗಗಳ ನಿರ್ಮೂಲನೆಗೆ ಪಣ ತೊಟ್ಟು, ಎಲ್ಲರೂ ಮನುಷ್ಯರಾಗಿ ಬಾಳಬೇಕೆಂದು ಬಯಸಿದ್ದರು. ಅದಕ್ಕಾಗಿಯೇ ಅನುಭವ ಮಂಟಪ ಅಸ್ತಿತ್ವಕ್ಕೆ ಬಂದಿದ್ದು ಎಂದರು.

    ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಮಂಟಪ ಕಾರಣವಾಗಲಿ ಇಂದು ಇಲ್ಲಿ ಉದ್ಘಾಟನೆ ಗೊಂಡಿರುವ ಈ ಮಂಟಪ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಕಾರಣವಾಗಲಿ ಎನ್ನುವ ಆಶಯ ವ್ಯಕ್ತಪಡಿಸಿದರು. ಪೂಜ್ಯ ರಾಜೇಂದ್ರ ಸ್ವಾಮೀಜಿಗಳು ಅಕ್ಷರ ದಾಸೋಹ, ಅನ್ನ ದಾಸೋಹಕ್ಕೆ ಹೆಸರಾದವರು. ದಾಸೋಹದ ಅರ್ಥ ‘ಉತ್ಪಾದಿಸುವುದು ಮತ್ತು ಹಂಚುವುದು’ ಎಂಬುದಾಗಿದೆ. ಅದು ಇಲ್ಲಿ ಅರ್ಥಪೂರ್ಣವಾಗಿ ಆಚರಣೆಯಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದಂತೆ, ಸಮಾಜದ ಎಲ್ಲರಿಗೂ ಸಾಮಾಜಿಕ ಹಾಗೂ ಆರ್ಥಿಕ ಸ್ವಾವಲಂಬನೆ ಬಂದಾಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಸಾರ್ಥಕವಾಗುತ್ತದೆ. ಇಲ್ಲದಿದ್ದರೆ ಅದು ನಿರರ್ಥಕ. ಸಮಾಜದಲ್ಲಿ ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ ನಿರ್ಮಾಣ ಆಗಿರುವುದು ಎಂದರು.

    ಗ್ಯಾರಂಟಿ ಯೋಜನೆಗಳಿಗೆ 1ಲಕ್ಷ ಕೋಟಿ ರೂಪಾಯಿ ವೆಚ್ಚ ಅಸಮಾನತೆಗಳನ್ನು ತೊಡೆಯುವ ಉದ್ದೇಶದಿಂದ, ಕಳೆದ ಬಾರಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪ್ರಥಮ ಹೆಜ್ಜೆಯಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು. ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಉದ್ದೇಶವೂ ಕೂಡಾ ಇದೇ ಆಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ಕಳೆದ ಎರಡು ವರ್ಷ ಮೂರು ತಿಂಗಳಲ್ಲಿ
    1ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂದರು.

    ಸಮ ಸಮಾಜ ನಿರ್ಮಾಣ ಮಾಡಿ ಸಹಬಾಳ್ವೆ ರೂಢಿಸಿಕೊಳ್ಳಬೇಕು. ಬಸವಣ್ಣನವರು ಹೇಳಿದಂತೆ ಜಾತಿ ರಹಿತ, ವರ್ಗ ರಹಿತ ಸಮಾಜ ನಿರ್ಮಾಣ ಆಗಬೇಕು . ಎಲ್ಲರೂ ಮನುಷ್ಯರಾಗಿ ಬಾಳಬೇಕು. ಸಂವಿಧಾನದ ಆಶಯವೂ ಅದೇ- ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ. ಆದ್ದರಿಂದ ನಾವೆಲ್ಲರೂ ಸಮ ಸಮಾಜ ನಿರ್ಮಾಣ ಮಾಡಿ ಸಹಬಾಳ್ವೆ ರೂಢಿಸಿಕೊಳ್ಳಬೇಕು. ಇದನ್ನು ಅನುಭವ ಮಂಟಪ ಸಾಕಾರಗೊಳಿಸಲಿ ಎಂದರು.

    Everyone should get an education.

  • ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ

    ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ

    ಚಿಕ್ಕಮಗಳೂರು: ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಂಡಳಿ ಅನುಮೋದನೆ ನೀಡಿದ್ದು, ಸ್ಥಳೀಯರ ಮನವೊಲಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಗಳೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

    ಇಲ್ಲಿನ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಆ ಭಾಗದ ಜನರಿಗೆ ಯಾವುದೇ ಆತಂಕ ಬೇಡ. ಪರಿಸರದ ಮೇಲೆ ದುಷ್ಪರಿಣಾಮ ಬೀರದಂತೆ ಯೋಜನೆ ಜಾರಿಗೊಳಿಸಲಾಗುವುದು. ಪರಿಸರದ ಮೇಲೆ ದೊಡ್ಡ ಮಟ್ಟದಲ್ಲಿ ಹಾನಿಯಾಗುವುದಿಲ್ಲ. ಈ ವಿಚಾರವನ್ನು ಜನರಿಗೆ ತಿಳಿಸಿ ಅವರ ಮನವೊಲಿಸಲಾಗುವುದು ಎಂದರು.

    2000 ಮೆಗಾವ್ಯಾಟ್ ಸಾಮರ್ಥ್ಯ ಈ ಯೋಜನೆ ಅನುಷ್ಠಾನಕ್ಕೆ ಕೇವಲ ಕೇವಲ 120 ಎಕರೆ ಜಮೀನು ಸಾಕು.ಇದರಲ್ಲಿ 50 ಎಕರೆ ಖಾಸಗಿಯಾಗಿದ್ದು, ಉಳಿದಂತೆ ಕಂದಾಯ ಮತ್ತು ಅರಣ್ಯ ಮತ್ತು ಕಂದಾಯ ಭೂಮಿಯನ್ನು ಬಳಸಿಕೊಳ್ಳಲಾಗುತ್ತದೆ. ಖಾಸಗಿಯವರ ಭೂಮಿಗೆ ಸೂಕ್ತ ಪರಿಹಾರ ನೀಡಲಾಗುವುದು. ಯೋಜನೆಗೆ ಬಳಸಿಕೊಳ್ಳುವ ಅರಣ್ಯಕ್ಕೆ ಬದಲಾಗಿ ಅರಣ್ಯ ಇಲಾಖೆಗೆ ಅರಣ್ಯೀಕರಣಕ್ಕೆ ಬೇಕೆ ಕಡೆಭೂಮಿ ನೀಡಲಾಗುವುದು ಎಂದು ತಿಳಿಸಿದರು.

    ಪಂಪ್ಡ್ ಸ್ಟೋರೇಜ್ ಯೋಜನೆಗೆ ಹೊಸ ಜಲಾಶಯಗಳನ್ನು ನಿರ್ಮಿಸುವುದರಿಂದ ನದಿ ಹರಿವಿಗೂ ಅಡ್ಡಿಯಾಗುವುದಿಲ್ಲ. ಗೇರುಸೊಪ್ಪದಿಂದ ಪೈಪ್ ಲೈನ್ ಮೂಲಕ ನೀರನ್ನು ಮೇಲಿನ ಹಂತದಲ್ಲಿರುವ ತಲಕಳಲೆ ಜಲಾಶಯಕ್ಕೆ ಪಂಪ್ ಮಾಡಲಾಗುತ್ತದೆ. ಈ ಪೈಲ್ ಲೈನ್ ಗಳು ನೆಲದ ಒಳಗೆ ಇರುತ್ತದೆ. ಬಹುತೇಕ ನಿರ್ಮಾಣಗಳು ಸುರಂದ ಒಳಗೇ ಇರುವುದರಿಂದ ಯೋಜನೆಯಿಂದ ದೊಡ್ಡಮಟ್ಟದಲ್ಲಿ ಪರಿಸರಕ್ಕೆ ಹಾನಿಯಾಗುವುದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಯೋಜನೆ ಅನುಷ್ಠಾನವಾದಲ್ಲಿ ಕಡಿಮೆ ಖರ್ಚಿನಲ್ಲಿ ಹೆಚ್ಚುವರಿಯಾಗಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು ಮತ್ತು ಅಗತ್ಯ ಸಂದರ್ಭದಲ್ಲಿ ಗ್ರಾಹಕರಿಗೆ ಪೂರೈಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

    ರೈತರ ನೀರಾವರಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಕುಸುಮ್ ಬಿ ಯೋಜನೆ ಅನುಷ್ಠಾಗೊಳಿಸಲಾಗಿದೆ. ವಿದ್ಯುತ್ ಫೀಡರ್ ನಿಂದ 500 ಮೀಟರ್ ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಕುಸುಮ್ ಬಿ ಯೋಜನೆಯಡಿ ಸೌರವಿದ್ಯುತ್ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಶೇ. 80ರಷ್ಟು ಸಬ್ಸಿಡಿ ನೀಡಲಾಗುವುದು. ಇನ್ನುಳಿದ ಶೇ. 20 ರಷ್ಟು ಹಣವನ್ನು ಮಾತ್ರ ಫಲಾನುಭವಿ ಭರಿಸಬೇಕು ಎಂದು ಹೇಳಿದರು.

    ಅದೇ ರೀತಿ ಕುಸುಮ್ ಸಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ತಯಾರಿಸಲು ಕ್ರಮಕೈಗೊಳ್ಳಲಾಗಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅನುಷ್ಠಾನವಾದಲ್ಲಿ 2500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಯಾಗಲಿದೆ ಎಂದು ಹೇಳಿದರು.

    ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸಬ್ ಸ್ಟೇಷನ್ ಗಳಲ್ಲಿ ಅಥವಾ ಲೈನ್ ಗಳಲ್ಲಿ ಸಮಸ್ಯೆ ಇರುವೆಡೆ ಮಾತ್ರ ವಿದ್ಯುತ್ ವ್ಯತ್ಯಯವಾಗುತ್ತಿರಬಹುದು. ಹೀಗಾಗಿಯೇ ಪ್ರತಿ ವರ್ಷ ರಾಜ್ಯದಲ್ಲಿ 100 ಹೊಸ ಸಬ್ ಸ್ಟೇಷನ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

    ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಇದ್ದರು.

    Sharavati Pumped Storage Project without harming the environment

  • ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದು ನಮೂದಿಸಲು ಮನವಿ

    ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದು ನಮೂದಿಸಲು ಮನವಿ

    ಚಿಕ್ಕಮಗಳೂರು: : ಹಿಂದುಳಿದ ವರ್ಗಗಳ ಆಯೋಗದಿಂದ ಸೆ.೨೨ ರಿಂದ ಅ.೭ ರವರೆಗೆ ನಡೆಸಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಮನೆಗೆ ಭೇಟಿನೀಡಿದ ಗಣತಿದಾರರಿಗೆ ಕಾಲಂ ನಂಬರ್ ೯ ರಲ್ಲಿ ಒಕ್ಕಲಿಗ ಎಂದು ನಮೂದಿಸುವಂತೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಸಮಾಜ ಬಾಂಧವರಲ್ಲಿ ಮನವಿ ಮಾಡಿದರು.

    ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಸರ್ಕಾರ ನಿಗದಿಪಡಿಸಿರುವ ಆಯೋಗದ ಸದಸ್ಯರು ಸುಮಾರು ೬೦ ಕಾಲಂ ಉಳ್ಳ ಕುಟುಂಬದ ವಿವರನ್ನು ಪಡೆಯಲಿದ್ದು, ಒಕ್ಕಲಿಗ ಸಮುದಾಯ ಹಿಂದುಳಿದ ವರ್ಗಗಳ ಪ್ರವರ್ಗ-೩(ಎ) ವರ್ಗಕ್ಕೆ ಸೇರಿಸಿದ್ದು, ಕಾಲಂ ೯ ರಲ್ಲಿ ಜಾತಿ, ಕಾಲಂ ೧೦ ರಲ್ಲಿ ಉಪಜಾತಿಯನ್ನು ನಮೂದಿಸಬೇಕಾಗಿರುತ್ತದೆ ಎಂದಿದ್ದಾರೆ.

    ಉಪಜಾತಿ ಕಾಲಂನಲ್ಲಿ ಸಮುದಾಯದ ಉಪ ಪಂಗಡಗಳಾದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್ಕರ್ ಒಕ್ಕಲಿಗ, ದಾಸ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಕುಂಚಿಟಿಗ, ಹೆಗ್ಗಡೆ, ರೆಡ್ಡಿ ಇತ್ಯಾದಿ ಉಪಜಾತಿಗಳನ್ನು ನಮೂದಿಸಬೇಕು ಎಂದು ಹೇಳಿದ್ದಾರೆ.

    ಕುಟುಂಬಕ್ಕೆ ಸಂಬಂಧಿಸಿದ ವಿವರಗಳಾದ ವಿದ್ಯಾಭ್ಯಾಸ, ವೃತ್ತಿ, ಜಮೀನಿನ ವಿವರ, ಆರ್ಥಿಕ ಸ್ಥಿತಿ ಮುಂತಾದ ನಿಖರವಾದ ವಿವರಗಳನ್ನು ಗಣತಿದಾರರಿಗೆ ನೀಡಬೇಕು. ಈ ಗಣತಿಯು ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು. ಗಣತಿದಾರರು ಸಮೀಕ್ಷೆ ಮಾಡುವಾಗ ಕುಟುಂಬದಲ್ಲಿ ಆರು ವರ್ಷಕ್ಕೂ ಮೇಲ್ಪಟ್ಟವರು ಮಾತ್ರ ಗಣತಿ ಮಾಡಲಿದ್ದು, ಪಡಿತರ ಚೀಟಿ, ಪ್ರತಿಯೊಬ್ಬರ ಆಧಾರ್ ಕಾರ್ಡ್, ಆಧಾರ್ ನೋಂದಣಿ ದಾಖಲೆ ನೀಡಬೇಕೆಂದು ತಿಳಿಸಿದ್ದಾರೆ.

    ಮುಂದಿನ ದಿನಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಬೇಕಾದ ಸೌಲತ್ತುಗಳನ್ನು ಕಡ್ಡಾಯವಾಗಿ ಗಣತಿದಾರರಿಗೆ ಸ್ಪಷ್ಟವಾದ ಮಾಹಿತಿಯನ್ನು ನೀಡುವಂತೆ ಅವರು ಕೋರಿದ್ದಾರೆ.

    Request to be listed as a loner in the socio-educational survey

  • ಮಾನಸಿಕ ಕಾಯಿಲೆ ಸಮಾಜದಲ್ಲಿ ಪ್ರಭಾವ ಬೀರುತ್ತಿದೆ

    ಮಾನಸಿಕ ಕಾಯಿಲೆ ಸಮಾಜದಲ್ಲಿ ಪ್ರಭಾವ ಬೀರುತ್ತಿದೆ

    ಚಿಕ್ಕಮಗಳೂರು: ದೈಹಿಕ ಕಾಯಿಲೆಗಳಿಗಿಂತ ಹೆಚ್ಚಾಗಿ ಇಂದು ಮನಸ್ಸು ಮತ್ತು ಸಮಾಜದ ಮೇಲೆ ಮಾನಸಿಕ ಕಾಯಿಲೆ ಪ್ರಭಾವ ಬೀರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು.

    ಅವರು ಇಂದು ನಗರದ ಹನುಮಂತಪ್ಪ ವೃತ್ತದಲ್ಲಿ ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆ, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನಸಿಕ ಆರೋಗ್ಯ ಅರಿವು ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಒತ್ತಡದ ಜೀವನ, ಅತಿಯಾದ ನಿರೀಕ್ಷೆ, ಹಂಚಿಕೊಳ್ಳುವಂತಹ ಸ್ನೇಹ ಸಂಬಂಧವನ್ನು ಕಡಿಮೆ ಮಾಡಿಕೊಂಡಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಸಮಾಜದೊಂದಿಗೆ ಸಂಪರ್ಕ ಅಗದಿದ್ದರೆ ವ್ಯಕ್ತಿಗತವಾಗಿ ಮಾನಸಿಕ ಒತ್ತಡ ರೂಪುಗೊಳ್ಳುತ್ತದೆ ಎಂದು ಹೇಳಿದರು.

    ಈಗಿನ ಜೀವನ ಶೈಲಿ ಮಾನಸಿಕ ಒತ್ತಡಕ್ಕೆ ಕಾರಣವಾಗಿದ್ದು, ಇದೊಂದು ದೊಡ್ಡ ಪಿಡುಗಾಗಿ ಪರಿವರ್ತನೆಯಾಗಿದೆ. ಮಾದಕ ದ್ರವ್ಯಗಳು ಇದಕ್ಕೆ ಬೆಂಬಲವಾಗಿ ನಿಂತಿದೆ. ಇದರಿಂದ ಹೊರಬರಲು ಏನು ಮಾಡಬೇಕೆಂಬ ಬಗ್ಗೆ ಅರಿವು ಮೂಡಿಸುವುದೇ ಈ ಜಾಥಾದ ಪ್ರಮುಖ ಉದ್ದೇಶ ಎಂದರು.

    ಒತ್ತಡದಿಂದ ಮುಕ್ತವಾಗಲು ಪೂರ್ವಿಕರ ಜ್ಞಾನ ಬಳಸಿಕೊಂಡು ಮಾನಸಿಕತೆಯಿಂದ ಹೊರಬರಬೇಕು. ಇದಕ್ಕಾಗಿ ಪರಿಪೂರ್ಣ ಪ್ರಯತ್ನ ಮಾಡಿದಾಗ ಮಾನಸಿಕತೆಯಿಂದ ಹೊರಬರಲು ಸಾಧ್ಯ ಎಂದು ಹೇಳಿದರು.

    ಆಸೆಗಳನ್ನು ತ್ಯಜಿಸುವುದೂ ಸಹ ಆಂತರಿಕ ನೆಮ್ಮದಿಗೆ ಪೂರಕವಾಗಿದೆ, ಪರಿಸರಕ್ಕೆ ಮತ್ತು ಸಮಾಜಕ್ಕೆ ಹಿತಕಾರಿ ಎಂದು ಶ್ರೀಗಳು ಹೇಳಿರುವುದನ್ನು ಸರ್ವರೂ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾದ ಅಗತ್ಯ ಇದೆ ಎಂದರು.

    ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಮಾತನಾಡಿ, ಮಾನಸಿಕ ಒತ್ತಡ ಇಂದು ದೇಹದ ಮೇಲೆ ದುಷ್ಟರಿಣಾಮ ಬೀರುತ್ತಿದೆ. ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿದ್ದಾಗ ಮಾತ್ರ ಆರೋಗ್ಯವಂತರನ್ನಾಗಿ ಕರೆಯುತ್ತೇವೆ ಎಂದು ಹೇಳಿದರು.

    ಮಾನಸಿಕ ಆರೋಗ್ಯದಿಂದ ವೇದನೆ ಅನುಭವಿಸುತ್ತಿರುವವರಿಗೆ ಕಾನೂನು ಸೇವಾ ಪ್ರಾಧಿಕಾರದಲ್ಲಿ ಉಚಿತವಾಗಿ ಅರಿವು ಮೂಡಿಸಿ ನೆರವು ನೀಡುವ ಬಹುದೊಡ್ಡ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

    ಮಾನಸಿಕತೆ ನಿಯಂತ್ರಣಕ್ಕಾಗಿ ಸಹಾಯವಾಣಿ ಸಂಖ್ಯೆ-೧೪೪೧೬ ಗೆ ಕರೆಮಾಡಿದರೆ ಮಾನಸಿಕತೆಯಿಂದ ಬಳಲುತ್ತಿರುವವರ ಬಗ್ಗೆ ಮಾಹಿತಿ, ಸೂಕ್ತ ಸಲಹೆ ನೀಡಲಿಕ್ಕೆ ಸಹಾಯವಾಗುತ್ತದೆ ಎಂದರು.

    ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ ಸಂಯುಕ್ತವಾಗಿ ಉಚಿತ ಆರೋಗ್ಯ ಆರೋಗ್ಯ ತಪಾಸಣೆ ಶಿಬಿರ ನಡೆಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

    ‘ಆಸೆಯೇ ದುಃಖಕ್ಕೆ ಮೂಲ’ ಎಂಬ ಬುದ್ದರ ಸಂದೇಶವನ್ನು ಎಲ್ಲರೂ ಪಾಲಿಸಿದಾಗ ಇಂತಹ ಮಾನಸಿಕ ವೇದನೆಯಿಂದ ಹೊರಬರಲು ಸಾಧ್ಯ. ಈ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

    ಭಾರತೀಯ ಮನೋವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ. ಸೋಮಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೊದಲಿಗೆ ಜಲಜಾಕ್ಷಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನ, ಡಾ. ನಾರಾಯಣ್ ಮುತಾಲಿಕ್, ಡಾ. ವೆಂಕಟೇಶ್, ಡಾ. ಲೋಕೇಶ್ ಬಾಬು, ಡಾ. ಕೃಷ್ಣೇಗೌಡ, ಡಾ. ಚಂದ್ರಶೇಖರ್, ಡಾ. ವೀಣಾ, ಡಾ. ಗೀತಾ ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

    Mental illness is having an impact on society

  • ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

    ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿ ಜನರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕೂಡಲೇ ಕ್ರಮ ಕೈಗೊಳ್ಳುವಂತೆೆಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದ್ದಾರೆ.

    ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, “ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಜನ ಜೀವ ಭಯದಲ್ಲಿಯೇ ಓಡಾಡುವಂತಾಗಿದೆ. ಸಣ್ಣ ಬೆಳೆಗಾರರು ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಕಾಡಾನೆಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು,” ಎಂದು ಸಭೆಯಲ್ಲಿ ಹಾಜರಿದ್ದ ಕೊಪ್ಪ ಡಿಎಫ್ ಓ ಶಿವಶಂಕರ್ ಅವರಿಗೆ ಸೂಚನೆ ನೀಡಿದರು.

    ಇದಕ್ಕೂ ಮುನ್ನ ಆನೆಗಳ ಹಾವಳಿ ಬಗ್ಗೆ ಪ್ರಸ್ತಾಪಿಸಿದ ಕ್ರೆಡಲ್ ಅಧ್ಯಕ್ಷೂ ಆಗಿರುವ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಶೃಂಗೇರಿ, ಬಾಳೆಹೊನ್ನೂರು ಭಾಗದಲ್ಲಿ ಐದು ಆನೆಗಳು ನಿರಂತರವಾಗಿ ಬೆಳೆ ನಾಶ ಮಾಡುತ್ತಿದ್ದವು. ಜತೆಗೆ ಈಗಾಗಲೇ ಕಾಡಾನೆ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ. ಪ್ರಸ್ತುತ ಎರಡು ಆನೆಗಳನ್ನು ಸೆರೆಹಿಡಿಯಲಾಗಿದ್ದು, ಇನ್ನೂ ಮೂರು ಆನೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಹೀಗಾಗಿ ಉಳಿದಿರುವ ಆನೆಗಳನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದರು.

    ಇದಕ್ಕೆ ದನಿಗೂಡಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಕಾಡಾನೆ ದಾಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರಾಣ ಹಾನಿ ಪ್ರಕರಣಗಳು ಹೆಚ್ಚಾಗಲಿವೆ ಎಂದರು‌.

    ಮೂಡಿಗೆರೆ ಶಾಸಕಿ ನಯನಾ ಮೊಟಮ್ಮ ಮಾತನಾಡಿ, ಭದ್ರ ಅಭಯಾರಣ್ಯ ವ್ಯಾಪ್ತಿಯ 200 ಹೆಕ್ಟರ್ ಪ್ರದೇಶದಲ್ಲಿ ಭದ್ರಾ ಸಾಫ್ಟ್ ರಿಲೀಸ್ ಕೇಂದ್ರ ಆರಂಭಿಸಿದಲ್ಲಿ ಪುಂಡಾಟ ನಡೆಸುವ ಆನೆಗಳನ್ನು ಅಲ್ಲಿಗೆ ಸ್ಥಳಾಂತರಿಸಬಹುದಾಗಿದೆ. ಶೃಂಗೇರಿ ಅಥವಾ ಮೂಡಿಗೆರೆ ಭಾಗದಲ್ಲಿ ಆನೆ ಕ್ಯಾಂಪ್ ಆರಂಭಿಸಿದಾಗ ಮಾತ್ರ ಸ್ಥಳೀಯವಾಗಿ ಪುಂಡಾಟ ನಡೆಸುವ ಆನೆಗಳನ್ನು ಶೀಘ್ರವೇ ಸೆರೆ ಹಿಡಿದು ಸಾಫ್ಟ್ ರಿಲೀಸ್ ಕೇಂದ್ರಕ್ಕೆ ಬಿಡಲು ಸಹಾಯಕವಾಗಲಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಸೂಚನೆ ನೀಡಬೇಕು ಎಂದು ಕೋರಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಭದ್ರಾ ಹುಲಿ ಯೋಜನೆಯ ನಿರ್ದೇಶಕ ಪುಲ್ಕೆತ್‌ ಮೀಣಾ , ಭದ್ರಾ ಹುಲಿ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆಗಳ ಸಾಫ್ಟ್ ರಿಲೀಸ್ ಕೇಂದ್ರ ಆರಂಭಕ್ಕೆ ಭೂಮಿ ನೀಡಲು ಕೇಂದ್ರ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದಾಗ, ಈ ಕುರಿತು ಕೇಂದ್ರ ಅರಣ್ಯ ಸಚಿವರೊಂದಿಗೆ ಮಾತನಾಡುವುದಾಗಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

    ಜಿಲ್ಲೆಯಲ್ಲಿ ಜಲಜೀವನ್‌ ಮಿಷನ್‌ ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳಲ್ಲಿ ಲೋಪವಾಗಿರುವ ಕುರಿತು ಸಭೆಯಲ್ಲಿ ಸಿ.ಟಿ.ರವಿ ಹಾಗೂ ಎಚ್.ಡಿ.ತಮ್ಮಯ್ಯ ಅವರು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್ ಅವರು, “ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಸಮಗ್ರ ವರದಿ ತರಿಸಿಕೊಳ್ಳಲಾಗುವುದು‌. ನೀರಿನ ಮೂಲ ಗುರುತಿಸುವ ಮುನ್ನ ಕಾಮಗಾರಿ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದರು.

    ಸಭೆಯಲ್ಲಿ ಅನುಪಾಲನಾ ವರದಿ ಕುರಿತಂತೆ ಚರ್ಚಿಸಲಾಯಿತು. ಜಲ ಜೀವನ್ ಮಿಷನ್, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಾಲೋಚನೆ ನಡೆಸಿ, ಸರ್ಕಾರದ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಚಿವ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಸಭೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಉಪಸ್ಥಿತರಿದ್ದರು.

    Zilla Panchayat Quarterly Progress Review Meeting

  • ಜಿಲ್ಲಾ ಬಿಜೆಪಿ ಸೇವಾ ಪ್ರಾಕ್ಷಿಕ ಅಭಿಯಾನ

    ಜಿಲ್ಲಾ ಬಿಜೆಪಿ ಸೇವಾ ಪ್ರಾಕ್ಷಿಕ ಅಭಿಯಾನ

    ಚಿಕ್ಕಮಗಳೂರು: ಜಿಲ್ಲಾ ಬಿಜೆಪಿಯ ಸೇವಾ ಪ್ರಾಕ್ಷಿಕ ಅಭಿಯಾನ ಮತ್ತು ಕಾರ್ಯಾಗಾರ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯ ಕಚೇರಿಯಲ್ಲಿ ಇಂದು ನಡೆಯಿತು.

    ಭಾರತ ಮಾತೆ ಫೋಟೋಗೆ ಪು?ರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಸಿ.ಟಿ.ರವಿ ಮಾತನಾಡಿ, ಸೇವೆ ಮಾಡುವ ಉದ್ದೇಶವೇ ಸೇವಾ ಪ್ರಾಕ್ಷಿಕ ಅಭಿಯಾನ. ವಿಶ್ವದ ನಾಲ್ಕನೇ ಶಕ್ತಿಯಾಗಿದ್ದೇವೆ. ಪರಾವಲಂಬಿಯಾಗಿಸುವ ಮೂಲಕ ದೇಶಕ್ಕೆ ಪೆಟ್ಟು ಕೊಡುವ ಯತ್ನ ನಡೆಯುತ್ತಿದೆ. ಅದನ್ನು ಜಾಗೃತಿಯಿಂದ ಎದುರಿಸಬೇಕು ಎಂದರು.

    ಸ್ವದೇಶಿ ವಸ್ತುಗಳಿಗೆ ಒತ್ತು, ಸ್ವಚ್ಛತಾ ಆಂದೋಲನದಲ್ಲಿ ಸಮಾಜವನ್ನು ತೊಡಗಿಸಬೇಕು. ನರೇಂದ್ರ ಮೋದಿಯವರ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ತಿಳಿಸಿದರು.

    ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬ್ರಹ್ಮಾಂಡ ಸಾಲವನ್ನು ರಾಜ್ಯ ಸರ್ಕಾರ ಮಾಡಿರುವುದನ್ನು ಜನರಿಗೆ ತಿಳಿಸಬೇಕು. ಕೇಂದ್ರ ಸರ್ಕಾರದ ತೆರಿಗೆ ಕಡಿತದಿಂದಾಗಿರುವ ಲಾಭಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳು ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಕಾರ್ಯಕ್ರಮಗಳು, ನೀತಿಗಳನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸಗಳನ್ನು ಪಕ್ಷದ ಪ್ರತಿಯೊಬ್ಬರೂ ಮಾಡಬೇಕು ಎಂದು ತಿಳಿಸಿದರು.

    ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಬೆಳವಾಡಿ, ಪುಣ್ಯಪಾಲ್, ಬಿಜೆಪಿ ರಾಜ್ಯ ಒಬಿಸಿ ಕಾರ್ಯದರ್ಶಿ ಬಿ. ರಾಜಪ್ಪ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ ಕೋಟಿಯಾನ್, ಮುಖಂಡ ವೆನಿಲ್ಲಾ ಭಾಸ್ಕರ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಗುಳುವಳ್ಳಿ ದಿನೇಶ್, ರಾಜೇಶ್ವರಿ ಉಪಸ್ಥಿತರಿದ್ದರು.

    District BJP Service Fortnightly Campaign

  • ವನ ಸಂಪತ್ತು ಇದ್ದರೆ ಮಾತ್ರ ಮನುಷ್ಯ-ಜೀವ ಸಂಕುಲಗಳು ಉಳಿಯಲು ಸಾಧ್ಯ

    ವನ ಸಂಪತ್ತು ಇದ್ದರೆ ಮಾತ್ರ ಮನುಷ್ಯ-ಜೀವ ಸಂಕುಲಗಳು ಉಳಿಯಲು ಸಾಧ್ಯ

    ಚಿಕ್ಕಮಗಳೂರು: ವನ ಸಂಪತ್ತು ಇದ್ದರೆ ಮಾತ್ರ ಮನುಷ್ಯರು ಹಾಗೂ ಇತರೆ ಜೀವ ಸಂಕುಲಗಳು ಉಳಿಯಲು ಸಾಧ್ಯ ಅರಣ್ಯ ರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಎಲ್ಲರೂ ಕಾನೂನು ಪಾಲಕರಾದರೆ ಯಾವುದೆ ಸಮಸ್ಯೆ ಎದುರಾಗುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ವಿ.ಹನುಮಂತಪ್ಪ ಹೇಳಿದರು.

    ಅವರು ಶ್ರೀನಿವಾಸ ನಗರದಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಅರಣ್ಯ ಹುತಾತ್ಮ ದಿನಾಚರಣೆಯಲ್ಲಿ ದಿ.ಪಿ.ಶ್ರೀನಿವಾಸ್ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ ಮಾತನಾಡಿ ಮಾನವನ ದುರಾಸೆಯಿಂದ ವನ ಮತ್ತು ವನ್ಯಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಸಂಬಂದ ಅರಣ್ಯ ಸಂಪತ್ತನ್ನು ನಾಶ ಮಾಡುತ್ತಿರುವುದರಿಂದ ಕಾಡಿನಲ್ಲಿರಬೇಕಾದ ಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕುತ್ತಿವೆ. ಅವುಗಳ ಆವಾಸ ಸ್ಥಾನವನ್ನು ಮನುಷ್ಯರು ಆಕ್ರಮಿಸುತ್ತಿರುವ ಸಲುವಾಗಿ ದಿಕ್ಕುತೋಚನೆ ನಗರಪ್ರದೇಶದತ್ತ ದಾವಿಸುತ್ತಿದೆ. .

    ಪ್ರಾಣಿ, ಪಕ್ಷಿಗಳು ಸೇರಿದಂತೆ ಇರುವೆಯಿಂದ ಆನೆಯವರೆಗೂ ಎಲ್ಲವೂ ವಾಸಿಸುವ ಸ್ಥಳ ಅರಣ್ಯ ಪ್ರದೇಶಗಳು, ಅವುಗಳು ಉಳಿದರೆ ಮಾತ್ರವೇ ನಾವುಗಳು ಉಳಿಯಲು ಸಾಧ್ಯ. ನಮ್ಮ ರಾಜ್ಯದ ಓರ್ವ ದಕ್ಷ, ನಿಷ್ಠಾವಂತ ಪ್ರಾಮಾಣಿಕ ಅರಣ್ಯಾಧಿಕಾರಿ ಪಿ.ಶ್ರೀನಿವಾಸ್ ರವರು ಕಾಡುಗಳ್ಳ ವೀರಪ್ಪನ್‌ನ ಕುತಂತ್ರಕ್ಕೆ ಬಲಿಯಾಗಿ ಹುತಾತ್ಮ ರಾಗಿದ್ದಾರೆ ಇಂತಹವರು ಸಾಕಷ್ಟು ಮಂದಿ ಇದ್ದಾರೆ. ಅರಣ್ಯ ಉಳಿವಿಗಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದವರ ನೆನಪಿಗಾಗಿ ಹುತಾತ್ಮರ ದಿನಾಚರಣೆ ಮಾಡಲಾಗುತ್ತಿದೆ. ಇವರೆಲ್ಲಾ ಇಡೀ ಜೀವ ಸಂಕುಲ ಉಳಿವಿಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡಿದರವರು ಎಂದರು.

    ಹುತಾತ್ಮ ದಿನಾಚರಣೆ ಎಂದರೆ ಮನಸ್ಸಿನಲ್ಲಿ ಒಂದುರೀತಿ ವೇದನೆ ಮತ್ತು ಭಾರ ಕಾರಣ ಲಕ್ಷಾಂತರ ಮಂದಿ ದೇಶವನ್ನು ಸಂರಕ್ಷಣೆ ಮಾಡಬೇಕೆಂಬ ದೃಷ್ಟಿಯಿಂದ ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಗಡಿಭಾಗದಲ್ಲಿ ನಿಂತು ಪ್ರಾಣಾರ್ಪಣೆ ಮಾಡುವ ಸೈನಿಕರು ಒಂದೆಡೆ ಇದ್ದಾರೆ. ದೇಶದ ಒಳಗಡೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕೆಂಬ ದೃಷ್ಟಿಯಿಂದ ನಮ್ಮನ್ನು ಸಂರಕ್ಷಣೆ ಮಾಡುವ ಪೊಲೀಸ್ ವ್ಯವಸ್ಥೆ ಮತ್ತೊಂಡೆ ಕರ್ತವ್ಯ ನಿರ್ವಹಿಸುತ್ತಿದೆ ಇವುಗಳನ್ನು ಹೊರತು ಪಡಿಸಿ ದೇಶದಲ್ಲಿ ಮನುಷ್ಯನನ್ನು ಒಳಗೊಂಡಂತೆ ಎಲ್ಲಾ ಜೀವ ಸಂಕುಲಗಳನ್ನು ವಿಶ್ವಾಸ ಮತ್ತು ಶಾಂತಿಯಿಂದ ತಮ್ಮ ಬದುಕನ್ನು ನಡೆಸಿಕೊಂಡಿರಬೇಕೆಂಬ ತ್ಯಾಗ, ಬಲಿದಾನವನ್ನು ಮಾಡುವಂತವರು ಕೇವಲ ಅರಣ್ಯ ಇಲಾಖೆ ಯವರು ಮಾತ್ರ ಎಂದರು.

    ಅರಣ್ಯ ಸಂರಕ್ಷಣಾಧಿಕಾರಿ ಯಶ್‌ಪಾಲ್ ಕ್ಷೀರ್‌ಸಾಗರ್ ಮಾತನಾಡಿ, ರಾಜ್ಯದಲ್ಲಿರುವ ೨೪ ಇಲಾಖೆಗಳಲ್ಲಿ ೨೩ ಇಲಾಖೆಗಳು ಈ ಪೀಳಿಗೆಗೆ ಕೆಲಸ ಮಾಡುತ್ತಿದೆ ಆದರೆ ಮುಂದಿನ ಪೀಳಿಗೆಗೆ ಕಾರ್ಯ ನಿರ್ವಹಿಸುತ್ತಿರುವುದು ನಮ್ಮ ಅರಣ್ಯ ಇಲಾಖೆ ಮಾತ್ರ ಎಂಬುದು ಹೆಮ್ಮೆ . ಅರಣ್ಯ ಉಳಿವಿಗಾಗಿ ಹಗಲು ರಾತ್ರಿ ಎನ್ನದೆ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಬಲಿದಾನವಾದವರ ನೆನಪಿಗಾಗಿ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದ್ದು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ ಹುತಾತ್ಮರ ಸಂಖ್ಯೆ ಮುಂದೆ ಹೆಚ್ಚದಂತಾಗಲಿ ಎಂದರು.

    ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಾಗಿರುವ ಬಗ್ಗೆ ದೇಶಕ್ಕೆ ತಿಳಿದಿದೆ, ಉತ್ತರಾಖಂಡ್, ಜಮ್ಮುವಿನ ಗುಡ್ಡಗಾಡು ಪ್ರದೇಶದಲ್ಲಾದ ಪ್ರವಾಹಗಳಾಗಳು, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಾದ ಭೂ ಕುಸಿತಕ್ಕೆ ಪರಿಸರದ ಮೇಲಾಗುತ್ತಿರುವ ಹಾನಿಯೇ ಕಾರಣ. ಆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಜನರಲ್ಲಿ ಬಹಳಷ್ಟು ಅರಿವು ಮೂಡಿಸಿದ್ದಾರೆ. ಪರಿಸರ ಉಳಿವಿಗಾಗಿ ಬೀಷ್ಣೋಯಿ ಸಮಾಜದವರು ಹೋರಾಟ ಮಾಡಿ ಬಹಳಷ್ಟು ಮಂದಿ ಪ್ರಾಣತ್ಯಾಗಮಾಡಿದ್ದಾರೆ ಅವರ ಕೊಡುಗೆ ದೊಡ್ಡದಿದೆ ಎಂದರು.

    ಕರ್ತವ್ಯದಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥ ಪುಷ್ಪಗುಚ್ಚ ಸಮರ್ಪಿಸಲಾಯಿತು. ಉಪ ವಲಯಾರಣ್ಯಾಧಿಕಾರಿ ಎಂ.ಪಿ.ಸಂತೋಷ್‌ಕುಮಾರ್ ನೇತೃತ್ವದಲ್ಲಿ ಫರೇಡ್ ನಡೆಸಿ ಪೊಲೀಸ್ ತಂಡದವರಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಡಿಸಿಎಫ್ ರಮೇಶ್ ಬಾಬು ಹುತಾತ್ಮರ ಹೆಸರುಗಳನ್ನು ಸ್ಮರಿಸಿದರು.

    ಭದ್ರಾ ಹುಲಿ ಯೋಜನೆ ಕ್ಷೇತ್ರ ನಿರ್ಧೇಶಕ ಪುಲ್ಕಿತ್ ಮೀಣಾ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಸಿ.ಆನಂದ್, ಎನ್.ರಮೇಶ್ ಬಾಬು, ಕೆ.ಟಿ.ಬೋರಯ್ಯ , ಆಕರ್ಷ್, ಕೆ.ಎಸ್.ಮೋಹನ್, ವಲಯಾರಣ್ಯಾಧಿಕಾರಿ ಎನ್,ವಿ.ತನೂಜ್ ಕುಮಾರ್ ಇದ್ದರು. ರಾಕೇಶ್ ನಿರೂಪಿಸಿದರು.

    Human and animal species can survive only if there is forest wealth.

  • ವಿಧಾನ ಪರಿಷತ್ತಿಗೆ ನೂತನ ಸದಸ್ಯೆಯಾಗಿ ಡಾ. ಆರತಿ ಕೃಷ್ಣ ಪಮಾಣ ವಚನ

    ವಿಧಾನ ಪರಿಷತ್ತಿಗೆ ನೂತನ ಸದಸ್ಯೆಯಾಗಿ ಡಾ. ಆರತಿ ಕೃಷ್ಣ ಪಮಾಣ ವಚನ

    ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು.

    ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

    ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌. ಭೋಸರಾಜು, ವಸತಿ ಸಚಿವ ಜಮೀರ್ ಅಹಮದ್ ಖಾನ್, ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

    Dr. Aarti Krishna sworn in as new member of Legislative Council

  • ರಾಜ್ಯದಲ್ಲಿ ಅನರ್ಹ 3.65 ಲಕ್ಷ ಕಾರ್ಡ್‌ ರದ್ದು

    ರಾಜ್ಯದಲ್ಲಿ ಅನರ್ಹ 3.65 ಲಕ್ಷ ಕಾರ್ಡ್‌ ರದ್ದು

    ಬೆಂಗಳೂರು:  ರಾಜ್ಯದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್‌ ಪಡಿತರ ಕಾರ್ಡ್‌ಗಳ ಪೈಕಿ 3.65 ಲಕ್ಷ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

    ಅವರು ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮತನಾಡಿ  ಇನ್ನೂ ಸಾಕಷ್ಟು ಮಂದಿ ಅನರ್ಹರು ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದು, ಅವುಗಳನ್ನೂ ರದ್ದುಪಡಿಸಿ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ‘ಈ ಕಾರ್ಯಾ ಚರಣೆಯಲ್ಲಿ ಅರ್ಹರಿಗೆ ಯಾವುದೇ ತೊಂದರೆ ಆಗಬಾರದು. ಒಬ್ಬ ಅರ್ಹ ವ್ಯಕ್ತಿಯ ಬಿಪಿಎಲ್‌ ಕಾರ್ಡ್‌ ಸಹ ರದ್ದಾಗಬಾರದು. ಅರ್ಹರಿಗೆ ಈವರೆಗೆ ಬಿಪಿಎಲ್‌ ಕಾರ್ಡ್‌ ನೀಡಿಲ್ಲದೇ ಇದ್ದರೆ, ವಿತರಿಸಲು ತಕ್ಷಣವೇ ಕ್ರಮ ತೆಗೆದುಕೊಳ್ಳ ಬೇಕು’ ಎಂದು ತಾಕೀತು ಮಾಡಿದರು.

    ‘ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಸೂಚಿಸಿದರು.

    ‘ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿಯ ಜತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ ಒದಗಿಸುವ ಬಗ್ಗೆ ಪ್ರಸ್ತಾವ ಸಲ್ಲಿಸಿ’ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

    ‘ಕನಿಷ್ಠ ಬೆಂಬಲ ಬೆಲೆ ಕಾರ್ಯಕ್ರಮದ ಅಡಿಯಲ್ಲಿ, ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಮತ್ತು ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರ ಧಾನ್ಯಗಳನ್ನು ಖರೀದಿಸಬೇಕು’ ಎಂದಿದ್ದಾರೆ.

    3.65 lakh ineligible cards cancelled in the state