ಚಿಕ್ಕಮಗಳೂರು: ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಆತಂಕ ನಿವಾರಣೆ, ಏಕಾಗ್ರತೆ ಸಾಧಿಸುವುದು, ಮಾನಸಿಕ ಒತ್ತಡ ನಿವಾರಣೆಗಳ ಬಗ್ಗೆ ಸಂವಾದ ಪ್ರೇರಣಾ ಕಾರ್ಯಕ್ರಮಗಳನ್ನು ಶೈಕ್ಷಣಿಕ ವರ್ಷದಲ್ಲಿ ತಜ್ಞರಿಂದ ಏರ್ಪಡಿಸುವ ಬಗ್ಗೆ ನವೆಂಬರ್ ೧೪ ರಂದು ಪೋಷಕ-ಶಿಕ್ಷಕರ ಮಹಾಸಭೆಯಲ್ಲಿ ಪೋಷಕರಿಗೆ ತಿಳಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ತಿಳಿಸಿದರು.
ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರನ್ನು ತಲುಪಲು ನವೆಂಬರ್ ೧೪ ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ರಾಜ್ಯಾದ್ಯಂತ ಏಕಕಾಲದಲ್ಲಿ ೨೦೨೫-೨೬ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಆಯೋಜಿಸಲು ಸರ್ಕಾರ ಉದ್ದೇಶಿಸಿರುವ ಬಗ್ಗೆ ಜಿ.ಪಂ. ಮಿನಿ ವಿಧಾನ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಭೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಮಾತುಗಳನ್ನು ಹೇಳಲಾಗುವುದು ಎಂದರು.
ಮಕ್ಕಳ ಕಲಿಕಾ ಪ್ರಗತಿ ಹಾಜರಾತಿ ಮಾಹಿತಿ ಹಂಚಿಕೆ, ಪೋ?ಕರೊಂದಿಗೆ ಮಕ್ಕಳ ಪ್ರಗತಿ ಪತ್ರ ವಿತರಣೆ ಮತ್ತು ಪ್ರಗತಿಯ ಬಗ್ಗೆ ಚರ್ಚಿಸಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷಾ ಸಿದ್ಧತೆಗೆ ಅನುಕೂಲಿಸಲು ಅಧ್ಯಾಯವಾರು, ವಿ?ಯವಾರು ನೀಲ ನಕ್ಷೆ, ಪ್ರಶ್ನೆ ಕೋಠಿ, ಮಾದರಿ ಪ್ರಶ್ನೆಪತ್ರಿಕೆಗಳು, ಮೌಲ್ಯಮಾಪನ ವಿಧಾನ, ನಡೆಸಲಾಗುತ್ತಿರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ೨ ಅಂತಿಮ ಪರೀಕ್ಷೆಗಳನ್ನು ನಡೆಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ತಿಳಿಸಲಾಗುತ್ತದೆ. ಬಾಲ್ಯ ವಿವಾಹ ನಿ?ಧ ಮತ್ತು ಕಾರ್ಮಿಕ ನಿ?ಧ ನೀತಿಗಳ ಬಗ್ಗೆ, ಮಾಹಿತಿ ಮತ್ತು ವಿಶೇ?ಚೇತನ ಮಕ್ಕಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಕಲಿಕೆ ಉತ್ತಮಪಡಿಸಲು ಕಲಿಕಾ ಉಪಕ್ರಮಗಳು, ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಪ್ರೋತ್ಸಾಹದಾಯಕ ಯೋಜನೆಗಳು, ಶಾಲಾ-ಕಾಲೇಜುಗಳಲ್ಲಿ ಲಭ್ಯಗೊಳಿಸಿರುವ ಭೌತಿಕ ಸೌಕರ್ಯಗಳು ಮತ್ತು ಶೈಕ್ಷಣಿಕ ಸೌಲಭ್ಯಗಳ ಬಗ್ಗೆ ಪೋ?ಕರಿಗೆ ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳ ಆರೋಗ್ಯ ಪೋ?ಣೆ ಮತ್ತು ಕಲಿಕಾ ಪ್ರಗತಿಯಲ್ಲಿ ಪೋ?ಕರ ಜವಾಬ್ದಾರಿ ಮತ್ತು ಭಾಗವಹಿಸುವಿಕೆಯ ಬಗ್ಗೆ ಅರಿವು ಮೂಡಿಸಲಾಗುವುದು.
ವಿದ್ಯಾರ್ಥಿಗಳ ಹಾಜರಾತಿ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪೋ?ಕರೊಂದಿಗೆ ಹಂಚಿಕೊಳ್ಳುವುದು. ಪೋ?ಕರು, ಶಿಕ್ಷಕರು ಮತ್ತು ಸ್ಥಳೀಯ ಆಡಳಿತದ ಸಹಯೋಗದಿಂದ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ, ಶಾಲೆಯ ಅವಶ್ಯಕತೆಗಳು, ಸವಾಲುಗಳು ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಪೋ?ಕರ ನಿರೀಕ್ಷೆ, ಸಹಕಾರ ಮತ್ತು ಸಲಹೆಗಳನ್ನು ಸಂಗ್ರಹಿಸುವುದು, ಕೆ.ಪಿ.ಎಸ್. ಪಿ.ಎಂ.ಶ್ರೀ ಹಾಗೂ ಆಯ್ಕೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಿರುವ ದ್ವಿಭಾ? ಮಾಧ್ಯಮ ತರಗತಿಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳ ಬಗ್ಗೆ ಪೋ?ಕರಲ್ಲಿ ಅರಿವು ಮೂಡಿಸುವುದು. ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಶಾಲಾ-ಕಾಲೇಜುಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಿ ಹೆಚ್ಚುವರಿ ಅನುದಾನ ನೀಡಿ ಅಭಿವೃದ್ಧಿಪಡಿಸುತ್ತಿರುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಇಲಾಖೆಯು ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್ ಜಿ ಫೌಂಡೇ?ನ್ ಸಹಯೋಗದೊಂದಿಗೆ ವಾರಕ್ಕೆ ೬ ದಿನಗಳು ಮೊಟ್ಟೆ, ಬಾಳೆಹಣ್ಣು ಮತ್ತು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ವಾರಕ್ಕೆ ೫ ದಿನಗಳು ಸಾಯಿ ಶ್ಯೂರ್ ರಾಗಿ ಹೆಲ್ತ್‌ಮಿಕ್ಸ್ ಪುಡಿಯನ್ನು ಹಾಲಿನೊಂದಿಗೆ ಮಿಶ್ರ ಮಾಡಿ ನೀಡುತ್ತಿರುವ ಬಗ್ಗೆ ಪೋ?ಕರಿಗೆ ಮಾಹಿತಿ ನೀಡಲಾಗುವುದು.
ಮಕ್ಕಳ ಹಕ್ಕುಗಳು, ಆರ್.ಟಿ.ಇ. ಕಾಯ್ದೆ, ವಿಶೇ? ಅಗತ್ಯತೆಯುಳ್ಳ ಮಕ್ಕಳ ಶಿಕ್ಷಣ, ಮಕ್ಕಳ ರಕ್ಷಣಾ ನೀತಿ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಪೋ?ಕರಲ್ಲಿ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಆಡಳಿತ) ತಿಮ್ಮರಾಜು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಅಭಿವೃದ್ಧಿ) ಸುಂದ್ರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳಾ ಸುದ್ದಿಗೋಷ್ಠಿಯಲ್ಲಿದ್ದರು.
Discussion on overcoming exam fear and anxiety for students









