Category: ಚಿಕ್ಕಮಗಳೂರು ನಗರ

  • ಜನತೆಗೆ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ

    ಜನತೆಗೆ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ

    ಚಿಕ್ಕಮಗಳೂರು: ಕಳೆದ ೧೦ ತಿಂಗಳ ಅವಧಿಯಲ್ಲಿ ಚಿಕ್ಕಮಗಳೂರು ಜನತೆಗೆ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ ಎಂದು ನಗರಸಭೆ ಅಧ್ಯಕ್ಷೆ ಸುಜಾತಶಿವಕುಮಾರ್ ತಿಳಿಸಿದರು.

    ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆ, ಇಂದು ನಗರಸಭೆಯಿಂದ ನೀಡಿದ ಬೀಳ್ಕೊಡುಗೆ ಸ್ವೀಕರಿಸಿ ಅವರು ಮಾತನಾಡಿದರು.

    ಅಧ್ಯಕ್ಷೆಯಾಗಿ ನನ್ನ ಕರ್ತವ್ಯವನ್ನು ನಾನು ನಿರ್ವಹಣೆ ಮಾಡಿದ್ದೇನೆ. ಆ ಕೆಲಸ ನನಗೆ ತೃಪ್ತಿತಂದಿದೆ. ನನ್ನಂತೆಯೇ ಸಮಾಜಕ್ಕೆ ಸೇವೆ ಸಲ್ಲಿಸುವವರು ಇನ್ನೂ ಅನೇಕರಿದ್ದಾರೆ. ಹೀಗಾಗಿ ಬೇರೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ನನ್ನ ಸ್ಥಾನ ತೆರವು ಮಾಡಿಕೊಡುತ್ತಿದ್ದೇನೆ ಎಂದರು.

    ೧೦ ತಿಂಗಳ ಕಾಲ ಎಲ್ಲರೂ ಒಂದು ಕುಟುಂಬದವರಂತೆ ಇದ್ದೆವು. ನನ್ನ ಅವಧಿಯಲ್ಲಿ ೫.೫೦ ಕೋಟಿ ರೂ ಬಜೆಟ್ ಮಂಡಿಸಿದ್ದೆವು. ಅನೇಕ ಕೆಲಸಗಳು ಚಾಲ್ತಿಯಲ್ಲಿವೆ. ಈಗ ಸರಕಾರದ ೧೦ ಕೋಟಿ ರೂ.ಅನುದಾನ ಬಂದಿದೆ, ಮಳೆಯಿಂದ ಕೆಲಸ ಮಾಡಲು ಆಗುತ್ತಿಲ್ಲ. ೧೫ನೇ ಹಣಕಾಸು, ನಗರಸಭೆ ಅನುದಾನದಿಂದ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಮುಂದೆ ಬಂದವರು ಅದನ್ನು ಕಾರ್ಯನಿರ್ವಹಣೆ ಮಾಡಲಿದ್ದಾರೆ ಎಂದು ಹೇಳಿದರು.

    ಕನ್ನಡ ಭವನವನ್ನು ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಲೈಬ್ರರಿಗೆ ಬಿಟ್ಟುಕೊಡಬೇಕು ಎಂದು ಮನವಿ ಮಾಡುತ್ತೇನೆ. ಮುಂದೆಯೂ ನನ್ನ ವಾರ್ಡಿನ ಜನತೆಗೆ ನ್ಯಾಯ ಒದಗಿಸುತ್ತೇನೆ. ನಗರಸಭೆ ಎಲ್ಲ ಅಧಿಕಾರಿ, ಸಿಬ್ಬಂದಿ ಒಟ್ಟಾಗಿ ಕಾರ್ಯನಿರ್ವಹಣೆ ಮಾಡಿದ್ದರಿಂದ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

    ರೇವಣಸಿದ್ದೇಶ್ವರ ಮಹಸಭಾದ ಜಿಲ್ಲಾಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ್ದು ಅಲ್ಲೂ ಒಂದು ಸೇವೆ ಮಾಡಲು ನನಗೆ ಅವಕಾಶ ದೊರೆತಿದೆ ಎಂದರು.
    ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜು ಮಾತನಾಡಿ, ಅಧ್ಯಕ್ಷರು ಅಲ್ಪ ಅವಧಿಯಲ್ಲೇ ಉತ್ತಮವಾದ ಸೇವೆ ಸಲ್ಲಿಸಿದ್ದಾರೆ. ಇವರು ಅಧ್ಯಕ್ಷರಾದ ನಂತರ ಪಾರ್ಕ್ ಉದ್ಘಾಟನೆ, ಡಿಜಿಟಲ್, ಓಪನ್‌ಏರ್ ಥೀಯೇಟರ್, ಐಡಿಎಸ್‌ಜಿ ಕಾಲೇಜ್ ಆವರಣದಲ್ಲಿ ೨ ಶೌಚಾಲಯ ಮತ್ತಿತರೆ ಅನೇಕ ಕಾಮಗಾರಿಗಳು ಉದ್ಘಾಟನೆ ನೆರವೇರಿವೆ ಎಂದು ಹೇಳಿದರು.

    ಅಧ್ಯಕ್ಷೆ ಸುಜಾತ ಶಿವಕುಮಾರ್ ಅವಧಿಯಲ್ಲಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ತಾಪನೆ ನೆರವೇರಿಸಿದ್ದೇವೆ. ಇದಲ್ಲದೆ ನಗರಸಭೆಯ ೮-೬೦ ಕೋಟಿ ಅನುದಾನದಲ್ಲಿ ರಸ್ತೆ, ಚರಂಡಿ ಮತ್ತಿತರೆ ಕಾಮಗಾರಿ ನಡೆಸಲಾಗಿದೆ. ಇದ್ದಷ್ಟು ಕಾಲ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಮಾರ್ಗದರ್ಶನ ಮುಂದೆಯೂ ಇರಲಿ ಎಂದು ಹೇಳಿದರು.

    ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ, ನಗರಸಭೆ ಸದಸ್ಯರು, ಅಧಿಕಾರಿಗಳಾದ, ವ್ಯವಸ್ಥಾಪಕ ರವಿ, ಲತಾಮಣಿ, ಚಂದ್ರಶೇಖರ್, ಆರೋಗ್ಯ ನಿರೀಕ್ಷಕರಾದ ವೆಂಕಟೇಶ್, ಕಮಲಮ್ಮ, ಮಿಥುನ, ಸಿಬ್ಬಂದಿಗಳು ಉಪಸ್ಥಿತರಿದ್ದರು.

    The service rendered to the people has brought satisfaction.

  • ಭಾರತದಲ್ಲಿ ಹುಟ್ಟಿದ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸ

    ಭಾರತದಲ್ಲಿ ಹುಟ್ಟಿದ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸ

    ಚಿಕ್ಕಮಗಳೂರು: ನಮ್ಮ ದೇಶದ ಸಂಸ್ಕೃತಿಯನ್ನು ಬಿಟ್ಟು ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿಗಳತ್ತ ವಾಲುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಶಾಲಾ ಮುಖ್ಯ ಶಿಕ್ಷಕ ಯೋಗೀಶ್ ಎಂದರು

    ಅವರು ಮಾಡೆಲ್ ಆಂಗ್ಲ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ಭಾರತದಲ್ಲಿ ಹುಟ್ಟಿದ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸವಿದ್ದು, ಶರೀರ ಮತ್ತು ಮನಸ್ಸು ಎರಡನ್ನೂ ಒಂದೆಡೆ ಕೇಂದ್ರೀಕರಿಸುವುದು ಯೋಗದ ಮಹತ್ವವಾಗಿದೆ ಎಂದರು.

    ಯೋಗದ ಮಹತ್ವವನ್ನು ಅರಿತು ಪ್ರತಿಯೊಬ್ಬರು ಯೋಗವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಾಗಿ ಇರಬೇಕೆಂದು ತಿಳಿಸಿದರು.
    ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಟಿ. ಎಸ್. ನಿರಂಜನ್ ಮಾತನಾಡಿ ಜೂನ್ ೨೧ ಸುಧೀರ್ಘ ಹಗಲಿನ ದಿನವಾಗಿದ್ದು ಹಗಲಿನ ಸದುಪಯೋಗ ಪಡೆಯುವುದಕ್ಕಾಗಿ ಈ ಯೋಗ ದಿನಾಚರಣೆಯನ್ನು ಇಂದು ಆಚರಿಸುತ್ತಿರುವುದಾಗಿ ತಿಳಿಸಿದರು.

    ಪತಂಜಲಿ ಮಹರ್ಷಿ ಅವರು ಯೋಗಾಸನದ ಪಿತಾಮಹರಾಗಿದ್ದಾರೆ. ಪ್ರತಿದಿನ ಯೋಗ ಅಭ್ಯಾಸ ಮಾಡುವುದರಿಂದ ದೈಹಿಕ ಶಕ್ತಿ ಹೆಚ್ಚುತ್ತದೆ, ಮನಸ್ಸಿನ ಚಲತೆ ಕಡಿಮೆಯಾಗಿ ಏಕಾಗ್ರತೆ ಉಂಟಾಗುತ್ತದೆ ಮತ್ತು ಮನಸ್ಸು ಶಾಂತವಾಗುತ್ತದೆ ಎಂದು ತಿಳಿದರು.

    ಪ್ರತಿಯೊಬ್ಬರು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಮಕ್ಕಳಿಗೆ ಕರೆ ಕೊಟ್ಟರು. ಪ್ರಾಣಾಯಾಮ, ಭುಜಂಗಾಸನ, ಹಸ್ತ ಪಾದಾಸನ, ಶವಾಸನ,ಚಕ್ರಾಸನ, ಉತ್ತಾನಾಸನ, ಸುಖಾಸನ ಮುಂತಾದ ಆಸನಗಳನ್ನು ಅಭ್ಯಾಸ ಮಾಡಿಸಿದರು . ಶಿಕ್ಷಕರು ಮತ್ತು ಮಕ್ಕಳು ಯೋಗ ತಾಲೀಮಿನಲ್ಲಿ ಪಾಲ್ಗೊಂಡರು.

    ‘ಹಸಿರು ಮಿತ್ರ’ ಎಂದೇ ಹೆಸರು ಪಡೆದಿರುವ ಮಾಡೆಲ್ ಶಾಲೆಯ ಹಚ್ಚ- ಹಸಿರಿನ ಆವರಣದಲ್ಲಿ ಶ್ವೇತವರ್ಣ ವಸ್ತ್ರಧಾರಿಗಳಾಗಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಯೋಗ ಮಾಡಿದರು, ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿರಂಜನ್ ಸ್ವಾಗತಿಸಿ, ಯೋಗೀಶ್ ವಂದಿಸಿದರು.

    Yoga which originated in India has a six thousand year history.

  • ಹಿರೇಮಗಳೂರಿನಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಅದ್ಧೂರಿ ಹುಟ್ಟುಹಬ್ಬ ಆಚರಣೆ

    ಹಿರೇಮಗಳೂರಿನಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಅದ್ಧೂರಿ ಹುಟ್ಟುಹಬ್ಬ ಆಚರಣೆ

    ಚಿಕ್ಕಮಗಳೂರು: ಬಡವರ ಬಂಧು ದೀನ ದಲಿತರ ಆಶಾಕಿರಣ, ಜನಪ್ರಿಯ ಶಾಸಕ ಹೆಚ್.ಡಿ. ತಮ್ಮಯ್ಯ ಅವರ ೫೬ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ಅವರ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಶಾಸಕರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿ ಸಿಹಿ ತಿನಿಸಿ ಸಂಭ್ರಮಿಸಿದರು.

    ಇಂದು ಬೆಳಗ್ಗೆ ನೂರಾರು ಸಂಖ್ಯೆಯಲ್ಲಿ ಸೇರಿದ ಶಾಸಕರ ಅಭಿಮಾನಿಗಳು ಶಾಸಕ ತಮ್ಮಯ್ಯ ಅವರ ಹುಟ್ಟೂರಾದ ಹಿರೇಮಗಳೂರಿನಲ್ಲಿ ಪಟಾಕಿ ಸಿಡಿಸಿ ಮೆರವಣಿಗೆ ಮೂಲಕ ಬೃಹತ್ ಹಾರವನ್ನು ಜೆಸಿಬಿ ಮೂಲಕ ಹಾಕಿ ಶುಭಾಶಯ ಕೋರಿದರು.

    ಇದರ ಅಂಗವಾಗಿ ಹಿರೇಮಗಳೂರಿನ ಕೋದಂಡರಾಮ ಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಿದ್ದ ಗ್ರಾಮಸ್ಥರು ಶಾಸಕರಿಗೆ ಮುಂದೆ ಇನ್ನಷ್ಟು ಭವಿಷ್ಯ ಉಜ್ವಲಗೊಳ್ಳುವ ಜೊತೆಗೆ ಆಯುರ್ ಆರೋಗ್ಯ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದರು.

    ಪತ್ನಿ ಮಂಗಳ ಅವರ ಜೊತೆ ಆಗಮಿಸಿದ ಶಾಸಕ ಹೆಚ್.ಡಿ. ತಮ್ಮಯ್ಯ ಅವರನ್ನು ಹಿರೇಮಗಳೂರು ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭ ಸ್ವಾಗತದೊಂದಿಗೆ ಭರಮಾಡಿಕೊಂಡರು. ಶಾಲಾ ಮಕ್ಕಳು ಆರತಿ ಮಾಡುವ ಮೂಲಕ ಹುಟ್ಟುಹಬ್ಬಕ್ಕೆ ಕಳೆಗಟ್ಟಿಸಿದರು.

    ರಾಜ್ಯಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿರುವ ಈ ಸಂದರ್ಭದಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವುದರ ಜೊತೆಗೆ ಸರ್ಕಾರದ ಜನಪರ ಸೌಲಭ್ಯಗಳನ್ನು ಬಡವರು, ಕೂಲಿಕಾರ್ಮಿಕರ, ಶೋಷಿತರ ಮನೆಬಾಗಿಲಿಗೆ ತಲುಪಿಸುವಲ್ಲಿ ಕ್ರಮವಹಿಸುತ್ತಿರುವುದು ಶ್ಲಾಘನೀಯ.

    ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ಅಭಿಮಾನಿಗಳಾದ ಹಿರೇಮಗಳೂರು ರಾಮಚಂದ್ರ, ಜಯರಾಜ್ ಅರಸ್, ರಾಜು, ಜಗದೀಶ್, ಗಂಗಾಧರ್ ಸೇರಿದಂತೆ ಶಾಲಾ ಮುಖ್ಯೋಪಾದ್ಯಾಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಾಸಕರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.

    MLA H.D. Thammayya’s birthday celebration in Hiremagaluru

  • ಮಳೆಗಾಲದಲ್ಲಿ ಅನಾಹುತ ತಡೆಯಲು ಅಧಿಕಾರಿಗಳ-ಸಿಬ್ಬಂದಿ ಒಳಗೊಂಡ ತಂಡ ರಚನೆ

    ಮಳೆಗಾಲದಲ್ಲಿ ಅನಾಹುತ ತಡೆಯಲು ಅಧಿಕಾರಿಗಳ-ಸಿಬ್ಬಂದಿ ಒಳಗೊಂಡ ತಂಡ ರಚನೆ

    ಚಿಕ್ಕಮಗಳೂರು: ಮಳೆಗಾಲದಲ್ಲಿ ಅನಾಹುತಗಳನ್ನು ತಡೆಗಟ್ಟಿ ಮಜಾಗ್ರತಾ ಕ್ರಮ ಕೈಗೊಳ್ಳಲು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡಗನ್ನು ಸಚಿಸಲಾಗಿದ ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

    ಮಳೆಗಾಲ ಆರಂಭವಾಗಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಳೆ ಸೇರಿದಂತೆ ಪ್ರಕೃತಿ ವಿಕೋಪಳನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದರು.

    ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಅವಧಿಗೂ ಮುನ್ನ ಮಳೆ ಆರಂಭವಾಗಿದ್ದು, ಮಳೆ ಹಾಗೂ ಗಾಳಿಗೆ ಹಲವೆಡೆ ಅನಾಹುತ ಸಂಭವಿಸಿದೆ. ಗಾಳಿ ಮಳೆಗೆ ಜಿಲ್ಲೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ ಎಂದರು.

    ವಾಡಿಕೆಯ ಪ್ರಕಾರ ಜೂನ್‌ 5 ರಂದು ಮಳೆ ಆರಂಭವಾಗಬೇಕಾಗಿತ್ತು. ಆದರೆ, ಮೇ ತಿಂಗಳ ಮೊದಲ ವಾರದಿಂದಲೇ ಮಳೆ ಆರಂಭವಾಗಿದೆ. ಮಳೆ ಬಂದಿದ್ದರಿಂದ ಎಲ್ಲರಿಗೂ ಒಳ್ಳೆಯದಾಗಿದೆ. ಜತೆಗೆ ಅನಾಹುತವೂ ಸಂಭವಿಸಿದೆ. ಭಾರೀ ಮಳೆ ಆಗುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಒಳಗೊಂಡ ವಿಶೇಷ ತಂಡಗಳನ್ನು ರಚನೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

    ತಾವು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಈ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ತೆಗೆದುಕೊಳ್ಳಲಾಗಿದೆ. ಅತಿವೃಷ್ಠಿ ಎದುರಿಸಲು ಸಿಬ್ಬಂದಿಗಳ ಜತೆಗೆ ಬೇಕಾದ ಸಲಕರಣೆಗಳನ್ನು ಇಟ್ಟುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯ್ತಿ ಸಿಇಓ ಉಸ್ತುವಾರಿ ನೋಡಿಕೊಲ್ಳುತ್ತಿದ್ದಾರೆ ಎಂದರು.

    ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಬಾರದೆಂಬ ಉದ್ದೇಶದಿಂದ ಲೈನ್‌ಮೆನ್‌ಗಳ ಜತೆಗೆ 110 ಮಂದಿ ಗ್ಯಾಂಗ್‌ ಮೆನ್‌ಗಳನ್ನು ಕೊಡಲಾಗಿದೆ. ಅವರಿಗೆ ಅಗತ್ಯ ವಾಹನಗಳನ್ನು ಸಹ ನೀಡಲಾಗಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳ್ನು ನೇಮಿಸಿಕೊಳ್ಳಲಾಗಿದ್ದು, ದಿನದ 24 ಗಂಟೆ ಕೆಲಸ ಮಾಡುತ್ತಿದ್ದಾರೆ ಎಂದರು.

    ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಭೂ ಕುಸಿತ ಉಂಟಾಗುತ್ತಿದೆ. ಕೆಲವೆಡೆ ಮರಗಳನ್ನು ತೆಗೆಯಲು ಅರಣ್ಯ ಇಲಾಖೆಯವರು ಅನುಮತಿ ನೀಡುತ್ತಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಹೇಳಿದ್ದರು. ಹೀಗಾಗಿ ಕೆಲವು ಸಂದರ್ಭದಲ್ಲಿ ನಿಯಮಗಳನ್ನು ಸರಳಗೊಳಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

    ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರು, ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳು ಹೆಚ್ಚು ಎಚ್ಚರಿಕೆ ಮತ್ತು ಜವಾಬ್ದಾರಿಯಿಂದಕೆಲಸ ಮಾಡಬೇಕು ಎಂದು ಸೂಚಿಸಿದರು.

    Formation of a team comprising officers and staff to prevent disasters during the rainy season

  • ಜಿಲ್ಲಾ ಉಸ್ತುವಾರಿ ಸಚಿವರಿಂದ 5 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಣೆ

    ಜಿಲ್ಲಾ ಉಸ್ತುವಾರಿ ಸಚಿವರಿಂದ 5 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಣೆ

    ಚಿಕ್ಕಮಗಳೂರು: ಮಳೆಯಿಂದ ಮರ ಬಿದ್ದು ಸಾವಿಗೀಡಾದ ಎನ್.ಆರ್.ಪುರ ತಾಲ್ಲೂಕಿನ ಇಬ್ಬರ ಮನೆಗಳಿಗೆ ಇಂದು ತೆರಳಿದ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಾಂತ್ವನ ಹೇಳಿದರಲ್ಲದೆ, ತಲಾ ೫ ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ವಿತರಿಸಿದರು.

    ಖಾಂಡ್ಯ ಹೋಬಳಿ ಬಿಳುಕೊಪ್ಪ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಮರ ಬಿದ್ದು ಮೃತಪಟ್ಟ ಅನಿಲ್ ಪಾಯಸ್ ಅವರ ಮನೆಗೆ ತೆರಳಿ ಪರಿಹಾರದ ಚೆಕ್ ವಿತರಿಸಿದರು. ಅನಂತರ ಅದೇ ತಾಲ್ಲೂಕಿನ ಕೊಗ್ರೆ ಬಳಿ ಆಟೋ ರಿಕ್ಷಾದ ಮೇಲೆ ಮರ ಬಿದ್ದು ಮೃತಪಟ್ಟ ಚಾಲಕ ರತ್ನಾಕರ ಅವರ ಮನೆಗೂ ತೆರಳಿ ಮೃತನ ಸಹೋದರನಿಗೆ ಪರಿಹಾರದ ಚೆಕ್ ವಿತರಿಸಿದರು.

    ಅನಂತರ ಮಾತನಾಡಿದ ಅವರು, ಪರಿಹಾರ ನೀಡುವುದರಿಂದ ಹೋದ ಜೀವ ಮರಳಿ ಬರುವುದಿಲ್ಲ. ಆದರೂ ಅವರ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲಿ ಎನ್ನುವ ಕಾರಣಕ್ಕಾಗಿ ಪರಿಹಾರ ನೀಡಲಾಗುತ್ತಿದೆ. ಸಂತ್ರಸ್ತರ ಮನೆ ನಿರ್ಮಾಣ ಕಾರ್ಯವೂ ಪೂರ್ಣಗೊಂಡಿಲ್ಲ. ಅದನ್ನು ಶಾಸಕ ಟಿ.ಡಿ.ರಾಜೇಗೌಡ ಅವರು ಪೂರ್ಣಗೊಳಿಸಿಕೊಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಮೃತನ ಪುತ್ರಿಯ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿಯೂ ತಿಳಿಸಿದರು.

    ಎಲ್ಲೆಲ್ಲಿ ಅಪಾಯಕಾರಿ ಮರಗಳಿವೆ ಅವುಗಳನ್ನು ಹಾಗೂ ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಸೂಚಿಸುವುದಾಗಿ ತಿಳಿಸಿದ ಸಚಿವರು, ಜೊತೆಗೆ ಒಣಗಿದ ಮರಗಳಿವೆ ಅವುಗಳನ್ನು ಕೂಡ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಹ ಅರಣ್ಯ ಇಲಾಖೆಗೆ ನಿರ್ದೇಶನ ನೀಡುವುದಾಗಿ ತಿಳಿಸಿದ ಸಚಿವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡುವುದಾಗಿ ಹೇಳಿದರು.

    ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

    District in-charge minister distributes compensation cheque of Rs. 5 lakh

  • ಯೋಗದ ಕಡೆ ಅನ್ಯಧರ್ಮದ ಒಲವು ಸಂಸ್ಕೃತಿಗೆ ಹೆಮ್ಮೆ

    ಯೋಗದ ಕಡೆ ಅನ್ಯಧರ್ಮದ ಒಲವು ಸಂಸ್ಕೃತಿಗೆ ಹೆಮ್ಮೆ

    ಚಿಕ್ಕಮಗಳೂರು: ಸಾವಿರಾರು ವರ್ಷಗಳ ಪರಂಪರೆ ಇರುವ ನಮ್ಮ ಯೋಗ ಶಿಕ್ಷಣದ ಕಡೆಗೆ ವಿದೇಶದ ಅನ್ಯ ಧರ್ಮೀಯರೂ ಸಹ ಒಲವು ಹೊಂದಿರುವುದು ನಮ್ಮ ದೇಶದ ಸಂಸ್ಕೃತಿಗೆ ಹೆಮ್ಮೆಯ ಸಂಗತಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸೇವಾದಳ, ಎನ್.ಎಸ್.ಎಸ್. ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಮೇರಾ ಯುವ ಭಾರತ್ ಮತ್ತಿತರ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಇಂದು ಬೆಳಿಗ್ಗೆ ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಗದ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂಬ ಅಂಶವನ್ನು ನಮ್ಮ ದೇಶದ ಸೈನಿಕರಿಗೂ ಈಗ ಹೇಳಿಕೊಡಲಾಗುತ್ತಿದೆ ಎಂದರು.

    ಶಿಕ್ಷಣ ಕಲಿಯದಿದ್ದರೆ, ಆರೋಗ್ಯವನ್ನು ಕಾಪಾಡಿಕೊಳ್ಳದಿದ್ದರೆ, ಬದುಕನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳದಿದ್ದರೆ ನಾವು ಹುಟ್ಟಿದ್ದಕ್ಕೂ ಸಾರ್ಥಕವೆನಿಸುವುದಿಲ್ಲ. ಶಿಕ್ಷಣ ಮತ್ತು ಆರೋಗ್ಯ ನಮ್ಮ ಬದುಕಿನ ಅವಿಭಾಜ್ಯ ಅಂಗ. ಬೇರೆ ಬೇರೆ ದೇಶಗಳಿಗೆ ಹೋಗಿ ಬರಬಹುದು. ಆದರೆ ಅದು ಪ್ರವಾಸ ಮಾತ್ರ. ಆದರೆ ವಾಸಕ್ಕೆ ಯೋಗ್ಯವಾಗಿರುವುದು ನಮ್ಮ ಸಂಸ್ಕಾರವಂತ ದೇಶ ಭಾರತ ಮಾತ್ರ ಎಂದು ಹೇಳಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಯೋಗ ಬದುಕಿನ ಭಾಗವಾದಾಗ ನಾವು ನಿರೋಗಿಗಳಾಗಿ ನಮ್ಮ ಆಯುಷ್ಯವನ್ನು ಪೂರ್ಣಗೊಳಿಸಬಹುದು. ಆದರೆ ನಮ್ಮ ಪರಿಸ್ಥಿತಿ ತನ್ನೊಳಗೇ ಹುದುಗಿರುವ ಸುಗಂಧವನ್ನು ಅರಸುವ ಕಸ್ತೂರಿ ಮೃಗದಂತಾಗಿದೆ. ನಮ್ಮ ಋಷಿ ಮುನಿಗಳು ಕಂಡುಕೊಂಡ ಯೋಗವಿದ್ಯೆಯನ್ನು ಪತಂಜಲಿ ಮಹರ್ಷಿಗಳು ಕ್ರೋಢೀಕರಿಸಿ, ಯೋಗ ಭಾಷ್ಯದ ಮೂಲಕ, ಯೋಗ ಸೂತ್ರದ ಮೂಲಕ ಜಗತ್ತಿನ ಎಲ್ಲ ಮಾನವರೂ ನಿರೋಗಿಗಳಾಗಬೇಕು ಎನ್ನುವ ಹಿನ್ನೆಲೆಯಲ್ಲಿ ನಮಗೆ ಯೋಗ ಪ್ರದಾನ ಮಾಡಿದ್ದಾರೆ. ದುರ್ದೈವವೆಂದರೆ ನಾವು ಅದನ್ನು ಮರೆತು ಆರೋಗ್ಯವನ್ನು ಇನ್ನೆಲ್ಲೋ ಹುಡುಕಾಡುತ್ತಿದ್ದೇವೆ. ಆದರೆ ಯಾರು ಯೋಗವನ್ನು ಬದುಕಿನ ಭಾಗವನ್ನಾಗಿ ಮಾಡಿಕೊಂಡಿದ್ದಾರೋ ಅವರು ಇದರ ಮಹತ್ವವನ್ನು ಕಂಡುಕೊಂಡಿದ್ದಾರೆ ಎಂದು ಹೇಳಿದರು.

    ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಸ್.ಗೀತಾ ಸ್ವಾಗತಿಸಿದರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಭಾಗ್ಯಕ್ಕ, ಪ್ರಬೋಧಿನಿ ಯೋಗ ಶಿಕ್ಷಣ ಟ್ರಸ್ಟ್‌ನ ಸುರೇಂದ್ರ, ಭಾರತ್ ಸ್ವಾಭಿಮಾನ್ ಯೋಗ ಶಿಕ್ಷಣ ಸಮಿತಿಯ ಜನಕರಾಜ್, ಅನುವ್ರತ್ ಸಮಿತಿಯ ಅಧ್ಯಕ್ಷೆ ಮಂಜು ಬನ್ಸಾಲಿ, ಮೇರಾ ಯುವ ಭಾರತ್‌ನ ಜಿಲ್ಲಾ ಸಮನ್ವಯಾಧಿಕಾರಿ ಅಭಿಷೇಕ್, ಎಸ್‌ಪಿವೈಎಸ್‌ಎಸ್ ಜಿಲ್ಲಾ ಸಂಚಾಲಕಿ ಶಾರದಾ ರವಿ, ಡಾ.ಗೌರಿ ವರುಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ.ಮಂಜುಳಾ ಹುಲ್ಲಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಭರತ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಮಂಜುನಾಥ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಶಶಿಕಲಾ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಪುಟ್ಟರಾಜು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪಾಲಾಕ್ಷಪ್ಪ, ಸ್ಕೌಟ್ಸ್ ಅಂಡ್ ಗೈಡ್ಸ್‌ನ ಕಿರಣ್, ಭಾರತ್ ಸೇವಾದಳದ ಸಂಘಟಕ ಡಾ,ಚಂದ್ರಶೇಖರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮಕ್ಕೆ ಮುನ್ನ ಯೋಗ ಪಟುಗಳಿಂದ ಯೋಗ ಪ್ರದರ್ಶನ ನಡೆಯಿತು.

    The pagan inclination towards yoga is a source of pride for the culture.

  • ಆಗಸ್ಟ್ 23 ಕ್ಕೆ ಜಿಲ್ಲಾ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನ

    ಆಗಸ್ಟ್ 23 ಕ್ಕೆ ಜಿಲ್ಲಾ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನ

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನ ಆಗಸ್ಟ್ ೨೩ ರಂದು ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ತು ಮತ್ತು ದಲಿತ ಸಾಹಿತ್ಯ ಪರಿ?ತ್ತು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮತ್ತು ಜಿಲ್ಲಾ ದಲಿತ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷರಾದ ಕುಪ್ಪಾಳು ಶಾಂತಮೂರ್ತಿ ಅವರ ನೇತೃತ್ವದಲ್ಲಿ ಜಿಲ್ಲಾ ದಲಿತ ಸಾಹಿ ತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಕೋಶಾಧ್ಯಕ್ಷ ಬಿ.ಪ್ರಕಾಶ್ ತಿಳಿಸಿದರು.

    ಅಂದು ಸಮ್ಮೇಳನದ ದಿನ ಧ್ವಜಾರೋಹಣ ನಂತರ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನೆ. ಕಾರ್ಯಕ್ರಮ ನಂತರ ದಲಿತ ಸಾಹಿತ್ಯ ಕುರಿತ ಗೋಷ್ಠಿ ಮತ್ತು ಕವಿಗೋಷ್ಟಿಗಳು ನಡೆಯಲಿದ್ದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸಮ್ಮೇಳನದಲ್ಲಿ ನಾಡಿನ ಹಲವಾರು ಸಾಹಿತಿಗಳು ಮತ್ತು ಸಾಹಿತ್ಯ ಆಸಕ್ತರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಮೂವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಮತ್ತು ಜಿಲ್ಲೆ ಯ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

    District’s first Dalit literary conference on August 23

  • ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಮಾಡಿದ ತೃಪ್ತಿ ತಮಗಿದೆ

    ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಮಾಡಿದ ತೃಪ್ತಿ ತಮಗಿದೆ

    ಕಡೂರು: ಬಹಳಷ್ಟು ವರ್ಷದಿಂದ ನೆನಗುದಿಗೆ ಬಿದ್ದಿದ್ದ ಹಿಂದಿನ ಎಲ್ಲ ರಾಜಕಾರಣಿಗಳು ಮರೆತಿದ್ದ ಹಳ್ಳಿಗಾಡಿನ ಪ್ರದೇಶದ ಅಭಿವೃದ್ಧಿಯನ್ನು ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ ತೃಪ್ತಿ ತಮಗಿದೆ ಎಂದು ಶಾಸಕ ಕೆ.ಎಸ್. ಆನಂದ್ ಹ? ವ್ಯಕ್ತಪಡಿಸಿದರು.

    ಕಡೂರಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕೆಆರ್‌ಐಡಿಎಲ್‌ನ ನೂತನ ಕಛೇರಿಯ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಡಿಮೆ ವೆಚ್ಚದಲ್ಲಿ ಗುಣಮಟ್ಟದ, ಸುಂದರವಾದ ಕಟ್ಟಡ ನಿರ್ಮಾಣ ಈ ಸಂಸ್ಥೆ ಮಾಡಿದೆ ಎಂದು ಶ್ಲಾಘಿಸಿದರು.

    ಕೆಆರ್‌ಐಡಿಎಲ್ ಸಂಸ್ಥೆಗೆ ಜಾಗ ನೀಡುವಲ್ಲಿ ಇದ್ದ ಸಮಸ್ಯೆಯನ್ನು ಪರಿಹರಿಸಿ ಈ ಜಾಗ ನೀಡಿದ ಕಡೂರುಹಳ್ಳಿ ಗ್ರಾಮ ಪಂಚಾಯಿತಿಯ ಮತ್ತು ಸುತ್ತಮುತ್ತಲಿನ ಗ್ರಾಮದವರಿಗೆ ಅಭಿನಂದನೆ ಸಲ್ಲಿಸಿದರು.

    ಕೆಆರ್‌ಐಡಿಎಲ್ ಸಂಸ್ಥೆ ಸುಮಾರು ೫೦ ಕೋಟಿ ರೂ.ಗಳ ಕಾಮಗಾರಿ ನಡೆಸಿದೆ. ೬ ಕೋಟಿ ಮುಜರಾಯಿ ಇಲಾಖೆಗೆ, ೬ ಕೋಟಿ ಸಮುದಾಯ ಭವನ ನಿರ್ಮಾಣಕ್ಕೆ, ೧೨ ಕೋಟಿ ಗ್ರಾಮೀಣ ರಸ್ತೆಯ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ, ರೈತ ಸಂಪರ್ಕ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಇದಲ್ಲದೆ ಜಯರಾಮ ರಮೇಶ್ ಮತ್ತು ಶ್ರೇಯಸ್ ಪಟೇಲ್ ಅವರ ವಿಶೇ? ಅನುದಾನದಿಂದ ಹಲವಾರು ವಿಶೇ? ಕಾಮಗಾರಿ ಮಾಡಲಾಗಿದೆ. ಕೆಆರ್‌ಐಡಿಎಲ್ ಸಂಸ್ಥೆ ತಮಗೆ ನೀಡಿರುವ ೨೨೦ ಕ್ಕೂ ಹೆಚ್ಚಿನ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ರಾಜಿಮಾಡಿಕೊಳ್ಳದೆ ಮಾಡಿದೆ ಎಂದರು.

    ಹಿಂದಿನ ಜನಪ್ರತಿನಿಧಿಗಳು, ಸರ್ಕಾರ ಮಾಡಲಾಗದ ಕೆಲಸವನ್ನು ತಾವು ತಮ್ಮ ಸರ್ಕಾರ ಮಾಡುತ್ತಿದೆ ಎಂಬ ಹೆಮ್ಮ ತಮ್ಮದು ಎಂದ ಅವರು, ನಗದಿಯಾತ್ ಕಾವಲಿನ ಕೈಗಾರಿಕಾ ಪ್ರದೇಶದಲ್ಲಿ ಮುಂದಿನ ಮೂರು ವ?ಗಳಲ್ಲಿ ಕನಿ? ಐದು ಸಾವಿರ ಜನರಿಗೆ ಕೆಲಸ ಸಿಗಲಿದೆ, ಕ್ಷೇತ್ರದ ನೀರಿನ ಬವಣೆ ನೀಗಿಸುವ ಸಲುವಾಗಿ ಭದ್ರ ಉಪಕಣಿವೆ ಮೂರನೇ ಹಂತದ ಕಾಮಗಾರಿಯ ಕಾರ್ಯ ಭರದಿಂದ ಸಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ತಾವು ಮತ್ತು ತಮ್ಮಯ್ಯ ಅವರು ಜತೆಗೂಡಿ ಕೆಲಸ ಮಾಡುವ ಭರವಸೆ ನೀಡಿದರು.

    ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ತಮ್ಮ ರಾಜಕೀಯ ಅವಧಿಯಲ್ಲಿ ಉದ್ಘಾಟಿಸಿದ ಅತ್ಯಂತ ಸುಸಜ್ಜಿತ ಮತ್ತು ಉತ್ತಮ ಗುಣಮಟ್ಟದ ಕಛೇರಿ ಇದಾಗಿದೆ. ನಿಮ್ಮ ಇಲಾಖೆಯಿಂದ ನಿರ್ಮಾಣ ಮಾಡುವ ಇತರ ಕಟ್ಟಡ, ರಸ್ತೆಯ ಕಾಮಗಾರಿಯನ್ನೂ ಇದೇ ರೀತಿ ಮಾಡುವ ಭರವಸೆ ಇದೆ. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವುದನ್ನು ನಿಜವಾಗಿಸಲು ಶಾಸಕಾಂಗದೊಂದಿಗೆ ಕಾರ್ಯಾಂಗ ಸಹಕರಿಸಬೇಕು ಎಂದರು.

    ಜಿಲ್ಲೆಗೆ ಎರಡು ಜವಳಿ ಪಾರ್ಕ್ ತರುವಲ್ಲಿ ತಾವು ಮತ್ತು ಆನಂದ್ ಯಶಸ್ವಿ ಆಗಿದ್ದೇವೆ, ಭದ್ರಾ ಉಪಕಣಿವೆ ಯೋಜನೆಯ ಉಳಿದ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿ ರೈತರ ಜಮೀನಿಗೆ ನೀರು ಸಿಗಲಿದೆ. ತಾವು ಮತ್ತು ಆನಂದ್ ಅವರು ಒಟ್ಟಾಗಿ ಎರಡೂ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವುದಾಗಿ ಹೇಳಿದರು.

    ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸುವುದರೊಂದಿಗೆ ಹೊಸ ಕಾಮಗಾರಿಗಳನ್ನೂ ಮಾಡುತ್ತಾ ಐದು ಗ್ಯಾರಂಟಿಗಳನ್ನು ನೀಡಿ ಉತ್ತಮ ಕಾರ್ಯ ಮಾಡುತ್ತಿರುವ ಸರ್ಕಾರದ ಭಾಗವಾಗಿರುವುದು ನಮ್ಮ ಹೆಮ್ಮೆ ಎಂದರು.

    ಗ್ರಾಮ ಪಂಚಾಯತಿ ಅಧ್ಯಕ್ಷ ಗೀತಾ ಶಿವಕುಮಾರ್, ಕಡೂರು ತಹಸಿಲ್ದಾರ್ ಪೂರ್ಣಿಮಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಕೆಆರ್‌ಐಡಿಎಲ್ ಮುಖ್ಯ ಇಂಜಿನಿಯರ್ ಗೋಪಾಲ್, ಕಾರ್ಯಪಾಲಕ ಅಭಿಯಂತ ಅಶ್ವಿನಿ, ತಂಗಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್, ಕೆಆರ್‌ಐಡಿಯಲ್ ಅಭಿಯಂತರ ವಿನಯ್, ಮುರುಳಿ ಹಾಗೂ ಕಡೂರಳ್ಳಿ ತಂಗಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು ಮತ್ತು ಗುತ್ತಿಗೆದಾರರಾದ ಗಿರೀಶ್ ಮತ್ತು ಸಾರ್ವಜನಿಕರು ಇದ್ದರು.

    They are satisfied with the development they have achieved in rural areas.

  • ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ

    ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ

    ಬೆಂಗಳೂರು: ಸುಸ್ಥಿರ ಇಂಧನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕವು ವಿಶ್ವದ ಗಮನ ಸೆಳೆದಿದೆ. ಸುಸ್ಥಿರ ಮತ್ತು ಹಸಿರು ಇಂಧನ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದ್ದು, ಹಸಿರು ಇಂಧನದ ಭವಿಷ್ಯಕ್ಕೆ ಸ್ಪಷ್ಟ ಗುರಿ ಹೊಂದಿದೆ ಎಂದು ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ.

    ಬೆಂಗಳೂರು ಅಂತಾರಾಷ್ಟೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ’ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್ಪೋ-2025’ರ ಐದನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯದಲ್ಲಿ ಸುಸ್ಥಿರ ಇಂಧನ ನೀತಿ ಇರುವುದರಿಂದಲೇ ನಮ್ಮ ಹಸಿರು ಇಂಧನದ ಭವಿಷ್ಯಕ್ಕೆ ಸ್ಪಷ್ಟ ಗುರಿ ಇದೆ,” ಎಂದರು.

    “ನವೀಕರಿಸಬಹುದಾದ ಇಂಧನ ನೀತಿ 2022-27 ಸ್ಪಷ್ಟ ಗುರಿಯನ್ನು ನಮ್ಮ ಮುಂದಿರಿಸಿದೆ. ನಮ್ಮ ನೀತಿ ಸಂಶೋಧನೆ, ಬಂಡವಾಳ ಹೂಡಿಕೆ ಮತ್ತು ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ಒಳಗೊಂಡಿರುವುದು ವಿಶೇಷ. ಇತ್ತಿಚೆಗೆ ಯಶಸ್ವಿಯಾಗಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ನವೀಕರಿಸಬಹುದಾದದ ಇಂಧನ ವಲಯದಲ್ಲಿ 4 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಿಸಿರುವುದು ನಮ್ಮ ಸುಸ್ಥಿರ ಇಂಧನ ನೀತಿಯ ಫಲ,” ಎಂದು ತಿಳಿಸಿದರು.

    “ಸುಸ್ಥಿರ ಮತ್ತು ಹಸಿರು ಇಂಧನ ಕ್ಷೇತ್ರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಸಾರಥಿಯಾಗಿ ಮುನ್ನಡೆಯುತ್ತಿದೆ. ನಮ್ಮ ನವೀಕರಿಸಬಹುದಾದದ ಇಂಧನ ನೀತಿಯು ಹಸಿರು ಇಂಧನ ಕ್ಷೇತ್ರದ ಸಾಮರ್ಥ್ಯ ವೃದ್ದಿ, ಸಂಶೋಧನೆ ಹಾಗೂ‌ ಪರಿಸರ ವ್ಯವಸ್ಥೆಗೆ ಪೂರಕವಾಗಿದ್ದು, ದೇಶಕ್ಕೆ ಮಾದರಿಯಾಗಿದೆ,” ಎಂದು ತಿಳಿಸಿದರು.

    “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಸಮರ್ಥ ಮಾರ್ಗದರ್ಶನದಲ್ಲಿ ಕ್ರೆಡಲ್ ಅತ್ಯುತ್ತಮ ಸಾಧನೆ ಮಾಡಿದೆ. ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ,”ಎಂದರು.

    “ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ಹಿಂದೆ ಇಂಧನ ಸಚಿವರಾಗಿದ್ದಾಗ, ಪಾವಗಡ ಸೋಲಾರ್‌ ಪಾರ್ಕ್‌ ಮಾಡಿದ್ದು ಇತಿಹಾಸ. ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಗ್ಗಳಿಕೆ ಪಡೆದಿತ್ತು. ಈಗ ಈ ಸೋಲಾರ್ ಪಾರ್ಕ್‌ನ ವಿಸ್ತರಣೆ ಕಾರ್ಯ ನಮ್ಮ ಮುಂದಿದ್ದು, ಮತ್ತೆ ನಾವು ಮೊದಲ ಸ್ಥಾನಕ್ಕೆ ಏರುವ ಭರವಸೆ ನನಗಿದೆ,” ಎಂದರು.

    3 ದಿನಗಳ ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೋವನ್ನು ರಾಮಕೃಷ್ಣ ಆಶ್ರಮದ ವೀರೇಶಾನಂದ ಶ್ರೀಗಳು, ಪರಮಾನಂದ ಶ್ರೀಗಳು ಉದ್ಘಾಟಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಉಪಕರಣಗಳ ತಯಾರಕರ ಸಂಘದ ಸುರೇಂದ್ರ ಕುಮಾರ್, ಪ್ರೈಮ್ ಎನರ್ಜಿಯ ಉದ್ಯಮಿ ರಮೇಶ್ ಶಿವಣ್ಣ ಹಾಗೂ ಜೆಟ್ರೋ ಕಂಪನಿಯ ಜಪಾನ್ ಪ್ರತಿನಿಧಿ ತೊಷಿರೋ ಮಿಜುತಾನಿ ಉಪಸ್ಥಿತರಿದ್ದರು.

    ಎಕ್ಸ್‌ಪೋದಲ್ಲಿ ಸೋಲಾರ್ ವಿದ್ಯುತ್, ಗ್ರಿಡ್ ಉನ್ನತೀಕರಣ, ಹಸಿರು ಇಂಧನ ಅಳವಡಿಕೆ ಸಂಬಂಧಿಸಿದಂತೆ ವಿಚಾರಗೊಷ್ಠಿಗಳು ನಡೆಯಲಿವೆ.

    The state has a clear goal for its green energy future.