Category: ಚಿಕ್ಕಮಗಳೂರು ನಗರ

  • ಉಗ್ರರಿಗೆ ಪಾಠ ಕಲಿಸಲು ಪಿಓಕೆ ವಶಪಡಿಸಿಕೊಳ್ಳಿ

    ಉಗ್ರರಿಗೆ ಪಾಠ ಕಲಿಸಲು ಪಿಓಕೆ ವಶಪಡಿಸಿಕೊಳ್ಳಿ

    ಚಿಕ್ಕಮಗಳೂರು: ಇಡೀ ದೇಶವೇ ಕಣ್ಣೀರು ಸುರಿಸುವ ದಿನವಿದು. ಪ್ರವಾಸಿಗರ ಸ್ವರ್ಗ ಕಾಶ್ಮೀರದಲ್ಲಿ ರಕ್ತದೋಕುಳಿಯೇ ಹರಿದಿದ್ದು, ಹಿಂದುಗಳ ಮಾರಣ ಹೋಮ ನಡೆದಿದೆ. ಕಾಶ್ಮೀರಿ ಉಗ್ರರಿಗೆ ತಕ್ಕ ಪಾಠ ಕಲಿಸಲು ಕೂಡಲೇ ಪಿಓಕೆಯನ್ನು ವಶಪಡಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಎಸ್‌ ಶೆಟ್ಟಿ ಒತ್ತಾಯಿಸಿದರು.

    ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರಿ ಉಗ್ರರು ಹಿಂದೂ ಪ್ರವಾಸಿಗರ ಹೆಸರನ್ನು ಕೇಳಿ ಕೇಳಿ ಕೊಂದಿದ್ದಾರೆ. ಈ ಕೃತ್ಯದ ಹಿಂದೆ ಪಾಕಿಸ್ತಾನದ ಕುತಂತ್ರವು ಇರುವ ಸಾಧ್ಯತೆ ಇದೆ. ಹೀಗಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಪಿಓಕೆಯನ್ನು ಭಾರತ ವಶಕ್ಕೆ ಪಡೆಯಬೇಕು ಎಂದರು.

    ಕಾಶ್ಮೀರವನ್ನು ಆಜಾದ್ ಕಾಶ್ಮೀರ ಎಂದು ಕರೆಯುತ್ತೇವೆ. ಅದರಂತೆ ಪಿಓಕೆಯನ್ನು ಸಹ ವಶಪಡಿಸಿಕೊಂಡು ಸ್ವತಂತ್ರಗೊಳಿಸಬೇಕು. ಇದರೊಂದಿಗೆ ಭಾರತದಲ್ಲಿ ಅಡಗಿರುವ ಉಗ್ರರ ದಮನ ಮಾಡಬೇಕು. ಆರ್ಟಿಕಲ್ 370 ತೆಗೆದ ಮೇಲೆ ಕಾಶ್ಮೀರ ನಮ್ಮದು ಎಂದು ಹೇಳುವ ಧೈರ್ಯ ಬಂದಿದೆ. ಈ ಕಾರಣಕ್ಕಾಗಿಯೇ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ಹೋಗಲಾರಂಬಿಸಿದ್ದರು. ಇಲ್ಲಿಗೆ ಬರುವ ಪ್ರವಾಸಿಗರನ್ನು ತಡೆಯುವ ನಿಟ್ಟಿನಲ್ಲಿ ಉಗ್ರರು ಈ ಕೃತ್ಯಕ್ಕೆ ಕೈ ಹಾಕಿರುವ ಸಾಧ್ಯತೆ ಎದ್ದು ಕಾಣುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

    ಕಾಶ್ಮೀರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಾಗ ಅಲ್ಲಿನ ಆರ್ಥಿಕತೆಯು ಪ್ರಬಲವಾಗುತ್ತದೆ. ಆಗ ಉಗ್ರ ಚಟುವಟಿಕೆಗಳಿಗೆ ಆಸ್ಪದ ಸಿಗುವುದಿಲ್ಲ. ಈ ಕಾರಣದಿಂದಾಗಿಯೇ ಹಿಂದು ಪ್ರವಾಸಿಗರ ಮೇಲೆ ದಾಳಿ ನಡೆದಿರುವ ಸಾಧ್ಯತೆ ಇದೆ. ಪಾಕಿಸ್ತಾನ ಹಾಗೂ ನಮ್ಮ ದೇಶದಲ್ಲಿರುವ ಉಗ್ರಸಂಘಟನೆಗಳ ಒಳಸಂಚಿನಿಂದ ಘಟನೆ ನಡೆದಿರಬಹುದು. ಪಾಕಿಸ್ತಾನದ ಉಗ್ರರು ಜಮ್ಮು ಕಾಶ್ಮೀರದಲ್ಲಿ ತಮ್ಮ ಕುಕೃತ್ಯವನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಒತ್ತಾಯಿಸಿದರು.

    ಅನಂತನಾಗ್ ಜಿಲ್ಲೆಯಲ್ಲಿ ನಡೆದಿರುವ ಘಟನೆಗೆ ಸಂಬಂಧಪಟ್ಟಂತೆ ಉಗ್ರರಿಗೆ ತಕ್ಕ ಪಾಠ ಕಲಿಸದೇ ಇದ್ದಲ್ಲಿ ಪಾಕಿಸ್ತಾನಕ್ಕೂ ತಕ್ಕ ಉತ್ತರ ಕೊಟ್ಟಂತಾಗುವುದಿಲ್ಲ. ಹೀಗಾಗಿ ಭಾರತವನ್ನು ಕೆಣಕಿದರೆ ಪಾಕಿಸ್ತಾನದ ಸ್ಥಿತಿ ಏನಾಗುತ್ತದೆ ಎಂಬುದನ್ನು ತೋರಿಸಬೇಕು ಎಂದರು.

    ಉಗ್ರರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಏನೇ ನಿರ್ಧಾರ ಕೈಗೊಂಡರು ದೇಶದ ಜನರು ಅವರ ಬೆನ್ನಿಗೆ ನಿಲ್ಲಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಉಗ್ರರ ವಿರುದ್ಧ ಸೂಕ್ತ ಕಾರ್ಯಾಚರಣೆ ನಡೆಸಿ ಮಟ್ಟ ಹಾಕಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

    ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 28ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ಕೊಪ್ಪ ಮೂಲದವರು. ಕೊಪ್ಪ ತಾಲೂಕು ಹಸಗೋಡು ಗ್ರಾಪಂ ವ್ಯಾಪ್ತಿಯ ಕುಣಿಮಕ್ಕಿ ಮೂಲದ ಮಂಜುನಾಥ್ ಎರಡು ದಶಕದ ಹಿಂದೆ ಶಿವಮೊಗ್ಗ ಹೋಗಿ ನೆಲೆಸಿದ್ದರು. ಉಗ್ರ ದಾಳಿಯಲ್ಲಿ ಮೃತಪಟ್ಟ ಕುಟುಂಬದವರ ಕಣ್ಣೀರಿನ ಭಾಗ ನಾವು ಆಗಿದ್ದೇವೆ. ಶಿವಮೊಗ್ಗದಲ್ಲಿ ನಡೆಯಲಿರುವ ಮಂಜುನಾಥ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲಿದ್ದೇನೆ. ಬಳಿಕ ಉಗ್ರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಹೋರಾಟ ರೂಪಿಸುತ್ತೇವೆ ಎಂದರು

    Capture PoK to teach terrorists a lesson

  • ಆತ್ಮವಿಶ್ವಾಸದ ಜೊತೆಗೆ ಗೌರವ ಹೆಚ್ಚಿಸುವುದೇ ಸಂಸ್ಕೃತಿ

    ಆತ್ಮವಿಶ್ವಾಸದ ಜೊತೆಗೆ ಗೌರವ ಹೆಚ್ಚಿಸುವುದೇ ಸಂಸ್ಕೃತಿ

    ಚಿಕ್ಕಮಗಳೂರು: ಜೀವನದ ಒಂದು ಭಾಗವಾಗಿ ಆತ್ಮವಿಶ್ವಾಸದ ಜೊತೆಗೆ ಗೌರವ ಹೆಚ್ಚಿಸುವುದೇ ಸಂಸ್ಕೃತಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು.

    ಅವರು ಇಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ಜಾನಪದ ಉತ್ಸವ-೨೦೨೫ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ವೈವಿಧ್ಯಮಯ ಜೀವನದ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಂಡು ಭಾರತದ ಸಂಸ್ಕಾರ ಇಡೀ ವಿಶ್ವಕ್ಕೆ ಬಹಳ ದೊಡ್ಡ ಪಾತ್ರ ವಹಿಸಿ ಮಾದರಿಯಾಗಿದೆ ಎಂದು ಹೇಳಿದರು.

    ನಾವು ಸಾಂಪ್ರದಾಯಿಕವಾಗಿ ಆಚರಿಸುವ ಪ್ರತಿಯೊಂದು ಹಬ್ಬಗಳು ಸಂಸ್ಕೃತಿಯನ್ನು ಜೀವಂತವಾಗಿ ಉಳಿಸಿವೆ. ಭಾರತದಂತ ಜಾತ್ಯಾತೀತ ರಾಷ್ಟ್ರದಲ್ಲಿ ವಿವಿಧ ಧರ್ಮಗಳ ಸಮುದಾಯದವರು ಆಚರಿಸುವ ಹಬ್ಬಗಳು ಜೊತೆಗೆ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವ ರೀತಿ ಸಂಸ್ಕೃತಿಯನ್ನು ಬಿಂಬಿಸುತ್ತಿವೆ ಎಂದು ತಿಳಿಸಿದರು.

    ರೈತರ ಜೀವನಾಡಿಯಾಗಿರುವ ಭತ್ತ, ರಾಗಿ, ಏಲಕ್ಕಿ, ಅಡಿಕೆ, ಕಾಫಿ, ತೆಂಗು, ಮೆಣಸು ಜೋಡಿಸಿ ಸಿಂಗರಿಸಿರುವುದರ ಜೊತೆಗೆ ಕಾಲೇಜಿನ ಆವರಣದಲ್ಲಿ ವಿವಿಧ ರೀತಿಯ ಚಿತ್ರಾಕಾರದ ರಂಗೋಲಿಯನ್ನು ಬಿಡಿಸಿ ಕಂಗೊಳಿಸುವಂತೆ ಮಾಡಿದ್ದೀರಿ ಎಂದು ಶ್ಲಾಘಿಸಿದರು.

    ಪೂರ್ವಜರು ಬಳಸುತ್ತಿದ್ದ ಸೇರು, ಪಾವು, ಚವೆ ಮಣಿ, ಬುಗುರಿ, ಕಡಗೋಲು ಮುಂತಾದ ಎಲ್ಲಾ ವಸ್ತುಗಳನ್ನು ಪ್ರದರ್ಶನಕ್ಕಿಟ್ಟಿರುವುದು ಆಧುನಿಕ ಜಗತ್ತಿಗೆ ಪರಿಚಯಿಸಲು ಸಹಕಾರಿಯಾಗಿರುವುದರ ಜೊತೆಗೆ ಜಾನಪದ ಉತ್ಸವಕ್ಕೆ ಮೆರಗು ನೀಡಿದೆ ಎಂದು ಹೇಳಿದರು.

    ರಾಷ್ಟ್ರಕವಿ ಕುವೆಂಪು ಜನಿಸಿದ ಕವಿಶೈಲಕ್ಕೆ ವಿದ್ಯಾರ್ಥಿಗಳಾದ ನೀವು ಹೋಗಲು ವಾಹನ ವ್ಯವಸ್ಥೆ ಮಾಡಲು ಭರವಸೆ ನೀಡಿದ ಅವರು, ಕುವೆಂಪುರವರ ಮನೆ ಮುಂದೆ ಬರೆದಿರುವ ಮನೆಮನೆ ನಾನು ಹುಟ್ಟಿದ ಮನೆ, ಮನೆಮನೆ ನಾನು ಆಡಿ ಬೆಳೆದ ಮನೆ, ನಡೆದಾಡುವಾಗ ಎತ್ತಿ ಬೆಳೆಸಿದ ಮನೆ, ಬುಗುರಿ, ಗೋಲಿ ಆಡಿದ ಮನೆ ಎಂದು ವರ್ಣಿಸಲಾಗಿದೆ ಎಂದು ಬಣ್ಣಿಸಿದರು.

    ಜಾನಪದ ಸೊಗಡು, ಜಾನಪದ ಗೀತೆ, ಜಾನಪದ ಆಟಗಳು ಸರಳವಾದ ಕೆಲಸದ ಸಮಯದಲ್ಲಿ ತಾಯಂದಿರ ಬಾಯಿಂದ ಬಂದ ನುಡಿಮುತ್ತುಗಳು ಎಂದ ಶಾಸಕರು, ಕಬ್ಬಡ್ಡಿ, ಲಗೋರಿ, ಕುಂಟೆಬಿಲ್ಲೆ, ಖೋಖೋ, ಕೂಸುಮರಿ ಮುಂತಾದ ಆಟಗಳು ಭಾರತದ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬಿಂಬಿಸುತ್ತವೆ ಎಂದು ಹೇಳಿದರು.

    ಮೊದಲು ತಾವು ಜನಿಸಿದ ಧರ್ಮವನ್ನು ಗೌರವಿಸಬೇಕು. ಇನ್ನೊಂದು ಸಮುದಾಯದ ಧರ್ಮವನ್ನು ದ್ವೇಷ ಮಾಡದೇ ಇರುವುದು ಮುಖ್ಯ ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ.ದಾಮೋದರ್‌ಗೌಡ ವಹಿಸಿ ಮಾತನಾಡಿದರು. ನಗರಸಭೆ ಸದಸ್ಯ ಶಾದಬ್ ಆಲಂಖಾನ್, ಮಹೇಶ್ವರಪ್ಪ, ಮೂಡಲಗಿರಿಯಪ್ಪ, ಡಾ. ಶ್ರೀನಿವಾಸ್, ಹೇಮ ಮಾಲಿನಿ ಸಿ.ಎನ್, ದೀಕ್ಷಿತ್ ಕುಮಾರ್, ಮತ್ತು ಬೋಧಕರು, ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು. ಹಂಪಾಪುರದಿಂದ ಎತ್ತಿನ ಗಾಡಿಯನ್ನು ನಿಖಿಲ್ ಸಹೋದರರು ತಂದಿದ್ದು ವಿಶೇಷ ಗಮನ ಸೆಳೆಯಿತು.

    Culture is about increasing self-confidence and respect.

  • ಏ.೨೫ ವಚನ ದರ್ಶನ ಮಿಥ್ಯ-ಸತ್ಯ ಗ್ರಂಥ ಬಿಡುಗಡೆ ಸಮಾರಂಭ

    ಏ.೨೫ ವಚನ ದರ್ಶನ ಮಿಥ್ಯ-ಸತ್ಯ ಗ್ರಂಥ ಬಿಡುಗಡೆ ಸಮಾರಂಭ

    ಚಿಕ್ಕಮಗಳೂರು: ಜಿಲ್ಲಾ ಜಾಗತಿಕ ಲಿಂಗಾಯಿತ ಮಹಾಸಭಾ ವತಿಯಿಂದ ವಚನ ದರ್ಶನ ಮಿಥ್ಯ-ಸತ್ಯ ಗ್ರಂಥ ಬಿಡುಗಡೆ ಸಮಾರಂಭ ಏ.೨೫ ರಂದು ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ನಗರದ ಹೌಸಿಂಗ್ ಬೋರ್ಡ್ ಕೆ.ಎಂ. ರಸ್ತೆ ನಾಯ್ಡು ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹೆಚ್. ಗಂಗಾಧರಪ್ಪ ತಿಳಿಸಿದರು.

    ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಬಿಜೆಪಿ, ಆರ್‌ಎಸ್‌ಎಸ್ ಸಂಘ ಪರಿವಾರದವರು ವಿಶ್ವಗುರು ಬಸವಣ್ಣನವರ ವಚನಗಳನ್ನು ತಿರುಚಿ ಪುಸ್ತಕ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಬಸವಣ್ಣನವರ ನೈಜ ವಚನಗಳನ್ನೊಳಗೊಂಡ ವಚನ ದರ್ಶನ ಮಿಥ್ಯ-ಸತ್ಯ ಗ್ರಂಥ ಬಿಡುಗಡೆ ಸಮಾರಂಭದ ಮೂಲಕ ಉತ್ತರ ನೀಡಲು ಮುಂದಾಗಿದ್ದೇವೆ ಎಂದರು.

    ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯ ಶ್ರೀ ತರಳಬಾಳು ಜಗದ್ಗುರು ಶಾಖಾ ಮಠದ ಪಟ್ಟಾಧ್ಯಕ್ಷರಾದ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದು, ಧ್ವಜಾರೋಹಣವನ್ನು ಚನ್ನಗಿರಿ ತಾಲ್ಲೂಕು ಪಾಂಡೋಮಟ್ಟಿ ವಿರಕ್ತ ಮಠದ ಡಾ. ಗುರುಬಸವ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆಂದು ಹೇಳಿದರು.

    ಸಾನಿಧ್ಯವನ್ನು ಚಿಕ್ಕಮಗಳೂರು ಕಲ್ಯಾಣ ನಗರದ ಬಸವತತ್ವ ಪೀಠದ ಡಾ. ಶ್ರೀ ಬಸವಮರುಳಸಿದ್ಧ ಸ್ವಾಮಿಗಳು ಹಾಗೂ ಕಡೂರು ಶ್ರೀ ಯಳನಾಡು ಮಹಾಸಂಸ್ಥಾನದ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆಂದು ಹೇಳಿದರು.

    ಉದ್ಘಾಟನೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ನೆರವೇರಿಸುವರು. ಅಧ್ಯಕ್ಷತೆಯನ್ನು ರಾಜ್ಯ ಜಾಗತಿಕ ಲಿಂಗಾಯಿತ ಮಹಾಸಭಾದ ಉಪಾಧ್ಯಕ್ಷರು ಹಾಗೂ ನಿವೃತ್ತ ನ್ಯಾಯಾಧೀಶರಾದ ಕೆಂಪನಗೌಡ್ರು ವಹಿಸಲಿದ್ದು, ಪ್ರಾಸ್ತಾವಿಕವಾಗಿ ತಾವು ಮಾತನಾಡುವುದಾಗಿ ತಿಳಿಸಿದರು.

    ಮೈಸೂರಿನ ಜಿಲ್ಲಾ ಜಾಗತಿಕ ಮಹಾಸಭಾದ ಅಧ್ಯಕ್ಷ ಮಹದೇವಪ್ಪ ಆಶಯ ನುಡಿಗಳನ್ನಾಡುವರು. ಗ್ರಂಥ ಪರಿಚಯವನ್ನು ಸಾಹಿತಿ ಚಟ್ನಳ್ಳಿ ಮಹೇಶ್ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ರವೀಶ್ ಬಸಪ್ಪ ಮಾತನಾಡುವರು.

    ಮುಖ್ಯ ಅತಿಥಿಗಳಾಗಿ ಜಿ.ಜ.ಲಿಂ.ಮ.ಸಭಾದ ಉಪಾಧ್ಯಕ್ಷ ಎಂ.ಎಸ್. ನಿರಂಜನ್, ಬೆಂಗಳೂರಿನ ಮುಕ್ತಾಕಾಗಲಿ, ಮಹಿಳಾ ಘಟಕದ ಅಧ್ಯಕ್ಷೆ ಗಾಯಿತ್ರಮ್ಮ ಭಾಗವಹಿಸಲಿದ್ದು, ಕಡೂರಿನ ಅಕ್ಕನ ಬಳಗದ ವತಿಯಿಂದ ವಚನಗಾಯನ ಏರ್ಪಡಿಸಲಾಗಿದೆ ಎಂದರು.

    ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಮುದಾಯದವರು, ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

    ಪತ್ರಿಕಾಗೋಷ್ಠಿಯಲ್ಲಿ ತರೀಕೆರೆ ತಾಲ್ಲೂಕು ಜಾಗತಿಕ ಲಿಂಗಾಯಿತ ಮಹಾಸಭಾದ ಅಧ್ಯಕ್ಷ ಜಿ.ಎಲ್. ಚಂದ್ರಶೇಖರ್, ಕಡೂರು ತಾಲ್ಲೂಕು ಘಟಕದ ಅಧ್ಯಕ್ಷ ಹೆಚ್.ಪಿ. ಗಣೇಶ್, ಜಿಲ್ಲಾ ಸಂಚಾಲಕ ಬಿ.ಎನ್. ಸುರೇಶ್ ಉಪಸ್ಥಿತರಿದ್ದರು.

    April 25 Vachana Darshan Mithya-Satya Granth Release Ceremony

  • ಲೋಕಾಯುಕ್ತ ತನಿಖೆಗೆ ಸಂಪೂರ್ಣ ಸಹಕಾರ ಉಸ್ತುವಾರಿ ಸಚಿವ ಜಾರ್ಜ್

    1. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು ಇದರಲ್ಲಿ ಸಚಿವ ಜಾರ್ಜ್ ಅವರ ಪಾತ್ರವಿದೆ ಎಂದು ಬಿಜೆಪಿ ಅಶ್ವತ್ ನಾರಾಯಣ್ ಲೋಕಾಯುಕ್ತಕ್ಕೆ ದೂರು ನೀಡಿದ್ದು ಒಳ್ಳೆಯ ಕಾರ್ಯ ಪ್ರತಿ ಬಾರಿ ಆರೋಪ ಮಾಡಿ ದೂರ ಸರಿಯುತ್ತಿದ್ದ ಬಿಜೆಪಿ ಯವರು ಇದೀಗ ದೂರು ನೀಡಿರುವುದು ಒಳ್ಳೆಯದು ಎಂದು ವ್ಯಂಗ್ಯವಾಡಿದರು ಲೋಕಾಯುಕ್ತ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಹಗರಣದ ವಿಚಾರದಲ್ಲಿ ತಾರ್ಕಿಕ ಅಂತ್ಯ ಕಾಣಬೇಕು ಎಂಬುದು ನಮ್ಮ ಆಶಯ ಎಂದರು

      Oplus_131072
  • ಚೀಟಿ ವ್ಯವಹಾರಕ್ಕೆ ಅಮೃತಾಪುರ ಗ್ರಾಮದಲ್ಲಿ ಯುವಕ ಕೊಲೆ

    ಚೀಟಿ ವ್ಯವಹಾರಕ್ಕೆ ಅಮೃತಾಪುರ ಗ್ರಾಮದಲ್ಲಿ ಯುವಕ ಕೊಲೆ

    ತರೀಕೆರೆ: ಚೀಟಿ ಹಣದ ವಿಚಾರವಾಗಿ ಯುವಕನನ್ನು ಹತ್ಯೆ ಮಾಡಿರುವ ಘಟನೆ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜುನಾಯ್ಕ (೨೬) ಎಂಬ ಯುವಕನನ್ನು ರುದ್ರೇಶ್ ನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ.

    ಕೊಲೆ ತಪ್ಪಿಸಲು ಬಂದ ಅವಿನಾಶ್ ಎಂಬಾತನಿಗೂ ರುದ್ರೇಶ್ ಕಚ್ಚಿ ಗಾಯಗೊಳಿಸಿದ್ದಾನೆ. ಅಮೃತಾಪುರ ಸೇವಾಲಾಲ್ ಸಂಘದಲ್ಲಿ ಚೀಟಿ ವ್ಯವಹಾರ ನಡೆಸಲಾಗುತ್ತಿತ್ತು, ಸಂಜುನಾಯ್ಕ ಚೀಟಿ ಸರಿಯಾಗಿ ಕಟ್ಟದೇ ಗಲಾಟೆ ಮಾಡುತ್ತಿದ್ದ. ಹೀಗಾಗಿ ಚೀಟಿ ಸದಸ್ಯರು ನೀನು ಈ ಚೀಟಿಗೆ ಬೇಡ ಎಂದು ವಾಪಸ್ ಕಳುಹಿಸಿದ್ದಾರೆ.

    ಮನೆಗೆ ಬಂದ ಸಂಜುನಾಯ್ಕ ಚೀಟಿ ಸದಸ್ಯರೊಂದಿಗೆ ಫೋನಿನಲ್ಲಿ ವಾಗ್ವಾದ ನಡೆಸಿದ್ದ, ಈ ವಾಗ್ವಾದ ಜಗಳಕ್ಕೆ ತಿರುಗಿದೆ. ಈ ವೇಳೆ ರುದ್ರೇಶ್‌ನಾಯ್ಕ ಎಂಬಾತ ಸಂಜುನಾಯ್ಕಗೆ ದೊಣ್ಣೆಯಲ್ಲಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸಂಜು ನಾಯ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೊಲೆ ಮಾಡಿದ ಆರೋಪಿ ರುದ್ರೇಶ್ ನಾಯ್ಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತರೀಕೆರೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೊಲೆಮಾಡಿದ್ದ ವ್ಯಕ್ತಿಯನ್ನು ೨ ಗಂಟೆಯೊಳಗೆ ಬಂಧಿಸಿದ್ದಾರೆ. ಅಮೃತಾಪುರದಲ್ಲಿ ಭಾನುವಾರ ರಾತ್ರಿ ೧೦ ಗಂಟೆಗೆ ರುದ್ರೇಶನಾಯ್ಕ ದೊಣ್ಣೆಯಿಂದ ಥಳಿಸಿ ಸಂಜುನಾಯ್ಕನನ್ನು ಕೊಲೆಮಾಡಿದ್ದು, ಈ ಕುರಿತು ಯಶವಂತ್‌ನಾಯ್ಕ ತರೀಕೆರೆ ಪೊಲೀಸರಿಗೆ ದೂರು ನೀಡಿದ್ದು, ಕೊಲೆ ಆರೋಪಿ ಬಂಧನಕ್ಕೆ ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ.ಜಯಕುಮಾರ್, ಡಿವೈಎಸ್ಪಿ ಹಾಲಮೂರ್ತಿರಾವ್ ಮಾರ್ಗದರ್ಶನದಲ್ಲಿ ವೃತ್ತನಿರೀಕ್ಷಕ ರಾಮಚಂದ್ರನಾಯಕ್ ನೇತೃತ್ವವದಲ್ಲಿ ೨ ತಂಡಗಳನ್ನು ರಚಿಸಲಾಗಿತ್ತು. ಕೊಲೆ ಪ್ರಕರಣ ದಾಖಲಾದ ೨ ಗಂಟೆಯೊಳಗೆ ಪರಾರಿಯಾಗುತ್ತಿದ್ದ ರುದ್ರೇಶನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ.

    Youth murdered in Amritapura village over lottery ticket deal

  • ಸಹಕಾರ ಸಂಸ್ಥೆಗಳು ರಾಜಕೀಯ ಮುಕ್ತವಾಗಿರಲಿ

    ಸಹಕಾರ ಸಂಸ್ಥೆಗಳು ರಾಜಕೀಯ ಮುಕ್ತವಾಗಿರಲಿ

    ಚಿಕ್ಕಮಗಳೂರು: ಯಾವುದೇ ಸಹಕಾರ ಸಂಸ್ಥೆಗಳು ರಾಜಕೀಯ ಮುಕ್ತವಾಗಿ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಿ ಆಡಳಿತ ಮಂಡಳಿ ಆಯಾ ಸಂಸ್ಥೆಗಳನ್ನು ಆರ್ಥಿಕವಾಗಿ ಲಾಭದ ಹಾದಿಗೆ ಕೊಂಡೊಯ್ಯಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
    ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಇಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಮತ್ತಿತರ ಸಹಕಾರ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಸಾರ್ವಜನಿಕರ ಅನುಕೂಲಕ್ಕಾಗಿ  ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ನೋಂದಾಯಿಸಿ ಅವುಗಳನ್ನು ಸರ್ಕಾರದ ನಿಯಮಾನುಸಾರ ಆರ್ಥಿಕ ಶಿಸ್ತು ಕಾಪಾಡಿಕೊಂಡು ರೈತರಿಗೆ ಉಪಯೋಗ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದ ಅವರು, ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಣಕಾಸಿಗೆ ಸಂಬಂಧಪಟ್ಟ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
    ೨೦೨೫ ಮಾರ್ಚ್ ೩೧ ರ ಅಂತ್ಯಕ್ಕೆ ಬಾಕಿ ಇರುವ ಅದಿಭಾರ ಅರ್ಜಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಣವನ್ನು ವಸೂಲಿ ಮಾಡಲು ಸಂಸ್ಥೆಗಳ ಅಧಿಕಾರಿಗಳು, ಆಡಳಿತ ಮಂಡಳಿ ಕ್ರಮ ಕೈಗೊಂಡು ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಹೇಳಿದರು.
    ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಆರ್ಥಿಕವಾಗಿ ಹಿನ್ನಡೆಯಾಗಿರುವ ಸಹಕಾರಿ ಸಂಸ್ಥೆಗಳನ್ನು ಗಮನಿಸಿ ಅವುಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮೇಲ್ವಿಚಾರಕರು, ಅಭಿವೃದ್ಧಿ ಅಧಿಕಾರಿಗಳು  ಆಗಿಂದಾಗ್ಗೆ ಹೆಚ್ಚು ಹೆಚ್ಚು ಸಭೆಗಳನ್ನು ನಡೆಸಿ ಸಹಕಾರ ಸಂಸ್ಥೆಗಳಲ್ಲಿ ನಡೆಯುವ ಆರ್ಥಿಕ ವ್ಯವಹಾರಗಳನ್ನು ಗಮನಿಸಿ ಆರ್ಥಿಕ ಶಿಸ್ತು ಕಾಪಾಡಿಕೊಳ್ಳಲು ತಿಳಿಸಬೇಕು. ಯಶಸ್ವಿನಿ ಯೋಜನೆ ಶೇ.೧೦೦ ರಷ್ಟು ಗುರಿ ಸಾಧಿಸಬೇಕು ಎಂದ ಸಚಿವರು, ಪ್ರತೀ ವರ್ಷ ಎಲ್ಲ ಬ್ಯಾಂಕ್, ಸಂಘಗಳ ಲೆಕ್ಕಪರಿಶೋಧನೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.
    ಹಣಕಾಸು ವಿಚಾರದಲ್ಲಿ ಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕಾಲ ಕಾಲಕ್ಕೆ ನೀಡುವ ರೈತರ ಉಪಯುಕ್ತ ಯೋಜನೆಗಳನ್ನು ಸರಿಯಾದ ಸಮಯಕ್ಕೆ ಅರ್ಹ ಫಲಾನುಭವಿಗಳಿಗೆ ನೀಡಬೇಕು. ರಾಜ್ಯ ಸರ್ಕಾರ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಅದೇ ರೀತಿ ಕಾನೂನು ಇತಿಮಿತಿಯನ್ನು ಅರಿತು ವಸೂಲಿ ಕ್ರಮಗಳನ್ನು ಕೈಗೊಳ್ಳಬೇಕು. ಲೆಕ್ಕಪತ್ರಗಳ ಮಾಹಿತಿಗಳನ್ನು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸೈಬರ್ ಅಪರಾಧಗಳು ನಡೆಯದಂತೆ ಎಚ್ಚರ ವಹಿಸಿ ಕೆಲಸ ಮಾಡಬೇಕು ಎಂದರು.
    ಇದಕ್ಕೂ ಮುನ್ನ ಸಚಿವರನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಉಪಾಧ್ಯಕ್ಷರಾದ ಹೆಚ್.ಎಂ.ಸತೀಶ್ ಹಾಗೂ ನಿರ್ದೇಶಕರುಗಳು ಸಚಿವರನ್ನು ಗೌರವಿಸಿ ಅಭಿನಂದಿಸಿದರು.
    ಜಿಲ್ಲೆಯ ಹಿರಿಯ ಸಹಕಾರಿ ಬಿ.ಸಿ.ಲೋಕಪ್ಪಗೌಡ ಅವರು ಮಾತನಾಡಿ, ಸಹಕಾರ ಕೇಂದ್ರ ಬ್ಯಾಂಕ್ ಕೆಲಸ ಹಾಗೂ ಇರುವ ಸಮಸ್ಯೆಗಳನ್ನು ಸಚಿವರ ಮುಂದೆ ಹಂಚಿಕೊಂಡರು. ಅವುಗಳಲ್ಲಿ ನಬಾರ್ಡ್ ಯೋಜನೆಯಲ್ಲಿ ಕೃಷಿ ಕ್ಷೇತ್ರಕ್ಕೆ ಶೇ. ೫೮ ರಷ್ಟು ಮೊತ್ತ ಕಡಿಮೆಯಾಗಿ ಹಲವು ಗೊಂದಲಗಳು ತಲೆದೋರಿವೆ. ಅದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಡಿಸಿಸಿ ಬ್ಯಾಂಕ್ ಇಂದು ೧೪೨೬.೭೯ ಕೋಟಿ ಹಣ ಠೇವಣಿ ಹೊಂದಿದ್ದರೆ, ೧೩೪೮.೮೧ ಕೋಟಿ ಸಾಲ ವಿತರಣೆ ಮಾಡಿದೆ. ಜಿಲ್ಲೆಯ ರೈತರ, ಗ್ರಾಹಕರ ವಿಶ್ವಾಸ, ನಂಬಿಕೆ ಗಳಿಸಿದೆ. ಬ್ಯಾಂಕ್‌ನ ಆಡಳಿತ ಮಂಡಳಿ ಮಾರ್ಗದರ್ಶನದಿಂದ ನಿರಂತರ ಲಾಭ ಗಳಿಸುತ್ತಾ ಪ್ರಸ್ತುತ `ಎ’ ಗ್ರೇಡ್‌ನಲ್ಲಿ ಗುರುತಿಸಿಕೊಂಡು ಪ್ರಸಕ್ತ ಸಾಲಿನಲ್ಲಿ ೬.೫೮ ಕೋಟಿ ರೂ.ಗಳ ಲಾಭ ಗಳಿಸಿದೆ ಎಂದು ತಿಳಿಸಿದರು.
    ಶಾಸಕರಾದ ಟಿ.ಡಿ.ರಾಜೇಗೌಡ, ಹೆಚ್.ಡಿ.ತಮ್ಮಯ್ಯ, ನಿರ್ದೇಶಕರುಗಳಾದ ರಾಮಸ್ವಾಮಿ, ಹಳಸೆ ಶಿವಣ್ಣ, ರಾಮಜ್ಜ, ಪರಮೇಶ್ವರಪ್ಪ, ಬಸವರಾಜಪ್ಪ ಮತ್ತಿತರ ನಿರ್ದೇಶಕರುಗಳು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಿ.ಎಸ್.ರಮಣ್ಣ ರೆಡ್ಡಿ, ಮಹೇಶ್, ಸಹಕಾರ ಸಂಘಗಳ ಉಪ ನಿಬಂಧಕ ತೇಜಸ್ವಿನಿ, ಬ್ಯಾಂಕ್ ವ್ಯವಸ್ಥಾಪಕ ತಿಮ್ಮಯ್ಯ ಹಾಗೂ ಹಿರಿಯ ಅಧಿಕಾರಿಗಳು, ವಿವಿಧ ಸಹಕಾರ ಬ್ಯಾಂಕ್‌ಗಳ  ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತಿತರರು ಸಭೆಯಲ್ಲಿದ್ದರು.
    Cooperatives should be free from politics.
  • ಮೊಬೈಲ್ ಗ್ರಾಹಕರಿಗೆ ಅಡೆತಡೆಗಳಿಲ್ಲದೇ ಸುಲಲಿತ ಸಿಗ್ನಲ್

    ಮೊಬೈಲ್ ಗ್ರಾಹಕರಿಗೆ ಅಡೆತಡೆಗಳಿಲ್ಲದೇ ಸುಲಲಿತ ಸಿಗ್ನಲ್

    ಚಿಕ್ಕಮಗಳೂರು:  ಮೊಬೈಲ್ ಗ್ರಾಹಕರಿಗೆ ಅಡೆತಡೆಗಳಿಲ್ಲದೇ ಸುಲಲಿತವಾಗಿ ಸಿಗ್ನಲ್ ಲಭಿಸುವ ಸದುದ್ದೇಶದಿಂದ ನೂತನವಾಗಿ ಬಿ.ಎಸ್.ಎನ್.ಎಲ್. ಟವರ್ ನಿರ್ಮಿಸಿ ಗ್ರಾಮಸ್ಥರಿಗೆ ಅನು ಕೂಲ ಮಾಡಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂ ಜಾರಿ ಹೇಳಿದರು.

    ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸೋಮವಾರ ೮೦ ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಿಎಸ್‌ಎನ್‌ಎಲ್ ಸಂಸ್ಥೆಯ ಸೆಟಲೈಟ್ ಬೇಸಿಕ್ ಮೊ ಬೈಲ್ ಟವರ್ ಸಾರ್ವಜನಿಕರಿಗೆ ಸಮರ್ಪಣೆಗೊಳಿಸಿ ಅವರು ಮಾತನಾಡಿದರು.

    ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಹೊರಟ್ಟಿ ಗ್ರಾಮಕ್ಕೆ ಸೆಂಟಲೈಟ್ ಟವರ್ ನಿರ್ಮಾಣಗೊಂಡಿದೆ. ಇದರಿಂದ ಮೊಬೈಲ್ ಗ್ರಾಹಕರಿಗೆ ಸಿಗ್ನಲ್‌ಗಳು ಅಡೆತಡೆಗಳಿಲ್ಲದೇ ಮಾತುಕತೆ ಮಾಡಬಹುದು. ಈ ಹಿಂ ದಿನ ಸಂಸದರು ಈ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದೀಗ ಪೂರ್ಣಗೊಳಿಸಿ ಸಮರ್ಪಿಸಿದ್ದೇವೆ ಎಂದು ತಿಳಿಸಿದರು.

    ಹೊರಟ್ಟಿ ಬೆಟ್ಟದ ತುದಿಯಲ್ಲಿರುವ ಗ್ರಾಮವಾದ ಹಿನ್ನೆಲೆ ಮಾಲಿನ್ಯ ರಹಿತ ಹಾಗೂ ಕಲಶವಿಲ್ಲದ ಪರಿ ಸರವನ್ನು ಹೊಂದಿದೆ. ಆಧುನಿಕತೆ ಕಡಿಮೆಯಿದ್ದರೂ ಹಚ್ಚಹಸಿರಿನಂದ ಸ್ವರ್ಗದಂತೆ ಕಂಗೊಳಿಸುತ್ತಿದ್ದು ಮುಂದಿನ ದಿನಗಳಲ್ಲಿ ಆದ್ಯತೆಗನುಸಾರ ಮೂಲಭೂತ ಸೌಕರ್ಯಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

    ಬಿಜೆಪಿ ಮುಖಂಡ ದೀಪಕ್‌ದೊಡ್ಡಯ್ಯ ಮಾತನಾಡಿ ಚುನಾವಣೆ ಮುನ್ನ ಒಂದು ಪಕ್ಷಕ್ಕೆ ಸೀಮಿತರಾಗಿ ರುತ್ತೇವೆ. ಗೆಲುವಿನ ಬಳಿಕ ಸರ್ವಜನರ ಅಭಿವೃದ್ದಿಗೆ ಶ್ರಮಿಸಬೇಕು. ಆ ಸಾಲಿನಲ್ಲಿ ಸಂಸದರು ಜಿಲ್ಲೆಯಾದ್ಯಂ ತ ಪ್ರವಾಸ ಕೈಗೊಂಡು ಕೇಂದ್ರ ಸರ್ಕಾರದ ಸವಲತ್ತನ್ನು ಭೇದಭಾವಿಲ್ಲದೇ ಪೂರೈಸುತ್ತಿದ್ದಾರೆ ಎಂದು ತಿಳಿ ಸಿದರು.

    ಈ ಸಂದರ್ಭದಲ್ಲಿ ಬಾಳೂರು ಗ್ರಾ.ಪಂ. ಅಧ್ಯಕ್ಷ ಮಂಜುನಾಥ್, ಸದಸ್ಯ ಸಂದೀಪ್, ಮೂಡಿಗೆರೆ ಬಿಜೆ ಪಿ ಮಂಡಲ ಅಧ್ಯಕ್ಷ ಗಜೇಂದ್ರ, ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ, ಮುಖಂಡರುಗಳಾದ ಪರೀಕ್ಷಿತ್‌ಗೌಡ, ಭರತ್, ಮಂಜು ಹಾಗೂ ಗ್ರಾಮಸ್ಥರು ಹಾಜರಿದ್ದರು.

    Smooth signal without interruptions for mobile customers

  • ಗ್ರಾಮೀಣ ಭಾಗದ ಜನರ ಬದುಕು ಹಸನುಗೊಳಿಸಲು ಸರ್ವಪ್ರಯತ್ನ. ಶಾಸಕ ಶ್ರೀನಿವಾಸ್.

    1. ಅಜ್ಜಂಪುರ: ನಗರ ಪ್ರದೇಶಗಳಂತೆ ಗ್ರಾಮೀಣ ಭಾಗದಲ್ಲಿಯೂ ರಸ್ತೆ ಅಭಿವೃದ್ದಿ,ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಭಾಗದ ಜನರ ಬದುಕು ಹಸನುಗೊಳಿಸುವುದೇ ನಮ್ಮ ಮುಖ್ಯ ಉದ್ದೇಶ ಎಂದು ಶಾಕ ಶ್ರೀನಿವಾಸ್ ತಿಳಿಸಿದರು.
      ಭಾನುವಾರ ಅಜ್ಜಂಪುರ ತಾಲೂಕಿನ ಬೇಗೂರು ತಾಂಡ್ಯದಲ್ಲಿ ಸೇವಾಲಾಲ್ ಸಾಂಸ್ಕøತಿಕ ಭವನದ ಗುದ್ದಲಿ ಪೂಜೆ ಶುದ್ದಗಂಗಾ ನೀರಿನ ಘಟಕ ಉದ್ಘಾಟನೆ ರಸ್ತೆ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೆರಿಸಿ ಮಾತನಾಡಿದರು.
      ತಾವು ಶಾಸಕರದ ನಂತರ ಸರ್ಕಾರದ ಪ್ರತಿಯೊಂದು ಸೌಲಭ್ಯಗಳು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ ರೈತರ ಅನುಕೂಲಕ್ಕಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಮುದಾಯಭವನಗಳ ನಿರ್ಮಾಣ,ಗುಣಮಟ್ಟದ ರಸ್ತೆಗಳಿಗೆ ಒತ್ತು ನೀಡಲಾಗಿದೆ ಎಂದರು.
      ಇದೇ ಸಂಧರ್ಭದಲ್ಲಿ ಮುಖಂಡರಾದ ನಿರಂಜನ್ ಪಟೇಲ್,ಬೇಗೂರು ಗ್ರಾ,ಪಂ,ಉಪಾಧ್ಯಕ್ಷ ಸೋಮಶೇಖರ್,ಬಂಜಾರ ಸಮಾಜದ ಅಧ್ಯಕ್ಷ ನಾಗರಾಜು, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
  • ವಿಜೃಂಭಣೆ ಶ್ರೀದೇವಮ್ಮ ದೇವಿ ರಥೋತ್ಸವ.

    1. ಅರಸೀಕೆರೆ ತಾಲೂಕ್ ಟಿ,ಕೋಡಿಹಳ್ಳಿ ಗ್ರಾಮದ ಶ್ರೀ ದೇವಮ್ಮ ದೇವಿ ಮಹಾ ದಿವ್ಯ ರಥೋತ್ಸವ ಭಾನುವಾರ ಅತ್ಯಂತ ವಿಜೃಂಭಣೆಯಿಂದ ನೆರವೆರಿತು.
      ತಳಿರು ತೋರಣ ವಿವಿಧ ಹೂವುಗಳಿಂದ ವಿಶೇಷವಾಗಿ ಅಲಂಕರಿಸಿದ ರಥದಲ್ಲಿ ಗ್ರಾಮದ ಶ್ರೀ ದೇವಮ್ಮ ದೇವಿ,ಹಾಗೂ ತಳಲೂರು ಗ್ರಾಮದ ಬನ್ನಿಮಹಾಕಾಳಿ ಅಮ್ಮನವರನ್ನು ಕೂರಿಸಿ ಗ್ರಾಮದ ಧೂತರಾಯಸ್ವಾಮಿ,ಚಲುವರಾಯಸ್ವಾಮಿ,ಕೆಂಚಯರಾಯಸ್ವಾಮಿ.ದೇವರುಗಳ ಸಮ್ಮುಖದಲ್ಲಿ ಸಾವಿರಾರು ಭಕ್ತರು ಜಯಘೋಷದೊಂದಿಗೆ ರಥವನ್ನು ಎಳೆದರು.
      ರಥೋತ್ಸವಕ್ಕೂ ಮುನ್ನ ದೇವಿಯವರ ಮಧುವಣಿಗೆಶಾಸ್ತ್ರ,ಕಂಕಣ ಬಂಧನ,ಅಮ್ಮನವರಿಗೆ,ರುದ್ರಾಭಿಷೇಕ,ಧ್ವಜಾರೋಹಣ,ಕಳಸಾರೋಹಣ,
      ಸೂರ್ಯಮಂಡಲೋತ್ಸವ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳು ಜರುಗಿದವು.
      ಭಕ್ತರು ರಥದ ಗಾಲಿಗೆ ತೆಂಗಿನಕಾಯಿ ಹೊಡೆಯುವುದು, ರಥದ ಗಾಲಿಗೆ ಎಣ್ಣೆ ಹಚ್ಚುವ ಮೂಲಕ ಹರಕೆ ತೀರಿಸಿದರು.
      ರಥದ ಕಳಸಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಕೋರಿಕೆ ಹಿಡೆರುವಂತೆ ದೇವರಲ್ಲಿ ಪ್ರಾರ್ಥಿಸಿದ್ದು ವಿಶೇಷವಾಗಿತ್ತು.
      ಬಂದಂತಹ ಭಕ್ತಾಧಿಗಳಿಗೆ ಪಾನಕ ಫಲಹಾರ ಅನ್ನಸಂತರ್ಪಣೆ ಕಾರ್ಯ ನೆರವೆರಿತು.

     

  • ಸದೃಢ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ

    ಸದೃಢ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ

    ಚಿಕ್ಕಮಗಳೂರು: ಸದೃಢ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ. ಶಿಬಿರದಲ್ಲಿ ಪಾಲ್ಗೊಂಡು ಸದೃಢ ದೇಹ ಮತ್ತು ಮನಸ್ಸನ್ನು ಹೊಂದಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಮಕ್ಕಳಿಗೆ ಕಿವಿಮಾತು ಹೇಳಿದರು.

    ಭಾನುವಾರ ನಗರದ ಪೊಲೀಸ್ ಮೀಸಲು ಪಡೆ ಆಟದ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿರುವ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಪೊಲೀಸ್ ಇಲಾಖೆಯಿಂದ ೧೦ ದಿನಗಳ ಕಾಲ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ವಿವಿಧ ಆಟೋಟ ಸೇರಿದಂತೆ ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳ ಲಾಗಿದೆ ಎಂದರು.

    ಶಿಬಿರದಲ್ಲಿ ವಿವಿಧ ಆಟೋಟಗಳ ಜತೆಗೆ ಶೈಕ್ಷಣಿಕ ಪ್ರವಾಸ, ಹಾಲು ಉತ್ಪಾದನಾ ಕೇಂದ್ರ, ಕಾಫಿ ಎಸ್ಟೇಟ್, ಲೈಫ್‌ಲೈನ್ ಇಂಡಸ್ಟಿçà ಹಾಗೂ ಬೇಲೂರು, ಹಳೇಬೀಡಿಗೆ ಪ್ರವಾಸ ಕರೆದೊಯ್ಯಲಾಗುವುದು ಎಂದ ಅವರು, ಮಕ್ಕಳು ಬೆಳಿಗ್ಗೆ ೧೦ಗಂಟೆಯಿAದ ಮಧ್ಯಾಹ್ನ ೧ಗಂಟೆಯವರೆಗೂ ಶಿಬಿರದಲ್ಲಿ ಪಾಲ್ಗೊಂಡು ಉತ್ಸಹದಿಂದ ಇಲ್ಲಿ ನಡೆಯುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

    ವಿಷಯ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಯೋಗ ತರಬೇತಿದಾರರು ಯೋಗ ತಿಳಿಸಿಕೊಡಲಿದ್ದಾರೆ. ಹಾಗೇ ರಂಗ ತರಬೇತಿದಾ ರರು ರಂಗ ಕಲೆಯ ಬಗ್ಗೆ ಕಲಿಸಿಕೊಡಲಿದ್ದಾರೆ. ವೈದ್ಯರು ಶಿಬಿರಕ್ಕೆ ಆಗಮಿಸಿ ಪ್ರಥಮ ಚಿಕತ್ಸೆ ಎಂದರೇನು ಎನ್ನುವ ವಿಚಾರಗಳನ್ನು ತಿಳಿಸಿಕೊಡಲಿದ್ದಾರೆ ಹೀಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

    ಶಿಬಿರದಲ್ಲಿ ಪಾಲ್ಗೊಂಡಿರುವ ಮಕ್ಕಳು ತನ್ನ ಸ್ನೇಹಿತರನ್ನು ಅಕ್ಕಪಕ್ಕದಲ್ಲಿನ ಮಕ್ಕಳನ್ನು ಶಿಬಿರಕ್ಕೆ ಕರೆತಂದು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿದಿನ ನಡೆಯುವ ಇವೆಂಟ್‌ನಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನವನ್ನು ನೀಡಲಾಗುವುದು ಎಂದ ಅವರು, ಶಿಬಿರ ಆಯೋಜಿಸುವ ಉದ್ದೇಶ ಬೇಸಿಗೆ ರಜೆಯಲ್ಲಿ ಮಕ್ಕಳು ಬಹುತೇಕ ಮಕ್ಕಳು ಶಿಬಿರಗಳಿಗೆ ಹೋಗುತ್ತಾರೆ. ಆದರೆ, ಪೊಲೀಸ್ ಸಿಬ್ಬಂದಿ ಮಕ್ಕಳು ಸೇರಿದಂತೆ ಇತರೆ ಉದ್ಯೋಗಿಗಳ ಮಕ್ಕಳು ಶಿಬಿರಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಅಂತವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು, ಮಕ್ಕಳು ಹಾಗೂ ಪೋಷಕರು ಇದ್ದರು.

    A strong mind resides in a strong body.