Category: ಜಿಲ್ಲಾ ಸುದ್ದಿ

  • ಚಿಕ್ಕಮಗಳೂರು ಜಿಲ್ಲೆಯಾದ್ಯಂತ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ’

    ಚಿಕ್ಕಮಗಳೂರು ಜಿಲ್ಲೆಯಾದ್ಯಂತ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ’

    ಚಿಕ್ಕಮಗಳೂರು: ಸಾರ್ವಜನಿಕರ ದೂರು ಮತ್ತು ಅಹವಾಲುಗಳನ್ನು ಪಂಚಾಯಿತಿ ಮಟ್ಟದಲ್ಲಿ ಸ್ವೀಕರಿಸಿ ಇತ್ಯರ್ಥಪಡಿಸಲು ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಆರಂಭಿಸಿರುವ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

    ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ಭಾನುವಾರ ಏರ್ಪಡಿಸಿದ್ದ ಗಣ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು, “ಕಡೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದ್ದ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಈ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಮುಂದುವರಿಸಲು ಕ್ರಮ ವಹಿಸಲಾಗಿದೆ”, ಎಂದರು.

    “ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜತೆಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಉತ್ತಮ ರೀತಿಯಲ್ಲಿ ಸಾಧನೆ ಮಾಡಲಾಗುತ್ತಿದೆ. ನಾಗರಿಕ ಸೇವೆಗಳನ್ನು ಕಾಲಮಿತಿಯಲ್ಲಿ ಒದಗಿಸುವ ಸಕಾಲ ಯೋಜನೆಯ ಅನುಷ್ಠಾನದಲ್ಲಿ ನಮ್ಮ ಜಿಲ್ಲೆಯು ಇತ್ತೀಚಿನ ರ‍್ಯಾಂಕ್ ಪಟ್ಟಿಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದೆ. ‘ಪೋಡಿ ಮುಕ್ತ’ ಆಂದೋಲನ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಮುಂಚೂಣಿಯಲ್ಲಿದೆ”, ಎಂದು ಸಚಿವರು ಮಾಹಿತಿ ನೀಡಿದರು.

    “ನಮ್ಮ ದೇಶ ಸ್ವತಂತ್ರ ಭಾರತ ಎಂದು ಹೆಮ್ಮೆ ಪಡಲು ಹಾಗೂ ಗಣರಾಜ್ಯವಾಗಿ ರೂಪುಗೊಳ್ಳಲು ಆಗಿರುವ ತ್ಯಾಗ, ಬಲಿದಾನಗಳಿಗೆ ಲೆಕ್ಕವೇ ಇಲ್ಲ. ನಮ್ಮ ಪೂರ್ವಜರು ನಮ್ಮ ಭವಿಷ್ಯಕ್ಕಾಗಿ ತಮ್ಮ ರಕ್ತ, ಬೆವರುಗಳನ್ನು ಹರಿಸಿ ಸ್ಥಾಪಿಸಿದ ನಮ್ಮ ನೆಲದಲ್ಲಿ ಭಾರತೀಯ ಪ್ರಜೆಗಳಾದ ನಾವು ಸ್ವಾತಂತ್ರ್ಯದ ಉಸಿರಿನೊಂದಿಗೆ ಶಾಂತಿ ಹಾಗೂ ಸೌಹಾರ್ದಯುತ ಬದುಕಿನ ಅನುಭವವನ್ನು ಪಡೆಯುತ್ತಿದ್ದೇವೆ. ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಸಂವಿಧಾನದಿಂದಾಗಿ ‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಕಲ್ಪಿಸಲು ಸಾಧ್ಯವಾಗಿದೆ”, ಎಂದರು.

    “ಉತ್ತರದ ಕಾಶ್ಮೀರದಿಂದ ದಕ್ಷಿಣದ ತಮಿಳುನಾಡುವರೆಗೂ ಹಾಗೂ ಪಶ್ಚಿಮದ ಗುಜರಾತ್ ನಿಂದ ಪೂರ್ವದ ಅಸ್ಸಾಂ ವರೆಗೂ ವಿವಿಧ ಧಾರ್ಮಿಕ ಆಚರಣೆಯುಳ್ಳ ದೊಡ್ಡ ಭೂಭಾಗಗಳು, ವಿಭಿನ್ನ ಆಹಾರ ಪದ್ಧತಿ ಮತ್ತು ಸಾಂಸ್ಕೃತಿಕ ಹಿನ್ನೆಲೆಯುಳ್ಳ ಹಲವು ಬುಡಕಟ್ಟು ಪ್ರದೇಶಗಳನ್ನೂ ಒಳಗೊಂಡ ನಮ್ಮ ದೇಶಕ್ಕೆ ಸರಿಹೊಂದುವ ಸಂವಿಧಾನದ ಅವಶ್ಯಕತೆ ಇದ್ದ ಕಾಲಘಟ್ಟದಲ್ಲಿ ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನವನ್ನು ಅತ್ಯಂತ ಸಮರ್ಪಕವಾಗಿ ರಚನೆ ಮಾಡಿದ್ದು ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದ ಸಮಿತಿಯ ಅತಿ ದೊಡ್ಡ ಸಾಧನೆ. ಹಲವು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಅವುಗಳಲ್ಲಿರುವ ಉತ್ತಮ ಅಂಶಗಳನ್ನು ನಮ್ಮ ದೇಶದ ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಈ ಸಂವಿಧಾನವು ಭಾರತವನ್ನು ಒಂದು ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವಾಗಿಸಲು ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಒದಗಿಸಲು ಸಹಾಯ ಮಾಡಿದೆ”, ಎಂದು ಹೇಳಿದರು.

    “ದೇಶದ ಸಂವಿಧಾನದ ಬಹಳ ಮುಖ್ಯ ಅಂಶವಾದ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯನ್ನು ತನ್ನ ಎಲ್ಲಾ ಪ್ರಜೆಗಳಿಗೆ ನೀಡುವ ದೃಷ್ಟಿಯಿಂದ ನಮ್ಮ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ನಂತರ ಸಮಾನತೆಯ ಆಶಯವನ್ನು ಸಾರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿದೆ”, ಎಂದು ವಿವರಿಸಿದರು.

    ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, “ನಮ್ಮ ಜಿಲ್ಲೆಯ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶಾಂತಿಯುತವಾಗಿ ದತ್ತ ಜಯಂತಿ, ಉರುಸ್ ಆಚರಣೆ, ಸಾರ್ವಜನಿಕ ಗಣಪತಿ ಉತ್ಸವ, ಹಾಗೂ ಕ್ರಿಸ್‌ಮಸ್ ಆಚರಣೆಯಂತಹ ಧಾರ್ಮಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ಸಂಪನ್ನಗೊಳ್ಳುವ ಮೂಲಕ ಸಂವಿಧಾನದ ಜಾತ್ಯತೀತ ಆಶಯಗಳನ್ನು ಈಡೇರಿಸುತ್ತಿದೆ”, ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಶಾಸಕ ಎಚ್‌.ಡಿ.ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ ಪ್ರಾಣೇಶ್‌, ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ.ರವಿ, ಭದ್ರಾ ಕಾಡಾ ಅಧ್ಯಕ್ಷ ಡಾ. ಅಂಶುಮಂತ್‌, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್‌. ಹರೀಶ್‌, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್‌ ಅಹಮದ್‌, ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಓ ಕೀರ್ತನಾ ಮತ್ತಿತರರು ಪಾಲ್ಗೊಂಡಿದ್ದರು.

    ‘Panchayat Katte and Gram Spandana’ across Chikkamagaluru district

  • ಕುಸುಮ್- ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು

    ಕುಸುಮ್- ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು

    ಚಿಕ್ಕಮಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ರೈತರ ಕೃಷಿ ಪಪ್ ಸೆಟ್ ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಕುಸುಮ್-ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕುಸುಮ್- ಬಿ ಯೋಜನೆಯಡಿ ರೈತರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳನ್ನು ಸೋಲರೈಸೇಷನ್ ಮಾಡಲಾಗುತ್ತಿದೆ. ಕುಸುಮ್-ಸಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿ ರೈತರಿಗೆ ಪೂರೈಸಲಾಗುತ್ತದೆ”, ಎಂದು ತಿಳಿಸಿದರು.

    “ರಾಜ್ಯದಲ್ಲಿ ಪ್ರಸ್ತುತ 17,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಅದಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ. ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವುದು ಮತ್ತು ಕುಸುಮ್-ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ ರೈತರಿಗೆ ವಿದ್ಯುತ್ ಪೂರೈಸುವುದರಿಂದ ಬೇಡಿಕೆಯ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತಿದೆ”, ಎಂದು ತಿಳಿಸಿದರು.

    “ಕುಸುಮ್-ಸಿ ಯೋಜನೆಯಡಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಾಗ ಬೇಕಾಗುತ್ತದೆ. ಸರ್ಕಾರಿ ಜಾಗ ಇದ್ದರೆ ಅದನ್ನು ಉಚಿತವಾಗಿ ಗುತ್ತಿಗೆದಾರರಿಗೆ ನೀಡಲಾಗುವುದು. ಅವರು ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರೂ.ನಂತೆ ನೀಡಬೇಕು.ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಇಟ್ಟು ಸೋಲಾರ್ ಘಟಕ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿ ಅಭಿವೃದ್ಧಿ ಅಥವಾ ನೀರು ಪೂರೈಕೆ ಕಾಮಗಾರಿಗೆ ಬಳಸಿಕೊಳ್ಳಲಾಗುವುದು. ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದರೆ ಖಾಸಗಿಯವರಿಂದ ಭೂಮಿ ಪಡೆದು ಅವರಿಗೆ ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರು. ಪಾವತಿಸಲಾಗುವುದು”, ಎಂದು ಹೇಳಿದರು.

    ರಾಜ್ಯದಲ್ಲಿ ಟ್ರಾನ್ಸ್ ಫಾರ್ಮರ್ ಸಮಸ್ಯೆ ಇಲ್ಲ:
    “ರಾಜ್ಯದಲ್ಲಿ ಟ್ರಾನ್ಸ್ ಫಾರ್ಮರ್ ಗಳ ಕೊರತೆ ಇಲ್ಲ. ಈಗಾಗಲೇ ರಾಜ್ಯಾದ್ಯಂತ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಗಳನ್ನು ಸ್ಥಾಪಿಸಿ ದಾಸ್ತಾನು ಮಾಡಲಾಗಿದೆ. ಟ್ರಾನ್ಸ್ ಫಾರ್ಮರ್ ಗಳ ಸಮಸ್ಯೆ ಎದುರಾದರೆ ಟೋಲ್ ಫ್ರೀ ನಂಬರ್ 1912ಗೆ ಕರೆ ಮಾಡಿದ 72 ಗಂಟೆಗಳಲ್ಲಿ ಟ್ರಾನ್ಸ್ ಫಾರ್ಮರ್ ಆಳವಡಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ”, ಎಂದರು.

    “ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನ ಸಭೆ ನಡೆಸಿದ್ದೇನೆ. ಎಲ್ಲಿಯೂ ಟ್ರಾನ್ಸ್ ಫಾರ್ಮರ್ ಗಳ ಕೊರತೆ ಇರುವ ಬಗ್ಗೆ ಮಾಹಿತಿ ಬಂದಿಲ್ಲ. ಜನರಿಗೆ ಸಮರ್ಪಕವಾಗಿ ವಿದ್ಯುತ್ ಒದಗಿಸುವುದು ಇಂಧನ ಇಲಾಖೆಯ ಗುರಿಯಾಗಿದೆ”, ಎಂದರು.

    “ರಾಜ್ಯದಲ್ಲಿ 4.50 ಲಕ್ಷ ಅಕ್ರಮ ಪಂಪ್ ಸೆಟ್ ಗಳಿದ್ದವು. ಈ ಪೈಕಿ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಬೇಕಾಗಿದೆ. ಹೀಗಾಗಿ ವಿದ್ಯುತ್ ಲೈನ್ ನಿಂದ 500 ಮೀಟರ್ ಒಳಗಡೆ ಇರುವ ಕೊಳವೆ ಬಾವಿಗಳಿಗೆ ಸಂಪರ್ಕ ಸಕ್ರಮಗೊಳಿಸಲಾಗುವುದು. 500 ಮೀಟರ್ ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಕುಸುಮ್- ಬಿ ಯೋಜನೆ ಅಡಿ ಸೌರ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ”, ಎಂದು ಮಾಹಿತಿ ನೀಡಿದರು.

    “ಗಣರಾಜ್ಯೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದರಿಂದಾಗಿ ಗಣರಾಜ್ಯೋತ್ಸವ ಒಂದು ರೀತಿಯ ಹಬ್ಬವಾಗಿ ಪರಿವರ್ತನೆಯಾಗಿದೆ. ಇಲ್ಲಿ ನಮ್ಮ ಸಂಸ್ಕೃತಿ ಹಾಗೂ ಆಹಾರ ಪದ್ಧತಿಯನ್ನು ಪರಿಚಯ ಮಾಡುವ ಕೆಲಸ ಮಾಡಲಾಗಿದೆ ಎಂದರು.ಅವರಿಗೆ ಮನವಿ ಮಾಡಲಾಗಿದೆ”, ಎಂದು ಹೇಳಿದರು.

    Emphasis on solar power generation under Kusum-C scheme

  • ಭಾರತ ವಿಶ್ವದಲ್ಲೇ ಅತೀ ದೊಡ್ಡ-ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ

    ಭಾರತ ವಿಶ್ವದಲ್ಲೇ ಅತೀ ದೊಡ್ಡ-ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ

    ಚಿಕ್ಕಮಗಳೂರು: ಭಾರತ ವಿಶ್ವದಲ್ಲೇ ಅತೀ ದೊಡ್ಡ ಹಾಗೂ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಭಾನುಮತಿ ಬಿ.ಸಿ. ಹೇಳಿದರು.
    ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ  ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಭಾರತವು ಆಡಳಿತಾತ್ಮಕವಾಗಿ ಭೌಗೋಳಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ವಿಶಿಷ್ಟತೆಯನ್ನು ಹೊಂದಿದ ದೇಶವಾಗಿದೆ. ಅಂಬೇಡ್ಕರ್ ನೀಡಿದ ಸಂವಿಧಾನದಿಂದಲೇ ೧೮ ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯರಿಗೂ ಮತದಾನ ಮಾಡುವ ಹಕ್ಕಿದೆ. ಅದೇ ರೀತಿ ಭಾರತೀಯ ಪ್ರಜೆಗಳು ಜವಾಬ್ದಾರಿಯಿಂದ ನಿರ್ವಹಿಸಬೇಕಾದ ಕರ್ತವ್ಯಗಳನ್ನು ತಿಳಿಸಿದೆ ಎಂದು ಹೇಳಿದರು.
    ಉತ್ತಮ ರಾಜಕೀಯ ವ್ಯವಸ್ಥೆಯನ್ನು ಆಯ್ಕೆ ಮಾಡುವಲ್ಲಿ ಮತದಾನ ಪ್ರಮುಖ ಪಾತ್ರವಹಿಸುತ್ತದೆ. ಪ್ರತಿಯೊಂದು ಮತಕ್ಕೂ ಅಮೂಲ್ಯವಾದ ಮೌಲ್ಯವಿದ್ದು, ಒಂದು ಮತದಿಂದ ಸೋಲು ಗೆಲುವನ್ನು ಕಂಡಿರುವ ಉದಾಹರಣೆಗಳಿವೆ. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ೨೦೨೫ನೇ ಮತದಾರರ ದಿನಾಚರಣೆಯನ್ನು ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ  ಎಂದರು.
    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಮಾತನಾಡಿ ಮತದಾನ ಎಂಬುದು ವಜ್ರಾಯುಧ ಇದ್ದಂತೆ ಮತದಾರರು ಯಾವುದೇ ಆಸೆ, ಆಮಿಷ, ಜಾತಿ, ಧರ್ಮಕ್ಕೆ ಮರುಳಾಗದೆ ಮತದಾನದ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಸಬೇಕು. ೧೮ ವರ್ಷ ತುಂಬಿದ ಎಲ್ಲಾ ಯುವಕ, ಯುವತಿಯರು ಮತದಾರರ ಪಟ್ಟಿಯಲ್ಲಿ ತಪ್ಪದೆ ತಮ್ಮ ಹೆಸರು ಸೇರಿಸಬೇಕು ಎಂದ ಅವರು. ಸಂವಿಧಾನದ ಘನತೆ ಎತ್ತಿ ಹಿಡಿಯಲು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ಮತ ಹಾಕಬೇಕೆಂದು ತಿಳಿಸಿದರು.
    ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ೨೦೧೧ ರಿಂದ ಆಚರಿಸಲಾಗುತ್ತಿದೆ. ಅಂದಿನ ರಾಷ್ಟ್ರಪತಿ ಪ್ರತಿಭಾ ದೇವಿ ಸಿಂಗ್ ಪಾಟೀಲ್ ಅವರು ಭಾರತದ ಚುನಾವಣಾ ಆಯೋಗದ ೬೧ನೇ ಸಂಸ್ಥಾಪನಾ ದಿನದಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿದರು ಎಂದ ಅವರು. ಮತದಾರರನ್ನು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಲ್ಲಿ ಪ್ರೇರೇಪಿಸುವ ಸಲುವಾಗಿ ಹಾಗೂ ಅವರಲ್ಲಿ ಮತದಾನದ ಮಹತ್ವದ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ ೨೫ ರಂದು ಮತದಾನದ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
    ಪ್ರತಿ ಚುನಾವಣೆಯಲ್ಲೂ ಹೆಚ್ಚು ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡುತ್ತಿರುವುದನ್ನು ಕಾಣುತ್ತೇವೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಕಡಿಮೆ ಮತದಾನ ಮಾಡುವುದನ್ನು ಕಾಣುತ್ತೇವೆ. ಮತದಾನದ ಮಹತ್ವದ ಕುರಿತು ಅರಿವು ಮೂಡಿಸುವ ಸಲುವಾಗಿ ಮತದಾನ ದಿನಾಚರಣೆಯಂತಹ ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳಲಾಗುತ್ತಿದೆ. ೧೮ ವರ್ಷ ತುಂಬಿದ  ಪ್ರತಿಯೊಬ್ಬ ಯುವಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದರು.
    ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್. ಎಸ್. ಕೀರ್ತನಾ ಮತದಾರರ ಪ್ರತಿಜ್ಞಾ ವಿಧಿ ಭೋದಿಸಿದರು. ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಗಳು ಹಾಗೂ ಮತದಾರರ ನೊಂದಣಾಧಿಕಾರಿ ರಶ್ಮಿ ಎಸ್.ಆರ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚಿಕ್ಕಮಗಳೂರು ತಾಲ್ಲೂಕು ತಹಸೀಲ್ದಾರ್ ಡಾ. ಸುಮಂತ್ ಎಲ್ಲರನ್ನೂ ಸ್ವಾಗತಿಸಿದರು.
    ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
    ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾಧಿಕಾರಿಗಳ ಕಛೇರಿಯ ಚುನಾವಣಾ ಶಾಖೆಯ ಸಿಬ್ಬಂದಿಗಳು, ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಸಿಬ್ಬಂದಿಗಳು ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಹಾಜರಿದ್ದರು.
    India is the largest and best democracy in the world.
  • ಭಾರತದ ಪ್ರತಿಯೊಬ್ಬ ಪ್ರಜೆಯು ಅನುಸರಿಸಬೇಕಾದ ಮಹಾಗ್ರಂಥಾ ಭಾರತೀಯ ಸಂವಿಧಾನ

    ಭಾರತದ ಪ್ರತಿಯೊಬ್ಬ ಪ್ರಜೆಯು ಅನುಸರಿಸಬೇಕಾದ ಮಹಾಗ್ರಂಥಾ ಭಾರತೀಯ ಸಂವಿಧಾನ

    ಚಿಕ್ಕಮಗಳೂರು:  ಸರ್ವರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ಹಾಗೂ ವಿಚಾರ, ಅಭಿವ್ಯಕ್ತಿ ಜೊತೆಗೆ ತಮ್ಮ ಇಚ್ಚೆಯ ಧರ್ಮವನ್ನು ಪಾಲಿಸುವ ಸ್ವಾತಂತ್ರ್ಯವನ್ನು ನೀಡಿ ಸರ್ವೇಜನೋ ಸುಖಿನೋ ಭವಂತು ಎಂದು ಹೇಳುವ ಮಾತಿನ ತಾತ್ವಿಕ ರೂಪವೇ ಭಾರತದ ಸಂವಿಧಾನ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಹೇಳಿದರು.

    ಸಂವಿಧಾನ ಸಮ್ಮಾನ್ ಅಭಿಯಾನದ ಅಂಗವಾಗಿ ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ನಿವಾಸದಲ್ಲಿ ಇಂದು ಆಯೋಜಿಸಿದ್ದ ಭೀಮ ಸಂಗಮ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ವಿಕಾಸ್ ಪುತ್ತೂರು ಬರೆದಿರುವ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕವನ್ನು ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

    ಭಾರತವು ಸರ್ವಧರ್ಮಗಳನ್ನು ಹೊಂದಿರುವ ಜಾತ್ಯಾತೀತ ರಾಷ್ಟ್ರ. ಇಲ್ಲಿ ಹಿಂದುಗಳು ಭಗವತ್ ಗೀತೆಯನ್ನು, ಮುಸ್ಲಿಂರು ಕುರಾನ್, ಕ್ರೈಸ್ತರು ಬೈಬಲ್ ಹಾಗೂ ಬೌದ್ಧರು ಧಮ್ಮವನ್ನು ಸೇರಿದಂತೆ ಎಲ್ಲ ಧರ್ಮಿಯರು ತಮ್ಮ ತಮ್ಮ ಧರ್ಮಗ್ರಂಥಗಳನ್ನು ಓದಿ ಅನುಸರಿಸುತ್ತಾರೆ. ಆದರೆ ಸರ್ವ ಧರ್ಮಿಯರು ಮೆಚ್ಚುವ, ಭಾರತದ ಪ್ರತಿಯೊಬ್ಬ ಪ್ರಜೆಯು ತಿಳಿದು ಅನುಸರಿಸಬೇಕಾದ ಮಹಾ ಗ್ರಂಥಾ ಭಾರತೀಯ ಸಂವಿಧಾನ. ಸರ್ವರಿಗೂ ಅನುಕೂಲಕರವಾದ ಸಂವಿಧಾನವನ್ನು ರಚಿಸಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಲ್ಲಿ ದೈವತ್ವ ಅಡಗಿದೆ ಎಂದರು.

    ಸಮಾಜದ ಕೆಳಸ್ಥರ ಕುಟುಂಬದಲ್ಲಿ ಜನಿಸಿ ಬಾಲ್ಯದಲ್ಲೇ ಜಾತಿ ನಿಂದನೆಯನ್ನು ಅನುಭವಿಸಿ. ಹೋರಾಟದ ಮೂಲಕ ಶಿಕ್ಷಣ ಪಡೆದು ವಿಶ್ವವೆ ಮೆಚ್ಚುವ ಮಹಾ ಮನಾವತವಾದಿಯಾದರು. ಆದರೂ ಸಂವಿಧಾನದಲ್ಲಿ ತಮ್ಮ ಜಾತಿ ನಿಂದನೆ ಮಾಡಿದ ಯಾವುದೇ ಮೇಲ್ವರ್ಗದವರ ವಿರುದ್ಧ ದ್ವೇಷ ಸಾರುವ ಕಾಯ್ದೆ ಕಾನೂನುಗಳು ರಚಿಸದೆ ಪ್ರತಿಯೊಬ್ಬರೂ ಗೌರವಿಸುವ ರೀತಿಯ ಸಮಾನತೆಯ ಸಂವಿಧಾನವನ್ನು ರಚಿಸಿ ನಮಗೆ ನಿಡಿದ್ದಾರೆ.

    ಅಂಬೇಡ್ಕರ್ ಈ ದೇಶದ ಆಸ್ತಿ ಪ್ರತಿಯೊಬ್ಬರು ಅವರ ತತ್ವ ಸಿದ್ಧಾಂತಗಳನ್ನು ಅನುಸರಿಸಬೇಕು ಎಂದ ಅವರು ಸಂವಿಧಾನದ ಮೂಲ ಆಶಯಗಳ ಪೂರಕವಾಗಿ ಭಿಮ ಸಂಗಮ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಸಮಾನತೆಯ ಶಿಕ್ಷಣವನ್ನು ಪ್ರತಿಯೊಬ್ಬರಿಗೂ ತಿಳಿಸುವ ಉದ್ದೇಶ ಹೊಂದಲಾಗಿದೆ. ಎಲ್ಲರೂ ಸಹೋದರತ್ವ ಗುಣಗಳನ್ನು ಅನುಸರಿಸಿ ದೇಶದ ಐಕ್ಯತೆಯನ್ನು ರಕ್ಷಿಸೋಣ ಎಂದು ತಿಳಿಸಿದರು.

    ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಮಾತನಾಡಿ ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಸಂಕ್ಷಿಪ್ತವಾಗಿ ನಿಮಿಷಗಳಲ್ಲಿ ವಿವರಿಸುವುದು ಅಸಾಧ್ಯ ಅವರ ಬದುಕಿನ ರೀತಿ ಪ್ರತಿಯೊಬ್ಬರಿಗೂ ಮಾರ್ಗದರ್ಶನವಾಗಿದೆ. ನಾವು ರಾಜಕಾರಣ ಆಯ್ಕೆ ಮಾಡಿರುವುದು ಕೇವಲ ಅಧಿಕಾರದ ಆಸೆಗಲ್ಲ. ಅಧಿಕಾರ ಒಂದು ಸಾಧನ ಮಾತ್ರ. ಸಮಾಜದಲ್ಲಿ ಪರಿವರ್ತನೆ ಹಾಗೂ ದೇಶದ ಉತ್ತಮ ಅಭಿವೃದ್ಧಿ ಕಾಣುವುದು ಮುಖ್ಯ ಉದ್ದೇಶವಾಗಿದೆ. ಆದರೆ ಇಂದಿಗೂ ಕೆಲ ವ್ಯಕ್ತಿಗಳು ಭಾರತೀಯ ಜನತ ಪಾರ್ಟಿಯ ವಿರುದ್ಧ ಸಂವಿಧಾನ ವಿರೋಧಿಗಳು, ಅಂಬೇಡ್ಕರ್ ವಿರೋಧಿಗಳು, ನೀವು ಮನುವಾದಿಗಳು, ಜಾತಿವಾದಿಗಳು ಜಾತಿಯತೆಯನ್ನು ಪ್ರೋತ್ಸಾಹಿಸುತ್ತೆವೆಂಬ ಅನೇಕ ಆರೋಪಗಳನ್ನು ಸಾರ್ವಜನಿಕವಾಗಿ ಹಾಗೂ ಖಾಸಗಿಯಾಗಿಯೂ ಹೇಳುತ್ತಿದ್ದಾರೆ.

    ಭಾರತೀಯ ಜನತ ಪಾರ್ಟಿಯು ಪ್ರತಿಯೊಬ್ಬರಲ್ಲೂ ಸಹೋದರತ್ವ, ಸಾಮರಸ್ವವನ್ನು ಬೆಳೆಸಲು ಸಾಮಾಜಿಕ ಪರಿವರ್ತನೆ ತರುವ ಉದ್ಧೇಶದಿಂದ ಕೇವಲ ಸಾರ್ವಜನಿಕವಾಗಿ ಅಲ್ಲದೇ ಮನೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಇಂತಹ ಕಾರ್ಯಕ್ರಮಗಳು ಜಾತಿಯತೆಯ ಬೇಲಿಯನ್ನು ಒಡೆದು ಹಾಕಲು ಉತ್ತಮ ಮಾರ್ಗವಾಗಿದೆ ಎಂದರು.

    ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಮಾತನಾಡಿ. ಪಕ್ಷದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನು ಯಾವುದೇ ತಾರತಮ್ಯವಿಲ್ಲದೇ ಸೋದರತ್ವ ಗುಣದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡರವರು ದೇಶದ ಪ್ರತಿಯೊಬ್ಬ ಪ್ರಜೆಯು ಸಹೋದರತ್ವ ಗುಣದಿಂದ ಒಂದು ಕುಟುಂಬದ ರೀತಿಯಲ್ಲಿ ಜೀವಿಸಬೇಕು ಎಂದು ಉದ್ದೇಶದಿಂದ ದೇಶದುದ್ದಗಲಕ್ಕು ಸಂವಿಧಾನ ಸಮ್ಮಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರು ಜೀವಿಸುತ್ತಿದ್ದೇವೆ ಅದರ ಮಹತ್ವವನ್ನು ಎಲ್ಲರಿಗೂ ಸಾರುವ ಹಾಗೂ ಒಗ್ಗಟ್ಟಿನ ಬಲವನ್ನು ಪ್ರದರ್ಶಿಸುವ ಮಹದಾಸೆಯಿಂದ ಜಿಲ್ಲೆಯಲ್ಲಿ ೧೦೦ಕ್ಕು ಅಧಿಕ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕೆ.ಪಿ ವೆಂಕಟೇಶ್, ವಿಜಯ್ ಕುಮಾರ್, ಕಲ್ಮುರುಡಪ್ಪ, ಪುಷ್ಪರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

    The Indian Constitution is the great scripture that every citizen of India must follow.

  • ಮಹಿಳೆಯರು ಶಿಕ್ಷಣ ಪಡೆದು ಸಬಲರಾದರೆ ಜೀವನದಲ್ಲಿ ಸಫಲರಾಗಬಹುದು

    ಮಹಿಳೆಯರು ಶಿಕ್ಷಣ ಪಡೆದು ಸಬಲರಾದರೆ ಜೀವನದಲ್ಲಿ ಸಫಲರಾಗಬಹುದು

    ಚಿಕ್ಕಮಗಳೂರು: ಮಹಿಳೆಯರು ಶಿಕ್ಷಣ ಪಡೆದು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಸಬಲರಾದರೆ ಜೀವನದಲ್ಲಿ ಸಫಲರಾಗಬಹುದು. ಪ್ರತಿಯೊಬ್ಬರು ಶಿಕ್ಷಣವಂತರಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಿ.ಸಿ ಮತ್ತು ಪಿ.ಎನ್.ಡಿ.ಟಿ ವಿಭಾಗ ಹಾಗೂ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಚಿಕ್ಕಮಗಳುರು ಇವರ ವತಿಯಿಂದ ನಗರದ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಚ್ಚು ಮಕ್ಕಳ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಹೆಣ್ಣು ಜಗದ ಕಣ್ಣು ಹೆಣ್ಣಿಲ್ಲದ ಪ್ರಪಂಚವನ್ನು ಊಹಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಹೆಣ್ಣು ಮಕ್ಕಳನ್ನು ಗೌರವಿಸಬೇಕು. ಸಮಾಜದಲ್ಲಿ ಹೆಣ್ಣನ್ನು ನೋಡುವ ದೃಷ್ಠಿ ಬದಲಾಗಬೇಕು. ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜರಿ ಮಾಡಿದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದು ಸಬಲರಾಗಬೇಕು ಎಂದರು.

    ಇತ್ತೀಚಿನ ದಿನಗಳಲ್ಲಿ ಪೋಷಕರಲ್ಲಿ ಹೆಣ್ಣು ಮಕ್ಕಳ ಮೇಲಿನ ನಿರ್ಲಕ್ಷ್ಯ ಹಾಗೂ ಗಂಡು ಮಕ್ಕಳ ಆದ್ಯತೆಯು ಹೆಣ್ಣು ಸಂತತಿ ಕಡಿಮೆಗೊಳ್ಳಲು ಕಾರಣವಾಗುತ್ತಿದೆ. ಇದರಿಂದ ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಪತ್ತೆ ಪ್ರಕರಣಗಳು ಹೆಚ್ಚುತ್ತಿವೆ ಇವು ಕಾನೂನು ಬಾಹೀರವಾಗಿದ್ದು ಇಂತಹ ಕೃತ್ಯ ಹೆಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಎಲ್ಲರಿಗೂ ಸಮಪಾಲು ಸಮಬಾಳು ಎಂಬಂತೆ ಪ್ರತಿಯೊಬ್ಬರಿಗೂ ಸ್ವತಂತ್ರವಾಗಿ ಜೀವಿಸುವ ಹಕ್ಕಿದೆ. ಹೆಣ್ಣು ಮಕ್ಕಳು ತಮ್ಮ ರಕ್ಷಣೆಗಿರುವ ಕಾನೂನು ಮತ್ತು ಹಕ್ಕುಗಳನ್ನು ಅರಿತು ಸಮಾಜದಲ್ಲಿ ಸ್ವಾವಲಂಭಿ ಜೀವನ ನಿರ್ವಹಿಸಿ ಎಂದು ತಿಳಿಸಿದರು.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಲಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿ. ಸರ್ಕಾರವು ಹೆಣ್ಣು ಭ್ರೂಣ ಹತ್ಯೆ ಮತ್ತು ಭ್ರೂಣ ಪತ್ತೆ ಹಚ್ಚುವಿಕೆಯನ್ನು ನಿರ್ಮೂಲನೆ ಮಾಡಿ ಮಹಿಳಾ ಸ್ವಾತಂತ್ರವನ್ನು ಎತ್ತಿ ಹಿಡಿಯಲು ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯನ್ನು ಜಾರಿ ಮಾಡಿದೆ. ಮಹಿಳೆಯರು ಯಾರ ಒತ್ತಡಕ್ಕೆ ಮಣಿಯದೆ ಭ್ರೂಣ ಹತ್ಯೆ ನಿರ್ಮೂಲನೆಗೆ, ಹೆಣ್ಣಿನ ರಕ್ಷಣೆಗೆ ಸ್ವತಹ ಹಣ್ಣೆ ಸಹಕರಿಸಬೇಕು. ಸಮಾಜದ ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳನ್ನು ಸಧೃಡಗೊಳಿಸಬೇಕು. ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಅವರನ್ನು ಅಕ್ಷರಸ್ತರನ್ನಾಗಿ ಮಾರಿ ಸಮಾಜದ ಉನ್ನತ ಸ್ಥಾನ ತಲುಪಲು ಬೆನ್ನೆಲುಬಾಗಿ ನಿಲ್ಲಬೇಕು ಎಂದ ಅವರು. ಪ್ರತಿಯೊಬ್ಬರು ಮಹಿಳೆಯರನ್ನು ಗೌರವಿಸಿ ಎಂದು ಹೇಳಿದರು.

    ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಲಿತ ಮಾತನಾಡಿ. ಸರ್ಕಾರವು ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ರೂಪಿಸಿ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

    ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಆಡಳಿತಾಧಿಕಾರಿ ಉಮಾ ಮಾಹೇಶ್ವರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
    ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬೇಬಿ, ಹರ್ಷ ಸೇರಿದಂತೆ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    National Children’s Day Awareness Program

  • ಜ.26 ರಿಂದ ನಗರದಲ್ಲಿ ಚೈತ್ರೋತ್ಸವ-ಫಲಪುಷ್ಪ ಪ್ರದರ್ಶನ

    ಜ.26 ರಿಂದ ನಗರದಲ್ಲಿ ಚೈತ್ರೋತ್ಸವ-ಫಲಪುಷ್ಪ ಪ್ರದರ್ಶನ

    ಚಿಕ್ಕಮಗಳೂರು:  ಸಾರ್ವಜನಿಕರ ಸಹಭಾಗಿತ್ವದೊಂದಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯಾದರೆ ಅದಕ್ಕೆ ಗೌರವ ತಂದಂತಾಗುತ್ತದೆ. ಈ ನಿಟ್ಟಿನಲ್ಲಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

    ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ಚೈತ್ರೋತ್ಸವ, ಫಲಪುಷ್ಪ ಪ್ರದರ್ಶನವನ್ನು ಜ.೨೬ ರಿಂದ ೨೮ರವರೆಗೆ ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಮೈಸೂರು ಉದ್ಯಾನ ಕಲಾ ಸಂಘ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಜ.೨೬ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ರವರು ಉದ್ಘಾಟಿಸಲಿದ್ದಾರೆಂದು ತಿಳಿಸಿದರು.

    ಮೈಸೂರು ದಸರಾ ಉತ್ಸವದಲ್ಲಿ ಪ್ರಶಸ್ತಿ ಪಡೆದ ಮುಖ್ಯ ಆಕರ್ಷಣೆಯಾಗಿದ್ದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ವಿಸ್ಮಯ ಪ್ರಪಂಚ ಪುಷ್ಪ ಕಲಾಕೃತಿಗಳ ಪ್ರದರ್ಶನ, ಹೂಗಳಿಂದ ಅಲಂಕೃತಗೊಂಡ ತೇಜಸ್ವಿ ಪ್ರತಿಷ್ಠಾನ, ಸ್ಕೂಟರ್, ಇತರೆ ಕಲಾಕೃತಿಗಳ ನಿರ್ಮಾಣ, ಸಿರಿ ಧಾನ್ಯಗಳಿಂದ ಅಲಂಕೃತಗೊಂಡ ತೇಜಸ್ವಿ, ಕುವೆಂಪುರವರ ಕಲಾಕೃತಿಗಳು ಜನರ ಅಚ್ಚರಿಗೆ ಕಾರಣವಾಗಲಿದೆ ಎಂದರು.

    ಅಲಂಕಾರಿಕ ಗಿಡಗಳು, ಆಂಥೋರಿಯಂ. ಟೋರೇನಿಯಾ, ಸೇವಂತಿಗೆ, ಚೆಂಡುಹೂ, ಪೆಟೋನಿಯಾ, ಸಾಲ್ವಿಯ, ಕ್ಯಾಲುಂಡುಲಾ, ಗಝೇನಿಯಾ, ಡೇಲಿಯ ಸೇರಿದಂತೆ ೯ ಸಾವಿರ ವಿವಿಧ ಬಣ್ಣ ಬಣ್ಣದ ಹೂಕುಂಡಗಳು, ವಿವಿಧ ಸಾಹಿತಿಗಳು, ಕ್ರೀಡಾಪಟುಗಳು, ಜ್ಞಾನಪೀಠ ಪ್ರಶಸ್ತಿ ವಿಜೇತರು, ಇತರೆ ಕಲಾವಿದರ ತರಕಾರಿ ಕೆತ್ತನೆಯ ಪ್ರದರ್ಶನ ಇರಲಿದೆ ಎಂದರು.

    ತೆಂಗಿನ ಗರಿಗಳಿಂದ ಅಲಂಕೃತಗೊಂಡ ಜಾನೂರು ಆರ್ಟ್, ಬಾಳೇಕಂದು ಮತ್ತು ಕೃಷಿ ತ್ಯಾಜ್ಯ ಬಳಸಿ ಥಾಯ್ ಆರ್ಟ್ ನಿರ್ಮಾಣ, ಜಿಲ್ಲೆಯ ಎಲ್ಲಾ ರೈತರು ಬೆಳೆದಿರುವ ಬಾಳೆ, ಹಲಸು, ಸುವರ್ಣಗೆಡ್ಡೆ, ಗೆಣಸು, ಕಲರ್ ಕ್ಯಾಪ್ಸಿಕಂ, ಕುಂಬಳಕಾಯಿ ವಿವಿಧ ತರಕಾರಿ, ಅಡಿಕೆ, ತಾಳೆ ಮತ್ತಿತರ ಸಾಂಬಾರ ಪದಾರ್ಥಗಳ ಪ್ರದರ್ಶನವಿರುತ್ತದೆ ಎಂದರು.

    ಇದೇ ಸಂದರ್ಭದಲ್ಲಿ ತೋಟಗಾರಿಕೆ ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡಲಾಗುವುದು. ೨೬ ವಿವಿಧ ಆಹಾರ ಮಳಿಗೆಗೆಗಳು, ವಾಣಿಜ್ಯ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಜ.೨೮ ರಂದು ೧೧.೩೦ಕ್ಕೆ ಫಲಪಾಕ ಸ್ಪರ್ಧೆಯಲ್ಲಿ ಸಾರ್ವಜನಿಕರು ಮನೆಯಲ್ಲಿ ಉತ್ತಮವಾಗಿ ತಯಾರಿಸಿಕೊಂಡು ಬಂದಿರುವ ಖಾದ್ಯಗಳಿಗೆ ಪ್ರಥಮ ಬಹುಮಾನ ೫ ಸಾವಿರ ರೂ, ದ್ವಿತೀಯ ೩ ಸಾವಿರ, ತೃತೀಯ ೨ ಸಾವಿರ ರೂ ನೀಡಲಾಗುವುದೆಂದು ಹೇಳಿದರು.

    ಸಮಾಜ ಕಲ್ಯಾಣ ಇಲಾಖೆಯಿಂದ ಸಿರಿಧಾನ್ಯ ಬಳಸಿ ಅಂಬೇಡ್ಕರ್ ಪುತ್ಥಳಿ, ತರಕಾರಿ ಬಳಸಿ ಸಂಸತ್ ಭವನ ಕಲಾಕೃತಿ, ಆರೋಗ್ಯ ಇಲಾಖೆಯಿಂದ ತಾಯಿಮಗು ಪರಿಕಲ್ಪನೆಯ ಸಿರಿಧಾನ್ಯ ಕಲಾಕೃತಿ, ಕೃಷಿ ಇಲಾಖೆಯಿಂದ ಸಿರಿಧಾನ್ಯ ರಾಶಿ, ರಂಗೋಲಿ ಪ್ರದರ್ಶನ, ಮೀನುಗಾರಿಕೆ ಇಲಾಖೆಯಿಂದ ಅಕ್ವೇರಿಯಂ ಅಲಂಕಾರಿ ಮೀನುಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ.

    ರೇಷ್ಮೆ ಇಲಾಖೆಯಿಂದ ರೇಷ್ಮೆಹುಳುವಿನ ಜೀವನ ಚಕ್ರದ ಪ್ರಾತ್ಯಕ್ಷತೆ, ಪಶುಸಂಗೋಪನ ಇಲಾಖೆಯಿಂದ ಜ.೨೭ ರಂದು ಮಧ್ಯಾಹ್ನ ೨.೩೦ ಕ್ಕೆ ಶ್ವಾನ ಪ್ರದರ್ಶನ, ಅದೇ ದಿನ ಲಕ್ಷ್ಮಿ ಮುಗುಳಿದೇವಮ್ಮ ಅವರಿಂದ ಜಾನಪದ ಗೀತಗಾಯನ, ಪ್ರವಾಸೋದ್ಯಮ ಇಲಾಖೆಯಿಂದ ೩ ದಿನಗಳ ಕಾಲ ಹಾಟ್ ಏರ್ ಬಲೂನ್ ರೈಡಿಂಗ್, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ವತಿಯಿಂದ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜ.೨೮ ರಂದು ಸಂಜೆ ೪.೩೦ ಕ್ಕೆ ಸಮಾರೋಪ ಸಮಾರಂಭ, ಬಹುಮಾನ ವಿತರಣೆ ನಡೆಯಲಿವೆ ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಮೀನಾನಾಗರಾಜ್, ಜಿ.ಪಂ ಸಿಇಓ ಹೆಚ್.ಎಸ್. ಕೀರ್ತನ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮ ಉಪಸ್ಥಿತರಿದ್ದರು.

    Chaitrotsava-Fruit and Flower Exhibition in the city from January 26th

  • ಜನತೆಯ ಅನುಕೂಲತೆಗೆ ಕೇಂದ್ರ ಯೋಜನೆ ಉಪಯುಕ್ತ

    ಜನತೆಯ ಅನುಕೂಲತೆಗೆ ಕೇಂದ್ರ ಯೋಜನೆ ಉಪಯುಕ್ತ

    ಚಿಕ್ಕಮಗಳೂರು: ದೇಶದ ಜನಸಾಮಾನ್ಯರ ಅನುಕೂಲತೆಗಾಗಿ ಕೇಂದ್ರ ಸರ್ಕಾರ ಜಾರಿ ಗೊಳಿಸಿರುವ ಸಬ್ಸಿಡಿ ಸಹಿತದ ಸೋಲಾರ್ ಸಿಸ್ಟಂ ಯೋಜನೆ ಪ್ರತಿ ಕುಟುಂಬದ ವಿದ್ಯುತ್ ಶುಲ್ಕ ಕಡಿಮೆಗೊ ಳಿಸಿ ಆರ್ಥಿಕ ಹೊರೆ ಸುಧಾರಿಸಲು ಮಹತ್ತರ ಹೆಜ್ಜೆಯಿಟ್ಟಿದೆ ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ.ಪ್ರಾಣೇಶ್ ಹೇಳಿದರು.

    ತಾಲ್ಲೂಕಿನ ಅಲ್ಲಂಪುರ ಸಮೀಪ ಖಾಸಗೀ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ಧ ರೂಫ್‌ಟಾಪ್ ಸೋ ಲಾರ್ ಮತ್ತು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತಾದ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಮೋದಿ ಸರ್ಕಾರದ ಯೋಜನೆ, ಯೋಚನೆಗಳು ಜನಸಾಮಾನ್ಯರ ಏಳಿಗೆಗೆ ಪೂರಕವಾಗಿದೆ. ಅತಿ ಹೆಚ್ಚು ತಾಪಮಾನ ಹೊಂದಿರುವ ದಕ್ಷಿಣ ಕನ್ನಡದಲ್ಲಿ ಅಳವಡಿಸಿ ಯಶಸ್ವಿಗೊಂಡಿರುವ ಪಿಎಂ ಸೂರ್ಯ ಮನೆಗೆ ವಿದ್ಯುತ್ ಯೋಜನೆ ಅತ್ಯಂತ ಹೆಚ್ಚು ಪ್ರಚಲಿತದಲ್ಲಿದ್ದು ಇದೀಗ ಮಲೆನಾಡು ಭಾಗಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ ಎಂದರು.

    ಜಿಲ್ಲೆಯ ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶದಲ್ಲಿ ಸೋಲಾರ್ ಸಿಸ್ಟಂ ಅಳವಡಿಸಿಕೊಂಡಲ್ಲಿ ವಿದ್ಯುತ್ ಶುಲ್ಕವನ್ನು ಕಡಿಮೆಗೊಳಿಸಿ, ಸಾಕಷ್ಟು ಹಣವನ್ನು ಉಳಿತಾಯ ಮಾಡಬಹುದು. ಆ ನಿಟ್ಟಿನಲ್ಲಿಜನತೆ ಯೋಜನೆಯಿಂದ ವಂಚಿತರಾಗಬಾರದೆಂಬ ದೃಷ್ಟಿಯಿಂದ ದೇಶಾದ್ಯಂತ ಜಾರಿಗೊಳಿಸಿ ದೊಡ್ಡ ಕ್ರಾಂತಿಕಾರಿ ಕೇಂದ್ರ ಸರ್ಕಾರ ಮೂಡಿಸುತ್ತಿದೆ ಎಂದರು.

    ಎನರ್ಜಿ ಸೋಲಾರ್ ಸಂಸ್ಥೆ ನಿರ್ದೇಶಕ ಸೂರಜ್‌ಶೆಟ್ಟಿ ಮಾತನಾಡಿ ಕೇಂದ್ರದ ಯೋಜನೆಯಲ್ಲಿ ೧೦೦ ಯುನಿಟ್‌ಗೆ ೩೦ ಸಾವಿರ, ೨೦೦ ಯುನಿಟ್ ಬಳಕೆಗೆ ೬೦ ಸಾವಿರ ಹಾಗೂ ೩೦೦ ಯುನಿಟ್ ಬಳಕೆದಾರರಿಗೆ ೭೮ ಸಾವಿರ ಸಬ್ಸಿಡಿ ಹಣವು ಯಾವುದೇ ಏಜೆಂಟರಿಲ್ಲದ ನೇರವಾಗಿ ತಿಂಗಳಾಂತ್ಯದೊಳಗೆ ಗ್ರಾಹಕರ ಖಾತೆಗೆ ಜಮಾವಣೆಗೊಳ್ಳಲಿದೆ ಎಂದು ತಿಳಿಸಿದರು.

    ಸೋಲಾರ್ ಸಿಸ್ಟಂನಲ್ಲಿ ಭಾರತ ಸರ್ಕಾರ ಅತ್ಯಂತ ದೊಡ್ಡ ಹೆಜ್ಜೆಯಿಟ್ಟು ಮೊದಲ ಸ್ಥಾನದಲ್ಲಿದೆ. ಅಭಿ ವೃದ್ದಿಗೊಂಡ ದೇಶದ ಬದಲಾಗಿ, ಬಡತನ ರೇಖೆಯಲ್ಲಿರುವ ದೇಶಗಳೊಂದಿಗೆ ಸೋಲಾರ್ ಎನರ್ಜಿ ಉ ತ್ಪಾದಿಸಲು ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ. ೨೦೧೪ರಲ್ಲಿ ಪ್ರಾರಂಭಗೊಂಡ ಈ ಯೋಜನೆ ಪ್ರಸಕ್ತ ಸಾ ಲಿನಲ್ಲಿ ದೊಡ್ಡಮಟ್ಟಿನಲ್ಲಿ ಬೆಳವಣಿಗೆ ಹೊಂದುತ್ತಿದೆ ಎಂದರು.

    ಕೆಲವರು ಕರಾವಳಿ ಪ್ರದೇಶ ಹೆಚ್ಚು ಉಷ್ಣಾಂಶ ಕೂಡಿರುವ ಕಾರಣ ಎನರ್ಜಿ ಸೋಲಾರ್ ಉಪಯು ಕ್ತ. ಆದರೆ ಮಲೆನಾಡಿನಲ್ಲಿ ಸಾಧ್ಯವಿಲ್ಲ ಎಂಬ ಅನುಮಾನವಿದೆ. ಈ ಸೋಲಾರ್‌ನ ವಿಶೆಷ್ಟವೆಂದರೆ ಕಡಿಮೆ ಬೆಳಕಿನಲ್ಲಿ ಹೆಚ್ಚು ಕೆಲಸ ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಕಾರಣ ಮಲೆನಾಡಿನ ಅನೇಕ ಭಾಗಗಳಲ್ಲಿ ಅಳವಡಿಸಿಕೊಂಡಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ, ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಾಯಿಲಾಲ್ ಗೋಪಾಲಿ, ಸಿವಿಲ್ ಇಂಜಿನಿಯರ್ ಅಧ್ಯಕ್ಷ ಜಿ.ರಮೇಶ್, ರಾಜ್ಯ ಎಲೆಕ್ಟ್ರೀಕಲ್ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಹರೀಶ್, ಸಾಮಿಲ್ ಮಾಲೀಕರ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಹೋಂಸ್ಟ್ರೇ ಅಸೋಸಿಯೇಷನ್ ಅಧ್ಯಕ್ಷ ಎನ್.ಆರ್.ತೇಜಸ್ವಿ, ಬಾರ್ & ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ಜಯ ಂತ್‌ಪೈ, ಹೆಚ್‌ಇಎಫ್ ಅಧ್ಯಕ್ಷ ಹೆಚ್.ಪಿ.ಲಕ್ಷ್ಮೀಶ ಉಪಸ್ಥಿತರಿದ್ದರು. ಸೀತರಾಮಭರಣ್ಯ ನಿರೂಪಿಸಿದ ರು. ಸುಮಂತ್ ಸ್ವಾಗತಿಸಿದರು. ಪ್ರದೀಪ್ ವಂದಿಸಿದರು.

    Rooftop Solar and Central Government Prime Minister Suryaghar Yojana Workshop

  • ಸಾರ್ವಜನಿಕರ ಸಲಹೆ-ಸೂಚನೆ ಹಂತಹಂತವಾಗಿ ಅನುಷ್ಠಾನ

    ಸಾರ್ವಜನಿಕರ ಸಲಹೆ-ಸೂಚನೆ ಹಂತಹಂತವಾಗಿ ಅನುಷ್ಠಾನ

    ಚಿಕ್ಕಮಗಳೂರು: ಸಾರ್ವಜನಿಕರು ಸರ್ವ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ನೀಡಿರುವ ಸಲಹೆ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಹಂತಹಂತವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ತಿಳಿಸಿದರು.

    ಅವರು ಇಂದು ನಗರಸಭಾ ಸಭಾಂಗಣದಲ್ಲಿ ೨೦೨೫-೨೬ನೇ ಸಾಲಿನ ನಗರಸಭೆಯ ಆಯವ್ಯಯ ತಯಾರಿಸಲು ಎರಡನೇ ಹಂತದ ಸಾರ್ವಜನಿಕ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಾರ್ವಜನಿಕರು ಈ ಸಭೆಯಲ್ಲಿ ನೀಡಿರುವ ಸಲಹೆ, ಸೂಚನೆ, ಅಭಿಪ್ರಾಯಗಳನ್ನು ನಗರಸಭೆ ಅಳವಡಿಸಿಕೊಂಡು ನಗರದ ನಾಗರೀಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವುದಾಗಿ ಭರವಸೆ ನೀಡಿದರು.

    ನಗರದಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಒಟ್ಟಾರೆ ಅಭಿಪ್ರಾಯ ವ್ಯಕ್ತವಾಗಿದ್ದು, ಸಂಪೂರ್ಣ ನಿಷೇಧಿಸಲು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ವರ್ತಕರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಕಲ್ಯಾಣ ಮಂಟಪಗಳಲ್ಲಿ ವಿವಾಹ ಮುಂತಾದ ಶುಭ ಕಾರ್ಯಗಳು ನಡೆಯುವ ಸಂದರ್ಭದಲ್ಲಿ ಅತೀ ಹೆಚ್ಚು ನೀರಿನ ಬಾಟಲಿಗಳು, ಪ್ಲಾಸ್ಟಿಕ್‌ನಲ್ಲಿ ತುಂಬಲಾಗಿರುವ ಉಡುಗೊರೆಗಳನ್ನು ನೀಡುತ್ತಿದ್ದು, ಅಂತಹ ಕಲ್ಯಾಣ ಮಂಟಪದವರಿಗೆ ನಗರಸಭೆಯಿಂದ ಸೂಚನೆ ಪತ್ರ ನೀಡಿ ಕ್ರಮ ಕೈಗೊಳ್ಳಲು ಒತ್ತಾಯಪೂರ್ವಕ ಅಭಿಪ್ರಾಯಗಳು ಮೂಡಿಬಂದವು ಎಂದು ತಿಳಿಸಿದರು.

    ದೊಡ್ಡ ಪ್ರಮಾಣದ ನೀರು ಸಂಗ್ರಾಹಗಾರವನ್ನು ಅಕ್ವಗಾರ್ಡ್ ಅಳವಡಿಸಿ ಕಲ್ಯಾಣ ಮಂಟಪದವರೇ ನಿರ್ಮಿಸಿಕೊಳ್ಳಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುವ ಜೊತೆಗೆ ಪ್ಲಾಸ್ಟಿಕ್ ಬಳಕೆ ತಡೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

    ನಗರದ ವಾರ್ಡ್‌ಗಳಲ್ಲಿರುವ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯರ ಸಹಭಾಗಿತ್ವದೊಂದಿಗೆ ವಾರ್ಡಿನ ಸದಸ್ಯರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿಕೊಂಡು ಅಭಿವೃದ್ಧಿಪಡಿಸಲು ಮುಂದಾದರೆ ಸುಂದರ ಹಾಗೂ ಸ್ವಚ್ಚವಾಗಿ ಕಾಣುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಮನವಿ ಮಾಡಿದರು.

    ಸಾರ್ವಜನಿಕರು ಭಯಪಡುವ ಅಗತ್ಯ ಇಲ್ಲ ನಗರಸಭೆಯಿಂದಲೇ ಪ್ರತೀ ಬಾರಿಯಂತೆ ಕಂದಾಯ ವಸೂಲಾತಿಗೆ ವಾರ್ಡಿನ ಕಂದಾಯ ಅಧಿಕಾರಿಗಳು ಮನೆ ಮನೆಗೆ ತೆರಳಿ ಕಂದಾಯ ವಸೂಲಿ ಮಾಡಲು ಸೂಚನೆ ನೀಡಲಾಗಿದೆ. ಈ ಮಧ್ಯೆ ದೂರವಾಣಿ ಮೂಲಕ ನಾಗರೀಕರಿಗೆ ಕರೆಮಾಡಿ ಭಯ ಹುಟ್ಟಿಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯ ಇಲ್ಲ, ಈ ಕುರಿತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ದೂರುನೀಡಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

    ಜ.೨೬ ರಂದು ಗಣರಾಜ್ಯೋತ್ಸವ ದಿನದಂದು ನಗರಸಭೆ ಆವರಣದಲ್ಲಿರುವ ನೀರಿನ ಕಾರಂಜಿ, ಗಣಪತಿ ದೇವಸ್ಥಾನ, ಸಾರ್ವಜನಿಕ ಶೌಚಾಲಯ ಮುಂತಾದವುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹಾಗು ಶಾಸಕರ ನೇತೃತ್ವದಲ್ಲಿ ಉದ್ಘಾಟನೆಯಾಗಲಿದೆ. ಕೆ.ಎಂ ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದಿಂದ ಕಣಿವೆ ರುದ್ರೇಶ್ವರ ದೇವಸ್ಥಾನದವರೆಗೆ ವಿದ್ಯುತ್ ದೀಪ ಅಳವಡಿಕೆ ಕಾರ್ಯಕ್ಕೆ ಇದೇ ಸಂದರ್ಭದಲ್ಲಿ ಸಚಿವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.

    ಹಿರಿಯ ನಾಗರೀಕ ನಂಜುಂಡರು ಮಾತನಾಡಿ, ೧೫ನೇ ವಾರ್ಡಿನಲ್ಲಿ ಒಂದು ಕಾಲುವೆಗೆ ಮೇಲ್ಬಾಗದ ಕವರಿಂಗ್ ಮಾಡಿಸಬೇಕು, ಜೊತೆಗೆ ಮುಖ್ಯ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಸಲಹೆ ನೀಡಿದರು. ಐಡಿಎಸ್‌ಜಿ ಕಾಲೇಜಿನ ಉಪನ್ಯಾಸಕ ಲಕ್ಷ್ಮಿಕಾಂತ್ ಮಾತನಾಡಿ, ಎಐಟಿ ವೃತ್ತದಲ್ಲಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯದ ಗೋಡೆಗಳನ್ನು ಎತ್ತರಿಸುವಂತೆ ತಿಳಿಸಿದರು.

    ಈ ಸಂದರ್ಭದಲ್ಲಿ ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ, ರಚನಾ ಬಿಲ್ಡರ್‍ಸ್‌ನ ನಾಗೇಂದ್ರ, ಜಿ.ರಮೇಶ್ ಮತ್ತಿತರರು ಸಲಹೆಗಳನ್ನು ನೀಡಿದರು. ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಅನುಮಧುಕರ್, ಇಂಜಿನಿಯರ್ ಲೋಕೇಶ್, ಬಿಜೆಪಿ ಮುಖಂಡ ಸಿ.ಆರ್ ಪ್ರೇಮ್‌ಕುಮಾರ್, ನಾಮಿನಿ ಸದಸ್ಯ ಪ್ರಸಾದ್ ಅಮೀನ್, ಜಗದೀಶ್, ಪ್ರದೀಪ್ ಮತ್ತಿತರರು ಉಪಸ್ಥಿತರಿದ್ದರು.

    Second phase of public consultation meeting to prepare the municipal budget

  • ದೆಹಲಿ ಗಣರಾಜ್ಯೋತ್ಸವದಲ್ಲಿ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರ

    ದೆಹಲಿ ಗಣರಾಜ್ಯೋತ್ಸವದಲ್ಲಿ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರ

    ಚಿಕ್ಕಮಗಳೂರು: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ ಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು”ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯದಿಂದ ಭಾಗವಹಿಸಲಿರುವ ಸ್ತಬ್ಧಚಿತ್ರವು ಗದಗಿನ ಲಕ್ಕುಂಡಿಯಲ್ಲಿರುವ ಮಂದಿರಕ್ಕೆ ಹೋಲುವಂತಿರುವ ಸ್ತಬ್ಧಚಿತ್ರವನ್ನು ಅಂತರರಾಷ್ಟ್ರೀಯ ಕಲಾವಿದ ಶಶಿಧರ ಅಡಪ ವಿನ್ಯಾಸಗೊಳಿಸಿದ್ದು, ದೆಹಲಿಯ ರಾಷ್ಟ್ರೀಯ ರಂಗಶಾಲಾ ಕ್ಯಾಂಪಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದ ೫೦ಕ್ಕೂ ಹೆಚ್ಚು ಜನ ಕಲಾವಿದರು, ಕುಶಲ ಕರ್ಮಿಗಳು ಮೈಕೊರೆಯುವ ಚಳಿಯಲ್ಲಿ ಸ್ತಬ್ಧಚಿತ್ರವನ್ನು ನಿರ್ಮಾಣಗೊಳಿಸಿದ್ದಾರೆ.

    ಜನವರಿ ೨೩ರ ಗುರುವಾರ ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಸ್ತಬ್ಧಚಿತ್ರದ ಪೂರ್ವಾಭ್ಯಾಸದಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರಕ್ಕೆ ಎರಡೂ ಬದಿಯಲ್ಲಿ ನೆರೆದ ಜನಸ್ತೋಮವು ತಮ್ಮ ಹತ್ತಿರ ಸ್ತಬ್ಧಚಿತ್ರ ಬಂದಾಗ ಅದರ ವಿನ್ಯಾಸ, ಶಿಲ್ಪಕಲೆ, ಸಂಸ್ಕೃತಿ, ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಿದ ಕಲಾವಿದರ ದೃಶ್ಯವನ್ನು ಕಂಡ ಜನರು ಕರತಾಡನ ಮೂಲಕ ಅಭೂತಪೂರ್ವವಾಗಿ ಸ್ವಾಗತಿಸಿ ಪ್ರಶಂಸೆ ವ್ಯಕ್ತಪಡಿಸಿದರು.

    ಕರ್ತವ್ಯಪಥದಲ್ಲಿ ಸೇರಿದ ಜನರಿಂದ ನಿರೀಕ್ಷೆಗೂ ಮೀರಿ ಬಂದ ಪ್ರತಿಕ್ರಿಯೆಗೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ದೊರೆಯಲಿದೆ ಎಂಬ ವಿಶ್ವಾಸವನ್ನು ಆಯುಕ್ತರಾದ ಹೇಂಮಂತ್ ನಿಂಬಾಳ್ಕರ್ ಅವರು ವ್ಯಕ್ತಪಡಿಸಿದರು.

    ಕರ್ತವ್ಯ ಪಥದಲ್ಲಿ ಸಾಗಿದ ಸ್ತಬ್ದಚಿತ್ರಕ್ಕೆ ಕನ್ನಡ ಸಾಹಿತ್ಯ ಇರುವ “ಶಿಲ್ಪಕಲೆಯ ತೊಟ್ಟಿಲು ನಮ್ಮ ಗದುಗಿನ ಲಕ್ಕುಂಡಿ” ಎಂಬ ಹಾಡಿಗೆ ಹೆಸರಾಂತ ಕಲಾವಿದ ಪ್ರವೀಣ ಡಿ.ರಾವ್ ಅವರ ಸಂಗೀತ ಸಂಯೋಜನೆಯ ನೀನಾದಕ್ಕೆ ಗದಗ, ಬೆಂಗಳೂರು, ಮೈಸೂರು ಹಾಗೂ ಧಾರವಾಡದಿಂದ ಆಗಮಿಸಿದ ಸ್ತಬ್ಧಚಿತ್ರದ ಕಲಾವಿದರು ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿ ಹೆಚ್ಚಿನ ಮೆರಗು ತಂದಿದ್ದಲ್ಲದಲೇ ಅಲ್ಲಿ ಸೇರಿದವರನ್ನು ರೋಮಾಂಚನಗೊಳಿಸಿತು.

    ಸ್ತಬ್ದಚಿತ್ರದ ಮೇಲ್ಭಾಗದಲ್ಲಿ ೧೦ ಜನ ಕಲಾವಿದರು ಸೇರಿದಂತೆ ೧೮ ಜನ ಕಲಾವಿದರಿದ್ದು, ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ನಾಲ್ಕು ಪುರುಷ-ಮಹಿಳೆಯರು ಸಾಂಪ್ರಾದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು, ಸ್ತಬ್ಧಚಿತ್ರಕ್ಕೆ ಇನ್ನಷ್ಟು ಮೆರಗು ತಂದಿತು.

    ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, ಕ್ರಿ. ಶ. ೧೦ ರಿಂದ ೧೨ ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

    ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು ೫೦ ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; ೧೦೧ ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು ೨೯ ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.

    ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

    Lakkundi sculpture cradle statue at Delhi Republic Day

  • ಸಹಕಾರಿ ಕ್ಷೇತ್ರದ ಆಡಳಿತವು ಸದಸ್ಯರ ಹಿತಕಾಪಾಡಿ

    ಸಹಕಾರಿ ಕ್ಷೇತ್ರದ ಆಡಳಿತವು ಸದಸ್ಯರ ಹಿತಕಾಪಾಡಿ

    ಚಿಕ್ಕಮಗಳೂರು: ಕೃಷಿಯೇತರ ಸಹಕಾರ ಸಂಘಗಳ ಆಡಳಿತವು ಸದಸ್ಯರ ಆರ್ಥಿಕ ಹಿ ತಾಸಕ್ತಿಯನ್ನು ಕಾಪಾಡುವ ಜೊತೆಗೆ ಘಟಕಗಳಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಿ.ಸಿ.ಲೋಕಪ್ಪಗೌಡ ಹೇಳಿದರು.

    ರಾಜ್ಯ ಸಹಕಾರ ಮಹಾಮಂಡಾಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಹ ಯೋಗದಲ್ಲಿ ನಗರದ ಖಾಸಗೀ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ಧ ಆಯ್ದ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಬೇಕಾದರೆ ಪಾರದರ್ಶಕತೆ, ವೃತ್ತಿಪರ ತೆ, ಪರಿಣಾಮಕಾರಿ ಲೆಕ್ಕಪರಿಶೋಧನೆ ಮಾಹಿತಿ ಹೊಂದಿರುವ ಜೊತೆಗೆ ತಂತ್ರಜ್ಞಾನ ಹಾಗೂ ಲಾಭಧಾಯಕ ವಾಗಿರುವ ಅಂಶಗಳನ್ನು ಒಳಗೊಂಡಿರಬೇಕು ಎಂದು ತಿಳಿಸಿದರು.

    ಸಂಘಗಳು ಆಧ್ಯಾತ್ಮಿಕ ಕಾರ್ಯಗಳೊಡನೆ ಹಣಕಾಸಿನ ವ್ಯವಹಾರ ಹಾಗೂ ವಹಿವಾಟುಗಳಿಗೆ ಗಮನ ಹರಿಸಬೇಕು. ಸಹಕಾರ ಸಂಘಗಳ ಕೇಂದ್ರಬಿಂದು ಆರ್ಥಿಕ ಚಟುವಟಿಕೆಗಳು ಎಂದ ಅವರು ಠೇವಣಿ, ಸಾಲ ವಿತರಣೆ, ಹೂಡಿಕೆ ಹಾಗೂ ಸೇವಾ ನಿಯಮಗಳನ್ನು ಕಾಲ ಕಾಲಕ್ಕೆ ತಕ್ಕಂತೆ ರೂಪಿಸಿ ಅನುಷ್ಟಾನಕ್ಕೆ ತರುವು ದು ಅವಶ್ಯ ಎಂದು ಹೇಳಿದರು.

    ಬೆಂಗಳೂರು ಸಹಕಾರ ಸಂಘಗಳ ಅಪಾರ ನಿಬಂಧಕ ಹೆಚ್.ಎಸ್.ನಾಗರಾಜಯ್ಯ ಉಪನ್ಯಾಸ ನೀಡಿ ಮಾತನಾಡಿ ಸಹಕಾರಿ ಸಂಸ್ಥೆ ಸದಸ್ಯರುಗಳ ಆರ್ಥಿಕ ಹಿತಾಸಕ್ತಿ ಕಾಪಾಡುವುದೇ ಮೂಲ ಆಶಯವಾಗಬೇ ಕು. ಲೇವಾದೇವಿ ಅಥವಾ ಖಾಸಗೀ ಫೈನಾನ್ಸ್‌ಗಳಿಗೆ ಸದಸ್ಯರುಗಳು ಒಳಗಾಗದಂತೆ ಸಂಘದಿಂದಲೇ ಸೌ ಲಭ್ಯ ಒದಗಿಸಿ ಅನುಕೂಲ ಕಲ್ಪಿಸಿಕೊಡಬೇಕು ಎಂದರು.

    ಕೃಷಿ ಪತ್ತಿನ ಸಂಘಗಳಿಗೆ ಸರ್ಕಾರ ಷೇರು ಹೂಡಿಕೆ ಮಾಡುತ್ತವೆ. ಕೃಷಿಯೇತರ ಬ್ಯಾಂಕ್‌ಗಳಲ್ಲಿ ಸದ ಸ್ಯರಿಂದಲೇ ಬೆಳವಣಿಗೆ ಹೊಂದಬೇಕು. ಆ ನಿಟ್ಟಿನಲ್ಲಿ ಕಾರ್ಯಚಟುವಟಿಕೆ, ಆಡಳಿತಾತ್ಮಕ ಚುರುಕು ಅತ್ಯಂತ ಅವಶ್ಯಕವಾಗಿದೆ. ಸದಸ್ಯರುಗಳಲ್ಲಿ ಠೇವಣಿ ಇರಿಸಲು ಸಂಘಗಳು ನಂಬಿಕೆ, ವಿಶ್ವಾಸ ಮೊದಲು ಮೂಡಿಸಿದರೆ ಸಂಪನ್ಮೂಲ ತಾನಾಗಿಯೇ ಹರಿದುಬರಲಿದೆ ಎಂದು ಹೇಳಿದರು.

    ಸಂಘದ ಸದಸ್ಯರುಗಳು ವಾರ್ಷಿಕ ಸಭೆಗೆ ಗೈರು, ಖಾತೆ ವಹಿವಾಟು ಹಾಗೂ ಸದಸ್ಯರು ಆಯ್ಕೆ ವಿಚಾರ ದಲ್ಲಿ ಪೂರ್ಣಪ್ರಮಾಣ ಹಿಂದುಳಿದಿರುವ ಕಾರಣ ಅನೇಕ ಸವಾಲುಗಳು ಎದುರಿಸುತ್ತಿವೆ. ಹೀಗಾಗಿ ಆಡಳಿತ ವರ್ಗವು ಸದಸ್ಯರುಗಳಿಗೆ ಜಾಗೃತಿ ಮೂಡಿಸಿ ಸಕ್ರೀಯವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದರೆ ಸಹಕಾರಿ ಕ್ಷೇತ್ರ ಪ್ರಗತಿ ಸಾಧಿಸಬಹುದು ಎಂದರು.

    ಬ್ಯಾಂಕಿಂಗ್ ವ್ಯಕ್ತಿತ್ವ ವಿಕಸನ ತರಬೇತಿದಾರ ಆರ್.ಕೆ.ಬಾಲಚಂದ್ರ ಮಾತನಾಡಿ ಸರ್ಕಾರಿ ಬ್ಯಾಂಕ್‌ಗಳಂ ತೆ, ಕೃಷಿಯೇತರ ಸಹಕಾರ ಸಂಘಗಳು ಆಧುನಿಕತೆ ತಕ್ಕಂತೆ ಆಡಳಿತ ವ್ಯವಸ್ಥೆಯಲ್ಲಿ ಡಿಜಟಲೀಕರಣ ಗೊಳಿಸಿ ವ್ಯವಹಾರವನ್ನು ಗ್ರಾಹಕರಿಗೆ ಸರಳಗೊಳಿಸಿದೆ ಎಂದ ಅವರು ಗ್ರಾಹಕರು ಸಂಘಗಳ ವ್ಯವಹಾರವನ್ನು ಎಲ್ಲ ರೊಂದಿಗೆ ಹಂಚದೇ ಗೌಪ್ಯತೆ ಹೊಂದಬೇಕು ಎಂದರು.

    ಇತ್ತೀಚೆಗೆ ಗ್ರಾಹಕರು ಸಣ್ಣಫುಟ್ಟ ವಹಿವಾಟು ಆನ್‌ಲೈನ್‌ನಲ್ಲಿ ನಡೆಸುತ್ತಿರುವುದು ಸಂತಸ. ಆದರೆ ಕೆಲವು ಸಾಮಾಜಿಕ ಜಾಲತಾಣದಲ್ಲಿ ವಂಚಿಸುವ ಪ್ರಕರಣಗಳು ಹೆಚ್ಚಿರುವ ಕಾರಣ ಸುರಕ್ಷತಾ ಕಾಳಜಿ ವಹಿಸಬೇಕು. ಗ್ರಾಹಕರ ಸಂಖ್ಯೆ, ಓಟಿಪಿ ಅಥವಾ ಇನ್ಯಾವುದೇ ವ್ಯವಹಾರದ ಮಾಹಿತಿಯನ್ನು ಹಂಚಿಕೊಳ್ಳದಂತೆ ಮುಂಜಾ ಗ್ರತೆ ವಹಿಸುವುದು ಸೂಕ್ತ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಿ.ಎಸ್. ಮಹಾಬಲ ಪ್ರಸ್ತುತ ಸಹಕಾರಿ ಕ್ಷೇತ್ರವು ಸಂದಿಗ್ದ ಪರಿಸ್ಥಿತಿ ಮತ್ತು ಗೊಂದಲದಲ್ಲಿದೆ. ಹೀಗಾಗಿ ಸಹಕಾರಿ ಮ ಹಾಮಂಡಲದಿಂದ ನಿರ್ದೇಶಕರು, ಸಿಇಓಗಳಿಗೆ ಮಾಹಿತಿ ಕೊರತೆ ಕಾರಣ ರಾಜ್ಯಾದ್ಯಂತ ತರಬೇತಿ ಕೈಗೊಂ ಡು ಸಹಕಾರಿ ತತ್ವದ ನಿಯಮವನ್ನು ಬೋಧಿಸಲಾಗುತ್ತಿದೆ ಎಂದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಜಿ.ಕೆ.ದಿವಾಕರ್, ನಿರ್ದೇಶಕರಾದ ಜಿ.ವಿ.ಮೋಹನ್, ವರಸಿದ್ದಿ ವೇಣುಗೋಪಾಲ್, ಸಹಕಾರಿ ಅಭಿವೃದ್ದಿ ಅಧಿಕಾರಿ ರುಕ್ಮೀಣಿ, ಸಿಬ್ಬಂದಿಗಳಾದ ಇಂದ್ರೇಶ್, ಯಶಸ್ ಮತ್ತಿತರರು ಉಪಸ್ಥಿತರಿದ್ದರು.

    Special training program for office bearers and chief executive officers of cooperative societies