Category: ಎನ್ಆರ್ ಪುರ
-

ಬಾಳ ಉನ್ನತಿ ಅವನತಿಗಳಿಗೆ ಮನಸ್ಸು ಮೂಲ
ಬಾಳೆಹೊನ್ನೂರು: ಸುಖ ಬಯಸುವುದು ಮನುಷ್ಯನ ಸಹಜ ಗುಣ. ದುರ್ನಡತೆಯಿಂದಾಗಿ ಮನುಷ್ಯನ ಬದುಕು ಛಿದ್ರಗೊಂಡಿದೆ. ಬಾಳಿನ ಉನ್ನತಿ ಅವನತಿಗಳಿಗೆ ಮನುಷ್ಯನ ಮನಸ್ಸೇ ಕಾರಣವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಹುಣ್ಣಿಮೆ ಕಾರ್ತಿಕ ದೀಪೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಜೀವನ ಜೋಕಾಲಿ ಸುಖದಿಂದ ದು:ಖದತ್ತ ದು:ಖದಿಂದ ಸುಖದತ್ತ ಸದಾ ತೂಗುತ್ತಿರುತ್ತದೆ. ಪ್ರಪಂಚದಲ್ಲಿ ಭಯ ಭೀತಿ ಉದ್ವೇಗ ಚಿಂತೆ ಒತ್ತಡ ಎಲ್ಲರಿಗೂ ಇರುತ್ತದೆ.ಮನುಷ್ಯ ತನ್ನ ಬಾಳಿನಲ್ಲಿ ನೀತಿ ಸಂಹಿತೆ ಸದಾಚಾರ ಸಂಪನ್ನತೆ ಧ್ಯಾನ ಜ್ಞಾನ ಇವುಗಳನ್ನು ಅಳವಡಿಸಿಕೊಂಡು ಬಾಳಿದರೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಪ್ರಾಪ್ತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಮನುಷ್ಯ ಆಸೆ ಕಳೆದುಕೊಂಡು ಬದುಕಬಹುದು. ಆದರೆ ಆಸಕ್ತಿ ಕಳೆದುಕೊಂಡು ಬಾಳಲಾಗದು. ಕಷ್ಟ ಕಾಲದಲ್ಲಿ ಸಹಾಯ ಮಾಡಿದವರನ್ನು ಕಷ್ಟ ಕಾಲದಲ್ಲಿ ಕೈ ಬಿಡದೇ ಕಾಪಾಡುವವರನ್ನು ಕಷ್ಟಕ್ಕೆ ದೂಡಿದವರನ್ನು ಎಂದಿಗೂ ಮರೆಯಬಾರದು. ಪ್ರತಿಯೊಂದು ಚಿಕ್ಕ ಪಯಣಕ್ಕೂ ಒಂದು ಮಾರ್ಗಸೂಚಿ ಇರುವಂತೆ ಬದುಕಿನ ಮಹಾಯಾತ್ರೆಗೆ ಧರ್ಮ ದಿಕ್ಸೂಚಿಯಾಗಿದೆ.ಶ್ರೀ ಜಗದ್ಗುರು ರೇಣುಕಾಚಾರ್ಯರು ಸುಖದ ಮೂಲ ಧರ್ಮಾಚರಣೆಯಲ್ಲಿದೆ ಎಂದು ಸಿದ್ಧಾಂತ ಶಿಖಾಮಣಿ ಧರ್ಮ ಗ್ರಂಥದಲ್ಲಿ ನಿರೂಪಿಸಿದ್ದಾರೆ. ದೀಪ ಬೆಳಕಿನ ಸಂಕೇತ. ಕತ್ತಲು ಅಜ್ಞಾನದ ಸಂಕೇತ. ಕತ್ತಲೆ ಕಳೆದು ಬೆಳಕು ಮೂಡಿಸುವುದೇ ನಿಜವಾದ ಗುರುವಿನ ಧರ್ಮವಾಗಿದೆ. ದೀಪದಲ್ಲಿ ಬೆಳಕೂ ಇದೆ ಬೆಂಕಿಯೂ ಇದೆ. ಬೆಳಕಿನಿಂದ ಜೀವನ ವಿಕಾಸಗೊಳ್ಳುತ್ತದೆ. ಬೆಂಕಿಯಿಂದ ಬದುಕು ನಾಶಗೊಳ್ಳುತ್ತದೆ. ಅರಿವಿನ ಆಚರಣೆಯಲ್ಲಿ ಬದುಕನ್ನು ಸಮೃದ್ಧವಾಗಿ ಕಟ್ಟಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.ಇದೇ ಸಂದರ್ಭದಲ್ಲಿ ನವಂಬರ್ ೨೭ರಂದು ಗುರುವಾರ ಶ್ರೀ ರಂಭಾಪುರಿ ಪೀಠದ ನವ ನಿರ್ಮಾಣ ಶಿಲ್ಪಿ ಲಿಂ. ಶ್ರೀಮದ್ ರಂಭಾಪುರಿ ಜಗದ್ಗುರು ಶಿವಾನಂದ ರಾಜೇಂದ್ರ ಭಗವತ್ಪಾದರ ಪೀಠಾರೋಹಣ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಗಳನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಬಿಡುಗಡೆಗೊಳಿಸಿದರು. ಈ ಪವಿತ್ರ ಸಂದರ್ಭದಲ್ಲಿ ತಡವಲಗಾ ಹಿರೇಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಆಲಮೇಲ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ಚಿಕ್ಕಮಗಳೂರಿನ ಶಂಕರದೇವರಮಠದ ಚಂದ್ರಶೇಖರ ಶಿವಾಚಾರ್ಯರು, ಹನುಮಾಪುರ ಕಾಳಿಕಾದೇವಿ ಹಿರೇಮಠದ ಡಾ|| ಸೋಮಶೇಖರ ಶಿವಾಚಾರ್ಯರು,ಬೀರೂರು ಬಾಳೆಹೊನ್ನೂರು ಶಾಖಾ ಮಠದ ರುದ್ರಮುನಿ ಶಿವಾಚಾರ್ಯರು, ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯರು, ಬೇರುಗಂಡಿ ಬೃಹನ್ಮಠದ ರೇಣುಕ ಮಹಂತ ಶಿವಾಚಾರ್ಯರು, ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯರು ಹಾಗೂ ಗುಂಡಕನಾಳದ ಹಿರೇಮಠದ ಗುರುಲಿಂಗ ಶಿವಾಚಾರ್ಯರು ಪಾಲ್ಗೊಂಡಿದ್ದರು. ಕಾರ್ತಿಕ ದೀಪೋತ್ಸವ ಅಂಗವಾಗಿ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ರಥೋತ್ಸವ ಭಕ್ತ ಸಮೂಹದ ಮಧ್ಯೆ ಸಂಭ್ರಮ ಸಡಗರದಿಂದ ಜರುಗಿತು. ಬೆಂಗಳೂರು ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆ ಅಧ್ಯಕ್ಷ ಯು.ಎಂ.ಬಸವರಾಜ್, ಚಿಕ್ಕಮಗಳೂರು ತಾಲೂಕ ವೀರಶೈವ ಸಮಾಜದ ಅಧ್ಯಕ್ಷ ಬೆಳಗೊಳ ಶಿವಶಂಕರ, ಆಲ್ದೂರಿನ ಇಳೇಖಾನ ಉಮೇಶ್, ಬಾಳೆಹೊನ್ನೂರಿನ ಎಮ್.ಎಸ್.ಚನ್ನಕೇಶವ್ ಭಾಗವಹಿಸಿದ್ದರು.ಶಿಗ್ಗಾಂವಿ ಸುರಗೀಮಠದ ಲಲಿತಾದೇವಿ ಶಿವಪುತ್ರಯ್ಯ ಮಕ್ಕಳು ದೀಪಾರಾಧನೆ ಸೇವೆಯನ್ನು, ಹುಬ್ಬಳ್ಳಿಯ ವೀರೇಶ ಪಾಟೀಲ ಅವರು ವಿದ್ಯುತ್ ದೀಪಾಲಂಕಾರ ಸೇವೆಯನ್ನು ಚಿಕ್ಕಮಗಳೂರಿನ ಶಾಂತಮ್ಮ ಮತ್ತು ಮಕ್ಕಳು ದಾಸೋಹ ಸೇವೆಯನ್ನು ಸಲ್ಲಿಸಿದರು. ಸಹಸ್ರಾರು ಭಕ್ತರು ಕಾರ್ತಿಕ ದೀಪೋತ್ಸವ ಹಾಗೂ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದ ದೃಶ್ಯ ಅಪೂರ್ವವಾಗಿತ್ತು.The mind is the source of life’s ups and downs. -

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ
ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ ೩೪ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸಪ್ಟಂಬರ್ ೨೨ರಿಂದ ಅಕ್ಟೋಬರ್ ೨ರ ವರೆಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗುವುದೆಂದು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಪತ್ರಿಕಾ ಪ್ರಕಟಣೆ ತಿಳಿಸಿದೆ.ಸಪ್ಟಂಬರ್ ೨೨ರಂದು ಮಾಜಿ ಮುಖ್ಯ ಮಂತ್ರಿ ಹಾಗೂ ಬಿಜೆಪಿ ಹಿರಿಯ ಧುರೀಣರಾದ ಬಿ.ಎಸ್.ಯಡಿಯೂರಪ್ಪ ಸಮಾರಂಭವನ್ನು ಉದ್ಘಾಟಿಸುವರು. ಅರಣ್ಯ ಪರಿಸರ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಸವಕಲ್ಯಾಣ ಶರನ್ನವರಾತ್ರಿ ದಸರಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಈಶ್ವರ ಖಂಡ್ರೆ ಶ್ರೀ ರಂಭಾಪುರಿ ಜಗದ್ಗುರುಗಳ ಭಾವಚಿತ್ರ ಬಿಡುಗಡೆ ಮಾಡುವರು. ಸಮಿತಿಯ ಗೌರವಾಧ್ಯಕ್ಷರಾದ ಹಾರಕೂಡ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ನೇತೃತ್ವ ವಹಿಸಲಿದ್ದು ಅ.ಭಾ.ವೀ.ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷರಾದ ಸಿಂದಗಿಯ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಸಮ್ಮುಖ ವಹಿಸುವರು. ಪೌರಾಡಳಿತ-ಹಜ್ ಖಾತೆ ಸಚಿವ ರಹೀಮಖಾನ, ಹುಮನಾಬಾದ ಶಾಸಕ ಡಾ.ಸಿದ್ಧಲಿಮಗ ಪಾಟೀಲ, ಮಾಜಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ, ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ್, ಸಮಿತಿಯ ಕಾರ್ಯಾಧ್ಯಕ್ಷ- ಶಾಸಕ ಶರಣು ಬಿ.ಸಲಗರ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳುವರು. ೨೩ರಂದು ಮುಖ್ಯ ಅತಿಥಿಗಳಾಗಿ ಸಚಿವರಾದ ಪ್ರಿಯಾಂಕ ಖರ್ಗೆ, ಸಂಸದರಾದ ಸಾಗರ ಖಂಡ್ರೆ, ಶಿವಾಜಿ ಬಂಡೆಪ್ಪ ಕಾಳಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಅಜಯಸಿಂಗ್ ಧರ್ಮಸಿಂಗ್, ಶಾಸಕ ಸಿದ್ಧಲಿಂಗ ಪಾಟೀಲ, ಡಾ|| ಚಂದ್ರಶೇಖರ ಪಾಟೀಲ, ಬಸವರಾಜ ಪಾಟೀಲ ಅಟ್ಟೂರು ಮೊದಲಾದವರು ಭಾಗವಹಿಸುವರು. ೨೪ರಂದು ಕೊಲ್ಲಿಪಾಕಿ ಕ್ಷೇತ್ರ ದರ್ಶನ ಕೃತಿಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿಡುಗಡೆಗೊಳಿಸುವರು. ಶಾಸಕರಾದ ಡಾ.ಅವಿನಾಶ ಜಾಧವ, ಬಸವರಾಜ ಮತ್ತಿಮೂಡ, ವಿ.ಪ.ಮಾಜಿ ಸಭಾಪತಿ ರಘುನಾಥ ಮಲ್ಕಾಪುರೆ ಪ್ರಕಾಶ ಖಂಡ್ರೆ, ದತ್ತಾತ್ರೆಯ ಪಾಟೀಲ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು. ೨೫ರಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಬಿಜೆಪಿ ರಾಜ್ಯಾಧ್ಯಕ್ಷ-ಶಾಸಕ ಬಿ.ವೈ.ವಿಜಯೇಂದ್ರ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಅಭಿಮನ್ಯು ಪವಾರ, ವಿ.ಪ.ಸದಸ್ಯ ಭೀಮರಾವ ಪಾಟೀಲ, ಮಾಜಿ ಶಾಸಕರಾದ ರಾಜೇಂದ್ರ ವರ್ಮಾ, ಗುಂಡಪ್ಪ ವಕೀಲ ಭಾಗವಹಿಸುವರು. ೨೬ರಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಮಾಜಿ ಮುಖ್ಯ ಮಂತ್ರಿ-ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ವಿಜಯಾನಂದ ಕಾಶಪ್ಪನವರ, ಬಿ.ಆರ್.ಪಾಟೀಲ, ಜಿ.ಎಸ್.ಪಾಟೀಲ, ಸಿ.ಸಿ.ಪಾಟೀಲ, ಮಾಜಿ ಸಂಸದ ಬಸವರಾಜ ಪಾಟೀಲ, ಅಶೋಕ ಖೇಣಿ ಭಾಗವಹಿಸುವರು.ಸಪ್ಟಂಬರ್ ೨೭ರಂದು ರಂಭಾಪುರಿ ಬೆಳಗು ಪತ್ರಿಕೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಬಿಡುಗಡೆ ಮಾಡುವರು. ಮಾಜಿ ಮುಖ್ಯ ಮಂತ್ರಿ-ಸಂಸದ ಜಗದೀಶ ಶೆಟ್ಟರ್, ಅ.ಭಾ.ವೀ.ಲಿಂ.ಮಹಾಸಭಾ ಅಧ್ಯಕ್ಷ ಶಂಕರ ಬಿದರಿ, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ, ಬಂಡೆಪ್ಪಾ ಖಾಶಂಪುರ, ರಾಜಕುಮಾರ ತೆಲ್ಕೂರ ಪಾಲ್ಗೊಳ್ಳುವರು. ೨೮ರಂದು ಕೇಂದ್ರ ಸಚಿವ ವಿ.ಸೋಮಣ್ಣ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ, ಸಚಿವ ಡಾ|| ಶರಣುಪ್ರಕಾಶ ಪಾಟೀಲ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಂ.ವಾಯ್.ಪಾಟೀಲ, ಸಂಭಾಜಿರಾವ ಪಾಟೀಲ, ಜಗದೀಶ ಗುಡಗುಂಟಿ ಭಾಗವಹಿಸವರು. ೨೯ರಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಲಕ್ಷ್ಮಣ ಸವದಿ, ಹರೀಶ ಪೂಂಜ್ಯಾ, ರಾಜೇಶ ನಾಯಕ, ಮಾಜಿ ಸಂಸದ ಡಾ.ಉಮೇಶ ಜಾಧವ ಪಾಲ್ಗೊಳ್ಳುವರು. ೩೦ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಮುರಗೇಶ ನಿರಾಣಿ, ಸುಭಾಷ ಕಲ್ಲೂರ, ಸುಭಾಷ ಗುತ್ತೆದಾರ, ವಿಜಯಸಿಂಗ್ ಭಾಗವಹಿಸುವರು. ಅಕ್ಟೋಬರ್ ೧ ರಂದು ಮಾಜಿ ಕೇಂದ್ರ ಸಚಿವ ಶಿವರಾಜ ಪಾಟೀಲ ಚಾಕೂರಕರ, ರಾಜ್ಯ ಸಚಿವ ಭೋಸರಾಜ, ಶಾಸಕ ಶರಣಗೌಡ ಕಂದಕೂರ, ಭಾಜಪ ಮಾಜಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಮೊದಲಾದವರು ಪಾಲ್ಗೊಳ್ಳುವರು.ಉಪನ್ಯಾಸ: ಬೆಳಗುಂಪಾ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರು, ಎಮ್ಮಿಗನೂರಿನ ವಾಮದೇವ ಮಹಂತ ಶಿವಾಚಾರ್ಯರು, ಅಮ್ಮಿನಭಾವಿ ಅಭಿನವ ಶಾಂತಲಿಂಗ ಶಿವಾಚಾರ್ಯರು, ಡಾ. ಜಯಶ್ರೀ ಮಲ್ಲಿಕಾರ್ಜುನ ಹೊಸಮನಿ, ಚಂದ್ರಶೇಖರ ನಾರಣಾಪುರ, ಡಾ.ಮೀನಾಕ್ಷಿ ಖಂಡಿಮಠ, ಡಾ.ಎ.ಸಿ. ವಾಲಿ, ಡಾ.ಪ್ರೇಮಾ ಸಿದ್ಧರಾಜು, ಮಳಖೇಡದ ಹಜರತ್ ಸೈಯದ ಶಹಾ ಮುಸ್ತಫಾ ಖಾದರಿ ಇವರಿಂದ ವಿವಿಧ ವಿಷಯಗಳ ಕುರಿತು ಉಪನ್ಯಾಸ ನಡೆಯುವುದು.ಪ್ರಶಸ್ತಿ: ಈ ವರ್ಷದ ರಂಭಾಪುರಿ ಯುವಸಿರಿ ಪ್ರಶಸ್ತಿಯನ್ನು ವಿಶ್ವಜಿತ ತಾತೇರಾವ ಢವಳೆ (ಲಾಡವಂತಿ), ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಕಲಬುರ್ಗಿಯ ಅಮರಾವತಿ ಎಸ್.ಹಿರೇಮಠ, ಸಾಧನ ಸಿರಿ ಪ್ರಶಸ್ತಿಯನ್ನು ಡಾ,ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಗವಿಮಠ ತ್ರಿಪುರಾಂತಕ, ವೀರಶೈವ ಸಿರಿ ಪ್ರಶಸ್ತಿಯನ್ನು ತ್ರಿಪುರಾಂತಕದ ಶರಣಪ್ಪ ಬಿರಾದಾರ ಹಾಗೂ ಶಿವಾಚಾರ್ಯ ರತ್ನ ಪ್ರಶಸ್ತಿಯನ್ನು ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯರಿಗೆ, ಪಡಸಾವಳಿ ಹಿರೇಮಠದ ಶಂಭುಲಿಂಗ ಶಿವಾಚಾರ್ಯರಿಗೆ ವೀರಶೈವ ತತ್ವ ಪ್ರಬೋಧಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಸಮಾರಂಭದಲ್ಲಿ ಹಲವಾರು ಮಹತ್ವದ ಕೃತಿಗಳು ಬಿಡುಗಡೆಗೊಳ್ಳುವವು.ಇಷ್ಟಲಿಂಗ ಮಹಾಪೂಜಾ: ಬಸವಕಲ್ಯಾಣದ ಬಿ.ಕೆ.ಡಿ.ಬಿ.ಕಲ್ಯಾಣ ಮಂಟಪದಲ್ಲಿ ಪ್ರತಿ ದಿನ ಬೆಳಿಗ್ಗೆ ಲೋಕ ಕಲ್ಯಾಣಾರ್ಥವಾಗಿ ಶ್ರೀರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನಡೆಸುವರು. ವಿಜಯದಶಮಿಯಂದು ಇಷ್ಟಲಿಂಗ ಮಹಾಪೂಜೆಗೆ ಸ್ವತ: ಶ್ರೀ ರಂಭಾಪುರಿ ಜಗದ್ಗುರುಗಳು ಅಗ್ರೋದಕ ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು.ಅಕ್ಟೋಬರ ೨ ವಿಜಯದಶಮಿಯಂದು ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿ ಅರಿವಿನ ಮನೆ ಆವರಣದಲ್ಲಿ ಶಮೀ ಪೂಜೆ ಸಲ್ಲಿಸಿ ನಂತರ ಮಾನವ ಧರ್ಮ ಮಂಟಪಕ್ಕೆ ಆಗಮಿಸಿ ಶಾಂತಿ ಸಂದೇಶ ಅನುಗ್ರಹಿಸುವರು. ಸ್ವಾಗತ ಸಮಿತಿಯ ಅಧ್ಯಕ್ಷ-ಸಚಿವ ಈಶ್ವರ ಖಂಡ್ರೆ, ಕಾರ್ಯಾಧ್ಯಕ್ಷ ಶಾಸಕ ಶರಣು ಸಲಗರ, ಗೌರವ ಉಪಾಧ್ಯಕ್ಷ ರಾಜಶೇಖರ ಪಾಟೀಲ, ಗೌರವಾಧ್ಯಕ್ಷ ಹಾರಕೂಡ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿಗಳು, ಮಾರ್ಗದರ್ಶಕರಾದ ಮೆಹಕರ-ತಡೋಳಾ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು, ತ್ರಿಪುರಾಂತಕ ಗವಿಮಠದ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಹಾಗೂ ದಸರಾ ಮಹೋತ್ಸವ ಸಮಿತಿಯ ಎಲ್ಲ ಪದಾಧಿಕಾರಿಗಳು ಪಾಲ್ಗೊಳ್ಳುವರು.ಸಪ್ಟಂಬರ್ ೨೭ರಂದು ಕೃಷಿ ಇಲಾಖೆಯ ಸಹಕಾರದೊಂದಿಗೆ ಕೃಷಿ ಮೇಳ ನಡೆಯುವುದು. ಸಪ್ಟಂಬರ್ ೨೨ರಿಂದ ಅಕ್ಟೋಬರ್ ೧ರ ವರೆಗೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ಮಹಿಳಾ ಘಟಕ ಬಸವಕಲ್ಯಾಣ ಇವರಿಂದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯುವುದು. ಸಮಸ್ತ ಭಕ್ತರು ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.Sharannavarathri Dasara Dharma Sammelana in Basavakalyana -

ಧರ್ಮಸ್ಥಳ ಪ್ರಕರಣ-ನೈಜ ಆರೋಪಿಗಳ ಪತ್ತೆಗೆ ಆಗ್ರಹ
ಬಾಳೆಹೊನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು, ಶ್ರೀ ಕೇದಾರ ಭೀಮಾಶಂಕರ ಜಗದ್ಗುರುಗಳು, ಶ್ರೀಶೈಲ ಡಾ.ಚನ್ನಸಿದ್ಧರಾಮ ಜಗದ್ಗುರುಗಳು, ಶ್ರೀ ಕಾಶೀ ಡಾ.ಚಂದ್ರಶೇಖರ ಜಗದ್ಗುರುಗಳು, ನೂತನ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಜಗದ್ಗುರುಗಳು ಧರ್ಮ ಕ್ಷೇತ್ರಗಳು ತಮ್ಮದೇ ಆದ ಸಂಸ್ಕೃತಿ ಮತ್ತು ಪರಂಪರೆಯನ್ನು ಅನುಸರಿಸುತ್ತವೆ.
ಅಂತಹ ಧರ್ಮ ಕ್ಷೇತ್ರಗಳಲ್ಲಿ ರಾಜಕೀಯವನ್ನು ಬೆರೆಸುವ ಕೆಲಸ ಯಾರೂ ಮಾಡಬಾರದು. ಅನಾವಶ್ಯಕವಾಗಿ ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದು, ಭಕ್ತರ ಮತ್ತು ಸಮಾಜದ ಹಾಗೂ ಸರ್ಕಾರದ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಸನಾತನ ಧರ್ಮ ತೇಜೋವಧೆಗೆ ಕಾಣದ ಕೈಗಳು ಹುನ್ನಾರ ನಡೆಸಿವೆ. ಸರ್ಕಾರ ರಚನೆ ಮಾಡಿರುವ ವಿಶೇ? ತನಿಖಾ ಸಂಸ್ಥೆಯು ಮೇಲ್ನೋಟಕ್ಕೆ ಆರೋಪಿಗಳಾಗಿರುವವರ ವಿಚಾರಣೆ ನಡೆಸುತ್ತಿದ್ದು, ಈ ಒಟ್ಟಾರೆ ಪ್ರಕರಣದ ಹಿಂದಿನ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಆದ? ಬೇಗ ಅವರಿಗೆ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದ್ದಾರೆ.
ನಾಡಿನಲ್ಲಿರುವ ಅನೇಕ ಮಠ-ಮಂದಿರಗಳು ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಾಚೀನ ಕಾಲದಿಂದಲೂ ಕಾರ್ಯ ನಿರ್ವಹಿಸಿಕೊಂಡು ಬಂದಿವೆ. ಅಂತೆಯೇ ಧರ್ಮಸ್ಥಳ ಕ್ಷೇತ್ರ ಶತಮಾನಗಳ ಇತಿಹಾಸ ಹೊಂದಿದ್ದು ನಾಡಿಗೆ ವಿಶೇ? ಕೊಡುಗೆ ನೀಡಿದೆ. ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಕಳೆದ ೫೦ ವ?ಗಳಿಂದ ಧರ್ಮ ಸಂಸ್ಕೃತಿ ಪುನುರುತ್ಥಾನಕ್ಕೆ ವಿಶೇ? ಕೊಡುಗೆ ನೀಡಿದ್ದಾರೆ.
ಇಂತಹ ಕ್ಷೇತ್ರದ ಮೇಲೆ ಬಂದಿರುವ ಆರೋಪಗಳು ಮುಕ್ತವಾಗಿ ಆದ? ಬೇಗ ಮೊದಲಿನಂತೆ ಎಲ್ಲ ಸಾಮಾಜಿಕ ಕಾರ್ಯಗಳು ಮುಂದುವರೆಯುವಂತಾಗಲಿ ಎಂದು ಹಾರೈಸಿರುವ ಜಗದ್ಗುರು ಪಂಚಪೀಠಾಧೀಶ್ವರರು ಹಿಂದೂ ಸಂಸ್ಕೃತಿಯ ಬಗ್ಗೆ ಇತ್ತೀಚಿಗೆ ಕೆಲವು ನಾಸ್ತಿಕರು ಅಲ್ಲಲ್ಲಿ ವಾತಾವರಣ ಕಲುಷಿತಗೊಳಿಸುವ ಕೆಲಸ ಮಾಡುತ್ತಿದ್ದಾರೆ ಅಂತವರನ್ನು ಗುರುತಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಆಗ್ರಹಿಸಿದ್ದಾರೆ.
Dharmasthala case – Demand to find the real accused
-

ವೀರಶೈವ ಲಿಂಗಾಯತ ಸಮಾಜ ಬಾಂಧವರಲ್ಲಿ ಸಾಮರಸ್ಯ ಮೂಡಿ ಬರಲಿ
ಹರಪನಹಳ್ಳಿ: ಪ್ರಾಚೀನ ಇತಿಹಾಸ ಮತ್ತು ಪರಂಪರೆ ಹೊಂದಿದ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳಲ್ಲಿ ಸಾಮರಸ್ಯ ಬೆಳೆದು ಬರುವ ಅವಶ್ಯಕತೆ ಇದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಭಾನುವಾರ ಹರಪನಹಳ್ಳಿಗೆ ಸಮೀಪದಲ್ಲಿರುವ ಕಾಯಕದಹಳ್ಳಿ ಶ್ರೀ ಮಯೂರಿ ಸಭಾಂಗಣದಲ್ಲಿ ಸೋಗಿ ಎ.ಎಂ. ಹಾಲಯ್ಯ ಶಾಸ್ತ್ರಿಗಳವರ ೯೦ನೇ ವ?ದ ಜನ್ಮದಿನೋತ್ಸವದ ನಿಮಿತ್ಯ ಜರುಗಿದ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ವೀರಶೈವ ಲಿಂಗಾಯತ ಇವೆರಡು ಒಂದೇ ಆಗಿದ್ದು ಯಾವುದೇ ಭಿನ್ನ ಭಾವನೆಗಳಿಲ್ಲ. ಆದರೆ ಕೆಲವರು ಉದ್ದೇಶಪೂರ್ವಕವಾಗಿ ಇವೆರಡರಲ್ಲಿ ಭೇದವನ್ನು ಕಲ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬರಲಿರುವ ಜಾತಿ ಜನಗಣತಿಯಲ್ಲಿ ವೀರಶೈವ ಲಿಂಗಾಯತ ಎಂಜಇ ಬರೆಯಿಸಿ ಧರ್ಮದ ಸಮಗ್ರತೆ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುವ ಅವಶ್ಯಕತೆ ಇದೆ. ೨೮ ಆಗಮಗಳ ಉತ್ತರ ಭಾಗದಲ್ಲಿ ವೀರಶೈವ ಧರ್ಮದ ಹಿರಿಮೆ ಮತ್ತು ಪ್ರಾಚೀನತೆಯನ್ನು ಕಾಣಬಹುದಾಗಿದೆ.
ಬಸವಾದಿ ಶರಣರು ಈ ಶ್ರೇ?ವಾದ ಧರ್ಮ ಪರಂಪರೆಯಲ್ಲಿ ಬೆಳೆದು ಈ ಧರ್ಮವನ್ನು ಮತ್ತ? ಬೆಳೆಸಿದ ಇತಿಹಾಸ ಸೂರ್ಯ ಪ್ರಕಾಶದ? ಸತ್ಯವಾಗಿದೆ. ಕೆಲವರು ವಿನಾಕಾರಣ ದ್ವಂದ್ವಗಳನ್ನು ಹುಟ್ಟುಹಾಕಿ, ಧರ್ಮದ ಘನತೆ ಗೌರವಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿರುವುದು ನೋವಿನ ಸಂಗತಿ. ೨೦ ವ?ಗಳ ಹಿಂದಿನ ಪಠ್ಯಪುಸ್ತಕದಲ್ಲಿ ಬಸವಣ್ಣನವರು ವೀರಶೈವ ಲಿಂಗಾಯತ ಧರ್ಮದ ಸುಧಾರಕರೆಂದು ಸ್ಪ?ಪಡಿಸಿದ ದಾಖಲೆಗಳಿವೆ.
ಎಲ್ಲ ಪಂಗಡಗಳನ್ನು ಒಂದೆಡೆ ಬೆಸೆಯುವ ಕೆಲಸವನ್ನು ಬಸವಣ್ಣನವರು ಮಾಡಿದರೆ ಇಂದಿನ ಅವರ ಅನುಯಾಯಿಗಳು ಅವರ ವಿಚಾರಧಾರೆಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ. ಹುಸಿಯ ನುಡಿಯಲು ಬೇಡ ಎಂಬ ಅವರ ಮಾತಿನಂತೆ ನಡೆದುಕೊಳ್ಳುವುದು ಬಹಳ? ಉತ್ತಮ ಮಾರ್ಗ. ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ವೀರಶೈವ ಮತ ಸಿದ್ಧಾಂತವನ್ನು ಭೂಮಂಡಲದಲ್ಲಿ ಸ್ಥಾಪಿಸಿದರೆ ಬಸವಾದಿ ಶರಣರು ಅದನ್ನು ಮತ್ತ? ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಜಾತಿ ಜನಗಣತಿಯ ಸಂದರ್ಭದಲ್ಲಿ ಭಾವನಾತ್ಮಕವಾಗಿ ಒಂದುಗೂಡಿ ಕೆಲಸ ಮಾಡಿದರೆ ಯಶಸ್ಸು ನಿಶ್ಚಿತ ಎಂದರು.
ಹರಪನಹಳ್ಳಿ ಕ್ಷೇತ್ರದ ಶಾಸಕಿ ಶ್ರೀಮತಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಸಮಾರಂಭ ಉದ್ಘಾಟಿಸಿ ವೀರಶೈವ ಲಿಂಗಾಯತ ಧರ್ಮದ ಸಮಗ್ರತೆಯಲ್ಲಿ ನಮ್ಮೆಲ್ಲರ ಹಿತ ಮತ್ತು ಪ್ರಗತಿ ಒಳಗೊಂಡಿದೆ ಎಂದರು. ಸಂಸ್ಥಾನ ತಗ್ಗಿನ ಮಠದ ವರಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳು ಮತ್ತು ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮನಿ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತವನ್ನು ನೀಡಿದರು. ಡಾ ಚಂದ್ರಶೇಖರಯ್ಯ ಮತ್ತು ಸದ್ಯೋಜಾತಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಎ.ಎಂ ಹಾಲಯ್ಯ ಶಾಸ್ತ್ರಿಗಳು ಸನ್ಮಾನಕ್ಕೆ ಉತ್ತರಿಸಿ ನನ್ನ ಪೂರ್ವಾರ್ಜಿತದ ಪುಣ್ಯದ ಫಲದ ಸುದಿನ. ಇಂದು ಈ ಭಾಗದ ಭಕ್ತರರೆಲ್ಲರೂ ಭಾವನೆಗಳಿಗೆ ಸಂಸ್ಕಾರ ಕೊಡುವಂತ ಕೆಲಸವನ್ನು ಪರಮಾಚಾರ್ಯರ ಆಶೀರ್ವಾದದಿಂದ ಮಾಡುತ್ತಾ ಬಂದಿರುವೆ. ಕಾರ್ಯಕ್ರಮ ಸಂಘಟಿಸಿದ ಮತ್ತು ಆಗಮಿಸಿದ ಎಲ್ಲ ಜನತೆಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದರು. ಚಿರಸ್ತಹಳ್ಳಿ ಕಲ್ಮಠದ ಮಲ್ಲಿಕಾರ್ಜುನ್ ನಿರೂಪಿಸಿದರು.
May harmony prevail among the Veerashaiva Lingayat community members.
-

ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಂದ 15 ಸಾವಿರ ರೂ ದಂಡ ವಸೂಲಿ
ಚಿಕ್ಕಮಗಳೂರು: ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಗರಸಭೆ ಗುರಿ ಹೊಂದಿದ್ದು, ಅದರಂತೆ ಅಧಿಕಾರಿ ಸಿಬ್ಬಂದಿಗಳು ಉತ್ತಮ ಕೆಲಸ ಮಾಡುತ್ತಿದ್ದು, ನಗರದ ವಿವಿಧ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಂದ ಸುಮಾರು ೧೫ ಸಾವಿರ ರೂ ದಂಡ ವಸೂಲಿ ಮಾಡಲಾಗಿದೆ ಎಂದು ನಗರಸಭಾಧ್ಯಕ್ಷೆ ಶೀಲಾದಿನೇಶ್ ತಿಳಿಸಿದರು.
ಅವರು ಇಂದು ನಗರದ ವಿವಿಧ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆಯ ಮೂಲಕ ವರ್ತಕರಿಗೆ ಎಚ್ಚರಿಕೆ ನೀಡಿ ಮಾತನಾಡಿ ನಗರದ ವರ್ತಕರಿಗೆ ಇದು ಸರಿಯಾದ ಪಾಠವಾಗಿದ್ದು, ಮುಂದೆ ಯಾರೂ ಈ ತಪ್ಪು ಮಾಡಬಾರದು, ಪ್ಲಾಸ್ಟಿಕ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ವರ್ತಕರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಿರುವುದಾಗಿ ಹೇಳಿದರು.
ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ನಗರದ ದೇವಿಸ್ಟೋರ್ ಸೇರಿದಂತೆ ಇನ್ನಿತರೆ ಅಂಗಡಿಗಳಲ್ಲಿ ನಗರಸಭೆ ನೀಡಿರುವ ಸೂಚನೆಗಳನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ೩೦೦ ಕೆ.ಜಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ೧೫ ಸಾವಿರ ರೂ ದಂಡ ವಿಧಿಸಲಾಗಿದೆ ಎಂದರು.
ನಗರದ ವರ್ತಕರು ಮುಂದೆ ಇದೇ ರೀತಿಯ ತಪ್ಪು ಮಾಡಿದರೆ ನಗರಸಭೆಯಿಂದ ನೀಡಿರುವ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ, ಶಾಶ್ವತವಾಗಿ ಅಂಗಡಿಯನ್ನು ಮುಚ್ಚಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಕಲ್ಯಾಣ ಮಂಟಪ, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ನಗರಸಭೆಯಲ್ಲಿ ಸಭೆ ನಡೆಸಿ ಸೂಕ್ತ ಎಚ್ಚರಿಕೆ ನೀಡಿದ್ದರೂ ಸೂಚನೆಗಳನ್ನು ಪಾಲನೆ ಮಾಡದೆ ಪ್ಲಾಸ್ಟಿಕ್ ಮಾರಾಟಕ್ಕೆ ಮುಂದಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವುದಾಗಿ ಹೇಳಿದರು.
ಹೊರ ಜಿಲ್ಲೆಗಳಿಂದ ಲಾರಿಗಳಲ್ಲಿ ಪ್ಲಾಸ್ಟಿಕ್ ನಗರಕ್ಕೆ ಬರುತ್ತಿದ್ದು, ತಪಾಸಣೆ ನಡೆಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಳ್ಳಲು ಈಗಾಗಲೇ ಪೊಲೀಸ್ ಮತ್ತು ನಗರಸಭೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.
ನಗರಸಭೆ ಸದಸ್ಯ ಎ.ಸಿ. ಕುಮಾರಗೌಡ ಮಾತನಾಡಿ, ನಗರವನ್ನು ಕಸಮುಕ್ತ, ಪ್ಲಾಸ್ಟಿಕ್ ಮುಕ್ತವಾಗಿಸಬೇಕೆಂದು ನಗರಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಬಗ್ಗೆ ನಗರಸಭಾಧ್ಯಕ್ಷರು, ಪೌರಾಯುಕ್ತರು ಸಿಬ್ಬಂದಿ ಜೊತೆಗೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗುತ್ತಿದೆ ಎಂದರು.
ಮಹಾವೀರ್ ಟ್ರೇಡಿಂಗ್ ಕಂಪನಿಗೆ ೫ ಸಾವಿರ ರೂ, ವರ್ಧಮಾನ್ ದಿನಸಿ ಅಂಗಡಿಗೆ ೨ ಸಾವಿರ ರೂ, ದೇವಿ ಪ್ಲಾಸ್ಟಿಕ್ ಅಂಗಡಿಗೆ ೩ ಸಾವಿರ ರೂ, ಪುಷ್ಪ ಪೇಪರ್ ಮಾರ್ಟ್‌ಗೆ ೫ ಸಾವಿರ ರೂ ದಂಡ ವಿಧಿಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಪರಿಸರ ಅಭಿಯಂತರರಾದ ತೇಜಸ್ವಿನಿ, ನಗರಸಭೆ ಸದಸ್ಯರುಗಳಾದ ಸೈಯದ್ ಜಾವಿದ್, ಅಮೃತೇಶ್ ಚನ್ನಕೇಶವ, ಆರೋಗ್ಯ ನಿರೀಕ್ಷಕರಾದ ವೆಂಕಟೇಶ್, ಉಪಸ್ಥಿತರಿದ್ದರು.
Rs 15000 fine collected from traders selling plastic
-

ಸದ್ಗುಣ ಸಚ್ಚಾರಿತ್ರ್ಯದಿಂದ ಬದುಕು ಶ್ರೀಮಂತಗೊಳ್ಳಬೇಕು
ಚಿಕ್ಕಮಗಳೂರು: ಮನುಷ್ಯನ ಮನಸ್ಸೆಂಬ ಚಂಚಲ ಅಲೌಕಿಕ ಹೊಯ್ದಾಟವನ್ನು ಶಾಂತ ಪ್ರಶಾಂತಗೊಳಿಸುವ ಮಾರ್ಗವೇ ಆಧ್ಯಾತ್ಮವಾಗಿದೆ. ಜ್ಯೋತಿ ಉರಿದು ಬೆಳಕು ಬೀರುವ ಹಾಗೆ ಆಚಾರ್ಯ ಸಂತ ಶ್ರೇಷ್ಠರು ಬಾಳಿ ಬೆಳಕಾದರು. ಸತ್ಯ ಸದ್ಗುಣ ಸಚ್ಚಾರಿತ್ರ್ಯದಿಂದ ಬದುಕು ಶ್ರೀಮಂತಗೊಳ್ಳಬೇಕಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರಾವಣ ಮಾಸದ ಪುರಾಣ ಪ್ರವಚನ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಈಶ ನಿರ್ಮಿತವಾದ ಈ ಪ್ರಪಂಚದಲ್ಲಿ ಇರುವುದೆಲ್ಲವೂ ಅಮೂಲ್ಯ ಸಂಪತ್ತು. ಶ್ರದ್ಧಾವಂತರಾದ ಭಾರತೀಯರು ಮಣ್ಣು ಜಲ ಬೆಂಕಿ ಗಾಳಿ ಮತ್ತು ಕಲ್ಲಿನಲ್ಲಿ ದೇವರನ್ನು ಕಂಡು ಪೂಜಿಸಿದವರು. ದೇಹ ಮನ ಬುದ್ಧಿ ಕೈ ಕಾಲು ಇವುಗಳೆಲ್ಲವೂ ನಿಜವಾದ ಸಂಪತ್ತು. ಕೈ ಬೆರಳುಗಳು ಇಲ್ಲದಿದ್ದರೆ ಉಂಗುರ ಹೇಗೆ ಇಡಲು ಸಾಧ್ಯ.
ಮನೆಯ ಕಿಡಕಿ ಬಾಗಿಲುಗಳನ್ನು ತೆರೆದಾಗ ಶುದ್ಧವಾದ ಗಾಳಿ ಬೆಳಕು ಬೀಳುವ ರೀತಿ ನಮ್ಮ ಮನದ ಬಾಗಿಲು ಕಿಟಕಿ ತೆರೆದರೆ ಭಗವಂತನ ಕಾರುಣ್ಯದ ಬೆಳಕು ಬೀಳುತ್ತದೆ. ಜೀವನ ಜೋಕಾಲಿ ಎಷ್ಟೇ ಎತ್ತರಕ್ಕೆ ತೂಗಿದರೂ ಕೆಳಗೆ ಬೀಳದಂತೆ ಎಚ್ಚರ ತಪ್ಪದಂತೆ ಜಾಗರೂಕರಾಗಿ ಬಾಳಬೇಕೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮ ಸಂವಿಧಾನದಲ್ಲಿ ಬೋಧಿಸಿದ್ದಾರೆ. ಅವರು ಬೋಧಿಸಿದ ವಿಚಾರ ಧಾರೆಗಳು ಸರ್ವ ಕಾಲಕ್ಕೂ ಸರ್ವ ಜನಾಂಗಕ್ಕೂ ಅನ್ವಯಿಸುತ್ತವೆ ಎಂದರು.ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನದಲ್ಲಿ ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಹಣ ಚಿನ್ನ ಬೆಳ್ಳಿ ವಸ್ತು ವಡವೆಗಳಿಂದ ಬದುಕು ಕಟ್ಟಿಕೊಳ್ಳುವುದು ಒಳ್ಳೆಯದಲ್ಲ. ಮೌಲ್ಯಾಧಾರಿತ ಸದ್ಗುಣ ಸದಾಚಾರದಿಂದ ಬದುಕು ಆದರ್ಶಗೊಳ್ಳಬೇಕು. ಚಿನ್ನವಿಲ್ಲದೇ ಬದುಕಬಹುದು. ಆದರೆ ಅನ್ನವಿಲ್ಲದೇ ಬದುಕಲು ಸಾಧ್ಯವಿಲ್ಲ. ಋಷಿ ಮುನಿಗಳು ಆಚಾರ್ಯ ಶ್ರೇಷ್ಠರು ಭೌತಿಕ ಬದುಕಿಗಾಗಿ ಹಂಬಲಿಸದೇ ಆಧ್ಯಾತ್ಮ ಲೋಕದಲ್ಲಿ ಬಾಳಿ ಇನ್ನಿತರರಿಗೆ ದಾರಿ ದೀಪವಾದರು. ಶ್ರೀ ಜಗದ್ಗುರು ರೇಣುಕಾಚಾರ್ಯರು ಮಾಡಿದ ಲೀಲೆ ಪವಾಡಗಳು ಭಕ್ತರ ಬಾಳಂಗಣದಲ್ಲಿ ಸಂಸ್ಕಾರ ಸದ್ವಿಚಾರ ಮತ್ತು ಸೌಹಾರ್ದತೆಯ ಪುನರುತ್ಥಾನಕ್ಕೆ ಸ್ಫೂರ್ತಿಯಾಗಿವೆ ಎಂದರು.
ಹುಡುಗಿ ಹಿರೇಮಠದ ಸೋಮೇಶ್ವರ ಶಿವಾಚಾರ್ಯರು, ಕವಲೇದುರ್ಗದ ಮರುಳಸಿದ್ಧ ಶಿವಾಚಾರ್ಯರು, ಮಳಲಿ ಮಠದ ಡಾ|| ನಾಗಭೂಷಣ ಶಿವಾಚಾರ್ಯರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. ಮಾನೂರು ವಿರುಪಾಕ್ಷ ಶಿವಾಚಾರ್ಯರು, ಮೊರಬದ ಮಹೇಶ್ವರ ಶಿವಾಚಾರ್ಯರು, ಕೊ.ಶಿವಪುರದ ಜಡತಲೆ ಮರುಳಸಿದ್ಧ ಶಿವಾಚಾರ್ಯರು, ಕಲಕೇರಿ ಸಿದ್ಧರಾಮ ಶಿವಾಚಾರ್ಯರು, ಚಿಮ್ಮಲಗಿ ಸಿದ್ಧರೇಣುಕ ಶಿವಾಚಾರ್ಯರು, ಇಂಗಳೇಶ್ವರ ಭೃಂಗೀಶ ಶಿವಾಚಾರ್ಯರು, ಮುಳವಾಡದ ವಿರುಪಾಕ್ಷ ಶಿವಾಚಾರ್ಯರು ಉಪಸ್ಥಿತರಿದ್ದರು. ಗುರುಕುಲದ ಕುಲಪತಿ ಸಿದ್ಧಲಿಂಗ ಶಾಸ್ತ್ರಿಗಳು, ಶ್ರೀ ಪೀಠದ ಲೆಕ್ಕಾಧಿಕಾರಿ ಸಂಕಪ್ಪನವರ, ಅರ್ಚಕ ರೇಣುಕ-ರುದ್ರೇಶ, ಬೊಮ್ಮನಹಳ್ಳಿ ಪ್ರಭುದೇವ ಸಾರಂಗಮಠ ಇನ್ನಿತರರು ಭಾಗವಹಿಸಿದ್ದರು.
ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ ಮತ್ತು ಪ್ರಾರ್ಥನಾ ಗೀತೆ ಜರುಗಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು. ಬೆಳಿಗ್ಗೆ ಶ್ರೀ ಪೀಠದ ಎಲ್ಲ ದೈವಗಳಿಗೆ ವಿಶೇಷ ಪೂಜೆ ಜರುಗಿ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಶುಭ ಹಾರೈಸಿದರು.
Life should be enriched by virtue and good conduct.
-

ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವುದೇ ಸ್ವಚ್ಚತಾ ರ್‍ಯಾಲಿ ಉದ್ದೇಶ
ಚಿಕ್ಕಮಗಳೂರು: ನಗರದ ನಾಗರೀಕರಲ್ಲಿ ಸ್ವಚ್ಚತೆಯ ಬಗ್ಗೆ ಹೆಚ್ಚು ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಚತಾ ರ್‍ಯಾಲಿ, ಮ್ಯಾರಥಾನ್ ಫ್ಲಾಗಿಂಗ್ ಅಭಿಯಾನ ನಡೆಸಲಾಗುತ್ತಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.
ಅವರು ಇಂದು ತಾಲ್ಲೂಕು ಕಛೇರಿ ಆವರಣದಲ್ಲಿ ನಗರಸಭೆ, ಸ್ವಚ್ಚ ಭಾರತ್ ಮಿಷನ್, ೨.೦ ಯೋಜನೆಯಡಿಯಲ್ಲಿ ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವ ಸ್ವಚ್ಚತಾ ರ್‍ಯಾಲಿ, ಮ್ಯಾರಥಾನ್ ಫ್ಲಾಗಿಂಗ್ ಅಭಿಯಾನ, ಸಹಿ ಅಭಿಯಾನ ಜಾಥಕ್ಕೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
೨೦೦೧-೦೨ ರಲ್ಲಿ ನಗರದಲ್ಲಿ ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಚಾ ಟ್ರಸ್ಟ್ ಪ್ರಾರಂಭಿಸಲಾಯಿತು, ಮನೆ-ಮನೆ ಕಸ ಸಂಗ್ರಹದ ಮೂಲಕ ಸ್ವಚ್ಚತೆ ಕಾಪಾಡಬೇಕೆಂದು ನಾಗರೀಕರಲ್ಲಿ ಅರಿವು ಮೂಡಿಸಲಾಗಿತ್ತು, ಸ್ವಚ್ಚತೆ ಕಾಪಾಡುವಲ್ಲಿ ನಗರಸಭೆ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿ ಇದೇ ಎಂದು ಹೇಳಿದರು.
ಪ್ರಪಂಚದಲ್ಲಿ ಸ್ವಿಡ್ಜರ್ ಲ್ಯಾಂಡ್ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದ್ದು, ಅದೇ ರೀತಿ ಮಿನಿ ಸ್ವಿಡ್ಜರ್ ಲ್ಯಾಂಡಾಗಿ ಚಿಕ್ಕಮಗಳೂರು ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ, ಪ್ಲಾಸ್ಟಿಕ್ ಬಾಟಲಿ, ಕಸ ಸಂಪೂರ್ಣವಾಗಿ ನಿಷೇಧಿಸಲಾಗದಿದ್ದರೂ ಕಡಿಮೆ ಮಾಡಿ ನಿಯಂತ್ರಿಸಬೇಕೆಂದು ಕರೆ ನೀಡಿದರು.
ಪ್ರಕೃತಿ ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕೈ ಜೊಡಿಸಬೇಕು ಜೊತೆಗೆ ಜಲಮೂಲಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಹಾಕಿ ಕಲಿಷಿತಗೊಳಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪರಿಸರ ಹಾಗೂ ನಗರಸಭೆ ಸಿಬ್ಬಂದಿಗಳಿಗೆ ಸೂಚನೆ ನೀಡಿ, ಬಾವಿ ಪ್ರಜೆಗಳಾದ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸ್ವಚ್ಚತೆ ಬಗ್ಗೆ ಶಾಲೆಗಳಿಗೆ ತೆರಳಿ ಪರಿಸರ, ಪ್ರಕೃತಿ, ಕಸ ವಿಲೇವಾರಿ ಬಗ್ಗೆ ಪ್ರಾಥಮಿಕ ಹಂತದಲ್ಲಿ ಅರಿವು ಮೂಡಿಸಬೇಕಾದ ಅಗತ್ಯ ಇದೆ ಎಂದು ಹೇಳಿದರು.
ಬಸವತತ್ವ ಪೀಠ ತತ್ವದ ಪೀಠಾಧ್ಯಕ್ಷ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ ದೇವರನ್ನು ಹೊರತುಪಡಿಸಿ ಸ್ವಚ್ಚತೆ ಅಗತ್ಯವಾಗಿದ್ದು, ನಗರ ಅತ್ಯಂತ ಸ್ವಚ್ಚ ನಗರ ಎಂದು ಹೆಸರುಗಳಿಸಿದ್ದು, ಪ್ರವಾಸೋದ್ಯಮದ ಮೂಲಕ ಅತಿ ಹೆಚ್ಚು ಹೆಸರು ಮಾಡುವ ಅವಕಾಶ ಜಿಲ್ಲಾ ಕೇಂದ್ರಕ್ಕೆ ಇದೇ ಎಂದು ತಿಳಿಸಿದರು.
ನಗರದಲ್ಲಿ ವಾಸಿಸುವ ಎಲ್ಲರೂ ಸ್ವಚ್ಚತೆಯ ಬಗ್ಗೆ ಅಪಾರವಾದ ಕಾಳಜಿಯನ್ನು ವಹಿಸುವುದು ಅಗತ್ಯ ಎಂದು ಮನೆಯಲ್ಲಿ ಉತ್ಪತ್ತಿಯಾದ ಕಸವನ್ನು ಬೀದಿಗೆ ಹಾಕದೆ, ನಗರಸಭೆ ಗಂಟೆ ಗಾಡಿಗೆ ಹಾಕುವುದು ರೂಢಿಗತವಾಗಬೇಕೆಂದು ಕರೆ ನೀಡಿದರು. ಸ್ವಚ್ಚತೆ ಕುರಿತು ಗಂಭೀರ ಆಲೋಚನೆ ಮಾಡಬೇಕು ಈ ನಿಟ್ಟಿನಲ್ಲಿ ನಗರಸಭೆ ಮನೆ-ಮನೆ ಕಸ ಸಂಗ್ರಹಿಸಲು ಕೈಗೊಂಡ ದೊಡ್ಡ ಉಪಕ್ರಮದಿಂದ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಈ ವಿಚಾರದಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯವಾಗಿದ್ದು ಸಣ್ಣ-ಸಣ್ಣ ಕೊಡುಗೆ ಬಹಳ ದೊಡ್ಡ ಪರಿಣಾಮ ಬೀರುತ್ತದೆ ಎಂದು ಕಿವಿಮಾತು ಹೇಳಿದರು. ನಗರಸಭಾ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ ಬೀದಿ ನಾಟಕ ಮತ್ತು ಗೋಡೆ ಬರಹಗಳ ಮೂಲಕ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ, ಇದರ ಜೊತೆಗೆ, ನಗರದ ನಾಗರೀಕರ ಮನೆ-ಮನೆ ಕಸ ಸಂಗ್ರಹಣೆಗೆ ಗಂಟೆ ಗಾಡಿಗಳ ಮೂಲಕ ಆದ್ಯತೆ ನೀಡಬೇಕೆಂದು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಕುಮಾರೆ ಗೌಡ, ಪರಮೇಶ್, ಲಕ್ಷ್ಮಣ್, ಸ್ವಚ್ಚ ಟ್ರಸ್ಟ್‌ನ ಡಾ. ಶುಭ ವಿಜಯ್, ಬ್ರಹ್ಮ ಕುಮಾರೀಸ್‌ನ ರಾಜಯೋಗಿನಿ ಬಿ.ಕೆ ಭಾಗ್ಯಕ್ಕ, ರೋಟರಿ ಮತ್ತು ಲಯನ್ಸ ಕ್ಲಬ್ ಸದಸ್ಯರು, ನಗರಸಭೆ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
The purpose of the cleanliness rally is to create awareness about cleanliness.
-

ಸಕಲ ಸಿದ್ಧಿಗಳಿಗೆ ಹೇಳುವ ಜ್ಞಾನ ಮಾಡುವ ಮನಸ್ಸು ಮುಖ್ಯ
ಚಿಕ್ಕಮಗಳೂರು: ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು)- ವಯಸ್ಸು ಇದ್ದಾಗ ವಿದ್ಯೆ ಶಕ್ತಿಯಿದ್ದಾಗ ಹಣ ಸಂಸ್ಕಾರದಿಂದ ಜ್ಞಾನ ಸಂಪಾದಿಸಿಕೊಂಡು ಬಾಳಬೇಕು. ಹೇಳುವ ಜ್ಞಾನ ಮಾಡುವ ಮನಸ್ಸೊಂದಿದ್ದರೆ ಸಾಕು ಸಕಲ ಕಾರ್ಯಗಳು ಸಿದ್ದಿಸುತ್ತವೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶನಿವಾರ ಹುಣ್ಣಿಮೆ ಶ್ರಾವಣ ಪುರಾಣ ಪ್ರವಚನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಸುಖದ ಸಂಪತ್ತು ಅನುಭವಿಸಬೇಕಾದರೆ ಕಷ್ಟದ ಅರಿವು ತಿಳಿದಿರಬೇಕಾಗುತ್ತದೆ. ಸಂಸ್ಕಾರ ಹೇಳಲು ಸನ್ಯಾಸ ಬೇಕಾಗಿಲ್ಲ. ಅನುಭಾವ ಹೇಳಲು ಪದವಿ ಬೇಕಾಗಿಲ್ಲ. ಸೇವೆ ಮಾಡಲು ಅಧಿಕಾರ ಅಂತಸ್ತು ಬೇಕಾಗಿಲ್ಲ ಎಂದರು.
ಈ ಸುಂದರ ಜಗತ್ತು ದೇವರು ಸೃಷ್ಠಿಸಿದ ಆಟದ ಮೈದಾನವಿದು. ನಿಯತ್ತಿನಿಂದ ಆಟ ಆಡಿದರೆ ಗೆಲುವು ನೀತಿ ಮೀರಿ ನಡೆದರೆ ಸೋಲು ಖಚಿತ ಎಂಬುದನ್ನು ಮರೆಯಬಾರದು. ಜೀವನದಲ್ಲಿ ಆಶೆ ಕಳೆದುಕೊಂಡು ಬದುಕಬಹುದು. ಆದರೆ ಆಸಕ್ತಿ ಕಳೆದುಕೊಂಡು ಬಾಳಲಾಗದೆಂದು ನೀತಿ ಸಂಹಿತೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಪ್ರತಿಪಾದಿಸಿದ್ದಾರೆ.
ದೇಶದಲ್ಲಿ ರಾಜ ಸಮಾಜದಲ್ಲಿ ಗುರು ಪರಿವಾರದಲ್ಲಿ ತಂದೆ ಮನೆಯಲ್ಲಿ ಸ್ತ್ರೀ ಇವರು ಎಂದಿಗೂ ಸಾಧಾರಣ ವ್ಯಕ್ತಿಗಳಲ್ಲ. ಏಕೆಂದರೆ ಅಭಿವೃದ್ಧಿ ಮತ್ತು ವಿನಾಶ ಇವೆರಡೂ ಇವರ ಕೈಯಲ್ಲಿಯೇ ಇರುತ್ತವೆ. ಯಾವ ವಿಶ್ವಾಸ ಹೋದರೂ ಯೋಚಿಸಬೇಕಾಗಿಲ್ಲ. ಆದರೆ ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು. ದೇಹದ ಅಂದ ಚೆಂದ ಮರೆಯಾದರೂ ಚಿಂತೆಯಿಲ್ಲ. ಆದರೆ ಮನಸ್ಸು ಮಲಿನಗೊಳ್ಳದೇ ಪರಿಶುದ್ಧವಾಗಿರಬೇಕು. ಶ್ರೀ ಜಗದ್ಗುರು ರೇಣುಕಾಚಾರ್ಯರು ಮೌಲ್ಯಾಧಾರಿತ ಬದುಕಿನ ಬಂಡಿ ಸುಗಮವಾಗಿ ಗುರಿ ತಲುಪಲು ಕೊಟ್ಟ ಚಿಂತನೆಗಳು ಸಕಲರಿಗೂ ಆಶಾಕಿರಣವಾಗಿವೆ ಎಂದರು.
ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನ ಮಾಡಿದ ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಆಧುನಿಕ ಜಗತ್ತಿನಲ್ಲಿ ಸಾಮಾಜಿಕ ವ್ಯವಸ್ಥೆ ಬಹಳಷ್ಟು ಕಲುಷಿತಗೊಳ್ಳುತ್ತಿದೆ. ಸಂಸ್ಕಾರ ಮತ್ತು ಸಂಸ್ಕೃತಿಯ ಕೊರತೆ ಇದಕ್ಕೆಲ್ಲ ಕಾರಣವೆಂದರೆ ತಪ್ಪಾಗದು. ಕಿತ್ತು ತಂದಿದ್ದು ಹೊತ್ತು ಮುಳುಗುವವರೆಗೆ ಮಾತ್ರ ಇರುತ್ತದೆ. ನಿಯತ್ತಿನಿಂದ ದುಡಿದು ತಿನ್ನುವುದು ಜೀವನದ ಕೊನೆಯವರೆಗೆ ಇರುತ್ತದೆ ಎಂಬುದನ್ನು ಮರೆಯಬಾರದು. ನೀರು ಎರೆದವರಿಗೂ ಕಡಿಯ ಬಂದವರಿಗೂ ಬೇಧ ಎಣಿಸದೇ ಮರ ಹಣ್ಣು ನೆರಳು ನೀಡುತ್ತದೆ. ಉಪಕಾರ ಮಾಡಿದವರಿಗೆ ಪ್ರತ್ಯುಪಕಾರ ಮಾಡಲಾಗದಿದ್ದರೂ ಚಿಂತೆಯಿಲ್ಲ. ಆದರೆ ಕೆಡಕು ಬಯಸುವ ಬುದ್ಧಿ ಬರಬಾರದು ಎಂದರು. ಇದೇ ಸಂದರ್ಭದಲ್ಲಿ ಬಾಳಿಗೆ ಬೆಳಕು ಕೃತಿಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಬಿಡುಗಡೆ ಮಾಡಿದರು.
ಶ್ರಾವಣ ಧರ್ಮ ಸಮಾರಂಭದಲಿ ಹುಡುಗಿ ಹಿರೇಮಠದ ಸೋಮೇಶ್ವರ ಶಿವಾಚಾರ್ಯರು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಕುಲಪತಿ ಸಿದ್ಧಲಿಂಗಯ್ಯ ಹಿರೇಮಠ ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ಶಿವಯೋಗ ಸಾಧಕರಿಂದ ಭಕ್ತಿ ಗೀತೆ ಜರುಗಿತು.
ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು. ಬಾಳೆಹೊನ್ನೂರು ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆಯಿಂದ ಆಗಮಿಸಿದ ಸಹೋದರಿಯರು ಜಗದ್ಗುರುಗಳಿಗೆ ರಕ್ಷಾ ಬಂಧನ ಕಟ್ಟಿ ಗೌರವ ಸಲ್ಲಿಸಿದರು.
ಬೆಳಿಗ್ಗೆ ಶ್ರೀ ಪೀಠದ ಎಲ್ಲ ದೈವಗಳಿಗೆ ಹುಣ್ಣಿಮೆ ಅಂಗವಾಗಿ ಪೂಜೆ-ಹೂವಿನ ಅಲಂಕಾರ ಮಾಡಲಾಗಿತ್ತು. ಲೋಕಕಲ್ಯಾಣಕ್ಕಾಗಿ ಶ್ರೀ ರಂಭಾಪುರಿ ಜಗದ್ಗುರುಗಳವರು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಆಶೀರ್ವದಿಸಿದರು. ಶಿಗ್ಗಾಂವಿ ತಾಲೂಕಿನ ಕಬನೂರ ಗ್ರಾಮಸ್ಥರು ಅನ್ನ ದಾಸೋಹ ನೆರವೇರಿಸಿದರು.
The mind that makes knowledge is important for all Siddhis.
-

ಶ್ರಮ ಬದುಕಿನಿಂದ ಜೀವನ ಸಮೃದ್ಧ
ಬಾಳೆಹೊನ್ನೂರು: ಕಷ್ಟಗಳ ನಡುವೆ ಮನುಷ್ಯ ಬಾಳಿ ಬದುಕಿದರೂ ಆದರ್ಶಗಳನ್ನು ಎಂದಿಗೂ ಬಿಡಬಾರದು. ಚಿಂತೆಯಿಂದ ಬದುಕು ದುರ್ಬಲ. ಆದರೆ ಶ್ರಮ ಬದುಕಿನಿಂದ ಜೀವನ ಸಮೃದ್ಧಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರಾವಣ ಪುರಾಣ ಪ್ರವಚನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಹೇಳಿದರು
ಅತಿ ದೊಡ್ಡ ಸಂಪತ್ತು ಎಂದರೆ ಬುದ್ಧಿವಂತಿಕೆ. ಬಲವಾದ ಆಯುಧವೆಂದರೆ ತಾಳ್ಮೆ. ಅತ್ಯಂತ ಉತ್ತಮ ರಕ್ಷಣೆ ಎಂದರೆ ನಂಬಿಕೆ. ಅತ್ಯಂತ ಒಳ್ಳೆಯ ಔಷಧ ಎಂದರೆ ನಗು. ಇವೆಲ್ಲವೂ ಪ್ರಪಂಚದಲ್ಲಿ ದುಡ್ಡಿಲ್ಲದೇ ಸುಲಭವಾಗಿ ಸಿಗುವಂತಹುಗಳು. ಆತುರದ ನಿರ್ಧಾರ ಮನುಷ್ಯನನ್ನು ಬೆಂಕಿಗೆ ತಳ್ಳುತ್ತದೆ. ಅರಿತು ಮಾಡುವ ನಿರ್ಧಾರ ಬದುಕಿಗೆ ಬೆಳಕನ್ನು ತೋರುತ್ತದೆ. ನಂಬಿಕೆ ಮತ್ತು ತಾಳ್ಮೆ ಇದ್ದರೆ ಅದರ ಫಲ ಮುಂದೊಂದು ದಿನ ಒಳ್ಳೆಯದನ್ನು ಉಂಟು ಮಾಡುತ್ತದೆ.
ಆಧುನಿಕ ಯುಗದಲ್ಲಿ ಹೆಚ್ಚು ನಾಗರಿಕ ಸೌಲಭ್ಯ ಸಂಪನ್ಮೂಲ ಹೊಂದಿದ್ದರೂ ಜೀವನಕ್ಕೆ ನೆಮ್ಮದಿಯಿಲ್ಲ. ಜಾಗತೀಕರಣ ಉದಾರೀಕರಣ ಮತ್ತು ಖಾಸಗೀಕರಣ ಬೆಳೆದರಷ್ಟೇ ಸಾಲದು. ಅದರೊಂದಿಗೆ ಮನುಷ್ಯನಲ್ಲಿ ಮಾನವೀಯತೆ ಅಂತ:ಕರಣ ಬೆಳೆದು ಬರಬೇಕಾಗಿದೆ. ವಿಜ್ಞಾನ ತಂತ್ರಜ್ಞಾನಗಳ ತೊಳಲಾಟದಲ್ಲಿ ಧರ್ಮ ಸಂಸ್ಕೃತಿ ಮತ್ತು ಆದರ್ಶಗಳು ನಾಶಗೊಳ್ಳಬಾರದು. ಧರ್ಮ ಅರ್ಥ ಕಾಮ ಮತ್ತು ಮೋಕ್ಷ ಎಂಬ ನಾಲ್ಕು ಪುರುಷಾರ್ಥಗಳನ್ನು ಸಂಪಾದಿಸಿಕೊಂಡು ಬಾಳುವುದೇ ನಿಜವಾದ ಧರ್ಮವೆಂದು ಬೋಧಿಸಿದ್ದಾರೆ ಎಂದರು.
ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನ ಮಾಡಿದ ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಮನುಷ್ಯ ಹುಟ್ಟಿ ಬರುವಾಗ ಪವಿತ್ರ ಹೃದಯದವರಾಗಿರುತ್ತೇವೆ. ಲೌಕಿಕದಲ್ಲಿ ಬೆಳೆದ ಮನಸ್ಸು ಮಲಿನಗೊಂಡ ಬಟ್ಟೆಯಂತಾಗಿದೆ. ಮನದ ಕನ್ನಡಿಯ ಮೇಲೆ ಧೂಳು ಮುಸುಕಿದೆ. ಅಂಟಿದ ಧೂಳು ಜಾಡಿಸಿ ಪರಿಶುದ್ಧಗೊಳಿಸಲು ಗುರುವಿನ ಜ್ಞಾನ ಬೋಧಾಮೃತ ಅವಶ್ಯಕವಾಗಿ ಬೇಕಾಗಿದೆ. ಸುಂದರವಾದ ಉಡುಗೆ ತೊಡುಗೆಗಳಿಂದ ವ್ಯಕ್ತಿತ್ವವನ್ನು ಬದಲಿಸಿಕೊಳ್ಳಬಹುದೇ ವಿನಾ ಬದುಕನ್ನು ಬದಲಿಸಿಕೊಳ್ಳು ಸಾಧ್ಯವಿಲ್ಲ. ಸಂಸ್ಕಾರ ಮತ್ತು ಸಚ್ಚಾರಿತ್ರ್ಯದಿಂದ ಮಾತ್ರ ಬದುಕನ್ನು ಶ್ರೀಮಂತಗೊಳಿಸಲು ಸಾಧ್ಯವಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಸಕಲ ಜನತೆಗೆ ಜ್ಞಾನದ ಬೆಳಕು ತೋರಿ ಉದ್ಧರಿಸಿದರು ಎಂದರು.
ಈ ಸಮಾರಂಭದಲ್ಲಿ ಹುಡುಗಿ ಹಿರೇಮಠದ ಸೋಮೇಶ್ವರ ಶಿವಾಚಾರ್ಯರು, ಲಿಂಗದಹಳ್ಳಿ ಹಿರೇಮಠದ ವೀರಭದ್ರ ಶಿವಾಚಾರ್ಯರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. ಗುರುಕುಲದ ಕುಲಪತಿ ಸಿದ್ಧಲಿಂಗಯ್ಯ ಹಿರೇಮಠ, ರೇವತಗಾಂವ ವಿಶ್ವನಾಥ ದೇವರು, ದಾವಣಗೆರೆಯ ಮಠದ ಶಿವಾನಂದಯ್ಯ, ಡಾ ಸುಲೋಚನಾ ಮಠದ, ವೀರೇಶ ಪಾಟೀಲ ಉಪಸ್ಥಿತರಿದ್ದರು.
ಶಾಂಭವಿ ಮಹಿಳಾ ಮಂಡಳದ ಸದಸ್ಯರು ಭಾಗವಹಿಸಿದ್ದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ವಿಠಲಾಪುರ ಹಿರೇಮಠದ ಗಂಗಾಧರಸ್ವಾಮಿ ಇವರಿಂದ ಪ್ರಾರ್ಥನಾ ಗೀತೆ ಜರುಗಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.ಬೆಳಿಗ್ಗೆ ಶ್ರೀ ರಂಭಾಪುರಿ ಜಗದ್ಗುರುಗಳವರು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಬಂದ ಭಕ್ತರಿಗೆ ಶುಭ ಹಾರೈಸಿದರು.
Life is rich through hard work.
-

ಚಿಂತೆ ಚಿಂತನಗೊಂಡಾಗ ಬದುಕು ಸಾರ್ಥಕ
ಚಿಕ್ಕಮಗಳೂರು: ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು)- ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲೆ ತುಂಬಿಕೊಂಡಿದ್ದಾನೆ. ಗುರಿಗಳಿಲ್ಲದ ಜೀವನ ಮತ್ತು ಹಣ ಸಂಪಾದನೆಯನ್ನೇ ಗುರಿಯಾಗಿಟ್ಟುಕೊಂಡ ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಚಿಂತೆ ಚಿಂತನಗೊಂಡಾಗ ಮಾನವನ ಬದುಕು ಸಾರ್ಥಕಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಕೈಗೊಂಡ ೩೪ನೇ ವರ್ಷದ ಶ್ರಾವಣ ತಪೋನುಷ್ಠಾನದ ಅಂಗವಾಗಿ ಜರುಗಿದ ಪುರಾಣ ಪ್ರವಚನ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಭಾರತೀಯ ಪುಣ್ಯ ಭೂಮಿಯಲ್ಲಿ ಬಹಳಷ್ಟು ಆಚರಣೆಗಳು ಬೆಳೆದು ಬಂದಿವೆ. ಹಿಂದೂಗಳಿಗೆ ಶ್ರಾವಣ ಮಾಸ ಅತ್ಯಂತ ಪವಿತ್ರವಾದದ್ದು. ಮಠ ಮಂದಿರಗಳಲ್ಲಿ ಶಿವನಾಮ ಸ್ಮರಣೆ ಸತ್ಕಥಾ ಶ್ರವಣಗಳು ನಡೆಯುತ್ತಾ ಬಂದಿವೆ. ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೇ ಹೊರತು ಜನರನ್ನು ನಾಸ್ತಿಕರನ್ನಾಗಿ ಮಾಡಬಾರದು. ಬುದ್ಧಿ ವಿಕಾಸಗೊಂಡಂತೆ ಭಾವನೆಗಳು ಬೆಳೆದು ಬರುವ ಅವಶ್ಯಕತೆಯಿದೆ. ಸಹನೆಯ ಗುಣ ತಾಳ್ಮೆ ಇದ್ದು ಮನಸ್ಸು ವಿಕಾಸಗೊಳ್ಳಬೇಕು. ಈ ನಾಡಿನ ಸಂಸ್ಕೃತಿಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಬರುವುದು ಎಲ್ಲರ ಧ್ಯೇಯವಾಗಬೇಕು. ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಶ್ವ ಬಂಧುತ್ವದ ಧಾರ್ಮಿಕ ಮತ್ತು ಸಾಮಾಜಿಕ ವಿಚಾರ ಧಾರೆಗಳು ಬಾಳಿ ಬದುಕುವ ಮನುಷ್ಯನಿಗೆ ದಾರಿ ದೀಪವೆಂದರು.
ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ರೇಣುಕ ವಿಜಯ ಪುರಾಣ ಪ್ರವಚನದಲ್ಲಿ ಮಾತನಾಡಿ ಮನುಷ್ಯನಿಗೆ ಮನುಷ್ಯತ್ವ ಮುಮುಕ್ಷತ್ವ ಮತ್ತು ದೊಡ್ಡವರ ಸಹವಾಸ ದೊರಕಲು ಭಗವಂತನ ಕೃಪೆಯಿದ್ದಾಗ ಮಾತ್ರ ದೊರಕಲು ಸಾಧ್ಯ. ಅರಿವು ಆದರ್ಶಗಳನ್ನು ಬೋಧಿಸಿ ಸನ್ಮಾರ್ಗಕ್ಕೆ ಜನ ಸಮುದಾಯ ಬರುವಂತೆ ಪ್ರೇರಣೆ ನೀಡಿದ ಮಹಾನ್ ಶಕ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಎಂದ ಅವರು ಶ್ರಾವಣ ಒಂದು ತಿಂಗಳ ಕಾಲ ಅವರ ಆದರ್ಶ ಚಿಂತನಗಳನ್ನು ಅರಿಯಲು ಎಲ್ಲರಿಗೂ ಸುವರ್ಣಾವಕಾಶ ದೊರೆತಿರಲು ಗುರುವೇ ಕಾರಣಿಭೂತನಾಗಿರುವುನೆಂಬುದನ್ನು ಮರೆಯಬಾರದೆಂದರು. ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು, ಹುಡಗಿ ಹಿರೇಮಠದ ಸೋಮೇಶ್ವರ ಶಿವಾಚಾರ್ಯ ಸ್ವಾಮಿಗಳು, ಶಿವಮೊಗ್ಗದ ಎಸ್.ಹೆಚ್.ಸಿದ್ಧಣ್ಣ, ನಾಗರನವಿಲೆಯ ಪವನಕುಮಾರ್, ಸಿದ್ದೇಶ್ವರ ಶಾಸ್ತ್ರಿಗಳು, ಶಂಕರನಹಳ್ಳಿ ಸದ್ಭಕ್ತರು ಉಪಸ್ಥಿತರಿದ್ದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ಗಂಗಾಧರ ಹಿರೇಮಠ ಇವರಿಂದ ಪ್ರಾರ್ಥನಾ ಗೀತೆ ಜರುಗಿತು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಕುಲಪತಿ ಬೆಳಗಾಲಪೇಟೆ ಹಿರೇಮಠದ ಸಿದ್ಧಲಿಂಗಯ್ಯ ಶಾಸ್ತ್ರಿಗಳು ಸ್ವಾಗತಿಸಿದರು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.
ಬೆಳಿಗ್ಗೆ ಲೋಕಕಲ್ಯಾಣಾರ್ಥವಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಬೆಳಿಗ್ಗೆ ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಆಶೀರ್ವದಿಸಿದರು. ಶ್ರಾವಣ ನಿಮಿತ್ಯ ಶ್ರೀ ಪೀಠದ ಎಲ್ಲ ದೈವಗಳಿಗೆ ವಿಶೇಷ ಪೂಜೆ ಜರುಗಿತು.
Life is meaningful when you are free from worry and contemplation.