Category: ಚಿಕ್ಕಮಗಳೂರು

  • ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು

    ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು

    ಬೆಂಗಳೂರು:  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ  ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ.

    ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ತಿಳಿಯುತ್ತದೆ. ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು . ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

    BJP members absent from GBA meeting are opponents of Bengaluru’s development

  • ಮಾದಕ ವಸ್ತುಗಳ ಕಡಿವಾಣ ಹಾಕುವಲ್ಲಿ ಪೊಲೀಸರ ಪಾತ್ರ ಪ್ರಮುಖ

    ಮಾದಕ ವಸ್ತುಗಳ ಕಡಿವಾಣ ಹಾಕುವಲ್ಲಿ ಪೊಲೀಸರ ಪಾತ್ರ ಪ್ರಮುಖ

    ಚಿಕ್ಕಮಗಳೂರು: ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳ ಕಡಿವಾಣ ಹಾ ಕುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು.

    ನಗರದ ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರ, ಜಿಲ್ಲಾ ಪೊಲೀಸ್ ಇಲಾಖೆ, ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಂಯುಕ್ರಾಶ್ರಯದಲ್ಲಿ ಆಯೋಜಿಸಿದ್ಧ ಪೊಲೀಸ್ ಸಿಬ್ಬಂದಿಗಳಿಗೆ ಮಾದಕ ವಸ್ತು ವಿನ ನಿಯಂತ್ರಣ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾ ತನಾಡಿದರು.

    ಸಮಾಜದಿಂದ ಮಾದಕ ವಸ್ತುಗಳಿಗೆ ಕಡಿವಾಣಕ್ಕೆ ವಿವಿಧ ಸಮಿತಿಗಳನ್ನು ರಚಿಸಿ ಮಾರ್ಗಸೂಚಿ ನೀಡ ಲಾಗುತ್ತಿದೆ. ಈ ನಡುವೆ ದೇಶದ ನಾಗರೀಕರು ಹಾಗೂ ವ್ಯಸನಿಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳು ದುಶ್ಚ ಟಕ್ಕೆ ಒಳಗಾಗಿರುವ ವ್ಯಕ್ತಿಗಳನ್ನು ನಶಮುಕ್ತಗೊಳಿಸಲು ವ್ಯಸನಿಗಳನ್ನು ಚಿಕಿತ್ಸಾ ಕೇಂದ್ರಗಳಲ್ಲಿ ಕಳುಹಿಸುವ ವ್ಯ ವಸ್ಥೆ ಮಾಡಬೇಕು ಎಂದರು.

    ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಪೆಟ್ಟಿಗೆ ಅಂಗಡಿಗಳಲ್ಲಿ ನಶೆ ಪದಾರ್ಥಗಳು ಸಲೀಸಾಗಿ ಲ ಭ್ಯವಾಗುತ್ತಿದೆ. ಈ ಬಗ್ಗೆ ಸರ್ಕಾರ ಹಾಗೂ ಕಾನೂನು ಸೇವೆ ಪ್ರಾಧಿಕಾರ ಎಚ್ಚರಿಕೆ ವಹಿಸುವುದು, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡು ಯುವಜನತೆಯಲ್ಲಿ ಅರಿವು ಮೂಡಿಸುತ್ತಿದ್ದು ಎಲ್ಲರೂ ಕೈಜೋಡಿಸಿದಾಗ ಮಾತ್ರ ಶಾಶ್ವತವಾಗಿ ವ್ಯಸನದ ವ್ಯವಸ್ಥೆ ದೂರಗೊಳಿಸಬಹುದು ಎಂದರು.

    ವ್ಯಸನಿಗಳ ನಿಯಂತ್ರಿಸಲು ಅರಿವಿನ ಜೊತೆಗೆ ಜ್ಞಾನದ ಅವಶ್ಯವಿದೆ. ಆ ನಿಟ್ಟಿನಲ್ಲಿ ಬ್ರಹ್ಮಕುಮಾರೀಸ್ ಸಂ ಸ್ಥೆ ಸಕ್ರಿಯವಾಗಿ ತೊಡಗಿಸಿಕೊಂಡು ವ್ಯಸನಿಗಳನ್ನು ನಾಡಿನ ಸತ್ರ್ಪಜೆಗಳಾಗಿಸಲು ಮುಂದಾಗಿರುವುದು ಹೆಮ್ಮೆ ಯ ಸಂಗತಿ. ಜೊತೆಗೆ ಪೊಲೀಸ್ ಇಲಾಖೆ ನಿತ್ಯವು ಈ ರೀತಿಯ ಪ್ರಕರಣಗಳು ದಾಖಲಾಗುತ್ತಿದ್ದು, ವ್ಯಸನಿ ಗಳ ಮನಪರಿವರ್ತಿಸಲು ಪ್ರೇರೇಪಿಸಬೇಕು ಎಂದು ಸಲಹೆ ಮಾಡಿದರು.

    ಉಪ ಪೊಲೀಸ್ ಅಧೀಕ್ಷಕ ತಿಪ್ಪೇಸ್ವಾಮಿ ಮಾತನಾಡಿ ಮಾದಕ ವಸ್ತುಗಳ ಶಾರೀರಿಕ ಹಾಗೂ ದೈಹಿಕ ವಾಗಿ ಆರೋಗ್ಯ ಹದೆಗೆಡಿಸುತ್ತದೆ. ಇದರಿಂದ ದೇಶದಲ್ಲಿ ಪ್ರತಿದಿನ ಸುಮಾರು ೧೦ ಮಂದಿ ವ್ಯಸನದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ ೨೦೧೮-೧೯ನೇ ಸಾಲಿನಲ್ಲಿ ಲಕ್ಷಾಂತರ ಯುವಸಮೂಹ ದುಶ್ಚಟಕ್ಕೆ ಬಲಿಯಾಗಿ ಜೀವ ಕಳೆದುಕೊಳ್ಳುತ್ತಿದ್ದು ಪೊಲೀಸ್ ಸೇರಿದಂತೆ ನಾಗರೀಕರು ಒಟ್ಟಾಗಿ ಈ ವಿರುದ್ಧ ಕಾರ್ಯಪ್ರವೃತ್ತರಾಗ ಬೇಕು ಎಂದರು.

    ರಾಜ್ಯಮಟ್ಟದ ಸಮನ್ವಯ ಸಂಸ್ಥೆ ಕೋಆಡಿನೇಟರ್ ಶೈಲಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿ ಯುವಜನ ತೆಯನ್ನು ನಶಮುಕ್ತಗೊಳಿಸಲು ಕೇಂದ್ರ ಸರ್ಕಾರ ನಶಮುಕ್ತ ಭಾರತ ಅಭಿಯಾನ ಜಾರಿಗೊಳಿಸಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಈ ಅಭಿಯಾನವು ನಡೆಯುತ್ತಿದ್ದು ಎಸ್ಪಿ ಸೇರಿದಂತೆ ಹಾಗೂ ಸ್ವಯಂ ಸೇವಕರು ಈ ಅಭಿಯಾನದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ ಎಂದರು.

    ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರದ ಯೋಜನಾ ನಿರ್ದೇಶಕ ಡಾ|| ಅನೀತ್ ಕುಮಾರ್ ಮಾತನಾಡಿ ಮದ್ಯ ಹಾಗೂ ಮಾದಕ ವಸ್ತುಗಳಿಂದ ಬಳಲುತ್ತಿರುವ ಯುವಸಮೂಹವನ್ನು ಹತೋಟಿಗೆ ತರಲು ಎಲ್ಲರೂ ಮುಂದಾದರೆ ಮಾತ್ರ ಸ್ವಾಸ್ಥ್ಯ ಸಮಾಜಕ್ಕೆ ನಾಂದಿಯಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ರಾಜ್ಯಮಟ್ಟದ ಸಮನ್ವಯ ಸಂಸ್ಥೆ ರಾಜ್ಯ ಸಂಪನ್ಮೂಲ ವ್ಯಕ್ತಿ ಬಾಲಕೃಷ್ಣರಾಜು, ರೋಟರಿ ಅಧ್ಯಕ್ಷ ಎನ್.ಪಿ.ಲಿಖಿತ್, ಟೌನ್ ಮಹಿಳಾ ಸಮಾಜದ ಅಧ್ಯಕ್ಷೆ ನೇತ್ರ ವೆಂಕಟೇಶ್, ಪ್ರಜಾಪಿತ ಬ್ರಹ್ಮಕುಮಾರಿಸ್ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಕ್ಕ, ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರ ವ್ಯವಸ್ಥಾಪಕ ಮಂಜುನಾಥ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

    The police have a key role in curbing drug abuse.

  • ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ

    ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ

    ಚಿಕ್ಕಮಗಳೂರು: ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.

    ಅವರು ಇಂದು ನಗರದ ಬಸವೇಶ್ವರ ರಸ್ತೆ ಬಸವತತ್ವ ಪೀಠದ ಮುಂಭಾಗದಲ್ಲಿ ಹಾಗೂ ಕಣಿವೆ ರುದ್ರೇಶ್ವರ ದೇವಸ್ಥಾನದ ಸಮೀಪ ತಲಾ ೧೨ ಲಕ್ಷ ರೂ ವೆಚ್ಚದಲ್ಲಿ ಶಾಸಕರ ನಿಧಿಯಿಂದ ನಿರ್ಮಿಸಲಾಗಿರುವ ಸುಸಜ್ಜಿತ ಅತ್ಯಾಧುನಿಕ ಬಸ್ ತಂಗುದಾಣಗಳನ್ನು ಸಾರ್ವಜನಿಕ ಸಮರ್ಪಣೆಗೊಳಿಸಿ ಮಾತನಾಡಿದರು.

    ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೨೦.೫೦ ಕೋಟಿ ರೂ ವೆಚ್ಚದಲ್ಲಿ ಡಿಸೆಂಬರ್‌ನಿಂದ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.

    ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನವೀನವಾದ ಅತ್ಯಾಧುನಿಕ ಮಾದರಿಯಲ್ಲಿ ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಬೇಕೆಂಬ ಕನಸು ಕಂಡಿದ್ದು, ಅದರಂತೆ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮದಲ್ಲಿ ಲೈಫ್‌ಲೈನ್ ಫಿಡ್ಸ್ ಮಾದರಿಯಾಗಿದೆ ಎಂದರು.

    ಜನರ ಬೇಡಿಕೆಗನುಗುಣವಾಗಿ ಹತ್ತರಲ್ಲಿ ಮೂರನ್ನಾದರೂ ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುವಂತೆ ಕಾಮಗಾರಿಗಳನ್ನು ಕೈಗೊಂಡು ಅಭಿಲಾಷೆ ಮತ್ತು ಸದುದ್ದೇಶ ಹೊಂದಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

    ಕಣಿವೆ ರುದ್ರೇಶ್ವರ ದೇವಸ್ಥಾನದ ಸಮೀಪ, ಕಲ್ಯಾಣ ನಗರದಲ್ಲಿ, ಹೌಸಿಂಗ್ ಬೋರ್ಡ್‌ನಲ್ಲಿ ಮತ್ತು ದೊಡ್ಡ ಕುರುಬರಹಳ್ಳಿಯಲ್ಲಿ ಈಗಾಗಲೇ ಈ ನಾಲ್ಕು ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದ ಅವರು, ನೂತನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದಂಟರಮಕ್ಕಿ ಬಡಾವಣೆಯಲ್ಲಿ ಮತ್ತು ಪಾಲಿಟೆಕ್ನಿಕ್ ಬಳಿ ನೂತನ ಅತ್ಯಾಧುನಿಕ ಬಸ್ ತಂಗುದಾಣ ನಿರ್ಮಾಣ ಮಾಡಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.

    ವಿದೇಶ ಪ್ರವಾಸ ಸಂದರ್ಭದಲ್ಲಿ ಜರ್ಮನಿಯಲ್ಲಿ ಈ ರೀತಿಯ ಅತ್ಯಾಧುನಿಕ ಬಸ್ ತಂಗುದಾಣಗಳನ್ನು ನಿರ್ಮಿಸಿರುವುದನ್ನು ಗಮನಿಸಿ ಇದೇ ಮಾದರಿಯಲ್ಲಿ ಕ್ಷೇತ್ರದಲ್ಲಿಯೂ ಅಳವಡಿಸಿಕೊಳ್ಳಬೇಕೆಂದು ನಿರ್ಧರಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಬಸ್ ತಂಗುದಾಣ ನಿರ್ಮಿಸಲಾಗಿದೆ ಎಂದು ಹೇಳಿದರು.

    ಕ್ಷೇತ್ರದಲ್ಲಿ ಮುಂದೆಯೂ ಪಕ್ಷಾತೀತವಾಗಿ ಜಾತ್ಯಾತೀತವಾಗಿ ನಡೆದುಕೊಳ್ಳಬೇಕೆಂದು ತೀರ್ಮಾನಿಸಿದ್ದು, ಜನರ ಅವಶ್ಯಕತೆಗೆ ತಕ್ಕಂತೆ ಸೌಲಭ್ಯ ಕಲ್ಪಿಸಲು ಮುಂದಾಗಿರುವುದಾಗಿ ಭರವಸೆ ನೀಡಿದರು.

    ಸುಮಾರು ೨೦ ಕೋಟಿ ರೂ ವೆಚ್ಚದಲ್ಲಿ ಮುಂದಿನ ತಿಂಗಳು ಕೆಎಸ್‌ಆರ್‌ಟಿಸಿ ಸುಸಜ್ಜಿತ ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಗರದಲ್ಲಿ ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇವರುಗಳನ್ನು ಆಹ್ವಾನಿಸಿ ಶಂಕುಸ್ಥಾಪನೆ ನೆರವೇರಿಸುವುದಾಗಿ ಹೇಳಿದರು.

    ಈ ಬಾರಿ ಅತೀ ಹೆಚ್ಚು ಮಳೆ ಬಿದ್ದ ಪರಿಣಾಮ ನಗರದಲ್ಲಿ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಯುಜಿಡಿ ಮತ್ತು ಅಮೃತ್ ಯೋಜನೆಯಿಂದ ಹಾನಿಯಾಗಿರುವ ರಸ್ತೆಗಳನ್ನು ಡಿಸೆಂಬರ್‌ನಿಂದ ಡಾಂಬರೀಕರಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

    ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ಪ್ರಯಾಣಿಕರ ಅವಶ್ಯಕತೆಗೆ ತಕ್ಕಂತೆ ಬಸ್ ತಂಗುದಾಣ ನಿರ್ಮಾಣ ಮಾಡಿ ಇಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡುತ್ತಿರುವ ಶಾಸಕ ಹೆಚ್.ಡಿ. ತಮ್ಮಯ್ಯ ಅವರಿಗೆ ಅಭಿನಂದಿಸುವುದಾಗಿ ಹೇಳಿದರು.

    ನಗರಸಭೆ ಸದಸ್ಯ ಅರುಣ್ ಕುಮಾರ್‌ಮಾತನಾಡಿ, ಕಲ್ಯಾಣ ನಗರದ ಟ್ರಸ್ಟ್ ಜೊತೆ ಸೇರಿ ವಾರ್ಡ್‌ನ್ನು ಸ್ವಚ್ಚತೆಗೊಳಿಸುತ್ತಿದ್ದೇವೆ ಜೊತೆಗೆ ಇದನ್ನು ಮಾದರಿ ವಾರ್ಡ್ ಆಗಿಸಲು ಗುರಿ ಹೊಂದಲಾಗಿದ್ದು, ಶಾಸಕರು ನಗರಸಭೆಯೊಂದಿಗೆ ಕೈಜೋಡಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

    ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ರಸ್ತೆಗಳ ಡಾಂಬರೀಕರಣ, ಬೀದಿನಾಯಿಗಳ ಉಪಟಳ ಸಮಸ್ಯೆ ಇದ್ದು, ಇದಕ್ಕೆ ಅಗತ್ಯ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ನಗರಸಭೆ ಉಪಾಧ್ಯಕ್ಷೆ ಲಲಿತಾನಾಯ್ಕ, ಲೈಫ್‌ಲೈನ್ ಫೀಡ್ಸ್ ಮಾಲೀಕರಾದ ಕಿಶೋರ್‌ಕುಮಾರ್ ಹೆಗ್ಡೆ, ಸದಸ್ಯರಾದ ಗುರುಮಲ್ಲಪ್ಪ, ಎ.ಸಿ. ಕುಮಾರ್, ನಾಮಿನಿ ಸದಸ್ಯ ಕೀರ್ತಿಶೇಠ್, ಆಯುಕ್ತರಾದ ಬಸವರಾಜ್ ಸಿಡಿಎ ಆಯುಕ್ತರಾದ ನಾಗರತ್ನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ಪ್ರವೀಣ್, ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

    Priority given to all-round development of the city

  • ಮಲ್ಲೇನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ದಿಲೀಪ್‌ಕುಮಾರ್ ಅವಿರೋಧ ಆಯ್ಕೆ

    ಮಲ್ಲೇನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ದಿಲೀಪ್‌ಕುಮಾರ್ ಅವಿರೋಧ ಆಯ್ಕೆ

    ಚಿಕ್ಕಮಗಳೂರು:  ತಾಲ್ಲೂಕು ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದಿಲೀಪ್‌ಕುಮಾರ್ ಅವಿರೋಧ ಆಯ್ಕೆಯಾದರು.

    ಇಂದು ನಡೆದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ದಿಲೀಪ್‌ಕುಮಾರ್‌ರವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ರುದ್ರಪ್ಪ ಘೋಷಿಸಿದರು.

    ನೂತನ ಅಧ್ಯಕ್ಷ ದಿಲೀಪ್‌ಕುಮಾರ್ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್‌ರವರು ನೀಡಿದ ಸಂವಿಧಾನದ ಆಶಯದಂತೆ ಇಂದು ಸರ್ವಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು, ಸಿಕ್ಕಿರುವ ಅಲ್ಪಾವಧಿಯಲ್ಲಿ ಕುಡಿಯುವ ನೀರು, ಸ್ವಚ್ಚತೆ, ನಿವೇಶನ, ಮನೆ ರಹಿತ ಬಡವರ ಪರವಾಗಿ ಆದ್ಯತೆ ಮೇಲೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

    ಈ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳ ಜನರ ಸೇವೆಗೆ ಸದಾ ಸಿದ್ದವಿದ್ದು, ಅವರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಾಯಿ ದೇವಿರಮ್ಮನ ಮೇಲೆ ಪ್ರಮಾಣ ಮಾಡಿದರು. ಮಾಜಿ ಅಧ್ಯಕ್ಷ ಸತೀಶ್ ಮತನಾಡಿ, ಸಿಕ್ಕಿರುವ ಕಡಿಮೆ ಅವಧಿಯಲ್ಲಿ ನೂತನ ಅಧ್ಯಕ್ಷರು ಉತ್ತಮ ಕೆಲಸ ಮಾಡಲಿ ಎಂದು ಆಶಿಸುತ್ತ ಶುಭ ಹಾರೈಸುತ್ತೇನೆ ಎಂದರು.

    ಗ್ರಾಮ ಪಂಚಾಯಿತಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿ ಜನಪರ ಆಡಳಿತ ನೀಡಲು ಸಲಹೆ ನೀಡಿದ ಅವರು, ಕುಡಿಯುವ ನೀರು, ಸ್ವಚ್ಚತೆ ಹಾಗೂ ಸರ್ಕಾರದ ಮೇಲೆ ಒತ್ತಡವನ್ನು ನಿವೇಶನ ಮತ್ತು ಮನೆ ರಹಿತರಿಗೆ ಸ್ಪಂದಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

    ಮಾಜಿ ಉಪಾಧ್ಯಕ್ಷೆ ಪಲ್ಲವಿ ನಿವೇಶ್‌ಗೌಡ ಮಾತನಾಡಿ, ತಾವು ಅಧಿಕಾರದ ಅವಧಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ನೂತನ ಅಧ್ಯಕ್ಷರು ಪೂರ್ಣಗೊಳಿಸುತ್ತಾರೆಂಬ ವಿಶ್ವಾಸವಿದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಪಂಚಾಯಿತಿಯಲ್ಲಿ ೨೦೦ ಮನೆ ಮಂಜೂರಾಗಿದ್ದು, ಹಾಲಿ ರಾಜ್ಯಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ ಎಂದು ಹೇಳಿದರು. ಬೀದಿದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪಂಚಾಯಿತಿ ಅಧ್ಯಕ್ಷರು ಶ್ರಮಿಸಲಿ ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಕಾವ್ಯ ಮೋಹನ್‌ಕುಮಾರ್, ಸದಸ್ಯರುಗಳಾದ ಲಲಿತಾ, ಪುಟ್ಟಮ್ಮ, ತಮ್ಮೇಗೌಡ, ದಿನೇಶ್ ಎಂ.ಕೆ, ಯತೀಶ್, ಅನುಷಾ, ಸಂದೀಪ್, ದಿಲೀಪ್‌ಕುಮಾರ್, ಶಶಿಕಲಾ ಪಟ್ಟಸ್ವಾಮಿ, ಪ್ರೇಮ ಶಿವಕುಮಾರ್, ಕೆ.ಆರ್ ರವಿಕುಮಾರ್, ಸುನೀತ ಸ್ವಾಮಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶ್ಮಿತಾಗೌಡ ಉಪಸ್ಥಿತರಿದ್ದರು.

    Dilip Kumar elected unopposed as the new president of Mallenahalli Gram Panchayat

  • ದೈಹಿಕ-ಮಾನಸಿಕ ಸದೃಢವಾಗಿದ್ದಾಗ ಪರಿಪೂರ್ಣ ಆರೋಗ್ಯ

    ದೈಹಿಕ-ಮಾನಸಿಕ ಸದೃಢವಾಗಿದ್ದಾಗ ಪರಿಪೂರ್ಣ ಆರೋಗ್ಯ

    ಚಿಕ್ಕಮಗಳೂರು:  ಸಮಾಜದಲ್ಲಿ ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸದೃಢ ಆರೋಗ್ಯವಾಗಿದ್ದಾಗ ಮಾತ್ರ ಪರಿಪೂರ್ಣ ಆರೋಗ್ಯವಂತರಾಗಿರಲು ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕರೆನೀಡಿದರು.

    ಅವರು ಇಂದು ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ, ವಾರ್ತಾ ಇಲಾಖೆ, ಯುವ ರೆಡ್‌ಕ್ರಾಸ್ ಘಟಕ, ಐಡಿಎಸ್‌ಜಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ದೇಹಕ್ಕೆ ಕಾಯಿಲೆ ಅಥವಾ ತೊಂದರೆಯಾದಾಗ ಚಿಕಿತ್ಸೆಗೆ ಮುಂದಾಗುತ್ತೇವೆ, ಬಿಪಿ, ಶುಗರ್, ಥೈರಾಯ್ಡ್ ಮುಂತಾದ ಕಾಯಿಲೆಗಳ ಬಗ್ಗೆ ಬೇರೆಯವರೊಂದಿಗೆ ಹಂಚಿಕೊಳ್ಳುತ್ತೇವೆ, ಈ ನಿಟ್ಟಿನಲ್ಲಿ ಸಮುದಾಯದ ಆರೋಗ್ಯ ಸಹ ಅವಶ್ಯಕವಾಗಿದೆ ಎಂದರು.

    ತುರ್ತುಪರಿಸ್ಥಿತಿ, ಯುದ್ಧಗಳಲ್ಲಿ ಭಾಗವಹಿಸುವ ವ್ಯಕ್ತಿಗಳಿಗೆ ಬರುವ ನೋವು, ಮಾನಸಿಕ ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಲು ಘೋಷವಾಕ್ಯವನ್ನು ನೀಡಲಾಗಿದ್ದು, ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಆರೋಗ್ಯವಂತರಾಗಿದ್ದಾರೆಂಬುದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಉದ್ದೇಶ ಎಂದು ಹೇಳಿದರು.

    ಶೇ.೮ ಕ್ಕಿಂತ ಹೆಚ್ಚು ಪ್ರಪಂಚದಲ್ಲಿ ವಿವಿಧ ರೀತಿಯ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ, ಮೊಬೈಲ್ ಗೀಳು ಹೆಚ್ಚಿಸಿಕೊಂಡವರು ಕೂಡ ಮಾನಸಿಕ ಕಾಯಿಲೆಗೆ ಒಳಗಾಗಿದ್ದಾರೆ ಎಂದು ಅರ್ಥೈಸಲಾಗುತ್ತಿದೆ ಎಂದು ತಿಳಿಸಿದರು.

    ಕಾನೂನಿನಲ್ಲಿ ಕರುಣೆ ಇಲ್ಲ, ಸರ್ಕಾರ ನಿಗದಿಪಡಿಸಿರುವ ಅವದಿಗಿಂತ ಮೊದಲು ಮದುವೆಯಾಗಿದ್ದರೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗುತ್ತದೆ. ಎಫ್‌ಎಸ್‌ಎಲ್ ವರದಿಯಲ್ಲಿ ಗರ್ಭಿಣಿಯಾಗಿರುವುದು ದೃಢಪಟ್ಟರೆ ಕನಿಷ್ಟ ೨೦ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲರಾದ ತಸ್ನಿಮ್ ಕೌಸರ್ ಮನಿಯಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಡಾ. ಬಾಲಕೃಷ್ಣ, ಮಾನಸಿಕ ತಜ್ಞ ಡಾ. ವಿನಯ್ ಕುಮಾರ್, ಆರ್.ಸಿ.ಹೆಚ್ ಅಧಿಕಾರಿ ಡಾ. ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಡಾ. ಅನಿಕೇತ್, ಹರ್ಷ, ವೈ.ಎಂ ಲಲಿತ, ಗಣೇಶ್, ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಆರೋಗ್ಯ ಇಲಾಖೆಯ ಬೇಬಿ ಸ್ವಾಗತಿಸಿದರು.

    Perfect health is when you are physically and mentally fit.

  • ವಿಜ್ಞಾನಿಗಳಿಗೆ ಸಮಾಜದಲ್ಲಿ ಬಹಳಷ್ಟು ಗೌರವ

    ವಿಜ್ಞಾನಿಗಳಿಗೆ ಸಮಾಜದಲ್ಲಿ ಬಹಳಷ್ಟು ಗೌರವ

    ಚಿಕ್ಕಮಗಳೂರು: – ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನಿಗಳಿಗೆ ಸಮಾ ಜದಲ್ಲಿ ಬಹಳಷ್ಟು ಗೌರವವಿದೆ. ಕೆಲವರು ಸಂಪೂರ್ಣ ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿ ಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇ ಶ್ ಹೇಳಿದರು.

    ನಗರದ ರೋಟರಿ ಸಭಾಂಗಣದಲ್ಲಿ ಗುರುವಾರ ಭಾರತೀಯ ಬಾಹ್ಯಕಾಶ ಕೇಂದ್ರ, ಟೌನ್ ಮಹಿಳಾ ಸಮಾಜ ಸಮೂಹ ಶಿಕ್ಷಣ ಸಂಸ್ಥೆ, ತಕ್ಷ್ ಅಕಾಡೆಮಿ, ರೋಟರಿ ಸಂಸ್ಥೆ ಮತ್ತು ವ್ಹಿಲ್ ಸಂಸ್ಥೆ ಸಹಯೋಗದ ಲ್ಲಿ ಆಯೋಜಿಸಿದ್ಧ ವಿಶ್ವ ಬಾಹ್ಯಕಾಶ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಇತ್ತೀಚಿನ ದಿನಗಳಲ್ಲಿ ಯುವಜನತೆ ವಿಜ್ಞಾನ ಕ್ಷೇತ್ರಕ್ಕೆ ಒತ್ತು ನೀಡುತ್ತಿಲ್ಲ. ವೈಯಕ್ತಿಕ ಕುಟುಂಬದ ಆಲೋ ಚನೆಯಲ್ಲಿ ವೇತನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಇಸ್ರೋ ಸಂಸ್ಥೆ ವಿಜ್ಞಾನದ ಸಮಗ್ರ ಮಾಹಿತಿಗಳನ್ನು ಪರಿಚಯಿಸಲು ಸಪ್ತಾಹ ಆಚರಿಸಿ ಬಾಹ್ಯಕಾಶದ ಹಿನ್ನೆಲೆ ತಿಳಿಯಪಡಿಸುತ್ತಿರುವುದು ಹೆಮ್ಮೆ ಯ ಸಂಗತಿ ಎಂದರು.

    ೧೯೬೨ರಲ್ಲಿ ಮಾಜಿ ಪ್ರಧಾನಿ ನೆಹರು ಅವರು ಸಂಶೋಧಕರೊಂದಿಗೆ ಚರ್ಚಿಸಿ ಇಸ್ರೋ ಸಂಸ್ಥೆ ಪ್ರಾರ ಂಭಿಸಿದರು. ಇಂದಿಗೂ ಮಾನವ ಚಂದ್ರಯಾನ, ಮಂಗಳಯಾನ ಹಾಗೂ ರಾಕೇಟ್ ಉಡಾವಣೆಗಳಂಥ ಭೂಮಿಯಿಂದ ಹೊರಪ್ರಪಂಚಕ್ಕೆ ತೆರಳಲು ವಿಜ್ಞಾನಿಗಳ ಕಠಿಣ ಪರಿಶ್ರಮ ಹಾಗೂ ತಂತ್ರಜ್ಞಾನವೇ ಕಾರಣ ವಾಗಿದೆ ಎಂದು ತಿಳಿಸಿದರು.

    ಇಂದಿಗೂ ರಾಷ್ಟ್ರದ ಪ್ರಜೆಗಳಾದ ಸುಭಾಶ್ ಶುಕ್ಲ, ಸುನೀತಾ ವಿಲಿಯಂ ಸೇರಿದಂತೆ ಅನೇಕರು ಭೂಮಿ ಯ ಗುರುತ್ವಾಕರ್ಷಣೆ ಇಲ್ಲದಿರುವ ಪ್ರದೇಶಕ್ಕೆ ತೆರಳಿ ತಿಂಗಳುಗಟ್ಟಲೇ ಅಧ್ಯಯನ ನಡೆಸಿ ಮರಳಿ ಭೂಮಿ ಯತ್ತ ಬಂದು ಸಾಧನೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಯುವವಿಜ್ಞಾನಿಗಳು ಸಾಧಕರ ಬದುಕನ್ನು ಆದರ್ಶವಾಗಿ ಟ್ಟುಕೊಂಡು ವಿಜ್ಞಾನ ಜಗತ್ತಿಗೆ ಹೆಜ್ಜೆ ಹಾಕಬೇಕು ಎಂದರು.

    ಮಕ್ಕಳಿಗೆ ಪಠ್ಯದ ಚಟುವಟಿಕೆ ಜೊತೆಗೆ ಬಾಹ್ಯಕಾಶದ ಚಟುವಟಿಕೆಗಳನ್ನು ಪರಿಚಯಿಸಲು ಇಸ್ರೋ ಸಂ ಸ್ಥೆ ಮುಂದಾಗಿದ್ದು ಇವುಗಳನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ರಸಪ್ರಶ್ನೆ ಸ್ಪರ್ಧೆ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿಜೇತರಾಗಿ ಹೊರಹೊಮ್ಮಬೇಕು. ಈ ಸಾಧನೆಗೆ ಗುರುಗಳು, ಪಾಲಕರು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್.ರುದ್ರಪ್ಪ ಮಾತನಾಡಿ ಸಮಾಜದಲ್ಲಿ ವಿಜ್ಞಾನಿಗಳ ಸಂಖ್ಯೆ ಇಳಿಕೆಗೊಂಡು ವೈದ್ಯ ಹಾಗೂ ಇಂಜಿನಿಯರ್ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಮಕ್ಕಳಲ್ಲಿ ಇಸ್ರೋ ಬಾಹ್ಯಕಾಶದ ಕುತೂ ಹಲವನ್ನು ಮೂಡಿಸಿ ಪ್ರೇರೇಪಿಸಬೇಕು. ಮೊಬೈಲ್ ರೀಲ್ಸ್‌ಗಳ ವ್ಯಕ್ತಿಗಳನ್ನು ಅನುಸರಿಸದೇ, ವಿಜ್ಞಾನ ಕ್ಷೇತ್ರ ದ ಸಾಧಕರನ್ನು ನಾಯಕರೆಂದು ಭಾವಿಸಬೇಕು ಎಂದರು.

    ಪ್ರಸ್ತುತ ದಿನದಲ್ಲಿ ಗೂಗಪ್‌ಪ್ಯಾಪ್ ತಂತ್ರಜ್ಞಾನವು ಕ್ಷಣಾರ್ಧದಲ್ಲಿ ದಾರಿ ತೋರಿಸುತ್ತದೆ. ವಿಶ್ವವಿಖ್ಯಾತ ವಿಶ್ವೇಶ್ವರಯ್ಯ ಅವರ ಮೆದುಳು ಸಹ ಶೇ.೨೨ ರಷ್ಟು ಬಳಕೆಯಲ್ಲಿದೆ ಎಂದು ಅಧ್ಯಯನಗಳು ತಿಳಿಸುತ್ತೇವೆ. ಆದರೆ ಇಂದಿನ ದಿನದಲ್ಲಿ ಯುವಸಮೂಹ ಕೇವಲ ಶೇ.೨ರಷ್ಟು ಮಾತ್ರ ಮೆದುಳು ಕೆಲಸ ಮಾಡುತ್ತಿದ್ದು ಈ ಬಗ್ಗೆ ಅವಲೋಕಿಸಬೇಕು ಎಂದು ಹೇಳಿದರು.

    ಭಾರತೀಯ ಬಾಹ್ಯಕಾಶ ಸಂಸ್ಥೆ ವಿಜ್ಞಾನಿ ಸೌಭಾಗ್ಯ ಮಾತನಾಡಿ ಮಾನವ ಸ್ಥಿತಿಯ ಸುಧಾರಣೆಗೆ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಳನ್ನು ಆಚರಿಸಲು ೧೯೯೯ರಲ್ಲಿ ವಿಶ್ವ ಬಾಹ್ಯಾಕಾಶ ದಿನ ಸ್ಥಾಪಿಸಿ, ವಿಶ್ವದ ಅತಿದೊಡ್ಡ ಬಾಹ್ಯಾಕಾಶ ಕಾರ್ಯಕ್ರಮ ರೂಪುಗೊಂಡಿತು ಎಂದು ಹೇಳಿದರು.

    ಬಾಹ್ಯಕಾಶ ಸಂಶೋಧನೆಯು ನಮ್ಮ ಜೀವನವನ್ನು ಸುಧಾರಿಸಲು ಹಾಗೂ ಅವಕಾಶಗಳನ್ನು ಸೃಷ್ಟಿಸ ಲು ಸಹಾಯಕ. ಬಾಹ್ಯಕಾಶ ವಿಜ್ಞಾನದಲ್ಲಿ ಯುವಕರ ಆಸಕ್ತಿಯನ್ನು ಉತ್ತೇಜಿಸಲು ವಿಶ್ವ ಬಾಹ್ಯಕಾಶ ಸಪ್ತಾ ಹ ಒಂದು ವೇದಿಕೆಯಾಗಿ ಯುವಪ್ರತಿಭೆಗಳನ್ನು ಬಾಹ್ಯಕಾಶ ಕ್ಷೇತ್ರಕ್ಕೆ ಆಕರ್ಷಿಸುವ ಒಂದು ಆಚರಣೆಯಾ ಗಿದೆ ಎಂದರು.

    ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು ಮಾತನಾಡಿ ವಿದ್ಯಾರ್ಥಿಗಳು ವಿಜ್ಞಾನದ ಜೊತೆಗೆ ಪರಿಸರ ಪ್ರಜ್ಞೆ ಮೂಡಿಸಿಕೊಳ್ಳಬೇಕು. ಪ್ರಸ್ತುತ ಮಾನವ ಆಹಾರ ಪದಾರ್ಥ, ಹಾಲು ಸೇರಿದಂತೆ ಎಲ್ಲವು ಕಲುಷಿತವಾಗುತ್ತಿದೆ. ಅಲ್ಲದೇ ಪ್ಲಾಸ್ಟಿಕ್ ಬಳಕೆ ಹೆಚ್ಚಳಗೊಳ್ಳುತ್ತಿರುವ ಪರಿಣಾಮ ಸ್ವಚ್ಚಂಧ ಪರಿಸರಕ್ಕೆ ಹಾನಿಯಾಗುತ್ತಿದ್ದು ಮುಂದಿನ ಯುವಜನತೆಗೆ ಸರಿಪಡಿಸುವ ಮಾರ್ಗ ತಿಳಿಸಬೇಕು ಎಂದರು.

    ಇದೇ ವೇಳೆ ವಿವಿಧ ಶಾಲೆಗಳಿಂದ ಆಗಮಿಸಿ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಸಪ್ರಶ್ನೆ, ಆಶುಭಾಷಣ, ಚಿತ್ರಕಲೆ ಹಾಗೂ ಜ್ಞಾಪಕಶಕ್ತಿ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಎನ್.ಪಿ. ಲಿಖಿತ್, ಟಿಎಂಎಸ್ ಕಾರ್ಯದರ್ಶಿ ಟಿ.ಈ.ಶುಭದ, ಪ್ರಾಂಶುಪಾಲ ಇಂದ್ರೇಶ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ|| ಚೇತನ್‌ಕುಮಾರ್, ಮುಖ್ಯೋಪಾಧ್ಯಾಯ ಎಂ.ಎಸ್.ನಟರಾಜ್, ವಿದ್ಯಾರ್ಥಿಗಳು ಉಪ ಸ್ಥಿತರಿದ್ದರು.

    Scientists are highly respected in society.

  • ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರಾಗಲು ಸಲಹೆ

    ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರಾಗಲು ಸಲಹೆ

    ಚಿಕ್ಕಮಗಳೂರು: ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ ಸೇವನೆಯೊಂದಿಗೆ ಉತ್ತಮ ಜೀವನ ಪದ್ದತಿ ಅಳವಡಿಸಿಕೊಳ್ಳಬೇಕೆಂದು ಶಾಸಕಿ ನಯನ ಮೋಟಮ್ಮ ಕಿವಿಮಾತು ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

    ಬಾಣಂತಿಯರು ಮತ್ತು ಗರ್ಭಿಣಿಯರಿಗೆ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿಯ ಬಗ್ಗೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ಸಾಕಷ್ಟು ಅರಿವು ಕಾರ್ಯಕ್ರಮವನ್ನು ಮೂಡಿಸುತ್ತಾ ಬಂದಿದ್ದರೂ ಜನರಲ್ಲಿ ಮಾತ್ರ ಬದಲಾವಣೆಗಳಾಗದಿರುವುದು ವಿಷಾದನೀಯ. ಇನ್ನೂ ಕೂಡ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಕಾಣುತ್ತಿದ್ದೇವೆ. ಜನರು ಮೂಢನಂಬಿಕೆಯನ್ನು ತೊಡೆದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ವೈಜ್ಞಾನಿಕ ಪದ್ದತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಅಲ್ಲದೇ ಮಹಿಳೆಯರುಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಮತ್ತು ಮಕ್ಕಳಿಗೆ ಶಿಸ್ತನ್ನು ಮನೆಯಿಂದಲೇ ಕಲುಹಿಸುವಂತೆ ತಿಳಿಸಿದರು.

    ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ ಪ್ರಾಸ್ತಾವಿಕ ಮಾತನಾಡಿ ಪೌಷ್ಟಿಕ ಕರ್ನಾಟಕವನ್ನು ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಪೋಷಣ್ ಅಭಿಯಾನ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ತಲೆತಲಾಂತರದಿಂದ ಭಾರತವನ್ನು ಕಾಡುತ್ತಿದ್ದ ಅಪೌಷ್ಟಿಕತೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಪ್ರಮುಖವಾಗಿ ೫ ಗುರಿಗಳನ್ನು ಹೊಂದಿದ್ದು, ಇದರಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು, ಕಿಶೋರಿಯರು ಅಪೌಷ್ಟಿಕತೆ ನಿವಾರಣೆ, ರಕ್ತಹೀನತೆ ತಡೆಗಟ್ಟುವಿಕೆ, ಕುಂಠಿತ ಬೆಳವಣಿಗೆ, ಜನನ ತೂಕ ಕಡಿಮೆಯಾಗುವಿಕೆ ಇವುಗಳನ್ನು ಸುಧಾರಿಸುವ ನಿಟ್ಟಿನಲ್ಲಿ ೨೦೧೮ ಮಾರ್ಚ್ ೮ ರಂದು ಈ ಯೋಜನೆಗೆ ಚಾಲನೆ ನೀಡಲಾಗಿತ್ತು ಎಂದರು.

    ಪ್ರತಿ ವರ್ಷ ಸೆಪ್ಟಂಬರ್ ಮಾಹೆಯಲ್ಲಿ ಪೋಷಣ್ ಮಾಸಾಚರಣೆ ಎನ್ನುವ ಶೀರ್ಷಿಕೆಯಲ್ಲಿ ವಿವಿಧ ಉದ್ದೇಶಗಳೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಿ ಅಪೌಷ್ಟಿಕತೆ ನಿವಾರಣೆ ಹಾಗೂ ಉತ್ತಮ ಪೋಷಕಾಂಶ ಆಹಾರ ಪ್ರಾತ್ಯಕ್ಷಿಕೆಗಳನ್ನು ಜನರಿಗೆ ತೋರಿಸುವ ಮುಖೇನ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದರು.

    ೨೦೨೫ನೇ ಸಾಲಿನಲ್ಲಿ ಹಲವು ನಿಯತಾಂಶಗಳನ್ನು ಗುರಿಯಾಗಿಸಿಕೊಂಡು ಜಿಲ್ಲಾದ್ಯಂತ ಎಲ್ಲ್ಲ ಅಂಗನವಾಡಿ ಕೇಂದ್ರಗಳು, ಶಾಲೆ, ಗ್ರಾಮ ಪಂಚಾಯಿತಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅರಿವು ಕಾರ್ಯಕ್ರಮಗಳು ಹಾಗೂ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕೈಗೊಂಡು ಉತ್ತಮ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವ ಉದ್ದೇಶವನ್ನು ಬಿತ್ತರಿಸುತ್ತಿದ್ದು, ಎಲ್ಲರೀ ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಆರೋಗ್ಯವಂತರಾಗಬೇಕು. ಇಲ್ಲಿನ ವಿಚಾರಗಳನ್ನು ತಮ್ಮ ಕುಟುಂಬದವರಿಗೂ ತಿಳಿಸಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿದ್ಯಾಸಾಗರ್ ಉಪನ್ಯಾಸ ನೀಡಿ ಆಧುನಿಕ ಸಮಾಜದಲ್ಲಿ ಜನರು ಹೆಚ್ಚು ತೊಂದರೆಗೆ ಓಳಗಾಗುತ್ತಿರುವುದು ಅವರು ಸೇವಿಸುತ್ತಿರುವ ಆಹಾರ ಕ್ರಮದಿಂದ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ, ಸುಲಭವಾಗಿ ಸಿಗುವ ಉತ್ತಮವಾದ ಪೋಷಕಾಂಶಯುಕ್ತ ಆಹಾರ ಕ್ರಮವನ್ನು ರೂಢಿಸಿಕೊಂಡಲ್ಲಿ ಆರೋಗ್ಯವಂತರಾಗಿ ಜೀವನ ನಡೆಸಬಹುದು ಎಂದರು.

    ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಊಟದಲ್ಲಿ ಮೊಳಕೆ ಕಾಳುಗಳು, ಸೊಪ್ಪು, ಬಣ್ಣ ಬಣ್ಣದ ತರಕಾರಿಗಳು ಹಾಗೂ ಹಣ್ಣುಗಳನ್ನು ಸೇವಿಸಬೇಕು. ದಿನಕ್ಕೆ ೩-೪ ಲೀಟರ್ ನೀರನ್ನು ಕುಡಿಯಬೇಕು. ಪ್ರತಿನಿತ್ಯ ವ್ಯಾಯಮ ಮಾಡಬೇಕು. ೮ ಗಂಟೆಗಳ ಕಾಲ ನಿದ್ರಿಸಬೇಕು ಎಂದು ತಿಳಿಸಿದರು. ಹದಿಹರೆಯದ ಹೆಣ್ಣು ಮಕ್ಕಳು ಉತ್ತುಮವಾದ ಆಹಾರವನ್ನು ಸೇವಿಸಬೇಕು, ಶುಚಿತ್ವದ ಕಡೆಗೆ ಹೆಚ್ಚಿನ ಮಹತ್ವ ನೀಡಬೇಕು. ಋತುಸ್ರಾವದ ಸಮಯದಲ್ಲಿ ಪ್ರತಿನಿತ್ಯ ಸ್ನಾನ ಮಾಡಬೇಕು ಹಾಗೂ ವೈಯಕ್ತಿಕ ಸ್ವಚ್ಛತೆ ಕಡೆ ಗಮನಹರಿಸಬೇಕು ಎಂದು ತಿಳಿಹೇಳಿದರು.

    ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ಎಷ್ಟೇ ಅರಿವು ಮೂಡಿಸಿದರೂ ಜನರಲ್ಲಿ ಅಪೌಷ್ಟಿಕತೆಯನ್ನು ದೂರ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜನರ ಸಹಭಾಗಿತ್ವವೂ ಅತ್ಯಂತ ಮುಖ್ಯವಾದದ್ದು ಎಂದು ತಿಳಿಸಿ ಸಂಪನ್ಮೂಲ ವ್ಯಕ್ತಿಗಳು ನೀಡಿದ ಮಾಹಿತಿಯನ್ನು ಎಲ್ಲರೂ ತಮ್ಮ ಸಮುದಾಯಕ್ಕೆ ತಿಳಿಸುವಂತೆ ಸಲಹೆ ನೀಡಿದರು.

    ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಮ್ಮ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರುಗಳಾದ ಮಲ್ಲಮ್ಮ, ವಿಜಯಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜೆ.ರೂಪಾಕುಮಾರಿ, ಅಂಬಳೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ,ಎನ್.ಕೆ.ಶೋಭಾ, ಹಿರಿಯ ಮೇಲ್ವಿಚಾರಕಿ ಸಿ.ಎಂ.ಲೀಲಾವತಿ, ಪೋಷಣ್ ಅಭಿಯಾನದ ಯೋಜನಾ ಸಂಯೋಜಕಿ ಕೆ.ದಿವ್ಯ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

    Advice for people to get rid of superstitions in life

  • 20 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ

    20 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ

    ಚಿಕ್ಕಮಗಳೂರು:  ನಗರಕ್ಕೆ ಸುಮಾರು ೨೦ ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದರ ಕಾಮಗಾರಿ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಿ ನೆರವೇರಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು.

    ಅವರು ಇಂದು ದಂಟರಮಕ್ಕಿ ಸಮೀಪ ಹಾಗೂ ಪಾಲಿಟೆಕ್ನಿಕ್ ಮುಂಭಾಗದಲ್ಲಿ ತಲಾ ೧೨ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಸ್ ತಂಗುದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ರಸ್ತೆ ಅಗಲೀಕರಣವಾದ ನಂತರ ಕೆ.ಎಂ ರಸ್ತೆಯಲ್ಲಿ ದಂಟರಮಕ್ಕಿ ಬಡಾವಣೆ ಸಮೀಪ ಚಿಕ್ಕಮಗಳೂರು, ಕಡೂರು ಮುಂತಾದ ಕಡೆ ಪ್ರಯಾಣ ಮಾಡುವ ಪ್ರಯಾಣಿಕರ ಅನುಕೂಲಕ್ಕಾಗಿ ಶಾಸಕರ ಅನುದಾನದಿಂದ ಹಣ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

    ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಕಣಿವೆ ರುದ್ರೇಶ್ವರ ದೇವಸ್ಥಾನದ ಬಳಿ ತಂಗುದಾಣ ನಿರ್ಮಾಣದ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರದಲ್ಲೇ ಸಾರ್ವಜನಿಕ ಸಮರ್ಪಣೆ ಮಾಡುವುದಾಗಿ ತಿಳಿಸಿದ ಅವರು, ಅತ್ಯಾಧುನಿಕ ಬಸ್ ತಂಗುದಾಣವನ್ನು ಜರ್ಮನಿ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಅಲ್ಲಿಂದಲೇ ಅದರ ಭಾವಚಿತ್ರ ತೆಗೆದು ಕೆಆರ್‌ಡಿಎಲ್ ಅಧಿಕಾರಿಗಳಿಗೆ ರವಾನಿಸಿರುವುದಾಗಿ ತಿಳಿಸಿದರು.

    ಪ್ರವಾಸದ ಸಂದರ್ಭದಲ್ಲಿ ವಿಶೇಷವಾದವು ನಮ್ಮ ಕ್ಷೇತ್ರದಲ್ಲಿ ಇರಬೇಕೆಂಬುದು ಆಸೆ ಮತ್ತು ಕನಸಾಗಿತ್ತು. ಜನರ ಬೇಡಿಕೆಗನುಗುಣವಾಗಿ ಅವರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಈ ಬಸ್ ತಂಗುದಾಣಗಳನ್ನು ಈ ಭಾಗದ ಜನ ಸದುಪಯೋಗಪಡಿಸಿಕೊಳ್ಳಬೇಕೆಂದು ವಿನಂತಿಸಿದರು.

    ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಅನುದಾನ ನೀಡಲು ಬದ್ಧವಾಗಿದೆ. ಈಗಾಗಲೇ ರಸ್ತೆ ಅಭಿವೃದ್ಧಿಗೆ ೧೦ ಕೋಟಿ ರೂ ಮಂಜೂರಾಗಿದೆ. ಅಲ್ಪಸಂಖ್ಯಾತರು ವಾಸಿಸುವ ಬಡಾವಣೆಯ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ೫ ಕೋಟಿ ರೂ ಬಿಡುಗಡೆಯಾಗಿದ್ದು, ಸದ್ಯದಲ್ಲೇ ೨೫ ಕೋಟಿ ರೂ ವೆಚ್ಚದಲ್ಲಿ ನಗರವನ್ನು ಅಭಿವೃದ್ಧಿಪಡಿಸಿ ವಿರೋಧಿ ಹೇಳಿಕೆ ನೀಡುವವರಿಗೆ ಕೆಲಸದ ಮೂಲಕ ಉತ್ತರ ನೀಡುತ್ತೇವೆ ಎಂದರು.

    ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ಸಾರ್ವಜನಿಕರ ಬೇಡಿಕೆಯಂತೆ ಸುಸಜ್ಜಿತವಾದ ಅತ್ಯಾಧುನಿಕ ಬಸ್ ತಂಗುದಾಣ ನಿರ್ಮಾಣಕ್ಕೆ ಮುಂದಾಗಿರುವ ಶಾಸಕರನ್ನು ನಗರಸಭೆ ಪರವಾಗಿ ಅಭಿನಂದಿಸಿದರು. ಅ.೧೫ ರಂದು ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಸುಮಾರು ೧.೨೫ ಕೋಟಿ ರೂ ವೆಚ್ಚದಲ್ಲಿ ನಗರದ ರಸ್ತೆಗಳನ್ನು ಡಾಂಬರೀಕರಣ ಮಾಡಲು ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾನಾಯ್ಕ್, ಸದಸ್ಯ ಗುರುಮಲ್ಲಪ್ಪ,ಮಂಜುಳ ಲಕ್ಷ್ಮಣ. ರಾಜು.ಲಕ್ಷ್ಮಣ. ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶ್‌ಸ್ವಾಮಿ, ಪೌರಾಯುಕ್ತ ಬಿ.ಸಿ ಬಸವರಾಜ್, ಕೆಆರ್‌ಡಿಎಲ್ ಎಇಇ ಸಂತೋಷ್, ಗ್ರಾಮಸ್ಥರುಗಳಾದ ಸ್ವಾಮಿ, ಭದ್ರೇಗೌಡ, ಬೀರೇಗೌಡ, ನಿಂಗೇಗೌಡ, ಜಗದೀಶ್, ಸಂದೀಪ್ ಉಪಸ್ಥಿತರಿದ್ದರು.

    Construction of a well-equipped transport bus stand at a cost of Rs. 20 crore

  • ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಕರ್ತವ್ಯ

    ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಕರ್ತವ್ಯ

    ಚಿಕ್ಕಮಗಳೂರು: ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಪೂರ್ವಿಕರು ಉಳಿಸಿ ಹೋಗಿರುವ ಪ್ರಕೃತಿದತ್ತ ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

    ಅವರು ಇಂದು ಇಲ್ಲಿನ ತಾಲ್ಲೂಕು ಕಚೇರಿ ಆವರಣದಲ್ಲಿ ಅರಣ್ಯ ಇಲಾಖೆ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವನ್ಯಜೀವಿ ಸಪ್ತಾಹ ೨೦೨೫ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಪರಿಸರ ಹಾನಿಯಾದರೆ ಮುಂದಿನ ದಿನಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಗಿಡಮರ ಚೆನ್ನಾಗಿದ್ದರೆ ಪ್ರಾಣಿ-ಪಕ್ಷಿಗಳು ಮತ್ತು ನಾಗರಿಕರ ಆರೋಗ್ಯಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

    ಅರಣ್ಯ ಮತ್ತು ಪರಿಸರ ಉಳಿದರೆ ಅತೀ ಹೆಚ್ಚು ಮಳೆ ಬೀಳುತ್ತದೆ. ದಟ್ಟ ಅರಣ್ಯ ಉಳಿಸಿ ಬೆಳೆಸಲು ಜಿಲ್ಲಾಡಳಿತ, ಅರಣ್ಯ ಇಲಾಖೆ, ಸರ್ಕಾರ ಎಲ್ಲಾ ಸಂಘ-ಸಂಸ್ಥೆಗಳು ಮುಂದಾಗಬೇಕೆಂದು ಸಲಹೆ ನೀಡಿ ಕಂದಾಯ ಭೂಮಿಯನ್ನು ಡೀಮ್ಡ್ ಅರಣ್ಯ ಎಂದು ಮಾಡಿರುವ ಬಗ್ಗೆ ವಿರೋಧಿಸಿದ ಅವರು, ಆಶ್ರಯ ಮನೆ, ಆಸ್ಪತ್ರೆ, ಸಮುದಾಯ ಭವನ ಇವುಗಳಿಗೆ ಆದ್ಯತೆ ಮೇಲೆ ಭೂಮಿ ಮೀಸಲಿಡಬೇಕು ಹಾಗೂ ೧-೩ ಎಕರೆ ವರೆಗಿನ ಶೋಷಿತರು ಮಾಡಿರುವ ಸಾಗುವಳಿ ಭೂಮಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ಕಾಡು ಇದ್ದರೆ ನಾಡು ಎಂಬಂತೆ ಜಗತ್ತು ಮತ್ತು ಭೂಮಿ ಇರುವುದು ಕೇವಲ ಮನುಷ್ಯರಿಗಾಗಿ ಅಲ್ಲ, ಎಲ್ಲಾ ಸಕಲ ಪ್ರಾಣಿ-ಪಕ್ಷಿಗಳು, ಸೂಕ್ಷ್ಮಾಣು ಜೀವಿಗಳು ಜೀವಿಸಲು ಅದರದೇ ಆದ ಸ್ಥಾನವನ್ನು ದೇವರು ಕಲ್ಪಿಸಿದ್ದಾನೆ ಎಂದು ಹೇಳಿದರು.

    ಒಂದಕ್ಕೊಂದು ಪೂರಕವಾಗಿದ್ದು, ಒಂದು ನಾಶಮಾಡಿ ಇನ್ನೊಂದು ಬದುಕಲಾಗದು ಎಂಬುದು ತಾತ್ಕಾಲಿಕ ಮಾತ್ರ. ಎಲ್ಲಾ ಜೀವಸಂಕುಲ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಈ ಎಲ್ಲವನ್ನು ಸಮತೋಲನವಾಗಿಡುವ ಪ್ರಾಕೃತಿಕ ವ್ಯವಸ್ಥೆಯನ್ನು ಉಳಿಸಿ ಗೌರವಿಸಬೇಕು ಎಂದರು.

    ದುರಾಸೆಯಿಂದ ಇಂದು ಪರಿಸರ ನಾಶವಾಗುತ್ತಿದೆ. ಮುಂದೊಂದು ದಿನ ನಮ್ಮ ನಾಶಕ್ಕೆ ನಾವೇ ಕಾರಣವಾಗುತ್ತೇವೆ ಎಂದು ಎಚ್ಚರಿಸಿದ ಅವರು, ಈ ವನ್ಯಜೀವಿ ಸಪ್ತಾಹ ಎಲ್ಲಾ ಜೀವಿಗಳಿಗೆ ಬದುಕುವ ಹಕ್ಕಿದೆ ಎಂದು ಭಾವಿಸುವ ಅಗತ್ಯವಿದೆ ಎಂದು ಹೇಳಿದರು.

    ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಮಾತನಾಡಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಕರ್ತವ್ಯವನ್ನು ಅರಿತು ಮುಂದಿನ ಪೀಳಿಗೆಗೆ ಪರಿಸರದ ಮಹತ್ವ ತಿಳಿಸಬೇಕಾಗಿದೆ. ಹಿಂದೆ ವಾಹನಗಳು ಇರಲಿಲ್ಲ, ಅದಕ್ಕಾಗಿ ರಸ್ತೆಬದಿ ನೆರಳಿಗಾಗಿ ಸಾಲುಮರ ನೆಡುತ್ತಿದ್ದರು. ಹಕ್ಕಿಪಕ್ಷಿಗಳಿಗಾಗಿ ಹಣ್ಣಿನ ಮರಗಳಿದ್ದವು. ಇಂದು ಒಂದೇ ಒಂದು ಆ ರೀತಿಯ ಹಣ್ಣಿನ ಮರಗಳಿಲ್ಲ ಎಂದು ವಿಷಾಧಿಸಿದರು.

    ರಾಜ್ಯಸರ್ಕಾರ ಅಕೇಶಿಯಾ ಮತ್ತು ನೀಲಿಗಿರಿಯನ್ನು ಬೇರು ಸಹಿತ ತೆಗೆಯಬೇಕೆಂದು ಆದೇಶ ಮಾಡಿದ್ದರೂ ಇದುವರೆಗೆ ಈ ಕಾರ್ಯ ಸಾಧ್ಯವಾಗಿಲ್ಲ. ಆಗುಂಬೆಯನ್ನು ಮಲೆನಾಡಿನ ಚಿರಾಪುಂಜಿ ಎಂದು ಕರೆಯುತ್ತೇವೆ. ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಾದ ಕುದುರೆಮುಖ ರಾಷ್ಟ್ರೀಯ ಉದ್ಯಾನ, ಶಿರಾಡಿಘಾಟ್, ಕೊಪ್ಪ-ಶೃಂಗೇರಿ ಹೋಗುವ ರಸ್ತೆ ಇಕ್ಕೆಲಗಳಲ್ಲಿ ಈ ಮರಗಳನ್ನು ಕಾಣಬಹುದಾಗಿದ್ದು, ತಿನ್ನಲು ಏನೂ ಸಿಗದ ಕಾರಣ ಮಂಗಗಳು ಪ್ರವಾಸಿಗರು ನೀಡುವ ಕಾಯಿ-ಬಾಳೇಹಣ್ಣಿಗಾಗಿ ಪರಿತಪಿಸುತ್ತಿರುವುದು ಕರುಣಾಜನಕವಾಗಿದೆ ಎಂದು ಹೇಳಿದರು.

    ಮಾನವ-ವನ್ಯ ಪ್ರಾಣಿಗಳ ಸಂಘರ್ಷ ದಿನನಿತ್ಯ ಕಾಣುತ್ತಿದ್ದೇವೆ. ಚಿರತೆ, ಕಾಡಾನೆ, ಹುಲಿ ಮುಂತಾದವುಗಳು ಆಹಾರವನ್ನು ಅರಸಿ ನಾಡಿಗೆ ಬರುತ್ತಿರುವುದು ಪ್ರಮುಖ ಕಾರಣವಾಗಿದ್ದು, ಅವುಗಳ ನೆಮ್ಮದಿ ಜೀವನಕ್ಕೆ ಅವಕಾಶ ಇಲ್ಲದಂತಾಗಿದೆ ಎಂದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಎಸಿಎಫ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

    It is everyone’s duty to preserve nurture and protect the environment.

  • ಅ.18ರವರೆಗೆ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ

    ಅ.18ರವರೆಗೆ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ

    ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿವಾರು ಸಮೀಕ್ಷೆ) ಅವಧಿಯನ್ನು ಅ. 18ರವರೆಗೆ ವಿಸ್ತರಿಸಲಾಗಿದೆ.

    ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ವಿಡಿಯೊ ಸಂವಾದ ನಡೆಸಿದರು.

    ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ಸಮೀಕ್ಷಕ ರಾಗಿರುವ ಶಿಕ್ಷಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ವಿಸ್ತರಿಸಲಾಗಿದೆ. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಹಿಂದೇಟು ಹಾಕುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದರು.

    ‘ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ದಸರಾ ರಜೆಯನ್ನು 10 ದಿನ ವಿಸ್ತರಿಸುವಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿ ಹೆಚ್ಚುವರಿಯಾಗಿ ಎಂಟು ಕೆಲಸದ ದಿನ, ಅಂದರೆ ಅ. 18ರವರೆಗೆ ರಜೆ ಘೋಷಿಸಲಾಗಿದೆ. ರಜೆ ಮುಗಿದ ನಂತರ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸಲಿದ್ದಾರೆ. ಅ. 19ರೊಳಗೆ ಸಮೀಕ್ಷೆ ಮುಗಿಯಲಿದೆ’ ಎಂದು ಹೇಳಿದರು.

    ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಬಿಟ್ಟು ರಾಜ್ಯದಾದ್ಯಂತ ಸೆ. 22ರಂದು ಆರಂಭಗೊಂಡಿರುವ ಈ ಸಮೀಕ್ಷೆಯು ಮಂಗಳವಾರ ( ಅ.7) ಮುಗಿಯಬೇಕಿತ್ತು. ಆದರೆ, ನಿಗದಿಯಂತೆ ಪೂರ್ಣಗೊಂಡಿಲ್ಲ. ವಿವಿಧ ಜಿಲ್ಲೆಗಳಲ್ಲಿ ಸಮೀಕ್ಷೆಯ ಪ್ರಗತಿಯಲ್ಲಿ ವ್ಯತ್ಯಾಸವಿದೆ. ಕೊಪ್ಪಳ ಜಿಲ್ಲೆಯಲ್ಲಿ ಶೇ 97ರಷ್ಟು ಪೂರ್ಣ ಗೊಂಡಿದ್ದರೆ, ದಕ್ಷಿಣ ಕನ್ನಡದಲ್ಲಿ ಕೇವಲ ಶೇ 67ರಷ್ಟು ಪ್ರಗತಿ ಕಂಡಿದೆ’ ಎಂದು ಹೇಳಿದರು.

    Socio-Educational Survey Period Extended Until October 18th