Category: ಚಿಕ್ಕಮಗಳೂರು

  • ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ

    ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ

    ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಭಾರತದ ಭೂಪಟದಲ್ಲಿ ಗುರುತಿಸುವ ಪ್ರಯತ್ನ ಮಾಡುವುದಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಚಿಕ್ಕಮಗಳೂರಿಗೆ ಇನ್ನೂ 2 ಬಾರಿ ಭೇಟಿ ನೀಡಿದರೆ ನನಗೆ ಇಲ್ಲಿನ ಸ್ಪಷ್ಟ ಚಿತ್ರಣ ಸಿಗಲಿದೆ. ಜಿಲ್ಲೆಯಲ್ಲಿ ಹೆಚ್ಚು ಪ್ರವಾಸಿತಾಣಗಳಿವೆ. ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದರೆ ಜಿಲ್ಲೆ ಆರ್ಥಿಕವಾಗಿ ಸಬಲವಾಗಲಿದೆ. ಆದ್ದರಿಂದ ಜಿಲ್ಲೆಯಲ್ಲಿ ಮತ್ತೊಮ್ಮೆ ಪರಿವೀಕ್ಷಣೆ ನಡೆಸಿ ಅಗತ್ಯ ಅನುದಾನ ನೀಡಲಾಗುವುದು’ ಎಂದು ಹೇಳಿದರು.

    ‘ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆ ಇರುವ ಬಗ್ಗೆ ತಿಳಿದಿದ್ದೇನೆ. ಈ ಬಗ್ಗೆ ಕಂದಾಯ ಮತ್ತು ಅರಣ್ಯ ಸಚಿವರ ಗಮನ ಸೆಳೆದು ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುತ್ತೇನೆ’ ಎಂದರು.

    ‘ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡ ವೀಕ್ಷಿಸಿದ್ದೇನೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಈ ಕಚೇರಿ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ಸಹಾಯ ಮಾಡಲಾಗುವುದು. ಬೆಳಗಾವಿಯ ನಾಲ್ವರು ಅಧ್ಯಕ್ಷರನ್ನು ಇಲ್ಲಿಗೆ ಕರೆಸಿ ಸಹಾಯ ಮಾಡುವ ಬಗ್ಗೆ ಘೋಷಣೆ ಮಾಡುತ್ತೇವೆ’ ಎಂದು ಹೇಳಿದರು.

    ‘ಕೆಪಿಸಿಸಿಯಿಂದ ಭರ್ತಿ ಮಾಡಬೇಕಾದ ಹಲವು ಹುದ್ದೆಗಳು ಇನ್ನೂ ಬಾಕಿ ಇವೆ. ಮೂಲ ಕಾಂಗ್ರೆಸಿಗರಿಗೆ ಶೇ 70ರಷ್ಟು, ಹೊಸಬರಿಗೆ ಶೇ 30ರಷ್ಟು ಅನುಪಾತದಲ್ಲಿ ಅಧಿಕಾರ ಹಂಚಿಕೆ ಆಗಬೇಕು ಎಂದು ಪ್ರತಿಪಾದಿಸಿದ್ದೇನೆ. ಕಾರ್ಯಕರ್ತರಿಗೆ ಅತಿ ಶೀಘ್ರದಲ್ಲಿ ಅಧಿಕಾರ ಕೊಡಿಸುವ ಪ್ರಯತ್ನ ಮಾಡುತ್ತೇನೆ. 2028ರ ಚುನಾವಣೆಯನ್ನು ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಬೇಕು’ ಎಂದು ತಿಳಿಸಿದರು. 

    ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾದ ರಸ್ತೆ, ಸೇತುವೆಗಳನ್ನು ಸಚಿವರು ವೀಕ್ಷಣೆ ಮಾಡಿದ್ದಾರೆ. ಮಹಲ್‌ನಿಂದ ಕೆಮ್ಮಣ್ಣುಗುಂಡಿ ತನಕ 15 ಕಿ.ಮೀ. ರಸ್ತೆ ಅಭಿವೃದ್ಧಿ ಸಂಬಂಧ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಈಗಿರುವ ಅಡೆತಡೆ ಸರಿಪಡಿಸಿ ರಸ್ತೆ ಮಾಡಿಸಿಕೊಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದರು.

    ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ, ಕಾಂಗ್ರೆಸ್ ಮುಖಂಡರಾದ ಮಂಜೇಗೌಡ, ಡಾ.ವಿಜಯಕುಮಾರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ರೇಖಾ ಹುಲಿಯಪ್ಪಗೌಡ, ತನೋಜ್‌ ನಾಯ್ಡು, ಪ್ರಶಾಂತ್, ಮಹಮದ್ ಹನೀಫ್, ಅಕ್ಬರ್, ಮಲ್ಲೇಶಸ್ವಾಮಿ, ರಾಮಚಂದ್ರ ಇದ್ದರು.

    More grants for tourism development in the district

  • ಪ್ರತಿಯೊಬ್ಬರು ಪರಿಸರವನ್ನು ಸಂರಕ್ಷಿಸಬೇಕು

    ಪ್ರತಿಯೊಬ್ಬರು ಪರಿಸರವನ್ನು ಸಂರಕ್ಷಿಸಬೇಕು

    ಚಿಕ್ಕಮಗಳೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆ ಳೆಸುವುದರಿಂದ ಬಿಸಿಲಬೇಗೆ ಕಡಿಮೆಯಾಗುವ ಜೊತೆಗೆ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂ ದು ಸ್ವಚ್ಚ ಟ್ರಸ್ಟ್ ಅಧ್ಯಕ್ಷೆ ಡಾ|| ಶುಭ ವಿಜಯ್ ಹೇಳಿದರು.

    ನಗರದ ಹಿರೇಮಗಳೂರು ಗ್ರಾಮದ ಹೆದ್ದಾರಿಯ ಮಧ್ಯಭಾಗದಲ್ಲಿ ಚಿಕ್ಕಮಗಳೂರು ಸ್ವಚ್ಚ ಟ್ರಸ್ಟ್ ವತಿ ಯಿಂದ ಭಾನುವಾರ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಂಜಾನೆಯೇ ಕಾಡುಬಾದಾಮಿ, ಹೊಂಗೆ ಮತ್ತು ಬೋಗನ್ ವಿಲ್ಲಾ ಸಸಿಗಳನ್ನು ನೆಟ್ಟು ಅವರು ಮಾತನಾಡಿದರು.

    ಮಲೆನಾಡಿನ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ ಇಂದು ಸುಮಾರು ೪೦೦ಕ್ಕೂ ವಿವಿಧ ತಳಿಗಳ ಸಸಿಗಳನ್ನು ನೆಡಲಾಗುತ್ತಿದೆ. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ವಾಗಿದೆ. ಮನೆಯ ಸುತ್ತಲು ಗಿಡಗಳನ್ನು ಬೆಳೆಸುವುದಲ್ಲದೇ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು ಎಂದು ಸಲಹೆ ಮಾಡಿದರು.

    ಗಿಡಗಳನ್ನು ನೆಟ್ಟು ಇತರರಿಗೂ ಗಿಡ ನೆಡುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿ ರ್ವಹಿಸಬೇಕು. ಇದು ಪರಿಸರವನ್ನು ಉಳಿಸುವ ಮಾರ್ಗ. ಪ್ರತಿಯೊಬ್ಬರು ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳ ನ್ನು ಬಳಸಬೇಕು. ಪ್ರಸ್ತುತ ದಿನಗಳಲ್ಲಿ ಅಭಿವೃದ್ದಿಯ ಹೆಸರಿನಲ್ಲಿ ಗಿಡ-ಮರಗಳ ಮಾರಣಹೋಮ ನಡೆ ಯುತ್ತಿರುವ ಕಾರಣ ಗಿಡನೆಟ್ಟು ಪೋಷಿಸಬೇಕು ಎಂದರು.

    ಟ್ರಸ್ಟ್ ಸದಸ್ಯ ಡಾ|| ಅನಿಕೇತ್ ಮಾತನಾಡಿ ಪರಿಸರ ಬಗ್ಗೆ ಅರಿವಿದ್ದರೆ ಸಾಲದು. ಪ್ರಜ್ಞೆಯೂ ಇರಬೇಕು. ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕು. ಪ್ರಸ್ತುತ ಕಾಲಮಾನದಲ್ಲಿ ಭೂಮಿಯನ್ನು ಉಳಿಸಿಕೊಳ್ಳಬೇಕಾದರೆ ಸಾಧ್ಯ ವಾದ? ಗಿಡಗಳನ್ನು ನೆಡಬೇಕು. ನಿಮ್ಮ ಎಲ್ಲಾ ಆಚರಣೆಗಳಿಗೆ ಉಡುಗೊರೆಯಾಗಿ ಗಿಡಗಳನ್ನು ಕೊಡಿ ಎಂ ದು ಸಲಹೆ ನೀಡಿದರು.

    ಪರಿಸರ ಮಾಲಿನ್ಯ ಉಂಟಾಗಿ ಭವಿಷ್ಯದಲ್ಲಿ ಶುದ್ಧ ಆಮ್ಲಜನಕವನ್ನು ಕೊಂಡುಕೊಳ್ಳುವ ಪರಿಸ್ಥಿತಿ ಎದು ರಾಬಗಬಹುದು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬರು ತಾಯಿಯ ಹೆಸರಿನಲ್ಲಿ ಸಸಿವೊಂದನ್ನು ನೆಟ್ಟು ಪೋಷಿಸಿದರೆ ಪರಿಶುದ್ಧ ಆಮ್ಲಜನಕ ಮನುಷ್ಯನ ಪಾಲಾಗುವ ಜೊತೆಗೆ ಆರೋಗ್ಯಪೂರ್ಣ ಸಮಾ ಜಕ್ಕೆ ಸಹಕರಿಸಿದಂತಾಗುತ್ತದೆ ಎಂದರು.

    ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಟ್ರಸ್ಟ್‌ನ ಸಹ ಕಾರ್ಯದರ್ಶಿ ಪ್ರದೀಪ್ ಗೌಡ, ಸದಸ್ಯರಾದ ಹೆಚ್.ಬಿ.ಲಕ್ಷ್ಮೀ, ಡಾ|| ಅಶ್ವಿನಿ, ಶುಭರಾಮೇಗೌಡ, ಲೇಖಾ, ಅರುಣಾಕ್ಷಿ, ಶಕುಂತಲಾ ಈರಪ್ಪಗೌಡ, ಉಮಾ ನಾಗೇಶ್, ಹರಿಣಾಕ್ಷಿ, ಶುಭರಾಮೇಗೌಡ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹಿರೇಮ ಗಳೂರು ರಾಮಚಂದ್ರ ಮತ್ತಿತರರು ಹಾಜರಿದ್ದರು.

    Everyone should protect the environment.

  • ಸುಖಮಯ ಬಾಳಿಗೆ ಸದ್ವಿದ್ಯೆ ಸಂಬಂಧ ಸ್ನೇಹ ಮುಖ್ಯ

    ಸುಖಮಯ ಬಾಳಿಗೆ ಸದ್ವಿದ್ಯೆ ಸಂಬಂಧ ಸ್ನೇಹ ಮುಖ್ಯ

    ಅಜ್ಜಂಪುರ: ಪ್ರಾಣ ಯೌವನ ಕಾಲ ಒಮ್ಮೆ ಕಳೆದರೆ ಮತ್ತೆಂದೂ ತಿರುಗಿ ಬಾರವು. ಅಮೂಲ್ಯವಾದ ಉತ್ಸಾಹ ತಾರುಣ್ಯ ಸಮಯ ವ್ಯರ್ಥವಾಗಿ ಕಳೆಯದೇ ಸದುಪಯೋಗಪಡಿಸಿಕೊಳ್ಳಬೇಕು. ಸುಖಮಯ ಬಾಳಿಗೆ ಸದ್ವಿದ್ಯೆ ಉತ್ತಮ ಸಂಬಂಧ ಮತ್ತು ಆದರ್ಶ ಸ್ನೇಹ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

    ಅವರು ಶನಿವಾರ ತಾಲೂಕಿನ ಹಣ್ಣೆ ಹಿರೇಮಠದಲ್ಲಿ ಶ್ರೀ ಚೌಡೇಶ್ವರಿ-ನಾಗಮ್ಮದೇವಿ ದೇವಾಲಯಗಳ ವಾರ್ಷಿಕೋತ್ಸವ ಹಾಗೂ ಲಿಂ.ಶಿವಾನಂದ ಶ್ರೀಗಳವರ ಪುಣ್ಯಾರಾಧನೆ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

    ಅಧಿಕಾರ ಕೀರ್ತಿ ಧನ ಕನಕ ವಸ್ತು ವಾಹನ ಮತ್ತು ದೇಹ ಸೌಖ್ಯಕ್ಕಾಗಿ ಬಡಿದಾಡಿ ಸತ್ತವರುಂಟು. ಜಗದ ಜನತೆಗೆ ಬೆಳಕು ತೋರಿದ ಆಚಾರ್ಯರು ಋಷಿಮುನಿಗಳು ಮತ್ತು ಸಂತ ಮಹಾಂತರ ಆದರ್ಶ ಮಾತುಗಳು ಶಾಶ್ವತವಾಗಿದ್ದು ಬೆಳಕು ತೋರುತ್ತವೆ. ಮಹಾತ್ಮರ ದೃಷ್ಟಿಯಲ್ಲಿ ಧರ್ಮವೇ ಅವರ ಸಂಪತ್ತು. ಸತ್ಯವೇ ಅವರ ನಿಜವಾದ ಸಂಪತ್ತಾಗಿದೆ. ಮೌಲ್ಯಗಳ ಉಳಿವು ಅಳಿವು ಮಾನವನ ಆಚರಣೆಯಲ್ಲಿವೆ.

    ನೀತಿವಂತರು ನಿರಾಶರಾಗದೇ ನೋವು ನುಂಗಿ ನಲಿವನ್ನೇ ಹೊರ ಹಾಕಿದ್ದಾರೆ. ಅಸಹನೆ ಅಸಮಾಧಾನ ಅತೃಪ್ತಿ ಹೋಗಲಾಡಿಸಿಕೊಂಡವನೇ ನಿಜವಾದ ಧರ್ಮ ನಿಷ್ಠ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ರೇಣುಕ ಗೀತೆಯಲ್ಲಿ ಬೋಧಿಸಿದ್ದಾರೆ. ಲಿಂ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಉತ್ತಮ ವಾಗ್ಮಿಗಳಾಗಿ ಧಾರ್ಮಿಕ ಸಾಮಾಜಿಕ ಮತ್ತು ಶೈಕ್ಷಣಿಕ ಮೌಲ್ಯಗಳನ್ನು ಎತ್ತಿ ಹಿಡಿದ ಶಿವಾಚಾರ್ಯರು.

    ಅವರ ಅಗಲಿಕೆ ನೋವು ಉಂಟು ಮಾಡಿದ್ದರೂ ಅವರ ಚಿಂತನೆಗಳು ಮಾತ್ರ ಸದಾ ಜೀವಾತ್ಮರಿಗೆ ಬೆಳಕು ತೋರುತ್ತಿವೆ. ಇಂದಿನ ಪಟ್ಟಾಧ್ಯಕ್ಷರಾದ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಲಿಂ.ಶಿವಾನಂದ ಶ್ರೀಗಳು ತೋರಿದ ದಾರಿಯಲ್ಲಿ ಮುನ್ನಡೆಯುತ್ತಿರುವುದು ತಮಗೆ ಹರುಷ ತಂದಿದೆ ಎಂದರು.

    ಸಮಾರಂಭ ಉದ್ಘಾಟಿಸಿದ ಅ.ಭಾ.ವೀ.ಮ.ಸಭಾ ಜಿಲ್ಲಾಧ್ಯಕ್ಷ ಹೆಚ್.ಎಂ.ಲೋಕೇಶ್ ಮಾತನಾಡಿ ಮನುಷ್ಯ ಧರ್ಮಕ್ಕೆ ಮಾನವೀಯತೆಗೆ ಹೆಚ್ಚು ಬೆಲೆ ಕೊಡಬೇಕು. ಅಶಾಂತಿಯಿಂದ ಕೂಡಿದ ಬದುಕಿಗೆ ಧರ್ಮ ಪರಿಪಾಲನೆಯಿಂದ ಮಾತ್ರ ನಿಜ ಶಾಂತಿ ದೊರಕಲು ಸಾಧ್ಯ. ಲಿಂ.ಶಿವಾನಂದ ಶಿವಾಚಾರ್ಯರು ಎಲ್ಲರೊಂದಿಗೆ ಬೆರೆತು ಬಾಳಿದ ಅಪರೂಪದ ವ್ಯಕ್ತಿತ್ವ ಅವರದು ಆಗಿತ್ತೆಂಬುದನ್ನು ಸ್ಮರಿಸಿದರು.

    ಮಾಜಿ ಶಾಸಕ ಡಿ.ಎಸ್.ಸುರೇಶ ಮಾತನಾಡಿ ಹುಟ್ಟು ಎಷ್ಟು ಸಹಜವೋ ಅಷ್ಟೇ ಮರಣ ನಿಶ್ಚಿತ. ಹುಟ್ಟು ಸಾವುಗಳ ಮಧ್ಯದ ಬದುಕನ್ನು ಸಮೃದ್ಧಗೊಳಿಸಿಕೊಂಡವರು ಲಿಂಗೈಕ್ಯ ಶಿವಾನಂದ ಶಿವಾಚಾರ್ಯರು. ಅವರ ಆದರ್ಶ ಚಿಂತನಗಳನ್ನು ಅಳವಡಿಸಿಕೊಂಡು ಬಾಳಬೇಕೆಂದರು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ ಜೀವನದ ಹೂದೋಟದಲ್ಲಿ ಅರಳುವ ಹೂಗಳೆಷ್ಟೋ ಬಾಡುವ ಜೀವಗಳು ಎಷ್ಟೋ ಹೇಳಲಾಗದು.

    ಭೌತಿಕ ಸಂಪತ್ತು ಶಾಂತಿ ಸಮಾಧಾನ ತರದು. ಆಧ್ಯಾತ್ಮ ಸಂಪತ್ತು ನಿಜ ಸಂಪತ್ತೆಂದು ತಿಳಿದು ಬಾಳಿದವರು ಲಿಂ.ಶಿವಾನಂದ ಶಿವಾಚಾರ್ಯರು ಎಂದರು. ನೇತೃತ್ವ ವಹಿಸಿದ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸಜ್ಜನರ ಒಡನಾಟ ಜೀವನ ಶ್ರೇಯಸ್ಸಿಗೆ ಕಾರಣವಾದರೆ ದುರ್ಜನರ ಸಹವಾಸ ನಾಶಕ್ಕೆ ಕಾರಣ. ಆಧ್ಯಾತ್ಮದ ಕೃಷಿಯ ಮೂಲಕ ಭಕ್ತರ ಮನದಂಗಳದಲ್ಲಿ ಬೆಳಕು ತುಂಬಿದವರು ನನ್ನ ಗುರುದೇವ ಶಿವಾನಂದರೆಂದು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು. ಗೆಜ್ಜಗೊಂಡನಹಳ್ಳಿ ಡಾ|| ಜಿ.ಎಸ್.ಚಂದ್ರಶೇಖರ್ ಅವರು ಶಿವಾನಂದ ಶ್ರೀಗಳವರ ಧ್ಯೇಯ ಆದರ್ಶಗಳನ್ನು ಪ್ರಾಸ್ತಾವಿಕ ನುಡಿಯಲ್ಲಿ ಸಲ್ಲಿಸಿದರು.

    ಈ ಪವಿತ್ರ ಸಮಾರಂಭದಲ್ಲಿ ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯರು, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯರು, ರಟ್ಟೀಹಳ್ಳಿ ಶಿವಲಿಂಗ ಶಿವಾಚಾರ್ಯರು, ಹೊನ್ನವಳ್ಳಿ ಶಿವಪ್ರಕಾಶ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಮಾದೀಹಳ್ಳಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಕೆ.ಬಿದರೆ ಪ್ರಭುಕುಮಾರ ಶಿವಾಚಾರ್ಯರು, ನಂದೀಪುರ ನಂದೀಶ್ವರ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು, ಚನ್ನಗಿರಿ ಕೇದಾರ ಶಿವಶಾಂತವೀರ ಶಿವಾಚಾರ್ಯರು, ಕುಪ್ಪೂರು ತೇಜೇಶ್ವರ ಶಿವಾಚಾರ್ಯರು ಪಾಲ್ಗೊಂಡು ಶ್ರದ್ಧಾಂಜಲಿ ನುಡಿ ನುಡಿದರು. ಮುಖ್ಯ ಅತಿಥಿಗಳಾಗಿ ತರೀಕೆರೆಯ ಕಾಂಗ್ರೆಸ್ ಮುಖಂಡರಾದ ಕುಮಾರಿ ರಚನಾ ಶ್ರೀನಿವಾಸ್, ಕೆ.ಆರ್.ಆನಂದಪ್ಪ, ಜಿ.ಎಸ್. ಪ್ರಕಾಶ್, ಬಿ.ರಾಜಣ್ಣ, ವಿಶಾಲಾಕ್ಷಮ್ಮ, ಮುಂಡ್ರೆ ಗಿರಿರಾಜ್ ಪಾಲ್ಗೊಂಡಿದ್ದರು. ಗಣ್ಯರು ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು.

    Good relationships and friendship are important for a happy life.

  • ಜೂ.9 ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ರೈತ ಸಮಾವೇಶ

    ಜೂ.9 ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ರೈತ ಸಮಾವೇಶ

    ಚಿಕ್ಕಮಗಳೂರು: ಜೂ.೯ ರಂದು ಬೃಹತ್ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ, ಐತಿಹಾಸಿಕ ಸಮಾವೇಶಕ್ಕೆ ಎಲ್ಲಾ ರೈತ ಭಾಂದವರು, ನಿವೇಶನರಹಿತರು ಮತ್ತು ಸಾರ್ವಜನಿಕರು ಸಹಕಾರ ನೀಡಿ ಸಮಾವೇಶ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಅಧ್ಯಕ್ಷ ಎಸ್.ವಿಜಯ್ ಕುಮಾರ್ ಹೇಳಿದರು

    ಡೀಮ್ ಫಾರೆಸ್ಟ್, ಸೆಕ್ಷನ್ 4(1), ಫಾರಂ 57, ನಿವೇಶನ ಸಮಸ್ಯೆ ನಗರಸಭೆ ವ್ಯಾಪ್ತಿಯಿಂದ 5 ಕಿ.ಮೀ. ಅಂತರದ ಒಳಗಿನ ಮಂಜೂರಾತಿ ಭೂಮಿಗಳ ಸಮಸ್ಯೆ, ರೈತರ ರಸ್ತೆ ಸಮಸ್ಯೆ ಸೇರಿದಂತೆ ಇನಾಂ ಭೂಮಿ, ಸೊಪ್ಪಿನ ಬೆಟ್ಟ ರೈತರ, ಗ್ರಾಮಸ್ಥರ ಸಮಸ್ಯೆಗಳ ಪರಿಹಾರಕ್ಕಾಗಿ ನಗರದ ತಾಲ್ಲೂಕು ಕಚೇರಿಯಿಂದ ಮೆರವಣಿಗೆ ಬಂದು ಆಜಾದ್ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಈಗಾಗಲೇ ಜಿಲ್ಲೆಯ ನಮ್ಮ ಸಹಭಾಗ ಸಂಘಟನೆಗಳಾದ ಕರ್ನಾಟಕ ಬೆಳೆಗಾರರ ಒಕ್ಕೂಟ, ಮಲೆನಾಡು ರೈತ ಹಿತರಕ್ಷಣಾ ಶೃಂಗೇರಿ ಕ್ಷೇತ್ರ ಸಮಿತಿ, ಅಡಿಕೆ ಬೆಳೆಗಾರರ ಸಂಘ ಕೊಪ್ಪ, ಸಹ್ಯಾದ್ರಿ ಬೆಳೆಗಾರರ ಸಂಘ, ಬಾಳೆಹೊನ್ನೂರು, ರೈತ ಹಿತರಕ್ಷಣಾ ಸಮಿತಿ, ಮೂಡಿಗೆರೆ ಮತ್ತು ಒಕ್ಕಲಿಗ ಮಹಿಳಾ ಮಂಡಳಿ ಹಾಗೂ ಇತರೇ ಮಹಿಳಾ ಮಂಡಳಿಗಳು ಸೇರಿದಂತೆ ಎಲ್ಲಾ ರೈತ ಮುಖಂಡರು ಸಮಾವೇಶಕ್ಕೆ ತಯಾರಿ ನಡೆಸಲಾಗಿದೆ ಎಂದರು.

    ಸಮಾವೇಶಕ್ಕೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿ ರೈತರ ಸಮಸ್ಯೆಗಳ ಅಹವಾಲಗಳನ್ನು ಆಲಿಸಿ, ಸಮಸ್ಯೆಗೆ ಸೂಕ್ತ ಪರಿಹಾರಕ್ಕಾಗಿ ಚಿಂತನೆ ನಡೆಸುವ ಸಮಾವೇಶ ಆಗಿದ್ದು, ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಮುಖಂಡರು ಪಕ್ಷಾತೀತವಾಗಿ ಬೆಂಬಲ ನೀಡಿದ್ದು, ಇದರಿಂದ ಸುಮಾರು 60 ವರ್ಷದ ಸಮಸ್ಯೆಗೆ ಪರಿಹಾರ ದೊರಕುವ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ಸಂಚಾಲಕ ರಘು, ಪೂರ್ಣೇಶ್ ಮೈಲಿಮನೆ, ಈಶ್ವರ್, ಕುಮಾರ್, ರವಿ ಕುಮಾರ್ ಉಪಸ್ಥಿತರಿದ್ದರು.

    Huge farmers’ convention in Chikkamagaluru city on June 9th

  • ಚಿಕ್ಕಮಗಳೂರು ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಭರವಸೆ

    ಚಿಕ್ಕಮಗಳೂರು ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಭರವಸೆ

    ಚಿಕ್ಕಮಗಳೂರು: ಜಿಲ್ಲೆ ಮತ್ತು ತಾಲ್ಲೂಕಿಗೆ ಅನುಕೂಲವಾಗುವಂತೆ ಮೊದಲ ಆದ್ಯತೆ ನೀಡಿ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವುದಾಗಿ ಮಾನ್ಯ ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ತಿಳಿಸಿದರು.

    ಅವರು ಇಂದು ತಾಲ್ಲೂಕಿನ ಗಿರಿ ಭಾಗದ ಮಹಲ್, ಕೆಮ್ಮಣ್ಣುಗುಂಡಿ, ಮುಳ್ಳಯ್ಯನಗಿರಿ ಭಾಗಕ್ಕೆ ಭೇಟಿ ನೀಡಿ ರಸ್ತೆಗಳನ್ನು ಪರಿಶೀಲಿಸಿ ಮಾತನಾಡಿದರು.

    ಪ್ರಮುಖವಾಗಿ ಮಹಲ್‌ನಿಂದ ಕೆಮ್ಮಣ್ಣುಗುಂಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಪಡಿಸಬೇಕೆಂಬ ಬೇಡಿಕೆ ಇದೆ. ಕಳೆದ ೧೦ ವರ್ಷಗಳಿಂದ ಈ ರಸ್ತೆ ಮುಚ್ಚಲ್ಪಟ್ಟಿದೆ. ಈ ಹಿಂದೆ ಇದ್ದ ರಸ್ತೆಯನ್ನು ಮತ್ತೆ ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆ ಕಡೆಯಿಂದ ಸಮಸ್ಯೆ ಬರುವುದಿಲ್ಲ. ಈ ಬಗ್ಗೆ ಪರಿಶೀಲಿಸಿ ಅವಶ್ಯಕತೆ ಇದ್ದಲ್ಲಿ ಆ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

    ಮಲೆನಾಡು ಪ್ರದೇಶವಾದ ಈ ಭಾಗದಲ್ಲಿ ಕಾಂಕ್ರೀಟ್ ರಸ್ತೆಗಳನ್ನು ಮಾಡುವುದೊಂದೇ ಪರಿಹಾರ. ಈಗಾಗಲೇ ಮೂಡಿಗೆರೆ ತಾಲ್ಲೂಕಿನ ಚಂಡಗೋಡು-ಸಾರಗೋಡು ರಸ್ತೆಯನ್ನು ಕಾಂಕ್ರೀಟಿಕರಣ ಗೊಳಿಸಲಾಗುತ್ತಿದೆ ಎಂದು ಹೇಳಿದರು.

    ಚಿಕ್ಕಮಗಳೂರು ನಗರದಲ್ಲಿ ರಿಂಗ್ ರಸ್ತೆ ನಿರ್ಮಾಣ ಮಾಡುವ ಯೋಜನೆ ನೆನೆಗುದಿಗೆ ಬಿದ್ದಿರುವ ಕುರಿತು ಮಾತನಾಡಿ, ಈ ವಿಚಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಂದಿದೆ. ಮುಂಬರುವ ಸಭೆಯಲ್ಲಿ ಈ ಬಗ್ಗೆ ಪರಿಶೀಲಿಸುತ್ತೇವೆ ಎಂದರು.

    ಗಿರಿ ಭಾಗದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಗಳು ಹಾಳಾಗುತ್ತಿವೆ ಎನ್ನುವ ದೂರುಗಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ರಸ್ತೆಯ ಒಂದು ಬದಿಯಲ್ಲಿ ಚರಂಡಿಗಳನ್ನು ಬಿಡಿಸುವ ಕೆಲಸ ಆಗುತ್ತಿದೆ. ಮುಳ್ಳಯ್ಯನಗಿರಿಗೆ ಬದಲಿ ರಸ್ತೆ ಇಲ್ಲದಿರುವ ಬಗ್ಗೆ ಗಮನ ಹರಿಸಲಾಗಿದೆ. ಮಲ್ಲಂದೂರಿನಿಂದ ಮುತ್ತೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಬಗ್ಗೆಯೂ ಪರಿಶೀಲಿಸುತ್ತೇವೆ ಎಂದರು.

    ಬೇಲೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾರ್ಯಕ್ಕೆ ಇನ್ನೆರಡು ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ಇದೇ ಸಂದರ್ಭದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.

    ಕಳೆದ ತಿಂಗಳು ಸುರಿದ ಧಾರಾಕಾರ ಮಳೆಗೆ ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ರಸ್ತೆಗಳು ಹದಗೆಟ್ಟಿದ್ದು, ಈ ಬಗ್ಗೆಯೂ ಪರಿಶೀಲಿಸಿದ ಸಚಿವರು, ಕವಿಕಲ್ ಬಳಿ ಉಂಟಾಗಿದ್ದ ಭೂಕುಸಿತಕ್ಕೆ ಗೋಡೆ ನಿರ್ಮಿಸುವ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ಅತ್ತಿಗುಂಡಿ ಹಾಗೂ ಮಹಲ್ ಬಳಿ ಉಂಟಾಗಿರುವ ರಸ್ತೆ ಹಾನಿಯನ್ನು ಪರಿಶೀಲನೆ ನಡೆಸಿದರಲ್ಲದೆ, ವಿವಿಧ ಕಾಮಗಾರಿಗಳ ಕುರಿತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವ ಮೂಲಕ ಶೀಘ್ರ ಕೆಲಸ ಪೂರ್ಣಗೊಳಿಸುವಂತೆ ಸೂಚಿಸಿದರು.

    ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾರ್ಯಪಾಲಕ ಇಂಜಿನಿಯರ್ ಶ್ರೀಧರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್, ಮುಖಂಡರಾದ ಹೆಚ್.ಪಿ.ಮಂಜೇಗೌಡ, ಬೆಟ್ಟಗೆರೆ ಪ್ರವೀಣ್ ಮತ್ತಿತರ ಪ್ರಮುಖರು ಇದ್ದರು.

    More funding promised for road development in Chikkamagaluru district

  • ತಮ್ಮ ತಲೆ ಉಳಿಸಿಕೊಳ್ಳಲು ಪೊಲೀಸರ ಬಲಿ

    ತಮ್ಮ ತಲೆ ಉಳಿಸಿಕೊಳ್ಳಲು ಪೊಲೀಸರ ಬಲಿ

    ಚಿಕ್ಕಮಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ತಲೆ ಉಳಿಸಿಕೊಳ್ಳಲು ಪೊಲೀಸರನ್ನು ಬಲಿ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

    ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮ ಆಯೋಜನೆ ಮಾಡಿದ್ದವರು ಹಾಗೂ ಆಮಂತ್ರಿಸಿದವರ ತಲೆದಂಡವಾಗಬೇಕು. ಪೊಲೀಸ್ ಕಮಿಷನರ್ ತಲೆದಂಡವಾಗಿದೆ ಎಂದರೆ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಪೊಲೀಸ್ ಕಮಿಷನರ್ ಅವರೇ? ಎಂದು ಪ್ರಶ್ನಿಸಿದರು.
    ನನಗೆ ಇರುವ ಮಾಹಿತಿ ಪ್ರಕಾರ ಪೊಲೀಸರು ಕಾರ್ಯಕ್ರಮ ಆಯೋಜನೆ ಮಾಡುವುದು ಬೇಡ ಎಂದು ಹೇಳಿದ್ದರು. ಆದರೆ ಸಿಎಂ ಹಾಗೂ ಡಿಸಿಎಂ ಪೊಲೀಸರ ಮೇಲೆ ದಬ್ಬಾಳಿಕೆ ಮಾಡಿ ಏನಾಗುವುದಿಲ್ಲ ಕಾರ್ಯಕ್ರಮ ಮಾಡಿ ಎಂದು ಆಯೋಜಿಸಿದ್ದಾರೆ. ಆದರೆ ಇದೀಗ ಕಾರ್ಯಕ್ರಮ ಮಾಡುವುದು ಬೇಡ ಎಂದಿದ್ದ ಪೊಲೀಸರನ್ನೇ ತಲೆ ತಂಡ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಸಿಎಂ ಹಾಗೂ ಡಿಸಿಎಂ ತಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳಿಗಾಗಿ ಕಾರ್ಯಕ್ರಮ ಮಾಡಿ ಇದೀಗ ತಮ್ಮ ತಲೆ ಉಳಿಸಿಕೊಳ್ಳಲು ಸಣ್ಣವರನ್ನು ಬಲಿ ಪಡೆಯುತ್ತಿದ್ದಾರೆ. ಸಿಎಂ ಡಿಪಿಎಂ ಹಾಗೂ ಕಾರ್ಯದರ್ಶಿ ಬಿಟ್ಟು ಬೇರೆಯವರಿಗೆ ವಿಧಾನಸೌಧದಲ್ಲಿ ಕಾರ್ಯಕ್ರಮದ ನಿರ್ಧಾರ ಮಾಡುವ ಅವಕಾಶವಿಲ್ಲ. ವಿಧಾನಸೌಧದ ಮುಂದೆ ಚಪ್ಪಲಿ ರಾಶಿ ನೋಡಿದ ಮೇಲೆಯಾದರೂ ಮುಂದಾಗಬಹುದಾಗಿದ್ದ ಸಾವುಗಳನ್ನು ತಪ್ಪಿಸಬಹುದಿತ್ತು. ಇಲ್ಲಿಯೂ ಸರ್ಕಾರ ವಿಫಲವಾಗಿದೆ. ಹೀಗಾಗಿ ಉಚ್ಛ ನ್ಯಾಯಾಲಯದ ಹಾಲಿ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

    ಆರ್ ಸಿಬಿ ಹೂಡಿಕೆದಾರರು ಯಾರು? ಸಿಎಂ ಸಿದ್ದರಾಮಯ್ಯನವರೇ? ಡಿಸಿಎಂ ಡಿಕೆ ಶಿವಕುಮಾರ್ ಅವರೇ? ಅಥವಾ ಸರ್ಕಾರವೇ? ಎಂದು ಪ್ರಶ್ನಿಸಿದರು.

    ಐಪಿಎಲ್ ನಲ್ಲಿ ಆರ್‌ಸಿಬಿ ತಂಡ ಜಯಗಳಿಸಿದ ಬಳಿಕ ಸಿಎಂ ಹಾಗೂ ಡಿಸಿಎಂ ತಾವೇ ಹೂಡಿಕೆದಾರರೇನೋ ಎಂಬಂತೆ ಸಂಭ್ರಮಿಸಿದ್ದಾರೆ. ಹೀಗಾಗಿ ಆರ್‌ಸಿಬಿಯ ನಿಜವಾದ ಹೂಡಿಕೆದಾರರು ಯಾರು ಎಂದು ಸ್ಪಷ್ಟಪಡಿಸಬೇಕು ಎಂದರು.

    ಐಪಿಎಲ್ ಎನ್ನುವುದು ಇತ್ತೀಚಿನ ವರ್ಷದ ಹೊಸ ಕಮರ್ಷಿಯಲ್ ಟ್ರೆಂಡ್. ಐಪಿಎಲ್ ನಲ್ಲಿ ರಾಷ್ಟ್ರೀಯತೆ ಅಥವಾ ಪ್ರಾದೇಶಿಕತೆ ಎರಡು ಇಲ್ಲ ಎಂದು ಹೇಳಿದರು.

    ಬೆಂಗಳೂರು ಕಾಲ್ತುಡಿತ ಪ್ರಕರಣದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹಾಕಿರುವ ಕಣ್ಣೀರು ಪಶ್ಚಾತಾಪದ ಕಣ್ಣೀರಾ?, ಮಾನವೀಯತೆಯ ನೆಲೆಯಲ್ಲಿ ಬಂದ ಕಣ್ಣೀರಾ?. ನಾನು ಡಿ.ಕೆ.ಶಿವಕುಮಾರ್ ಹಾಕಿರುವ ಕಣ್ಣೀರು ನಾಟಕ ಎಂದು ಹೇಳುವುದಿಲ್ಲ. ಅದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ ಎಂದು ತಿಳಿಸಿದರು.

    ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿರುವ ಸುದ್ದಿ ಬಂದಾಗಲು ಗೆಲುವನ್ನು ಸಂಭ್ರಮಿಸುತ್ತಿದ್ದಿರಿ. ಈ ಸಂದರ್ಭದಲ್ಲಿ ಸಂಭ್ರಮಾಚರಣೆ ಮಾಡುತ್ತಿರುವಾಗ ಕಣ್ಣೀರಿಗೆ ಅರ್ಥವೇನು?. ಇಲ್ಲಿ ಎಲ್ಲರನ್ನೂ ಮೆಚ್ಚಿಸಬಹುದು. ಆದರೆ ಪರಮೇಶ್ವರನನ್ನು ಮೆಚ್ಚಿಸಲು ಸಾಧ್ಯವಿಲ್ಲ. ಆತ ಪಕ್ಕಾ ಲೆಕ್ಕ ಬರೆದಿರುತ್ತಾನೆ ಎಂದು ಹೇಳಿದರು.

    Police sacrifice to save their own lives

  • ಸಿಎಂ-ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

    ಸಿಎಂ-ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

    ಚಿಕ್ಕಮಗಳೂರು: ಆಡಳಿತ ವೈಫಲ್ಯದಿಂದ ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳ ಧಾರುಣ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ನಗರದ ಬಿಜೆಪಿ ಜಿಲ್ಲಾ ಕಚೇರಿ ಪಾಂಚಜನ್ಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಕೂಗುತ್ತಾ ಆಗಮಿಸಿದ ಕಾರ್ಯಕರ್ತರು ಸಿಎಂ ಮತ್ತು ಡಿಸಿಎಂ ಭಾವಚಿತ್ರಕ್ಕೆ ಬೆಂಕಿಹಚ್ಚಿ ಆಕ್ರೋಶ ಹೊರಹಾಕಿದರು. ಬಳಿಕ ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿಗಾಗಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಣೆ ನಡೆಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಆರ್‌ಸಿಬಿ ವಿಜಯೋತ್ಸವದಲ್ಲಿ ರಾಜ್ಯಸರ್ಕಾರ ಸೂಕ್ತ ಬಂದೋಬಸ್ತ್ ಮಾಡದೇ ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಿರುವ ಪರಿಣಾಮ ೧೧ ಮಂದಿ ಕ್ರೀಡಾಭಿಮಾನಿಗಳು ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳು ನೋವಿನ ಸಾಗರದಲ್ಲಿ ಮುಳುಗಲು ರಾಜ್ಯಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

    ಕುಂಭಮೇಳದ ಬಗ್ಗೆ ಟೀಕಿಸುವ ಮುಖ್ಯಮಂತ್ರಿಗಳು ರಾಜಧಾನಿಯಲ್ಲಿ ಗುಪ್ತಚರ ಮಾಹಿತಿಗಳಿದ್ದರೂ ಸಮಾರಂಭ ನಡೆಸಿದ್ದಾರೆ. ಈ ಪ್ರಕರಣದಿಂದ ನುಚುಚಿಕೊಳ್ಳಲು ಅಮಾಯಕ ಪೊಲೀಸ್ ಅಧಿಕಾರಿಗಳನ್ನು ಹೊಣೆಯಾಗಿಸಲು ಮುಂದಾಗಿರುವುದು ನಾಚಿಕೇಡಿನ ಸಂಗತಿ ಎಂದರು.

    ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೊಟ್ಯಾನ್ ಮಾತನಾಡಿ, ಕ್ರೀಡಾಭಿಮಾನಿಗಳ ಸಾವು ಮುಚ್ಚಿಹಾಕಲು ಸಿಬಿಐ, ನ್ಯಾಯಾಧೀಶರ ತನಿಖೆಗೆ ಒಳಪಡಿಸುತ್ತೇವೆಂದು ಬೂಟಾಟಿಕೆ ಮಾಡಿಕೊಂಡಿರುವ ರಾಜ್ಯಸರ್ಕಾರ ಕೊನೆಯದಾಗಿ ಯಾವುದೇ ದಾರಿ ತೋಚದೆ ನೇರವಾಗಿ ರಾಜ್ಯದ ನಿಷ್ಟಾವಂತ ಪೊಲೀಸ್ ಅಧಿಕಾರಿಗಳನ್ನು ಹೊಣೆಯಾಗಿಸಿ ಕೈತೊಳೆದುಕೊಳ್ಳುತ್ತಿದೆ ಎಂದು ದೂರಿದರು.

    ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ಸ್ಥಾನಮಾನವಿದೆ. ಆದರೆ ರಾಜ್ಯದ ಸಿಎಂ ಮತ್ತು ಡಿಸಿಎಂ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಸರ್ಕಾರ ಮಾಡಿದ ತಪ್ಪನ್ನು ಪೊಲೀಸರ ಮೇಲೆ ಹೊರಿಸುತ್ತಿರುವುದು ನ್ಯಾಯಸಮ್ಮತವಲ್ಲ ಎಂದರು.

    ಈ ಮೊದಲೇ ಗುಪ್ತಚರ ಇಲಾಖೆ ಸಮಾರಂಭ ನಡೆಸದಂತೆ ಮಾಹಿತಿ ರವಾನಿಸಿದ್ದರೂ ಲೆಕ್ಕಿ ಸದೇ ವಿಜಯೋತ್ಸವ ಆಚರಿಸಿ ಅಮಾಯಕರ ಸಾವಿಗೆ ಸರ್ಕಾರವೇ ಕಾರಣವಾಗಿದೆ ಎಂದು ದೂರಿದರು.

    ಅಂದಿನ ವಿಜಯೋತ್ಸವ ಸಮಾರಂಭವು ಜನಸಾಮಾನ್ಯರಿಗಲ್ಲ. ಸಚಿವರು ಮತ್ತು ಶಾಸಕರ ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದವರನ್ನು ಒಲೈಸಲು ಹಾಗೂ ಸೆಲ್ಪಿ ಪೋಟೋ ಕಿಕ್ಲಿಸಿಕೊಳ್ಳಲು ಎಂಬುದು ವೇದಿಕೆಗಳಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಹೀಗಾಗಿ ಈ ಸಾವಿಗೆ ಕಾರಣರಾದ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ಬಿಜೆಪಿ ಓಬಿಸಿ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ನಗರ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್, ಕೌಶಿಕ್, ಜಿಪಂ ಮಾಜಿ ಉಪಾಧ್ಯಕ್ಷ ಸೋಮಶೇಖರ್, ಮುಖಂಡರಾದ ಕೋಟೆ ರಂಗನಾಥ್, ದಿನೇಶ್, ಈಶ್ವರಹಳ್ಳಿ ಮಹೇಶ್, ನೆಟ್ಟೆಕೆರೆಹಳ್ಳಿ ಜಯಣ್ಣ, ಸಚಿನ್‌ಗೌಡ, ಕೆ.ಸಿ.ನಿಶಾಂತ್, ಕೋಟೆ ಪ್ರದೀಪ್, ಸತೀಶ್, ಪ್ರದೀಪ್, ರೇವನಾಥ್, ಜೀವನ್, ಪವಿತ್ರ, ಬೆನಡಿಕ್ಟ್ ಜೇಮ್ಸ್, ಸಂಗೀತ ಮತ್ತಿತರರಿದ್ದರು.

    BJP protests demanding resignation of CM-DCM

  • ಜಿಲ್ಲೆಯಲ್ಲಿ ಬಿಎಸ್‌ಎನ್‌ಎಲ್ ಸೇವೆ ಇನ್ನಷ್ಟು ಉನ್ನತೀಕರಣ

    ಜಿಲ್ಲೆಯಲ್ಲಿ ಬಿಎಸ್‌ಎನ್‌ಎಲ್ ಸೇವೆ ಇನ್ನಷ್ಟು ಉನ್ನತೀಕರಣ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿಎಸ್‌ಎನ್‌ಎಲ್ ಸೇವೆಯನ್ನು ಇನ್ನಷ್ಟು ಉನ್ನತೀಕರಣಗೊಳಿಸಲು ಯೋಜಿಸಲಾಗಿದ್ದು, ಈ ಸಂಬಂಧ ಇಲಾಖೆಯ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳನ್ನು ನಗರಕ್ಕೆ ಕರೆಸಿ ಸಭೆ ನಡೆಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

    ಶುಕ್ರವಾರ ನಗರದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬಿಎಸ್‌ಎನ್‌ಎಲ್ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ೯ ತಾಲ್ಲೂಕುಗಳ ಜೆಟಿಓಗಳು, ಸಲಹಾ ಸಮಿತಿ ಸದಸ್ಯರುಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ ೨,೫೬,೪೫೬ ಬಿಎಸ್‌ಎನ್‌ಎಲ್ ಸಿಮ್‌ಗಳು ಕಾರ್ಯನಿರ್ವಹಿಸುತ್ತಿವೆ. ಇನ್ನೊಂದು ವರ್ಷದಲ್ಲಿ ಎಲ್ಲಾ ಟವರ್‌ಗಳನ್ನು ಸುಸ್ಥಿತಿಗೆ ತಂದು ಜನರೇಟರ್, ಬ್ಯಾಟರಿ ಹಾಗೂ ವಿದ್ಯುತ್ ಸಂಪರ್ಕವನ್ನು ಸಮರ್ಪಕಗೊಳಿಸಿದಲ್ಲಿ ದುಪ್ಪಟ್ಟು ಸಿಮ್‌ಗಳಿಗೆ ಬೇಡಿಕೆ ಬರಬಹುದು. ಅದಕ್ಕೆ ಪೂರ್ವಭಾವಿ ತಯಾರಿಗಳನ್ನು ಮಾಡುತ್ತೇವೆ ಎಂದರು.

    ಪ್ರತಿ ತಾಲ್ಲೂಕು ಮಟ್ಟದಲ್ಲಿ ಜೆಟಿಓಗಳು ಹಾಗೂ ನಾಮನಿರ್ದೇಶಿತ ಸದಸ್ಯರ ಸಮಕ್ಷಮದಲ್ಲಿ ಗ್ರಾಹಕರ ಕುಂದು ಕೊರತೆಗಳನ್ನು ಕೇಳಲಾಗುವುದು. ಈಗ ಇರುವ ೨೧೭ ಟವರ್‌ಗಳ ಪೈಕಿ ೧೭೧ ಕ್ಕೆ ೪ಜಿ ಮಾಡಲು ಪ್ರಸ್ತಾವನೆ ಇದೆ. ಈ ಪೈಕಿ ಈಗಾಗಲೆ ೧೬೫ ಟವರ್‌ಗಳು ೪ಜಿ ಆಗಿ ಕಾರ್ಯ ನಿರ್ವಹಿಸುತ್ತಿವೆ. ೬ ಟವರ್‌ಗಳಿಗೆ ೪ಜಿ ಉಪಕರಣಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಇನ್ನೂ ೪೬ ಟವರ್‌ಗಳಿಗೆ ೪ಜಿ ಅಳವಡಿಸಬೇಕು ಎಂದು ಪ್ರಸ್ತಾವನೆ ಇದೆ ಎಂದು ತಿಳಿಸಿದರು.

    ಈಗ ಜಿಲ್ಲೆಗೆ ೭೮ ಹೊಸ ಬ್ಯಾಟರಿಗಳು ಮಂಜೂರಾಗಿವೆ. ಅದರಲ್ಲಿ ೫೧ ಅಳವಡಿಕೆ ಆಗಿದೆ, ೧೧ ಪ್ರಗತಿಯಲ್ಲಿದೆ ೧೮ ಬ್ಯಾಟರಿಗಳು ಬರಬೇಕಿದೆ. ಇನ್ನೂ ೨೫ ಕ್ಕೆ ಬೇಡಿಕೆ ಇಟ್ಟಿದ್ದೇವೆ ಎಂದು ತಿಳಿಸಿದರು.

    ಎಲ್ಲಾ ೨೧೭ ಟವರ್‌ಗಳು ಬ್ಯಾಟರಿ ಮತ್ತು ಜನರೇಟರ್‌ಗಳೊಂದಿಗೆ ವ್ಯವಸ್ಥಿತವಾಗಿ ಕೆಲಸ ಮಾಡುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಹೊಸದಾಗಿ ೨೮ ಟವರ್‌ಗಳು ಮಂಜೂರಾಗಿದ್ದು, ೨೧ ಕಾರ್ಯಾರಂಭಗೊಂಡಿದೆ. ೩ ಕ್ಕೆ ಸ್ಥಳ ನೀಡುವ ಕೆಲಸ ಆಗುತ್ತಿದೆ. ಉಳಿದವರನ್ನು ಮುಂದಿನ ೧೫ ದಿನಗಳಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದರು.

    ಎಲ್ಲ ಟವರ್‌ಗಳಿಗೆ ವಿದ್ಯುತ್ ಸಂಪರ್ಕ ಕೊಡಿಸುವ ಸಂಬಂಧ ಮೆಸ್ಕಾಂ ಎಂಡಿ ಅವರೊಂದಿಗೆ ಚರ್ಚಿಸಿದ್ದೇವೆ. ನಿರಂತರ ಜ್ಯೋತಿಯನ್ನು ಇದಕ್ಕೆ ಕೊಡಬೇಕೆಂದು ಕೇಳಿದ್ದಾರೆ. ಅದಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು.

    ಆನರೇಟರ್‌ಗಳನ್ನು ಪೂರ್ಣಪ್ರಮಾಣದಲ್ಲಿ ಅಳವಡಿಸಿದರೆ ಅನುಕೂಲವಾಗುತ್ತದೆ. ಜನರೇಟರ್ ಬೇಡಿಕೆ ಹೆಚ್ಚು ಮಾಡುತ್ತೇವೆ. ಗ್ರಾ.ಪಂ.ಗಳಲ್ಲಿ ಹೈಸ್ಪೀಡ್ ನೆಟ್‌ವರ್ಕ್ ಬಲ ಪಡಿಸಬೇಕಿದೆ. ಕೆಲವುಕಡೆ ಹೈಸ್ಪೀಡ್ ಸಂಪರ್ಕ ಸಿಗುತ್ತಿರಲಿಲ್ಲ ಮುಂದಿನ ಒಂದು ವಾರದಲ್ಲಿ ಎಲ್ಲಾ ಗ್ರಾ.ಪಂ.ಗಳಿಗೆ ಹೈಸ್ಪೀಡ್ ಸಂಕರ್ಪ ಕೊಡಿಸುವುದಾಗಿ ಅಧಿಕಾರಿಗಳು ಒಪ್ಪಿದ್ದಾರೆ ಎಂದರು.

    ಸಂವೃದ್ಧಿ ಗ್ರಾಮ ಪಂಚಾಯ್ತಿ ಎನ್ನುವ ಕೇಂದ್ರ ಸರ್ಕಾರದ ಯೋಜನೆಯಲ್ಲಿ ಈ ಎಲ್ಲಾ ಪಂಚಾಯ್ತಿಗಳಿಗೆ ಹೈಸ್ಪೀಡ್ ಸಂಪರ್ಕ ಕಲ್ಪಿಸಲಾಗುವುದು. ಒಟ್ಟಾರೆ ಬಿಎಸ್‌ಎನ್‌ಎಲ್ ಆಧುನೀಕರಣ ಮತ್ತು ಸಂಪರ್ಕದ ಕೊರತೆ ನಿವಾರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಕರ್ನಾಟಕದಾದ್ಯಂತ ಒಟ್ಟು ೫೦ ಸಾವಿರ ಕಿ.ಮೀ. ಹೊಸ ಕೇಬಲ್ ಅಳವಡಿಸಲು ಮಂಜೂರಾತಿಗೆ ಪ್ರಸ್ತಾವನೆ ಹೋಗಿತ್ತು. ಈ ಪೈಕಿ ೩೧ ಸಾವಿರ ಕಿ.ಮೀ. ಕೇಬಲ್‌ಗೆ ಮಂಜೂರಾತಿ ಸಿಕ್ಕಿದೆ. ಇದಿಷ್ಟೂ ಅಳವಡಿಸಿದಲ್ಲಿ ಅನುಕೂಲವಾಗಲಿದೆ ಎಂದರು.

    ಮೂಡಿಬಿದರೆ, ಕಳಸಾಪುರ, ತರೀಕೆರೆ ತಾಲ್ಲೂಕಿನ ಚೀಕನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂಪರ್ಕದ ತೊಂದರೆ ಇದ್ದು, ಅದೆಲ್ಲವನ್ನೂ ನಾಮ ನಿರ್ದೇಶಿತ ಸದಸ್ಯರು ಇಂದು ಸಭೆಯಲ್ಲಿ ತಿಳಿಸಿದ್ದಾರೆ. ಅದನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ಮಳೆ ಸಂದರ್ಭದಲ್ಲಿ ಹಲವು ದಿನಗಳ ಕಾಲ ವಿದ್ಯುತ್ ಕಡಿತಗೊಂಡ ಪರಿಣಾಮ ಮತ್ತು ಭೂ ಕುಸಿತಗೊಮಡು ಟವರ್‌ಗಳಿಗೆ ಸಮಸ್ಯೆ ಆಗಿರುವುದರಿಂದ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಜೆಟಿಓ ಗಳಿಗೆ ನಿರ್ದೇಶನ ನೀಡಲಾಗಿದೆ. ಪದೇ ಪದೇ ಗ್ರಾಹಕರಿಗೆ ತೊಂದರೆ ಆದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ ಎಂದು ತಿಳಿಸಿದರು.

    ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ಆಲೆಕಾನು ಹೊರಟ್ಟಿ ಗ್ರಾಮದಲ್ಲಿ ಅಳವಡಿಸಲಾಗಿರುವ ಸ್ಯಾಟಲೈಟ್ ಟವರ್ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ತುಂಬಾ ಸಂಪರ್ಕದ ಸಮಸ್ಯೆ ಇರುವ ನಕ್ಸಲ್ ಬಾಧಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಅಲ್ಲಿಗೆ ಸ್ಯಾಟಲೈಟ್ ಸಂಪರ್ಕ ಕೊಡುವ ಆಲೋಚನೆ ಇದೆ. ಈಗಾಗಲೇ ಏಳೆಂಟು ಟವರ್‌ಗಳಿಗೆ ಬೇಡಿಕೆ ಇದೆ. ಸಾಧಕ-ಬಾಧಕ ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

    ಸ್ಯಾಟಲೈಟ್ ಟವರ್‌ಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ದೃಷ್ಠಿಯಿಂದ ತೊಂದರೆ ಆಗುತ್ತದೆ ಎನ್ನುವ ಪ್ರಮೇಯ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಅವಕಾಶಗಳಿದ್ದಲ್ಲಿ ನಮ್ಮ ಜಿಲ್ಲೆಗೆ ಆಧ್ಯತೆ ಮೇರೆಗೆ ಪ್ರಾಶಸ್ತ್ಯ ಕೊಡಬೇಕು ಎಂದು ಕೇಳಿದ್ದೇವೆ ಎಂದರು.

    ಬಿಎಸ್‌ಎನ್‌ಎಲ್ ಸಂಪರ್ಕ ಪಡೆದ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಪ್ರತಿದಿನ ೧೦೦ ರಿಂದ ೨೦೦ ಬೇರೆ ಸಿಮ್‌ನ ಗ್ರಾಹಕರು ಬಿಎಸ್‌ಎನ್‌ಎಲ್‌ಗೆ ಪೋರ್ಟ್ ಆಗುತ್ತಿದ್ದಾರೆ ಎಂದು ತಿಳಿಸಿದರು.

    ಬಿಜೆಪಿ ಮುಖಂಡರುಗಳಾದ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಸೇರಿದಂತೆ ಬಿಎಸ್‌ಎನ್‌ಎಲ್ ನಾಮ ನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

    BSNL service further upgraded in the district

  • ಎಲ್‌ಜಿಕೆ-ಯುಜಿಕೆ ತರಗತಿ ಪ್ರಾರಂಭ ಶ್ಲಾಘನೀಯ

    ಎಲ್‌ಜಿಕೆ-ಯುಜಿಕೆ ತರಗತಿ ಪ್ರಾರಂಭ ಶ್ಲಾಘನೀಯ

    ಚಿಕ್ಕಮಗಳೂರು: ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಮಾದರಿಯ ತರಗತಿಗಳನ್ನು ತೆರೆದು ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ಪೂರೈಸುತ್ತಿರುವುದು ಶ್ಲಾಘನೀಯ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು.

    ತಾಲ್ಲೂಕಿನ ಮುಗುಳುವಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳು, ಸ್ಥಳೀಯರು ಹಾಗೂ ಶಾಲಾಡಳಿತ ಸಹಕಾರದಿಂದ ೨೦೨೫-೨೬ ನೇ ಸಾಲಿನ ಆಂಗ್ಲ ಮತ್ತು ಕನ್ನಡಮಾಧ್ಯಮ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

    ಪಾಲಕರ ಆಶಯದಂತೆ ಗ್ರಾಮೀಣ ಭಾಗದಲ್ಲೂ ಎಲ್‌ಕೆಜಿ-ಯುಕೆಜಿ ತರಗತಿ ತೆರೆದು ಹೆಜ್ಜೆಯಿಟ್ಟಿರುವ ಮುಗುಳುವಳ್ಳಿ ಶಾಲೆ ಮೆಚ್ಚುವಂತ ಕೆಲಸ. ಎಳೆವಯಸ್ಸಿನಲ್ಲಿ ಮಕ್ಕಳನ್ನು ತಿದ್ದುವ ಮಹಾತ್ತರ ಕಾರ್ಯ ಶಿಕ್ಷಕರ ಮೇಲಿರುವ ಕಾರಣ ಹೆಚ್ಚಿನ ಜವಾಬ್ದಾರಿಯನ್ನು ಶಾಲಾಡಳಿತ ವಹಿಸಬೇಕು ಎಂದು ಸೂಚಿಸಿದರು.

    ಪ್ರಸ್ತುತ ಅಂಗನವಾಡಿ ಕೇಂದ್ರಗಳಲ್ಲಿ ಪುಟ್ಟ ಮಕ್ಕಳ ಆರೈಕೆ ಮಾಡಲಾಗುತ್ತಿದೆ. ಕಾಲಕ್ರಮೇಣ ಖಾಸಗೀ ಶಾಲೆಗಳು ಬೆಳೆದಂತೆ ಪ್ರತಿ ತರಗತಿಗಳನ್ನು ಪ್ರಾರಂಭಿಸುತ್ತಿರುವ ಕಾರಣ ಸರ್ಕಾರಿ ಶಾಲೆಗಳನ್ನು ಕ್ಷೀಣಿಸಲಾರ ಂಭಿಸಿದವು. ಇದೀಗ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತೆರೆದು ಶಾಲೆಗಳನ್ನು ಉಳಿಸುವಂಥ ಕೆಲಸ ಸ್ಥಳೀಯರು ಮಾಡಿರುವುದು ಹೆಮ್ಮೆಯ ಸಂಗತಿ ಎಂದರು.

    ರಾಜ್ಯಸರ್ಕಾರ ಕಳೆದ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಜಿಕೆ ಆರಂಭಿಕವಾಗಿ ತೆರೆದು ಯಶಸ್ವಿಗೊಂಡಿತು. ಈ ಸಾಲಿನಲ್ಲಿ ತರಗತಿ ತೆರೆಯಲು ಪ್ರಕ್ರಿಯೆಯಲ್ಲಿದ್ದು ಸದ್ಯದಲ್ಲೇ ಸಂಬಂಧಿಸಿದ ಸಚಿವ ರೊಂದಿಗೆ ಭೇಟಿ ಮಾಡಿ ಗ್ರಾಮೀಣ ಬಡಮಕ್ಕಳಿಗೆ ಖಾಸಗೀ ಶಾಲೆಗಳಂತೆ ಎಲ್ಲಾ ಸೌಕರ್ಯಗಳನ್ನು ಒದಗಿ ಸುವುದಾಗಿ ಭರವಸೆ ನೀಡಿದರು.

    ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಹಾಗೂ ಪರಿಸರವನ್ನು ಅಚ್ಚುಕಟ್ಟಾಗಿರಬೇಕು. ಮಕ್ಕಳಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಮನುಷ್ಯನಿಗೆ ಶಿಕ್ಷಣವಿಲ್ಲದಿದ್ದರೆ ಯಾರು ಬೇಕಾದರೂ ಯ ಮಾರಿಸಬಹುದು. ಶಿಕ್ಷಣವೆಂಬ ದೊಡ್ಡಅಸ್ತ್ರ ಕೈಯಲಿದ್ದಾರೆ ದಾರಿತಪ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಮಕ್ಕಳು ವಿದ್ಯಾವಂತರಾಗಬೇಕು ಎಂದು ಕಿವಿಮಾತು ಹೇಳಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್ ಮಾತನಾಡಿ ತಾಲ್ಲೂಕಿನಲ್ಲಿ ಸುಮಾರು ೨೭ ಶಾಲೆಗಳಲ್ಲಿ ಎಲ್ ಕೆಜಿ-ಯುಕೆಜಿ ತರಗತಿ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದ್ದು ಅನುದಾನ ಬಿಡುಗಡೆಗೊಳ್ಳಬೇಕಿದೆ. ಅಲ್ಲದೇ ಶಾಲೆಗಳಲ್ಲಿ ಶಿಕ್ಷಕರ ಸಮಸ್ಯೆ ಸರಿದೂಗಿಸಲು ಅತಿಥಿ ಶಿಕ್ಷಕ ವರ್ಗವನ್ನು ನೇಮಿಸಿಕೊಂಡು ಸಮಗ್ರ ವಿದ್ಯಾಭ್ಯಾಸ ಪೂರೈಸುತ್ತಿದೆ ಎಂದರು.

    ಇತ್ತೀಚೆಗೆ ಕಡುಬಡವನು ನೆರೆಯವರ ವ್ಯಾಮೋಹದಿಂದ ಖಾಸಗೀ ಶಾಲೆಗೆ ದಾಖಲಿಸಿ ಶುಲ್ಕ ಕಟ್ಟಲು ಒದ್ದಾಡುವ ಸ್ಥಿತಿಯಿದೆ. ಈ ನಡುವೆ ಸರ್ಕಾರಿ ಶಾಲೆ ಶಿಕ್ಷಣ, ಸಮವಸ್ತ್ರ ಸೇರಿದಂತೆ ಸಕಲ ಸವಲತ್ತನ್ನು ಉಚಿ ತವಾಗಿ ನೀಡಿದರೂ ಬರುತ್ತಿಲ್ಲ. ಈ ಬಗ್ಗೆ ಪೋಷಕರು ಎಚ್ಚೆತ್ತುಕೊಂಡು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು ಎಂದು ಸಲಹೆ ಮಾಡಿದರು.

    ಶಾಲೆಯ ಮುಖ್ಯೋಪಾಧ್ಯಾಯ ಶೇಖರ್‌ನಾಯ್ಕ ಮಾತನಾಡಿ ಪ್ರಸ್ತುತ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಗೆ ೧೬ ಮತ್ತು ಯುಕೆಜಿಗೆ ೧೭ ಮಕ್ಕಳು ದಾಖಲಾಗಿದ್ದಾರೆ. ಜೊತೆಗೆ ಈರ್ವರು ಶಿಕ್ಷಕರು, ಓರ್ವ ಆಯಾ ಕೆಲಸ ಕ್ಕೆ ಹೊರಗುತ್ತಿಗೆಯಲ್ಲಿ ನೇಮಿಸಿಕೊಳ್ಳಲಾಗಿದ್ದು ಮಕ್ಕಳಿಗೆ ಸಮವಸ್ತ್ರ, ಬ್ಯಾಗ್, ಶೂ, ಲೇಖನಿ, ನೋಟ್‌ಪುಸ್ತಕ ಹಾಗೂ ಶಿಕ್ಷಕರಿಗೆ ವೇತನದ ಸಂಪೂರ್ಣ ವೆಚ್ಚವನ್ನು ದಾನಿ, ಸ್ಥಳೀಯರು ಹಾಗೂ ಶಾಲಾಡಳಿತ ವಹಿಸಿ ಕೊಂಡಿದೆ ಎಂದರು.

    ಅಂಬಳೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ವಿಜಯ್‌ಕುಮಾರ್ ಮಾತನಾಡಿ ರಾಜ್ಯಸರ್ಕಾರ ಗ್ರಾಮೀಣ ಮ ಕ್ಕಳು ಶಿಕ್ಷಣದಿಂದ ವಂಚಿತರಾಗದೇ ಮೂಲಸವಲತ್ತು ನೀಡಿ ಪ್ರೋತ್ಸಾಹಿಸುತ್ತಿದೆ. ಆ ಹಿನ್ನೆಲೆ ಪಾಲಕರು ಯಾ ವುದೇ ವ್ಯಾಮೋಹಕ್ಕೆ ಒಳಗಾಗದೇ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಬೇಕು ಎಂದ ಅವರು ದೇಶದ ಗಣ್ಯರು ಬದುಕಿನಲ್ಲಿ ಸಾಧನೆ ಮಾಡಲು ಸರ್ಕಾರಿ ಶಾಲೆಗಳು ಕಲಿತಂಥ ವಿದ್ಯೆಯೇ ಕಾರಣ ಎಂದರು.

    ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ರೂಪ, ಗ್ರಾ.ಪಂ ಮಾಜಿ ಅಧ್ಯಕ್ಷ ಎಂ.ಡಿ.ರವಿ, ಪಿಡಿಓ ಸುಮಾ, ಅಕ್ಷರ ದಾಸೋಹ ಸಂಯೋಜಕ ನೀಲಕಂಠಪ್ಪ, ದೈಹಿಕ ಶಿಕ್ಷಣ ಪರವೀಕ್ಷಕ ಶೇರ್‌ಆಲಿ, ಶಾಲಾ ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Commencement of LGK-UGK classes commendable

  • ಅಲ್ಲಂಪುರ ಮೀಸಲು ಅರಣ್ಯ ಬ್ಲಾಕ್ ಎಂದು ಸಂರಚಿಸದಂತೆ ಗ್ರಾಮಸ್ಥರ ಆಕ್ಷೇಪಣೆ

    ಅಲ್ಲಂಪುರ ಮೀಸಲು ಅರಣ್ಯ ಬ್ಲಾಕ್ ಎಂದು ಸಂರಚಿಸದಂತೆ ಗ್ರಾಮಸ್ಥರ ಆಕ್ಷೇಪಣೆ

    ಚಿಕ್ಕಮಗಳೂರು: ತಾಲ್ಲೂಕು ಅಲ್ಲಂಪುರ ಬ್ಲಾಕ್ ಪ್ರದೇಶದ ವ್ಯಾಪ್ತಿಗೆ ಬರುವ ಪ್ರದೇಶವನ್ನು ಅಲ್ಲಂಪುರ ಮೀಸಲು ಅರಣ್ಯ ಬ್ಲಾಕ್ ಎಂದು ಸಂರಚಿಸದಂತೆ ಆಗ್ರಹಿಸಿ ಶಾಸಕ ಹೆಚ್.ಡಿ ತಮ್ಮಯ್ಯ ರವರಿಗೆ ಈ ಭಾಗದ ಗ್ರಾಮಸ್ಥರುಗಳು ಆಕ್ಷೇಪಣೆ ಸಲ್ಲಿಸಿದ್ದಾರೆ.

    ಶಾಸಕ ಹೆಚ್.ಡಿ ತಮ್ಮಯ್ಯ ರವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ದಾಸರಹಳ್ಳಿ, ಕೈಮರ ಗ್ರಾಮಸ್ಥರುಗಳಾದ ಎಂ. ಕೃಷ್ಣಪ್ಪ, ಪಿ.ಸಿ ಶಿವಾನಂದ, ಟಿ. ಎಸ್ ಶಿವಕುಮಾರ್, ಹೆಚ್.ಎಸ್ ಈಶ್ವರಾಗೌಡ, ಎಂ.ಬಿ ಸತೀಶ್ ಇವರುಗಳು ಅಲ್ಲಂಪುರ ಬ್ಲಾಕ್ ಪ್ರದೇಶದ ವ್ಯಾಪ್ತಿಗೆ ಬರುವ ದಾಸರಹಳ್ಳಿ ಗ್ರಾಮ ಸರ್ವೇ ನಂ. ೪ ಮತ್ತು ೭, ಅಲ್ಲಂಪುರ ಗ್ರಾಮದ ಸರ್ವೇ ನಂ. ೨೬, ಅರಳಗುಪ್ಪೆ ಗ್ರಾಮದ ಸ.ನಂ ೧೫ ಮತ್ತು ಹುಳಿಯಾರಳ್ಳಿ ಗ್ರಾಮದ ಸ.ನಂ ೩೫ ಮತ್ತು ೩೬ ರಲ್ಲಿ ಒಟ್ಟು ೯೮೮ ಎಕರೆ ೧೦ ಗುಂಟೆ ವಿಸ್ತೀರ್ಣದ ಪ್ರದೇಶವನ್ನು ಅಲ್ಲಂಪುರ ಮೀಸಲು ಅರಣ್ಯ ಬ್ಲಾಕ್ ಎಂದು ಸಂರಚಿಸುವ ಬಗ್ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ,

    ಈ ಭಾಗದ ೫೦೦ ಕ್ಕೂ ಹೆಚ್ಚು ರೈತರುಗಳು ೧ ಎಕರೆಯಿಂದ ೪.೩೮ ಎಕರೆವರೆಗೆ ಹಕ್ಕುಪತ್ರ ಪಡೆದುಕೊಂಡು ಜಮೀನು ಸಾಗುವಳಿ ಮಾಡಿ ಜೀವನ ನೆಡೆಸುತ್ತಿದ್ದೇವೆ, ಈ ಜಮೀನುಗಳೆ ನಮ್ಮೆಲ್ಲರಿಗೆ ಜೀವನಾದಾರವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

    ಅರಣ್ಯ ಇಲಾಖೆಯವರು ಯಾವುದೇ ಮುನ್ಸೂಚನೆ ನೀಡದೆ ನಮ್ಮ ಭೂಮಿಗಳನ್ನು ಅಲ್ಲಂಪುರ ಮೀಸಲು ಅರಣ್ಯ ಬ್ಲಾಕ್ ಎಂದು ಸಂರಕ್ಷಿಸುವ ಕುರಿತು ಅಧಿಸೂಚನೆ ಹೊರಡಿಸಲು ಮುಂದಾಗಿರುವುದಕ್ಕೆ ಆಕ್ಷೇಪಣೆ ಸಲ್ಲಿಸಿತ್ತಿದ್ದೇವೆ ಎಂದಿದ್ದಾರೆ.

    ಅತಿ ಸಣ್ಣ ರೈತರುಗಳಾದ ನಾವುಗಳು ಈ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದು, ಈ ಸರ್ವೇ ನಂ. ಗಳಲ್ಲಿ ಸಣ್ಣ-ಪುಟ್ಟ ಮನೆಗಳನ್ನು ನಿರ್ಮಿಸಿಕೊಂಡಿರುತ್ತೇವೆ ಅಂಗನವಾಡಿ, ಸರ್ಕಾರಿ ಶಾಲೆಗಳು, ಬಸ್ ನಿಲ್ದಾಣ ಸೇರಿದಂತೆ, ಸರ್ಕಾರಿ ರಸ್ತೆಗಳನ್ನು ಹೊಂದಿದ್ದು ನಗರದಿಂದ ೧೦ ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

    ಅರಣ್ಯ ಬ್ಲಾಕ್ ಎಂದು ಅಧಿಸೂಚನೆ ಹೊರಡಿಸಿ ಒಕ್ಕಲೆಬಿಸಲು ಮುಂದಾಗಿರುವುದರಿಂದ ನೋವುಂಟುಮಾಡಿದೆ ಕೂಡಲೇ ಅಲ್ಲಂಪುರ ಮೀಸಲು ಅರಣ್ಯ ಬ್ಲಾಕ್ ಎಂದು ಸಂರಚಿಸುವ ಯೋಜನೆಯನ್ನು ಕೈಬಿಟ್ಟು, ಯಥಾಸ್ಥಿತಿಯಲ್ಲಿ ಮುಂದುವರೆಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

    Villagers object to Allampura being classified as a reserve forest block