Category: ಚಿಕ್ಕಮಗಳೂರು

  • ಸಹಕಾರ ಕೇಂದ್ರ ಬ್ಯಾಂಕ್‌ನಿಂದ 858 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಣೆ

    ಸಹಕಾರ ಕೇಂದ್ರ ಬ್ಯಾಂಕ್‌ನಿಂದ 858 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಣೆ

    ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯ ೬೯೮೫೦ ರೈತರಿಗೆ ೯೮೩ ಕೋಟಿ ರೂ.ಗಳಷ್ಟು ಕೆಸಿಸಿ ಬೆಳೆ ಸಾಲವನ್ನು ನೀಡಲು ಇರಿಸಿಕೊಂಡಿದ್ದ ಗುರಿಯಲ್ಲಿ ಕಳೆದ ಮಾರ್ಚ್ ಅಂತ್ಯಕ್ಕೆ ೫೬೯೧೫ ರೈತರಿಗೆ ೮೫೮.೨೪ ಕೋಟಿ ರೂ.ಗಳಷ್ಟು ಕೆಸಿಸಿ ಬೆಳೆಸಾಲ ವಿತರಿಸಿದೆ.

    ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ನಬಾರ್ಡ್‌ನ ಕರ್ನಾಟಕ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕ ಡಾ.ಸುರೇಂದ್ರ ಬಾಬು ಅವರ ಸಮ್ಮುಖದಲ್ಲಿ ನಡೆದ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಬಿ.ನಾಯಕ್ ಅವರು ಬ್ಯಾಂಕ್‌ನ ಪ್ರಗತಿ ವರದಿಯನ್ನು ಮಂಡಿಸಿ ಈ ಮಾಹಿತಿ ನೀಡಿದರು.

    ೨೦೨೫-೨೬ನೇ ಸಾಲಿಗೆ ಹಣಕಾಸಿನ ಲಭ್ಯತೆ ಆಧರಿಸಿ ೧೦೦೦ ಕೋಟಿ ರೂ. ಕೃಷಿ ಸಾಲ ನೀಡುವ ಗುರಿ ಹೊಂದಲಾಗಿದೆ. ೨೦೨೪-೨೫ನೇ ಸಾಲಿಗೆ ಶೇ.೩ರ ಬಡ್ಡಿ ದರದಲ್ಲಿ ೩೩೯ ರೈತರಿಗೆ ೧೭ ಕೋಟಿ ರೂ. ಮಧ್ಯಮಾವಧಿ ಸಾಲ ವಿತರಣಾ ಗುರಿ ನಿಗದಿಪಡಿಸಿಕೊಂಡಿದ್ದು. ಕಳೆದ ಮಾರ್ಚ್ ಅಂತ್ಯಕ್ಕೆ ೨೩೨ ರೈತರಿಗೆ ೧೫.೯೦ ಕೋಟಿ ರೂ. ವಿತರಿಸಲಾಗಿದೆ. ೨೦೨೪-೨೫ನೇ ಸಾಲಿಗೆ ಒಟ್ಟು ೧೨೭೫೯ ಸಾಲಗಾರ ಸದಸ್ಯರಿಗೆ ೪೭೪.೬೭ ಕೋಟಿ ರೂ. ಕೃಷಿಯೇತರ ಸಾಲ ನೀಡಲಾಗಿದೆ. ಪ್ರಸ್ತುತ ವರ್ಷ ೩೭೦ ಕೋಟಿ ರೂ.ಗಳ ಕೃಷಿಯೇತರ ಸಾಲ ವಿತರಣಾ ಗುರಿ ಹೊಂದಿದ್ದು, ಇದರೊಂದಿಗೆ ಎಲ್ಲ ವರ್ಗದ ಜನರ ಶ್ರೇಯೋಭೀವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

    ಬ್ಯಾಂಕ್‌ನಲ್ಲಿ ಕಳೆದ ಮಾರ್ಚ್ ಅಂತ್ಯದವರೆಗೆ ಒಟ್ಟು ೬೪೦೦ ಸ್ವಸಹಾಯ ಗುಂಪುಗಳಿದ್ದು, ೨೦೨೪-೨೫ ರಲ್ಲಿ ೬೧ ಸ್ವಸಹಾಯ ಗುಂಪುಗಳಿಗೆ ೮೯ ಲಕ್ಷ ರೂ.ಗಳ ಸಾಲ ವಿತರಿಸಲಾಗಿದೆ. ಈ ಮೂಲಕ ಜಿಲ್ಲೆಯ ಬಡ ಹಾಗೂ ಹಿಂದುಳಿದ ವರ್ಗಗಳ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಬಹು ಸೇವಾ ಯೋಜನೆಯ ಮೂಲಕ ೪೩ ಸಂಘಗಳಿಗೆ ೧೫.೯೭ ಕೋಟಿ ರೂ.ಗಳ ಸಾಲವನ್ನು ಕನಿಷ್ಠ ಬಡ್ಡಿ (ಶೇ.೪) ದರದಲ್ಲಿ ಗೋದಾಮು ನಿರ್ಮಾಣಕ್ಕೆ ನೀಡಲಾಗಿದೆ.

    ೨೦೨೪-೨೫ನೇ ಸಾಲಿನ ಅಂತ್ಯಕ್ಕೆ ೬೫.೧೦ ಕೋಟಿ ರೂ. ಷೇರು ಬಂಡವಾಳ ಹೊಂದಿದ್ದು, ೨.೨೦ ಲಕ್ಷಕ್ಕೂ ಹೆಚ್ಚು ಠೇವಣಿದಾರರ ಮೂಲಕ ೧೪೨೬.೭೮ ಕೋಟಿ ರೂ.ಗಳ ವಿವಿಧ ರೀತಿಯ ಠೇವಣಿಯನ್ನು ಸಂಗ್ರಹಿಸಲಾಗಿದೆ. ೨೦೨೩-೨೪ನೇ ಸಾಲಿನಲ್ಲಿ ಶಾಸನಬದ್ಧ ಲೆಕ್ಕಪರಿಶೋಧನೆ ಹಾಗೂ ನಬಾರ್ಡ್ ನಡೆಸಿದ ತಪಾಸಣೆಯಲ್ಲಿ ಈ ಬ್ಯಾಂಕ್ ಸತತವಾಗಿ ಎ.ವರ್ಗೀಕೃತ ಶ್ರೇಣಿಯನ್ನು ಹೊಂದಿದೆ. ಅದೇ ವರ್ಷ ರಾಜ್ಯ ಅಪೆಕ್ಸ್ ಬ್ಯಾಂನಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಡಿಸಿಸಿ ಬ್ಯಾಂಕ್‌ಗಳಿಗೆ ನೀಡುವ ಪ್ರಶಸ್ತಿ ಪೈಕಿ ಈ ಬ್ಯಾಂಕ್‌ಗೆ ೨ನೇ ಸ್ಥಾನ ಲಭಿಸಿದ್ದು, ೨ ಲಕ್ಷ ರೂ.ಗಳ ನಗದು ಪುರಸ್ಕಾರಕ್ಕೂ ಭಾಜನವಾಗಿದೆ.

    ಆಧುನಿಕ ತಂತ್ರಜ್ಞಾನಗಳಾದ ಮೊಬೈಲ್ ಬ್ಯಾಂಕಿಂಗ್ ಸೇವೆ ಹಾಗೂ ಶಾಖೆಗಳಲ್ಲಿ ಮೈಕ್ರೋ ಎಟಿಎಂ ವ್ಯವಸ್ಥೆ ಜಾರಿಗೊಳಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ನೀಡುತ್ತಿರುವ ಐಎಂಪಿಎಸ್ ಮತ್ತು ಯುಪಿಐ-ಫೋನ್ ಪೇ ಸೇವೆಯನ್ನು ನಮ್ಮ ಬ್ಯಾಂಕ್‌ನ ಗ್ರಾಹಕರಿಗೂ ಒದಗಿಸಿದ್ದು, ಸಹಕಾರ ಬ್ಯಾಂಕ್‌ಗಳು ಸಹ ಷೆಡ್ಯೂಲ್ ಬ್ಯಾಂಕ್‌ಗಳಿಗೆ ಸರಿಸಮಾನವಾದ ಎಲ್ಲ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉತ್ತಮ ಸೇವೆ ನೀಡಲಾಗುತ್ತಿದೆ. ಪ್ಯಾಕ್ಸ್ ಗಣಕೀಕರಣ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಜಿಲ್ಲೆಯ ೬ ಪ್ಯಾಕ್ಸ್‌ಗಳನ್ನು ಕೇಂದ್ರ ಸರ್ಕಾರದಿಂದ ಇ-ಪ್ಯಾಕ್ಸ್ ಎಂದು ಗುರುತಿಸಿದ್ದು, ಈ ಪೈಕಿ ಚಿಕ್ಕಮಗಳೂರು ತಾಲ್ಲೂಕಿನ ಕೆ.ಆರ್.ಪೇಟೆ ಪ್ಯಾಕ್ಸ್ ರಾಜ್ಯದ ಪ್ರಥಮ ಇ-ಪ್ಯಾಕ್ಸ್ ಎಂದು ಗುರುತಿಸಲ್ಪಟ್ಟಿದೆ.

    ಬ್ಯಾಂಕ್‌ನ ಅಭಿವೃದ್ಧಿ ಹಾಗೂ ತಾಂತ್ರಿಕ ವ್ಯವಸ್ಥೆ ಬಗ್ಗೆ ಮತ್ತು ಬ್ಯಾಂಕ್‌ನಲ್ಲಿ ಯುಪಿಐ-ಫೋನ್ ಪೇ ವ್ಯವಸ್ಥೆ ಜಾರಿಗೊಳಿಸಿರುವ ಬಗ್ಗೆ ನಬಾರ್ಡ್ ಅಧಿಕಾರಿ ಡಾ.ಸುರೇಂದ್ರ ಬಾಬು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆ ನೀಡಿದರು. ಬ್ಯಾಂಕ್‌ನ ಠೇವಣಿ ಸಂಗ್ರಹಣೆ, ಗುಣಮಟ್ಟದ ಸಾಲ ನೀಡಿಕೆ, ಸಾಲ ವಸೂಲಾತಿ ಮತ್ತು ತಾಂತ್ರಿಕ ಅಂಶಗಳ ಅನುಷ್ಠಾನದಲ್ಲಿ ಉತ್ತಮ ಪ್ರಗತಿ ಸಾಧಿಸಿರುವುದನ್ನು ಶ್ಲಾಘಿಸಿದರಲ್ಲದೆ, ಉಪಸ್ಥಿತರಿದ್ದ ಬ್ಯಾಂಕ್ ಅಧ್ಯಕ್ಷರಾದ ಡಿ.ಎಸ್.ಸುರೇಶ್, ಉಪಾಧ್ಯಕ್ಷ ಹೆಚ್.ಬಿ.ಸತೀಶ್, ನಿರ್ದೇಶಕರಾದ ಮುಗಳವಳ್ಳಿ ಪರಮೇಶ್ವರಪ್ಪ, ಎಂ.ಎಸ್.ನಿರಂಜನ್ ಅವರನ್ನು ಅಭಿನಂದಿಸಿದರು. ನಬಾರ್ಡ್‌ನ ಜಿಲ್ಲಾ ವ್ಯವಸ್ಥಾಪಕ ಇಮ್ಯಾನ್ಯುಯೆಲ್ ರೆಜಿಸ್ ಹಾಜರಿದ್ದರು.

    KCC disburses crop loans worth Rs 858 crore from Cooperative Central Bank

  • ಯುವಜನರು ರಕ್ತದಾನದಲ್ಲಿ ಆಸಕ್ತ್ತಿವಹಿಸಬೇಕು

    ಯುವಜನರು ರಕ್ತದಾನದಲ್ಲಿ ಆಸಕ್ತ್ತಿವಹಿಸಬೇಕು

    ಚಿಕ್ಕಮಗಳೂರು:  ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಸಬಹುದಾಗಿದ್ದು ಯುವಜನರು ಆಸಕ್ತಿ ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ.ಹನುಮಂತಪ್ಪ ಕಿವಿಮಾತು ಹೇಳಿದರು.

    ನಗರದ ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಬೋಧನಾ ಆಸ್ಪತ್ರೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್‌ಎಸ್‌ಎಸ್ ಘಟಕ, ಯೂತ್ ರೆಡ್ ಕ್ರಾಸ್, ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ಯುವಜನತೆ ದುಶ್ಚಟಗಳಿಗೆ ಒಳಗಾಗದೆ ಆರೋಗ್ಯ ಕಾಪಾಡಿಕೊಂಡಲ್ಲಿ ಪುರುಷರು ಪ್ರತೀ ೩ ತಿಂಗಳಿಗೊಮ್ಮೆ, ಮಹಿಳೆಯರು ಪ್ರತೀ ೪ ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದರಲ್ಲದೆ, ತಮ್ಮ ಇಲಾಖೆಯ ವತಿಯಿಂದ ಜಿಲ್ಲಾ ನ್ಯಾಯಾಲಯದಲ್ಲಿ ಸಹ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಲಿದ್ದು ಮುಂದೆ ನಿರಂತರವಾಗಿ ರಕ್ತದಾನ ಮಾಡಲು ದಾನಿಗಳನ್ನು ಪ್ರೇರೇಪಿಸಲಾಗುವುದು ಎಂದರು,

    ಜಿಲ್ಲಾ ಆಸ್ಪತ್ರೆಯ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ.ಮೊಹಮ್ಮದ್ ಅಪ್ರೋಜ್ ಅಹಮ್ಮದ್ ಪ್ರಾಸ್ತಾವಿಕ ಮಾತನಾಡಿ, ಒಬ್ಬರು ದಾನ ಮಾಡಿದ ರಕ್ತದಿಂದ ಅವಶ್ಯಕತೆ ಇರುವ ಮೂವರು ರೋಗಿಗಳಿಗೆ ಪ್ರಯೋಜನವಾಗುತ್ತದೆ. ರಕ್ತವನ್ನು ನೀಡುವ ಮೊದಲು ಪರೀಕ್ಷೆಗಳನ್ನು ನಡೆಸಿದ ಬಳಿಕ ರಕ್ತವನ್ನು ಸಂಗ್ರಹಿಸಲಾಗುತ್ತದೆ. ಇಂದು ರಕ್ತದ ಅವಶ್ಯಕತೆ ತುಂಬ ಇದ್ದು ೧೮ ವರ್ಷ ತುಂಬಿದ ಪ್ರತಿಯೊಬ್ಬರೂ ರಕ್ತದಾನ ಮಾಡುವಂತೆ ಮತ್ತು ಪ್ರತಿಯೊಬ್ಬರೂ ತಮ್ಮ ಹಾಗೂ ತಮ್ಮ ಮನೆಯಲ್ಲಿರುವವರ ರಕ್ತದ ಗುಂಪು ಬಗ್ಗೆ ತಿಳಿದುಕೊಂಡು ರಕ್ತದಾನ ಮಾಡುವುದು ಮತ್ತು ರಕ್ತದಾನಕ್ಕೆ ಪ್ರೇರೇಪಿಸುವಂತೆ ಕೋರಿದರು.

    ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬೇಬಿ ಅವರು ರಕ್ತದಾನ ಕುರಿತಾದ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ದಾನಿಗಳಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಇಲಾಖೆಯ ವತಿಯಿಂದ ನೆನಪಿನ ಕಾಣಿಕೆ ಮತ್ತು ಪ್ರಮಾಣ ಪತ್ರವನ್ನು ಜಿಲ್ಲಾ ಐಸಿಟಿಸಿ ಮೇಲ್ವಿಚಾರಕ ಆರ್.ಪ್ರಭುಕುಮಾರ್ ವಿತರಿಸಿದರು.

    ಅಧ್ಯಕ್ಷತೆ ವಹಿಸಿದ್ದ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ತಸ್ನೀಮ್ ಕೌಸರ್ ಮಣಿಯಾರ್ ಮಾತನಾಡಿ, ಇಂದಿನ ಯುವಕರು ರಕ್ತದಾನ ಮಾಡುವಂತೆ ಪ್ರೇರೇಪಣೆಯ ನುಡಿಯಾಡಿದರು. ಪ್ರತಿಯೊಬ್ಬರೂ ರಕ್ತದಾನ ಮಾಡುವುದರಲ್ಲದೆ, ತಮ್ಮ ಸ್ನೇಹಿತರನ್ನು ರಕ್ತದಾನಕ್ಕೆ ಉತ್ತೇಜಿಸುವಂತೆ ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಹರೀಶ್ ಬಾಬು, ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಶಶಿಕಲಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ, ಕಾಲೇಜಿನ ಉಪನ್ಯಾಸಕ ವರ್ಗದವರು ಭಾಗವಹಿಸಿದ್ದರು. ಪಿಪಿಎಮ್ ಸಂಯೋಜಕ ಕಿರಣ್‌ಕುಮಾರ್ ವಂದಿಸಿದರು.

    Young people should take an interest in blood donation.

  • ರಸ್ತೆ ದುರಸ್ಥಿ ಮಾಡದಿದ್ದರೆ ಲೋಕೋಪಯೋಗಿ ಇಲಾಖೆ ಕಚೇರಿಗೆ ಬೀಗ

    ರಸ್ತೆ ದುರಸ್ಥಿ ಮಾಡದಿದ್ದರೆ ಲೋಕೋಪಯೋಗಿ ಇಲಾಖೆ ಕಚೇರಿಗೆ ಬೀಗ

    ಚಿಕ್ಕಮಗಳೂರು: ನಗರ ಸೇರಿ ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಒಂದು ತಿಂಗಳಲ್ಲಿ ಸರಿಪಡಿಸದಿದ್ದರೆ ಲೋಕೋಪಯೋಗಿ ಇಲಾಖೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಹೊಲದಗದ್ದೆ ಗಿರೀಶ್ ಎಚ್ಚರಿಸಿದ್ದಾರೆ.

    ರಸ್ತೆಗಳ ಸ್ಥಿತಿ ಹಿಂದೆಂದೂ ಕಂಡರಿಯದಷ್ಟರ ಮಟ್ಟಿಗೆ ದುಸ್ಥಿತಿಗೆ ತಲುಪಿದೆ. ದುರಸ್ತಿಗೆ ಒತ್ತಾಯಿಸಿ ಹಲವೆಡೆ ಪ್ರತಿಭಟನೆಗಳು ನಡೆದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ಮಳೆಯ ಸಬೂಬು ಹೇಳಿಕೊಂಡು ಕಾಲ ತಳ್ಳುತ್ತಿ ದ್ದಾರೆ. ಅಪಘಾತಗಳು ಸಂಭವಿಸಿ ಸಾವು, ನೋವುಗಳು ಉಂಟಾಗುತ್ತಿವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ರಾಜ್ಯ, ಹೊರ ರಾಜ್ಯ ಮತ್ತು ಹೊರ ದೇಶಗಳಿಂದ ಜಿಲ್ಲೆಗೆ ಪ್ರವಾಸಿಗರು ಬಂದು ಹೋಗುತ್ತಾರೆ. ಜಿಲ್ಲಾ ಕೇಂದ್ರ ಎಂದು ಹೇಳಿಕೊಳ್ಳಲು ನಾಚಿಕೆ ಪಡುವಷ್ಟು ರಸ್ತೆ ಹಾಳಾಗಿದೆ. ಪ್ರವಾಸಿಗರು  ಲೇವಡಿ ಮಾಡುವಂತಾಗಿದೆ. ಇಷ್ಟಾದರೂ ಸರ್ಕಾರ ಮುಜುಗರ  ಇಲ್ಲದಂತೆ ವರ್ತಿಸುತ್ತಿದೆ ಎಂದಿದ್ದಾರೆ.

    ಶಾಸಕ ಎಚ್.ಡಿ.ತಮ್ಮಯ್ಯ ಅವರು ನಗರದ ರಸ್ತೆ ದುಸ್ಥಿತಿಗೆ ಹಿಂದಿನ ಸರ್ಕಾರದ ಅಮೃತ್ ಯೋಜನೆ, ಒಳಚರಂಡಿ ಯೋಜನೆಗಳು ಕಾರಣ ಎಂದು ಆರೋಪ ಮಾಡಿದ್ದರು. ಅದೇ ಯೋಜನೆಗಳನ್ನು ಜನರಿಗೆ ತೋರಿಸಿ ಗೆದ್ದು ಬಂದರು. ನಂತರ ಎರಡೂವರೆ ವರ್ಷ ಕಳೆದರೂ ಯಾವುದೂ ಸರಿಯಾಗಲಿಲ್ಲ ಎಂದು ದೂರಿದ್ದಾರೆ.

    ಚಿಕ್ಕಮಗಳೂರು-ಮೂಡಿಗೆರೆ ರಸ್ತೆ, ಬಾಳೆಹೊನ್ನೂರು-ಮಲ್ಲಂದೂರು ರಸ್ತೆ ಸೇರಿ ಬಹುತೇಕ ಎಲ್ಲಾ ರಸ್ತೆಗಳು ಹಾಳಾಗಿವೆ. ಮಲ್ಲಂದೂರಿನಿಂದ ಚಿಕ್ಕಮಗಳೂರಿಗೆ 20ಕಿಲೋ ಮೀಟರ್ ದೂರ ಇದ್ದು, 25 ನಿಮಿಷದಲ್ಲಿ ಪ್ರಯಾಣಿಸಬಹುದಾಗಿತ್ತು. ಈಗ ಒಂದೂವರೆ ಗಂಟೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

    ಜನರ ಆಕ್ರೋಶದ ಕಟ್ಟೆ ಒಡೆಯುವ ಲಕ್ಷಣಗಳಿವೆ. ಸಬೂಬು ಹೇಳುವುದನ್ನು ಬಿಟ್ಟು ಒಂದು ತಿಂಗಳಲ್ಲಿ ರಸ್ತೆ ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ನಾಗರಿಕರು ಒಟ್ಟಾಗಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.

    ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಸಾಮಾನ್ಯ ಜನರಿಗೆ ಉದ್ಯೋಗ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ರೈತರಿಗೆ ಶಾಶ್ವತ ನೀರಾವರಿ ಯೋಜನೆ ನೀಡುತ್ತಿಲ್ಲ. ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೆ ಪಾಠ, ಪ್ರವಚನ ಸ್ಥಗಿತಗೊಂಡಿವೆ. ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಿದರೂ ಕೇಳುವವರಿಲ್ಲ. ಈ ಬಗ್ಗೆ ಶಾಸಕರು ಆಲೋಚನೆಯನ್ನೇ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

    Public Works Department office locked if road not repaired

  • ವಾಸಿಸುವವನೇ ಮನೆಯೊಡೆಯ ಯೋಜನೆಯ ಸದುಪಯೋಗಕ್ಕೆ ಕರೆ

    ವಾಸಿಸುವವನೇ ಮನೆಯೊಡೆಯ ಯೋಜನೆಯ ಸದುಪಯೋಗಕ್ಕೆ ಕರೆ

    ಚಿಕ್ಕಮಗಳೂರು: ಬಡವರು ಹಾಗೂ ಶೋಷಿತ ವರ್ಗದ ಕುಟುಂಬಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುನ್ನಲೆಗೆ ಬರಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆನೀಡಿದರು.

    ಅವರು ಇಂದು ಬಾಣೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯಸರ್ಕಾರದ ವಿಶೇಷ ಯೋಜನೆ ವಾಸಿಸುವವನೇ ಮನೆಯ ಒಡೆಯ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿ ಮಾತನಾಡಿದರು.

    ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅಧಿಕಾರವಧಿಯಲ್ಲಿ ಉಳುವವನೇ ಭೂಮಿ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ಹಕ್ಕುಪತ್ರ ನೀಡಿದ ಮಾದರಿಯಲ್ಲೇ ರಾಜ್ಯಸರ್ಕಾರ ವಾಸಿಸುವವನೇ ಮನೆಯ ಒಡೆಯ ಯೋಜನೆ ಜಾರಿಮಾಡಿ ಬಡವರಿಗೆ ಹಕ್ಕುಪತ್ರ ನೀಡಲು ಮುಂದಾಗಿದೆ ಎಂದು ಹೇಳಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣಭೈರೇಗೌಡ ಶಾಸಕರ ನೇತೃತ್ವದಲ್ಲಿ ಈ ಯೋಜನೆಯಡಿ ಗ್ರಾಮಗಳಲ್ಲಿ ಬಡವರು ವಾಸಿಸುವ ಫಲಾನುಭವಿಗಳನ್ನು ಗುರ್ತಿಸಿ ಹಕ್ಕುಪತ್ರಗಳನ್ನು ನೀಡುತ್ತಿರುವ ಜೊತೆಗೆ ಕಂದಾಯ ಗ್ರಾಮ ಮತ್ತು ಕಂದಾಯ ಉಪಗ್ರಾಮಗಳನ್ನು ಆಯ್ಕೆಮಾಡಲಾಗಿದೆ ಎಂದರು.

    ಸರ್ಕಾರದ ಈ ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ನಿಮ್ಮ ಕುಟುಂಬದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಕಿವಿಮಾತು ಹೇಳಿದರು.

    ಭದ್ರಾ ಉಪಕಣಿವೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಧ್ಯದಲ್ಲೇ ಗುದ್ದಲಿ ಪೂಜೆ ನೆರವೇರಿಸಲಿದ್ದು, ನಂತರ ಈ ಭಾಗದ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಯಾಗಲಿದೆ ಎಂದು ಭರವಸೆ ನೀಡಿದರು.

    ರೈತರ ತೆಂಗು, ಅಡಿಕೆ, ಶುಂಠಿ, ಟೊಮ್ಯಾಟೋ ಮುಂತಾದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿದಾಗ ರೈತರು ಹಾಗೂ ರೈತಕಾರ್ಮಿಕರು ಸಂತೋಷವಾಗಿರುತ್ತಾರೆಂದು ಹೇಳಿದರು.

    ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿರುವ ರಾಜ್ಯಸರ್ಕಾರ ಬಡವರ, ಶೋಷಿತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಸದೃಢಗೊಳಿಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಬಾಣೂರು ಗ್ರಾ.ಪಂ ಅಧ್ಯಕ್ಷೆ ಸುನಂದಮ್ಮ, ಸದಸ್ಯೆ ಉಮಾಭಾರ್ಗವ್, ಅಜ್ಜಯ್ಯ, ನವೀನ್, ಮಂಜುಳ, ಮಮತ, ಯಶೋಧ, ಕಡೂರು ತಹಶೀಲ್ದಾರ್ ಪೂರ್ಣಿಮ, ಇಓ ಪ್ರವೀಣ್, ರಾಜಸ್ವ ನಿರೀಕ್ಷಕ ರವಿ, ತಾ.ಪಂ ಮಾಜಿ ಸದಸ್ಯ ಧನಂಜಯ್ ಉಪಸ್ಥಿತರಿದ್ದರು.

    Call for better utilization of the resident-owned-house scheme

  • ಕೊಪ್ಪದಲ್ಲಿ ಜೆಡಿಎಸ್ ರಸ್ತೆಗುಂಡಿ ಮುಚ್ಚಿ ವಿನೂತನ ಪ್ರತಿಭಟನೆ

    ಕೊಪ್ಪದಲ್ಲಿ ಜೆಡಿಎಸ್ ರಸ್ತೆಗುಂಡಿ ಮುಚ್ಚಿ ವಿನೂತನ ಪ್ರತಿಭಟನೆ

    ಕೊಪ್ಪ: ಹೆದ್ದಾರಿಯಲ್ಲಿ ಬಿದ್ದಿದ್ದ ಭಾರಿ ಗುಂಡಿಗಳನ್ನು ಸಿಮೆಂಟ್ ಕಾಂಕ್ರೀಟ್ ಹಾಕಿ ಮುಚ್ಚುವ ಮೂಲಕ ಜೆಡಿಎಸ್ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.‌

    ಪಟ್ಟಣದ ತೀರ್ಥಹಳ್ಳಿ ರಸ್ತೆಯ ಟೋಲ್‌ಗೇಟ್ ಬಳಿಯಿಂದ ಬಸ್ ನಿಲ್ದಾಣದವರೆಗೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರಶೆಟ್ಟಿ ಅವರ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿದರು. ಈ ವೇಳೆ ರಸ್ತೆಯಲ್ಲಿರುವ ಗುಂಡಿಗಳಿಗೆ ಕಾರ್ಯಕರ್ತರು ಸಿಮೆಂಟ್ ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

    ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಒಳ್ಳೆಯ ಆಡಳಿತ ನೀಡುವಲ್ಲಿ ವಿಫಲವಾಗಿದೆ. ರಸ್ತೆಗಳ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಎಲ್ಲ ಭಾಗದ ರಸ್ತೆಗಳಲ್ಲಿಯೂ ಗುಂಡಿಗಳು ಮಾಮೂಲಿ ಎನ್ನುವಂತಾಗಿದೆ. ಬಾರಿ ಗುಂಡಿಗಳಿಂದಾಗಿ ಪ್ರತಿದಿನ ಅಪಘಾತಗಳು ಸಾಮಾನ್ಯವಾಗಿದ್ದು, ಜನ ಜೀವ ಕಳೆದುಕೊಳ್ಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನಾಕಾರರನ್ನು ಉದ್ದೇಶಿಸಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ, ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರುವ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣವಾಗಿ ಗುಂಡಿಮಯವಾಗಿವೆ. ದೇಶದ ವಿವಿಧ ಭಾಗಗಳಿಂದ ಇಲ್ಲಿಗೆ ಆಗಮಿಸುವ ಭಕ್ತರು ರಸ್ತೆ ಗುಂಡಿಗಳಿಂದಾಗಿ ಸಮಸ್ಯೆ ಎದುರಿಸುವಂತಹಾಗಿದೆ. ಚಿಕ್ಕಮಗಳೂರು ಮಾರ್ಗವಾಗಿ ಶೃಂಗೇರಿಗೆ ಬರುವ ಭಕ್ತರು ವಸ್ತಾರೆ ದಾಟುತ್ತಿದ್ದಂತೆ ರಸ್ತೆ ಸ್ಥಿತಿ ಕಂಡು ವಾಪಸ್ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ರಸ್ತೆಗಳು ಗುಂಡಿಮಯವಾಗಿದ್ದರು ಕನಿ?ಪಕ್ಷ ಗುಂಡಿಗಳನ್ನು ಮುಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ಕಳೆದ ಏಳು ತಿಂಗಳಿನಿಂದ ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಹೊಸದಾಗಿ ರಸ್ತೆ ನಿರ್ಮಿಸುವುದು ಬೇಡ. ತಾತ್ಕಾಲಿಕವಾಗಿ ರಸ್ತೆ ಗುಂಡಿಗಳನ್ನಾದರೂ ಮುಚ್ಚಿ ಜನರಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

    ಶೃಂಗೇರಿ ಕ್ಷೇತ್ರದ ಶಾಸಕರು ಕ್ಷೇತ್ರಕ್ಕೆ ನೂರಾರು ಕೋಟಿ ರೂ. ಅನುದಾನ ತಂದಿದ್ದೇನೆ ಎನ್ನುತ್ತಾರೆ. ಆದರೆ ಕ್ಷೇತ್ರದ ಯಾವುದೇ ಭಾಗದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳು ಕಾಣುವುದಿಲ್ಲ. ಸುಳ್ಳು ಹೇಳುವುದನ್ನು ನಿಲ್ಲಿಸಿ ಮೊದಲು ಕ್ಷೇತ್ರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ರಾಜ್ಯದಲ್ಲಿ ಅರಣ್ಯ ಭೂಮಿ ಗುರುತಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡುವ ಮೂಲಕ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಸುಧಾಕರ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

    ಕಂದಾಯ ಭೂಮಿಗಳನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿಸಲಾಗಿದೆ. ಹೀಗಾಗಿ ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕ ಉಪಯೋಗಕ್ಕೂ ಸರ್ಕಾರಿ ಭೂಮಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ ರೈತರು ಉಳುಮೆ ಮಾಡುತ್ತಿರುವ ಜಮೀನುಗಳನ್ನು ಇದೀಗ ಎಸ್‌ಐಟಿ ರಚನೆ ಮಾಡುವ ಮೂಲಕ ಅರಣ್ಯ ಎಂದು ಘೋ?ಣೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.

    ರೈತರು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ನಮೂನೆ ೫೦, ೫೩, ೫೭ರಲ್ಲಿ ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಇಲ್ಲ ಸಲ್ಲದ ಸಬೂಬು ಹೇಳುವ ಮೂಲಕ ರೈತರಿಗೆ ಜಮೀನು ಮಂಜೂರು ಮಾಡುತ್ತಿಲ್ಲ ಎಂದು ಸುಧಾಕರ ಶೆಟ್ಟಿ ದೂರಿದರು.

    ರೈತರು ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಕೆ ಮಾಡಿ ತಮ್ಮ ಹೆಸರಿಗೆ ಭೂಮಿ ಮಂಜುರಾಗುತ್ತದೆ ಎಂದು ಕಾಯುತ್ತಲೇ ಇದ್ದಾರೆ. ಆದರೆ ಸರ್ಕಾರ ಮಾತ್ರ ಬಡ ರೈತರಿಗೆ ಭೂಮಿ ಹಕ್ಕು ನೀಡಲು ಮೀನಾ ಮೇ? ಎಣಿಸುತ್ತಿದೆ. ಜೊತೆಗೆ ಭೂ ಮಂಜೂರಾತಿಗಾಗಿ ಸರ್ಕಾರ ಅರಣ್ಯ ಇಲಾಖೆಯ ಅನುಮತಿ ಕೇಳುತ್ತಿರುವುದು ಖಂಡನಾರ್ಹ ಎಂದರು. ಪ್ರತಿಭಟನೆಯಲ್ಲಿ ದಿವಾಕರ್ ಭಟ್, ವಾಸಪ್ಪ, ರಾಮಸ್ವಾಮಿ, ಶಾಂತಕುಮಾರ್, ವಿಜಯ್ ಕುಮಾರ್, ವೆಂಕಟೇಶ್, ಕಳಸಪ್ಪಣ್ನ, ಸತೀಶ್, ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.

    Innovative protest by JDS blocking road block in Koppa

  • ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಜಿಎಸ್‌ಟಿ ಇಳಿಕೆ ದೊಡ್ಡ ಕ್ರಾಂತಿ

    ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಜಿಎಸ್‌ಟಿ ಇಳಿಕೆ ದೊಡ್ಡ ಕ್ರಾಂತಿ

    ಚಿಕ್ಕಮಗಳೂರು:  ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಜಿಎಸ್‌ಟಿ ಇಳಿಕೆ ದೊಡ್ಡ ಕ್ರಾಂತಿಯನ್ನೇ ಸೃಷ್ಟಿಸಿದೆ. ಬಡ ಹಾಗೂ ಮಧ್ಯಮ ವರ್ಗದ ಜನರ ತೆರಿಗೆ ಇಳಿಸುವ ಮೂಲಕ ಕೇಂದ್ರ ಸರ್ಕಾ ರ ನಾಗರೀಕ ಸರ್ವತೋಮುಖ ಅಭಿವೃದ್ದಿಗೆ ದೊಡ್ಡ ಹೆಜ್ಜೆಯನ್ನಿಟ್ಟಿದೆ ಎಂದು ಆರ್ಥಿಕ ತಜ್ಞ ವಿಶ್ವನಾಥ್‌ಭಟ್ ಹೇಳಿದರು.

    ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಂಜೆ ‘ನವಪೀಳಿಗೆ ಜಿಎಸ್‌ಟಿ ೨.೦’ ಸುಧಾರಣೆ ಕುರಿತ ವಿಚಾರ ಸಂಕಿರಣದಲ್ಲಿ ಟಿಪಿಟಿ ಮೂಲಕ ವಿಷಯ ಮಂಡಿಸಿ ಅವರು ಮಾತನಾಡಿ ಸಾಮಾನ್ಯ ಜನರ ಆಕಾಂಕ್ಷೆಗಳನ್ನು ನನಸುಗೊಳಿಸಲು ಕೇಂದ್ರ ಸರ್ಕಾರ ಶೇ.೯೯ರಷ್ಟು ಸರಕು-ಸಾಗಣಿ ಕೆ ವೆಚ್ಚದ ತೆರಿಗೆ ಇಳಿಕೆಗೊಳಿಸಿದ್ದು ಇದು ಬಹುತೇಕ ಫಲಪ್ರದವಾಗಿದೆ. ಪ್ರಧಾನಿ ಮೋದಿ ಹಾಗೂ ಹಣಕಾ ಸು ಸಚಿವೆ ನಿರ್ಮಲರವರ ಜಿಎಸ್‌ಟಿ ಕ್ರಾಂತಿ ದೊಡ್ಡ ಅಲೆಯನ್ನೇ ಸೃಷ್ಟಿಸಿ ಜನತೆಗೆ ದೀಪಾವಳಿ ಕೊಡುಗೆ ಯನ್ನು ನೀಡಿದೆ ಎಂದರು.

    ಕೇಂದ್ರ ಸರ್ಕಾರ ಜನತೆಯ ಒಳಿತಿಗಾಗಿ ನಾಲ್ಕು ಸ್ಪಾಬ್‌ಗಳಲ್ಲಿ ತೆರಿಗೆ ಇಳಿಕೆ ಮಾಡಿದೆ. ಶೇ.೧೦, ೧೨ ಮ ತ್ತು ೧೮ರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಿಎಸ್‌ಟಿ ಕಡಿತಗೊಳಿಸಿದ ಪರಿಣಾಮ ರಾಷ್ಟ್ರದ ೧೪೫ ಕೋಟಿ ಜನಸಂಖ್ಯೆ ಗೆ ಬಹಳಷ್ಟು ಹರ್ಷ ತರುವ ಮೂಲಕ ಭಾರತದ ಇತಿಹಾಸದಲ್ಲೇ ದೊಡ್ಡಮಟ್ಟಿನ ಜಿಎಸ್‌ಟಿ ಕ್ರಾಂತಿಯನ್ನೇ ಮೂಡಿಸಿದೆ ಎಂದು ಹೇಳಿದರು.

    ನರೇಂದ್ರ ಮೋದಿಯವರ ದೂರದೃಷ್ಟಿ, ಆಲೋಚನೆಗಳಿಂದ ದೇಶ ಸದೃಢವಾಗುವ ಜತೆಗೆ ಬದ್ಧತೆಯ ನ್ನು ತೋರಿಸಿದೆ. ಸತತ ಹನ್ನೊಂದು ವರ್ಷಗಳ ಅಧ್ಯಯನದಿಂದ ಜಿಎಸ್‌ಟಿಯ ರಚನಾತ್ಮಕ ಹೆಜ್ಜೆಯನ್ನು ಇರಿಸಿದೆ ಎಂದ ಅವರು ಜನರ ಬಳಿ ಉಳಿತಾಯ ಹೆಚ್ಚಾದಾಗ ಮಾರುಕಟ್ಟೆ ಉತ್ಪಾದನೆ ಹೆಚ್ಚಾಗಲಿದ್ದು ಇದು ತೆರಿಗೆ ಸಂಗ್ರಹಕ್ಕೆ ದುಪ್ಪಟ್ಟಾಗಲಿದೆ ಎಂದು ತಿಳಿಸಿದರು.

    ನಾಗರೀಕರ ಅತ್ಯಗತ್ಯ ಆಹಾರ ಪದಾರ್ಥಗಳ ತೆರಿಗೆ ಶೂನ್ಯವಾಗಿದೆ. ಸೌಂದರ್ಯ ವರ್ಧಕ ಸಾಮಾಗ್ರಿ ಗಳಿಗೆ ಶೇ.೧೩ ತೆರಿಗೆ ಇಳಿಸಿದೆ. ನವರಾತ್ರಿ ಹಬ್ಬದಂದು ಜಿಎಸ್‌ಟಿ ಇಳಿಕೆಗೊಂಡ ಪರಿಣಾಮ ದೀಪಾವಳಿ ದಿನದಂದೇ ೧.೬೫ ಲಕ್ಷ ಕಾರುಗಳು ಖರೀದಿಯಾಗಿದ್ದು ಇದಕ್ಕೆ ಮೋದಿ ಸರ್ಕಾರದ ಕೊಡುಗೆಗಳೇ ಕಾರಣವಾ ಗಿದೆ ಎಂದರು.

    ಜನರ ಜೀವನ ಸುಧಾರಣೆಗೆ ಆರ್ಥಿಕ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರದ ನಡೆ ಮಧ್ಯಮ ವರ್ಗಕ್ಕೆ ಉಪಕಾರಿ ಸಾಬೀತಾಗಿದೆ. ಈ ನಡುವೆ ರಾಜ್ಯದ ಮುಖ್ಯಮಂತ್ರಿಗಳು ಅಭಿವೃದ್ದಿ ರಾಷ್ಟ್ರವನ್ನು ಕೊಂಡಾಡುವ ಬದಲು ಮೊಸರಿನಲ್ಲಿ ಕಲ್ಲು ಹುಡುಕಿ ಅಪಪ್ರಚಾರಕ್ಕೆ ಮುಂದಾಗಿದೆ. ಕೋವಿಡ್‌ನಲ್ಲೂ ಲಸಿಕೆ ಪಡೆದುಕೊಂಡ ರೆ ಸಂತಾನಹರಣವೆಂಬ ಸುಳ್ಳುವದಂತಿ ಹಬ್ಬಿಸುವ ಕಾರ್ಯಕ್ಕೆ ಮುಂದಾಗಿತ್ತು ಎಂದು ದೂರಿದರು.

    ಜಿಎಸ್‌ಟಿ ಕ್ರಾಂತಿ ಬಡವರ ಪಾಲಿಗೆ ಸಿಹಿಯಾದರೆ, ಐಶರಾಮಿ ಶ್ರೀಮಂತರಿಗೆ ಕಹಿಯಾಗಿ ಪರಿಣಾಮಿ ಸಿದೆ. ಮನುಷ್ಯನಿಗೆ ಹಾನಿಗೊಳಿಸುವ ತಂಬಾಕು ಪದಾರ್ಥ ಹಾಗೂ ದುಬಾರಿ ಕಾರುಗಳ ಬೆಲೆಗಳು ದುಪ್ಪಟ್ಟಾ ಗಿದೆ. ಕರ್ನಾಟಕ ದೇಶದಲ್ಲೇ ಜಿಎಸ್‌ಟಿ ಕಟ್ಟುವಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದು ಕೇಂದ್ರ ಸರ್ಕಾರ ಸಂಪನ್ಮೂಲ ಕ್ರೂಢೀಕರಿಸಿ, ಜನರಿಗಾಗಿ ಬಳಸಿರುವುದು ಹೆಮ್ಮೆಯ ಸಂಗತಿ ಎಂದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ ಅಂತರಾಜ್ಯ ಗಡಿಭಾಗದಲ್ಲಿ ಗೂಡ್ಸ್ ವಾಹನಗಳಿಗೆ ಜಿಎಸ್‌ಟಿಯಡಿ ತೆರಿಗೆ ಶೂನ್ಯಗೊಳಿಸಿದೆ. ಹಿಂದಿನ ಯುಪಿಎ ಸರ್ಕಾರದಲ್ಲಿ ಗಬ್ಬರ್‌ಸಿಂಗ್ ಆಳ್ವಿಕೆಯಿತ್ತು. ಮೋದಿ ಸರ್ಕಾರದಲ್ಲಿ ವ್ಯಾಪಾರಸ್ಥರಿಗೆ ಹಾಗೂ ಗ್ರಾಹಕರಿಗೆ ಹೊರೆಯಾಗದೇ, ಭ್ರಷ್ಟಚಾರ ನಿಯಂತ್ರಿಸಿ ಜಿ ಎಸ್‌ಟಿ ತನ್ನದೇ ದಾಪುಗಾಲು ಇಟ್ಟಿದೆ ಎಂದು ಹೇಳಿದರು.

    ಒಂದು ದೇಶ, ಒಂದು ತೆರಿಗೆ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ತೀರ್ಪು ಕೈಗೊಂಡಿದೆ. ಆ ದರೆ ರಾಜ್ಯದಲ್ಲಿ ವ್ಯತಿರಿಕ್ತವಾಗಿ ಪೆಟ್ರೋಲ್, ಡೀಸೆಲ್ ಮೇಲೆ ಸೆಸ್ ಹೆಚ್ಚಳಗೊಳಿಸಿ ಅಧಿಕಾರ ನಡೆಸುತ್ತಿದೆ. ದೈನಂದಿನ ವ್ಯವಹಾರ ಹಾಗೂ ಕುಟುಂಬ ನಿರ್ವಹಣೆಗೂ ಜನರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ ಹಾಕು ತ್ತಿದೆ ಎಂದು ಆರೋಪಿಸಿದರು.

    ಕೇಂದ್ರ ಸರ್ಕಾರ ಆಳ್ವಿಕೆ ಗ್ರಾಹಕಸ್ನೇಹಿಯಾದರೆ, ರಾಜ್ಯಸರ್ಕಾರ ಗ್ರಾಹಕರಿಗೆ ಶತ್ರುವಿನಂತೆ ವರ್ತಿಸುತ್ತಿ ದೆ. ಪ್ರಸ್ತುತ ಭಾರತ ವಿಶ್ವದಲ್ಲೇ ನಾಲ್ಕನೇ ಆರ್ಥಿಕ ಶಕ್ತಿಯಾಗಿದೆ. ಸದ್ಯದಲ್ಲೇ ಜರ್ಮನ್ ರಾಷ್ಟ್ರ ಹಿಂದಿಕ್ಕಿ ಮೂ ರನೇ ಶಕ್ತಿಯಾಗಲಿದ್ದು ಉಳಿದಂತೆ ಚೀನಾ ಮತ್ತು ಅಮೇರಿಕಾ ದೇಶದ ಮುಂದೆ ಬಲಿಷ್ಟವಾಗಲು ದೇಶದ ಜನತೆ ಆತ್ಮನಿರ್ಭಾರತೆ ಕಾಯ್ದುಕೊಳ್ಳಬೇಕು ಎಂದು ಆಶಿಸಿದರು.

    ಭಾರತವನ್ನು ವಿಶ್ವದ ಮುಂದೆ ಸೋಲದಂತೆ ಗಮನಹರಿಸಲು ಕೇಂದ್ರ ಸರ್ಕಾರ ಜನಪ್ರಿಯ ಯೋಜನೆ ಗಳನ್ನು ಜನಸಾಮಾನ್ಯರ ಮನಸ್ಸಿನಲ್ಲಿ ಆಳವಾಗಿ ಭಿತ್ತಬೇಕು. ದೇಶದ ಒಳಗೆ ಮತ್ತು ಹೊರಗಿನ ಪಿತೂರಿಕೋ ರರನ್ನು ಹಿಮ್ಮೆಟ್ಟಿಸಲು ಸ್ವಯಂಪ್ರೇರಿತರಾಗಿ ಪಣ ತೊಡಬೇಕು ಎಂದು ತಿಳಿಸಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಜನತೆ ಊಹಿಸ ಲಾರದಷ್ಟು ಮಟ್ಟದಲ್ಲಿ ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತಗೊಳಿಸಿದೆ. ಇಂಥ ಜನೋಪಯೋಗಿ ವಿಚಾರಗಳ ನ್ನು ಜನಸಾಮಾನ್ಯ ಮಧ್ಯೆ ಪಸರಿಸಬೇಕು. ರಾಜ್ಯ ಸರ್ಕಾರದ ದುರಾಡಳಿತ ಹಾಗೂ ಕೇಂದ್ರ ಜನಪರ ಯೋ ಜನೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರಗೊಳಿಸಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ರವೀಂದ್ರ ಬೆಳವಾಡಿ, ಪುಣ್ಯಪಾಲ್, ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಜಿಲ್ಲಾ ಬಿಜೆಪಿ ಮಹಿಳಾ ಮೋ ರ್ಚಾ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್‌ಕುಮಾರ್, ಮುಖಂಡರುಗಳಾದ ಕೋಟೆ ರಂಗನಾಥ್, ದೀಪಕ್‌ದೊಡ್ಡ ಯ್ಯ ಮತ್ತಿತರರು ಉಪಸ್ಥಿತರಿದ್ದರು.

    GST reduction is the biggest revolution in the history of independent India.

  • ಕಾರ್ಮಿಕ ಕೌಶಲ್ಯ ಹೆಚ್ಚಿಸುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ

    ಕಾರ್ಮಿಕ ಕೌಶಲ್ಯ ಹೆಚ್ಚಿಸುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ

    ಚಿಕ್ಕಮಗಳೂರು:  ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಕಾರ್ಮಿಕರ ಕೌಶಲ್ಯ ಹೆಚ್ಚಿಸುವ ಮೂಲಕ ಅವರ ಉತ್ಪನ್ನಗಳ ಗುಣಮಟ್ಟ ಸುಧಾರಿಸಿ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಬೆಂಗಳೂರಿನ ಎಂ.ಎಸ್.ಎಂ.ಇ. ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಇಂದು ಪ್ರಧಾನ ಮಂತ್ರಿ ವಿಶ್ವಕರ್ಮ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಸಾಂಪ್ರದಾಯಿಕ ಕರಕುಶಲ ವಸ್ತುಗಳ ಉತ್ಪಾದನೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಆರ್ಥಿಕ ಬೆಂಬಲ ನೀಡುವ ಯೋಜನೆ. ನಶಿಸಿ ಹೋಗುತ್ತಿರುವ ಕೈಗಾರಿಕೆಗಳಿಗೆ ಪುನಶ್ಚೇತನ ನೀಡುವ ಸಲುವಾಗಿ ಉದ್ಯಮಕ್ಕೆ ಶಕ್ತಿ ಕೊಟ್ಟು ಸ್ವಂತ ಉದ್ಯೋಗ ಮಾಡಲು ೧೮ ಕುಲಕಸುಬುಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ಜಾರಿಗೊಳಿಸಲಾಗಿದೆ.

    ಈ ಯೋಜನೆಯು ಬಡಗಿ, ಕಮ್ಮಾರ. ಶಿಲ್ಪಿಗಳು. ಕುಶಲಕರ್ಮಿಗಳು ಸೇರಿದಂತೆ ೧೮ ಬಗೆಯ ಸಾಂಪ್ರದಾಯಿಕ ವೃತ್ತಿಯನ್ನು ಒಳಗೊಂಡಿದೆ. ಈ ವೃತ್ತಿಯಲ್ಲಿ ತೊಡಗಿರುವವರು ಯೋಜನೆಯಡಿ ವಿವಿಧ ಪ್ರಯೋಜನ ಪಡೆಯಬಹುದು. ಸ್ವಯಂ ಬದುಕು ಕಟ್ಟಿಕೊಳ್ಳುವ ಇಚ್ಛೆ ಇದ್ದವರಿಗೆ ತರಬೇತಿ ಜೊತೆಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸಿ, ಸ್ವಂತ ಕಸುಬು ಸೃಷ್ಟಿ ಮಾಡಿಕೊಳ್ಳ್ಳುವ ಯೋಜನೆ ಇದಾಗಿದೆ ಎಂದು ಹೇಳಿದರು

    ಕುಂಬಾರರು ತಮ್ಮದೇ ಆದ ಸಂಘಗಳನ್ನು ರಚಿಸಿಕೊಂಡು ನಿತ್ಯ ಉಪಯೋಗಿ ಮಡಿಕೆಗಳನ್ನು ಬಿಟ್ಟು ಆಲಂಕಾರಿಕ ಮಡಿಕೆಗಳನ್ನು ತಯಾರು ಮಾಡುತ್ತಿದ್ದಾರೆ. ನಮ್ಮ ಊರಿನಲ್ಲಿ ಮಾಡಿರುವ ಕುಂಬಾರರ ಆಲಂಕಾರಿಕ ಮಡಿಕೆ ಭಾರತ ಮಾತ್ರವಲ್ಲ ವಿದೇಶದಲ್ಲಿ ಸಹ ಅತ್ಯಂತ ಬೇಡಿಕೆ ಹೊಂದಿದೆ. ಕುಂಬಾರರು, ಚಮ್ಮಾರರಿಗೆ ತರಬೇತಿ ನೀಡಿ ಅವರಿಗೆ ಆರ್ಥಿಕ ಶಕ್ತಿ ನೀಡಿ ಉತ್ತೇಜಿಸಿ ಇತರೆ ಕಾರ್ಮಿಕರಿಗೆ ಕೆಲಸ ಕೊಡುವ ಉದ್ಯಮವನ್ನಾಗಿ ಮಾರ್ಪಾಡು ಮಾಡುವುದೇ ವಿಶ್ವ ಕರ್ಮ ಯೋಜನೆಯ ಉದ್ದೇಶ ಎಂದು ತಿಳಿಸಿದರು.

    ವಿಶ್ವ ಕರ್ಮ ಯೋಜನೆಯ ಫಲಾನುಭವಿಗಳು ಬ್ಯಾಂಕ್ ಸಾಲದ ಬದಲು ಕಿಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಈ ಕಿಟ್ ವಿತರಣೆಯಲ್ಲಿ ಕೆಲವೊಂದು ಲೋಪದೋಷಗಳು ಕಂಡು ಬಂದವು. ಈ ಹಿನ್ನೆಲೆಯಲ್ಲಿ ಆಂಚೆ ಇಲಾಖೆ ತುಂಬಾ ವ್ಯವಸ್ಥಿತವಾಗಿ ಪಾರದರ್ಶಕತೆಯಿಂದ ಕೆಲಸ ನಿರ್ವಹಿಸುತ್ತಿದೆ. ಕಿಟ್ ವಿತರಣೆ ಸಂದರ್ಭದಲ್ಲಿ ವಸ್ತುಗಳ ಗುಣಮಟ್ಟವನ್ನು ಫಲಾನುಭವಿಗಳ ಮುಂದೆಯೇ ಪರಿಶೀಲಿಸಿ ನಂತರ ಅದನ್ನು ಅವರಿಗೆ ನೀಡಲಾಗುತ್ತದೆ. ಕಿಟ್‌ನಲ್ಲಿ ಗುಣಮಟ್ಟದ ಕೊರತೆ ಕಂಡು ಬಂದರೆ ಅದನ್ನು ತಕ್ಷಣವೇ ವಾಪಸ್ಸು ಮಾಡಲಾಗುತ್ತಿದೆ ಎಂದು ಹೇಳಿದರು.

    ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ, ನಾವು ನಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳದಿದ್ದರೆ, ನಮ್ಮ ಪಾರಂಪರಿಕ ವಿದ್ಯೆಯನ್ನು ನಾವು ಅಭಿವೃದ್ಧಿಪಡಿಸಿಕೊಳ್ಳದಿದ್ದರೆ ಮುಂದೆ ನಮಗೆ ಜೀವನ ಕಷ್ಟವಾಗಲಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹೆಚ್.ಎನ್.ಮಹೇಶ್ ಮಾತನಾಡಿ ವಿಶ್ವ ಕರ್ಮ ಯೋಜನೆ ಪಾರಂಪರಿಕ ಕಸಬುಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಅದನ್ನು ಪೀಳಿಗೆ ಮುಂದುವರಿಸಬೇಕು ಎಂಬ ಆಶಯ ಹೊಂದಿದೆ. ಜೊತೆಗೆ ಇನ್ನೂ ಹೆಚ್ಚಿನ ಜನರು ಸ್ವಂತ ಉದ್ಯೋಗವನ್ನು ತಮ್ಮದಾಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂಬ ದೃಷ್ಟಿಕೋನ ಈ ಯೋಜನೆಯದು. ಜಿಲ್ಲೆಯ ೨೬೦೦ ಫಲಾನುಭವಿಗಳು ಬ್ಯಾಂಕ್‌ಗಳಿಂದ ಸುಮಾರು ೨೦ ಕೋಟಿ ಸಾಲ ಪಡೆದುಕೊಂಡು ಕುಲ ಕಸಬು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಿಶ್ಚಕರ್ಮ ಯೋಜನೆಯಡಿ ನಾಲ್ವರಿಗೆ ಟೂಲ್ ಕಿಟ್, ಐವರಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಲಾಯಿತಲ್ಲದೆ, ಒಬ್ಬರಿಗೆ ಕುಂಬಾರಿಕೆ ವೃತ್ತಿಗೆ ಸಂಬಂಧಿಸಿದ ಸಾಲ ಸೌಲಭ್ಯ ಒದಗಿಸಲಾಯಿತು.

    ಕಾರ್ಯಕ್ರಮದಲ್ಲಿ ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿಯ ಜಂಟಿ ನಿರ್ದೇಶಕ ಕೆ.ದೇವರಾಜ್, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ನಾಮ ನಿರ್ದೇಶನ ಸದಸ್ಯರಾದ ಬೆಳವಾಡಿ ರವೀಂದ್ರ, ಎನ್.ಭಾಸ್ಕರ್, ದಿಶಾ ಸಮಿತಿಯ ಸದಸ್ಯ ಹೆಚ್.ಸಿ.ಕಲ್ಮರುಡಪ್ಪ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಶಾಂತ್, ಅಂಚೆ ಅಧೀಕ್ಷಕ ಬಿ.ಶ್ರೀನಾಥ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು.

    Prime Minister’s Vishwakarma Yojana to increase skill of workers

  • ತರೀಕೆರೆಯ ಭಾವಿಕೆರೆಯಲ್ಲಿ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಉದ್ಘಾಟನೆ

    ತರೀಕೆರೆಯ ಭಾವಿಕೆರೆಯಲ್ಲಿ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಉದ್ಘಾಟನೆ

    ಚಿಕ್ಕಮಗಳೂರು: ರಾಜ್ಯದ ಎಲ್ಲ ಪಾಲಿಟೆಕ್ನಿಕ್‌ಗಳಲ್ಲಿ ಸಮಾನಾಂತರವಾಗಿ ಕನಿಷ್ಠ ನಾಲ್ಕು ಕೋರ್ಸ್‌ಗಳನ್ನು ಆರಂಭಿಸಲು ಹಾಗೂ ಬೇಡಿಕೆ ಇರುವ ಕಡೆಗಳಲ್ಲಿ ಅಗತ್ಯವಿರುವ ಹೆಚ್ಚುವರಿ ಕೋರ್ಸ್‌ಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಸದ್ಯದಲ್ಲೇ ತಾಂತ್ರಿಕ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ರಾಜ್ಯ ಉನ್ನತ ಶಿಕ್ಷಣ ಖಾತೆ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

    ತರೀಕೆರೆಯ ಭಾವಿಕೆರೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ತರೀಕೆರೆಯ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಬೆಂಗಳೂರಿನ ರೈಟ್ಸ್ ಲಿಮಿಟೆಡ್‌ನ ಸಂಯುಕ್ತ ಆಶ್ರಯದಲ್ಲಿ ಇಂದು ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಉದ್ಘಾಟನೆ ಹಾಗೂ ಹೆಚ್ಚುವರಿ ಕೊಠಡಿಗಳು ಮತ್ತು ವರ್ಕ್‌ಶಾಪ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

    ಪಾಲಿಟೆಕ್ನಿಕ್‌ಗಳಲ್ಲಿ ಆಯಾ ಭಾಗಗಳಲ್ಲಿರುವ ಬೇಡಿಕೆಗೆ ಅನುಗುಣವಾಗಿ ಅಗತ್ಯವಿರುವ ಕೋರ್ಸ್‌ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಎ.ಐ.ಸಿ.ಟಿ.ಗೆ ಪ್ರಸ್ತಾವನೆ ಕಳುಹಿಸಲಾಗುವುದು. ಈ ಬಗ್ಗೆ ಹಣಕಾಸು ಇಲಾಖೆಯ ಗಮನಕ್ಕೂ ತಂದಿದ್ದು, ಮುಂದಿನ ವರ್ಷದಿಂದಲೇ ಸಮಾನಾಂತರವಾಗಿ ಕೋರ್ಸ್‌ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಸ್ಥಳಾವಕಾಶ ಹೊಂದಿರುವ ಹಳೆಯ ಪಾಲಿಟೆಕ್ನಿಕ್‌ಗಳಲ್ಲಿ ಹೆಚ್ಚುವರಿ ಕೋರ್ಸ್‌ಗಳನ್ನು ಹಾಗೂ ಉದಯೋನ್ಮುಖ ಕೋರ್ಸ್‌ಗಳನ್ನು ಕೂಡ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದರು.

    ರಾಜ್ಯದಲ್ಲಿ ೧೦೭ ಪಾಲಿಟೆಕ್ನಿಕ್‌ಗಳಿದ್ದು, ರಾಜ್ಯದ ಪ್ರಪ್ರಥಮ ಸಂಸ್ಥೆಯಾದ ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್‌ನಲ್ಲಿ ಮಾತ್ರ ೧೬ ಕೋರ್ಸ್‌ಗಳಿರುವುದನ್ನು ಹೊರತುಪಡಿಸಿದರೆ ತಲಾ ೮ ರಿಂದ ೯ ಕೋಟಿ ರೂ. ವೆಚ್ಚ ಮಾಡಿ ಪ್ರಾರಂಭಿಸಿದ ೩ ಪಾಲಿಟೆಕ್ನಿಕ್‌ಗಳಲ್ಲಿ ಕೇವಲ ಒಂದು ಕೋರ್ಸ್ ಮಾತ್ರ ಇದೆ. ಸುಮಾರು ೧೩ ಪಾಲಿಟೆಕ್ನಿಕ್‌ಗಳಲ್ಲಿ ಎರಡು ಕೋರ್ಸ್‌ಗಳು ಮಾತ್ರ ಇವೆ. ಇನ್ನು ೪ ಕೋರ್ಸ್‌ಗಳಿರುವ ಪಾಲಿಟೆಕ್ನಿಕ್‌ಗಳು ಬೇರೆಯೇ ಇವೆ ಎಂದು ಹೇಳಿದರು.

    ೨೦೨೩ರ ನವೆಂಬರ್‌ನಲ್ಲಿ ತರೀಕೆರೆ ಮತ್ತು ಹಾವೇರಿ ಜಿಲ್ಲೆಯ ಬ್ಯಾಡಗಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ನಾಲ್ಕು ವಿಭಾಗಗಳನ್ನು ಆರಂಭಿಸಲು ಎ.ಐ.ಸಿ.ಟಿ.ಗೆ ಪ್ರಸ್ತಾವನೆಯನ್ನು ಸಲ್ಲಿಸಿ ಅನುಮತಿ ದೊರಕಿದ ಬಳಿಕ ಈ ಯೋಜನೆ ಕಾರ್ಯಗತವಾಗಿದೆ. ಈಗಾಗಲೇ ಕಾಲೇಜು ಆರಂಭವಾಗಿ ತಡವಾಗಿದ್ದು, ಇದೀಗ ಉದ್ಘಾಟಿಸಲಾಗಿದೆ. ಕಡೂರಿನಲ್ಲಿ ೨೦೨೩ ರಲ್ಲೇ ೩ ಕೋರ್ಸ್‌ಗಳ ಪಾಲಿಟೆಕ್ನಿಕ್ ಪ್ರಾರಂಭವಾಗಿದ್ದು, ಅಧಿಕೃತವಾಗಿ ಇನ್ನೂ ಉದ್ಘಾಟನೆಯಾಗಿಲ್ಲ ಎಂದರು.

    ಬಹಳಷ್ಟು ಜಿಲ್ಲೆಗಳಲ್ಲಿ ಪಾಲಿಟೆಕ್ನಿಕ್‌ಗಳು, ಇಂಜಿನಿಯರಿಂಗ್ ಕಾಲೇಜುಗಳಿಗೆ ಬೇಡಿಕೆ ಇರುವುದಾಗಿ ತಿಳಿಸಿದ ಅವರು, ಕೆಲವು ಕಡೆಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಪಾಲಿಟೆಕ್ನಿಕ್‌ಗಳು ಹಾಗೂ ಕಾಲೇಜುಗಳು ಇರುವುದು ತಮ್ಮ ಗಮನಕ್ಕೆ ಬಂದಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಒಟ್ಟು ದಾಖಲಾತಿ ಅನುಪಾತ ಎನ್ನಲಾಗುತ್ತದೆ. ಉನ್ನತ ಶಿಕ್ಷಣದ ಸಂಸ್ಥೆಗಳಲ್ಲಿ ದಾಖಲಾತಿ ಪ್ರಮಾಣದಲ್ಲಿ ರಾಷ್ಟ್ರೀಯ ಸರಾಸರಿ ಶೇ.೩೦ ರಷ್ಟಿದೆ. ಬೇರೆ ಬೇರೆ ಕೆಲವು ಸಣ್ಣ ಸಣ್ಣ ರಾಜ್ಯಗಳು, ಕೇರಳ, ತಮಿಳುನಾಡುಗಳಲ್ಲಿ ಶೇ.೪೭ ರಿಂದ ಶೇ.೫೦ ಕ್ಕಿಂತ ಹೆಚ್ಚಿವೆ.

    ಇನ್ನು ಕೆಲವು ರಾಜ್ಯಗಳಲ್ಲಿ ಇನ್ನೂ ಹೆಚ್ಚಿವೆ. ನೀತಿ ಆಯೋಗದ ಹೊಸ ಅಧ್ಯಯನದ ಪ್ರಕಾರ ದೇಶದ ದಾಖಲಾತಿ ಅನುಪಾತದಲ್ಲಿ ಕರ್ನಾಟಕ ಶೇ.೩೬ ರಷ್ಟಿದೆ. ಆದರೆ ನೀತಿ ಆಯೋಗದಲ್ಲಿ ದೇಶದಲ್ಲಿ ಒಂದು ಲಕ್ಷ ಜನಸಂಖ್ಯೆಗೆ ಇರುವ ಉನ್ನತ ಶಿಕ್ಷಣ ಸಂಸ್ಥೆಗಳ ಮಾಹಿತಿ ಬಹಿರಂಗಪಡಿಸಿದೆ. ರಾಷ್ಟ್ರೀಯ ಸರಾಸರಿ ಒಂದು ಲಕ್ಷ ಜನಸಂಖ್ಯೆಗೆ ೩೦ ಕಾಲೇಜು ಇರಬೇಕೆಂದು

    ಶಾಸಕ ಜಿ.ಹೆಚ್.ಶ್ರೀನಿವಾಸ್ ಮಾತನಾಡಿ, ತಾವು ೨೦೧೩-೧೮ರವರೆಗೆ ಶಾಸಕರಾಗಿದ್ದ ಅವಧಿಯಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿಯವರು ಇಡೀ ರಾಜ್ಯದಲ್ಲಿ ೧೭ ಕಾಲೇಜುಗಳನ್ನು ಮಂಜೂರು ಮಾಡಿದ್ದರು. ಆ ಹಿನ್ನೆಲೆಯಲ್ಲಿ ಇಲ್ಲಿ ಈ ಕಾಲೇಜು ಸ್ಥಾಪನೆ ಸಂಬಂಧ ಗುದ್ದಲಿಪೂಜೆ ನೆರವೇರಿಸಲಾಗಿತ್ತು. ಇದೀಗ ಕಟ್ಟಡ ನಿರ್ಮಾಣಗೊಂಡು ಉದ್ಘಾಟನೆಯಾಗಿದೆ.

    ಅದೇ ರೀತಿ ತುಂಬಾ ವರ್ಷಗಳ ಹಿಂದೆ ತರೀಕೆರೆ ಪದವಿ ಕಾಲೇಜು ಮಂಜೂರಾಗಿದ್ದರೂ ಜಾಗದ ಸಮಸ್ಯೆಯಿಂದಾಗಿ ಅರಣ್ಯ ಇಲಾಖೆಯಿಂದ ಜಾಗವನ್ನು ಗುತ್ತಿಗೆಗೆ ಪಡೆದುಕೊಂಡಿದ್ದರೂ ೧೦-೧೫ ವರ್ಷಗಳಾಗಿದ್ದರೂ ಕಾಲೇಜು ಆಗಿರಲಿಲ್ಲ. ಕೊನೆಗೂ ಈ ಯೋಜನೆ ಕಾರ್ಯಗತವಾಗಿದೆ. ಈ ಕಾಲೇಜಿನ ಕಟ್ಟಡದ ಮೇಲ್ಭಾಗದಲ್ಲಿ ಕಟ್ಟಡ ನಿರ್ಮಿಸಲು ಎರಡೂವರೆ ಕೋಟಿ ಹಣವನ್ನು ನೀಡಿದ್ದಾರೆ. ಆ ಕಾಮಗಾರಿಯೂ ಆರಂಭವಾಗಿದೆ ಎಂದು ತಿಳಿಸಿದರು.

    ಈ ಕಾಲೇಜಿನ ಕಾಂಪೌಂಡ್, ಹಾಗೆಯೇ ಹೆಚ್ಚಿನ ಕೊಠಡಿಗಳು, ಪ್ರಯೋಗಶಾಲೆ, ಕಂಪ್ಯೂಟರ್ ವ್ಯವಸ್ಥೆಯಾಗಬೇಕಿದ್ದು, ಇವೆಲ್ಲಕ್ಕೂ ಸಚಿವರಾದ ಡಾ.ಸುಧಾಕರ್ ಅವರು ೧೦ ಕೋಟಿ ರೂ.ಗಳನ್ನು ಈ ತಕ್ಷಣಕ್ಕೆ ಅಲ್ಲದಿದ್ದರೂ ಮುಂದಿನ ದಿನಗಳಲ್ಲಿ ಒದಗಿಸಬೇಕೆಂದು ಕೋರಿದರಲ್ಲದೆ, ಈ ಭಾಗಕ್ಕೆ ಇಂಜಿನಿಯರಿಂಗ್ ಕಾಲೇಜು ಒದಗಿಸಬೇಕೆಂಬುದು ಕೂಡ ನಮ್ಮ ಬೇಡಿಕೆಯಾಗಿದೆ.

    ಲ್ಲಿನ ಪದವಿ ಕಾಲೇಜಿನಲ್ಲಿ ಸುಮಾರು ೬೦೦ ವಿದ್ಯಾರ್ಥಿಗಳಿದ್ದು, ಅಲ್ಲಿನ ಕೊಠಡಿಗಳನ್ನು ನಿರ್ಮಿಸಲು ತಮ್ಮ ಬೇಡಿಕೆಯಂತೆ ಸಚಿವರು ಸುಮಾರು ಒಂದು ಮುಕ್ಕಾಲು ಕೋಟಿ ಹಣವನ್ನು ಒದಗಿಸಿದ್ದು, ಕಟ್ಡಡ ಕಾಮಗಾರಿ ನಡೆಯುತ್ತಿದೆ. ಅದಲ್ಲದೆ ೫ ಕೋಟಿ ರೂ.ಗಳನ್ನು ಕೂಡ ಒದಗಿಸಿದ್ದು, ಅವುಗಳ ಆಧಾರದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು.

    ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಉಪಾಧ್ಯಕ್ಷ ಶಮಿಯುಲ್ಲಾ, ಬಾವಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ವಿ.ಜಯಂತಿ ಮಧುಸೂದನ್ ಗೌಡ, ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಕೇಶವ ಮೂರ್ತಿ, ಕುವೆಂಪು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಅರವಿಂದ್, ಮುಖಂಡರಾದ ಫಾರುಖ್, ದಯಾನಂದ್, ಜಿಲ್ಲಾ ಕೆ.ಡಿ.ಪಿ. ಸದಸ್ಯ ಸಿರಾಜ್, ಬಗರ್ ಹುಕುಂ ಸಮಿತಿ ಸದಸ್ಯ ಜಗದೀಶ್, ತಹಸೀಲ್ದಾರ್ ವಿಶ್ವಜಿತ್ ಮೆಹ್ತಾ, ಮಂಜುನಾಥ್, ಗುರುಮೂರ್ತಿ, ಕೆಂಪೇಗೌಡ, ಸೀತಾರಾಮ್ ಮತ್ತಿತರರು ಭಾಗವಹಿಸಿದ್ದರು.

    Decision for at least four courses in state polytechnics

  • ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್

    ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್

    ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

    ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.

    ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

    ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

    FIR against hateful speech in society

  • ವೈದ್ಯಕೀಯ ಕಾಲೇಜಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

    ವೈದ್ಯಕೀಯ ಕಾಲೇಜಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

    ಚಿಕ್ಕಮಗಳೂರು: ಇಲ್ಲಿನ ವೈದ್ಯಕೀಯ ಕಾಲೇಜು ಮತ್ತು ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಶೀಘ್ರವೇ ಕಲ್ಪಿಸುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ರವರಿಗೆ ಮನವಿ ಸಲ್ಲಿಸಿದರು.

    ನಂತರ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತಾಅನಿಲ್ ಕುಮಾರ್ ಅವರು ಕಾಲೇಜು ಮತ್ತು ಹಾಸ್ಟೆಲ್‌ಗಳಲ್ಲಿ ನೀರಿನ ಸೌಲಭ್ಯದ ಕೊರತೆಯಿದೆ. ವಿದ್ಯುತ್‌ಚ್ಚಕ್ತಿ ಮತ್ತು ಇಂಟರ್‌ನೆಟ್ ಸೌಲಭ್ಯವಿಲ್ಲ. ಹೆಣ್ಣುಮಕ್ಕಳ ವಸತಿ ನಿಲಯದಲ್ಲಿ ಭದ್ರತೆಯನ್ನು ಒಳಗೊಂಡಿಲ್ಲ ಎಂದು ಹೇಳಿದರು.

    ಆಹಾರದ ಸ್ವಚ್ಚತೆ, ಗುಣಮಟ್ಟ, ಸಾಕಷ್ಟು ಆಹಾರವನ್ನು ನೀಡುತ್ತಿಲ್ಲ, ಸ್ವಚ್ಚತಾ ಸಿಬ್ಬಂದಿಯ ಕೊರತೆ ಇದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ನಾಲ್ಕನೇ ವರ್ಷದ ವಿದ್ಯಾರ್ಥಿಗಳಿಗೆ ಅಧ್ಯಾಪಕರ ಕೊರತೆ ಇದೆ ಎಂದು ಹೇಳಿದ್ದಾರೆ.

    ಕಾಲೇಜು ಮತ್ತು ಹಾಸ್ಟೆಲ್ ಕ್ಯಾಂಪಸ್‌ಗಳಲ್ಲಿ ಜೇನುಗೂಡು ಕಟ್ಟಿದ್ದು, ಜೇನುನೊಣಗಳು ಹಾಸ್ಟೆಲ್ ಕೊಠಡಿ ಒಳ ಪ್ರವೇಶಿಸದಂತೆ ಕಿಟಕಿಗಳಿಗೆ ಮೆಸ್ ಹಾಗೂ ಕರ್ಟನ್‌ಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿದರು.

    ಅಡುಗೆ ಕೋಣೆಯಲ್ಲಿಯೇ ಪಾತ್ರೆಗಳನ್ನು ತೊಳೆಯುತ್ತಿದ್ದು, ಅಡುಗೆ ಕೊಠಡಿ ಸ್ವಚ್ಚವಾಗಿಲ್ಲ, ಹಣ್ಣು-ತರಕಾರಿಗಳ ಗುಣಮಟ್ಟ ಹಾಗೂ ಶೌಚಾಲಯಗಳ ಸ್ವಚ್ಚತೆ ಕೊರತೆ, ಪೋಷಕರಿಗೆ ವೇಟಿಂಗ್ ರೂಂ ಕೊರತೆ ಇದೆ ಎಂದು ತಿಳಿಸಿದ್ದಾರೆ.

    ಕಾಲೇಜು ಕ್ಯಾಂಪಸ್ ಹೊರಭಾಗದಲ್ಲಿ ಬೀದಿದೀಪದ ವ್ಯವಸ್ಥೆ ಇರುವುದಿಲ್ಲ. ಕ್ಯಾಂಪಸ್‌ನ ಸುತ್ತಮುತ್ತ ಸ್ಟೇಷನರಿ ಹಾಗೂ ಕ್ಯಾಂಟಿನ್ ವ್ಯವಸ್ಥೆ ಇರುವುದಿಲ್ಲ. ವಿದ್ಯಾರ್ಥಿಗಳ ಕೊಠಡಿಗೆ ಪೀಠೋಪಕರಣಗಳ ವ್ಯವಸ್ಥೆ ಇಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

    ಈ ಎಲ್ಲಾ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

    ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಮುಖಂಡರಾದ ವೀಣಾಶೆಟ್ಟಿ, ಕವಿತಾ ಶೇಖರ್, ಅಂಕಿತ, ಲಲಿತಾರವಿನಾಯ್ಕ್, ಇಂದಿರಾ ಮತ್ತಿತರರು ಉಪಸ್ಥಿತರಿದ್ದರು.

    Appeal to urge medical college to teach basic facilities