Category: ಶೃಂಗೇರಿ

  • ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ.

    ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ.

    ಶೃಂಗೇರಿ: ‘ಮನುಷ್ಯನ ಜೀವ ಅತ್ಯಮೂಲ್ಯವಾದದ್ದು, ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ದುರದೃಷ್ಟವಾಗಿ ಈ ದುರಂತ ಸಂಭವಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

    ತಾಲ್ಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗೆ ಕೆರೆಕಟ್ಟೆ ಗ್ರಾಮದ ಕೆರೆಗದ್ದೆಯಲ್ಲಿ ಆನೆ ತುಳಿತಕ್ಕೊಳಗಾಗಿ ಮೃತಪಟ್ಟ ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಮನೆಗೆ ಭೇಟಿ ನೀಡಿ, ಬಳಿಕ ಅವರು ಮಾತನಾಡಿದರು.

    ‘ಮನುಷ್ಯನ ಜೀವವೂ ಉಳಿಯಬೇಕು, ಪ್ರಾಣಿಯ ಸಂಕುಲವೂ ಉಳಿಯಬೇಕು. ಇಂದು ಆನೆಗಳ ಸಂಖ್ಯೆ, ಹುಲಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ನೈಸರ್ಗಿಕ ಸಂಪತ್ತಿನಲ್ಲಿ ಸಮತೋಲನ ಕಾಪಾಡಿಕೊಳ್ಳಬೇಕಾಗಿದೆ. ನಗರೀಕರಣದಿಂದಾಗಿ ಅರಣ್ಯದ ವಿಸ್ತೀರ್ಣ ಕಡಿಮೆ ಆಗುತ್ತಿದೆ. ಪ್ರಾಣಿಗಳ ದಾಳಿಯಿಂದಾಗಿ ರಾಜ್ಯದಲ್ಲಿ 30 ರಿಂದ 40 ಜನರು ಮೃತಪಟ್ಟ ಘಟನೆಗಳು ಸಂಭವಿಸುತ್ತಿದೆ. ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಕುಟುಂಬದ ನೋವಿನ ಜೊತೆಗೆ ಇಲಾಖೆ ಹಾಗೂ ನಾವು ಸದಾ ಇರುತ್ತೇವೆ. ಅವರ ಕುಟುಂಬದ ಕಷ್ಟ ಸುಖಕ್ಕೆ ಸ್ಪಂದಿಸಲಿದೆ ಎಂದು ಹೇಳಿದರು.

    ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ ₹20 ಲಕ್ಷ ನೀಡಲಾಗಿದೆ. ವೈಯಕ್ತಿಕವಾಗಿ ಎರಡು ಕುಟುಂಬಕ್ಕೆ ತಲಾ ₹5 ಲಕ್ಷ ಮತ್ತು ಶಾಸಕ ಟಿ.ಡಿ ರಾಜೇಗೌಡರು ಎರಡು ಕುಟುಂಬಕ್ಕೆ ತಲಾ ₹1 ಲಕ್ಷವನ್ನು ಶಾಸಕ ಟಿ.ಡಿ.ರಾಜೇಗೌಡರ ಮೂಲಕ ತಲುಪಿಸಲಾಗುತ್ತದೆ. ಕಾಯಂ ಆಗಿ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲದೇ ಇರುವುದರಿಂದ ಕಟುಂಬದಲ್ಲಿನ ಒಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗವನ್ನು ತಕ್ಷಣವೇ ನೀಡಲು ಸೂಚಿಸಲಾಗಿದೆ. ಪರಿಹಾರದ ಧನವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

    ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯೋನ್ಮುಖರಾಗಿದ್ದಾರೆ. ಆನೆ ಯಾವ ಸಮಯದಲ್ಲಿ ಬರುತ್ತವೆ. ಹೇಗೆ ಬರುತ್ತವೆ, ಎಂದು ಗೊತ್ತಾಗುವುದಿಲ್ಲ’ ಎಂದರು.

    ಈ ಸಂದರ್ಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ, ಕಾಡಾ ಅಧ್ಯಕ್ಷ ಡಾ.ಕೆ.ಪಿ ಅಂಶುಮಂತ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್‍ಪಿ ವಿಕ್ರಮ್ ಅಮ್ಟೆ, ಮಂಗಳೂರು ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ವನ್ಯಜೀವಿ ವಿಭಾಗದ ಡಿಎಫ್‍ಒ ಶಿವರಾಮ್ ಬಾಬು, ಎಸಿಎಫ್ ಮೋಹನ್ ಕುಮಾರ್, ವಲಯಾ ಅರಣ್ಯ ಸಂರಕ್ಷಣಾಧಿಕಾರಿ ಮಧುಕರ್, ವನ್ಯಜೀವಿ ವಲಯಾ ಅರಣ್ಯ ಸಂರಕ್ಷಣಾಧಿಕಾರಿ ಅನಿಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಭಟ್, ಪುಟ್ಟಪ್ಪ ಹೆಗ್ಡೆ, ದಿನೇಶ್ ಹೆಗ್ಡೆ, ಎಂ.ಎಚ್ ನಟರಾಜ್, ನೂತನ್ ಕುಮಾರ್, ಭಾಸ್ಕರ್ ನಾಯ್ಕ, ವೆಂಕಟೇಶ್ ಕುರದಾಮನೆ, ರಾಜೇಶ್ ದ್ಯಾವಂಟು, ಜನಪ್ರತಿನಿಧಿಗಳು, ಕೆರೆಕಟ್ಟೆ ಗ್ರಾಮದ ಸ್ಥಳೀಯ ಮುಖಂಡರು, ಸ್ಥಳೀಯ ಕಾಂಗ್ರೆಸ್, ಬಿಜೆಪಿ ಮುಖಂಡರು ಹಾಜರಿದ್ದರು.

    Human life cannot be priced

  • ಕಾಡಾನೆ ದಾಳಿಗೆ ಸಿಕ್ಕಿ ಇಬ್ಬರು ರೈತರು ಸ್ಥಳದಲ್ಲೇ ಸಾವು

    ಕಾಡಾನೆ ದಾಳಿಗೆ ಸಿಕ್ಕಿ ಇಬ್ಬರು ರೈತರು ಸ್ಥಳದಲ್ಲೇ ಸಾವು

    ಶೃಂಗೇರಿ: ತಾಲ್ಲೂಕಿನ ಕೆರೆಕಟ್ಟೆ ಸಮೀಪ ಬಳಿ ಅರಣ್ಯಕ್ಕೆ ಸೊಪ್ಪು ತರಲು ಹೋಗಿದ್ದ ಇಬ್ಬರು ಕಾಡಾನೆ ದಾಳಿಗೆ ಸಿಕ್ಕಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಕೆರೆಕಟ್ಟೆ ಸಮೀಪದ ಕೆರೆಗದ್ದೆಯ ಉಮೇಶ್ ಗೌಡ (54) ಮತ್ತ ಹರೀಶ್ ಶೆಟ್ಟಿ (53) ಮೃತಪಟ್ಟವರು. ಹರೀಶ್ ಅವರು ಬಿಜೆಪಿ ಶಕ್ತಿ ಕೇಂದ್ರದ ಕೆರೆಕಟ್ಟೆ ಭಾಗದ ಅಧ್ಯಕ್ಷರಾಗಿದ್ದರು. ಕುದುರೆಮುಖ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಂತೆ ಇವರ ಮನೆಗಳಿದ್ದು, ಕಾಡಿಗೆ ಸೊಪ್ಪು ತರಲು ಹೋದಾಗ ಅವಘಡ ಸಂಭವಿಸಿದೆ.

    ಇಬ್ಬರು ಮೃತಪಟ್ಟಿರುವ ವಿಷಯ ತಿಳಿದಂತೆ, ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶೃಂಗೇರಿ–ಕಾರ್ಕಳ ನಡುವೆ ವಾಹನ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಿದರು. ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್ ಸ್ಥಳಕ್ಕೆ ಬಂದು ಪ್ರತಿಭಟನಕಾರರ ಮನವೊಲಿಸಲು ಮುಂದಾದರು.

    ಆದರೆ, ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಥಳಕ್ಕೆ ಬರಬೇಕು. ಮೃತರ ಕುಟುಂಬಕ್ಕೆ ತಲಾ ₹50 ಲಕ್ಷ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದಿದ್ದರಿಂದ ಬೆಳಿಗ್ಗೆಯಿಂದ ಸಂಜೆ ತನಕ ವಾಹನ ಸವಾರರು ಪರದಾಡಿದರು. ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ ₹20 ಲಕ್ಷ, ಶಾಸಕರು ಹಾಗೂ ಸ್ಥಳೀಯರ ನೆರವಿನಿಂದ ತಲಾ ₹5 ಲಕ್ಷ ಪರಿಹಾರ ನೀಡಲು ನಿರ್ಧರಿಸ ಲಾಯಿತು. ಬಳಿಕ ಸ್ಥಳೀಯರು ಪ್ರತಿಭಟನೆ ಹಿಂಪಡೆದರು.

    Two farmers die on the spot after being attacked by a wild elephant

  • ಜಿಲ್ಲಾಧಿಕಾರಿಯಿಂದ ಕೆಎಸ್‌ಆರ್‌ಟಿಸಿ ಡಿಪೊ ಕಾಮಗಾರಿ ವೀಕ್ಷಣೆ

    ಜಿಲ್ಲಾಧಿಕಾರಿಯಿಂದ ಕೆಎಸ್‌ಆರ್‌ಟಿಸಿ ಡಿಪೊ ಕಾಮಗಾರಿ ವೀಕ್ಷಣೆ

    ಶೃಂಗೇರಿ: ಇಲ್ಲಿನ ತ್ಯಾವಣದಲ್ಲಿ ಕೆಎಸ್‌ಆರ್‌ಟಿಸಿ ಡಿಪೊ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

    ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಡಿಪೊ ಕಾಮಗಾರಿ ಇನ್ನು ಎರಡು ವರ್ಷದಲ್ಲಿ ಮುಗಿಯಲಿದೆ. ಈಗ ಮಳೆಗಾಲ ಆಗಿರುವುದರಿಂದ ಕಾಮಗಾರಿ ನಡೆಯುತ್ತಿಲ್ಲ. ಡಿಪೊದ ಒಳಗೆ ಬಸ್ ನಿಲ್ಲಲು ತಂಗುದಾಣ, ಕಟ್ಟಡ ಮತ್ತು ಡೀಸೆಲ್ ಟ್ಯಾಂಕ್ ನಿರ್ಮಾಣವಾಗಲಿದೆ.

    ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ನಾನೇ ಡಿಪೋದ ಸ್ಥಳ ಪರಿಶೀಲನೆ ಮಾಡಿದ್ದೇನೆ. ಇದರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ’ ಎಂದರು.

    ಬಳಿಕ ಜಿಲ್ಲಾಧಿಕಾರಿ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ನಾಡ ಕಚೇರಿಯ ಕಾಮಗಾರಿ ಪರಿಶೀಲಿಸಿದರು. ತಹಶೀಲ್ದಾರ್ ಅನೂಪ್ ಸಂಜೋಗ್, ಶಿರೇಸ್ತೆದಾರ್ ಪ್ರವೀಣ್, ಜಗದೀಶ್, ಸಚಿನ್, ಆಹಾರ ನಿರೀಕ್ಷಕ ಬಿ.ಜಿ ನಾಗೇಶ್, ಇತರ ಅಧಿಕಾರಿಗಳು ಇದ್ದರು.

    ‘ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೊಪ್ಪ ತಾಲ್ಲೂಕು ಕಚೇರಿಯಲ್ಲಿ ನಡೆದ ಅವ್ಯವಹಾರ ಕುರಿತು ತನಿಖಾ ತಂಡ ರಚಿಸಿ ಆದೇಶಿಸಲಾಗಿದೆ. ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪ್ರತಿಕ್ರಿಯಿಸಿದರು.

    Inspection of KSRTC Depot work by Collector

  • ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು

    ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು

    ಶೃಂಗೇರಿ: `ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು ಮತ್ತು ಪಕ್ಷದ ಕಾರ್ಯಕರ್ತರಿಗೆ ಸಮಸ್ಯೆ ಬಗೆಹರಿಸುವ ಅಧಿಕಾರ ನಾಯಕರು ನೀಡಬೇಕು ಆಗ ಮಾತ್ರ ಒಂದು ರಾಷ್ಟ್ರೀಯ ಪಕ್ಷ ಅಧಿಕಾರಕ್ಕೆ ಬಂದು ಉತ್ತಮವಾಗಿ ಕೆಲಸ ಮಾಡಲು ಸಾಧ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಹೇಳಿದರು.

    ಶೃಂಗೇರಿ ಆದಿಚುಂಂಚನಗಿರಿ ಸಮೂದಾಯ ಭವನದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿಕಾಂಗ್ರೆಸ್ ಪಕ್ಷ ಆಯೋಜಿಸಿದ ಸರ್ಕಾರದ ನಡೆ ಕಾರ್ಯಕರ್ತರ ಕಡೆಗೆ ಎಂಬ ಕ್ಷೇತ್ರ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

    `ನಾಯಕರು ಜನ ಸಂಪರ್ಕದಲ್ಲಿದ್ದರೆ ಮಾತ್ರ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ. ಆದರಿಂದ ಪ್ರತಿಯೊಬ್ಬ ಕಾರ್ಯಕರ್ತ ಪಕ್ಷ ನೀಡಿದ ಹುದ್ದೆಯನ್ನು ಅತ್ಯಂತ ನೀಷ್ಠೆಯಿಂದ ಮಾಡಿ ಪಕ್ಷದ ಗೆಲುವಿಗೆ ಸಹಕರಿಸಿ, ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗಬೇಕು. ೫ ಗ್ಯಾರಂಟಿ ಯೋಜನೆಗಳನ್ನು ಬಹಳ ಅಚ್ಚುಕಟ್ಟಾಗಿ ರಾಜ್ಯದಲ್ಲಿ ಜಾರಿಗೆ ತಂದಿದ್ದೇವೆ. ಭಿನ್ನಾಭಿಪ್ರಾಯದ ಜಗಳವೇನಾದರೂ ಇದ್ದರೆ ಅದು ಬಿಜೆಪಿ ಪಕ್ಷದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲಾ’ ಎಂದರು.

    ಶಾಸಕ ಟಿ.ಡಿ ರಾಜೇಗೌಡ ಮಾತನಾಡಿ, `ಕಾಂಗ್ರೆಸ್ ಪಕ್ಷದ ನೇತೃತ್ವದ ರಾಜ್ಯ ಸರ್ಕಾರ ಶೃಂಗೇರಿ ತಾಲ್ಲೂಕಿಗೆ ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ೩೭.೫ ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜಾಗ ಗುರುತಿಸಿ ಅರಣ್ಯ ಇಲಾಖೆಯಿಂದ ಬಿಡಿಸಿಕೋಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಯಪುರದಲ್ಲಿ ೧೨ ಕೋಟಿ ವೆಚ್ಚದ ೫೦ ಬೆಡ್ ಹಾಸಿಗೆ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಗೆ ನವೀಕರಣಕ್ಕೆ ೧.೪೦ಕೋಟಿ ಅನುದಾನ ನೀಡಿ ಕಾಮಗಾರಿ ಮುಗಿದಿದೆ.

    ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨.೪೦ ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗಿದೆ. ಹೊನ್ನೆಕೊಡಿಗೆ ಮತ್ತು ಬಾಳೆಹೊನ್ನೂರಿನಲ್ಲಿ ೨೩ ಕೋಟಿ ವೆಚ್ಚದ ಸೇತುವೆ ನಿರ್ಮಾಣವಾಗಿದೆ. ಕೊಪ್ಪದ ಮಿನಿ ವಿಧಾನ ಸೌಧ ನವೀಕರಣಕ್ಕೆ ೨ ಕೋಟಿ ಅನುದಾನ ನೀಡಲಾಗಿದೆ. ಬಿಜೆಪಿ ಸರ್ಕಾರವಿದ್ದಾಗ ಟಾಸ್ಕ್ ಪೋರ್ಸ್ ರದ್ದಾಗಿರುವುದನ್ನು ಮಲೆನಾಡಿಗರಿಗೆ ಹಕ್ಕುಪತ್ರ ಕೊಡುವ ಸಲುವಾಗಿ ಪುನಃ ಅರಣ್ಯ ಇಲಾಖೆಯಲ್ಲಿ ರಚನೆ ಮಾಡಲಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಧ್ವನಿವರ್ಧಕದ ಮೂಲಕ ನಾಡಗೀತೆ ಹಾಕಿದಾಗ ಕರ್ಕಶ ಶಬ್ದದಿಂದ ನಾಡಗೀತೆಗೆ ಸ್ವಲ್ಪ ಅವಮಾನವಾಯಿತು. ಆದರಿಂದ ವಂದೇ ಮಾತರಂ ಮತ್ತು ರೈತಗೀತೆ ಹಾಕುವುದನ್ನು ನಿಲ್ಲಿಸಿದರು.

    ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಪಿ ಅಂಶುಮಂತ್, ಕಾಂಗ್ರೆಸ್ ಮುಖಂಡರಾದ ಸಂಧೀಪ್, ಜಯಪ್ರಕಾಶ್ ಹೆಗ್ಡೆ, ಸಚಿನ್ ಮೀಗಾ, ಸದಾಶಿವ, ಮಹಮ್ಮದ್ ಇಫ್ತಿಕರ್, ಎಂ.ಎಚ್ ನಟರಾಜ್, ರವೀಂದ್ರ ಕುಕ್ಕುಡಿಗೆ, ಗೇರ್‌ಬೈಲ್ ನಟರಾಜ್, ಶಕೀಲಾ ಗುಂಡಪ್ಪ, ಎಚ್.ಎಂ ಸತೀಶ್, ಭಾಸ್ಕರ್ ನಾಯ್ಕ, ಶ್ರೀಜಿತ್ ಗೌಡ ದಂಡಿನಮಕ್ಕಿ, ದುರ್ಗಾಚರಣ್, ಪ್ರದೀಪ್ ಕಲ್ಲಾಳಿ ಇದ್ದರು.

    Party workers should solve people’s problems from the booth level

     

  • ಶೃಂಗೇರಿಯಲ್ಲಿ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ

    ಶೃಂಗೇರಿಯಲ್ಲಿ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ

    ಶೃಂಗೇರಿ: `ದಿನ ಪತ್ರಿಕೆಗಳಿಗೆಗಳಿಗೆ ತನ್ನದೇ ಆದ ಗೌರವಗಳು ಇದೆ. ದೃಷ್ಯ ಮಾಧ್ಯಮಗಳಲ್ಲಿ ಒಮ್ಮೆ ತೋರಿಸಿದ ವಿಡೀಯೋ ಅಳಿಸಿ ಹೋಗುತ್ತದೆ. ಆದರೆ ಪತ್ರಿಕೆಗಳಲ್ಲಿ ಶಾಶ್ವತವಾಗಿ ಅಕ್ಷರ ಉಳಿದಿರುತ್ತದೆ. ನ್ಯಾಯಾಲಯವು ಇಂದಿಗೂ ದಿನ ಪತ್ರಿಕೆಗಳ ಲಿಖಿತವೇ ಸಾಕ್ಷಿಗಳಾಗಿ ಪರಿಗಣಿಸುತ್ತಾರೆ. ಆಧುನಿಕ ತಂತ್ರಜ್ಞಾನವು ಸಾಕಷ್ಟು ಬೆಳೆದರೂ ಮುದ್ರಣ ಮಾಧ್ಯಮವು ತನ್ನ ಬರವಣಿಗೆಯ ಮೌಲ್ಯವನ್ನು ಇಂದಿಗೂ ಉಳಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

    ಶೃಂಗೇರಿಯ ಶಾರದಾ ನಗರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಪತ್ರಕರ್ತರ ಭವನದ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿ `ಸಮಾಜದ ಅವಿಭಾಜ್ಯ ಅಂಗವಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ಭವನದ ನಿರ್ಮಾಣಕ್ಕೆ ಸರ್ಕಾರದಿಂದ ಕೂಡಾ ಹೆಚ್ಚಿನ ಅನುದಾನ ನೀಡುತ್ತೇವೆ. ವರದಿಗಾರರಿಗೂ ಸಾಕಷ್ಟು ಸಮಸ್ಯೆಗಳು ಇದ್ದು, ಸರ್ಕಾರದ ವತಿಯಿಂದ ಅವರಿಗೆ ನೀಡುವ ಸೌಲಭ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತೇವೆ. ಶೃಂಗೇರಿ ಕ್ಷೇತ್ರಕ್ಕೆ ಪತ್ರಕರ್ತರ ಭವನದ ಅವಶ್ಯಕತೆ ಇದ್ದು ಅದು ಸುಸಜ್ಜಿತವಾಗಿ ನಿರ್ಮಾಣಗೊಳ್ಳಬೇಕು ಎಂಬ ಆಶಯ ನಮ್ಮಲ್ಲಿದ್ದು ರೂ.೧೦ ಲಕ್ಷ ಅನುದಾನವನ್ನು ಶೀರ್ಘ್ರದಲ್ಲಿ ನೀಡುತ್ತೇನೆ’ ಎಂದರು.

    ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಚ್.ಎಸ್.ವೇಣುಗೋಪಾಲ್ ಮಾತನಾಡಿ, `ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾ ಅಂಗವಾಗಿದ್ದು ಅವರು ನಿರಂತರ ಕಾರ್ಯ ಪ್ರವೃತ್ತರಾಗಿ ಉತ್ತಮ ಸುದ್ಧಿಗಳನ್ನು ಜನತೆಗೆ ತಲುಪಿಸುತ್ತಿದ್ದಾರೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸುವ ಭವನಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ಸದಾ ಸಹಕಾರವಿದೆ’ ಎಂದರು.

    ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಂ ರಾಜಶೇಖರ್ ಮಾತನಾಡಿ, `ಶೃಂಗೇರಿ ಕ್ಷೇತ್ರಕ್ಕೆ ಸಾಕಷ್ಟು ಗಣ್ಯರು ಭೇಟಿ ನೀಡುತ್ತಿದ್ದು ಪತ್ರಿಕಾಗೋಷ್ಠಿ ನಡೆಸಲು ಹಾಗೂ ವಿವಿಧ ಪ್ರಾಂತ್ಯಗಳಿಂದ ಬರುವ ಪತ್ರಕರ್ತರಿಗೆ ವಸತಿ ವ್ಯವಸ್ಥೆಯನ್ನು ಒಳಗೊಂಡ ಭವ್ಯ ಕಟ್ಟಡ ನಿರ್ಮಿಸುವ ಆಶಯ ನಮ್ಮದಾಗಿದೆ. ನಮ್ಮ ಆಶಯಗಳಿಗೆ ಕ್ಷೇತ್ರದ ಶಾಸಕರು, ಸಂಸದರು, ಜನಪ್ರತಿನಿಧಿಗಳು ಹಾಗೂ ದಾನಿಗಳ ಸಹಕಾರ ಬೇಕು. ಭವನ ನಿರ್ಮಾಣಗೊಂಡ ಬಳಿಕ ಸಾರ್ವಜನಿಕರು ಕೂಡಾ ಭವನವನ್ನು ಬಳಸಿಕೊಳ್ಳಬಹುದು. ನಮ್ಮ ಉದ್ದೇಶ ದೊಡ್ಡದಿದ್ದು ಜನರು ನಮ್ಮ ಜೊತೆ ನಿರಂತರ ಸ್ಪಂದಿಸಬೇಕು’ ಎಂದರು.

    ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರನಕೊಡಿಗೆ ನಟರಾಜ್, ಅಜ್ಜಂಪುರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಸಮಿತಿ ಪದಾಧಿಕಾರಿ ಗೋಪಾಲ್, ಪತ್ರಕರ್ತರಾದ ಪ್ರದೀಪ್ ಹೆಬ್ಬಾರ್, ರಮೇಶ್, ದಿನೇಶ್ ಅಂಗುರ್ಡಿ, ಗೋಪಾಕೃಷ್ಣ, ರಂಜಿತ್, ರಮೇಶ್, ಅಭಿನವ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್, ಎ.ಪಿ.ಎಂ.ಸಿ ಅಧ್ಯಕ್ಷ ಭಾಸ್ಕರ್ ನಾಯ್ಕ್, ಬೇಗಾರ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮೀಶ ಮತ್ತು ಕಾಂಗ್ರೆಸ್ ಮುಖಂಡರು ಇದ್ದರು.

    Work on the Journalists’ Hall in Sringeri begins

  • ಹುಲಗಾರುಬೈಲು ಅರಣ್ಯದಲ್ಲಿ ನಾಡ ಬಂದೂಕು ಪತ್ತೆ

    ಹುಲಗಾರುಬೈಲು ಅರಣ್ಯದಲ್ಲಿ ನಾಡ ಬಂದೂಕು ಪತ್ತೆ

    ಚಿಕ್ಕಮಗಳೂರು: ಹುಲಗಾರುಬೈಲು ಅರಣ್ಯದಲ್ಲಿ ಬಂದೂಕು ಪತ್ತೆಯಾಗಿದ್ದು, ಶರಣಾದ ನಕ್ಸಲರು ಎಸೆದಿರುವ ಶಂಕೆ ವ್ಯಕ್ತವಾಗಿದೆ.

    ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಗಾರುಬೈಲು ಅರಣ್ಯದ ನಡುವೆ ಒಂದು ನಾಡ ಬಂದೂಕು, ೧೮ ಖಾಲಿ ಕಾಟ್ರೇಜ್ ಪತ್ತೆಯಾಗಿದ್ದು, ಇದರ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಕ್ಸಲರ ಶರಣಾಗತಿ ಬೆನ್ನಲ್ಲೇ ಕಾಡಿನಲ್ಲಿ ಬಂದೂಕು ಪತ್ತೆಯಾಗಿದೆ.

    ಫೆಬ್ರವರಿ ೧ ರಂದು ನಕ್ಸಲ್ ಕೋಟೆಹೊಂಡ ರವೀಂದ್ರ ಶಸ್ತ್ರ ರಹಿತವಾಗಿ ಶರಣಾಗತಿಯಾಗಿದ್ದ. ರವೀಂದ್ರ ಬಳಿ ಇದ್ದ ಶಸ್ತ್ರ ಇದೀಗ ಪತ್ತೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶರಣಾಗತಿ ಮುನ್ನ ರವೀಂದ್ರ ಕಾಡಿನಲ್ಲಿ ಎಸೆದಿರಬಹುದು ಎನ್ನಲಾಗುತ್ತಿದೆ.

    ಶೃಂಗೇರಿ ಪೊಲೀಸರು ನಾಡ ಬಂದೂಕು ಸೇರಿದಂತೆ ೧೮ ಖಾಲಿ ಕಾಟ್ರೇಜ್ ವಶಕ್ಕೆ ಪಡೆದಿದ್ದಾರೆ. ನರಸಿಂಹ ರಾಜಪುರ ಠಾಣಾ ವ್ಯಾಪ್ತಿಯಲ್ಲೂ ಈ ಹಿಂದೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಕಾಡಿನ ನಡುವೆ ಭೂಮಿಯೊಳಗೆ ಹೂತುಹಾಕಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು.

    ಈ ವೇಳೆ ಎಕೆ ೫೬ ಸೇರಿದಂತೆ ೬ ಬಂದೂಕು ಜೀವಂತ ಮದ್ದುಗುಂಡು ಪತ್ತೆಯಾಗಿದ್ದವು.

    ಹುಲುಗಾರು ಬೈಲಿನ ಕಾಡಿನಲ್ಲಿ ಪತ್ತೆಯಾಗಿರುವ ಒಂಟಿನಳಿಕೆ ಬಂದೂಕು ಶಿಕಾರಿಗೆಂದು ಬಂದವರು ಬಿಟ್ಟುಹೋಗಿದ್ದಾರೆಯೋ ಅಥವಾ ಇತ್ತೀಚೆಗೆ ಶಸ್ತ್ರರಹಿತವಾಗಿ ಶರಣಾಗಿರುವ ನಕ್ಸಲ್ ರವೀಂದ್ರ ಎಸೆದಿರುವ ಬಂದೂಕು ಎಂಬುದು ತನಿಖೆಯಿಂದ ತಿಳಿಯಬೇಕಿದೆ.

    ಶರಣಾಗತಿಯಾದ ರವೀಂದ್ರ ಹೇಳಿದ್ದು, ನನ್ನ ಬಳಿ ಶಸ್ತ್ರ ಇಲ್ಲವೆಂದು ಇದು ಯಾರಿಗೆ ಸೇರಿರಬಹುದೆಂಬುದು ತಿಳಿಯದಾಗಿದೆ.

    Gun found in Hulagarubailu forest

     

  • ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ

    ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ

    ಶೃಂಗೇರಿ: “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

    ಶೃಂಗೇರಿಯ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಉತ್ತರಿಸಿ ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ ಬೇಡ ಎಂದರು.

    ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ. ನಾನುಂಟು ಕಾಂಗ್ರೆಸ್ ಪಕ್ಷವುಂಟು. ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

    ನೀವು ದೇವಾಲಯ ಹಾಗೂ ಮಠಗಳ ಭೇಟಿಗೆ ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ನಾನು ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು, ನಿತ್ಯ ಪೂಜೆ ಮಾಡುವವನು. ನನ್ನ ಒಳಿತು, ರಾಜ್ಯದ ಒಳಿತು, ನನ್ನ ನಂಬಿದವರ ಹಾಗೂ ಸಮಾಜದ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು

    ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡುವುದಾದರೆ ನೀವೆಲ್ಲ ಸೇರಿ ದೇವಾಲಯಗಳನ್ನು ಮುಚ್ಚಿಬಿಡಿ. ಸರ್ಕಾರದಲ್ಲಿ ಮುಜರಾಯಿ ಇಲಾಖೆ, ವಕ್ಫ್ ಮಂಡಳಿ ಇರುವುದು ಏಕೆ? ಅವರವರ ವಿಚಾರ ಅವರವರ ನಂಬಿಕೆ. ಧರ್ಮ ಯಾವುದಾದರೂ ತತ್ವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ನಾಮ ಹಲವಾದರೂ ದೈವವೊಂದೇ. ದೇವನೊಬ್ಬ ನಾಮ ಹಲವು ಎಂದು ನಾನು ಪದೇ ಪದೆ ಹೇಳುತ್ತೇನೆ” ಎಂದು ತಿಳಿಸಿದರು.

    ನೀವು ಶೃಂಗೇರಿಗೆ ಭೇಟಿ ನೀಡಿದಾಗೆಲ್ಲಾ ನಿಮ್ಮ ರಾಜಕೀಯ ಜೀವನದಲ್ಲಿ ಹಲವು ತಿರುವುಗಳು ಪಡೆದಿವೆ ಎಂದು ಕೇಳಿದಾಗ, “ಯಾರೂ ತಲೆಕೆಡಿಸಿಕೊಳ್ಳುವುದು ಬೇಡ. ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ. ಜನ ಆಶೀರ್ವಾದ ಮಾಡಿ ನಮಗೊಂದು ಅವಕಾಶ ಕೊಟ್ಟಿದ್ದಾರೆ. ಐದು ವರ್ಷ ಸರ್ಕಾರ ಮಾಡುತ್ತೇವೆ. ಪಕ್ಷ ಹೇಳಿದಂತೆ ನಾನು ಹಾಗೂ ಸಿಎಂ ಕೆಲಸ ಮಾಡುತ್ತೇವೆ. ಬೇರೆಯವರ ಮಾತುಗಳು ಗೌಣ” ಎಂದು ತಿಳಿಸಿದರು.

    ಇಂದಿನ ಶೃಂಗೇರಿ ಪ್ರವಾಸದ ಬಗ್ಗೆ ಕೇಳಿದಾಗ, “ಇಂದು ಬಹಳ ಪವಿತ್ರವಾದ ದಿನ. ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳು ಮಠದ ಜವಾಬ್ದಾರಿ ಸ್ವೀಕರಿಸಿ ೫೦ ವರ್ಷಗಳು ಪೂರ್ಣಗೊಂಡಿವೆ. ಧರ್ಮೋ ರಕ್ಷತಿ ರಕ್ಷಿತಃ ಎಂಬ ಶ್ಲೋಕವು ಧರ್ಮವನ್ನು ಯಾರು ಕಾಪಾಡುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ ಎಂಬ ಸಂದೇಶ ಸಾರುತ್ತದೆ. ಅದರಂತೆ ಈ ಮಹಾಸ್ವಾಮಿಗಳು ರಾಜಕಾರಣಕ್ಕೆ ಎಂದು ಹಸ್ತಕ್ಷೇಪ ಮಾಡದೆ ಕೇವಲ ಧರ್ಮ, ಸಂಸ್ಕೃತಿ, ಸಂಸ್ಕಾರ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಆಮೂಲಕ ತಮ್ಮ ಕರ್ತವ್ಯ ನಿಭಾಯಿಸಿಕೊಂಡು ನಮಗೆ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ.

    ನನಗೆ ಮಹಾಸ್ವಾಮಿಗಳ ಮೇಲೆ ವಿಶೇಷವಾದ ನಂಬಿಕೆ, ಭಕ್ತಿ ಇದೆ. ತಾಯಿ ಸರಸ್ವತಿ ಅವರ ಮೇಲೆ ಆಶೀರ್ವಾದ ಮಾಡಿದ್ದಾಳೆ. ರಾಜೀವ್ ಗಾಂಧಿ ಅವರು ಇಲ್ಲಿ ಸಂಸ್ಕೃತ ವಿದ್ಯಾಪೀಠ ಮಾಡಲು ತೀರ್ಮಾನಿಸಿದರು. ಈ ಮಠವು ಬೆಂಗಳೂರಿನಲ್ಲಿ ಮಕ್ಕಳಿಗೆ ಜ್ಞಾನದ ದೀಪ ಬೆಳಗುವ ಪ್ರಯತ್ನ ಮಾಡುತ್ತಿದೆ. ಇವರ ಈ ಶುಭ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ” ಎಂದು ತಿಳಿಸಿದರು.

    DCM D.K. Shivakumar at a media conference at the Sringeri helipad

  • ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್-ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ

    ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್-ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ

    ಶೃಂಗೇರಿ: ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ.

    ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿ  ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ.

    ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ” ಎಂದು ಕಿಡಿಕಾರಿದರು.

    ರವಿಗೆ ಸಾಮಾನ್ಯ ಪರಿಜ್ಞಾನ ಇಲ್ಲ:

    ನಕ್ಸಲರ ಶಸ್ತ್ರಾಸ್ತ್ರ ವಿಚಾರವಾಗಿ ರವಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಯಾರಾದರೂ ಮುಖ್ಯಮಂತ್ರಿಗಳ ಬಳಿ ಬಂದು ಶರಣಾಗುವಾಗ ಯಾರಾದರೂ ಬಂದೂಕು ಹಿಡಿದುಕೊಂಡು ಬರುತ್ತಾರಾ? ರವಿಗೆ ಇಷ್ಟು ಸಾಮಾನ್ಯ ಪ್ರಜ್ಞೆ ಇಲ್ಲವೇ? ವೀರಪ್ಪನ್ ಅವರಿಂದ ರಾಜಕುಮಾರ್ ಅವರನ್ನು ಕರೆ ತಂದಾಗ ಬಂದೂಕು ಸಮೇತ ಕರೆತರಲಾಗಿತ್ತೆ? ಈ ವಿಚಾರವನ್ನು ನಿಭಾಯಿಸಲು ಪೊಲೀಸ್ ಇಲಾಖೆ ಇದೆ. ಅವರು ಕೆಲವು ವಿಚಾರಗಳನ್ನು ಗೌಪ್ಯವಾಗಿತ್ತುಕೊಂಡು ಕರ್ತವ್ಯ ನಿಭಾಯಿಸುತ್ತಿದ್ದಾರೆ.

    ಅವರ ಕರ್ತವ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವಂತಿಲ್ಲ. ರಾಜ್ಯವನ್ನು ನಕ್ಸಲ್ ಮುಕ್ತ ಮಾಡಿರುವುದಕ್ಕೆ ಸಂತೋಷಪಡಬೇಕು. ಆದರೆ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ. ಚುನಾವಣೆಗೆ ಇನ್ನು ಸಮಯವಿದೆ. ಚುನಾವಣೆ ಬಂದಾಗ ರಾಜಕೀಯ ಮಾಡಲಿ. ಈಗ ರಾಜ್ಯದ ಪ್ರಗತಿ ಬಗ್ಗೆ ಚರ್ಚೆ ಮಾಡಿ, ರಾಜ್ಯ ಹಾಗೂ ದೇಶ ಉಳಿಸುವ ಕೆಲಸ ಮಾಡೋಣ” ಎಂದು ತಿರುಗೇಟು ನೀಡಿದರು.

    C.T. Ravi is a great drama master.