Category: ತಾಲೂಕು

  • ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ-ಆತಂಕ ನಿವಾರಣೆ ಬಗ್ಗೆ ಸಂವಾದ

    ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ-ಆತಂಕ ನಿವಾರಣೆ ಬಗ್ಗೆ ಸಂವಾದ

    ಚಿಕ್ಕಮಗಳೂರು:  ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಆತಂಕ ನಿವಾರಣೆ, ಏಕಾಗ್ರತೆ ಸಾಧಿಸುವುದು, ಮಾನಸಿಕ ಒತ್ತಡ ನಿವಾರಣೆಗಳ ಬಗ್ಗೆ ಸಂವಾದ ಪ್ರೇರಣಾ ಕಾರ್ಯಕ್ರಮಗಳನ್ನು ಶೈಕ್ಷಣಿಕ ವರ್ಷದಲ್ಲಿ ತಜ್ಞರಿಂದ ಏರ್ಪಡಿಸುವ ಬಗ್ಗೆ ನವೆಂಬರ್ ೧೪ ರಂದು ಪೋಷಕ-ಶಿಕ್ಷಕರ ಮಹಾಸಭೆಯಲ್ಲಿ ಪೋಷಕರಿಗೆ ತಿಳಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ತಿಳಿಸಿದರು.

    ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರನ್ನು ತಲುಪಲು ನವೆಂಬರ್ ೧೪ ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ರಾಜ್ಯಾದ್ಯಂತ ಏಕಕಾಲದಲ್ಲಿ ೨೦೨೫-೨೬ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಆಯೋಜಿಸಲು ಸರ್ಕಾರ ಉದ್ದೇಶಿಸಿರುವ ಬಗ್ಗೆ ಜಿ.ಪಂ. ಮಿನಿ ವಿಧಾನ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಭೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಮಾತುಗಳನ್ನು ಹೇಳಲಾಗುವುದು ಎಂದರು.

    ಮಕ್ಕಳ ಕಲಿಕಾ ಪ್ರಗತಿ ಹಾಜರಾತಿ ಮಾಹಿತಿ ಹಂಚಿಕೆ, ಪೋ?ಕರೊಂದಿಗೆ ಮಕ್ಕಳ ಪ್ರಗತಿ ಪತ್ರ ವಿತರಣೆ ಮತ್ತು ಪ್ರಗತಿಯ ಬಗ್ಗೆ ಚರ್ಚಿಸಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷಾ ಸಿದ್ಧತೆಗೆ ಅನುಕೂಲಿಸಲು ಅಧ್ಯಾಯವಾರು, ವಿ?ಯವಾರು ನೀಲ ನಕ್ಷೆ, ಪ್ರಶ್ನೆ ಕೋಠಿ, ಮಾದರಿ ಪ್ರಶ್ನೆಪತ್ರಿಕೆಗಳು, ಮೌಲ್ಯಮಾಪನ ವಿಧಾನ, ನಡೆಸಲಾಗುತ್ತಿರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ೨ ಅಂತಿಮ ಪರೀಕ್ಷೆಗಳನ್ನು ನಡೆಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ತಿಳಿಸಲಾಗುತ್ತದೆ. ಬಾಲ್ಯ ವಿವಾಹ ನಿ?ಧ ಮತ್ತು ಕಾರ್ಮಿಕ ನಿ?ಧ ನೀತಿಗಳ ಬಗ್ಗೆ, ಮಾಹಿತಿ ಮತ್ತು ವಿಶೇ?ಚೇತನ ಮಕ್ಕಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

    ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಕಲಿಕೆ ಉತ್ತಮಪಡಿಸಲು ಕಲಿಕಾ ಉಪಕ್ರಮಗಳು, ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಪ್ರೋತ್ಸಾಹದಾಯಕ ಯೋಜನೆಗಳು, ಶಾಲಾ-ಕಾಲೇಜುಗಳಲ್ಲಿ ಲಭ್ಯಗೊಳಿಸಿರುವ ಭೌತಿಕ ಸೌಕರ್ಯಗಳು ಮತ್ತು ಶೈಕ್ಷಣಿಕ ಸೌಲಭ್ಯಗಳ ಬಗ್ಗೆ ಪೋ?ಕರಿಗೆ ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳ ಆರೋಗ್ಯ ಪೋ?ಣೆ ಮತ್ತು ಕಲಿಕಾ ಪ್ರಗತಿಯಲ್ಲಿ ಪೋ?ಕರ ಜವಾಬ್ದಾರಿ ಮತ್ತು ಭಾಗವಹಿಸುವಿಕೆಯ ಬಗ್ಗೆ ಅರಿವು ಮೂಡಿಸಲಾಗುವುದು.

    ವಿದ್ಯಾರ್ಥಿಗಳ ಹಾಜರಾತಿ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪೋ?ಕರೊಂದಿಗೆ ಹಂಚಿಕೊಳ್ಳುವುದು. ಪೋ?ಕರು, ಶಿಕ್ಷಕರು ಮತ್ತು ಸ್ಥಳೀಯ ಆಡಳಿತದ ಸಹಯೋಗದಿಂದ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ, ಶಾಲೆಯ ಅವಶ್ಯಕತೆಗಳು, ಸವಾಲುಗಳು ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಪೋ?ಕರ ನಿರೀಕ್ಷೆ, ಸಹಕಾರ ಮತ್ತು ಸಲಹೆಗಳನ್ನು ಸಂಗ್ರಹಿಸುವುದು, ಕೆ.ಪಿ.ಎಸ್. ಪಿ.ಎಂ.ಶ್ರೀ ಹಾಗೂ ಆಯ್ಕೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಿರುವ ದ್ವಿಭಾ? ಮಾಧ್ಯಮ ತರಗತಿಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳ ಬಗ್ಗೆ ಪೋ?ಕರಲ್ಲಿ ಅರಿವು ಮೂಡಿಸುವುದು. ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಶಾಲಾ-ಕಾಲೇಜುಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಿ ಹೆಚ್ಚುವರಿ ಅನುದಾನ ನೀಡಿ ಅಭಿವೃದ್ಧಿಪಡಿಸುತ್ತಿರುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

    ಇಲಾಖೆಯು ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್ ಜಿ ಫೌಂಡೇ?ನ್ ಸಹಯೋಗದೊಂದಿಗೆ ವಾರಕ್ಕೆ ೬ ದಿನಗಳು ಮೊಟ್ಟೆ, ಬಾಳೆಹಣ್ಣು ಮತ್ತು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ವಾರಕ್ಕೆ ೫ ದಿನಗಳು ಸಾಯಿ ಶ್ಯೂರ್ ರಾಗಿ ಹೆಲ್ತ್‌ಮಿಕ್ಸ್ ಪುಡಿಯನ್ನು ಹಾಲಿನೊಂದಿಗೆ ಮಿಶ್ರ ಮಾಡಿ ನೀಡುತ್ತಿರುವ ಬಗ್ಗೆ ಪೋ?ಕರಿಗೆ ಮಾಹಿತಿ ನೀಡಲಾಗುವುದು.

    ಮಕ್ಕಳ ಹಕ್ಕುಗಳು, ಆರ್.ಟಿ.ಇ. ಕಾಯ್ದೆ, ವಿಶೇ? ಅಗತ್ಯತೆಯುಳ್ಳ ಮಕ್ಕಳ ಶಿಕ್ಷಣ, ಮಕ್ಕಳ ರಕ್ಷಣಾ ನೀತಿ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಪೋ?ಕರಲ್ಲಿ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

    ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಆಡಳಿತ) ತಿಮ್ಮರಾಜು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಅಭಿವೃದ್ಧಿ) ಸುಂದ್ರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳಾ ಸುದ್ದಿಗೋಷ್ಠಿಯಲ್ಲಿದ್ದರು.

    Discussion on overcoming exam fear and anxiety for students

  • ಏಕತಾ ನಡಿಗೆ ದೇಶ ಮೊದಲು ಎನ್ನುವ ರಾಷ್ಟ್ರಭಕ್ತರಿಗೆ ಸಲ್ಲುತ್ತದೆ

    ಏಕತಾ ನಡಿಗೆ ದೇಶ ಮೊದಲು ಎನ್ನುವ ರಾಷ್ಟ್ರಭಕ್ತರಿಗೆ ಸಲ್ಲುತ್ತದೆ

    ಚಿಕ್ಕಮಗಳೂರು:  ನನಗಿಂತ, ನನ್ನ ಜಾತಿಗಿಂತ, ನನ್ನ ಧರ್ಮಕ್ಕಿಂತ ನನ್ನ ದೇಶ ಮೊದಲು ಎನ್ನುವ ರಾಷ್ಟ್ರಭಕ್ತರಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ೧೫೦ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ ಈ ಏಕತಾ ನಡಿಗೆ ಸಲ್ಲುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ಕೇಂದ್ರ ಹಾಗೂ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಮೈ ಭಾರತ್ ಕೇಂದ್ರ (ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ) ಕುವೆಂಪು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ನಗರದ ಟೌನ್ ಕ್ಯಾಂಟೀನ್ ಸಮೀಪದಿಂದ ಹೊಸಮನೆ ಬಡಾವಣೆಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕದವರೆಗೆ ಆಯೋಜಿಸಲಾಗಿದ್ದ ಏಕತಾ ನಡಿಗೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.

    ಇಡೀ ರಾಷ್ಟ್ರದಲ್ಲಿ, ಜಿಲ್ಲೆಯಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮಾಜ ಹೆಮ್ಮೆ ಪಡುವ ಏಕತಾ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹರಿದು ಹಂಚಿಹೋಗಿರುವ ಅನೇಕ ರಾಜರುಗಳನ್ನು ಅಗತ್ಯವಿದ್ದಾಗ ದಂಡ ಪ್ರಯೋಗದ ಮೂಲಕವೂ ಒಗ್ಗೂಡಿಸಿ ಭಾರತದ ಏಕತೆಯನ್ನು ಕಾಪಾಡಿದವರು ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು. ಈ ಸಂದರ್ಭದಲ್ಲಿ ಅವರ ಹೆಸರು ನೆನಪಿಸಿಕೊಂಡು ಎಲ್ಲರೂ ಏಕತಾ ನಡಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರ ಮೊದಲು ಎನ್ನುವ ಕಲ್ಪನೆಗೆ ಒತ್ತು ಕೊಟ್ಟು ಕೆಲಸ ಮಾಡುವ ಕಾರ್ಯಕ್ರಮ ಇದಾಗಿದೆ ಎಂದರು.

    ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ ಮಾತನಾಡಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಏಕತಾ ನಡಿಗೆ ಒಂದೆಡೆಯಾದರೆ, ಇನ್ನೊಂದೆಡೆ ಈ ದೇಶದ ವಂದೇ ಮಾತರಂ ಗೀತೆಗೂ ೧೫೦ ವರ್ಷ ತುಂಬಿದೆ. ಆತ್ಮ ನಿರ್ಭರ ಭಾರತ ಎಂದು ನಮ್ಮ ಪ್ರಧಾನಿ ಘೋಷಣೆ ಮಾಡಿದ್ದಾರೆ.

    ಆತ್ಮನಿರ್ಭರ ಭಾರತ ಆಗಬೇಕೆನ್ನುವುದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಉದ್ದೇಶವಾಗಿದ್ದು, ನಮ್ಮೆಲ್ಲರ ಆಶಯವೂ ಆಗಿದೆ. ಯುವಪೀಳಿಗೆ ಎತ್ತ ಸಾಗಿದೆ ಎನ್ನುವ ಬಗ್ಗೆಯೂ ನಾವು ಅವಲೋಕನ ಮಾಡಬೇಕಾಗಿದೆ. ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವ ಕನ್ನಡ ಶ್ರೇಷ್ಠ ಭಾಷೆ. ರಾಷ್ಟ್ರ ಕವಿ ನೀಡಿರುವ ನಾಡಗೀತೆ ನಮ್ಮ ಸಂವಿಧಾನದ ಆಶಯ. ಸಂವಿಧಾನದ ಆಶಯದ ಬಗ್ಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ರಾಷ್ಟ್ರದಲ್ಲಿ ಏಕತೆ ಮೂಡಿಸಿ ರಾಷ್ಟ್ರಪ್ರೇಮದ ಬಗ್ಗೆ ನಮ್ಮ ಯುವಪೀಳಿಗೆಯಲ್ಲಿ ಅಗತ್ಯ ವಿಚಾರಗಳನ್ನು ಪ್ರೇರೇಪಿಸಲು ಏಕತಾ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

    ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ಈ ಏಕತಾ ನಡಿಗೆ ಕಾರ್ಯಕ್ರಮವನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜನ್ಮ ದಿನಾಚರಣೆ ಅಂಗವಾಗಿ ಇದು ರಾಷ್ಟ್ರಾದ್ಯಂತ ನಡೆದಿದ್ದು, `ಒನ್ ನೇಷನ್, ಒನ್ ವಿಷನ್’ ಇತ್ತೀಚಿನ ದಿನಗಳಲ್ಲಿ ಪ್ರಸ್ತುತವಾಗಿದ್ದು, ಪಟೇಲ್ ಅವರ ದೀರ್ಘ ದೃಷ್ಟಿಯನ್ನು ಸಾರುವ ಸಲುವಾಗಿ ಈ ನಡಿಗೆಯಲ್ಲಿ ಅವರ ಧ್ಯೇಯವನ್ನು ಜೀವನವಿಡೀ ಅಳವಡಿಸಿಕೊಳ್ಳುವಂತಾಗಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಪೌರಾಯುಕ್ತ ಬಿ.ಸಿ.ಬಸವರಾಜ್, ಮುಖಂಡರಾದ ಹೆಚ್.ಸಿ.ಕಲ್ಮರುಡಪ್ಪ, ಬೆಳವಾಡಿ ರವೀಂದ್ರ, ದೀಪಕ್ ದೊಡ್ಡಯ್ಯ, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    The march of unity belongs to the patriots who put country first.

  • ಮುಂಬರುವ ಜಿ.ಪಂ-ತಾ.ಪಂ ಚುನಾವಣೆಗೆ ಆಮ್ ಅದ್ಮಿ ಪಕ್ಷ ಸಿದ್ಧತೆ

    ಮುಂಬರುವ ಜಿ.ಪಂ-ತಾ.ಪಂ ಚುನಾವಣೆಗೆ ಆಮ್ ಅದ್ಮಿ ಪಕ್ಷ ಸಿದ್ಧತೆ

    ಚಿಕ್ಕಮಗಳೂರು:  ರಾಜ್ಯದಲ್ಲಿ ಮುಂಬರುವ ಜಿ.ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಆಮ್ ಅದ್ಮಿ ಪಕ್ಷ ಸಿದ್ಧತೆಯ ಜೊತೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ದರಿಸಲಾಗಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಂ ಗುಂಡಪ್ಪ ತಿಳಿಸಿದರು.

    ಅವರು ಇಂದು ನಗರಕ್ಕಾಗಮಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಮದ್ಯ ಹಾಗೂ ಡ್ರಗ್ಸ್ ಹಾವಳಿಯಿಂದಾಗಿ ಯುವಜನತೆ ಸಮಾಜ ನೈತಿಕ ಅದಃಪತನಕ್ಕೆ ಇಳಿಯುತ್ತಿದ್ದು, ಸರ್ಕಾರ ಮತ್ತಷ್ಟು ಮದ್ಯದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುತ್ತಿರುವುದನ್ನು ಖಂಡಿಸಿದರು.

    ಪಕ್ಕದ ತಮಿಳುನಾಡು, ಕೇರಳ ಇನ್ನಿತರ ರಾಜ್ಯಗಳಲ್ಲಿ ಮದ್ಯದ ಅಂಗಡಿಗಳು ಊರಾಚೆ ಇವೆ. ಬಿಹಾರ ಮತ್ತು ಗುಜರಾತ್ ರಾಜ್ಯಗಳಲ್ಲಿ ಮದ್ಯಪಾನ ಸಂಪೂರ್ಣ ನಿಷೇಧವಾಗಿದೆ. ಈ ಹಿಂದೆ ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ನಾಯಿಕೊಡೆಗಳಂತೆ ಎಲ್ಲೆಂದರಲ್ಲಿ ಪರವಾನಗಿ ನೀಡಿದ ಪರಿಣಾಮ ಮದ್ಯದಂಗಡಿಗಳು ತಲೆಎತ್ತಿದ ಹಿನ್ನೆಲೆಯಲ್ಲಿ ದುಷ್ಪರಿಣಾಮ ಎದುರಿಸುವಂತಾಗಿ ಎಂದು ಆರೋಪಿಸಿದರು.

    ಈ ಹಿನ್ನೆಲೆಯಲ್ಲಿ ಅಬಕಾರಿ ಪರವಾನಗಿಗಳನ್ನು ಮುಂದೆ ನೀಡಬಾರದು ಎಂದು ಒತ್ತಾಯಿಸಿದ ಅವರು, ಚಿಕ್ಕಮಗಳೂರು ನಗರ ಅವ್ಯವಸ್ಥೆಯ ಆಗರವಾಗಿದ್ದು, ಗುಂಡಿಗಳ ನಗರವಾಗಿದೆ ಎಂದು ದೂರಿದರು.

    ನಗರದ ಹೃದಯ ಭಾಗದಲ್ಲಿರುವ ಬಸವನಹಳ್ಳಿ ಕೆರೆ ಜೂಜುಕೋರರ ಅಡ್ಡೆಯಾಗಿ ಪರಿವರ್ತನೆಯಾಗಿದೆ. ಈ ಬಗ್ಗೆ ಪೊಲೀಸರು ಗಮನಹರಿಸದ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಈ ಸಂಬಂಧ ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

    ಜಿಲ್ಲೆಯಲ್ಲಿ ಕಾಡುಪ್ರಾಣಿಗಳು ಮತ್ತು ಮಾನವ ಸಂಘರ್ಷ ಹೆಚ್ಚಾಗಿದ್ದು, ಕಾಡಾನೆ ದಾಳಿಗೆ ೪೦ ಜನ ತುತ್ತಾಗಿದ್ದಾರೆ. ಈ ಬಗ್ಗೆ ಅರಣ್ಯ ಸಚಿವರು ಗಮನಹರಿಸಿ ರೈತರ ಸಮಸ್ಯೆಯನ್ನು ಪರಿಹರಿಸಿ ಮೃತ ಕುಟುಂಬಗಳಿಗೆ ಸಾಂತ್ವಾನ ಹೇಳಿ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಆಮ್ ಅದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹೇಮಂತ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಈರೇಗೌಡ, ಮಾಧ್ಯಮ ಸಂಚಾಲಕರಾದ ಡಾ. ಕೆ. ಸುಂದರಗೌಡ, ಯುವಮೋರ್ಚಾ ಅಧ್ಯಕ್ಷ ಪ್ರಭು, ಮುಖಂಡರಾದ ಗೋವಿಂದಪ್ಪ, ಸುನಂದಮ್ಮ, ಜಯಮ್ಮ ಉಪಸ್ಥಿತರಿದ್ದರು.

    Aam Aadmi Party is preparing for the upcoming G.P.-T.P. Elections

  • ನೂತನ ಬಿಜೆಪಿ ಜಿಲ್ಲಾ ಪದಾಧಿಕಾರಿ ಹೆಸರು ಅಂತಿಮ

    ನೂತನ ಬಿಜೆಪಿ ಜಿಲ್ಲಾ ಪದಾಧಿಕಾರಿ ಹೆಸರು ಅಂತಿಮ

    ಚಿಕ್ಕಮಗಳೂರು: ಚಿಕ್ಕಮಗಳೂರು ಸಹಕಾರಿ ಯೂನಿಯನ್, ಮೂಡಿಗೆರೆ ಟಿಎಪಿಸಿಎಂಎಸ್ ಹಾಗೂ ಅಜ್ಜಂಪುರ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ ತಿಳಿಸಿದರು.

    ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಸಹಕಾರ ಯೂನಿಯನ್ ಚುನಾವಣೆಯ ೧೩ ಸ್ಥಾನಗಳಲ್ಲಿ ೧೨ರಲ್ಲಿ ಬಿಜೆಪಿ ಬೆಂಬಲಿತರು ಗೆದ್ದಿದ್ದಾರೆ. ಮೂಡಿಗೆರೆ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ೧೩ ಸ್ಥಾನಗಳ ಪೈಕಿ ಬಿಜೆಪಿ ೧೦, ಜೆಡಿಎಸ್ ೨ ಸ್ಥಾನಗಳಲ್ಲಿ ವಿಜೇತರಾಗಿದ್ದು, ಅಲ್ಲೂ ಬಿಜೆಪಿ ಅಧ್ಯಕ್ಷ ಗಾದಿ ಏರಲಿದೆ. ಅಜ್ಜಂಪುರ ಪಟ್ಟಣ ಪಂಚಾಯಿತಿಯಲ್ಲೂ ಬಿಜೆಪಿ ಬೆಂಬಲಿತರೆ ಅತಿ ಹೆಚ್ಚು ಸ್ಥಾನ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

    ಮೂಡಿಗೆರೆ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಕಲ್ಲೇಶ್ ಅವರು ಬಹುತೇಕ ಅಧ್ಯಕ್ಷರಾಗುವುದು ಖಚಿತ ಎಂದ ಅವರು, ರಾಜ್ಯ ಸಮಿತಿ ಆದೇಶದಂತೆ ಸಮನ್ವಯ ಸಮಿತಿ ರಚಿಸಿ ಜೆಡಿಎಸ್ ಮತ್ತು ಬಿಜೆಪಿ ಸಮನ್ವಯತೆ ಕಾಪಾಡುತ್ತೇವೆ, ಸರ್ಕಾರ ಅವಧಿಗೆ ಸರಿಯಾಗಿ ಗ್ರಾ.ಪಂ, ತಾ.ಪಂ, ಜಿ.ಪಂ ಚುನಾವಣೆಯನ್ನು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.

    ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರ್‌ಬಾಂಬ್ ಸ್ಪೋಟದಲ್ಲಿ ೧೨ಕ್ಕೂ ಹೆಚ್ಚು ಜನ ಹತರಾಗಿದ್ದು ಜಿಲ್ಲಾ ಬಿಜೆಪಿ ಸಂತಾಪ ಸೂಚಿಸುತ್ತದೆ ಎಂದರು.

    ಬಿಜೆಪಿ ಜಿಲ್ಲಾ ಪದಾಧಿಕಾರಿ ಪಟ್ಟಿ
    ಮುಂದಿನ ಮೂರು ವರ್ಷದ ಅವಧಿಗೆ ಬಿಜೆಪಿ ಜಿಲ್ಲಾ ಸಮಿತಿಯನ್ನು ಪುನರ್ ರಚನೆ ಮಾಡಲಾಗಿದೆ. ಅಧ್ಯಕ್ಷನಾಗಿ ನಾನು ಎಂ.ಆರ್.ದೇವರಾಜ್‌ಶೆಟ್ಟಿ, ಉಪಾಧ್ಯಕ್ಷರಾಗಿ ಜಿ.ಎಸ್.ಮಹಾಬಲರಾವ್, ಬಿ.ಜಿ.ಸೋಮಶೇಖರ್, ಎಚ್.ಎಸ್.ಕವೀಶ್, ಈ.ಆರ್.ಮಹೇಶ್, ಕನಕರಾಜ್‌ಅರಸ್, ವೀಣಾರತ್ನಾಕರಶೆಟ್ಟಿ, ಸವಿತಾರಮೇಶ್, ಚೈತ್ರಶ್ರೀ, ರತನ್, ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ಬೆಳವಾಡಿ, ಡಾ.ಎ.ನರೇಂದ್ರ, ಪುಣ್ಯಪಾಲ್, ರವಿ, ಜಿ.ಎಸ್.ರಘು, ಚಂಪಾಜಗದೀಶ್, ಕವಿತಾಶೇಖರ್, ರಾಜನಾಯ್ಕ, ಸುಜಯಸದಾನಂದ, ಮಧುಕುಮಾರರಾಜ್ ಅರಸ್, ಬೋಜರಾಜ್, ಅರುಣ್‌ಕುಮಾರ್ ಅವರುಗಳು ಆಯ್ಕೆಯಾಗಿದ್ದಾರೆ. ಖಜಾಂಚಿ ನಾರಾಯಣಗೌಡ, ವಕ್ತಾರರಾಗಿ ಹಿರೇಮಗಳೂರು ಪುಟ್ಟಸ್ವಾಮಿ ಆಯ್ಕೆಯಾಗಿದ್ದಾರೆ.
    ಕಚೇರಿ ಕಾರ್ಯದರ್ಶಿ ದುರ್ಗೇಶ್, ಸಾಮಾಜಿಕ ಜಾಲತಾಣ ಸಮೃದ್ಧಪೈ, ಮಾಧ್ಯಮ ಪ್ರಮುಖ್ ದಿನೇಶ್‌ಕುಮಾರ್, ಸಹ ಪ್ರಮುಖ್ ಆಗಿ ಮಂಜುನಾಥ್ ಅವರನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಹೆಚ್.ಎಸ್. ಪುಟ್ಟಸ್ವಾಮಿ, ರಂಗನಾಥ್, ಕೆ.ಪಿ ವೆಂಕಟೇಶ್, ಪುಣ್ಯಪಾಲ್ ಉಪಸ್ಥಿತರಿದ್ದರು.

    Name of new BJP district office bearer finalized

  • ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಉದ್ದೇಶ

    ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಉದ್ದೇಶ

    ಚಿಕ್ಕಮಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗಳ ಕುಟುಂಬದ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರಾರಂಭೋತ್ಸವಕ್ಕೆ ಉತ್ತೇಜನ ನೀಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

    ಅವರು ಇಂದು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿ.ಪಂ, ನಗರಸಭೆ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಗ್ರೇಡ್-೧ ಮತ್ತು ಗ್ರೇಡ್-೨ ದೈಹಿಕ ಶಿಕ್ಷಕರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ೧೪ ಮತ್ತು ೧೭ ವಯೋಮಾನದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಬೆಳಗಾಂನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಕ್ರೀಡಾಕೂಟಗಳಿಗೆ ಹೆಚ್ಚು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

    ಈಗ ತಾಲ್ಲೂಕು ಮಟ್ಟಕ್ಕೆ ೨೫ ಸಾವಿರ ಮತ್ತು ಜಿಲ್ಲಾ ಮಟ್ಟಕ್ಕೆ ೫೦ ಸಾವಿರ ರೂ ಅನುದಾನ ನೀಡುತ್ತಿದ್ದು, ಇದು ಸಾಕಾಗುತ್ತಿಲ್ಲ. ಅನುದಾನ ಹೆಚ್ಚುಮಾಡಿ ಕ್ರೀಡಾಪಟುಗಳಿಗೆ ಅಗತ್ಯ ಇರುವ ಸಲಕರಣೆಗಳು ಹಾಗೂ ಉಡುಪುಗಳನ್ನು ನೀಡುವ ಬಗ್ಗೆ ಸರ್ಕಾರದಲ್ಲಿ ಗಟ್ಟಿ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

    ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕಡಿಮೆಯಾಗುತ್ತಿರುವ ಬಗ್ಗೆ ಕೆಲವರು ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರ ಮೇಲೆ ದೂರುತ್ತಿದ್ದಾರೆ. ಮುರಾಜಿ, ಏಕಲವ್ಯ, ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರ ವಸತಿ ಶಾಲೆಗಳಿಗೆ ಹೆಚ್ಚು ಸೌಲಭ್ಯ ಕಲ್ಪಿಸಿದೆ ಎಂಬುದನ್ನು ದೂರುವವರು ಮನಗಾಣಬೇಕು ಎಂದರು.

    ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇವೆಂಬ ಗ್ರಾಮಾಂತರ ಮಕ್ಕಳಲ್ಲಿ ಕೀಳರಿಮೆ ಬೇಡ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಪಿ.ಟಿ ಉಷಾ ಅವರ ಸಾಧನೆ ಬಗ್ಗೆ ಈಗಿನ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಹೇಳಿದರು.

    ಧ್ವಜಾರೋಹಣದ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಅಗತ್ಯವಾಗಿ ಬೇಕಾಗಿರುವ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಇತ್ಯರ್ಥಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

    ಕ್ರೀಡೆಗಳು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರು ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆ ಎಂಬುದನ್ನು ಗುರ್ತಿಸಿ ಉತ್ತಮ ಕ್ರೀಡಾಪಟುಗಳನ್ನಾಗಿ ಮಾಡಬೇಕೆಂದು ಕರೆನೀಡಿದರು.

    ಆರೋಗ್ಯ ಮತ್ತು ಸದೃಢ ದೇಹಕ್ಕೆ ಕ್ರೀಡೆ ಬಹಳ ಮುಖ್ಯವಾಗಿದ್ದು, ಅದಕ್ಕಾಗಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ವಹಿಸಬೇಕೆಂದು ಕಿವಿಮಾತು ಹೇಳಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷರಾದ ಡಾ. ಕೆ.ಪಿ ಅಂಶುಮಂತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ ಶಿವಾನಂದಸ್ವಾಮಿ, ಡಯಟ್ ಉಪನಿರ್ದೇಶಕ ಸುಂದ್ರೇಶ್, ಡಿಡಿಪಿಐ ತಿಮ್ಮರಾಜು, ತಾಲ್ಲೂಕು ದೈಹಿಕ ಪರೀಕ್ಷಕರಾದ ಮಹೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪಾಲಾಕ್ಷಮೂರ್ತಿ, ಶಂಕರೇಗೌಡ, ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಸ್ವಾಗತಿಸಿದರು.

    The government’s aim is to provide good education to students.

  • ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ

    ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ

    ಚಿಕ್ಕಮಗಳೂರು: ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಜಟಿಲವಾಗಿರುವ ಡೀಮ್ಡ್ ಮತ್ತು ೪(೧) ಅಧಿಸೂಚನೆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸಲು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ನಿರ್ಧರಿಸಿದೆ ಎಂದು ಸಮಿತಿಯ ಜಿಲ್ಲಾ ಅಧ್ಯಕ್ಷ ಎಸ್.ವಿಜಯ್‌ಕುಮಾರ್ ಎಚ್ಚರಿಸಿದರು.

    ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಡೀಮ್ಡ್ ಫಾರೆಸ್ಟ್ ಪುನರ್ ಪರಿಶೀಲಿಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದೆ. ಎಸ್‌ಐಟಿ ಕಾರ್ಯವೈಖರಿ ಬಗ್ಗೆಯೇ ಸಾರ್ವಜನಿಕರಲ್ಲಿ ಗೊಂದಲಗಳಿವೆ. ಎಸ್‌ಐಟಿ ತನಿಖಾ ವ್ಯಾಪ್ತಿಯನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

    ಕಳೆದ ಮಾರ್ಚ್ ತಿಂಗಳಲ್ಲಿ ಎಸ್‌ಐಟಿ ರಚನೆಗೆ ಆದೇಶಿಸಿದ್ದು, ನವೆಂಬರ್ ಅಂತ್ಯದೊಳಗೆ ಡೀಮ್ಡ್ ಫಾರೆಸ್ಟ್‌ನ ಪರಿಷ್ಕೃತ ಪಟ್ಟಿಯ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ. ಆದರೆ, ಇತ್ತೀಚೆಗೆ ಎಸ್‌ಐಟಿ ರಚನೆಯಾಗಿದೆ. ಜಿಲ್ಲೆಯ ೫೨೯೦೦ ಹೆಕ್ಟೇರ್ ಪ್ರದೇಶದಲ್ಲಿರುವ ರೈತರ ಸಮಸ್ಯೆ, ಗ್ರಾ.ಪಂ ಅಗತ್ಯತೆ, ಸಾರ್ವಜನಿಕ ಸ್ಮಶಾನ, ಶಾಲೆ ಅಗತ್ಯತೆಗಳಂತಹ ಸಾರ್ವಜನಿಕ ಉಪಯೋಗಕ್ಕೆ ಬೇಕಾಗುವ ಪ್ರದೇಶಗಳನ್ನು ಗುರುತಿಸಬೇಕಿದೆ ಎಂದು ಹೇಳಿದರು.

    ನಿಗಧಿತ ಮರ ಇಲ್ಲದಿರುವ ಪ್ರದೇಶಗಳನ್ನು ಕೈಬಿಡುವುದು ಹಾಗೂ ಅರಣ್ಯ ಪರಿಭಾವಿತ ಪ್ರದೇಶಗಳನ್ನು ಡೀಮ್ಡ್ ಫಾರೆಸ್ಟ್‌ಗೆ ಸೇರಿಸಿ ಸಮೀಕ್ಷೆ ಮಾಡಿ ನವೆಂಬರ್ ಅಂತ್ಯದೊಳಗೆ ಸುಪ್ರೀಂಕೋರ್ಟಿಗೆ ನೈಜ ವರದಿ ನೀಡಬೇಕಿದೆ. ಇಷ್ಟು ಅಲ್ಪ ಅವಧಿಯಲ್ಲಿ ಈ ಕೆಲಸ ಸಾಧ್ಯವಾ ಎಂದು ಪ್ರಶ್ನಿಸಿದ ಅವರು, ಕನಿಷ್ಠ ೬ ತಿಂಗಳು ಕಾಲಾವಕಾಶ ಕೋರಿ ರಾಜ್ಯ ಸರಕಾರ ಸುಪ್ರೀಂಕೋರ್ಟಿಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

    ೪(೧) ಅಧಿಸೂಚನೆಯ ನಿಯಮಾವಳಿಗಳನ್ನು ಪಾಲಿಸದೆ ಮನಸೋ ಇಚ್ಛೆ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ನೊಟೀಫಿಕೇಶನ್ ಮಾಡಿರುವುದನ್ನು ಜುಲೈ ತಿಂಗಳಲ್ಲಿ ನಡೆದ ಉನ್ನತ ಅಧಿಕಾರಿಗಳು, ಕಂದಾಯ, ಅರಣ್ಯ ಸಚಿವರ ಸಭೆಯಲ್ಲಿ ಹೋರಾಟ ಸಮಿತಿಯ ಮುಖಂಡರು ಗಮನ ಸೆಳೆದಿದ್ದಾರೆ. ಇದಕ್ಕೆ ಪರಿಹಾರವನ್ನೂ ಕಂಡುಕೊಳ್ಳಲಾಗಿದೆ. ಅದರೆ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಸಮಸ್ಯೆ ಇನ್ನೂ ಜಟಿಲವಾಗಿದ್ದು, ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ಇತ್ತೀಚೆಗೆ ನಡೆದ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಎಚ್ಚರಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ಕೆ.ಕೆ.ರಘು, ರತೀಶ್, ಮಹೇಶ್ ಕೆರೆಮಕ್ಕಿ, ಪೂರ್ಣೇಶ್, ಈಶ್ವರ್, ಮಿಥುನ್, ಸತೀಶ್, ಕುಮಾರಸ್ವಾಮಿ ಮತ್ತಿತರರಿದ್ದರು.

    Boycott upcoming Gram Panchayat elections

  • ಜಿಲ್ಲಾ ಯುವಮೋರ್ಚಾ ವತಿಯಿಂದ ಪ್ರತಿಭಟನೆ

    ಜಿಲ್ಲಾ ಯುವಮೋರ್ಚಾ ವತಿಯಿಂದ ಪ್ರತಿಭಟನೆ

    ಚಿಕ್ಕಮಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಉಗ್ರಗಾಮಿಗಳಿಗೆ ಹಾಗೂ ಖೈದಿಗಳಿಗೆ ವಿಶೇ? ಸೌಲಭ್ಯ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಯುವಮೋರ್ಚಾ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಯಿತು.

    ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ನಗರದ ಅಜಾದ್ ವೃತ್ತದಲ್ಲಿ ಸಮಾವೇಶಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗೃಹಸಚಿವ ಡಾ. ಜಿ. ಪರಮೇಶ್ವರ್‌ರವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

    ಪರಪ್ಪನ ಅಗ್ರಹಾರ ಕಾರಗೃಹದಲ್ಲಿ ವಿಕೃತ ಕಾಮಿ ಉಮೇಶ್ ರೆಡ್ಡಿ, ಉಗ್ರಗಾಮಿಗಳು ಸೇರಿದಂತೆ ಅನೇಕ ಖೈದಿಗಳಿಗೆ ಮದ್ಯ, ಮಾಂಸ, ಸ್ಮಾರ್ಟ್ ಮೊಬೈಲ್, ಟಿವಿ, ಮಾದಕ ವಸ್ತುಗಳು ಸೇರಿದಂತೆ ವಿಶೇ? ಸೌಲಭ್ಯ ಒದಗಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.

    ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋ? ಕೊಟ್ಯಾನ್ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ದುಡ್ಡೊಂದಿದ್ದರೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲೂ ರೆಸಾರ್ಟ್ ರೀತಿಯ ಐ?ರಾಮಿ ಜೀವನ ಸಿಗುತ್ತದೆ ಎನ್ನುವುದಕ್ಕೆ ವೈರಲ್ ಆಗಿರುವ ವೀಡಿಯೊಗಳೇ ಸಾಕ್ಷಿಯಾಗಿದೆ. ನಿಜವಾಗಿಯೂ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆರೋಪಿಸಿದರು.

    ಎಸ್ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಪಿ ವೆಂಕಟೇಶ್ ಮಾತನಾಡಿ, ಚುನಾವಣೆಯ ಸಮಯದಲ್ಲಿ ನಾವು ರೈತರ, ದಲಿತರ, ಬಡವರ ಪರ ಎಂದ ರಾಜ್ಯ ಸರ್ಕಾರ ಇಂದು ರೈತರ, ಬಡವರ, ದಲಿತರ ವಿರೋಧಿಯಾಗಿ, ಉಗ್ರಗಾಮಿಗಳ, ಅತ್ಯಾಚಾರಿಗಳ, ದೇಶದ್ರೋಹಿಗಳ ಪರವಾಗಿದೆ ಎಂದು ಟೀಕಿಸಿದರು.

    ನಂತರ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

    ಪ್ರತಿಭಟನೆಯಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್‌ಗೌಡ, ಜಿಲ್ಲಾ ಉಪಾಧ್ಯಕ್ಷೆ ಅಂಕಿತಾ, ಜಿಲ್ಲಾ ಕಾರ್ಯದರ್ಶಿಗಳಾದ ಶಶಿ ಆಲ್ದೂರ್, ರಾಜೇಶ್, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಪು?ರಾಜ್, ಜಿಲ್ಲಾ ಮಹಿಳಾಮೋರ್ಚಾ ಅಧ್ಯಕ್ಷರಾದ ಜಸಂತಾ ಅನಿಲ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

    Protest by District Yuva Morcha

  • ದೈಹಿಕ ಶಿಕ್ಷಕರ ವರ್ಗಾಯಿಸದಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

    ದೈಹಿಕ ಶಿಕ್ಷಕರ ವರ್ಗಾಯಿಸದಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

    ಚಿಕ್ಕಮಗಳೂರು:  ತಾಲ್ಲೂಕಿನ ಮುಗುಳವಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

    ಇಂದು ಬೆಳಗ್ಗೆ ‘ಉಳಿಸಿ ಉಳಿಸಿ ನಮ್ಮ ಶಾಲೆ ಉಳಿಸಿ’ ಎಂಬ ಘೋಷಣೆಯೊಂದಿಗೆ ಆರಂಭವಾದ ಗ್ರಾಮಸ್ಥರ ಪ್ರತಿಭಟನೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಹೆಸರಿನಲ್ಲಿ ವರ್ಗಾವಣೆ ಮಾಡದೆ ಶಾಲೆಯ ದೈಹಿಕ ಶಿಕ್ಷಕ ಶೇಖರ್ ನಾಯ್ಕ ಅವರನ್ನು ಇಲ್ಲೇ ಮುಂದುವರೆಸುವಂತೆ ಒತ್ತಾಯಿಸಿದರು.

    ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮುಗುಳುವಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ರಘುನಂದನ್ ೧೯೨೯ ರಲ್ಲಿ ಪ್ರಾರಂಭವಾಗಿದ್ದ ಈ ಶಾಲೆ ಶೀಘ್ರದಲ್ಲೇ ಶತಮಾನೋತ್ಸವ ಆಚರಿಸಿಕೊಳ್ಳುವ ವಸ್ತಿಲಿನಲ್ಲಿರುವ ಇಂತಹ ಉನ್ನತ ಶಾಲೆಯ ಶಿಕ್ಷಕರನ್ನು ಶಿಕ್ಷಣ ನೀತಿ ಹೆಸರಿನಲ್ಲಿ ವರ್ಗಾವಣೆ ಮಾಡಿರುವುದನ್ನು ಖಂಡಿಸಿದರು.

    ಶಿಕ್ಷಕರನ್ನು ಇಲ್ಲೇ ಉಳಿಸುವಂತೆ ಒತ್ತಾಯಿಸಿ ಕಳೆದ ೨ ತಿಂಗಳಿಂದ ಶಾಸಕರು, ಡಿಡಿಪಿಐ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೈಹಿಕ ಶಿಕ್ಷಣ ಶೇಖರ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಲೆಗೆ ದಾಖಲಾತಿ ಕಡಿಮೆ ಇದ್ದ ಸಂದರ್ಭದಲ್ಲಿ ಪ್ರಸ್ತುತ ಎಲ್‌ಕೆಜಿ, ಯುಕೆಜಿ ಸಹಿತ ೮೮ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದರು.

    ದೈಹಿಕ ಶಿಕ್ಷಕ ಶೇಖರ್ ನಾಯ್ಕ ಅವರು ಕಳೆದ ೨೨ ವರ್ಷಗಳಿಂದ ಶಾಲೆಯಲ್ಲಿ ಗ್ರಾಮಸ್ಥರೊಂದಿಗೆ ವಿಶ್ವಾಸವಿಟ್ಟುಕೊಂಡು ಶ್ರಮಿಸುತ್ತ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಮೂವರು ಶಿಕ್ಷಕರು ನಿವೃತ್ತಿಯಾಗಿದ್ದಾರೆಂದು ವಿವರಿಸಿದರು.

    ಶಿಕ್ಷಣ ನೀತಿಯ ಹೆಸರಿನಲ್ಲಿ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡುತ್ತಿರುವುದು ಶಾಲೆಯ ಉಳಿವಿಗೋ ಎಂಬುದು ತಿಳಿಯುತ್ತಿಲ್ಲ. ಹಾಲಿ ಇರುವ ಇಬ್ಬರು ಶಿಕ್ಷಕರಿಗೆ ಗ್ರಾಮಸ್ಥರ ಬಗ್ಗೆ ಸಂಪರ್ಕದ ಕೊರತೆ ಇದೆ. ಜೊತೆಗೆ ಎಲ್ಲಾ ರೀತಿಯಲ್ಲೂ ಶಾಲೆ ಉಳಿಸಲು ಶ್ರಮಿಸುತ್ತಿರುವ ಶೇಖರ್ ನಾಯ್ಕ ಅವರನ್ನು ಇಲ್ಲೇ ಉಳಿಸಬೇಕು ಎಂದು ಒತ್ತಾಯಿಸಿದರು.

    ಮಾನವೀಯತೆಯ ಉದ್ದೇಶದೊಂದಿಗೆ ೩೨ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಕರ ವರ್ಗಾವಣೆಯನ್ನು ರದ್ದುಮಾಡಬೇಕು ಹಾಗೂ ಸರ್ಕಾರಿ ಶಾಲೆಯನ್ನು ಉಳಿಸಲು ಶಿಕ್ಷಣ ಸಚಿವ ಮಧುಬಂಗಾರಪ್ಪನವರು ಮುಂದಾಗಬೇಕೆಂದು ಮನವಿ ಮಾಡಿದರು.

    ಗ್ರಾಮಸ್ಥರಾದ ಪರಮೇಶ್ವರಪ್ಪ ಮಾತನಾಡಿ, ಖಾಸಗಿ ಶಾಲೆಗಳೊಂದಿಗೆ ಶಿಕ್ಷಕರು ಶಾಮೀಲಾಗಿರುವ ಪರಿಣಾಮ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದ ನಮ್ಮ ಪೂರ್ವಿಕರು ಈ ಶಾಲೆಗೆ ನಿವೇಶನ ನೀಡಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೃತಿ ಉಮೇಶ್, ಉಪಾಧ್ಯಕ್ಷರಾದ ಮಲ್ಲೇಶ್, ಗ್ರಾಮಸ್ಥರಾದ ಉಮೇಶ್, ಆನಂದ್, ಪರಮೇಶ್, ರೇವಣ್ಣ, ವಿಜಯ್‌ಕುಮಾರ್, ವಾಸು, ರಂಗಸ್ವಾಮಿ, ಸಂತೋಷ್, ಬಸವರಾಜು, ರಂಗಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    Villagers protest demanding that the physical education teacher not be transferred

  • ವನ್ಯಜೀವಿ-ಮಾನವ ಸಂಘರ್ಷ ಶೀಘ್ರವೇ ಸಿಎಂ ನೇತೃತ್ವದಲ್ಲಿ ಸಭೆ

    ವನ್ಯಜೀವಿ-ಮಾನವ ಸಂಘರ್ಷ ಶೀಘ್ರವೇ ಸಿಎಂ ನೇತೃತ್ವದಲ್ಲಿ ಸಭೆ

    ಬೆಂಗಳೂರು: ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಾಡಿನೊಳಗಿರುವ ಜನವಸತಿಗಳನ್ನು ಸ್ಥಳಾಂತರಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

    ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾರ್ಕಳ ವ್ಯಾಪ್ತಿಯ ನಿವಾಸಿಗಳ ಪುನರ್ಸವತಿ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ 2005ರ ಸರ್ಕಾರಿ ಸುತ್ತೋಲೆ ಪುನರ್ ಪರಿಶೀಲಿಸಿ ಮರು ಆದೇಶ ಮಾಡುವಂತೆ ಕೋರಿ ಶಾಸಕ ಟಿ.ಡಿ. ರಾಜೇಗೌಡ ನೇತೃತ್ವದ ನಿಯೋಗದಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

    ಹಿಂದೆ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಇದನ್ನು ನಿಯಂತ್ರಿಸಿದ್ದು, ಉತ್ತಮ ಪರಿಸರವಿರುವುದರಿಂದ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಹೆಚ್ಚುತ್ತಿರುವ ವನ್ಯಜೀವಿಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚುತ್ತಿಲ್ಲ ಇದರಿಂದ ಸಮಸ್ಯೆ ಉಲ್ಬಣಿಸುತ್ತಿದೆ ಎಂದರು.

    1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಇದ್ದ ಹುಲಿಗಳ ಸಂಖ್ಯೆ ಇಂದು 170ಕ್ಕೂ ಹೆಚ್ಚಾಗಿದೆ, ಹೀಗಾಗಿ ದುರ್ಬಲ ಹುಲಿಗಳು ಕಾಡಿನಿಂದ ಹೊರಬರುತ್ತಿವೆ. ಹಗಲು ರಾತ್ರಿ ಇಲಾಖೆ ಶ್ರಮಿಸುತ್ತಿದ್ದರು, ಮಾನವ-ವನ್ಯಜೀವಿ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಹೆಚ್ಚಿಸಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಯಲಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.

    ಅರಣ್ಯದೊಳಗಿರುವ ಜನವಸತಿಗಳನ್ನು ಸ್ಥಳಾಂತರದಿಂದ ಅರಣ್ಯವಾಸಿಗಳು ಮತ್ತು ಅವರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷವೂ ಕಡಿಮೆ ಆಗುತ್ತದೆ. ಸ್ಥಳಾಂತರಕ್ಕೆ ಪರಿಹಾರ ನೀಡಬೇಕಾಗುತ್ತದೆ. ಇದನ್ನು ಒಂದೇ ಬಾರಿಗೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಮಾಡಬೇಕಾಗುತ್ತದೆ. ಬಜೆಟ್ ನಲ್ಲಿ ಇದಕ್ಕೆ ಹಣ ಮೀಸಲಿಟ್ಟರೆ ಇದು ಸಾಧ್ಯವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

    Wildlife-human conflict meeting to be held soon under CM’s leadership

  • ಕಾರಾಗೃಹಗಳ ಜವಾಬ್ದಾರಿ ಕೇಂದ್ರ ಗೃಹ ಇಲಾಖೆ ನಿರ್ವಹಿಸಲು ಮನವಿ

    ಕಾರಾಗೃಹಗಳ ಜವಾಬ್ದಾರಿ ಕೇಂದ್ರ ಗೃಹ ಇಲಾಖೆ ನಿರ್ವಹಿಸಲು ಮನವಿ

    ಚಿಕ್ಕಮಗಳೂರು:  ಕಾರಾಗೃಹಗಳ ಅಕ್ರಮ ಚಟುವಟಿಕೆ ನಿಯಂತ್ರಣ, ಭಯೋತ್ಪಾದ ಕರಿಗೆ ಮತ್ತು ನಕ್ಸಲೀಯರಿಗೆ ಪ್ರತ್ಯೇಕ ಕಾರಾಗೃಹಗಳನ್ನು ತೆರೆದು ಕೇಂದ್ರ ಗೃಹ ಇಲಾಖೆಯೇ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಮುಖಂಡರುಗಳು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಮುಖಾಂತರ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

    ಈ ವೇಳೆ ಮಾತನಾಡಿದ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ರಾಷ್ಟ್ರದ ವಿರುದ್ಧ ಸಂಚು ರೂಪಿಸಿರುವ ಉಗ್ರರು ಮತ್ತು ದುಕೃತ್ಯವೆಸಗಿ ಸೆರೆವಾಸ ಅನುಭವಿಸುತ್ತಿರುವ ಕಾರಾಬಂದಿಗಳು ಕುಣಿ ದು ಕುಪ್ಪಳಿಸಲು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಮೋಜಿನ ತಾಣವಾಗುತ್ತಿದೆ ಎಂದು ದೂರಿದರು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಹಳಷ್ಟು ಹದೆಗಟ್ಟಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕರ್ನಾ ಟದ ಕಾರಾಗೃಹಗಳು ಐಷರಾಮಿ ಕೊಠಡಿಗಳನ್ನಾಗಿಸಿ ಸರ್ಕಾರ ದುರಾಡಳಿತವನ್ನು ನಡೆಸುತ್ತಿದೆ. ಅಲ್ಲದೇ ಪರಪ್ಪನ ಜೈಲು ಪ್ರಸ್ತುತ ದಿನಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಕೇಂದ್ರಗಳಾಗಿ ಖೈದಿಗಳಿಗೆ ಮನರ ಂಜನೆಯ ಕೇಂದ್ರವಾಗುತ್ತಿದೆ ಎಂದು ಆರೋಪಿಸಿದರು.

    ರಾಷ್ಟ್ರದ್ರೋಹಿ, ಅತ್ಯಾಚಾರಿ, ಉಗ್ರಗ್ರಾಮಿ ಹಾಗೂ ಕಳ್ಳಸಾಗಾಣೆದಾರರು ಕಾರಾಗೃಹಗಳಿಂದ ಐಶರಾಮಿ ಸೌಲಭ್ಯವನ್ನು ಪಡೆದುಕೊಂಡು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ಕಾರಾಗೃಹವು ಖೈದಿಗಳ ಮನ ಪರಿವರ್ತಿಸುವ ಕೇಂದ್ರಗಳಾಗಬೇಕು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಉಗ್ರತಾಣಗಳ ಕ್ಲಬ್‌ಗಳಾಗುತ್ತಿರುವು ದು ನಾಚಿಕೇಡಿತನ ಸಂಗತಿ ಎಂದು ಹೇಳಿದರು.

    ರಾಜ್ಯದ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆ, ಮೊಬೈಲ್ ಬಳಕೆ, ಉನ್ನತ ಸೌಲಭ್ಯಗಳನ್ನು ಖೈದಿಗಳು ಬಳಸುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗಿವೆ. ಅಲ್ಲದೇ ಭಯೋತ್ಪಾದಕ ಚಟುವಟಿಕೆ ಆರೋಪದಲ್ಲಿ ಬಂಧಿಯಾಗಿರುವ ಆರೋಪಿ ಅತ್ಯಂತ ಹೆಚ್ಚು ಸೌಕರ್ಯ ಪಡೆಯುತ್ತಿರುವುದು ದೇಶಕ್ಕೆ ದೊಡ್ಡ ಆತಂತಕಾರಿ ಬೆಳವಣಿಗೆ ಎಂದು ತಿಳಿಸಿದರು.

    ಸಾಮಾನ್ಯ, ಭಯೋತ್ಪಾದಕ ಹಾಗೂ ನಕ್ಸಲ್‌ನ ಖೈದಿಗಳು ಒಂದೇ ಕೊಠಡಿಯಲ್ಲಿರುವುದು ಮುಂದಿನ ದಿನಗಳಲ್ಲಿ ದೇಶದ ಅವನತಿಗೆ ಕಾರಣವಾಗುತ್ತಿದೆ. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ಸ್ಮಾರ್ಟ್ ಪೋನ್ ಬಳಕೆ ವೀಡೀಯೋ ಮಾಧ್ಯಮದಲ್ಲಿ ಪ್ರಸಾರಗೊಂಡಿದ್ದು ಈ ವರದಿ ಆಧರಿಸಿ ಪ್ರಕರಣವನ್ನು ಎನ್. ಐ.ಎ. ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

    ಕೂಡಲೇ ಕೇಂದ್ರ ಗೃಹ ಇಲಾಖೆ ಭಯೋತ್ಪಾದಕ ಚಟುವಟಿಕೆ ಹಾಗೂ ನಕ್ಸಲ್ ಹೋರಾಟದಲ್ಲಿ ಭಾಗಿ ಯಾದವರಿಗೆ ಪ್ರತ್ಯೇಕ ಕಾರಾಗೃಹ ತೆರೆಯಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಯುವಮೋ ರ್ಚಾ ಜಿಲ್ಲಾ ಕಾರ್ಯದರ್ಶಿ ರಾಜೇಶ್, ಉಪಾಧ್ಯಕ್ಷೆ ಅಂಕಿತ, ನಗರ ಮಂಡಲ ಅಧ್ಯಕ್ಷ ಜೀವನ್‌ಕೋಟೆ, ಮುಖಂಡರುಗಳಾದ ಸಂಗೀತ ಪ್ರಸಾದ್, ಪುನೀತ್, ತಿಲಕ್‌ಅರಸ್, ಕಾರ್ತೀಕ್ ಹಾಜರಿದ್ದರು.

    Appeal to the Central Home Department to take responsibility for prisons