Category: ಕ್ರೈಂ

  • ದೇವಾಲಯಗಳಲ್ಲಿ ಕಳವು ವ್ಯಕ್ತಿ ಸೆರೆ: ೧ ಲಕ್ಷ ರೂ.ವಶ

    ದೇವಾಲಯಗಳಲ್ಲಿ ಕಳವು ವ್ಯಕ್ತಿ ಸೆರೆ: ೧ ಲಕ್ಷ ರೂ.ವಶ

    ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂಟು ಪ್ರಕರಣಗಳಲ್ಲಿಆರೋಪಿಯನ್ನು ಬಂಧಿಸಿರುವ ಪೊಲೀಸರು ಒಂದು ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ

    ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ್ ಅಮಟೆ, ಉಪಪೊಲೀಸ್ ಮುಖ್ಯಾಧಿಕಾರಿ ಹೆಚ್.ಎಂ.ಶೈಲೇಂದ್ರ,ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ವಿ.ಎಸ್.ಹಾಲಮೂರ್ತಿರಾವ್ ಇವರುಗಳ ಮಾರ್ಗದರ್ಶನದಲ್ಲಿ ಕಡೂರು ವೃತ್ತನಿರೀಕ್ಷಕ ರಫೀಕ್ ನೇತೃತ್ವದಲ್ಲಿ ಜಿಲ್ಲಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ತಂಡವನ್ನು ರಚಿಸಲಾಗಿತ್ತು.

    ಕಾರ್ಯಪ್ರವೃತ್ತವಾದ ತಂಡವು ವಿವಿಧ ಆಯಾಮಗಳಿಂದ ಮಾಹಿತಿ ಕಲೆ ಹಾಕಿ ವೈಜ್ಞಾನಿಕ ತನಿಖೆ ನಡೆಸಿ ಆರೋಪಿ ಬಳ್ಳಾರಿ ನಗರ ಈಗ ಚಿಕ್ಕಮಗಳೂರು ನಗರದ ಟಿಪ್ಪುನಗರದಲ್ಲಿ ವಾಸವಾಗಿದ್ದ ಮೊಹಮ್ಮದ್ ಸಾಂ ಸದ್ದಾಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈತನ ಮೇಲೆ ಈ ಹಿಂದೆ ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವುದು ಕಂಡುಬಂದಿರುತ್ತದೆ.

    ಈ ವ್ಯಕ್ತಿಯ ತನ್ನ ಸಹಚರನೊಂದಿಗೆ ಕಡೂರು, ಯಗಟಿ, ಬೀರೂರು, ಸಖರಾಯಪಟ್ಟಣ, ಅಜ್ಜಂಪುರ, ಚಿಕ್ಕಮಗಳೂರು ನಗರ, ಬಸವನಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಲವಾರು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್, ಕಳ್ಳತನ ಮಾಡಿದ್ದ ಕಾಣಿಕೆ ಹುಂಡಿ ಮತ್ತು ವಿವಿಧ ಮುಖಬೆಲೆಯ ಚಿಲ್ಲರೆ ಹಣವನ್ನು ವಶಕ್ಕೆ ಪಡೆಯಲಾಗಿದೆ.

    ಇವುಗಳ ಒಟ್ಟು ಮೌಲ್ಯ ಸುಮಾರು ೧ ಲಕ್ಷ, ರೂ.ಗಳಾಗಿದೆ. ಈತನ ಬಂಧನದಿಂದ ಕಡೂರು ಠಾಣೆಯಲ್ಲಿ ೧ ಕಳ್ಳತನ ಪ್ರಕರಣ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿದ ಪೊಲೀಸ್ ಠಾಣೆಗ ಲ್ಲಿ ದಾಖಲಾಗಿದ್ದ ೭ ಪ್ರಕರಣಗಳು ಸೇರಿದಂತೆ ಒಟ್ಟು ೮ ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.

    ಆರೋಪಿ ಪತ್ತೆಕಾರ್ಯದಲ್ಲಿ ಕಡೂರು ಪೊಲೀಸ್ ಠಾಣೆಯ ಪಿಎಸ್‌ಐ ಸಿ.ಸಿ.ಪವನ್‌ಕುಮಾರ್, ಡಿ.ಹೆಚ್.ಧನಂಜಯ್, ಲೀಲಾವತಿ ಮತ್ತು ಸಿಬ್ಬಂದಿಗಳಾದ, ಕುಚೇಲ, ಮಧುಕುಮಾರ್, ಬಿ.ಸಿ. ಹರೀಶ್, ಧನಪಾಲ್ ನಾಯ್ಕ, ಸ್ವಾಮಿ, ಪರಮೇಶ್, ರಬ್ಬಾನಿ ಮತ್ತು ನಯಾಜ್ ತಾಂತ್ರಿಕ ವಿಭಾಗದ ಡಿ ಪಿ ಓ. ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿರುತ್ತಾರೆ.

    ಪ್ರಕರಣಗಳಲ್ಲಿ ಯಶಸ್ವಿಯಾಗಿ ಆರೋಪಿಯನ್ನು ಪತ್ತೆ ಮಾಡಿ ಕದ್ದ ಮಾಲನ್ನು ವಶಕ್ಕೆ ಪಡೆದು ಜಿಲ್ಲೆಯ ಒಟ್ಟು ೦೮ ಪ್ರಕರಣಗಳನ್ನು ಭೇದಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಶ್ರಮಿಸಿದ ಅಪರಾಧ ಪತ್ತೆ ತಂಡದ ಅಧಿಕಾರಿ ಸಿಬ್ಬಂದಿಯವರನ್ನು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಚಿಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.

    Man arrested for stealing from temples: Rs 1 lakh seized

  • ಎಸ್‌ಸಿಎಸ್‌ಟಿ/ಟಿಎಸ್‌ಪಿ ಹಣ ದಲಿತರ ಅಭಿವೃದ್ಧಿಗೆ ಬಳಸುವಂತೆ ಆಗ್ರಹಿಸಿ ಪ್ರತಿಭಟನೆ

    ಎಸ್‌ಸಿಎಸ್‌ಟಿ/ಟಿಎಸ್‌ಪಿ ಹಣ ದಲಿತರ ಅಭಿವೃದ್ಧಿಗೆ ಬಳಸುವಂತೆ ಆಗ್ರಹಿಸಿ ಪ್ರತಿಭಟನೆ

    ಚಿಕ್ಕಮಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಬಳಸಲು ಹಿಂದಿರುಗಿಸಬೇಕೆಂದು ಆಗ್ರಹಿಸಿ ಇಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.

    ಇಂದು ಬೆಳಗ್ಗೆ ನಗರದ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ೨೦೧೩-೧೪ ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಕಾಯಿದೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿದ ಯೋಜನೆ ಎಂದರು.

    ಅಭಿವೃದ್ಧಿಯ ಅಂತರ ಅಂದರೆ ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎಂದು ವ್ಯಾಖ್ಯಾನಿಸಲಾಗಿದ್ದು, ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ ಎಂದು ಹೇಳಿದ್ದಾರೆ.

    ೨೦೧೫ ರ ಮಾನವ ಅಭಿವೃದ್ಧಿ ವರದಿ ಪ್ರಕಾರ ಇತರ ಸಮುದಾಯಗಳಿಗೆ ಹೋಲಿಸಿದರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅಭಿವೃದ್ಧಿಗಿಂತಲು ದಲಿತರು ಕಡಿಮೆ ಅಭಿವೃದ್ಧಿ ಹೊಂದಿರುವುದು, ಹೀಗಿರುವಾಗ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಅಸಮಾನತೆಯ ಅಂತರವನ್ನು ಕಡಿಮೆ ಮಾಡುವ ಯೋಜನೆಗಳಲ್ಲಿ ವಿನಿಯೋಗಿಸಬೇಕೆಂದು ಒತ್ತಾಯಿಸಿದರು.

    ರಾಜ್ಯಸರ್ಕಾರ ೨೫ ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ, ೧೫ ಸಾವಿರ ಕೋಟಿಯನ್ನು ಅನ್ಯ ಉದ್ದೇಶಕ್ಕೆ ಬಳಸಿರುವುದು ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನು ಸರ್ಕಾರ ಮಾಡಿದೆ ಎಂದು ದೂರಿದರು.

    ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡಿರುವುದು ದಲಿತ ಸಮುದಾಯಗಳಿಗೆ ಬಗೆದ ಮಹಾ ದ್ರೋಹ ಎಂದು ದೂರಿದ ಅವರು, ಸರ್ಕಾರದ ಈ ನೀತಿಯನ್ನು ಖಂಡಿಸಿದ್ದಾರೆ.

    ಕೂಡಲೇ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಮೀಸಲಿಟ್ಟು, ದಲಿತರ ಅಭಿವೃದ್ಧಿಗೆ ಬಳಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಮರ್ಲೆ ಅಣ್ಣಯ್ಯ, ರಘು, ಕೃಷ್ಣಮೂರ್ತಿ, ಪುಟ್ಟಸ್ವಾಮಿ, ವಿರೂಪಾಕ್ಷ, ಮಂಜೇಗೌಡ ಮತ್ತಿತರರು ಭಾಗವಹಿಸಿದ್ದರು.

    Protest demanding SCST/TSP funds be used for Dalit development

  • ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

    ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

    ಕೊಟ್ಟಿಗೆಹಾರ : ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಬಂಧಿಸಲಾಗಿದೆ.
    ಅಬಕಾರಿ ಉಪ ಆಯುಕ್ತರು, ಚಿಕ್ಕಮಗಳೂರು ಜಿಲ್ಲೆ, ಇವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕರು, ಮೂಡಿಗೆರೆ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಯಿತು. ವಜೀರ್ ಅಹ್ಮದ್ ಅಲಿಯಾಸ್ ಶೇಕ್ ಅಬ್ದುಲ್ಲ ಬಿನ್ ಲೇಟ್ ಅಲಿಜಾನ್ (27), ಜೆಎಂ ರಸ್ತೆ, ಮೂಡಿಗೆರೆ ಎಂಬುವವನು ತನ್ನ ವ್ಯಾಗನಾರ್ ಕಾರು (ನಂ. ಕೆಎ 19 ಎನ್ 5049) ನಲ್ಲಿ 1.975 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ.
    ಆರೋಪಿಯನ್ನು ಎನ್‌ಡಿಪಿಎಸ್ (NDPS) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
    ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕರಾದ ಶೇಖರ್ ಎಂ.ಆರ್, ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಸಿಬ್ಬಂದಿಗಳಾದ ರಮೇಶ್ ತುಳಜಣ್ಣನವರ್, ಶಂಕರ ಗುರವ ಹಾಗೂ ವಾಹನ ಚಾಲಕರಾದ ಪ್ರವೀಣ್ ಅವರು ಭಾಗವಹಿಸಿದ್ದರು. ಪ್ರಕರಣವನ್ನು ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಮೂಡಿಗೆರೆ ಉಪ ವಿಭಾಗ ಇವರು ದಾಖಲಿಸಿದ್ದಾರೆ.
    Illegal marijuana trafficking – Youth arrested in Mudigere
  • ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬದಲಿ ವಾಹನ ಅಪಘಾತ

    ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬದಲಿ ವಾಹನ ಅಪಘಾತ

    ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರಯಾಣ ನಡೆಸುತ್ತಿದ್ದ ಕಾರಿನ ಹಿಂಬದಿ ಸಾಗುತ್ತಿದ್ದ ಪರ್ಯಾಯ ವಾಹನಕ್ಕೆ ಹಿಂಬದಿಯಿಂದ ಲಾರಿ ಗುದ್ದಿ ಅಪಘಾತ ಸಂಭವಿಸಿರುವ ಘಟನೆ ತಾಲೂಕಿನ ಲಕ್ಯಾ ಕ್ರಾಸ್ ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

    ಚಿಕ್ಕಮಗಳೂರಿನಲ್ಲಿ ನಡೆದ ಬಸವ ತತ್ವ ಪೀಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿ ವೈ ವಿಜಯೇಂದ್ರ ಅವರು ತಮ್ಮ ಬೆಂಗಾವಲು ವಾಹನ ಹಾಗೂ ಪರ್ಯಾಯ ವಾಹನದೊಂದಿಗೆ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿದ್ದರು.

    ಈ ವೇಳೆ ಲಕ್ಯ ಕ್ರಾಸ್ ಬಳಿ ಪರ್ಯಾಯ ವಾಹನಕ್ಕೆ ಹಿಂಬದಿಯಿಂದ ಬಂದ ಲಾರಿ ಗುದ್ದಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ.

    ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    BJP state president B Y Vijayendra substitute vehicle accident

  • ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

    ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

    ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಿಂದ ಕಾರ್ಮಿಕರು, ತೋಟಗಳ ಮಾಲೀಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಳಸ ತಾಲೂಕು ಹಳುವಳ್ಳಿ ಸಮೀಪದ ಲಲಿತಾದ್ರಿ ಗ್ರಾಮದ ರಘುಪತಿ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ತಿವಿದು ಮೃತಪಟ್ಟ ಬೆನ್ನಲ್ಲೆ ತಣಗೆಬೈಲು ವನ್ಯಜೀವಿ ವ್ಯಾಪ್ತಿಯ ಕತ್ಲೆಖಾನ್ ಎಸ್ಟೇಟ್‌ನಲ್ಲಿ ಕಾಫಿ ಕೊಯ್ಯಲು ತೆರಳುತ್ತಿದ್ದ ವಿನೋಬ ಬಾಯಿ (೪೦) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ್ದು ಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

    ನರಸಿಂಹರಾಜಪುರ ತಾಲೂಕು ತರೀಕೆರೆ ಅರಣ್ಯ ವ್ಯಾಪ್ತಿಯಲ್ಲಿನ ಭದ್ರಾ ಅರಣ್ಯ ವಲಯಕ್ಕೆ ಸೇರಿದ ಕತ್ಲೇಖಾನ್ ಎಸ್ಟೇಟ್‌ನಲ್ಲಿ ಕಾಫಿ ಕೊಯ್ಲು ಮಾಡಲು ತೆರಳುತ್ತಿದ್ದ ವಿನೋಬ ಬಾಯಿ ಅವರ ಮೇಲೆ ಕಾಡಾನೆ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಕಾರ್ಮಿಕ ಮಹಿಳೆ ಜತೆ ಇಬ್ಬರು ಮಹಿಳೆಯರಿದ್ದು, ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮೃತ ಮಹಿಳೆ ವಿನೋಬ ಬಾಯಿ ಹರಪನಹಳ್ಳಿ ತಾಲೂಕಿನ ಶಿವಪುರ ಗ್ರಾಮಕ್ಕೆ ಸೇರಿದವರಾಗಿದ್ದು, ಉದ್ಯೋಗ ಅರಸಿ ಚಿಕ್ಕಮ ಗಳೂರು ಜಿಲ್ಲೆಗೆ ಬಂದಿದ್ದರು. ಶನಿವಾರ ಬೆಳಿಗ್ಗೆ ನಡೆದ ಘಟನೆಯಿಂದ ಕಾರ್ಮಿಕ ಮಹಿಳೆ ಮೃತಪಟ್ಟಿದ್ದಾಳೆ. ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಿಂದ ಕಾರ್ಮಿಕರು, ತೋಟಗಳ ಮಾಲೀಕರು ಪ್ರಾಣಕಳೆದುಕೊಳ್ಳುತ್ತಿದ್ದು, ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇತ್ತೀಚಿನ ವರ್ಷಗಳಲ್ಲಿ ಕಾಡಾನೆ ದಾಳಿಯಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ೨೦೧೮ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ೧೮ ಜನ ಕಾಡಾನೆ ದಾಳಿಗೆ ಸಲುಕಿ ಮೃತಪಟ್ಟಿದ್ದಾರೆ. ಇನ್ನೂ ಅನೇಕರು ವನ್ಯಜೀವಿಗಳ ದಾಳಿಗೆ ಸಿಲುಕಿ ಅಂಗಾಂಗಳನ್ನು ಕಳೆದುಕೊಂಡು ನರಕ ಸದೃಶ್ಯ ಜೀವನ ನಡೆಸುತ್ತಿದ್ದಾರೆ. ಘಟನೆ ನಡೆಸದ ಸಂದರ್ಭದಲ್ಲಿ ಅರಣ್ಯ ಇಲಾಖೆ ಮೃತ ಕುಟುಂಬಕ್ಕೆ ಪರಿಹಾರ ನೀಡಿ ಕೈ ತೊಳೆದುಕೊಳ್ಳುತ್ತದೆ ಹೊರತು ವನ್ಯಜೀವಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗುತ್ತಿಲ್ಲವೆಂಬ ಆರೋಪ ಪದೇ ಪದೇ ಕೇಳಿ ಬರುತ್ತಿದೆ.

    ಪರಿಹಾರದ ಚಕ್ ವಿತರಣೆ: ಕತ್ಲೆಖಾನ್ ಎಸ್ಟೇಟ್‌ನಲ್ಲಿ ಕಾಫಿ ಕೊಯ್ಯಲು ತೆರಳುತ್ತಿದ್ದ ವಿನೋಬ ಬಾಯಿ (೪೦) ಎಂಬುವರ ಮೇಲೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾಳೆ ಕಾರ್ಮಿಕ ಮಹಿಳೆಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ಶಾಸಕರಾದ ಟಿ.ಡಿ.ರಾಜೇಗೌಡ ಹಾಗೂ ಜಿ.ಎಚ್.ಶ್ರೀನಿವಾಸ್ ೧೫ ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿ ಸಂತ್ವಾನ ಹೇಳಿದರು.

    Woman worker killed in wild attack

     

     

  • ಹುಲಗಾರುಬೈಲು ಅರಣ್ಯದಲ್ಲಿ ನಾಡ ಬಂದೂಕು ಪತ್ತೆ

    ಹುಲಗಾರುಬೈಲು ಅರಣ್ಯದಲ್ಲಿ ನಾಡ ಬಂದೂಕು ಪತ್ತೆ

    ಚಿಕ್ಕಮಗಳೂರು: ಹುಲಗಾರುಬೈಲು ಅರಣ್ಯದಲ್ಲಿ ಬಂದೂಕು ಪತ್ತೆಯಾಗಿದ್ದು, ಶರಣಾದ ನಕ್ಸಲರು ಎಸೆದಿರುವ ಶಂಕೆ ವ್ಯಕ್ತವಾಗಿದೆ.

    ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಗಾರುಬೈಲು ಅರಣ್ಯದ ನಡುವೆ ಒಂದು ನಾಡ ಬಂದೂಕು, ೧೮ ಖಾಲಿ ಕಾಟ್ರೇಜ್ ಪತ್ತೆಯಾಗಿದ್ದು, ಇದರ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಕ್ಸಲರ ಶರಣಾಗತಿ ಬೆನ್ನಲ್ಲೇ ಕಾಡಿನಲ್ಲಿ ಬಂದೂಕು ಪತ್ತೆಯಾಗಿದೆ.

    ಫೆಬ್ರವರಿ ೧ ರಂದು ನಕ್ಸಲ್ ಕೋಟೆಹೊಂಡ ರವೀಂದ್ರ ಶಸ್ತ್ರ ರಹಿತವಾಗಿ ಶರಣಾಗತಿಯಾಗಿದ್ದ. ರವೀಂದ್ರ ಬಳಿ ಇದ್ದ ಶಸ್ತ್ರ ಇದೀಗ ಪತ್ತೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶರಣಾಗತಿ ಮುನ್ನ ರವೀಂದ್ರ ಕಾಡಿನಲ್ಲಿ ಎಸೆದಿರಬಹುದು ಎನ್ನಲಾಗುತ್ತಿದೆ.

    ಶೃಂಗೇರಿ ಪೊಲೀಸರು ನಾಡ ಬಂದೂಕು ಸೇರಿದಂತೆ ೧೮ ಖಾಲಿ ಕಾಟ್ರೇಜ್ ವಶಕ್ಕೆ ಪಡೆದಿದ್ದಾರೆ. ನರಸಿಂಹ ರಾಜಪುರ ಠಾಣಾ ವ್ಯಾಪ್ತಿಯಲ್ಲೂ ಈ ಹಿಂದೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಕಾಡಿನ ನಡುವೆ ಭೂಮಿಯೊಳಗೆ ಹೂತುಹಾಕಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು.

    ಈ ವೇಳೆ ಎಕೆ ೫೬ ಸೇರಿದಂತೆ ೬ ಬಂದೂಕು ಜೀವಂತ ಮದ್ದುಗುಂಡು ಪತ್ತೆಯಾಗಿದ್ದವು.

    ಹುಲುಗಾರು ಬೈಲಿನ ಕಾಡಿನಲ್ಲಿ ಪತ್ತೆಯಾಗಿರುವ ಒಂಟಿನಳಿಕೆ ಬಂದೂಕು ಶಿಕಾರಿಗೆಂದು ಬಂದವರು ಬಿಟ್ಟುಹೋಗಿದ್ದಾರೆಯೋ ಅಥವಾ ಇತ್ತೀಚೆಗೆ ಶಸ್ತ್ರರಹಿತವಾಗಿ ಶರಣಾಗಿರುವ ನಕ್ಸಲ್ ರವೀಂದ್ರ ಎಸೆದಿರುವ ಬಂದೂಕು ಎಂಬುದು ತನಿಖೆಯಿಂದ ತಿಳಿಯಬೇಕಿದೆ.

    ಶರಣಾಗತಿಯಾದ ರವೀಂದ್ರ ಹೇಳಿದ್ದು, ನನ್ನ ಬಳಿ ಶಸ್ತ್ರ ಇಲ್ಲವೆಂದು ಇದು ಯಾರಿಗೆ ಸೇರಿರಬಹುದೆಂಬುದು ತಿಳಿಯದಾಗಿದೆ.

    Gun found in Hulagarubailu forest

     

  • ನಕ್ಸಲ್ ಮುಖಂಡ ಶೃಂಗೇರಿಯ ಕೋಟೆಹೊಂಡ ರವೀಂದ್ರ ಜಿಲ್ಲಾಡಳಿತದೆದುರು ಶರಣು

    ನಕ್ಸಲ್ ಮುಖಂಡ ಶೃಂಗೇರಿಯ ಕೋಟೆಹೊಂಡ ರವೀಂದ್ರ ಜಿಲ್ಲಾಡಳಿತದೆದುರು ಶರಣು

    ಚಿಕ್ಕಮಗಳೂರು: ನಕ್ಸಲ್ ಮುಖಂಡ ಶೃಂಗೇರಿಯ ಕೋಟೆಹೊಂಡ ರವೀಂದ್ರ ಶನಿವಾರ ಜಿಲ್ಲಾಡಳಿತದೆದುರು ಶರಣಾಗತನಾಗಿದ್ದಾನೆ.

    ನಕ್ಸಲ್ ಶರಣಾಗತಿ ಪ್ರಕ್ರಿಯೆಯ ನೋಡಲ್ ಅಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ಮತ್ತು ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸದಸ್ಯ ಶ್ರೀಪಾಲ್ ಇತರರು ನಕ್ಸಲ್ ರವೀಂದ್ರನನ್ನು ಶೃಂಗೇರಿಯ ನೆಮ್ಮಾರಿನಿಂದ ಶನಿವಾರ ಬೆಳಗ್ಗೆ ಕರೆ ತಂದರು.

    ಮಧ್ಯಾಹ್ನ ೧ ಗಂಟೆ ಸುಮಾರಿಗೆ ನಗರಕ್ಕಾಗಮಿಸಿದ ಅವರನ್ನು ನೇರವಾಗಿ ಜಿಲ್ಲಾ ಪೊಲೀಸ್ ಕಚೇರಿಗೆ ಕರೆತಂದು ಎಸ್ಪಿ ಡಾ.ವಿಕ್ರಮ ಅಮಟೆ ಅವರ ಎದುರು ಹಾಜರುಪಡಿಸಲಾಯಿತು.

    ನಂತರ ಅವರನ್ನು ನಕ್ಸಲ್ ಶರಣಾಗತಿ ಸಮಿತಿ ಜಿಲ್ಲಾ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜು ಅವರ ಎದುರು ಹಾಜರುಪಡಿಸಲಾಯಿತು. ಈ ವೇಳೆ ಶರಣಾಗತಿ ಸಮಿತಿಯ ಸದಸ್ಯರುಗಳಾದ ಜಿ.ಪಂ. ಸಿಇಓ ಎಚ್.ಎಸ್.ಕೀರ್ತನಾ ಮತ್ತು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಇದ್ದರು.

    ನಂತರ ನಕ್ಸಲ್ ರವೀಂದ್ರನನ್ನು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಿವೈಎಸ್‌ಪಿ ಶೈಲೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

    ರವೀಂದ್ರನನ್ನು ಶೃಂಗೇರಿ ಜೆಎಂಎಫ್‌ಸಿ ನ್ಯಾಯಾಲಯದ ಎದುರು ಹಾಜರುಪಡಿಸಲಾಗುವುದು ಎಂದು ತಿಳಿಸಿದ ಎಸ್ಪಿ ಡಾ.ವಿಕ್ರಮ ಅಮಟೆ ಅವರು, ನಂತರ ಆತನನ್ನು ವಶಕ್ಕೆ ಪಡೆದು ಆತನ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ವಿಚಾರಣೆಗೊಳಪಡಿಸಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿವರಿಸಿದರು.

    ೨೦೦೭ ರಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯನಾಗಿದ್ದ ರವೀಂದ್ರನ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ೧೩ ಪ್ರಕರಣಗಳು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ ಒಟ್ಟು ೧೭ ಪ್ರಕರಣಗಳು ಹಾಗೂ ಹೊರ ರಾಜ್ಯಗಳಲ್ಲಿ ೧೦ ಪ್ರಕರಣಗಳು ದಾಖಲಾಗಿವೆ ಎಂದು ಎಸ್ಪಿ ತಿಳಿಸಿದರು.

    ೭.೫ ಲಕ್ಷ ರೂ. ಹಣ: ಜಿಲ್ಲಾಡಳಿತದ ಎದುರು ಶರಣಾಗಿರುವ ನಕ್ಸಲ್ ರವೀಂದ್ರ ರಾಜ್ಯ ಸರ್ಕಾರದ ಶರಣಾಗತಿ ಪ್ಯಾಕೇಜ್‌ನ ಎ ವರ್ಗಕ್ಕೆ ಸೇರಿದ್ದು, ಆತನಿಗೆ ೭.೫ ಲಕ್ಷ ರೂ. ಹಣ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ನಕ್ಸಲ್ ಶರಣಾಗತಿ ಸಮಿತಿಯ ಜಿಲ್ಲಾಧ್ಯಕ್ಷರೂ ಆದೆ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು.

    ನಕ್ಸಲ್ ರವೀಂದ್ರನ ಶರಣಾಗತಿ ಪ್ರಸ್ತಾವನೆಯನ್ನು ಅಂಗೀಕರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತ್ವರಿತಗತಿಯಲ್ಲಿ ರವೀಂದ್ರ ಶರಣಾಗತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು. ತಕ್ಷಣ ಪ್ರಸ್ತಾವನೆಯನ್ನು ರಾಜ್ಯ ಸಮಿತಿಗೆ ಕಳಿಸಲಾಗುವುದು ಅಲ್ಲಿಂದ ಅನುಮತಿ ಸಿಕ್ಕ ತಕ್ಷಣಕ್ಕೆ ರವೀಂದ್ರ ಅವರ ಖಾತೆಗೆ ೩ ಲಕ್ಷ ರೂ. ಹಣ ಜಮಾ ಮಾಡಲಾಗುವುದು. ಉಳಿದ ಹಣವನ್ನು ಮುಂದಿನ ಎರಡು ಕಂತುಗಳಗಲ್ಲಿ ನೀಡಲಾಗುವುದು ಎಂದು ಹೇಳಿದರು.

    ಆತ ಕೌಶಲ್ಯ ತರಬೇತಿ ಪಡೆಯಲು ಇಚ್ಛಿಸಿದಲ್ಲಿ ಮಾನ್ಯತೆ ಪಡೆದ ತರಬೇಕತಿ ಸಂಸ್ಥೆಗೆ ದಾಖಲಾದ ನಂತರ ಎರಡು ವರ್ಷಗಳ ವರೆಗೆ ಪ್ರತಿ ತಿಂಗಳಿಗೆ ೫ ಸಾವಿರ ರೂ.ಗಳಂತೆ ಪ್ರೋತ್ಸಾಹ ಧನ ನೀಡಲಾಗುದು ಹಾಗೂ ಔಪಚಾರಿಕ ಶಿಕ್ಷಣ ಪಡೆಯಲು ಎರಡು ವರ್ಷಗಳ ವರೆಗೆ ಈ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದರು.

    ಇತ್ತೀಚಿಗೆ ಮುಖ್ಯಮಂತ್ರಿಗಳ ಎದುರು ಶರಣಾಗಿರುವ ಆರು ಮಂದಿ ನಕ್ಸಲೀಯರಿಗೂ ಮೊದಲ ಕಂತಿನ ಹಣವನ್ನು ಅವರ ಖಾತೆಗೆ ಈಗಾಗಲೇ ಜಮಾ ಮಾಡಲಾಗಿದೆ ಎಂದು ತಿಳಿಸಿದರು.

    ಇದೇ ವೇಳೆ ನಕ್ಸಲೀಯರು ಮುಂದಿಟ್ಟಿರುವ ಮೂಲ ಸೌಕರ್ಯಗಳ ಬೇಡಿಕೆಗಳನ್ನು ಈಡೇರಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ. ಸಮಗ್ರ ಅಭಿವೃದ್ಧಿ ಯೋಜನೆ ಸಿದ್ಧಪಡಿಸಿ ಗಿರಿಜನ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಕ್ಕೆ ತರಲಾಗುವುದು. ಈಗಾಗಲೇ ಹಕ್ಕು ಪತ್ರ, ವಿದ್ಯುತ್, ಕುಡಿಯುವ ನೀರು, ಮನೆಗಳ ನಿರ್ಮಾಣದಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಜಿಲ್ಲಾ ಮಟ್ಟದ ನಕ್ಸಲ್ ಶರಣಾಗತಿ ಸಮಿತಿ ಅಧ್ಯಕ್ಷರೂ, ಜಿಲ್ಲಾಧಿಕಾರಿಗಳೂ ಆದ ಸಿ.ಎನ್.ಮೀನಾ ನಾಗರಾಜು, ಸಮಿತಿಯ ಸದಸ್ಯರುಗಳಾದ ಜಿ.ಪಂ. ಸಿಇಓ ಎಚ್.ಎಸ್.ಕೀರ್ತನಾ, ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕರು ಹಾಗೂ ರಾಜ್ಯ ಮಟ್ಟದ ಶರಣಾಗತಿ ಸಮಿತಿ ಸದಸ್ಯರಾದ ಕೆ.ಪಿ.ಶ್ರೀಪಾಲ್, ಶಾಂತಿಗಾಗಿ ನಾಗರೀಕ ಹೋರಾ ಸಮಿತಿ ಸದಸ್ಯರುಗಳಾದ ಕೆ.ಎಲ್.ಅಶೋಕ್ ನಗರಗೆರೆ ರಮೇಶ್, ವಿ.ಎಸ್.ಶ್ರೀಧರ್ ಈ ಸಂದರ್ಭದಲ್ಲಿ ಹಾಜರಿದ್ದರು.

    Naxal leader surrenders to Sringeri Kotehonda Ravindra District Administration

  • ಅಂತರ್ ಜಿಲ್ಲಾ ಕಳವು-ದರೋಡೆ ಪ್ರಕರಣದ ಆರೋಪಿಗಳ ಬಂಧನ

    ಅಂತರ್ ಜಿಲ್ಲಾ ಕಳವು-ದರೋಡೆ ಪ್ರಕರಣದ ಆರೋಪಿಗಳ ಬಂಧನ

    ಚಿಕ್ಕಮಗಳೂರು:  ಅಂತರ್ ಜಿಲ್ಲಾ ಕಳವು- ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಬಂಗಾರದ ಗಟ್ಟಿ ಸೇರಿದಂತೆ ೨೫ ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅನೇಕ ಕಳ್ಳತನ ಪ್ರಕರಣ ನಡೆದಿದ್ದು ಪ್ರಭಾರ ವೃತ್ತ ನಿರೀಕ್ಷಕ ಗವಿರಾಜ್ ಪಿ.ಐ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

    ಬೆಂಗಳೂರಿನ ಆರ್ ಟಿ ನಗರದಲ್ಲಿ ನೆಲೆಸಿದ್ದ ಚಿಕ್ಕಮಗಳೂರು ಉಪ್ಪಳ್ಳಿ ನಿವಾಸಿ ಮೊಹಮದ್ ಕಬೀರ್, ಡಿಜೆ ಹಳ್ಳಿವಾಸಿ ಯೂಸುಫ ಪಾಷಾ ನನ್ನು ಬಂಧಿಸಿ ಒಟ್ಟು ೩೩೪ ಗ್ರಾಂ ಬಂಗಾರದ ಗಟ್ಟಿ, ಮತ್ತು ಕೃತ್ಯಕ್ಕೆಬಳಸಿದ್ದ ಬಜಾಜ್ ಪಲ್ಸರ್ ಬೈಕ್ ( ತುಮಕೂರಿನಲ್ಲಿ ಕಳವು ಮಾಡಿದ್ದು) ಒಟ್ಟು ಬೆಲೆ ೨೫,೦೦,೦೦೦ ವಶಪಡಿಸಿಕೊಳ್ಳಲಾಗಿದೆ.

    ಅಹಮದ್ ಕಬೀರ್ ನನ್ನು ೨೦೨೩ ನೇ ಸಾಲಿನಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಬಂಧಿಸಿದ್ದು, ೧೨ ಮನೆಕಳವು ಪ್ರಕರಣಗಳು ಪತ್ತೆಯಾಗಿದ್ದು, ಆರೋಪಿಯಿಂದ ೨೯೫ ಗ್ರಾಂ ಚಿನ್ನ & ೩೫೦ ಗ್ರಾಂ ಬೆಳ್ಳಿಯ ಭರಣ ಹಾಗೂ ೧ ಪಿಸ್ತೂಲ್ & ಗುಂಡುಗಳು ದೊರೆತಿದ್ದವು.

    ಪಿಸ್ತೂಲ್ ಅನ್ನುವೈಜ್ಞಾನಿಕ ಪರೀಕ್ಷೆಗೆ ಕಳುಹಿಸಿದಾಗ ೨೦೨೦ ರಂದು ಚಿಕ್ಕಮಗಳೂರು ನಗರದ ಕೇಸರಿ ಜ್ಯೂಯೆಲರಿ ಚಿನ್ನದ ಅಂಗಡಿಯಲ್ಲಿ ಗುಂಡು ಹಾರಿಸಿ ದರೋಡೆಗೆ ಪ್ರಯತ್ನಿಸಿದ್ದಾಗ ಸ್ಥಳದಲ್ಲಿ ದೊರೆತ ಗುಂಡಿಗೆ ಹೋಲಿಕೆಯಾಗಿರುವುದಾಗಿ ಎಫ್.ಎಸ್.ಎಲ್ ವರದಿಯಿಂದ ದೃಢಪಟ್ಟಿದೆ.

    ಆರೋಪಿ ಕಬೀರ್ ಮತ್ತು ಆತನ ಸಹಚರರು ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವುದೂ ಬೆಳಕಿಗೆ ಬಂದಿದೆ. ಈತನ ವಿರುದ್ಧ ಮಂಗಳೂರು ನಗರ, ಶಿವಮೊಗ್ಗ , ತುಮಕೂರು , ದಾವಣಗೆರೆ , ಚಾಮರಾಜನಗರ ಜಿಲ್ಲೆ ಗಳಲ್ಲಿ ೫೦ ಕ್ಕೂ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿದ್ದು, ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಈತನ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು,

    ಈ ಆರೋಪಿಗಳನ್ನು ಪತ್ತೆ ಮಾಡುವ ತಂಡದಲ್ಲಿ ಅಬ್ದುಲ್ ಖಾದರ್‌ಸಿ,ಇ,ಎನ್ ಪಿ,ಎಸ್,ಐ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳಾದ ಹೆಚ್.ಸಿ ಹೆಚ್,ಎಸ್, ನಂಜಪ್ಪ, ಪೊಲೀಸ್ ಠಾಣೆ, ಪ್ರದೀಪ ,ಲೋಹಿತ್ ಸಿ,ಎಂ, ಗ್ರಾಮಾಂತರ ಪೊಲೀಸ್ ಠಾಣೆ, ಹೆಚ್ ಸಿ ರವೀಂದ್ರ ,ಮಧುಸೂಧನ್, ಲಿಂಗಮೂರ್ತಿ, ಡಿ.ಸಿ.ಆರ್.ಬಿ ವಿಭಾಗದ ಗಿರೀಶ್, ಹೆಚ್ ಸಿ, ಅನ್ವರ್ ಪಾಷ, ಹರಿಪ್ರಸಾದ್ ಹಾಗೂ ತಾಂತ್ರಿಕ ವಿಭಾಗದ ಅಬ್ದುಲ್ ರಬ್ಬಾನಿ, ಹಾಗು ಮಹಿಳಾ ಸಿಬ್ಬಂದಿ ಕು. ಪುಷಾ ಭಾಗವಸಿದ್ದರು. ಕಾರ್ಯಾಚರಣೆ ತಂಡಕ್ಕೆ ಪೊಲೀಸ್ ಅಧೀಕ್ಷಕರು ಬಹುಮಾನ ಘೋಷಿಸಿದ್ದಾರೆ.

    Accused arrested in inter-district theft-robbery case

  • ಅಪ್ಪ ಸತ್ತಿದ್ದು ಗೊತ್ತೇ ಇಲ್ಲ-ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಗಳು

    ಅಪ್ಪ ಸತ್ತಿದ್ದು ಗೊತ್ತೇ ಇಲ್ಲ-ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಗಳು

    ಚಿಕ್ಕಮಗಳೂರು: ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ಚಿಕ್ಕಮಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

    ನಿನ್ನೆ ಹಾಗೂ ಇವತ್ತು ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಎಂಬುವರ ಮಗಳ ಮದುವೆ ನಿಶ್ಚಯವಾಗಿತ್ತು. ಕೊನೆ ಮಗಳ ಮದುವೆ ಎಂದು ಚಂದ್ರು ಅದ್ಧೂರಿಯಾಗಿ ಮದುವೆಗೆ ತಯಾರಿ ಮಾಡಿದ್ದರು. ಆದರೆ, ಮಗಳ ಆರತಕ್ಷತೆಯ ದಿನ ಆತ್ಮೀಯ ಸ್ನೇಹಿತರೊಬ್ಬರಿಗೆ ಲಗ್ನಪತ್ರಿಕೆ ಕೊಟ್ಟಿಲ್ಲ ಎಂದು ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಹೋಗಿ ಕಾರ್ಡ್ ಕೊಟ್ಟು ಬರುವ ವೇಳೆ ಮಾರ್ಗ ಮಧ್ಯೆ ಬೈಕ್ ಅಪಘಾತವಾಗಿತ್ತು.

    ತೀವ್ರ ಗಂಭೀರ ಗಾಯವಾಗಿದ್ದ ಚಂದ್ರುರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದ ಚಂದ್ರು ಭಾನುವಾರ ಮಧ್ಯಾಹ್ನನವೇ ಮರಣ ಹೊಂದಿದ್ದರು.

    ವಿಷಯ ಮನೆಯವರಿಗೆ ತಿಳಿದರೆ ಮದುವೆ ನಿಲ್ಲುತ್ತೆ ಎಂದು ಕುಟುಂಬಸ್ಥರು ವಿಷಯವನ್ನ ಮೃತ ಚಂದ್ರು ಪತ್ನಿ ಹಾಗೂ ಮಗಳು ದೀಕ್ಷಾಗೆ ಹೇಳಲೇ ಇಲ್ಲ. ಅಪಘಾತವಾಗಿದೆ ಆಸ್ಪತ್ರೆಯಲ್ಲಿದ್ದಾರೆ ಎಂದು ಹೇಳಿ ಭಾನುವಾರ ಸಂಜೆ ಆರತಕ್ಷತೆ ಮುಗಿಸಿ, ಇಂದು ಬೆಳಗ್ಗೆ ಮುಹೂರ್ತವನ್ನೂ ಮುಗಿಸಿದ್ದಾರೆ. ಮುಹೂರ್ತ ಮುಗಿದ ಬಳಿಕ ವಿಷಯವನ್ನ ಮನೆಯವರಿಗೆ ತಿಳಿಸಲಾಗಿದೆ.

    ವಿಷಯ ಕೇಳಿ ಮೃತನ ಪತ್ನಿ ಹಾಗೂ ಮಗಳಿಗೆ ಬರಸಿಡಿಲು ಬಡಿದಂತಾಗಿ ಕುಟುಂಬಸ್ಥರ ನೋವಿನ ಆಕ್ರಂದನ ಮುಗಿಲುಮುಟ್ಟಿದೆ. ಕಡೂರು ಪಟ್ಟಣದ ಬೀರೂರಿನ ತರಳಬಾಳು ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದು ಗಂಡು-ಹೆಣ್ಣು ಮನೆಗೆ ಬರುವ ವೇಳೆ ಮನೆಗೆ ತಂದೆಯ ಮೃತದೇಹ ಕೂಡ ಬಂದಿತ್ತು. ಮನೆಯವರು ಮಗಳ ಮದುವೆಯಾಯ್ತು ಅಂತ ಸಂತೋಷ ಪಡಬೇಕೋ ಅಥವ ಮನೆಯ ಯಜಮಾನ ಸಾವನ್ನಪ್ಪಿದ್ದಾನೆ ಎಂದು ಕಣ್ಣೀರಡಬೇಕೋ ತಿಳಿಯದಂತೆ ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.

    ಮೃತ ಚಂದ್ರುಗೆ ಮೂರು ಜನ ಹೆಣ್ಣು ಮಕ್ಕಳು. ಮೊದಲ ಮಗಳ ಮದುವೆಯಲ್ಲಿ ಕೊರೋನಾ ಅಡ್ಡಿ ಬಂತು ಅಂತ ಕುಟುಂಬಸ್ಥರು, ಸಂಬಂಧಿಕರಷ್ಟೆ ಪಾಲ್ಗೊಂಡು ಮದುವೆ ಮಾಡಿದ್ದರು. ಹಾಗಾಗಿ, ಕೊನೆ ಮಗಳ ಮದುವೆ. ಅದ್ಧೂರಿಯಾಗಿ ಮಾಡಬೇಕು ಅಂತ ಶಕ್ತಿ ಮೀರಿ ಮಗಳ ಮದುವೆಯನ್ನ ಅದ್ಧೂರಿಯಾಗಿ ಅರೆಂಜ್ ಮಾಡಿದ್ದರು.

    ಆದರೆ, ಮದುವೆಗೆ ಅಪ್ಪನೇ ಇರಲಿಲ್ಲ. ಮಗಳು ಹಾಗೂ ಪತ್ನಿ ಕೇಳಿದರು ಕುಟುಂಬಸ್ಥರು ಕೊನೆ ಮದುವೆ ಇಷ್ಟಪಟ್ಟು ಕಷ್ಟಪಟ್ಟು ಮದುವೆ ಮಾಡಿದ್ದಾನೆ. ಮದುವೆ ನಿಲ್ಲಬಾರದು ಅಂತ ಆಸ್ಪತ್ರೆಯಲ್ಲಿ ಇದ್ದಾನೆ. ಚೆನ್ನಾಗಿದ್ದಾನೆ ಎಂದು ಹೇಳಿ ಮದುವೆ ಮುಗಿದ ಮೇಲೆ ವಿಷಯವನ್ನ ತಿಳಿಸಿದ್ದಾರೆ. ವಿಷಯ ತಿಳಿದ ತರೀಕೆರೆ ಚಂದ್ರು ಸ್ನೇಹಿತರು ಹಲವರು ಮದುವೆಗೆ ಹೋಗಿಲ್ಲ.

    ಈ ಕುರುಳು ಹಿಂಡುವ ಕಥೆ ಕೇಳಿದ ಜನ ಕೂಡ ದೇವರು ಅತ್ಯಂತ ಕ್ರೂರಿ. ಯಾರಿಗೂ ಇಂತಹಾ ಪರಿಸ್ಥಿತಿ ಬರಬಾರದು ಎಂದು ದೇವರಿಗೆ ಹಿಡಿಶಾಪ ಹಾಕಿದ್ದಾರೆ.

    Daughter enters married life without knowing father died

  • ಕಳಸ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು

    ಕಳಸ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು

    ಚಿಕ್ಕಮಗಳೂರು: ಪತ್ನಿಗೆ ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಳಸ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ನಿತ್ಯಾನಂದಗೌಡ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

    ನಿತ್ಯಾನಂದ ಅವರ ಪತ್ನಿ ಉಡುಪಿ ಮೂಲದ ಅಮಿತಾ ಅವರು ಶನಿವಾರ ಕಳಸ ಠಾಣೆಗೆ ದೂರು ನೀಡಿದ್ದರು. ‘ನನ್ನ ಮೇಲೆ ನನ್ನ ಪತಿ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ್ದಾರೆ’ ಎಂದು ದೂರಿದ್ದರು. ಪತ್ನಿ ವಿರುದ್ಧ ಅವರು ಕೂಡ ಪ್ರತಿ ದೂರು ದಾಖಲಿಸಿದ್ದರು.

    ಮರು ದಿನವೇ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಆದೇಶ ಹೊರಡಿಸಿದ್ದಾರೆ. ‘ಪತ್ನಿ ನೀಡಿರುವ ದೂರು ಮಾತ್ರ ಅಮಾನತಿಗೆ ಕಾರಣವಲ್ಲ. ಅಶಿಸ್ತಿನ ಬೇರೆ ಪ್ರಕರಣಗಳೂ ಇವೆ’ ಎಂದು ಎಸ್ಪಿ ಸ್ಪಷ್ಟಪಡಿಸಿದರು.

    Kalasa Police Station Sub-Inspector suspended