Category: ಕ್ರೈಂ

  • ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಸೆರೆ-ಎರಡು ಕೋವಿ ವಶ

    ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಸೆರೆ-ಎರಡು ಕೋವಿ ವಶ

    ಚಿಕ್ಕಮಗಳೂರು: ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ.

    ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ ೩೭ ರಲ್ಲಿ ಕೂತನ್ಕುಲ್ ಎಸ್ಟೇಟ್ ನಲ್ಲಿ ಇಂದು ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಖಾರಿ ಮಾಡಿದ್ದ.

    ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ ದೇವಯ್ಯ ರನ್ನು ಬಂಧಿಸಿ ವನ್ಯಜೀವಿ ಸಾಂಬಾರ್ ಜಿಂಕೆಯ ಅಂದಾಜು ೪೦ ಞg ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ ೨ ಡಿiಜಿಟe ಗಳನ್ನು ವಶಕ್ಕೆ ಪಡೆದಿದ್ದಾರೆ. ಒಂಟಿ ನಳಿಕೆ ರೈಫಲ್ ಹಾಗೂ ಐವತ್ತಕ್ಕೂ ಹೆಚ್ಚು ಜೀವಂತ ಬಳಸಿದ ಗುಂಡು ಪತ್ತೆಯಾಗಿದೆ.

    ವನ್ಯಜೀವಿ ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ವಲಯ ಅರಣ್ಯಾಧಿಕಾರಿ ವೆಂಕಟೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರಹಾರ್ಶ್, ಪೂರಪ್ಪ ಮತ್ತು ಇತರರು ಪಾಲ್ಗೊಂಡಿದ್ದರು

    Man arrested for hunting a hawk two guns seized

  • ಬೀರೂರು ಠಾಣಾ ಪೋಲಿಸರಿಂದ 1 ಕೋಟಿ ಮೌಲ್ಯದ ಅಡಿಕೆ ವಶ-ಅರೋಪಿಗಳ ಬಂಧನ

    ಬೀರೂರು ಠಾಣಾ ಪೋಲಿಸರಿಂದ 1 ಕೋಟಿ ಮೌಲ್ಯದ ಅಡಿಕೆ ವಶ-ಅರೋಪಿಗಳ ಬಂಧನ

    ಚಿಕ್ಕಮಗಳೂರು: ಬೀರೂರಿನಿಂದ ಗುಜರಾತ್‌ಗೆ ಸಾಗಿಸಲು ತುಂಬಿದ್ದ ೩೫೦ ಚೀಲ ಅಡಿಕೆಯನ್ನು ಹೊಳಲ್ಕೆರೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಲು ಯತ್ನಿಸಿದ ಲಾರಿ ಚಾಲಕ ,ಮತ್ತು ಕ್ಲೀನರ್‌ನನ್ನು ಪತ್ತೇಹಚ್ಚಿ ೧.೨೨.೮೨.೫೦೦/- ರೂ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಳ್ಳುವಲ್ಲಿ ಬೀರೂರು ಠಾಣಾ ಪೋಲಿಸರು ಯಶಸ್ವಿಯಾಗಿದ್ದಾರೆ.

    ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಾಜಿ ರೋಡ್ ವೇಸ್ ನ ಮಾಲೀಕರಾದ ದುಲಾರಾಮ್ ರವರ ಮೂಲಕ ಬೀರೂರಿನ ದೇವಗಿರಿ ಟ್ರೇಡರ್ಸ್‌ನಲ್ಲಿ ಡಿ.೧೨ರಂದು ತಲಾ ೭೦ ಕೆ.ಜಿ ತೂಕದ ೩೫೦ ಚೀಲ ಅಡಿಕೆ ಲಾರಿಯಲ್ಲಿ ತುಂಬಿಸಿ ಗುಜರಾತ್ ರಾಜ್ಯದ ವಲ್ಸಾದ್ ಸ್ಥಳಕ್ಕೆ ತಲುಪಿಸಲು ಕಳೂಹಿಸಲಾಗಿತ್ತು.

    ಲಾರಿಯ ಚಾಲಕನಾದ ಮೊಹಮ್ಮದ್ ಸುಬಾನ್ ಹಾಗೂ ಲಾರಿ ಕಂಡಕ್ಟರ್ ಮೊಹಮ್ಮದ್ ಫಯಾಜ್ ಇಬ್ಬರು ಸೇರಿಕೊಂಡು ಅಡಿಕೆಯನ್ನು ಗುಜರಾತ್‌ಗೆ ತೆಗೆದುಕೊಂಡು ಹೋಗದೆ ವಂಚಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಿಯೋ ಹೋಗಿರುವ ಬಗ್ಗೆ ಬೀರೂರು ಠಾಣೆಗೆ ಬಂದ ದೂರನ್ನಾಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

    ಪ್ರಕರಣದಲ್ಲಿ ಆರೋಪಿತರ ಪತ್ತೆಗಾಗಿ ಕ್ಷಿಪ್ರ ಕಾರ್ಯಾಚರಣೆ ನಡೆಸಲುಪೊಲೀಸ್ ಅಧೀಕ್ಷಕ ಡಾ|| ವಿಕ್ರಂ ಅಮಟೆ ತರೀಕೆರೆ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕವಿ.ಎಸ್.ಹಾಲಮೂರ್ತಿರಾವ್ ನೇತೃತ್ವದಲ್ಲಿ ತಂಡರಚಿಸಿ ಆರೋಪಿಗಳಪತ್ತೆ ಮಾಡಲು ವ್ಯೂಹ ರಚಿಸಲಾಯಿತು.

    ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂಧಿಗಳಾದ ನಯಾಜ್ ಅಂಜುಮ್ ಮತ್ತು ರಬ್ಬಾನಿ ಹಾಗೂ ಬೀರೂರು ಪೊಲೀಸ್ ಠಾಣೆಯ ರಾಧ ಇವರುಗಳ ತಾಂತ್ರಿಕ ಸಹಯೋಗದೊಂದಿಗೆ ವಿವಿಧ ಆಯಾಮಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ತನಿಖೆ ನಡೆಸಿ ಆರೋಪಿತರುಗಳ ಪತ್ತೆಯ ಬಗ್ಗೆ ನಿಖರ ಮಾಹಿತಿಯನ್ನು ಕಲೆಹಾಕಿ ನಂತರ ಆರೋಪಿತರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಬೆಂಗಳೂರಿನ ತಿರುಪಾಳ್ಯದ ಸ್ಕೋಂಡೋ ೨ ಅಪಾರ್ಟ್‌ಮೆಂಟ್ ಬಳಿ ಆರೋಪಿತರಾದ ಚಾಲಕ ತೀರ್ಥಹಳ್ಳಿಯಅಮೀರ್ ಹಮ್ಮದ್, ಮೊಹಮ್ಮದ್ ಗೌಸ್ ಖಾನ್,ಸುಹೇಲ್, ಮೊಹಮ್ಮದ್ ಸುಭಾನ್ ಗಬ್ಬರ್,ಮೊಹಮ್ಮದ್ ಫಯಾಜ್,ಬೆಂಗಳೂರಿನ ಮೊಹಮ್ಮದ್ ಸಾದಿಕ್ ಇವರುಗಳನ್ನು ದಸ್ತಗಿರಿ ಪೋಲೀಸರು ವಿಚಾರಣೆ ಮಾಡಿದರು.

    ಹೊಳಲ್ಕೆರೆ ತಾ|| ಹೊಸಳ್ಳಿ ಗ್ರಾಮದ ವಾಸಿ ಮಲ್ಲಿಕಾರ್ಜುನ್ ರವರ ಕೋಳಿ ಫಾರಂ ಬಳಿ ಹೋಗಿ ಮಾರಾಟ ಮಾಡುವ ಉದ್ದೇಶದಿಂದ ಅನ್ ಲೋಡ್ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ದಸ್ತಗಿರಿಯಾದ ಆರೋಪಿತರಿಂದ ೩೩೫ ಅಡಿಕೆ ಚೀಲಗಳನ್ನು ತನಿಖೆಯ ಸಮಯದಲ್ಲಿ ಅಮಾನತ್ತುಪಡಿಸಿಕೊಳ್ಳಲಾಗಿದೆ ಈ ಪ್ರಕರಣದ ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿರುತ್ತಾನೆ.

    ಬಂಧಿತ ಆರೋಪಿತರಿಂದ ೩೩೫ ಅಡಿಕೆ ಚೀಲ ಅಂದಾಜು ಬೆಲೆ – ೧.೦೫.೫೨.೫೦೦/-ರೂ, ಕೆಎ೩೦ ಎ೧೭೦೫ ನಂಬರ್ ನ ೧೨ ಚಕ್ರಗಳ ಲಾರಿ, ಅಂದಾಜು ಬೆಲೆ ೧೫.೦೦.೦೦೦/- ರೂ,೨.೩೦.೦೦೦/-ರೂ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

    ಕಾರ್ಯಾಚರಣೆಯಲ್ಲಿ ಕಡೂರು ವೃತ್ತನಿರೀಕ್ಷಕ ರಫೀಕ್,ಬೀರೂರು ಪೊಲೀಸ್ ಠಾಣೆಯ ಸಜಿತ್ ಕುಮಾರ್ ಜಿ.ಆರ್, – ಪಿ.ಎಸ್.ಐ (ಕಾ &ಸು), ಡಿ.ವಿ.ತಿಪ್ಪೇಶ್,ಅಜ್ಜಂಪುರ ಪೊಲೀಸ್ ಠಾಣೆ ಪಿಎಸೈ ಶಶಿಕುಮಾರ್ ,ಲಿಂಗದಹಳ್ಳಿ ಪೊಲೀಸ್ ಠಾಣೆ, ಗಣಪತಿ ಎಸ್ ಶೇರುಗಾರ ಪಿ.ಎಸ್.ಐ (ತನಿಖೆ) ಬೀರೂರು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂಧಿಗಳಾದ ಡಿ.ವಿ.ಹೇಮಂತ್ ಕುಮಾರ್, ಬಿ.ಪಿ.ಕೃಷ್ಣಮೂರ್ತಿ, ಬಿ.ಹೆಚ್.ರಾಜಪ್ಪ ಹಾಗೂ ಅಜ್ಜಂಪುರ ಪೊಲೀಸ್ ಠಾಣೆಯ ನಾಗರಾಜ ವೈ, ಜೀಪ್ ಚಾಲಕರಾದ ಚಂದ್ರ ನಾಯ್ಕ ಭಾಗವಹಿಸಿದ್ದರು.

    ಕಡೂರು ಸಾದಿಕ್ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ, ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ ಹಾಗೂ ಹೊರರಾಜ್ಯಗಳಲ್ಲಿಯೂ ಸಹಾ ಮನೆ ಕಳವು ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಹಮ್ಮ @ ಅಮೀರ್ ಅಮ್ಮದ್ ಈತನ ವಿರುದ್ಧ ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆ ಯೂ ಸೇರಿದಂತೆ ತುಮಕೂರಿನ ಶಿರಾ ಪೊಲೀಸ್ ಠಾಣೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಮನೆ ಕಳವು, ಕೊಲೆ ಪ್ರಕರಣಗಳು ದಾಖಲಾಗಿರುತ್ತವೆ

    ಆರೋಪಿ ಮೊಹಮ್ಮದ್ ಗೌಸ್ ನ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೋಕಾ ಕಾಯ್ದೆಯಡಿ ಹಾಗೂ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣಗಳು ದಾಖಲಾಗಿರುತ್ತವೆ. ಈ ಪ್ರಕರಣದಲ್ಲಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಯಶಸ್ವಿಯಾಗಿ ಆರೋಪಿತರುಗಳನ್ನು ದಸ್ತಗಿರಿ ಮಾಡಿ ಅವರಿಂದ ಸ್ವತ್ತನ್ನು ವಶಪಡಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸುವಲ್ಲಿ ಶ್ರಮಿಸಿದ ತನಿಖಾ ತಂಡವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ ರವರು ಶ್ಲಾಘಿಸಿ ಬಹುಮಾನ ನೀಡಿರುತ್ತಾರೆ.

    Birur police seize areca nut worth Rs 1 crore; suspects arrested

  • ಕಿತ್ತಲೆಗುಳಿ ಗ್ರಾಮದ ದಟ್ಟ ಅರಣ್ಯದಲ್ಲಿದ್ದ ನಕ್ಸಲರ ಶಸ್ತ್ರಾಸ್ತ್ರಗಳ ವಶ

    ಕಿತ್ತಲೆಗುಳಿ ಗ್ರಾಮದ ದಟ್ಟ ಅರಣ್ಯದಲ್ಲಿದ್ದ ನಕ್ಸಲರ ಶಸ್ತ್ರಾಸ್ತ್ರಗಳ ವಶ

    ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತರಾದ ಆರು ಮಂದಿ ನಕ್ಸಲರಿಗೆ ಸೇರಿದ್ದ ಚಿಕ್ಕಮಗಳೂರು ಜಿಲ್ಲೆ ಜಯಪುರ ಠಾಣೆ ಪೊಲೀಸರು ಕಾಡಿನಲ್ಲಿದ್ದ ನಕ್ಸಲರಿಗೆ ಸೇರಿದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

    ಶರಣಾಗತರಾಗಿರುವ ನಕ್ಸಲರು ನೀಡಿದ ಮಾಹಿತಿ ಮೇರೆಗೆ ಪೊಲೀಸರ ತಂಡ ಜಯಪುರ ಠಾಣೆ ವ್ಯಾಪ್ತಿಯ ಕಿತ್ತಲೆಗುಳಿ ಗ್ರಾಮದ ಸಮೀಪವಿರುವ ದಟ್ಟ ಅರಣ್ಯದಲ್ಲಿದ್ದ ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

    ಶರಣಾಗತ ನಕ್ಸಲರು ಬಳಸುತ್ತಿದ್ದ ಒಂದು ಎಕೆ ೫೬, ಮೂರು ೩೦೩ ರೈಫಲ್, ಒಂದು ೧೨ ಬೋರ್ ಎಸ್‌ಎಸ್‌ಬಿಎಲ್, ಒಂದು ಕಂಟ್ರಿ ಮೇಡ್ ಪಿಸ್ತೂಲ್ ಸೇರಿದಂತೆ ಒಟ್ಟು ಆರು ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ. ಇವುಗಳೊಂದಿಗೆ ಹನ್ನೊಂದು ೭.೬೨ ಎಂಎಂನ ಎಕೆ ೫೬ ಮದ್ದುಗುಂಡುಗಳು, ೩೦೩ ರೈಫಲ್‌ನ ೧೩೩ ಮದ್ದುಗುಂಡುಗಳು, ೧೨ ಬೋರ್ ಕಾರ್ಟಿಜ್ಸ್ನ ೨೪, ಕಂಟ್ರಿಮೇಡ್ ಪಿಸ್ತೂಲ್‌ನ ೮ ಮದ್ದುಗುಂಡುಗಳು ಸೇರಿದಂತೆ ಒಟ್ಟು ೧೭೬ ಮುದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಇವುಗಳೊಂದಿಗೆ ಎಕೆ ೫೬ನ ಖಾಲಿ ಮ್ಯಾಗ್ಸಿನ್ ಸಹ ಪತ್ತೆಯಾಗಿದೆ.

    ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಕ್ರೈಮ್ ನಂ. ೦೪/೨೫ ಅಡಿ ಎಆರ್‌ಎಂಎಸ್ ಆಕ್ಟ್ ೧೯೫೯ರ ಕಲಂ ೩, ೨೫(೧ಬಿ), ೭ ಮತ್ತು ೨೫(೧ಎ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ಪಿ ವಿಕ್ರಮ ಅಮಟೆ ತಿಳಿಸಿದ್ದಾರೆ.

    ಶರಣಾಗತರಾದ ನಕ್ಸಲರು ತಮ್ಮೊಂದಿಗೆ ಯಾವುದೇ ಶಸ್ತ್ರಾಸ್ತ್ರ ಅಥವಾ ಉಪಕರಣಗಳನ್ನು ಶರಣಾಗತಿ ಮಾಡಿದರೆ ಪ್ರತಿ ಆಯುಧ ಅಥವಾ ಉಪಕರಣಕ್ಕೆ ಪ್ರೋತ್ಸಾಹ ಧನ ನೀಡುವುದಾಗಿ ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ಯೋಜನೆಯಲ್ಲಿ ಘೋಷಿಸಲಾಗಿತ್ತು. ಅದರಂತೆ ಇದೀಗ ಪೊಲೀಸರು ವಶಪಡಿಸಿಕೊಂಡಿರುವ ಆಯುಧಗಳಿಗೂ ಸಂಬಂಧಿಸಿದಂತೆ ಶರಣಾಗತರಾದ ನಕ್ಸಲರಿಗೆ ಪ್ರೋತ್ಸಾಹ ಧನ ಸಿಗಲಿದೆ.

    ಎಕೆ ೫೬ಗೆ ೩೦ ಸಾವಿರ (ಒಂದಕ್ಕೆ), ಮೂರು ೩೦೩ ರೈಫಲ್‌ಗಳಿಗೆ ೫೦ ಸಾವಿರ (ಒಂದಕ್ಕೆ), ೧೨ ಬೋರ್ ಎಸ್‌ಎಸ್‌ಬಿಎಲ್ ೫೦ ಸಾವಿರ (ಒಂದಕ್ಕೆ) ಪಿಸ್ತೂಲ್ ೧ಕ್ಕೆ ೧೦ ಸಾವಿರ, ೧೭೬ ಮದ್ದುಗುಂಡುಗಳಿಗೆ ನೂರು ರೂಪಾಯಿ(ಪ್ರತಿ ಮದ್ದು ಗುಂಡಿಗೆ) ಸಾರ್ಕರ ಪ್ರೋತ್ಸಾಹ ಧನ ನಿಗಧಿ ಮಾಡಿದೆ.

    Weapons seized from Naxalites in the dense forest of Kittaleguli village

  • ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ

    ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ

    ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಜೀವ ಬೆದರಿಕೆ ಹಾಕಿ ಅನಾಮದೇಯ ಪತ್ರವೊಂದು ಬಂದಿದೆ.

    ಬಸವನಹಳ್ಳಿಯಲ್ಲಿರುವ ಸಿ.ಟಿ.ರವಿ ಅವರ ನಿವಾಸಕ್ಕೆ ಪತ್ರ ಬಂದಿದ್ದು, ಈ ಸಂಬಂಧ ಸಿ.ಟಿ.ರವಿ ಆಪ್ತ ಸಹಾಯಕ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಾಚ್ಯ ಪದ ಬಳಸಿರುವ ಕಾರಣಕ್ಕೆ ರವಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಸಿಟಿ ರವಿ ಅವರನ್ನು ಉದ್ದೇಶಿಸಿ ಪತ್ರ ಬರೆದಿರುವ ಅಪರಿಚಿತರು ನಮ್ಮ ತಂಡ ಬೆಳಗಾವಿಯಿಂದ ಚಿಕ್ಕಮಗಳೂರಿಗೆ ನಿನ್ನನ್ನು ಹುಡುಕಿಕೊಂಡು ಬಂದಿದ್ದೇವೆ.

    ಇನ್ನು ೧೫ ದಿನದ ಒಳಗಾಗಿ ಬೆಳಗಾವಿಯ ಅಭಿನೇತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾಲನ್ನು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ನಿಮ್ಮ ಮನೆಗೆ ನುಗ್ಗಿ ಕೈ ಮತ್ತು ಕಾಲನ್ನು ಮುರಿಯುವುದು ಖಚಿತ. ನೀವು ಯಾವ ವಿಳಾಸದಲ್ಲಿ ಇದ್ದರೂ ನಿಮ್ಮನ್ನು ಬಿಡುವುದಿಲ್ಲ. ನಿಮ್ಮ ಜೀವ ಜೀವನಕ್ಕೂ ಅಪಾಯವಿದೆ ಎಂದು ಬೆದರಿಕೆಯೊಡ್ಡಿದ್ದಾರೆ.

    ಸಿ.ಟಿ.ರವಿ ಅವರ ಮನೆಗೆ ಪತ್ರ ಬರುತ್ತಿದ್ದಂತೆ ಆಪ್ತಸಹಾಯಕ ಚೇತನ್ ಬಸವನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬಸವನಹಳ್ಳಿ ಪೊಲೀಸರು ಪತ್ರ ಬರೆದವರು ಯಾರು? ಎಲ್ಲಿಂದ ಪತ್ರ ಬಂದಿದೆ ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

    Life threat letter to Legislative Council member C.T. Ravi

  • ಕಾಡುಕೋಣ ದಾಳಿಯಿಂದ ಕಾರ್ಮಿಕ ಮಹಿಳೆ ಸಾವು

    ಕಾಡುಕೋಣ ದಾಳಿಯಿಂದ ಕಾರ್ಮಿಕ ಮಹಿಳೆ ಸಾವು

    ಚಿಕ್ಕಮಗಳೂರು: ಕಾಫಿ ಕೊಯ್ದು ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಮೂಡಿಗೆರೆ ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಬುಧವಾರ ಬೆಳೆಗ್ಗೆ ಘಟನೆ ನಡೆದಿದೆ.

    ಇಲ್ಲಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್‌ರವರ ಶಾರದಾಂಭ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಬಸೂರಿ ಬೀಬಿ (೪೨ ವರ್ಷ) ಸಾವನ್ನಪ್ಪಿರುವ ದುರ್ದೈವಿ.

    ಇಂದು ಬೆಳಿಗ್ಗೆ ಅಸ್ಸಾಂ ಮೂಲದ ಕಾರ್ಮಿಕರು ರಮೇಶ್ ಅವರ ತೋಟದಲ್ಲಿ ಕಾಫಿ ಕೊಯ್ದು ಮಾಡುವುದರಲ್ಲಿ ನಿರತರಾಗಿದ್ದರು. ಸುಮಾರು ೧೧ ಗಂಟೆ ಸಮಯದಲ್ಲಿ ಏಕಾಏಕಿ ಕಾಡುಕೋಣವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಅಸ್ಸಾಂ ಮೂಲದ ವಿವಾಹಿತ ಮಹಿಳಾ ಕಾರ್ಮಿಕರೊಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಕಾಡುಕೋಣ ಮಹಿಳೆಯ ಹೊಟ್ಟೆ ಮತ್ತು ಎದೆಯ ಭಾಗದಕ್ಕೆ ತಮ್ಮ ಕೊಂಬಿನಿಂದ ತಿವಿದಿದ್ದು, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ದಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

    ಮಹಿಳೆಯ ಸಾವಿನಿಂದ ಅವರ ಜೊತೆಯಲ್ಲಿದ್ದ ಕುಟುಂಬದವರು ಮತ್ತು ಸಂಬಂಧಿಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಮಲೆನಾಡು ಭಾಗದಲ್ಲಿ ಕಾಡುಕೋಣಗಳು ವಿಪರೀತ ಸಂಖ್ಯೆಯಲ್ಲಿದ್ದು, ನಿರಂತರವಾಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಕಾಫಿ ತೋಟಗಳಲ್ಲಿ ಗಿಡಗಳನ್ನು ಕಿತ್ತು ಹಾಕುವುದಲ್ಲದೇ, ಈ ರೀತಿಯ ಜೀವ ಹಾನಿಗೂ ಕಾರಣವಾಗುತ್ತಿವೆ. ಕಾಡುಕೋಣಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿದ್ದಾರೆ.

    Woman worker dies in wild buffalo attack

  • ಕೊನೆಯ ಉಸಿರಿರುವ ತನಕ ಜನರಿಗಾಗಿ ಹೋರಾಟ

    ಕೊನೆಯ ಉಸಿರಿರುವ ತನಕ ಜನರಿಗಾಗಿ ಹೋರಾಟ

    ಚಿಕ್ಕಮಗಳೂರು: ಜಿಲ್ಲಾಡಳಿತದ ಮುಂದೆ ಬುಧವಾರ ಶರಣಾಗತಿ ಆಗಲಿರುವ ಪ್ರಮುಖ ನಕ್ಸಲ್ ನಾಯಕಿ ಮುಂಡಗಾರು ಲತಾ ಮಾತನಾಡಿರುವ ವಿಡಿಯೋ ಬಿಡುಗಡೆಯಾಗಿದ್ದು ತಮ್ಮ ಬೇಡಿಕೆ ಸರ್ಕಾರದ ಮುಂದೆ ಒಟ್ಟಿದ್ದಾರೆ.

    ಚಿಕ್ಕಮಗಳೂರಿಗೆ ಆಗಮಿಸುವ ಮುನ್ನಾ ಕಾಡಿನಲ್ಲಿ ಎಲ್ಲಾ ಆರುಜನ ನಕ್ಸಲರು ಸಭೆ ನಡೆಸಿ ನಂತರ ಮಾತನಾಡಿರುವ ಲತಾ, ತಮ್ಮ ಅಭಿಪ್ರಾಯ ಹೇಳಿದ್ದಾರೆ, ಯಾರೆಲ್ಲ ಪ್ರಜಾ ತಾಂತ್ರಿಕ ಸಂವಿಧಾನ ಪರ ಹೋರಾಟ ಬಯಸುತ್ತಿದ್ದಾರೋ ಅದೇ ರೀತಿ ಜನರ ಪರ ಹೋರಾಟ ನಾವು ಮಾಡ್ತೇವೆ ಎಂದಿರುವ ಅವರು ಜನರಪರ ಕೊನೆಯ ಉಸಿರಿರುವ ತನಕ ಜನರಿಗಾಗಿ ಹೋರಾಟ ಮಾಡ್ತೇವೆ ಎಂದಿದ್ದಾರೆ.

    ಕರ್ನಾಟಕ, ಕೇರಳ, ತಮಿಳುನಾಡಿನ ಅರು ಜನ ನಕ್ಸಲರು ನಿಧಾರ ಮಾಡಿ ಚರ್ಚೆ ಮಾಡಿದ್ದೇವೆ, ಅಲ್ಲಿನ ಸ್ಥಿತಿಗಳ ಬಗ್ಗೆ ಸಂಘಟಕರು ಮನವರಿಕೆ ಮಾಡಿಸಿದ್ದಾರೆ ಎನ್ನುವ ಮೂಲಕ ಸರ್ಕಾರದ ಜೊತೆ ಸಂಧಾನಕ್ಕೆ ಯತ್ನಿಸಿದವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಎಲ್ಲಾ ಸಂಗಾತಿಗಳನ್ನು ನಾವು ಮುಂದೆ ನಡೆಯುವ ಹೋರಾಟಕ್ಕೆ ಸ್ವಾಗತಿಸುತ್ತೇವೆ

    ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತೇ ಅನ್ನೋ ಭರವಸೆಯೊಂದಿಗೆ ಬರ್ತಿದ್ದೇವೆ ಎಂದಿರುವ ಲತಾ ನಮ್ಮ ಶರಣಾಗತಿ ಪ್ರಕ್ರಿಯೆಗೆ ಎಲ್ಲಾ ಪ್ರಮುಖ ಸಂಘಟಕರೆಲ್ಲರ ಶ್ರಮ ಹಾಕಿದ್ದಾರೆ ಎಂದು ಹೇಳಿದ್ದಾರೆ.

    Fight for the people until your last breath