Category: ರಾಜ್ಯ

  • ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ನಿಧನ

    ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ನಿಧನ

    ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ.

    ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು.

    ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

    ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

    ಸರೋಜಾದೇವಿ ಅವರು ಕನ್ನಡ ಚಲನಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ನಟಿ. ಮಹಾಕವಿ ಕಾಳಿದಾಸ, ಕಿತ್ತೂರು ಚೆನ್ನಮ್ಮ, ಅಣ್ಣಾ ತಮ್ಮ, ಭಕ್ತ ಕನಕದಾಸ, ಬಾಳೇ ಬಂಗಾರ, ನಾಗಕನ್ಯ, ಬೆಟ್ಟದ ಹೂವು, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ನಾಡೋಡಿ ಮನ್ನನ್, ಕರ್ಪೂರ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದರು.

    Veteran Kannada actress B. Sarojadevi passes away

  • ಪತ್ರಕರ್ತರ ಬೆನ್ನೆಲುಬಾಗಿ ನಿಲ್ಲಲಿದೆ ಮಾಧ್ಯಮ ಪತ್ರಕರ್ತರ ಸಂಘ

    ಪತ್ರಕರ್ತರ ಬೆನ್ನೆಲುಬಾಗಿ ನಿಲ್ಲಲಿದೆ ಮಾಧ್ಯಮ ಪತ್ರಕರ್ತರ ಸಂಘ

    ಉಡುಪಿ:ರಾಜ್ಯಾದ್ಯಂತ ಗ್ರಾಮೀಣ ಪತ್ರಕರ್ತರು ಸೇರಿದಂತೆ ಎಲ್ಲ ಪತ್ರಕರ್ತರ ಬೆನ್ನೆಲುಬಾಗಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ನಿಲ್ಲಲಿದೆ ಎಂದು ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಜಿ,ಎಂ,ರಾಜಶೇಖರ್ ತಿಳಿಸಿದರು .

    ಉಡುಪಿ ಜಿಲ್ಲೆಯ ಪತ್ರಕರ್ತರರೊಂದಿಗೆ ಸಂವಾದ ನಡೆಸಿದ ಅವರು ದಕ್ಷಿಣಕನ್ನಡ,ಉಡುಪಿ,ಉತ್ತರಕನ್ನಡ, ಮಡಿಕೆರಿ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳು ಗುಡ್ಡಗಾಡುಗಳಿಂದ ಕೂಡಿದ್ದು ಸರ್ಕಾರ ನೀಡುವ ಜಾಹಿರಾತು ಇತರ ಸೌಲಭ್ಯಗಳಲ್ಲಿ ವಿಶೇಷ ರಿಯಾಯಿತಿ ನೀಡಿ ಈ ಭಾಗದ ಪತ್ರಕರ್ತರರಿಗೆ ಸೌಲಭ್ಯ ಒದಗಿಸಬೇಕು ಇಲ್ಲಿನ ಕರಾವಳಿ ಹಾಗೂ ಗುಡ್ಡ ಪ್ರದೇಶಗಳಾದ ಈ ಜಿಲ್ಲೆಗಳಿಗೆ ಸಾರಿಗೆ ವ್ಯವಸ್ಥೆ ಕೊರತೆಯಿರುವುದರಿಂದ ಪತ್ರಿಕೆ ತಲುಪಿಸುವುದು ಕಷ್ಠಸಾಧ್ಯ ಇದನ್ನು ಮನಗಂಡ ಸರ್ಕಾರ ಈ ಜಿಲ್ಲೆಗಳಿಗೆ ಮಾಧ್ಯಮ ಪಟ್ಟಿ ಹಾಗೂ ಮಾನ್ಯತೆ ಕಾರ್ಡು ಇತರ ಸೌಲಭ್ಯಗಳನ್ನು ನೀಡುವಲ್ಲಿ ವಿಶೇಷ ಜಿಲ್ಲೆಗಳೆಂದು ಪರಿಗಣಿಸಬೇಕು ಎಂದು ಒತ್ತಾಹಿಸಿದರು.

    ಜೊತೆಗೆ 60 ವರ್ಷ ದಾಟಿದ ಹಿರಿಯ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ನೀಡುವ ಬಸ್ ಪಾಸ್ ಸೌಲಭ್ಯದಲ್ಲಿ ಈ ಭಾಗದ ಬಹುತೇಕ ಪರ್ತಕರ್ತರು ಸೌಲಭ್ಯದಿಂದ ವಂಚಿತರಾಗಿರುವ ಕಾರಣ ಸರ್ಕಾರದ ಮಟ್ಟದ ಅಧಿಕಾರಿಗಳು ಮಾಡಿದ ನಿಯಮಗಳನ್ನು ಸಡಿಲಗೊಳಿಸಿ ರಾಜ್ಯಾದ್ಯಂತ ಸಂಚರಿಲು ಪತ್ರಕರ್ತರಿಗೆ ಅನುವುಮಾಡಿಕೊಡಬೇಕು ಎಂದರು.

    ಮಾಧ್ಯಮ ಬಿಂಬ ಪತ್ರಿಕೆ ಸಂಪಾದಕರು ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ವಸಂತ್ ಮಾತನಾಡಿ ರಾಜ್ಯ ಸಂಘದ ಸೌಲಭ್ಯಗಳು ಹಾಗೂ ಪತ್ರಿಕೊದ್ಯಮದ ಪೂರಕವಾದ ಅಂಶಗಳು ಪತ್ರಕರ್ತರ ಹಿತಕಾಯವುಂತಿದ್ದು ಇದರ ಸದುಪಯೋಗ ಪಡೆಯುವುದು ನಮ್ಮೆಲ್ಲರ ಜವಬ್ದಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಕ್ಕೆ ಹೆಚ್ಚಿನ ಸದಸ್ಯತ್ವ ಬಲ ನೀಡಲಾಗುವುದು ಎಂದರು.

    ರಾಜ್ಯ ಸಂಘದ ಉಪಾಧ್ಯಕ್ಷರಾದ ರವೀಂದ್ರಶೆಟ್ಟಿ ಮಾತನಾಡಿ ಪರ್ತಕರ್ತರನ್ನು ಸರ್ಕಾರಗಳು ಕಡೆಗಣಿಸಿದ್ದು ಪತ್ರಕರ್ತರು ಒಗ್ಗಟ್ಟು ಪ್ರದರ್ಶಿಸುವುದು ಅನಿವಾರ್ಯವಾಗಿದೆ ಸಂಕಷ್ಠದಲ್ಲಿರುವ ಪತ್ರಕರ್ತರಿಗೆ ಸರ್ಕಾರಗಳು ಆಧುನಿಕ ಯುಗಕ್ಕೆ ತಕ್ಕಂತೆ ಸುದ್ದಿ ಮಾಡಲು ಸೂಕ್ತ ತಂತ್ರಜ್ಞಾನ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಜೊತೆಗೆ ಆರ್ಥಿಕವಾಗಿ ಸದೃಡರಾಗಲು ಜಾಹಿರಾತು ಇನ್ನಿತರ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಹಿಸಿದರು.

    ಇದೇ ಸಂಧರ್ಭದಲ್ಲಿ ರಾಜ್ಯ ಸಂಘದ ಖಜಾಂಚಿ ಮಂಜು ಎಂ,ಹೊಸಹಳ್ಳಿ,ಪತ್ರಕರ್ತರಾದ ಪ್ರಮೋದ್ ಚಂದ್ರ ಪೈ,ಪ್ರಶಾಂತ್ ಆಚಾರ್ಯ, ಇಮ್ತಿಯಾಜ್, ಅಬುಬಕರ್,ಪುನಿತ್‍ಮೂಡಬಿದರೆ, ಸಂಪತ್, ಅಬಿಲ್,ಶಶಿಕಾಂತ್ ಸೇರಿದಂತೆ ಜಿಲ್ಲೆಯ ಪರ್ತಕರ್ತರು ಉಪಸ್ಥಿತರಿದ್ದರು

    Media Journalists Association to stand as the backbone of journalists

  • ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ

    ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ

    ಹಾಸನ: ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವಕುಸುಮ್-ಸಿ ಯೋಜನೆಯಡಿ ಈಗಾಗೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ 545 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

    ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕುಸುಮ್- ಸಿ ಯೋಜನೆಯಡಿ ಈಗಾಗಲೇ ಸುಮಾರು 200 ಮೆಗಾ ವ್ಯಾಟ್‌ ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಇದರಿಂದ ರೈತರಿಗೆ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸಲು ಹೆಚ್ಚಿನ ಅನುಕೂಲವಾಗಲಿದೆ,” ಎಂದರು.

    “ನಮ್ಮ ಸರ್ಕಾರ ಕುಸುಮ್-ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್‌ಗಳ ಫೀಡರ್ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದೆ. ಇತ್ತೀಚೆಗೆ ಗೌರಿಬಿದನೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಸುಮ್-ಸಿ ಯೋಜನೆಯಡಿ ಸ್ಥಾಪಿಸಿರುವ ಸೋಲಾರ್ ವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಾರೆ. ಫೀಡರ್ ಸೋಲರೈಸೇಷನ್ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ,” ಎಂದು ಹೇಳಿದರು.

    “ಕುಸುಮ್-ಸಿ ಯೋಜನೆಯಡಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ 25,000 ರೂ. ಪರಿಹಾರ ನೀಡುತ್ತಾರೆ,” ಎಂದು ತಿಳಿಸಿದರು.

    “ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಇದ್ದ 4 ಲಕ್ಷ ಅಕ್ರಮ ಪಂಪ್ ಸೆಟ್ ಗಳ ಪೈಕಿ 3 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಫೀಡರ್ ಗಳಿದ 500 ಮೀಟರ್‌ ಒಳಗಿನ ಪಂಪ್‌ಸೆಟ್‌ಗಳಿಗೆ ಇಲಾಖೆಯೇ ಟ್ರಾನ್ಸ್‌ಫಾರ್ಮರ್‌ ಒದಗಿಸಲಿದೆ. 500 ಮೀಟರ್‌ ನಿಂದ ಹೊರಗಿನ ಪಂಪ್‌ ಸೆಟ್‌ಗಳಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗಳನ್ನು ಒದಗಿಸಲಾಗುತ್ತದೆ,” ಎಂದರು.

    “ಇಲಾಖೆ ಅಧಿಕಾರಿಗಳು ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಅಲ್ಲದೇ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಜನಪ್ರತಿನಿಧಿಗಳ ಬಳಿಗೆ ನೀವೇ ತೆರಳಿ ಅವರಿಂದ ಸಲಹೆಗಳನ್ನು ಪಡೆದು ಕೆಲಸ ಮಾಡಬೇಕು. ಅದನ್ನು ಬಿಟ್ಟು ಇಲಾಖೆಗೆ ಕೆಟ್ಟ ಹೆಸರು ಬರುವಂತೆ ಮಾಡಬೇಡಿ. ಆಸಕ್ತಿ ಇಲ್ಲದೆ ಕೆಲಸ ಮಾಡುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡುವ ಮೂಲಕ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ ಎಂದು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ,” ಎಂದು ಹೇಳಿದರು.

    ಇದಕ್ಕೂ ಮುನ್ನ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಇಂಧನ ಇಲಾಖೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವ ಕೆ.ಜೆ.ಜಾರ್ಜ್ ಅವರು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದರು. ಅಲ್ಲದೆ, ಜನಪ್ರತಿನಿಧಿಗಳ ಬಳಿ ತೆರಳಿ ಅವರ ಸಲಹೆ ಪಡೆದು ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಸಭೆಯ ಆರಂಭದಲ್ಲಿ ಮಾತನಾಡಿದ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು, “ಹಾಸನ ಜಿಲ್ಲೆ ವ್ಯಾಪ್ತಿಯಲ್ಲಿ ಗೃಹಜ್ಯೋತಿ ಯೋಜನೆಯಡಿ ಶೇ.99.86 ಪ್ರಗತಿ ಸಾಧಿಸಿದ್ದು, ಸರ್ಕಾರದಿಂದ ಈವರೆಗೂ 375.09 ಕೋಟಿ ರೂ. ಬಿಡುಗಡೆಯಾಗಿದೆ. ಗಂಗಾಕಲ್ಯಾಣ ಯೋಜನೆಯಲ್ಲಿ 1225 ಅರ್ಜಿಗಳು ಬಾಕಿ ಉಳಿದಿದೆ. ಜಿಲ್ಲೆಯಲ್ಲಿ 149031 ಐಪಿ ಸ್ಥಾವರಗಳಿದ್ದು, ವಿದ್ಯುತ್‌ ಮೂಲಸೌಕರ್ಯ ಕಲ್ಪಿಸಲು ಬಾಕಿ ಇರುವ 3658 ಕಾಮಗಾರಿಗಳನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು,”ಎಂದು ಮಾಹಿತಿ ನೀಡಿದರು.

    ಅಲ್ಲದೇ, “ಕುಸುಮ್‌-ಬಿ ಯೋಜನೆಗೆ ಹಾಸನ ಜಿಲ್ಲೆಯಲ್ಲಿ ಒಟ್ಟು 1593 ಅರ್ಜಿಗಳ ನೋಂದಣಿಯಾಗಿದೆ. ತಾಲೂಕುವಾರು 38 ವಿದ್ಯುತ್‌ ವಿತರಣಾ ಕೇಂದ್ರಗಳಿದ್ದು, ಸೋಲಾರ್‌ ಮೂಲಕ 203.84 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುವುದು. ಜಿಲ್ಲೆಯಲ್ಲಿ ಮಳೆಯಿಂದಾಗಿ 1500ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು, 18 ಟ್ರಾನ್ಸ್‌ಫಾರ್ಮರ್‌ಗಳು ಹಾಗೂ 33 ಕಿ.ಮೀ ವಿದ್ಯುತ್‌ ಮಾರ್ಗಗಳಿಗೆ ಹಾನಿ ಆಗಿದ್ದು, ಒಟ್ಟು 2.5 ಕೋಟಿ ರೂ. ನಷ್ಟವಾಗಿದೆ,” ಎಂದು ವಿವರಿಸಿದರು.

    ಸಭೆಯಲ್ಲಿ ಸಂಸದ ಶ್ರೇಯಸ್‌ ಪಟೇಲ್‌, ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಶಾಸಕರಾದ ಎಂ.ಮಂಜು, ಸ್ವರೂಪ್, ಸಿ.ಎನ್. ಬಾಲಕೃಷ್ಣ, ಎಚ್‌.ಕೆ. ಸುರೇಶ್‌, ಎಸ್‌. ಮಂಜುನಾಥ್‌ (ಸಿಮೆಂಟ್‌ ಮಂಜು), ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ಮತ್ತಿತರರು ಪಾಲ್ಗೊಂಡಿದ್ದರು.

    745 MW soon under Kusum-C project. Power generation

  • ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲು ಒತ್ತಾಯ

    ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲು ಒತ್ತಾಯ

    ಬೇಂಗಳೂರು: ಬೆಂಗಳೂರಿನ ವಾರ್ತಾ ಭವನದ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಧರ್ಭದಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಜಿ.ಎಂ.ರಾಜಶೇಖರ್ ಮತ್ತು ಪದಾಧಿಕಾರಿಗಳು, ಪತ್ರಕರ್ತರ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದರು.

    ಸರ್ಕಾರದ ಜನ ಕಲ್ಯಾಣ ಶಕ್ತಿ ಯೋಜನೆಯಲ್ಲಿ ಕೆಲವು ನಿಮಗಳಿಂದ ನಗರ ಹಾಗೂ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸಮಸ್ಯೆ ಉಂಟಾಗಿದ್ದು, ಕೆಲವು ಮಾನದಂಡಗಳಿಂದ ವಿನಾಯಿತಿ ನೀಡಬೇಕು. ತಮ್ಮ ಅವಧಿಯಲ್ಲಿ ಪತ್ರಕರ್ತರ ಅನೇಕ ಸಮಸ್ಯೆಗಳಿಗೆ ಸ್ಪಂಧನೆ ನೀಡಿದ್ದೀರಿ. ನೀವು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಪತ್ರಕರ್ತರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದು,

    ಇದೀಗ ಶಕ್ತಿ ಯೋಜನೆಯಡಿ ಗ್ರಾಮೀಣ ಭಾಗದ ಪತ್ರಕರ್ತರಿಗೆ ಬಸ್ ಪಾಸ್ ನೀಡುವ ವಿಚಾರದಲ್ಲಿ ರೂಪಿಸಲಾಗಿರುವ ಮಾನದಂಡಗಳಲ್ಲಿ ಶಕ್ತಿ ಯೋಜನೆಯಲ್ಲಿರುವಂತೆ ಪತ್ರಕರ್ತರಿಗೂ ಸರಳ ನಿಯಮದಡಿಯಲ್ಲಿ ರಾಜ್ಯಾದ್ಯಂತ ಸಂಚರಿಸಲು ಅನುವು ಮಾಡಿಕೊಟ್ಟು ದಾಖಲೆಗಳ ಆಧಾರದ ಮೇಲೆ(ಆರ್ ಎನ್ ಐ) ನೈಜ ಪತ್ರಕರ್ತರಿಗೆ ಸೌಲಭ್ಯ ದೊರಕಲು ಅನುಕೂಲ ಮಾಡಿಕೊಡಬೇಕೆಂದು ಸಂಘದ ಅಧ್ಯಕ್ಷರು ಮನವಿ ಮಾಡಿದರು.

    ಸಂಘದ ವತಿಯಿಂದ ನೀಡಿದ ಮನವಿಗೆ ಸಿಎಂ ಸಿದ್ಧರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂಧನೆ ನೀಡಿದ ಅವರು, ಗ್ರಾಮೀಣ ಭಾಗದಲ್ಲಿನ ಪತ್ರಕರ್ತರ ಹಿತದೃಷ್ಠಿಯಿಂದ ಬಸ್ ಪಾಸ್ ನೀಡಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದನ್ನು ಮನಗಂಡು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಇದೀಗ ದೇಶದಲ್ಲಿಯೇ ಪ್ರಥಮವಾಗಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲಾಗಿದ್ದು,

    ಬಸ್ ಪಾಸ್ ಪಡೆಯಲು ಈಗಿರುವ ಕೆಲವು ಮಾನದಂಡಗಳನ್ನು ಸಡಿಲಗೊಳಿಸುವ ಬಗ್ಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಅಧ್ಯಕ್ಷರು ಮಾಡಿರುವ ಮನವಿಯನ್ನು ಪರಿಶೀಲನೆ ನಡೆಸಲಾಗುವುದು ಎಂದರು. ಮಾಧ್ಯಮ ಪಟ್ಟಿಯಲ್ಲಿರುವ ಪತ್ರಕರ್ತರ ಕುಟುಂಬದ ಆರೋಗ್ಯ ರಕ್ಷಣೆಗೆ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಜಾರಿಗೊಳಿಸಲಾಗಿದ್ದು, ಇದರಿಂದ ೫ ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ ಎಂದು ಹೇಳಿದರು.

    ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಂಗಾರಪ್ಪ, ಖಜಾಂಚಿ ಮಂಜು ಎಂ.ಹೊಸಹಳ್ಳಿ, ಉಪಾಧ್ಯಕ್ಷರಾದ ಕೃಷ್ಣನ್, ರವೀಂಧ್ರಶೆಟ್ಟಿ, ರಾಜ್ಯ ಪದಾಧಿಕಾರಿಗಳಾದ ರೂಪೇಶ್ ಕುಮಾರ್, ಮಲ್ಲಿಕಾರ್ಜುನ್, ಸದಸ್ಯರಾದ ಮಂಡ್ಯ ಅನಂತರಾಜು, ಮೈಸೂರು ರಘು, ಕನಕಪುರ ಜಗದೀಶ್, ಹೆಚ್.ಡಿ.ಕೋಟೆ ಸೋಮಶೇಖರ್, ರಘುರಾಂ, ರಮೇಶ್ ಕೋಟಿ ಸೇರಿದಂತೆ ಹಲವು ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Demand to provide facilities to real journalists in rural areas

  • ಜುಲೈ 1ರಂದು ರಾಜ್ಯಮಟ್ಟದ ಪತ್ರಿಕಾ ದಿನಾಚರಣೆ

    ಜುಲೈ 1ರಂದು ರಾಜ್ಯಮಟ್ಟದ ಪತ್ರಿಕಾ ದಿನಾಚರಣೆ

    ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಜುಲೈ 1ರಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು , ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಕಾಡೆಮಿಯ ವಾರ್ಷಿಕ ವರದಿ ಬಿಡುಗಡೆ ಮಾಡಲಿದ್ದಾರೆ.

    ಪ್ರಧಾನ ಭಾಷಣ ಪಿ ಸಾಯಿನಾಥ ಹಾಗೂ ರೆಹಮತ ತರೀಕೆರೆ ನಡೆಸಿಕೊಡಲಿದ್ದು, ಸಮಾರಂಭದಲ್ಲಿ ರಿಜ್ವಾನ್ ಅಹಮದ್ ಹಾಗೂ ಸಂಸದರಾದ ಪಿ ಸಿ ಮೋಹನ್ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹಾಗೂ ಪ್ರಾಸ್ತವಿಕ ನುಡಿಯನ್ನು ಆಯುಷ್ಯ ಖಾನಂ ಅಧ್ಯಕ್ಷರು ಕರ್ನಾಟಕ ಮಾಧ್ಯಮ ಅಕಾಡೆಮಿ . ಮತ್ತು ಬಿ ಬಿ ಕಾವೇರಿ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಕಾರ್ಯದರ್ಶಿ , ಹೇಮಂತ್ ನಿಂಬಾಳ್ಕರ್ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ನಾಗೇಂದ್ರ ಪ್ರಸಾದ್ ,ಆರ್ .ಶ್ರೀಧರ್
    ಪದ್ಮ . ಕೆಯುಡಬ್ಲ್ಯೂ ಜೆ ಅಧ್ಯಕ್ಷರಾದ ಶಿವಾನಂದ ತಗಡೂರು . ಜಿ ಎನ್ ಮೋಹನ್ ಅತಿಥಿಗಳಾಗಿರುವ ಈ ಸಮಾರಂಭಕ್ಕೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ.ರಾಜಶೇಖರ್ ಹಾಗು ಪದಾಧಿಕಾರಿಗಳನ್ನು ಬೆಂಗಳೂರಿನಲ್ಲಿ ಅಧಿಕೃತವಾಗಿ ಆಹ್ವಾನಿಸಿದ ಸಂದರ್ಭ.

    State-level Press Day celebrated on July 1st

  • ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮಾಧ್ಯಮ ಅಕಾಡೆಮಿ ಅಧ್ಯಕ್ಷರ ಭೇಟಿ

    ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮಾಧ್ಯಮ ಅಕಾಡೆಮಿ ಅಧ್ಯಕ್ಷರ ಭೇಟಿ

    ಬೆಂಗಳೂರಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಕೇಂದ್ರ ಕಚೇರಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಜಿ.ಎಂ. ರಾಜಶೇಖರ್ ನೇತೃತ್ವದಲ್ಲಿ ಭೇಟಿ ನೀಡಿ ರಾಜ್ಯ ಸಂಘದಿಂದ ಅಕಾಡೆಮಿ ಅಧ್ಯಕ್ಷ ಆಯೇಶ ಖಾನಂ ರವರನ್ನು ಗೌರವಿಸಲಾಯಿತು.

    ನಂತರ ಮಾತನಾಡಿದ ಅವರು ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘದ ಸದಸ್ಯರು ಹಾಗೂ ಸಂಘಟನೆಯೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು ಪತ್ರಿಕೋದ್ಯಮಕ್ಕೆ ಪೂರಕವಾದ ಕರ್ನಾಟಕ ಸರ್ಕಾರದಿಂದ ರಚಿಸಲ್ಪಟ್ಟಿರುವ ಮಾಧ್ಯಮ ಅಕಾಡೆಮಿಯಿಂದ ಇತರ ಸೌಲಭ್ಯಗಳನ್ನು ಕಾರ್ಯಕ್ರಮಗಳನ್ನು ನಡೆಸಲಾಗುವುದು ನಿಮ್ಮ ಸಂಘಟನೆಯ ಸಹಕಾರ ಅಗತ್ಯವಿದೆ ಎಂದರು.

    ಈ ಕುರಿತು ಸಂಘದ ರಾಜ್ಯಾಧ್ಯಕ್ಷರಾದ ಜಿಎಂ ರಾಜಶೇಖರ್ ಮಾತನಾಡಿ ಇಂದಿನ ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿಯಿಂದ ದೊರೆಯುವ ಹಿರಿಯ ಪತ್ರಕರ್ತರ ರಚಿಸಿರುವ ಪುಸ್ತಕಗಳು ಹಾಗೂ ನುರಿತ ಪತ್ರಕರ್ತರಿಂದ ಕಾರ್ಯಗಾರಗಳು ಅಗತ್ಯವಿದ್ದು ನಿಮ್ಮ ಸಹಯೋಗದೊಂದಿಗೆ ಪತ್ರಕರ್ತರು ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಲು ಈ ಕಾರ್ಯಕ್ರಮದಿಂದ ಹೆಚ್ಚಿನ ಅನುಕೂಲವಾಗುತ್ತದೆ. ಸಂಘದಲ್ಲಿ ಹೊಸದಾಗಿ ಸೇರುವ ಪತ್ರಕರ್ತರಿಗೆ ಪತ್ರಿಕೋದ್ಯಮದ ಕುರಿತಾದ ಮಾಧ್ಯಮ ಅಕಾಡೆಮಿಯಲ್ಲಿ ದೊರೆಯುವ ಪುಸ್ತಕಗಳನ್ನು ನೀಡಿದರೆ ಅನುಕೂಲವಾಗಲಿದೆ

    Karnataka Media Journalists Association visits Media Academy President

  • ಸಿಪಿಐ ರೇವಣ್ಣ ವಿರುದ್ದ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ದೂರು

    ಸಿಪಿಐ ರೇವಣ್ಣ ವಿರುದ್ದ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ದೂರು

    ಬೇಲೂರು: ಪಟ್ಟಣದ ನೆಹರು ನಗರ ವೃತ್ತದ ಸಮೀಪ ಕಳೆದ ಗುರುವಾರ ಬೈಕ್ ಹಾಗೂ ಆಟೋ ನಡುವೆ ನಡೆದ ಘಟನೆಗೆ ಸಂಬಂಧಿಸಿದಂತೆ ವರದಿ ಮಾಡಿದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಸದಸ್ಯ ಹಾಗೂ ವಾರ್ತಾಭಾರತಿ ಪತ್ರಿಕೆಯ ವರದಿಗಾರ ಮಹಮದ್ ಅಬ್ರಾರ್ ಮಾಡಿರುವ ಸುದ್ದಿಗೆ ಬೇಲೂರು ವೃತ್ತ ನಿರೀಕ್ಷಕ ರೇವಣ್ಣ ರವರು ಬೆದರಿಸಿ ಧಮ್ಕಿ ಹಾಕಿ ಮಾನಸಿಕವಾಗಿ ಕಿರುಕುಳ ನೀಡಿರುವ ಹಿನ್ನೆಲೆಯಲ್ಲಿ ಅವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಜಿ ಎಂ ರಾಜಶೇಖರ್ ರವರ ನೇತೃತ್ವದಲ್ಲಿ ಪತ್ರಕರ್ತರು ಬುಧವಾರ ಅರಸೀಕೆರೆ ಡಿವೈಎಸ್ಪಿ ಗೋಪಿ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಜಿ ಎಂ ರಾಜಶೇಖರ್ ಪೋಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು ಸಮಾಜದಲ್ಲಿ ಪತ್ರಕರ್ತರು ಹಾಗೂ ಪೋಲಿಸ್ ಅಧಿಕಾರಿಗಳ ನಡುವೆ ಅವಿನಾಭಾವ ಸಂಬಂಧವಿದ್ದು ಈ ರೀತಿ ಘಟನೆ ಯಿಂದ ಪ್ರಾಮಾಣಿಕ ಪತ್ರಕರ್ತರ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ನಡೆಯುತ್ತಿದ್ದು, ಈ ಘಟನೆಯನ್ನು ರಾಜ್ಯ ಸಂಘವು ಖಂಡಿಸುತ್ತದೆ. ಇಂತಹ ಉಡಾಫೆ ವೃತ್ತ ನಿರೀಕ್ಷಕ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಗೋಪಿ ರವರು ಘಟನೆ ಬಗ್ಗೆ ಪರೀಶೀಲಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಅವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು, ಈ ಸಂದರ್ಭದಲ್ಲಿ ಪತ್ರಕರ್ತರಾದ ಹೆಚ್ ಡಿ ರಮೇಶ್, ಬಸವರಾಜು, ಅರುಣ್ ರಜಪೂತ್ ಮಹಮದ್ ಅಬ್ರಾರ್ ವಿನೋದ್ ಕುಮಾರ್, ಚೇತನ್, ನೂರ್ ಅಹಮದ್,ಸೋಮಶೇಖರ್, ಸುನಿಲ್ ಹಾಜರಿದ್ದರು

    Complaint to senior officials for action against CPI Revanna

  • ಮೇ 18ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಮಗಳೂರಿಗೆ ಆಗಮನ

    Hi
    ಮೇ 18 ಮಧ್ಯಾಹ್ನ12ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ
  • ಲೋಕಾಯುಕ್ತ ತನಿಖೆಗೆ ಸಂಪೂರ್ಣ ಸಹಕಾರ ಉಸ್ತುವಾರಿ ಸಚಿವ ಜಾರ್ಜ್

    1. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು ಇದರಲ್ಲಿ ಸಚಿವ ಜಾರ್ಜ್ ಅವರ ಪಾತ್ರವಿದೆ ಎಂದು ಬಿಜೆಪಿ ಅಶ್ವತ್ ನಾರಾಯಣ್ ಲೋಕಾಯುಕ್ತಕ್ಕೆ ದೂರು ನೀಡಿದ್ದು ಒಳ್ಳೆಯ ಕಾರ್ಯ ಪ್ರತಿ ಬಾರಿ ಆರೋಪ ಮಾಡಿ ದೂರ ಸರಿಯುತ್ತಿದ್ದ ಬಿಜೆಪಿ ಯವರು ಇದೀಗ ದೂರು ನೀಡಿರುವುದು ಒಳ್ಳೆಯದು ಎಂದು ವ್ಯಂಗ್ಯವಾಡಿದರು ಲೋಕಾಯುಕ್ತ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಹಗರಣದ ವಿಚಾರದಲ್ಲಿ ತಾರ್ಕಿಕ ಅಂತ್ಯ ಕಾಣಬೇಕು ಎಂಬುದು ನಮ್ಮ ಆಶಯ ಎಂದರು

      Oplus_131072
  • ವಿಜೃಂಭಣೆ ಶ್ರೀದೇವಮ್ಮ ದೇವಿ ರಥೋತ್ಸವ.

    1. ಅರಸೀಕೆರೆ ತಾಲೂಕ್ ಟಿ,ಕೋಡಿಹಳ್ಳಿ ಗ್ರಾಮದ ಶ್ರೀ ದೇವಮ್ಮ ದೇವಿ ಮಹಾ ದಿವ್ಯ ರಥೋತ್ಸವ ಭಾನುವಾರ ಅತ್ಯಂತ ವಿಜೃಂಭಣೆಯಿಂದ ನೆರವೆರಿತು.
      ತಳಿರು ತೋರಣ ವಿವಿಧ ಹೂವುಗಳಿಂದ ವಿಶೇಷವಾಗಿ ಅಲಂಕರಿಸಿದ ರಥದಲ್ಲಿ ಗ್ರಾಮದ ಶ್ರೀ ದೇವಮ್ಮ ದೇವಿ,ಹಾಗೂ ತಳಲೂರು ಗ್ರಾಮದ ಬನ್ನಿಮಹಾಕಾಳಿ ಅಮ್ಮನವರನ್ನು ಕೂರಿಸಿ ಗ್ರಾಮದ ಧೂತರಾಯಸ್ವಾಮಿ,ಚಲುವರಾಯಸ್ವಾಮಿ,ಕೆಂಚಯರಾಯಸ್ವಾಮಿ.ದೇವರುಗಳ ಸಮ್ಮುಖದಲ್ಲಿ ಸಾವಿರಾರು ಭಕ್ತರು ಜಯಘೋಷದೊಂದಿಗೆ ರಥವನ್ನು ಎಳೆದರು.
      ರಥೋತ್ಸವಕ್ಕೂ ಮುನ್ನ ದೇವಿಯವರ ಮಧುವಣಿಗೆಶಾಸ್ತ್ರ,ಕಂಕಣ ಬಂಧನ,ಅಮ್ಮನವರಿಗೆ,ರುದ್ರಾಭಿಷೇಕ,ಧ್ವಜಾರೋಹಣ,ಕಳಸಾರೋಹಣ,
      ಸೂರ್ಯಮಂಡಲೋತ್ಸವ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳು ಜರುಗಿದವು.
      ಭಕ್ತರು ರಥದ ಗಾಲಿಗೆ ತೆಂಗಿನಕಾಯಿ ಹೊಡೆಯುವುದು, ರಥದ ಗಾಲಿಗೆ ಎಣ್ಣೆ ಹಚ್ಚುವ ಮೂಲಕ ಹರಕೆ ತೀರಿಸಿದರು.
      ರಥದ ಕಳಸಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಕೋರಿಕೆ ಹಿಡೆರುವಂತೆ ದೇವರಲ್ಲಿ ಪ್ರಾರ್ಥಿಸಿದ್ದು ವಿಶೇಷವಾಗಿತ್ತು.
      ಬಂದಂತಹ ಭಕ್ತಾಧಿಗಳಿಗೆ ಪಾನಕ ಫಲಹಾರ ಅನ್ನಸಂತರ್ಪಣೆ ಕಾರ್ಯ ನೆರವೆರಿತು.