Category: ರಾಜ್ಯ

  • ಸಮಾಜದ ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು

    ಸಮಾಜದ ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು

    ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ JU ಸಮೂಹ ಸಂಸ್ಥೆಗಳ ವತಿಯಿಂದ JU ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್ ನಲ್ಲಿ ಆಯೋಜಿಸಲಾಗಿದ್ದ Darul Quran Campas ಅನ್ನು ಉದ್ಘಾಟಿಸಿ ಮಾತನಾಡಿದರು.

    ಯಾವುದೇ ಜಾತಿ ಧರ್ಮಕ್ಕೆ ಸೇರಿದ್ದರೂ, ಪ್ರತಿಯೊಬ್ಬರಿಗೂ ವಿದ್ಯೆ ಮುಖ್ಯ. ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಅತ್ಯಂತ ಮುಖ್ಯ. ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗಲು ಶಿಕ್ಷಣ ಅಗತ್ಯವೆಂದು ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು. ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಶಿಕ್ಷಿತರಾಗಲೇಬೇಕು. ಸಂವಿಧಾನ ಅಸ್ತಿತ್ವಕ್ಕೆ ಬಂದ ನಂತರವಷ್ಟೇ ಎಲ್ಲರಿಗೂ ಶಿಕ್ಷಣ ಪಡೆಯುವ ಸಮಾನ ಅವಕಾಶ ಸಾಧ್ಯವಾಯಿತು. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಇದಕ್ಕಾಗಿ ಅನುದಾನವನ್ನೂ ನೀಡಲಾಗುವುದು. ಅಲ್ಲದೇ ವಸತಿ ಶಾಲೆಗಳನ್ನು ಸ್ಥಾಪಿಸಿ ಮುಸಲ್ಮಾನ ಬಂಧುಗಳಿಗೆ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಿಕ್ಷಣಕ್ಕೂ ಅನುಕೂಲವಾಗಲಿದೆ ಎಂದರು.

    ತಮ್ಮ ಧರ್ಮವನ್ನು ಪಾಲಿಸುತ್ತಾ ಪರ ಧರ್ಮವನ್ನು ಗೌರವಿಸಬೇಕು, ಸಹಬಾಳ್ವೆ, ಸೌಹಾರ್ದತೆಯನ್ನು ಪಾಲಿಸಬೇಕು ಎಂದು ನಮ್ಮ ಸಂವಿಧಾನ ತಿಳಿಸುತ್ತದೆ. ಯಾವುದೇ ಧರ್ಮ ದ್ವೇಷವನ್ನು ಪ್ರಚೋದಿಸುವುದಿಲ್ಲ. ದ್ವೇಷರಾಜಕಾರಣ ಮಾಡಬಾರದು. ದ್ವೇಷದಿಂದ ಯಾರ ಮನಸ್ಸನ್ನೂ ಗೆಲ್ಲಲು ಸಾಧ್ಯವಿಲ್ಲ.ಈ ಅರಿವಿಗೆ ಶಿಕ್ಷಣ ಮುಖ್ಯ. ಅಂಬೇಡ್ಕರ್ ಅವರು ತಿಳಿಸಿದಂತೆ, ಸಾಮಾಜಿಕ ಅಸಮಾನತೆ ಹೋಗಲಾಡಿಸಬೇಕು ಎಂದರು.

    ಸಮಾನ ಅವಕಾಶಗಳನ್ನು ಒದಗಿಸುವ ಪ್ರಯತ್ನ ಮಾಡಬೇಕು. ಸ್ವಾತಂತ್ರ್ಯ ರಕ್ಷಣೆ ಮಾಡಲು ಅಸಮಾನತೆ ತೆಗೆದುಹಾಕಬೇಕು. ಅಸಮಾನತೆ ತೆಗೆದು ಹಾಕದಿದ್ದರೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದಿಲ್ಲ. ಶಿಕ್ಷಣದಿಂದ ಮಾತ್ರ ಸಮಾನತೆ ತರಲು, ಜ್ಞಾನ, ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಸಾಮಾಜಿಕ ಗೌರವ ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

    ಸಂಘ ಸಂಸ್ಥೆಗಳು, ಸರ್ಕಾರದ ಸಂಸ್ಥೆಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಕೊಟ್ಟು ಕೆಲಸ ಮಾಡಬೇಕು. ನಮ್ಮ ಸರ್ಕಾರದ 4900 ಕೋಟಿ ಬಜೆಟ್ ನಲ್ಲಿ ಹೆಚ್ಚು ಮೊತ್ತವನ್ನು ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.

    ಅಜೀಂ ಪ್ರೇಂ ಜಿ ಅವರ ವಿಪ್ರೋ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಆರು ದಿನಗಳ ಕಾಲ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಇದಲ್ಲದೇ ರಾಗಿ ಮಾಲ್ಟ್ , ಹಾಲು, ಬಿಸಿಯೂಟ ಒದಗಿಸಲಾಗುತ್ತಿದೆ ಎಂದರು. ಕಾಲೇಜಿನಲ್ಲಿ ಓದುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಅಜೀಂ ಪ್ರೇಂ ಜಿ ಅವರೂ ಇದಕ್ಕೆ ಕೈಜೋಡಿಸುತ್ತಿದ್ದಾರೆ. ಅವರಿಗೆ ಸರ್ಕಾರದ ಪರವಾಗಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

    ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಸೀಮಿತವಾಗಿದೆ. ಇತ್ತೀಚೆಗೆ ಮುಸಲ್ಮಾನ ಸಮುದಾಯದ ಹೆಣ್ಣು ಮಕ್ಕಳು ವಿದ್ಯಾವಂತರಾಗುತ್ತಿರುವುದು ಉತ್ತಮ ಬೆಳವಣಿಗೆ. ಹಿಂದೆ ಶೂದ್ರ ಹೆಣ್ಣುಮಕ್ಕಳಿಗೆ ವಿದ್ಯೆ ಕಲಿಯುವ ಅವಕಾಶ ಇರಲಿಲ್ಲ. ಈಗ ಸಮಾನ ಅವಕಾಶಗಳು ಲಭ್ಯವಾಗುವಂತೆ ಮಾಡಲಾಗುತ್ತಿದೆ.

    ಅನ್ನಭಾಗ್ಯ, ಗೃಹ ಜ್ಯೋತಿ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಈಗ ಇದನ್ನೇ ನಕಲು ಮಾಡುತ್ತಿದ್ದಾರೆ ಎಂದರು. ಅಸಮಾನತೆ ಹೋಗಬೇಕೆನ್ನುವ ಕಾರಣದಿಂದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಸಂವಿಧಾನ ಇದನ್ನೇ ಹೇಳುತ್ತದೆ. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನ ತಿಳಿದವರಿಗೆ ಸಮಾಜಮುಖಿ ಕೆಲಸ ಮಾಡಲು ಸಾಧ್ಯ ಎಂದರು.

    ಮಕ್ಕಳನ್ನು ಯಾವುದೇ ಕಾರಣಕ್ಕೂ ಅವಿದ್ಯಾವಂತರನ್ನಾಗಿಸಬಾರದು. ಶಿಕ್ಷಣ ಕೊಡಿಸಬೇಕು ಎಂದು ಮುಖ್ಯಮಂತಿಗಳು ಆಗ್ರಹಿಸಿದರು. ಎಲ್ಲರೂ ವಿದ್ಯಾವಂತರಾದರೆ ಭವ್ಯ ಭಾರತ ಕಟ್ಟಬಹುದು, ಸಮ ಸಮಾಜ ನಿರ್ಮಿಸಬಹುದು. ನಾವೂ ನೀವೂ ಎಲ್ಲರೂ ಮೊದಲು ಭಾರತೀಯರು.ಆಮೇಲೆ ಹಿಂದೂ, ಮುಸ್ಲಿಂ, ಕ್ರೈಸ್ತರು ಎನಿಸಿಕೊಳ್ಳುತ್ತೇವೆ. ಎಲ್ಲರೂ ಭಾರತೀಯರಾಗಿ ಭಾರತವನ್ನು ಕಟ್ಟೋಣ. ದ್ವೇಷ ಬಿಟ್ಟು ಪರಸ್ಪರ ಪ್ರೀತಿ ಮಾಡೋಣ ಎಂದು ಕರೆ ನೀಡಿದರು.

    Everyone must be educated to eliminate inequality in society.

  • ಹಾಸನಾಂಬ ದರ್ಶನೋತ್ಸವಕ್ಕೆ ತೆರೆ

    ಹಾಸನಾಂಬ ದರ್ಶನೋತ್ಸವಕ್ಕೆ ತೆರೆ

    ಹಾಸನ: ಜಿಲ್ಲೆಯ ಶಕ್ತಿದೇವತೆ, ಹಾಸನಾಂಬ ದರ್ಶನೋತ್ಸವಕ್ಕೆ ಗುರುವಾರ ತೆರೆ ಬಿದ್ದಿತು. ಮಧ್ಯಾಹ್ನ 1.07ಕ್ಕೆ ಸಕಲ ವಿಧಿವಿಧಾನಗಳೊಂದಿಗೆ ಹಾಸನಾಂಬ ದೇಗುಲದ ಗರ್ಭಗುಡಿಯ ಬಾಗಿಲು ಬಂದ್ ಮಾಡಲಾಯಿತು.

    ಸಂಪ್ರದಾಯದಂತೆ ಪೂಜೆ, ನೈವೇದ್ಯ ಸಲ್ಲಿಸಿ ನಂದಾದೀಪ ಹಚ್ಚಿಟ್ಟ ಅರ್ಚಕರು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲಿಗೆ ಬೀಗ ಹಾಕಿ ಕೀಲಿಯನ್ನು ದೇವಾಲಯದ ಆಡಳಿತಾಧಿಕಾರಿಗೆ ಹಸ್ತಾಂತರಿಸಿದರು.

    ಈ ಬಾರಿ 26 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು, ಟಿಕೆಟ್, ಲಡ್ಡುಪ‍್ರಸಾದ ಮಾರಾಟದಿಂದ ₹ 21.82 ಕೋಟಿ ಆದಾಯ ಸಂಗ್ರಹವಾಗಿದೆ.

    ಮುಂದಿನ ವರ್ಷ ಅ.29ರಿಂದ ನ.11ರವರೆಗೆ ಹಾಸನಾಂಬ ದೇಗುಲದ ಬಾಗಿಲು ತೆರೆಯಲಿದ್ದು, ಭಕ್ತರಿಗೆ ದರ್ಶನ ಲಭ್ಯವಾಗಲಿದೆ.

    ಗರ್ಭಗುಡಿಯ ಬಾಗಿಲು ಮುಚ್ಚುವುದಕ್ಕೂ ಮುನ್ನ ಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡೋತ್ಸವ ಸಂಭ್ರಮದಿಂದ ನೆರವೇರಿತು. ಜಿಲ್ಲಾಧಿಕಾರಿ ಲತಾಕುಮಾರಿ ಅವರು ಕೆಂಡ ಹಾಯ್ದು ಗಮನಸೆಳೆದರು.

    ಬಳಿಕ ಮಾತನಾಡಿದ ಅವರು, ‘ಕಳಸ ಹೊತ್ತ ಭಕ್ತರು ಕೆಂಡ ಹಾಯ್ದದ್ದು ನೋಡಿ ನನಗೂ ಇಂಗಿತ ಬಂತು. ಮೊದಲು ಭಯವಾಯಿತು, ನಂತರ ಭಕ್ತಿಯಿಂದ ಕೈ ಮುಗಿದು ಹೋದೆ. ಏನೂ ಆಗಲಿಲ್ಲ’ ಎಂದು ಅನುಭವ ಹಂಚಿಕೊಂಡರು.

    Hassanamba Darshan Festival opens

  • ಇಟಲಿ ಟೆಂಪಲ್‌’ ಸುತ್ತಿ ಸರಿಯಾದ ಕಪ್ಪ ಒಪ್ಪಿಸಿದರೆ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆ

    ಇಟಲಿ ಟೆಂಪಲ್‌’ ಸುತ್ತಿ ಸರಿಯಾದ ಕಪ್ಪ ಒಪ್ಪಿಸಿದರೆ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆ

    ದಾವಣಗೆರೆ: ಚಾಮುಂಡೇಶ್ವರಿ, ಮಾರಮ್ಮನ ದೇಗುಲ ಕಾಂಗ್ರೆಸ್‌ಗೆ ಇಷ್ಟವಾಗುವುದಿಲ್ಲ. ದೆಹಲಿಯಲ್ಲಿರುವ ‘ಇಟಲಿ ಟೆಂಪಲ್‌’ ಸುತ್ತಿ ಸರಿಯಾದ ಕಪ್ಪ ಒಪ್ಪಿಸಿದರೆ ಮಾತ್ರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.

    ‘ಡಿ.ಕೆ. ಶಿವಕುಮಾರ್‌ ದಾರಿತಪ್ಪಿದ ಮಗನಂತೆ ವರ್ತಿಸುತ್ತಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿಸುವುದು ಬಿಟ್ಟು ದೇಗುಲಗಳಿಗೆ ಅಲೆದಾಡುತ್ತಿದ್ದಾರೆ. ದೇಗುಲ ದರ್ಶನ (ಟೆಂಪಲ್‌ ರನ್‌) ಮಾಡಿದರೆ ಪ್ರಯೋಜನವಿಲ್ಲ ಎಂಬುದನ್ನು ಕಾಂಗ್ರೆಸ್‌ ನಾಯಕರೇ ಹೇಳಿದ್ದಾರೆ. ಕಾಂಗ್ರೆಸ್‌ನ ‘ದೊಡ್ಡ ದೇಗುಲ’ ಸುತ್ತದೇ ಹೋದರೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ’ ಎಂದು ಗುರುವಾರ ಸುದ್ದಿಗಾರರೆದುರು ಅಭಿಪ್ರಾಯ ವ್ಯಕ್ತಪಡಿ ಸಿದರು.

    ‘ನವೆಂಬರ್‌ ಕ್ರಾಂತಿಯ ಬಗ್ಗೆ ನಾನು ನೀಡಿದ ಹೇಳಿಕೆಯನ್ನು ಕಾಂಗ್ರೆಸ್‌ ಅಲ್ಲಗಳೆದಿತ್ತು. ಸಿದ್ದರಾಮಯ್ಯ ಅವರ ರಾಜಕೀಯ ಸಂಧ್ಯಾಕಾಲದ ಬಗ್ಗೆ ಅವರ ಪುತ್ರ, ವಿಧಾನಪರಿಷತ್‌ ಸದಸ್ಯ ಯತೀಂದ್ರ ಬಹಿರಂಗ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ಒಡೆದ ಮನೆಯಾಗಿದ್ದು, ಡಿ.ಕೆ. ಶಿವಕುಮಾರ್‌ ಅವರಿಗೆ ಪಂಗನಾಮ ಹಾಕಲು ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ’ ಎಂದರು.

    ‘ಬಿಹಾರ ಚುನಾವಣೆಗೆ ₹ 400 ಕೋಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನೆಯಲ್ಲಿ ಔತಣಕೂಟ ಏರ್ಪಡಿಸಿ ಸಚಿವರಿಗೆ ಈ ವಿಚಾರ ಮುಟ್ಟಿಸಿದ್ದಾರೆ. ಇಲಾಖಾವಾರು ಕಪ್ಪವನ್ನು ನಿಗದಿಪಡಿಸಲಾಗಿದೆ. ಕಪ್ಪ ಕೊಟ್ಟವರನ್ನು ಮಾತ್ರ ಸಂಪುಟದಲ್ಲಿ ಉಳಿಸಿಕೊಳ್ಳಲಾಗುತ್ತಿದೆ. ಸಚಿವ ಸ್ಥಾನಕ್ಕೆ ಕಪ್ಪವೇ ಮಾನದಂಡ’ ಎಂದು ಹೇಳಿದರು.

    If the ‘Italian Temple’ is wrapped and the right Kappa is handed over, D.K. Shivakumar will become the Chief Minister.

  • ನಾವು ಆರ್.ಎಸ್ .ಎಸ್ ನಿಷೇಧಿಸಿಲ್ಲ  

    ನಾವು ಆರ್.ಎಸ್ .ಎಸ್ ನಿಷೇಧಿಸಿಲ್ಲ  

    ಪುತ್ತೂರು:  ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.

    2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.

    ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು.

    We have not banned RSS.

  • ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು

    ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು

    ಪುತ್ತೂರು: ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಅಶೋಕ್ ಅವರು ಕಾಂಗ್ರೆಸ್ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ಪ್ರತಿ ವರ್ಷ ವಸ್ತ್ರದಾನ ಮಾಡುವ ಕಾರ್ಯವನ್ನು 13 ವರ್ಷಗಳಿಂದ ಮಾಡ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಇತರರಿಗೆ ಅವರು ಸ್ಫೂರ್ತಿಯಾಗಲಿ ಎಂದರು.

    ಸಮಾಜದಲ್ಲಿನ ದುರ್ಬಲರಿಗೆ ತಮ್ಮ ಗಳಿಕೆಯ ಒಂದು ಭಾಗವನ್ನು ನೀಡುವುದು ಒಳ್ಳೆಯ ಕೆಲಸ ಎಂದರು. ಸಮ ಸಮಾಜ ನಿರ್ಮಾಣ ಸಂವಿಧಾನದ ಉದ್ದೇಶ. ಕಾಯಕ ಮತ್ತು ದಾಸೋಹ ತತ್ವವನ್ನು ಬಸವಣ್ಣ ನಮಗೆ ನೀಡಿದ್ದಾರೆ ಎಂದರು.

    ನಮ್ಮ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಪರಸ್ಪರ ಕಚ್ಚಾಡುವ, ಅಸಮಾನತೆವುಳ್ಳ ಸಮಾಜ ನಿರ್ಮಾಣವಾಗಬಾರದು. ಇತರೆ ಧರ್ಮಗಳ ಬಗ್ಗೆ ಸಹಿಷ್ಣುತೆ ಅಗತ್ಯ. ಸಹಬಾಳ್ವೆ ಇರಬೇಕು. ಇದನ್ನು ಎಲ್ಲರೂ ಪಾಲಿಸಿದಾಗ ಸಂವಿಧಾನದ ಧ್ಯೇಯೋದ್ದೇಶಗಳನ್ನು ಪಾಲಿಸಿದಂತಾಗುತ್ತದೆ ಎಂದರು.

    ರಾಜ್ಯ ಹಸಿವು ಮುಕ್ತವಾಗಬೇಕೆಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ತಲಾ ಆದಾಯದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಾರೆ. ಸರ್ಕಾರದ ಬಳಿ ಹಣವಿಲ್ಲದಿದ್ದರೆ ಕಾಂಗ್ರೆಸ್ ಸರ್ಕಾರ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2500 ಕೋಟಿ ರೂ. ಗಳ ಅನುದಾನ ಕೊಡಲು ಸಾಧ್ಯವಾಗುತ್ತಿತ್ತೆ ಎಂದು ಪ್ರಶ್ನಿಸಿದರು.

    ಟೀಕೆ ಮಾಡುವವರು ಸುಮ್ಮನೆ ಟೀಕೆ ಮಾಡುತ್ತಾರೆ. ಏಕೆಂದರೆ ಜಾತಿ ಧರ್ಮದ ಹೆಸರಿನಲ್ಲಿ ಜಗಳ ತರುವುದರಲ್ಲಿ ಜಿಲ್ಲೆ ನಂಬರ್ ಒನ್ ಸ್ಥಾನದಲ್ಲಿತ್ತು. ಅದಕ್ಕೆಲ್ಲಾ ನಮ್ಮ ಸರ್ಕಾರ ಕಡಿವಾಣ ಹಾಕಿದೆ ಎಂದರು.

    ಜಾತಿ ಧರ್ಮ ಎಂದು ಜಗಳ ತರುವವರ ಮಕ್ಕಳನ್ನು ಇದಕ್ಕೆ ಕಳಿಸುವುದಿಲ್ಲ. ಬಡವರ ಮಕ್ಕಳನ್ನು, ಅಮಾಯಕರನ್ನು ಕಳಿಸುತ್ತಾರೆ. ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಈಗ ಸುಧಾರಣೆಯಾಗಿದೆಯಲ್ಲವೆ ಎಂದು ಕೇಳಿದರು. ಪೋಲಿಸ್ ಅಧಿಕಾರಿಗಳು ದಕ್ಷರಾಗಿದ್ದರೆ ಬದಲಾವಣೆ ತರಲು ಸಾಧ್ಯ. ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು ಎಂದರು.

    ಬಜೆಟ್ ನಲ್ಲಿ ಘೋಷಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯಕೀಯ ಕಾಲೇಜು ಪುತ್ತೂರಿನಲ್ಲಿಯೇ ನಿರ್ಮಾಣವಾಗಲಿದೆ ಈ ಬಗ್ಗೆ ಯಾರಿಗೂ ಅನುಮಾನ ಬೇಡವೆಂದು ಮುಖ್ಯಮಂತ್ರಿಗಳು ತಿಳಿಸಿದರು.

    ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿಗಳನ್ನು ಸರ್ಕಾರ ವೆಚ್ಚ ಮಾಡಿದ್ದು , ಸರ್ಕಾರ ದಿವಾಳಿಯಾಗಿಲ್ಲ ,
    ಆಗುವುದೂ ಇಲ್ಲ. ಮುಂದಿನ ಚುನಾವಣೆಯಲ್ಲಿ ಎಂಟೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಇದಕ್ಕೆ ನೀವು ಆಶೀರ್ವಾದಿಸಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

    ವೈದ್ಯಕೀಯ ಕಾಲೇಜು ನಿರ್ಮಾಣವನ್ನು ಸರ್ಕಾರ ಮಾಡಿಯೇ ತೆರಳಲಿದೆ. ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನಮ್ಮ ಬದ್ಧತೆಯಾಗಿದೆ. ಇಲ್ಲಿಯವರೆಗೆ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಿದೆ ಎಂದರು. ಬಡವರ ಕೆಲಸವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

    2017ರಲ್ಲಿ ಜಿ ಎಸ್ ಟಿ ಜಾರಿಗೆ ತಂದಿದ್ದು ನರೇಂದ್ರ ಮೋದಿ. ಎಂಟು ವರ್ಷಗಳಾಗಿದೆ. ಎಂಟು ವರ್ಷಗಳಲ್ಲಿ ಭಾರತೀಯರಿಂದ ತೆರಿಗೆ ಲೂಟಿ ಮಾಡಿದ್ದೂ ಅವರೇ. ಈಗ ಕಮ್ಮಿ ಮಾಡಿ ಈಗ ದೀಪಾವಳಿ ಗಿಫ್ಟ್ ಎಂದು ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿಯ ಸೋಗಲಾಡಿತನವನ್ನು ಟೀಕಿಸಿದರು. ಜಿಎಸ್ ಟಿ ಬದಲಾವಣೆಯ ಪರಿಣಾಮದಿಂದಾಗಿ ಕರ್ನಾಟಕಕ್ಕೆ 15 ಸಾವಿರ ಕೋಟಿ ನಷ್ಟವಾಗುತ್ತಿದೆ ಎಂದರು.

    ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದರು. ಈ ಬಗ್ಗೆ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಹೆಚ್.ಕೆ ಪಾಟೀಲ್ ಅವರು ಕಾನೂನು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದರು.

    ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಯಾವುದೇ ಸಂಘಟನೆ ಸಾರ್ವಜನಿಕ ಅಥವಾ ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆ ಹಮ್ಮಿಕೊಂಡರೆ ನಿಷೇಧ ಮಾಡಬೇಕೆಂದು ಆದೇಶ ಹೊರಡಿಸಿದ್ದರು. ನಾವೂ ಅದನ್ನೇ ಮಾಡಿದ್ದೇವೆ. ಅದಕ್ಕೆ ಆರ್ ಎಸ್ ಎಸ್ ಬಲಿ ಹಾಕಲು ಹೊರಟಿದ್ದಾರೆ ಎಂದು ಟೀಕಿಸುತ್ತಾರೆ. ನಾವು ಮಾಡಿದರೆ ಜಾತಿ ಬಣ್ಣ ಕಟ್ಟುತ್ತಾರೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಇಂಥ ಸೂಕ್ಷ್ಮಗಳನ್ನು ಅರಿತುಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಜೇನು ಕಚ್ಚಿ ಮೃತಪಟ್ಟ ವ್ಯಕ್ತಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದರು.

    To build an equal society those who have should give to those who have not.

  • ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ

    ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ

    ಮೈಸೂರು, ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು ಹೊರಡಿಸಿದೆ.

    ಬಿಜೆಪಿ ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರ್ಕಾರ ಯಾವುದೇ ನಿಗಧಿತವಾದ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ. ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಈ ವಿಷಯದಲ್ಲಿ ಸಮಾಜದ ಶಾಂತಿಭಂಗವಾಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ.

    ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಗುತ್ತಿಗೆದಾರರ ಬಾಕಿ ಪಾವತಿಯಾಗದಿದ್ದರೆ ಮಾನ್ಯ ರಾಜ್ಯಪಾಲರನ್ನು ಭೇಟಿಮಾಡುವುದಾಗಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಂಬಂಧಪಟ್ಟ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

    ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ: ಮೈಸೂರಿನ ಉದ್ಯೋಗ ಮೇಳ ಯಶಸ್ವಿಯಾಗಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ನಿನ್ನೆಯ ಉದ್ಯೋಗ ಮೇಳ ಯಶಸ್ವಿಯಾಗಿ ನೆರವೇರಿದ್ದು, ಈ ಕಾರ್ಯಕ್ರಮವನ್ನು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

    No organizations were targeted

  • ಒಂದು ಫೋಟೋ ಸಾವಿರ ಪದಗಳಿಗೆ ಸಮ

    ಒಂದು ಫೋಟೋ ಸಾವಿರ ಪದಗಳಿಗೆ ಸಮ

    ಮೈಸೂರು:  ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

    ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್ ಗಳಿಗೆ “ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ” ವಿತರಿಸಿ ಮಾತನಾಡಿದರು.

    ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

    ಪತ್ರಕರ್ತರು ಸತ್ಯ ಹೇಳ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಗೌರವ ತರುವುದಿಲ್ಲ ಎಂದರು.

    ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ ನೀವು. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದರು.

    ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಡ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಅನುಕೂಲ ಎನ್ನುವುದನ್ನು ಯೋಚಿಸಿ ಎಂದು ಸಲಹೆ ನೀಡಿದರು.

    ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಶಾಸಕರಾದ ಹರೀಶ್ ಗೌಡ, ವಿಧಾನ‌ ಪರಿಷತ್ ಸದಸ್ಯರಾದ ಶಿವಕುಮಾರ್, ಅಸೋಸಿಯೇಷನ್ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

    A photo is worth a thousand words

  • RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು

    RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು

    ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು.

    ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.

    ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.

    ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.

    ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು ಎಂದು ವಿವರಿಸಿದರು. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು , ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದರು.

    ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು. ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದರು.

    ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು. ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ ಅಸಮಾನತೆ ಸೃಷ್ಟಿಯಾಗಿದೆ.
    ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದರು.

    ನಿಮ್ಮ ಸಹವಾಸ ಸರಿಯಾಗಿರಲಿ ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಬೇಡ ಎಂದು ಕರೆ ನೀಡಿದರು.

    The RSS opposed the Ambedkar Constitution

  • ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ

    ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ

    ಮೈಸೂರು,: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

    ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

    ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಯಾವ ರಾಜ್ಯದ ಫಲಿತಾಂಶವೂ ಯಾವ ರಾಜ್ಯದ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

    ಕ್ರಾಂತಿ ಎಂದರೇನು? ಬದಲಾವಣೆ ಕ್ರಾಂತಿ ಅಲ್ಲ ಎಂದು ನವೆಂಬರ್ ಕ್ರಾಂತಿ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರಿಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಯಾರು ಈ ಬಗ್ಗೆ ಹೇಳಿದರೂ ಮಾಧ್ಯಮದವರು ನಿರ್ಲಕ್ಷಿಸಬೇಕು ಎಂದರು.

    ಶಾಲಾ ಆವರಣದಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013 ರಲ್ಲಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸರ್ಕಾರಿ ಆದೇಶ ಹೊರಡಿಸಿರುವ ಬಗ್ಗೆ ಮಾತನಾಡಿ ಕೇವಲ ಆರ್.ಎಸ್.ಎಸ್ ಚಟುವಟಿಕೆಗಳಿಗೆ ಮಾತ್ರವಲ್ಲ ಎಲ್ಲಾ ಸಂಘ ಸಂಸ್ಥೆಗಳ ಚಟುವಟಿಕೆಗಳ ಮೇಲೂ ಸರ್ಕಾರಿ ಆದೇಶ ಅನ್ವಯವಾಗುತ್ತದೆ. ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ , ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.

    ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ವವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸಮೀಕ್ಷೆ ಹಿಂದುಳಿದವರಿಗಲ್ಲಾ ಎಂದು ಅರ್ಥ ಮಾಡಿಕೊಳ್ಳಬೇಕು. ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ ? ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ ಎಂದು ಈಗಾಗಲೇ ಹೇಳಿದೆ. ಇದು ಎಲ್ಲಾ ಜನಸಂಖ್ಯೆಯನ್ನು ಒಳಗೊಂಡಂತೆ ಮಾಡುತ್ತಿರುವ ಸಮೀಕ್ಷೆ. ಶಕ್ತಿ ಯೋಜನೆಯಡಿ ಬಡವರು , ಮೇಲ್ಜಾತಿಯವರು ಎಲ್ಲರೂ ಬಳಸಿಕೊಳ್ಳುತ್ತಾರೆ. ಈ ಬಗ್ಗೆ ತಪ್ಪು ಮಾಹಿತಿ ಹೋಗಿದೆ. ಸರ್ಕಾರ ಈ ಬಗ್ಗೆ ಜಾಹೀರಾತು, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಂದೇಶಗಳನ್ನು ಜನರಿಗೆ ತಲುಪಿಸಿದೆ ಎಂದರು.

    ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿಯನ್ನು ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಈ ಜನರ ಆರ್ಥೀಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಾಗಿದೆ ಎಂದರು.

    ಆಂಧ್ರಪ್ರದೇಶದಲ್ಲಿ ವಿದೇಶಿ ಕಂಪನಿಗಳು ಹೂಡಿಕೆ ಮಾಡುತ್ತಿರುವ ಬಗ್ಗೆ ಆಂಧ್ರದ ಸಚಿವರೊಬ್ಬರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಹೂಡಿಕೆದಾರರು ತಮಗೆ ಅನುಕೂಲಕರವಾದ ಪ್ರದೇಶಗಳಲ್ಲಿ ಬಂಡವಾಳ ಹೂಡುತ್ತಾರೆ. ಕರ್ನಾಟಕದಲ್ಲಿ ಬಹಳಷ್ಟು ಹೂಡಿಕೆದಾರರು ಬಂಡವಾಳ ಈಗಾಗಲೇ ಹೂಡಿಕೆ ಮಾಡಿದ್ದು, ಅವರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗಿರುವ ಬಗ್ಗೆ ದೂರಿದ್ದಾರೆಯೇ? ಐಫೋನ್ ತಯಾರಿಕೆಯ ದೊಡ್ಡ ಹೂಡಿಕೆ ಕರ್ನಾಟಕದಲ್ಲಿಯೇ ಆಗಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದರು.

    ಗುತ್ತಿಗೆದಾರರ ಸಂಘದ ಅಧ್ಯಕ್ಷರು ಕಾಂಗ್ರೆಸ್ ಸರ್ಕಾರದಲ್ಲಿಯೂ ಕಮೀಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಉತ್ತರಿಸುತ್ತಾ, ಆರೋಪ ಮಾಡುತ್ತಿರುವವರು ನ್ಯಾಯಾಲಯದ ಮೊರೆ ಹೋಗಲಿ. ಸರ್ಕಾರದ ವಿರುದ್ಧ ಉದ್ದೇಶಪೂರ್ವಕವಾಗಿ ಆರೋಪಿಸಲಾಗುತ್ತಿದೆ ಎಂದರು.

    India bloc to win Bihar state elections

  • ನಿಯಮಾನುಸಾರ ಸಂಪೂರ್ಣ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

    ನಿಯಮಾನುಸಾರ ಸಂಪೂರ್ಣ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

    ಮೈಸೂರು:  ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

    ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪರಿಹಾರವನ್ನು ಗಾಯಾಳು ಲೆಕ್ಕದಲ್ಲಿ ಕೊಡಬಾರದು. ಬದುಕು ಕಳೆದುಕೊಂಡ, ಕುಟುಂಬದ ಆಸರೆ ಕಳೆದುಕೊಂಡವರ ಲೆಕ್ಕದಲ್ಲಿ ಪೂರ್ತಿ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

    Chief Minister Siddaramaiah suggests to provide full compensation as per rules