Category: ರಾಜ್ಯ

  • ಆರ್‌ಎಸ್‌ಎಸ್‌ ಚಟುವಟಿಕೆ ವಿರುದ್ಧ ಅಗತ್ಯ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

    ಆರ್‌ಎಸ್‌ಎಸ್‌ ಚಟುವಟಿಕೆ ವಿರುದ್ಧ ಅಗತ್ಯ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

    ಬೆಂಗಳೂರು: ‘ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳಿಗೆ ನಿಷೇಧ ಹೇರುವ ಕುರಿತಂತೆ ಪರಿಶೀಲಿಸಿ, ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

    ಸರ್ಕಾರಿ ಸ್ಥಳಗಳಲ್ಲಿ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ಆರ್‌ಎಸ್‌ಎಸ್‌ ನಡೆಸುವ ಎಲ್ಲ ಬಗೆಯ ಚಟುವಟಿಕೆಗಳಿಗೂ ನಿಷೇಧ ಹೇರಬೇಕೆಂದು ಮುಖ್ಯಮಂತ್ರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಪ್ರಿಯಾಂಕ್ ಖರ್ಗೆ ಅ. 4ರಂದು ಪತ್ರ ಬರೆದಿದ್ದರು. ಪ್ರಿಯಾಂಕ್‌ ಬರೆದ ಈ ಪತ್ರದ ಮೇಲೆಯೇ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ.

    ಆರ್‌ಎಸ್‌ಎಸ್‌ ಸಂಘಟನೆಗೆ ನೂರು ವರ್ಷ ತುಂಬಿದ ಸಂಭ್ರಮಾಚರಣೆ ಸಂದರ್ಭದಲ್ಲೇ ರಾಜ್ಯದಲ್ಲಿ ಅದರ ಚಟುವಟಿಕೆಗೆ ಅಂಕುಶ ಹಾಕುವಂತೆ ಪ್ರಿಯಾಂಕ್‌ ಬರೆದ ಪತ್ರ ಮತ್ತು ಮುಖ್ಯಮಂತ್ರಿ ನೀಡಿರುವ ಸೂಚನೆ ಬಿಜೆಪಿ ನಾಯಕರನ್ನು ಕೆರಳಿಸಿದೆ.

    ಪ್ರಿಯಾಂಕ್‌ ಬರೆದ ಪತ್ರದಲ್ಲಿ ಏನಿದೆ?: ‘ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ.’

    ‘ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿ ನಲ್ಲಿ ಭಾರತ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬುತ್ತಿದೆ’.

    ‘ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್‌ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲ ಬಗೆಯ ಚಟುವಟಿಕೆಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ಹೇಳಿದ್ದಾರೆ.

    Chief Minister instructs to take necessary action against RSS activities

  • ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ

    ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ

    ಬೆಂಗಳೂರು: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.

    ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ.‌ ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ ಎಂದರು. ಇವರ ಬದುಕು ಮತ್ತು ಬರಹ ಹಾಗೂ ಸಾರ್ಥಕತೆ ಇಡೀ ಸಮಾಜಕ್ಕೆ ಮಾರ್ಗದರ್ಶನ ಎಂದರು.

    ಸಾಹಿತ್ಯ ಕೃಷಿಯಲ್ಲಿ ಮಾತ್ರವಲ್ಲದೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಇವರ ಕೆಲಸ ಕನ್ನಡ ಜಗತ್ತಿಗೆ ತಲುಪಿರುವುದು ಅತ್ಯಂತ ಮಹತ್ವದ ಸಂಗತಿ ಎಂದರು. ಭಾಷಾ ಶಾಸ್ತ್ರ, ಸಂಶೋಧನೆ, ಮಕ್ಕಳ ಸಾಹಿತ್ಯ, ವಿಮರ್ಷೆ ಸೇರಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಬೆರಗು ಮೂಡಿಸುವ ಕೆಲಸ ಮಾಡಿದ್ದಾರೆ.

    ಹಂಪನಾ ಅವರು ಒಳ್ಳೆ ವಾಗ್ಮಿ. ಸಮಾಜಕ್ಕೆ ಇವರಿಂದ ಬಹಳ ಉಪಕಾರ ಆಗುತ್ತದೆ. ಅಧ್ಯಾಪಕರೂ ಆಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರೂ ಆಗಿದ್ದರು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ. ಆದರೂ ಸಾಹಿತ್ಯ ವಲಯದ ಒಡನಾಟ ಹೆಚ್ಚಾಗಿದ್ದು ನಾನು ಹಂಪನಾ ಅವರ ಅಭಿಮಾನಿ ಎಂದರು.

    ಹಂಪನಾ ಅವರು ಇನ್ನೂ ನೂರು ಕಾಲ ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದರು. ಕಮಲಾ ಮತ್ತು ಹಂಪನಾ ಅವರು ಅದ್ಭುತ ದಂಪತಿ. ಇಬ್ಬರೂ ಸಾಹಿತ್ಯ ಕೃಷಿಯಲ್ಲಿ ಸಾಧನೆ ಮಾಡಿದವರು. ಇಬ್ಬರೂ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

    A writer who wants change in Hampana society

  • ಬೆಂಗಳೂರು ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ

    ಬೆಂಗಳೂರು ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ

    ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಆರಂಭಿಕ ಮಾತುಗಳಲ್ಲಿ GBA ರಚನೆ ಹಿಂದಿನ‌ ಉದ್ದೇಶಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

    ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಕಾರ್ಪೋರೇಷನ್ ನಿಂದ ಇಷ್ಟು ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲಿನದ್ದು. ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಕಾರ್ಪೋರೇಷನ್ ಗಳಿದ್ದರೆ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ ಈ ಬಗ್ಗೆ ವರದಿ ಕೊಡಲು ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಲಾಗಿತ್ತು.

    ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನ ಹರಿಸಲೇ ಇಲ್ಲ. ಹೀಗಾಗಿ ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್ ರಚಿಸಲಾಯಿತು. ಈ ಸಮಿತಿ ವರದಿಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು 5 ನಗರ ಪಾಲಿಕೆಗಳ ರಚನೆಯಾಗಿವೆ ಎಂದರು.

    ಸುಗಮ ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ/ಚರಂಡಿ/ಫುಟ್ಪಾತ್/ಪಾರ್ಕ್ಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಳನ್ನು ಇಟ್ಟುಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯ ನಿರ್ವಹಿಸಬೇಕು ಎಂದು ಸಿ.ಎಂ ಸೂಚನೆ ನೀಡಿದರು.

    ನಾವು ನಿರೀಕ್ಷೆ ಮಾಡಿರುವ ಈ ಗುರಿ ಮತ್ತು ಉದ್ದೇಶ ನೆರವೇರಲು BWSSB, BDA, BESCOM ಸೇರಿ ಎಲ್ಲಾ ಇಲಾಖೆಗಳು GBA ಜೊತೆ ಪರಸ್ಪರ ಸಹಕಾರ ಸಹಯೋಗವನ್ನು ಅತ್ಯಂತ ಕಡ್ಡಾಯವಾಗಿ ಆಚರಣೆಗೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

    ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧ: ಕುಟುಕಿದ ಸಿಎಂ: ಚರ್ಚೆ-ಸಂವಾದದಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಏನೇ ವಿರೋಧಗಳಿದ್ದರೂ ಸಭೆಗೆ ಹಾಜರಾಗಿ ಚರ್ಚೆ ನಡೆಸಿ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡಬೇಕು. ಅಧಿಕಾರ ವಿಕೇಂದ್ರೀಕರಣವನ್ನು ವಿರೋಧಿಸುವವರು ಮತ್ತು ಬೆಂಗಳೂರಿನ ಅಭಿವೃದ್ಧಿ ಒಲ್ಲದವರು ಸಭೆಯನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಕುಟುಕಿದರು.

    GBA comes into existence for smooth governance and proper development for the people of Bangalore

  • ಇಡಿಯಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸೇರಿದ  44 ಕೆಜಿ ಚಿನ್ನ ವಶ

    ಇಡಿಯಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸೇರಿದ 44 ಕೆಜಿ ಚಿನ್ನ ವಶ

    ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನ  ಈಗಾಗಲೇ ಬಂಧಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಆ ಮೂಲಕ ಈವರೆಗೆ 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

     

    ಇತ್ತೀಚೆಗೆ ಆನ್​ಲೈನ್ ಬೆಟ್ಟಿಂಗ್ ಆ್ಯಪ್ ಮತ್ತು ಕ್ಯಾಸಿನೋಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಂಶಯದಡಿ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ ನಡೆದಿತ್ತು. ಸುಮಾರು 30 ಕಡೆ ನಡೆದ ದಾಳಿಯಲ್ಲಿ 12 ಕೋಟಿ ರೂ ನಗದು, 6 ಕೋಟಿ ರೂ ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.

    ಸಿಕ್ಕಿಂನ ಗ್ಯಾಂಗ್ಟಕ್​​ನಲ್ಲಿದ್ದ ಪಪ್ಪಿಯನ್ನ ಕೊಲ್ಕತ್ತಾ ಇಡಿ ಅಧಿಕಾರಿಗಳ ಮೂಲಕ ಬಂಧಿಸಿ, ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದರು. ಬಳಿಕ ಕೋರಮಂಗಲದ ಜಡ್ಜ್​ ನಿವಾಸದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ 35 ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶರು 5 ದಿನಗಳ ಕಾಲ ವೀರೇಂದ್ರ ಪಪ್ಪಿಯನ್ನ ಇಡಿ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಆಗಸ್ಟ್ 28 ರವರೆಗೆ ಇಡಿಯಿಂದ ವೀರೇಂದ್ರ ಪಪ್ಪಿ ವಿಚಾರಣೆ ನಡೆದಿತ್ತು. ಆಗಸ್ಟ್​ 28 ರಂದು ಪಪ್ಪಿ ಪರ ವಕೀಲರು ಬೇಲ್​ಗೆ ಅರ್ಜಿ ಸಲ್ಲಿಸಿದ್ದರು.

    ED seizes 44 kg gold belonging to Congress MLA Veerendra Pappi

  • ಅಲೆಮಾರಿ ಬಾಲಕಿ ಮೇಲೆ ಅತ್ಯಾಚಾರ-ಕೊಲೆ

    ಅಲೆಮಾರಿ ಬಾಲಕಿ ಮೇಲೆ ಅತ್ಯಾಚಾರ-ಕೊಲೆ

    ಮೈಸೂರು,: ಮೈಸೂರಿನಲ್ಲಿ  ಬಾಲಕಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿದ್ದಾರೆ.

    ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ  ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಆದ್ರೆ, ನಿನ್ನೆ ರಾತ್ರಿ ಟೆಂಟ್ ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.

    ಕೊಳ್ಳೇಗಾಲದಲ್ಲಿ ಸಿಕ್ಕ ಕಾರ್ತಿಕ್​ ಮೇಟಗಳ್ಳಿ ಬಳಿ  ಕಾನ್ಸ್‌ಟೇಬಲ್ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಸದ್ಯ ಆರೋಪಿ ಕಾರ್ತಿಕ್‌ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ಮಾಹಿತಿ ಪಡೆದುಕೊಂಡರು.

    Rape-murder of vagabond girl

  • ರಾಜ್ಯ ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ

    ರಾಜ್ಯ ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ

    ಬೆಂಗಳೂರು:  ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

    ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖಾ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ. ಜನರಿಗೆ ನೀರಿನ ಅಗತ್ಯ ಮತ್ತು ನೀರಿನ ಸ್ಥಿತಿ ಗತಿ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಸಬೇಕು ಎಂದು ಕರೆ ನೀಡಿದರು.

    ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ವಿವರಿಸಿದರು.

    144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ , ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯ್ತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ವಿವರಿಸಿದರು.

    ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್ ಖಂಡ್ರೆ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮ್ಯಾಗ್ಸೆಸ್ಸೇ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ರಾಜೇದ್ರ ಸಿಂಗ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

    Best in Asia in filling water to state lakes

  • ನವೆಂಬರ್‌ಗೆ ಸಂಪುಟ ಪುನರ್‌ ರಚನೆ….?

    ನವೆಂಬರ್‌ಗೆ ಸಂಪುಟ ಪುನರ್‌ ರಚನೆ….?

    ಬೆಂಗಳೂರು: ಸಚಿವ ಸಂಪುಟ ಪುನರ್‌ ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳಿವು ನೀಡಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿ ಕೊಂಡಿದೆ. ನವೆಂಬರ್ ಅಂತ್ಯದೊಳಗೆ ಸಂಪುಟ ಪುನರ್‌ ರಚನೆ ಯಾಗಲಿದೆ ಎಂಬ ಮಾತು ಆ ‍ಪಕ್ಷದ ವಲಯದಲ್ಲಿ ದಟ್ಟವಾಗುತ್ತಿದೆ.

    ಈ ನಡುವೆ, ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿಯಲ್ಲಿ ಸಂಪುಟ ಸಹೋದ್ಯೋಗಿಗಳಿಗೆ ಇದೇ 13ರಂದು ರಾತ್ರಿ ಔತಣಕೂಟ ಆಯೋಜಿಸಿದ್ದಾರೆ. ಈ ಔತಣಕೂಟದ ಕುರಿತು ಮುಖ್ಯಮಂತ್ರಿ ಸಚಿವಾಲಯದಿಂದ ಎಲ್ಲ ಸಚಿವರಿಗೆ ಸಂದೇಶ ರವಾನಿಸಲಾಗಿದೆ ಎಂದು ಗೊತ್ತಾಗಿದೆ.

    ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಸಂಪುಟ ಪುನರ್‌ರಚನೆ ಮಾಡುವಂತೆ ಹೈಕಮಾಂಡ್ ಸೂಚಿಸಿದೆ. ಸಚಿವರ ಪೈಕಿ 10ರಿಂದ 15 ಮಂದಿಯನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆ ನಡೆದಿದೆ.

    ಸಚಿವರಾಗಿದ್ದ ಬಿ. ನಾಗೇಂದ್ರ ಮತ್ತು ಕೆ.ಎನ್‌. ರಾಜಣ್ಣ ಅವರ ರಾಜೀನಾಮೆ ಯಿಂದ ತೆರವಾಗಿರುವ ಸ್ಥಾನಗಳನ್ನು ಭರ್ತಿ ಮಾಡುವ ಜೊತೆಗೆ, ಹಾಲಿ ಕೆಲವು ಸಚಿವರನ್ನು ಕೈಬಿಟ್ಟು ಆಕಾಂಕ್ಷಿ ಗಳಿಗೆ ಸ್ಥಾನ ನೀಡಲು ಮುಖ್ಯಮಂತ್ರಿ ಕೂಡಾ ಒಲವು ಹೊಂದಿದ್ದಾರೆ. ಬುಧವಾರ ಈ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.

    ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ನ. 14ರಂದು ಹೊರ ಬೀಳಲಿದೆ. ಡಿಸೆಂಬರ್‌ ತಿಂಗಳಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದೆ. ಇದರ ನಡುವೆ ಸಂಪುಟ ಪುನರ್‌ ರಚನೆ ಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಮುಖಂಡರೊಬ್ಬರು ಹೇಳಿದರು.

    ಎಲ್ಲ ಸಚಿವರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಮುಂದಿನ ಹೆಜ್ಜೆ ಇಡಲು ಮುಖ್ಯಮಂತ್ರಿ ಮುಂದಾಗಿದ್ದಾರೆ. ದೀಪಾವಳಿ ನೆಪದಲ್ಲಿ ಸಚಿವರನ್ನು ಔತಣ ಕೂಟಕ್ಕೆ ಆಹ್ವಾನಿಸಲಿರುವ ಮುಖ್ಯಮಂತ್ರಿ, ರಾಜ್ಯ ರಾಜಕೀಯ ವಿದ್ಯಮಾನಗಳೂ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.

    Cabinet reshuffle for November…?

  • ಇಂದಿನಿಂದ ಹಾಸನಾಂಬೆಯ ದರ್ಶನ

    ಇಂದಿನಿಂದ ಹಾಸನಾಂಬೆಯ ದರ್ಶನ

    ಹಾಸನ: ಇಲ್ಲಿನ ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲು ಗುರುವಾರ (ಅ.9) ತೆರೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.

    ಅ.23ರಂದು ದೇವಾಲಯದ ಬಾಗಿಲು ಮುಚ್ಚಲಾಗುವುದು. ಮೊದಲ ಹಾಗೂ ಕೊನೆಯ ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿಲ್ಲ. ಅ.10 ರಿಂದ 22ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಲಾಗಿದ್ದು, ಗೋಲ್ಡ್‌ ಪಾಸ್‌ ಜಾರಿಗೊಳಿಸಲಾಗಿದೆ. ಒಂದು ಪಾಸ್‌ಗೆ ಒಬ್ಬರು ಮಾತ್ರ ಬೆಳಿಗ್ಗೆ 7 ರಿಂದ 10ರವರೆಗೆ ದರ್ಶನ ಪಡೆಯಬಹುದು. ಗಣ್ಯರಿಗೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30ರವರೆಗೆ ಅವಕಾಶ ನೀಡಲಾಗಿದೆ.

    ‘ಟಿಕೆಟ್‌ ಕಾಯ್ದಿರಿಸುವುದು, ಆಯಾ ದಿನ ದರ್ಶನಕ್ಕೆ ತಗುಲುವ ಸಮಯ, ದರ್ಶನದ ವೇಳಾಪಟ್ಟಿ ಸೇರಿ ವಿವಿಧ ಮಾಹಿತಿಯನ್ನು ಮೊಬೈಲ್‌ ಸಂಖ್ಯೆ 63661–05589 ಗೆ ವಾಟ್ಸ್‌ ಆ್ಯಪ್‌ ಸಂದೇಶ ಕಳುಹಿಸುವ ಮೂಲಕ ಪಡೆಯಬಹುದಾಗಿದೆ’ ಎಂದು ಜಿಲ್ಲಾಡಳಿತವು ಪ್ರಕಟಣೆಯಲ್ಲಿ ತಿಳಿಸಿದೆ.

    ವಿವಿಧ ಚಟುವಟಿಕೆ: ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಕೃಷಿ ಮೇಳ, ಶ್ವಾನ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

    ಪ್ರವಾಸೋದ್ಯಮದ ಅಭಿವೃದ್ಧಿಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಲು 12 ಪ್ಯಾಕೇಜ್ ಮಾಡಲಾಗಿದೆ. ಹೆಲಿ ಟೂರಿಸಂಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.

    Visit to Hasanamba from today

  • ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ

    ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ

    ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

    ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿ ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು.

    ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ.

    ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

    ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

    ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

    ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

    ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ರಾಯಬಾರಿ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

    The land will survive only if the forest remains.

  • ‘ಬಿಗ್‌ ಬಾಸ್’ ರಿಯಾಲಿಟಿ ಷೋ ನಡೆಯುತ್ತಿರುವ ಮನೆಗೆ ಬೀಗ

    ‘ಬಿಗ್‌ ಬಾಸ್’ ರಿಯಾಲಿಟಿ ಷೋ ನಡೆಯುತ್ತಿರುವ ಮನೆಗೆ ಬೀಗ

    ರಾಮನಗರ: ‘ಬಿಗ್‌ಬಾಸ್’ ರಿಯಾಲಿಟಿ ಷೋ ನಡೆಯುತ್ತಿರುವ ಬಿಡದಿಯ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್‌ಗೆ ತಾಲ್ಲೂಕು ಆಡಳಿತ ಮಂಗಳವಾರ ಬೀಗಮುದ್ರೆ ಹಾಕಿದೆ. ಈ ದಿಢೀರ್ ಬೆಳವಣಿಗೆಯಿಂದಾಗಿ ಬಿಗ್‌ಬಾಸ್ ಷೋ ಅತಂತ್ರ ಸ್ಥಿತಿ ತಲುಪಿದೆ ಎನ್ನಲಾಗಿದೆ.

    ‘ಬಿಗ್‌ಬಾಸ್‌’ ಮನೆಯಲ್ಲಿದ್ದ ಸ್ಪರ್ಧಿಗಳು ಹಾಗೂ ಸಿಬ್ಬಂದಿಯನ್ನು ಆಯೋಜಕರು ಸಮೀಪದ ಈಗಲ್ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಿದ್ದಾರೆ. ಪಾರ್ಕ್‌ಗೆ ಬಂದಿದ್ದ ಪ್ರವಾಸಿಗರನ್ನು ಸಹ ಸ್ಥಳದಿಂದ ಹೊರಕ್ಕೆ ಕಳುಹಿಸಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ತಹಶೀಲ್ದಾರ್ ತೇಜಸ್ವಿನಿ ಹಾಗೂ ಸಿಬ್ಬಂದಿ ಜಾಲಿವುಡ್‌ ಸ್ಟುಡಿಯೊಕ್ಕೆ ಬೀಗ ಜಡಿದರು.

    ‘ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸಂಸ್ಥೆಯು ಮನರಂಜನೆ ಹಾಗೂ ಇತರ ಸಾಹಸ ಚಟುವಟಿಕೆ ನಡೆಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರಲಿಲ್ಲ. ಈ ಕುರಿತು, ಮಂಡಳಿಯ ಅಧಿಕಾರಿಗಳು ಸ್ಥಳ ಪರೀಶಿಲನೆ ನಡೆಸಿ ವರದಿ ನೀಡಿದ್ದರು. ಆ ಮೇರೆಗೆ, ಮಂಡಳಿಯು ಜಾಲಿವುಡ್‌ನಲ್ಲಿ ನಡೆಯುತ್ತಿರುವ ಚಟುವಟಿಕೆ ಸ್ಥಗಿತಗೊಳಿಸಿ ಬೀಗಮುದ್ರೆ ಹಾಕುವಂತೆ ಆದೇಶ ಮಾಡಿತ್ತು. ಪೊಲೀಸ್ ಭದ್ರತೆಯಲ್ಲಿ ಜಾಲಿವುಡ್‌ಗೆ ಬೀಗ ಹಾಕಿ ಮೊಹರು ಮಾಡಿದ್ದೇವೆ. ಮುಂದೇನು ಮಾಡಬೇಕೆಂಬುದನ್ನು ಮಂಡಳಿ ನಿರ್ಧರಿಸಲಿದೆ’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದರು.

    ಬಿಗ್‌ಬಾಸ್‌ ಸ್ಪರ್ಧೆ ಶುರುವಾಗಿ 11 ದಿನವಾಗಿದೆ. ಈಗ ಜಿಲ್ಲಾಡಳಿತ ಬೀಗಮುದ್ರೆ ಹಾಕಿದ್ದು, ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ಜಾಲಿವುಡ್‌ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೋರ್ಟ್‌ನಲ್ಲಿ ಮಂಡಳಿ ಆದೇಶಕ್ಕೆ ತಡೆಯಾಜ್ಞೆ ಸಿಗುವ ವಿಶ್ವಾಸ ಇರುವುದರಿಂದ, ಮತ್ತೆ ಬಿಗ್‌ಬಾಸ್‌ ಷೋ ಮುಂದುವರಿಸಲು ಸ್ಪರ್ಧಿಗಳನ್ನು ಸಮೀಪದ ಈಗಲ್ಟನ್ ರೆಸಾರ್ಟ್‌ನಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    The house where the ‘Bigg Boss’ reality show is being held is locked.