Category: ರಾಜ್ಯ

  • ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡ್ತಿದ್ದೇವೆ

    ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡ್ತಿದ್ದೇವೆ

    ಕೊಪ್ಪಳ:  ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ ನೀಡಿದೆ. ಈ ಹಣ ಕೊಟ್ಟಿದ್ದೂ ಸಿದ್ದರಾಮಯ್ಯ ಸರ್ಕಾರ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡ್ತಾ ಇರುವುದೂ ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ತಿಳಿಸಿದರು.

    ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ / ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಇಲಾಖಾ
    ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

    ನುಡಿದಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಬಿಜೆಪಿ ತನ್ನ ಅವಧಿಯಲ್ಲಿ ಒಂದೇ ಒಂದು ಮನೆ ಕೊಡಲಿಲ್ಲ. ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಈ ಕಾರಣಕ್ಕೆ ನಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದು ಕುಟುಕಿದರು.

    ನಾವು ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ಹಣವನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ. ಇದರಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಜನರ ತಲಾ ಆದಾಯ ಹೆಚ್ಚಾಗಿ ರಾಜ್ಯದ ಆರ್ಥಿಕತೆ ಪ್ರಗತಿ ಕಂಡಿದೆ ಎಂದರು.

    ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್. ಇದು ನಮ್ಮ ಸರ್ಕಾರದ ಆರ್ಥಿಕ ಸಾಧನೆ. ತೆರಿಗೆ ಪಾವತಿಯಲ್ಲಿ ರಾಜ್ಯ ಇಡೀ ದೇಶದಲ್ಲಿ ನಂಬರ್ ಟು ಇದ್ದೇವೆ‌. ಇದು ನಮ್ಮ ಸರ್ಕಾರದ ಜಾತ್ಯತೀತ ಸಾಧನೆ ಎಂದರು.

    ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದವರ ಪ್ರಗತಿಗಾಗಿ ಯೋಜನೆ ರೂಪಿಸಿದೆವು‌‌ ಹೀಗಾಗಿ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಸೇರಿ ರಾಜ್ಯದ ಆರ್ಥಿಕತೆಯನ್ನು ಪ್ರಗತಿಗೆ ಕೊಂಡೊಯ್ದರು ಎಂದು ಮೆಚ್ಚುಗೆ ಸೂಚಿಸಿದರು.

    ಕೊಪ್ಪಳ ಜಿಲ್ಲೆಯೊಂದರಲ್ಲೇ 9 ಕೋಟಿ 22 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಜಿಲ್ಲೆಗೆ 330 ಕೋಟಿ ಖರ್ಚಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 317776 ಫಲಾನುಭವಿಗಳಿಗೆ 1283 ಕೋಟಿ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 275903 ಫಲಾನುಭವಿಗಳಿಗೆ 290 ಕೋಟಿ ಕೊಟ್ಟಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 1.96 ಕೋಟಿ ಜನರಿಗೆ 320 ಕೋಟಿ ಮೊತ್ತದ 39.097 ಮೆಟ್ರಿಕ್ ಟನ್ ದವಸಧಾನ್ಯಗಳನ್ನು ವಿತರಿಸಲಾಗಿದೆ ಎಂದು ವಿವರಿಸಿದ ಸಿಎಂ ಬೊಕ್ಕಸ ಖಾಲಿ ಆಗಿದ್ದರೆ ಇಷ್ಟೊಂದು ಪ್ರಮಾಣದ ಹಣವನ್ನು ಜನರಿಗೆ ಕೊಡಲಾಗುತ್ತಿತ್ತಾ ಎಂದು ಪ್ರಶ್ನಿಸಿದರು.

    ಬಿಜೆಪಿಯವರ ಮನೆ ದೇವರೇ ಸುಳ್ಳು. ಆದ್ದರಿಂದ ಅವರ ಸುಳ್ಳುಗಳಿಗೆ ರಾಜ್ಯದ ಜನತೆ ತಮ್ಮ ತಲೆಯನ್ನು, ಬುದ್ದಿಯನ್ನು ಒತ್ತೆ ಇಡುವುದಿಲ್ಲ ಎನ್ನುವ ಭರವಸೆ ನನಗಿದೆ ಎಂದರು.

    GST ಜಾರಿ ಮಾಡಿದ ಪರಧಾನಿ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಎಂಟು ವರ್ಷಗಳ ಕಾಲ ನಿರಂತರವಾಗಿ ರಾಜ್ಯದ ಮತ್ತು ದೇಶದ ಜನರ ಸುಲಿಗೆ ನಡೆಸಿತು. ನಾವು GST ಸುಲಿಗೆ ವಿರೋಧಿಸಿ ಸರಳೀಕರಣಕ್ಕೆ ಆಗ್ರಹಿಸಿದ್ದೆವು. ಎಂಟು ವರ್ಷದ ಸುಲಿಗೆ ಬಳಿಕ ಸುಲಿಗೆ ನಡೆಸಿದವರೇ ಸರಳೀಕರಣದ ಕ್ರೆಡಿಟ್ ಗಾಗಿ ಒದ್ದಾಡುತ್ತಿದ್ದಾರೆ. ಈಗಲೂ ಕೇಂದ್ರದಿಂದ 15 ಸಾವಿರ ಕೋಟಿ ರೂಪಾಯಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. 15 ನೆ ಹಣಕಾಸು ಆಯೋಗದಿಂದಲೂ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿಯ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು ಪಾರ್ಲಿಮೆಂಟಿನಲ್ಲಿ ತುಟಿ ಬಿಚ್ಚಿ ಪ್ರಶ್ನಿಸಲಿಲ್ಲ ಎಂದರು‌ .

    ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾಲ್ಕು ಬಾರಿ ದೆಹಲಿಗೆ ಹೋಗಿ ಅನ್ಯಾಯ ಸರಿ ಪಡಿಸಲು ಮನವಿ ಮಾಡಿದರೂ ಮೋದಿಯೂ ಮಾಡಲಿಲ್ಲ, ನಿರ್ಮಲಾ ಸೀತರಾಮನ್ ಅವರೂ ಅನ್ಯಾಯ ಸರಿ ಪಡಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಕ್ಕುಂಬಿ ಕೆರೆಗೆ ನೀರು ಹರಿಸಿದ್ದು ನಾವು. ಈಗ ಯಲಬುರ್ಗಾ ಕ್ಷೇತ್ರದ ಕೆರೆ ತುಂಬಿಸುವ ಯೋಜನೆಗೆ 650 ಕೋಟಿ ಹಣ ಕೊಡುತ್ತಿದ್ದೇವೆ. ಇದೂ ನಮ್ಮ-ನಿಮ್ಮ ಸರ್ಕಾರದ್ದೇ ಹಣ ಎಂದರು.

    We are providing 80 thousand crores in compensation to farmers in the upper Krishna issue.

  • ನ್ಯಾಯಾಲಯಕ್ಕೆ ಅವಮಾನ ಮಾಡಿದ ವಕೀಲನ ಕಾನೂನು ಕ್ರಮಕ್ಕೆ ಆಗ್ರಹ

    ನ್ಯಾಯಾಲಯಕ್ಕೆ ಅವಮಾನ ಮಾಡಿದ ವಕೀಲನ ಕಾನೂನು ಕ್ರಮಕ್ಕೆ ಆಗ್ರಹ

    ಬೆಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ಧರಾಯಯ್ಯ ಆಗ್ರಹಪಡಿಸುತ್ತೇನೆ.

    ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಎಸ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.

    ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಎಸ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ.

    ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ.

    https://x.com/siddaramaiah/status/1975164367097430237?t=24eXuhHa8dYCeFgb0jIKWQ&s=19

    Demand for legal action against lawyer who insulted the court

  • ನಾನು ಬಸವಣ್ಣನವರ ಅಭಿಮಾನಿ- ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ

    ನಾನು ಬಸವಣ್ಣನವರ ಅಭಿಮಾನಿ- ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ

    ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

    ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

    ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ.
    ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.

    ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದರು‌.

    ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.

    ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ

    ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.

    ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ನಾನು ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.

    ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ ಆದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದರು‌.

    ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಗಳಾಗುತ್ತೇವೆ ಎಂದರು.

    ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ನಾವೆಲ್ಲರೂ ಶೂದ್ರರು. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು.

    ಈ ಅಸಮಾನತೆ ಹೋಗದಿದ್ದರೆ, ಅಸಮಾನತೆಗೆ ಒಳಗಾಗಿರುವ ಸಮುದಾಯಗಳು ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ನಾವು ನೆನಪಿಡಬೇಕು ಎಂದರು.

    ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.

    ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು.

    I am a fan of Basavanna – I believe in and adhere to the Basava philosophy.

  • ಮುಖ್ಯಮಂತ್ರಿ ಜತೆ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ ಭೇಟಿ, ಚರ್ಚೆ

    ಮುಖ್ಯಮಂತ್ರಿ ಜತೆ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ ಭೇಟಿ, ಚರ್ಚೆ

    ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

    ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್‌ ಮುನಿಯಪ್ಪ ಕೂಡ ಇದ್ದರು.

    ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತೆ ಗುಂಜನ್‌ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಕೂಡ ಉಪಸ್ಥಿತರಿದ್ದರು.

    Foxconn CEO Robert Wu meets, discusses with Chief Minister

  • ತಾವೇ ಹೆಚ್ಚಿಸಿದ್ದ ಜಿಎಸ್ ಟಿ ಯನ್ನು ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ

    ತಾವೇ ಹೆಚ್ಚಿಸಿದ್ದ ಜಿಎಸ್ ಟಿ ಯನ್ನು ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ

    ಮೈಸೂರು:  ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.

    ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ
    ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉತ್ತರಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ , ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು. ಆಯೋಗದ ಶಿಫಾರಸ್ಸಿನಂತೆ 5490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ 3000 ಕೋಟಿ, ರಸ್ತೆ ನಿರ್ಮಾಣಕ್ಕೆ 3000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೊಟಿ ರೂ.ಗಳ ಅನುದಾನವನ್ನು ನಮಗೆ ನೀಡಲಾಗಿಲ್ಲ. ಒಟ್ಟಾರೆ 17000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದರು.

    ಬಿಜೆಪಿ ಸಂಸದರಿಗೆ ರಾಜ್ಯದ ಹಿತ ಬೇಕಾಗಿಲ್ಲ
    ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್ ಟಿ ಸರಳೀಕರಣದಿಂದ ರಾಜ್ಯಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ನಷ್ಟವಾಗಲಿದೆ. ಕೇಂದ್ರಸರ್ಕಾರ , ಎನ್ ಡಿ ಎ ಗೆ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್ ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದರು.

    ಅಕ್ಟೋಬರ್ 7 ರೊಳಗೆ ಸಮೀಕ್ಷೆ ಪೂರ್ಣಗೊಳ್ಳುವ ಭರವಸೆಯಿದೆ
    ರಾಜ್ಯದಲ್ಲಿ ಜಾತಿಸಮೀಕ್ಷೆ ಕಾರ್ಯದ ಪ್ರಗತಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

    ಸಮೀಕ್ಷೆಯಲ್ಲಿ ಜಾತಿವಿವರ- ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ
    ಮತಾಂತರ ಹಾಗೂ ಜಾತಿಒಡೆಯುವ ದೃಷ್ಠಿಯಿಂದ ಸಮೀಕ್ಷೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ. ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ ಆಯೋಗ, ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

    ರಾಜಕಾರಣಕ್ಕಾಗಿ ಆರೋಪ
    ವಿಪಕ್ಷ ನಾಯಕ ಅಶೋಕ್ ರವರು ರೈತರ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರ ಇದ್ದರೂ ಸತ್ತಂತೆಯೇ ಎಂದು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ, ಅಶೋಕ್ ಅವರು ವಿಪಕ್ಷದ ನಾಯಕರಾಗಿದ್ದರೂ, ಆರ್ ಎಸ್ ಎಸ್ ನವರ ನಿರ್ದೇಶನದಂತೆ ಮಾತನಾಡುತ್ತಾರೆ. ಅಶೋಕ್ ರವರು ರಾಜಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ ಎಂದರು.

    The central government is patting itself on the back by cutting the GST it itself had increased.

  • ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯ

    ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯ

    ಮೈಸೂರು: ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

    ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

    ಇಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಅವರು ಎಂದು ಲಾಲ್ ಬಹಾದ್ದೂರ್ ಶಾಸ್ತ್ರೀ ಜಿಯವರನ್ನು ಸ್ಮರಿಸಿದರು

    ಕಾಕತಾಳೀಯ ಎಂಬಂತೆ ಇಂದು ವಿಜಯದಶಮಿಯೂ ಕೂಡಾ ಬಂದಿದ್ದು, ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

    The sacrifices and sacrifices of Gandhiji and Shastri will always be an example for us.

  • ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ

    ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ

    ಮೈಸೂರು:  ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ತಿಳಿಸಿದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ , ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.

    ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

    ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರಕರ್ನಾಟಕದ ಕೆಲವು ಜಿ್ಲ್ಲೆಗಳಲ್ಲಿ ಅತಿವೃಷ್ಠಿಯಿಂದ ರಾಜ್ಯದಲ್ಲಿ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲ್ಬುರ್ಗಿಯ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿದ್ದು,

    ಸರ್ಕಾರ ಮತ್ತು ಎನ್ ಡಿಆರ್ ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17000 ರೂ ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31ಸಾವಿರ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು ಎಂದರು.

    It is my privilege to participate in Dussehra as the Chief Minister with the blessings of the people.

  • ಸಿಎಂ ಸಿದ್ದರಾಮಯ್ಯರಿಂದ ಪ್ರವಾಹ ಪರಿಸ್ಥಿತಿ ಅವಲೋಕನ

    ಸಿಎಂ ಸಿದ್ದರಾಮಯ್ಯರಿಂದ ಪ್ರವಾಹ ಪರಿಸ್ಥಿತಿ ಅವಲೋಕನ

    ಬೆಂಗಳೂರು:  ಭೀಮಾ, ಕೃಷ್ಣಾ ನದಿ ಅಬ್ಬರಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ. ಜನರ ಬದುಕು ಪ್ರವಾಹದಿಂದ ಬೀದಿಗೆ ಬಿದ್ದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ  ಪ್ರವಾಹ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ.

    ಯಾದಗಿರಿ ಜಿಲ್ಲೆ ಶಹಾಪುರದ ರೋಜಾ ಗ್ರಾಮ ಪ್ರವಾಹದಿಂದ ನಡುಗಡ್ಡೆಯಾಗಿದ್ದು, ಮೂಕ ಪ್ರಾಣಿಗಳ ರೋದನೆ ಹೇಳತೀರದಾಗಿದೆ. ಜಾನುವಾರಗಳಿಗೆ ತಿನ್ನಲು ಮೇವು ಇಲ್ಲದೆ ಜನ ಪರದಾಡುತ್ತಿದ್ದಾರೆ. ಬೋಟ್​ನಲ್ಲಿ ಮೇವು ತರುವ ಸ್ಥಿತಿ ನಿರ್ಮಾಣವಾಗಿದೆ. ನಿರಂತರ ಮಳೆಗೆ ರಾಯಚೂರಿನಲ್ಲೂ ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಹತ್ತಿ ಬೆಳೆ ನಾಶವಾಗಿದೆ. ಎಕರೆಗೆ 20-30 ಸಾವಿರ ಖರ್ಚು ಮಾಡಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಘಟಪ್ರಭಾ ಅಬ್ಬರಕ್ಕೆ ಸಂಕಷ್ಟಗಳ ಪ್ರವಾಹ ಉಂಟಾಗಿದೆ. ಹುಕ್ಕೇರಿ ತಾಲೂಕಿನ ಜಿನ್ರಾಳದಲ್ಲಿ ಗ್ರಾಮದಲ್ಲಿ ಕಟಾವಿಗೆ ಬಂದಿದ್ದ ಮೆಕ್ಕೆಜೋಳ, ಕಬ್ಬು ಬೆಳೆಗಳು ಸರ್ವನಾಶವಾಗಿವೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ.

     

    ವಿಜಯೇಂದ್ರ ವಾಗ್ದಾಳಿ ಇಷ್ಟಕ್ಕೆ ನಿಲ್ಲದೇ ಯಡಿಯೂರಪ್ಪ ಏಕಾಂಗಿಯಾಗಿ ಪ್ರವಾಹ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದರು ಎಂದು ಹೇಳಿದ್ದಾರೆ. ಈ ಮಾತಿಗೆ ತಿರುಗೇಟು ಕೊಟ್ಟ ಸಚಿವ  ಪ್ರಿಯಾಂಕ್ ಖರ್ಗೆ, ನಿಮ್ಮ ಪೂಜ್ಯ ತಂದೆ ವಿಮಾನ ನಿಲ್ದಾಣದಿಂದ ಹೊರಗೆ ಬಂದಿರಲಿಲ್ಲ ಎಂದು ಕಾಲೆಳೆದಿದ್ದಾರೆ. ಸಚಿವ ಎಂ.ಬಿ. ಪಾಟೀಲ್ ಕೇಂದ್ರದ ಜವಾಬ್ದಾರಿ ಹೆಚ್ಚಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರ ಮಾತುಗಳಿಗೆ ಹೆಚ್​ಡಿಕೆ ಕೌಂಟರ್ ಕೊಟ್ಟಿದ್ದಾರೆ. ಕೇಂದ್ರಕ್ಕೆ ಯಾರಾದರೂ ಮನವಿ ಸಲ್ಲಿಸಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಜನರು ಪ್ರವಾಹಕ್ಕೆ ಸಿಲುಕಿರುವ ಈ ಸಂದರ್ಭದಲ್ಲಿ ರಾಜಕೀಯ ನಾಯಕರುಗಳ ಆರೋಪ-ಪ್ರತ್ಯಾರೋಪಗಳ ಪಟ್ಟಿ ಬೆಳೆಯುತ್ತಲೇ ಇದೆ.

    CM Siddaramaiah reviews flood situation

  • ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಶ್ವೇತವಸ್ತ್ರಧಾರಿಣಿ ಮಹಾಗೌರಿ

    ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಶ್ವೇತವಸ್ತ್ರಧಾರಿಣಿ ಮಹಾಗೌರಿ

    ಚಿಕ್ಕಬಳ್ಳಾಪುರ: ನವರಾತ್ರಿಯ 8ನೇ ದಿನವಾದ ಸೋಮವಾರ (ಸೆ 29) ಶ್ವೇತವಸ್ತ್ರಧಾರಿಣಿ ಮಹಾಗೌರಿಯನ್ನು ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ವಿಶೇಷವಾಗಿ ಆರಾಧಿಸಲಾಯಿತು. ಪ್ರತಿದಿನದಂತೆ ಅತಿರುದ್ರ ಮಹಾಯಜ್ಞ, ದುರ್ಗಾ ಪೂಜೆಯ ವಿಧಿಗಳು ಸಾಂಗವಾಗಿ ನೆರವೇರಿದವು. ಮೇಧಾ, ಮಹಾ ಸರಸ್ವತಿ ಮತ್ತು ದಕ್ಷಿಣಾಮೂರ್ತಿ ಹೋಮಗಳು ಭಕ್ತಿಯ ಭಾವ ಸ್ಫುರಿಸಿದವು. ಈ ಮೂರೂ ಹೋಮಗಳು ಜ್ಞಾನವನ್ನು ಬೆಳಗುವ, ಬುದ್ಧಿಯನ್ನು ಚುರುಕುಗೊಳಿಸುವ, ಅಧ್ಯಾತ್ಮದತ್ತ ಪ್ರೇರಣೆ ಕೊಡುವಂಥವು ಎಂದೇ ಜನಜನಿತವಾಗಿವೆ.

    ಭೂಲೋಕದಲ್ಲಿರುವ ಎಲ್ಲ ಜೀವಿಗಳ ತಾಯಿ ಎನಿಸಿರುವ ಮಹಾಗೌರಿಯ ಆರಾಧನೆಯಿಂದ ಚಿತ್ತಶುದ್ಧಿ, ಮನಸ್ಸಿಗೆ ಶಾಂತಿ ಸಿಗುತ್ತದೆ. ಅಷ್ಟೇ ಅಲ್ಲದೆ ಆಂತರಿಕ ಶಕ್ತಿಯೂ ವೃದ್ಧಿಸುತ್ತದೆ. ಸನಾತನ ಪರಂಪರೆಯು ಆದಿಗುರು ಎಂದು ಬಣ್ಣಿಸುವ ದಕ್ಷಿಣಾಮೂರ್ತಿಯ ಆರಾಧನೆಯು ಜಗತ್ತಿನ ಅತ್ಯುನ್ನತ ಜ್ಞಾನ ಎನಿಸಿರುವ ಅಧ್ಯಾತ್ಮ ವಿದ್ಯೆಗೆ ಪ್ರೇರಣೆ ಕೊಡುತ್ತದೆ. ತಾಯಿ ಸರಸ್ವತಿಯ ಆರಾಧನೆಯಿಂದ ಜೀವನಕ್ಕೆ ಬೇಕಾದ ಎಲ್ಲ ಬಗೆಯ ಜ್ಞಾನ ಸಿಗುತ್ತದೆ ಎಂದು ಆಸ್ತಿಕರು ನಂಬುತ್ತಾರೆ.

    ಪೂರ್ಣಾಹುತಿ, ಅಷ್ಟಾವಧಾನ ಸೇವಾ, ಚತುರ್ವೇದ ಪಾರಾಯಣಂ, ಅಷ್ಟಕಂ, ಸಂಗೀತ, ನಾದಸ್ವಾರ ಹಾಗೂ ಪಂಚ್ಯವಾದ್ಯ ವಾದನಗಳೊಂದಿಗೆ 8ನೇ ದಿನದ ಅತಿರುದ್ರ ಮಹಾಯಜ್ಞ ಪೂರ್ಣಗೊಂಡಿತು. ತಮ್ಮ ಆಶೀರ್ಚನದಲ್ಲಿ ಮೌನದ ಮಹತ್ವದ ಬಗ್ಗೆ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಹೇಳಿದರು. ‘ಮೌನ ಎಂದರೆ ಖಾಲಿಯಾಗಿರುವುದಲ್ಲ. ಅದು ಎಲ್ಲ ಶಬ್ದಗಳ ಮೊತ್ತ. ನಮ್ಮೊಳಗಿನ ದೇವರ ಮಾತು ಕೇಳಿಸಿಕೊಳ್ಳಲು ಮೌನದಿಂದ ಮಾತ್ರವೇ ಸಾಧ್ಯ’ ಎಂದು ಹೇಳಿದರು.

    ///ಒಗ್ಗೂಡಿ ಬದುಕು ನಡೆಸುವುದು ಸಂಸ್ಕೃತ ಧರ್ಮ: ಅಭಿನವ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ///

    ಒಡೆದು ಬದುಕು ನಡೆಸುವುದು ವಿಕೃತ ಕರ್ಮ, ಒಗ್ಗೂಡಿ ಬದುಕು ನಡೆಸುವುದು ಸಂಸ್ಕೃತ ಧರ್ಮ. ಇದೇ ವಸುಧೈವ ಕುಟುಂಬಕಂ ಆಶಯ ಎಂದು ವಿಜಯನಗರ ಜಿಲ್ಲೆ ನವಲಿ ಕಟ್ಟಿಮನಿ ಹಿರೇಮಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನದ ಅಭಿನವ ಶಿವಲಿಂಗೇಶ್ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

    ಪ್ರೇಮಾಮೃತಂ ಸಭಾಂಗಣದಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವೀಯ ಮೌಲ್ಯಗಳನ್ನು ಮರೆತಿರುವ ಈ ಕಾಲದಲ್ಲಿ ಸ್ವಾರ್ಥ, ಈರ್ಷ್ಯೆ ಮತ್ತು ದ್ವೇಷದ ಮನೋಭಾವಗಳೇ ವಿಜೃಂಭಿಸುತ್ತಿವೆ. ಇಂಥ ಸಂದರ್ಭದಲ್ಲಿ 100 ದೇಶಗಳ ಜನರನ್ನು ಇಲ್ಲಿಗೆ ಕರೆಸಿ ಇವರೆಲ್ಲಾ ಅವರೆಲ್ಲಾ ನನ್ನವರು ಎಂದು ಘೋಷಿಸುವುದು ಗಮನಾರ್ಹ ಸಂಗತಿ. ಇದಕ್ಕಾಗಿ ಸದ್ಗುರುಗಳಿಗೆ ಎಲ್ಲರೂ ಆಭಾರಿಗಳಾಗಿರಬೇಕು ಎಂದರು.

    ಮಠಾಧೀಪತಿಯಾದರೆ ಅರ್ಧಮಿಗಳ ಕಾಟ, ಸಂಸಾರಿಯಾದರೆ ಸತಿಸುತರ ಕಾಟ, ದೇಶಭಕ್ತನಾದರೆ ದೇಶದ್ರೋಹಿಗಳ ಕಾಟ, ಸ್ವದೇಶಿಯಾದರೆ ವಿದೇಶಿ ಕಾಟ, ಈ ಕಾಟಗಳನ್ನು ಕೂಟಗಳನ್ನು ಮೀರಿಸಿ ನಮ್ಮೆಲ್ಲರ ಸದ್ಗುರುವಿನ ಭವ್ಯ ತಾಣದ ಕೂಟ ಎಲ್ಲಾದರೂ ಇದೆ ಎಂದರೆ ಅದು ಮುದ್ದೇನಹಳ್ಳಿಯಲ್ಲಿದೆ. ಇಲ್ಲಿ ಯಾವ ಕಾಟವೂ ಇಲ್ಲ. ತಾಕಲಾಟವೂ ಇಲ್ಲ, ಪರದಾಟವೂ ಇಲ್ಲ. ಭಗವಂತನ ಆಟ ಇಲ್ಲಿದೆ. ನೀವೆಲ್ಲರು ಭಗವಂತನ ಭವ್ಯ ಮಕ್ಕಳಾಗಿ ಇಲ್ಲಿದ್ದೀರಿ ಎಂದು ಶ್ಲಾಘಿಸಿದರು.

    ///ಸಾಯಿ ಶ್ಯೂರ್ ನೂತನ ಘಟಕ ಆರಂಭಕ್ಕೆ ಸಂಕಲ್ಪ///

    ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ತಮ್ಮ ಆಶೀರ್ವಚನದಲ್ಲಿ ಸಾಯಿ ಶ್ಯೂರ್‌ನ ಮತ್ತೊಂದು ಘಟಕವನ್ನು ಶೀಘ್ರ ನಿರ್ಮಿಸಲಾಗುವುದು ಎಂದು ಘೋಷಿಸಿದರು. ‘ಸಾಯಿ ಶ್ಯೂರ್ ಪೌಷ್ಟಿಕ ಆಹಾರ ತಯಾರಿಕೆಯ ಘಟಕ ಸತ್ಯ ಸಾಯಿ ಗ್ರಾಮದಲ್ಲಿದೆ. ಇದನ್ನು ದೇಶದ ಇತರೆ ಪ್ರದೇಶಗಳಲ್ಲಿಯೂ ಸ್ಥಾಪಿಸುವ ಗುರಿ ಇದೆ. ಇದರಿಂದ ಸಾಗಾಣಿಕೆಗೆ ತಗಲುತ್ತಿರುವ ವೆಚ್ಚ ಕಡಿಮೆಯಾಗುತ್ತದೆ. ಸ್ಥಳೀಯ ರೈತರಿಂದಲೇ ಆಹಾರ ಪದಾರ್ಥಗಳನ್ನು ಖರೀದಿಸಿ ಅವರ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಲಾಗುತ್ತದೆ’ ಎಂದು ಹೇಳಿದರು.

    ಶಾಲೆಗೆ ಹೋಗುವ 25 ಕೋಟಿ ಮಕ್ಕಳ ಪೈಕಿ ಬಡತನ ರೇಖೆಗಿಂತ ಕಡಿಮೆ ಇರುವ ಕನಿಷ್ಠ 8 ಕೋಟಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಗುರಿಯನ್ನು ಹೊಂದಿದ್ದೇವೆ. ಈ ಯೋಜನೆ ಭಾರತದ ಗಡಿಯನ್ನು ದಾಟಿಹೋಗಿದೆ. ಆಫ್ರಿಕಾ, ಕಾಂಬೋಡಿಯಾ ಹಾಗೂ ಇತರೆ ದೇಶಗಳ ಹಲವು ಪ್ರದೇಶಗಳಿಗೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಶ್ರೀ ಸತ್ಯ ಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆಗೆ ಬೆಂಬಲ ನೀಡುತ್ತಿರುವ ‘ನು ಟೆಕ್ ಇನ್‌ಸ್ಟ್ರುಮೆಂಟ್ಸ್’ (Nu Tek Instruments Pvt Ltd) ಕಂಪನಿಗೆ ‘ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಕಂಪನಿಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಈಶ್ವರ್ ದತ್ ಕುಂದೂರಿ ಅವರು ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

    Mahagauri dressed in white in Sathya Sai village of Muddenahalli

  • ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು

    ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು

    ಕೋಲಾರ ಸೆ 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.

    ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.

    ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ ಅಹಲ್ಯಾಬಾಯಿ ಹೋಳ್ಕರ್ ಮಾದರಿಯಾದರೆ ಸಾಮಾಜಿಕ ಬದ್ಧತೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾದರಿಯಾಗಿದ್ದಾರೆ. ಈ ಎಲ್ಲಾ ಹಿರಿಯ ಮಾದರಿಗಳು ಸಮಾಜದ ಆಸ್ತಿ ಆಗಿರುವುದು ನಮಗೆಲ್ಲಾ ಹೆಮ್ಮೆ ತರುವ ಜೊತೆಗೆ ಪ್ರೇರಣೆ ಕೂಡ ಆಗಲಿ ಎಂದು ಕರೆ ನೀಡಿದರು.

    ಪ್ರತಿಭೆ ಎನ್ನುವುದು ಒಟ್ಟು ಸಮಾಜದ ಕೊಡುಗೆ. ಹೀಗಾಗಿ ಪ್ರತಿಭಾವಂತರು ಸಮಾಜದ ಆಸ್ತಿ ಆಗಬೇಕು ಎನ್ನುವುದು ನನ್ನ ಭಾವನೆ.

    ಪ್ರತಿಭೆ ಪ್ರತಿಯೊಬ್ಬರ ಒಳಗೂ ಇರುತ್ತದೆ. ಈ ಪ್ರತಿಭೆ ಹೊರಗೆ ಬರುವುದಕ್ಕೆ ಅವಕಾಶ ಮುಖ್ಯ. ನಮ್ಮ ಸಮುದಾಯದ ಹಿರಿಯರು ನಡೆಸಿದ ಹೋರಾಟ, ಮಾಡಿದ ಸಂಘಟನೆ ಕಾರಣಕ್ಕೆ ನಮಗೆ ನಿಮಗೆ ಇಂದು ಅವಕಾಶಗಳು ಸೃಷ್ಟಿಯಾಗಿವೆ. ಆದರೆ ಅವಕಾಶ ವಂಚಿತರು ಇನ್ನೂ ಬಹಳ ಮಂದಿ ಇದ್ದಾರೆ. ಈ ಅವಕಾಶ ವಂಚಿತರ ರಾಯಬಾರಿಗಳಾಗಿ ನೀವು ಬೆಳೆಯಬೇಕು ಎಂದು ಕರೆ ನೀಡಿದರು‌.

    ಆದ್ದರಿಂದ ಈ ಅವಕಾಶ ವಂಚಿತರಿಗೆ ಅವಕಾಶ ಸೃಷ್ಟಿಸುವ ದಿಕ್ಕಿನಲ್ಲಿ ನಾವು ನೀವೆಲ್ಲಾ ಶ್ರಮಿಸೋಣ. ನಮಗೆ ಮಾರ್ಗದರ್ಶನ ಮಾಡೋದಕ್ಕೆ ವೇದಿಕೆಯಲ್ಲಿ ಇಷ್ಟೊಂದು ಮಂದಿ ಹಿರಿಯರು, ಗುರುಗಳು ಕುಳಿತಿದ್ದಾರೆ. ಇವರೆಲ್ಲರ ಮಾರ್ಗದರ್ಶನದಲ್ಲಿ ನಮ್ಮ ಪರಂಪರೆಯ ಹಿರಿಮೆಯನ್ನು ಮುನ್ನಡೆಸೋಣ ಎಂದು ಕರೆ ನೀಡಿದರು.

    ಅಂಕಪಟ್ಟಿಯ ಅಂಕಗಳಷ್ಟೇ, ನೈತಿಕತೆಯ ಮೌಲ್ಯಗಳೂ ಬಹು ಮುಖ್ಯ. ಈಗ ಡಿಜಿಟಲ್ ತಂತ್ರಜ್ಞಾನದ ಜೊತೆ ಸಂಬಂಧ ಬೆಳೆಸಿಕೊಂಡು ಪೋಷಕರ ಜೊತೆ ಅಂತರ ಕಾಯ್ದುಕೊಳ್ಳುತ್ತಿದ್ದೇವೆ.

    ಯಾರೋ ಮೇಕಪ್ ಸ್ಟಾರ್ ಗಳಿಗೆ “ಲವ್ ಯು” ಹೇಳುವ ಚಟ ಬಿಟ್ಟು ನಿಮ್ಮ ಬದುಕು, ಭವಿಷ್ಯಕ್ಕಾಗಿ ತಮ್ಮ ತ್ಯಾಗ ಮಾಡಿದ ಅಪ್ಪ-ಅಮ್ಮನಿಗೆ ನೀವು ಲವ್ ಯು ಹೇಳಿ ಎಷ್ಟು ವರ್ಷ ಆಯ್ತು ಯೋಚ್ನೆ ಮಾಡಿ. ವೃದ್ದಾಶ್ರಮಗಳು ಹೆಚ್ಚಾಗುವುದು ರೋಗಿಷ್ಟ ಸಮಾಜದ ಲಕ್ಷಣ. ಯಾವುದೇ ಕಾರಣಕ್ಕೂ ಅಪ್ಪ ಅಮ್ಮನನ್ನು ವೃದ್ದಾಶ್ರಮಕ್ಕೆ ತಳ್ಳುವಷ್ಟು ಮಟ್ಟಕ್ಕೆ ಬೆಳೆಯಬೇಡಿ ಎಂದರು.

    ಆಸ್ಪತ್ರೆಗಳು ಹೆಚ್ಚಾಗುವುದು ಆರೋಗ್ಯವಂತ ಸಮಾಜದ ಲಕ್ಷಣವಲ್ಲ. ಶಾಲೆಗಳು, ಆಟದ ಮೈದಾನಗಳು ಆರೋಗ್ಯವಂತ ಸಮಾಜದ ಲಕ್ಷಣ ಎಂದರು.

    ಕಾಗಿನೆಲೆ ಗುರುಪೀಠದ ಶ್ರೀ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಗಳು ದಿವ್ಯ ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವರೂ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಕೊಪ್ಪಳ ವಿವಿಯ ಉಪ ಕುಲಪತಿಗಳಾದ ಬಿ.ಕೆ.ರವಿ, insight ಅಕಾಡೆಮಿಯ ವಿನಯ್ ಕುಮಾರ್, ಮಾಜಿ ಸಚಿವರಾದ ಆರ್.ವರ್ತೂರು ಪ್ರಕಾಶ್ ಸೇರಿ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

    The talents of our community must blossom into assets for society.