Category: ತಂತ್ರಜ್ಞಾನ

  • ಕಾರ್ಮಿಕ ಕೌಶಲ್ಯ ಹೆಚ್ಚಿಸುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ

    ಕಾರ್ಮಿಕ ಕೌಶಲ್ಯ ಹೆಚ್ಚಿಸುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ

    ಚಿಕ್ಕಮಗಳೂರು:  ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಕಾರ್ಮಿಕರ ಕೌಶಲ್ಯ ಹೆಚ್ಚಿಸುವ ಮೂಲಕ ಅವರ ಉತ್ಪನ್ನಗಳ ಗುಣಮಟ್ಟ ಸುಧಾರಿಸಿ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಬೆಂಗಳೂರಿನ ಎಂ.ಎಸ್.ಎಂ.ಇ. ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಇಂದು ಪ್ರಧಾನ ಮಂತ್ರಿ ವಿಶ್ವಕರ್ಮ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಸಾಂಪ್ರದಾಯಿಕ ಕರಕುಶಲ ವಸ್ತುಗಳ ಉತ್ಪಾದನೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಆರ್ಥಿಕ ಬೆಂಬಲ ನೀಡುವ ಯೋಜನೆ. ನಶಿಸಿ ಹೋಗುತ್ತಿರುವ ಕೈಗಾರಿಕೆಗಳಿಗೆ ಪುನಶ್ಚೇತನ ನೀಡುವ ಸಲುವಾಗಿ ಉದ್ಯಮಕ್ಕೆ ಶಕ್ತಿ ಕೊಟ್ಟು ಸ್ವಂತ ಉದ್ಯೋಗ ಮಾಡಲು ೧೮ ಕುಲಕಸುಬುಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ಜಾರಿಗೊಳಿಸಲಾಗಿದೆ.

    ಈ ಯೋಜನೆಯು ಬಡಗಿ, ಕಮ್ಮಾರ. ಶಿಲ್ಪಿಗಳು. ಕುಶಲಕರ್ಮಿಗಳು ಸೇರಿದಂತೆ ೧೮ ಬಗೆಯ ಸಾಂಪ್ರದಾಯಿಕ ವೃತ್ತಿಯನ್ನು ಒಳಗೊಂಡಿದೆ. ಈ ವೃತ್ತಿಯಲ್ಲಿ ತೊಡಗಿರುವವರು ಯೋಜನೆಯಡಿ ವಿವಿಧ ಪ್ರಯೋಜನ ಪಡೆಯಬಹುದು. ಸ್ವಯಂ ಬದುಕು ಕಟ್ಟಿಕೊಳ್ಳುವ ಇಚ್ಛೆ ಇದ್ದವರಿಗೆ ತರಬೇತಿ ಜೊತೆಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸಿ, ಸ್ವಂತ ಕಸುಬು ಸೃಷ್ಟಿ ಮಾಡಿಕೊಳ್ಳ್ಳುವ ಯೋಜನೆ ಇದಾಗಿದೆ ಎಂದು ಹೇಳಿದರು

    ಕುಂಬಾರರು ತಮ್ಮದೇ ಆದ ಸಂಘಗಳನ್ನು ರಚಿಸಿಕೊಂಡು ನಿತ್ಯ ಉಪಯೋಗಿ ಮಡಿಕೆಗಳನ್ನು ಬಿಟ್ಟು ಆಲಂಕಾರಿಕ ಮಡಿಕೆಗಳನ್ನು ತಯಾರು ಮಾಡುತ್ತಿದ್ದಾರೆ. ನಮ್ಮ ಊರಿನಲ್ಲಿ ಮಾಡಿರುವ ಕುಂಬಾರರ ಆಲಂಕಾರಿಕ ಮಡಿಕೆ ಭಾರತ ಮಾತ್ರವಲ್ಲ ವಿದೇಶದಲ್ಲಿ ಸಹ ಅತ್ಯಂತ ಬೇಡಿಕೆ ಹೊಂದಿದೆ. ಕುಂಬಾರರು, ಚಮ್ಮಾರರಿಗೆ ತರಬೇತಿ ನೀಡಿ ಅವರಿಗೆ ಆರ್ಥಿಕ ಶಕ್ತಿ ನೀಡಿ ಉತ್ತೇಜಿಸಿ ಇತರೆ ಕಾರ್ಮಿಕರಿಗೆ ಕೆಲಸ ಕೊಡುವ ಉದ್ಯಮವನ್ನಾಗಿ ಮಾರ್ಪಾಡು ಮಾಡುವುದೇ ವಿಶ್ವ ಕರ್ಮ ಯೋಜನೆಯ ಉದ್ದೇಶ ಎಂದು ತಿಳಿಸಿದರು.

    ವಿಶ್ವ ಕರ್ಮ ಯೋಜನೆಯ ಫಲಾನುಭವಿಗಳು ಬ್ಯಾಂಕ್ ಸಾಲದ ಬದಲು ಕಿಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಈ ಕಿಟ್ ವಿತರಣೆಯಲ್ಲಿ ಕೆಲವೊಂದು ಲೋಪದೋಷಗಳು ಕಂಡು ಬಂದವು. ಈ ಹಿನ್ನೆಲೆಯಲ್ಲಿ ಆಂಚೆ ಇಲಾಖೆ ತುಂಬಾ ವ್ಯವಸ್ಥಿತವಾಗಿ ಪಾರದರ್ಶಕತೆಯಿಂದ ಕೆಲಸ ನಿರ್ವಹಿಸುತ್ತಿದೆ. ಕಿಟ್ ವಿತರಣೆ ಸಂದರ್ಭದಲ್ಲಿ ವಸ್ತುಗಳ ಗುಣಮಟ್ಟವನ್ನು ಫಲಾನುಭವಿಗಳ ಮುಂದೆಯೇ ಪರಿಶೀಲಿಸಿ ನಂತರ ಅದನ್ನು ಅವರಿಗೆ ನೀಡಲಾಗುತ್ತದೆ. ಕಿಟ್‌ನಲ್ಲಿ ಗುಣಮಟ್ಟದ ಕೊರತೆ ಕಂಡು ಬಂದರೆ ಅದನ್ನು ತಕ್ಷಣವೇ ವಾಪಸ್ಸು ಮಾಡಲಾಗುತ್ತಿದೆ ಎಂದು ಹೇಳಿದರು.

    ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ, ನಾವು ನಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳದಿದ್ದರೆ, ನಮ್ಮ ಪಾರಂಪರಿಕ ವಿದ್ಯೆಯನ್ನು ನಾವು ಅಭಿವೃದ್ಧಿಪಡಿಸಿಕೊಳ್ಳದಿದ್ದರೆ ಮುಂದೆ ನಮಗೆ ಜೀವನ ಕಷ್ಟವಾಗಲಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹೆಚ್.ಎನ್.ಮಹೇಶ್ ಮಾತನಾಡಿ ವಿಶ್ವ ಕರ್ಮ ಯೋಜನೆ ಪಾರಂಪರಿಕ ಕಸಬುಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಅದನ್ನು ಪೀಳಿಗೆ ಮುಂದುವರಿಸಬೇಕು ಎಂಬ ಆಶಯ ಹೊಂದಿದೆ. ಜೊತೆಗೆ ಇನ್ನೂ ಹೆಚ್ಚಿನ ಜನರು ಸ್ವಂತ ಉದ್ಯೋಗವನ್ನು ತಮ್ಮದಾಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂಬ ದೃಷ್ಟಿಕೋನ ಈ ಯೋಜನೆಯದು. ಜಿಲ್ಲೆಯ ೨೬೦೦ ಫಲಾನುಭವಿಗಳು ಬ್ಯಾಂಕ್‌ಗಳಿಂದ ಸುಮಾರು ೨೦ ಕೋಟಿ ಸಾಲ ಪಡೆದುಕೊಂಡು ಕುಲ ಕಸಬು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಿಶ್ಚಕರ್ಮ ಯೋಜನೆಯಡಿ ನಾಲ್ವರಿಗೆ ಟೂಲ್ ಕಿಟ್, ಐವರಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಲಾಯಿತಲ್ಲದೆ, ಒಬ್ಬರಿಗೆ ಕುಂಬಾರಿಕೆ ವೃತ್ತಿಗೆ ಸಂಬಂಧಿಸಿದ ಸಾಲ ಸೌಲಭ್ಯ ಒದಗಿಸಲಾಯಿತು.

    ಕಾರ್ಯಕ್ರಮದಲ್ಲಿ ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿಯ ಜಂಟಿ ನಿರ್ದೇಶಕ ಕೆ.ದೇವರಾಜ್, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ನಾಮ ನಿರ್ದೇಶನ ಸದಸ್ಯರಾದ ಬೆಳವಾಡಿ ರವೀಂದ್ರ, ಎನ್.ಭಾಸ್ಕರ್, ದಿಶಾ ಸಮಿತಿಯ ಸದಸ್ಯ ಹೆಚ್.ಸಿ.ಕಲ್ಮರುಡಪ್ಪ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಶಾಂತ್, ಅಂಚೆ ಅಧೀಕ್ಷಕ ಬಿ.ಶ್ರೀನಾಥ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು.

    Prime Minister’s Vishwakarma Yojana to increase skill of workers

  • ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಬ್ರಿಟೀಷರು ಭಾರತವನ್ನು ವಶಕ್ಕೆ ಪಡೆದರು

    ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಬ್ರಿಟೀಷರು ಭಾರತವನ್ನು ವಶಕ್ಕೆ ಪಡೆದರು

    ಬೆಳಗಾವಿ: ವ್ಯಾಪಾರಕ್ಕೆಂದು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಭಾರತವನ್ನು ವಶಕ್ಕೆ ಪಡೆದರು.
    ಈಗಲೂ ಜಾತಿ-ಧರ್ಮದ ಹೆಸರಲ್ಲಿ ಭಾತೀಯರನ್ನು ಎತ್ತಿ ಕಟ್ಟುವವರು ಇದ್ದಾರೆ. ಇವರ ಬಗ್ಗೆ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

    ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚನ್ನಮ್ಮ ಸೋಲಿಸಿದರು.
    ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವ. 2017 ರಲ್ಲಿ ಕಿತ್ತೂರು ರಾಣಿ ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ನೆನಪಿಸಿದರು.

    ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿ ಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು.

    ಸ್ವಾಭಿಮಾನಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು. ಬಾಬಾ ಸಾಹೇಬ್ ಪಾಟೀಲರು ಶಾಸಕರಾದ ಬಳಿಕ ಕಿತ್ತೂರು ಉತ್ಸವ ಅತ್ಯಂತ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ನಡೆಸುತ್ತಿದ್ದಾರೆ. ಇದಕ್ಕಾಗಿ ಶಾಸಕರು ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ನಿದ್ದೆ ಗೆಡಿಸಿದ್ದರು. ನಾಲ್ಕು ಮೈಸೂರು ಯುದ್ಧಗಳನ್ನು ನಡೆಸಿದ್ದರು. ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ವಿರುದ್ಧ ವಿರೋಚಿತವಾಗಿ ಹೋರಾಡಿದ ಅಪ್ಪಟ ವೀರರು. ದೇಶಪ್ರೇಮಿಗಳು. ಈ ಇತಿಹಾಸವನ್ನು ಹೇಳಿದ ಕೂಡಲೇ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಾರೆ. ಅಂಬೇಡ್ಕರ್ ಅವರ ಮಾತನ್ನು ನಾವು ನೆನಪಿಡಬೇಕು. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಅಂಬೇಡ್ಕರ್ ಅವರ ಮಾತು ಮರೆಯಬಾರದು ಎಂದರು.

    ರಾಣಿ ಚನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ನಮ್ಮ ಸರ್ಕಾರ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

    The British took control of India by pitting Indians against each other.

  • ಬಹುಜನರೇ ಭಾರತದ ದೇಶದ ಅತಿದೊಡ್ಡ ಆಸ್ತಿ

    ಬಹುಜನರೇ ಭಾರತದ ದೇಶದ ಅತಿದೊಡ್ಡ ಆಸ್ತಿ

    ಚಿಕ್ಕಮಗಳೂರು:  ಬಹುಜನರು ದೇಶದ ಆಸ್ತಿ. ಭಾರತದ ಬಹುಜನರೇ ದೊಡ್ಡ ಸ ಮುದಾಯವಾಗಿದ್ದು ಎಲ್ಲರೂ ಒಗ್ಗೂಡಿಸಿ ದೇಶದ ಆಡಳಿತ ನಡೆಸುವ ರಾಜಕೀಯ ಪ್ರಜ್ಞೆ ಹೆಚ್ಚಿಸಿದವರು ದಾ ದಾ ಸಾಹೇಬ್ ಕಾನ್ಷಿರಾಮ್‌ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಹೇಳಿದರು.

    ನರಗದ ಜಿಲ್ಲಾ ಬಿಎಸ್ಪಿ ಕಚೇರಿಯಲ್ಲಿ ಜಿಲ್ಲಾ ಸಹೋದರತ್ವ ಸಮಿತಿ ಮಾಸಿಕ ಸಭೆ ಹಾಗೂ ದಾದಾ ಸಾ ಹೇಬ್ ಕಾನ್ಷಿರಾಮ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಶನಿವಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿ ಬಹುಜನರಿಗೆ ರಾಜಕೀಯ ಪ್ರಜ್ಷೆ ಹೆಚ್ಚಿಸಿದ ಕಾನ್ಷಿರಾಮ್ ಪಾತ್ರ ಸ್ಮರಣೀಯ. ದೇಶಾಡಳಿತ ನಡೆಸುವ ಮಾರ್ಗ ತೋರಿದ ರಾಜಕೀಯ ದಾರ್ಶನಿಕ ಕಾನ್ಷಿರಾಮ್ ಅವರನ್ನು ಮರೆಯಲಾಗದು. ಮನುವಾದಿಗಳು ದೇಶವನ್ನು ಆಳುತ್ತಾ ಬಹುಜನರನ್ನು ತುಳಿಯುತ್ತಿದ್ದಾರೆ. ಹೀಗಾಗಿ ಬಹುಜನರ ಕೈಗೆ ಅಧಿಕಾರದ ಚುಕ್ಕಾಣಿ ಸಿಗಬೇಕಿದೆ ಎಂದು ಪ್ರತಿಪಾದಿಸಿದವರು ಎಂದರು.

    ಅಸೃಷ್ಟ್ಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ಆಳುವ ವರ್ಗದವರನ್ನಾಗಿ ಮಾಡಿದ ಶ್ರೇ ಯಸ್ಸು ಕಾನ್ಷಿರಾಮ್ ಅವರಿಗೆ ಸಲ್ಲುತ್ತದೆ. ಅಲ್ಲದೇ ಮಾಯಾವತಿ ಅವರನ್ನು ಮೂರು ಭಾರಿ ಮುಖ್ಯಮಂತ್ರಿ ಯನ್ನಾಗಿ ಮಾಡಿ, ಉತ್ತರ ಪ್ರದೇಶದಲ್ಲಿ ಬಡವರಿಗೆ ಭೂಮಿ, ಸಾಲಸೌಲಭ್ಯ ಕಲ್ಪಿಸಿದವರು ಎಂದು ಹೇಳಿ ದರು.

    ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ ಭಾರತೀಯರ ಬದುಕಿನಲ್ಲಿ ಭದ್ರವಾಗಿ ಬೆಸೆದು ಕೊಂಡಿರುವ ಪುರೋಹಿತಶಾಹಿಯನ್ನು ವಿರುದ್ಧ ಬುಡ ಸಹಿತ ನಾಶಗೊಳಿಸಿ, ಬಹುಜನ ಸಮಾಜವನ್ನು ಆಳುವ ಸಮಾಜವನ್ನಾಗಿಸುವುದು ಕಾನ್ಷಿರಾಮ್ ಗುರಿಯಾಗಿತ್ತು. ಶೋಷಿತ ಸಮಾಜವು ಆಳುವ ಸಮಾಜ ವಾಗುವುದರಿಂದ ಮಾತ್ರ ಜಾತಿರಹಿತ ಸಮಾಜವನ್ನು ಸೃಷ್ಟಿ ಮಾಡಬಹುದು ಎಂದು ಸಾರಿದವರು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ಹೆಚ್.ಕುಮಾರ್ ಮಾತನಾಡಿ ಕಾನ್ಷಿರಾಮ್ ರವರು ಬಿಎಸ್ಪಿಯನ್ನು ಮೂರನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿಸಿದರು. ತಮಗೆ ಒಲಿದು ಹಲವಾರು ಹುದ್ದೆಗಳನ್ನು ಬದಿಗಿಸಿದವರು. ಅಲ್ಲದೇ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಬಹುದಾದ ಸದಾವಕಾಶ ವನ್ನು ತಳ್ಳಿಹಾಕಿ ಮಯಾವತಿ ಅವರನ್ನು ನಾಯಕಿಯನ್ನಾಗಿ ಸೃಷ್ಟಿಸಿದವರು ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾ ಸಹೋದರತ್ವ ಸಮಿತಿಯ ಕಾರ್ಯದರ್ಶಿ ಕೆ.ಎಸ್.ಮಂಜುಳಾ, ಅಸೆಂಬ್ಲಿ ಪ್ರಧಾನ ಕಾರ್ಯದರ್ಶಿಗಳಾದ ಆರ್.ವಸಂತ್, ಸಿದ್ದಯ್ಯ, ಖಜಾಂಚಿ ಟಿ.ಹೆಚ್.ರತ್ನ, ಅಸ್ಮ ಪರ್ವೀನ್, ಕಲಾ ವತಿ, ಲಕ್ಷ್ಮಣ್ ಉಪಸ್ಥಿತರಿದ್ದರು.

    People are the biggest asset of India

     

  • ತಾಲ್ಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

    ತಾಲ್ಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

    ಚಿಕ್ಕಮಗಳೂರು:  ರಾಜ್ಯದ ತಾಲ್ಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರುಗಳನ್ನು ಕಡ್ಡಾಯವಾಗಿ ನೇಮಕ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ತಾಯಿ ಮಗುವಿನ ಆರೋಗ್ಯಕ್ಕೆ ಆದ್ಯತೆ ನೀಡಿದೆ ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ತಿಳಿಸಿದರು.

    ಕೊಪ್ಪ ಪಟ್ಟಣದಲ್ಲಿ ೧೪ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂದು ಮಾತನಾಡಿದ ಅವರು, ತಲಾ ಇಬ್ಬರಂತೆ ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು, ಅರಿವಳಿಕೆ ತಜ್ಞರು, ಒಬ್ಬರು ರೆಡಿಯಾಲಾಜಿಸ್ಟ್ ಅನ್ನು ನೇಮಿಸಿಕೊಳ್ಳಲಾಗುವುದು. ಜನರಿಗೆ ಅಗತ್ಯ ಸೇವೆ ಪೂರೈಸಲು ಸರ್ಕಾರ ಬದ್ಧವಾಗಿದ್ದು, ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು.

    ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಯನ್ನು ಕೇವಲ ಮೂರು ತಿಂಗಳಲ್ಲಿ ಅನುಷ್ಠಾನಕ್ಕೆ ತಂದರು. ಸರ್ಕಾರ ನುಡಿದಂತೆ ನಡೆದಿದ್ದು, ದೇಶದ ಜನರಿಗೆ ಅಚ್ಚರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇದೆ. ಮಹಿಳಾ ಸಬಲೀಕರಣಕ್ಕೆ ಒತ್ತು ಕೊಟ್ಟಿದೆ. ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆತ್ಮ ಗೌರವ ಸಿಕ್ಕಿದೆ ಎಂದರು.

    ೧೦೦ ಹಾಸಿಗೆಗಳ ಆಸ್ಪತ್ರೆ ಮಂಜೂರು ಮಾಡಿ ಶೃಂಗೇರಿಯ ಋಣ ತೀರಿಸುವ ಕೆಲಸ ಮಾಡಿದ್ದು, ಇನ್ನು ಆರೇಳು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಬೇಕಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿಯೇ ಉದ್ಘಾಟನೆಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇಂದು ವಾಲ್ಮೀಕಿ ಜಯಂತಿ, ರಾಮಾಯಣವು ಭಾರತದ ಬೆಳವಣಿಗೆಗೆ ಸ್ಫೂರ್ತಿಯಾಗಿದೆ ಎಂದು ಈ ಸಂದರ್ಭದಲ್ಲಿ ಸ್ಮರಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೂತನ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ಬರೆದ ರಾಮಾಯಣವನ್ನು ಭಾರತ ಮಾತ್ರವಲ್ಲ ಇಡೀ ಪ್ರಪಂಚವೇ ಶ್ಲಾಘಿಸುತ್ತದೆ. ಅಯೋಧ್ಯೆಯ ರಾಮನ ಆದರ್ಶ ಕೊಟ್ಟ ಮಾತನ್ನು ಪಾಲಿಸಲು ಮಾತ್ರವೇ ಹೊರತು ಅಧಿಕಾರಕ್ಕಾಗಿ ಅಲ್ಲ. ರಾಮಾಯಣ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲಾ ಧರ್ಮದವರಿಗೂ ದಾರಿದೀಪ ಎಂದು ಹೇಳಿದರು.

    ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ’ಗ್ಯಾರಂಟಿ ಯೋಜನೆಗೆ ೫೦-೬೦ ಸಾವಿರ ಕೋಟಿ ರೂ. ಕೊಟ್ಟರೂ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ಹಿಂದೆ ಬಿದ್ದಿಲ್ಲ. ಅಭಿವೃದ್ಧಿ ನಿಟ್ಟಿನಲ್ಲಿ ರೂ.೧೪.೬೯ ಕೋಟಿ ವೆಚ್ಚದಲ್ಲಿ ಇಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣವಾಗಿದೆ. ಆಸ್ಪತ್ರೆ ಮುಂದುವರಿದ ಅಭಿವೃದ್ಧಿ ಕಾಮಗಾರಿಗೆ ಸಚಿವರನ್ನು ಕೇಳಿದ ಕೂಡಲೇ ರೂ.೧.೩೪ ಕೋಟಿ ಮಂಜೂರು ಮಾಡಿದ್ದಾರೆ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತುಕೊಟ್ಟು ಕೆಲಸ ಮಾಡುತ್ತಿದೆ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ವಾಲ್ಮೀಕಿ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಉಪ ವಿಭಾಗಾಧಿಕಾರಿ ಸುದರ್ಶನ್, ಆರೋಗ್ಯ ಇಲಾಖೆ ಮೈಸೂರು ವಿಭಾಗ ಜಂಟಿ ನಿರ್ದೇಶಕಿ ಮಲ್ಲಿಕಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್‌ಬಾಬು, ತಹಶೀಲ್ದಾರ್ ಲಿಖಿತಾ ಮೋಹನ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಚ್.ಆರ್.ರೇಖಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್, ಆರೋಗ್ಯ ಶಿಕ್ಷಣಾಧಿಕಾರಿ ಸುಧಾಕರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ಬಗರ್ ಹುಕುಂ ಸಮಿತಿ ಸದಸ್ಯರು, ಕೆಡಿಪಿ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

    Decision to appoint specialist doctors for taluk hospitals

     

  • ಸುಳ್ಳು ಆರೋಪ ಮಾಡಿದ ಆರೋಪಿಗಳ ಗಡಿಪಾರು ಮಾಡಬೇಕು

    ಸುಳ್ಳು ಆರೋಪ ಮಾಡಿದ ಆರೋಪಿಗಳ ಗಡಿಪಾರು ಮಾಡಬೇಕು

    ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’ ವರದಿ ಸಲ್ಲಿಸಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು’ ಎಂದು ವಕೀಲ ಅನಿಲ್‌ಕುಮಾರ್ ಒತ್ತಾಯಿಸಿದರು.

    ‘18 ವರ್ಷದಿಂದ ವಕೀಲ ವೃತ್ತಿ ಜತೆಗೆ ಬುದ್ಧ, ಬಸವ, ಅಂಬೇಡ್ಕರ್ ಆಶಯ ಸಾರುವ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದೇನೆ. 2025 ಜ. 8ರಂದು ಭೀಮಾ ಕೊರಂಗಾವ್ ವಿಜಯೋತ್ಸವ ಕಾರ್ಯಕ್ರಮ ನಡೆಸಲಾಗಿದೆ. ದೇಣಿಗೆ ಸಂಗ್ರಹಿಸಿದ ಹಣ ಹಾಗೂ ರಶೀದಿ ಪುಸ್ತಕವನ್ನು ದಂಟರಮಕ್ಕಿ ಶ್ರೀನಿವಾಸ್‌ ಕೊಡಲಿಲ್ಲ. ನಾನೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತೇನೆ ಎಂದಿದ್ದರು. ಎಲ್ಲರ ಅಭಿಪ್ರಾಯ ಪಡೆದು ಹೊನ್ನೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು’ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಹೇಳಿದರು.

    ‘ಸಂಗ್ರಹವಾದ ದೇಣಿಗೆ ಹಣದ ಲೆಕ್ಕ ಕೊಡುವಂತೆ ವ್ಯಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಕೇಳಿಕೊಂಡೆವು. ಕಾರ್ಯಕ್ರಮಕ್ಕೆ ಶ್ರಮಿಸಿದವರನ್ನು ವೇದಿಕೆಗೆ ಆಹ್ವಾನಿಸಲಾಗಿತ್ತು. ಇದರಿಂದ ಕುಪಿತಗೊಂಡಿದ್ದ ದಂಟರಮಕ್ಕಿ ಶ್ರೀನಿವಾಸ್ ಹಾಗೂ ವೇದಿಕೆಗೆ ಆಹ್ವಾನವಿಲ್ಲದ ಮರ್ಲೆ ಅಣ್ಣಯ್ಯ, ಕೃಷ್ಣಮೂರ್ತಿ, ಛಲವಾದಿ ರಘು, ಲಕ್ಕಾ ಸಂತೋಷ್, ಲಕ್ಷ್ಮೀಪುರ ಸಂತೋಷ್, ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್‌ ಅವರು ನನ್ನ ಮೇಲೆ ದ್ವೇಷ ಸಾಧಿಸಿದರು. ಏಳು ತಿಂಗಳಿನಿಂದ ನಿರಂತರ ಪತ್ರಿಕಾಗೋಷ್ಠಿ ನಡೆಸಿ ಅಪಪ್ರಚಾರ ಮಾಡಿ ಸುಳ್ಳು ಸುದ್ದಿ ಹರಡಿದರು’ ಎಂದು ದೂರಿದರು.

    ಇವರ ಕುಮ್ಮಕ್ಕಿನಿಂ ದಲೇ ಓಂಕಾರಮೂರ್ತಿ, ಅವರ ಸಹೋದರ ವಿರೂಪಾಕ್ಷ ಮತ್ತು ಪಲ್ಲವಿ ಸೇರಿ ಬಸವನಹಳ್ಳಿ ಠಾಣೆಯಲ್ಲಿ ಸುಳ್ಳು ದೂರು ನೀಡಿದರು. ಅಪಘಾತ ಪ್ರಕರಣವನ್ನು ತಿರುಚಿ ಹಲ್ಲೆ ಪ್ರಕರಣ ದಾಖಲಿಸಿದ್ದರು ಎಂದರು.

    ಬೀಕನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಂತೋಷ್ ಲಕ್ಯಾ ಅವರ ಪತ್ನಿ ನರ್ಸಿಂಗ್ ಆಫೀಸರ್ ಆಗಿದ್ದಾರೆ. ಖಾಲಿ ಇರುವ ನಿಲಯ ಪಾಲಕರ ಹುದ್ದೆಯನ್ನು ಕಾನೂನು ಬಾಹಿರವಾಗಿ ಪಡೆಯಲು ಶಾಲೆಯ ಆಂತರಿಕ ವಿಚಾರದಲ್ಲಿ ವಿನಾಕಾರಣ ಇದೇ ತಂಡ ಹಸ್ತಕ್ಷೇಪ ಮಾಡಿತು. ವಸತಿ ಶಾಲೆಗೆ ಅತಿಕ್ರಮ ಪ್ರವೇಶ ಮಾಡಿ ಸಿಬ್ಬಂದಿಗೆ ಮೇಲೂ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಈ ತಂಡ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವಿವರಿಸಿದರು.

    ಸುದ್ದಿಗೋಷ್ಠಿಯಲ್ಲಿ ಕನ್ನಡ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸಿ.ರಾಜೇಗೌಡ, ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ, ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಕೋಟೆ ಅನೀಲ್, ರಮೇಶ್, ಹುಣಸೇಮಕ್ಕಿ ಲಕ್ಷ್ಮಣ, ರಾಜು, ನಾಗರಿಕ ಹೋರಾಟ ಸಮಿತಿ ಸದಸ್ಯ ಈಶ್ವರ್ ಇದ್ದರು.

    Those accused of making false accusations should be deported.

     

  • ಧರ್ಮಸ್ಥಳ ಪ್ರಕರಣ-ನೈಜ ಆರೋಪಿಗಳ ಪತ್ತೆಗೆ ಆಗ್ರಹ

    ಧರ್ಮಸ್ಥಳ ಪ್ರಕರಣ-ನೈಜ ಆರೋಪಿಗಳ ಪತ್ತೆಗೆ ಆಗ್ರಹ

    ಬಾಳೆಹೊನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು, ಶ್ರೀ ಕೇದಾರ ಭೀಮಾಶಂಕರ ಜಗದ್ಗುರುಗಳು, ಶ್ರೀಶೈಲ ಡಾ.ಚನ್ನಸಿದ್ಧರಾಮ ಜಗದ್ಗುರುಗಳು, ಶ್ರೀ ಕಾಶೀ ಡಾ.ಚಂದ್ರಶೇಖರ ಜಗದ್ಗುರುಗಳು, ನೂತನ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಜಗದ್ಗುರುಗಳು ಧರ್ಮ ಕ್ಷೇತ್ರಗಳು ತಮ್ಮದೇ ಆದ ಸಂಸ್ಕೃತಿ ಮತ್ತು ಪರಂಪರೆಯನ್ನು ಅನುಸರಿಸುತ್ತವೆ.

    ಅಂತಹ ಧರ್ಮ ಕ್ಷೇತ್ರಗಳಲ್ಲಿ ರಾಜಕೀಯವನ್ನು ಬೆರೆಸುವ ಕೆಲಸ ಯಾರೂ ಮಾಡಬಾರದು. ಅನಾವಶ್ಯಕವಾಗಿ ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದು, ಭಕ್ತರ ಮತ್ತು ಸಮಾಜದ ಹಾಗೂ ಸರ್ಕಾರದ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಸನಾತನ ಧರ್ಮ ತೇಜೋವಧೆಗೆ ಕಾಣದ ಕೈಗಳು ಹುನ್ನಾರ ನಡೆಸಿವೆ. ಸರ್ಕಾರ ರಚನೆ ಮಾಡಿರುವ ವಿಶೇ? ತನಿಖಾ ಸಂಸ್ಥೆಯು ಮೇಲ್ನೋಟಕ್ಕೆ ಆರೋಪಿಗಳಾಗಿರುವವರ ವಿಚಾರಣೆ ನಡೆಸುತ್ತಿದ್ದು, ಈ ಒಟ್ಟಾರೆ ಪ್ರಕರಣದ ಹಿಂದಿನ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಆದ? ಬೇಗ ಅವರಿಗೆ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದ್ದಾರೆ.

    ನಾಡಿನಲ್ಲಿರುವ ಅನೇಕ ಮಠ-ಮಂದಿರಗಳು ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಾಚೀನ ಕಾಲದಿಂದಲೂ ಕಾರ್ಯ ನಿರ್ವಹಿಸಿಕೊಂಡು ಬಂದಿವೆ. ಅಂತೆಯೇ ಧರ್ಮಸ್ಥಳ ಕ್ಷೇತ್ರ ಶತಮಾನಗಳ ಇತಿಹಾಸ ಹೊಂದಿದ್ದು ನಾಡಿಗೆ ವಿಶೇ? ಕೊಡುಗೆ ನೀಡಿದೆ. ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಕಳೆದ ೫೦ ವ?ಗಳಿಂದ ಧರ್ಮ ಸಂಸ್ಕೃತಿ ಪುನುರುತ್ಥಾನಕ್ಕೆ ವಿಶೇ? ಕೊಡುಗೆ ನೀಡಿದ್ದಾರೆ.

    ಇಂತಹ ಕ್ಷೇತ್ರದ ಮೇಲೆ ಬಂದಿರುವ ಆರೋಪಗಳು ಮುಕ್ತವಾಗಿ ಆದ? ಬೇಗ ಮೊದಲಿನಂತೆ ಎಲ್ಲ ಸಾಮಾಜಿಕ ಕಾರ್ಯಗಳು ಮುಂದುವರೆಯುವಂತಾಗಲಿ ಎಂದು ಹಾರೈಸಿರುವ ಜಗದ್ಗುರು ಪಂಚಪೀಠಾಧೀಶ್ವರರು ಹಿಂದೂ ಸಂಸ್ಕೃತಿಯ ಬಗ್ಗೆ ಇತ್ತೀಚಿಗೆ ಕೆಲವು ನಾಸ್ತಿಕರು ಅಲ್ಲಲ್ಲಿ ವಾತಾವರಣ ಕಲುಷಿತಗೊಳಿಸುವ ಕೆಲಸ ಮಾಡುತ್ತಿದ್ದಾರೆ ಅಂತವರನ್ನು ಗುರುತಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಆಗ್ರಹಿಸಿದ್ದಾರೆ.

    Dharmasthala case – Demand to find the real accused

  • ಒಂದೂವರೆ ಕೋಟಿ ಮೌಲ್ಯದ ಚಿನ್ನಾಭರಣ ವಶ

    ಒಂದೂವರೆ ಕೋಟಿ ಮೌಲ್ಯದ ಚಿನ್ನಾಭರಣ ವಶ

    ಚಿಕ್ಕಮಗಳೂರು: ಮನೆಗಳ್ಳತನ ಪ್ರಕರಣದಲ್ಲಿ ಮೂವರು ನೇಪಾಳಿ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ಬಂದಿತರಿಂದ ಒಂದೂವರೆ ಕೋಟಿ ಮೌಲ್ಯದ ಚಿನ್ನಾಭರಣ & ಕೃತ್ಯಕ್ಕೆ ಬಳಸಿದ ಎರಡು ಕಾರು ಸೇರಿದಂತೆ ಅಂದಾಜು ಒಟ್ಟು 1,75,00000 ರೂ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಅ. ರಂದು ಬೆಳಗಿನ ಜಾವ 02.55ರ ಗಂಟೆ ಸುಮಾರಿಗೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರಂದೂರು ಗ್ರಾಮದ ಮಣಿಪುರ ಎಸ್ಟೇಟ್‌ನ ಮಾಲೀಕ ಎಚ್ .ಜಿ. ವೆಂಕಟೇಶ್ ಮನೆಯಲ್ಲಿ 6 ಲಕ್ಷ ನಗದು ಮತ್ತು 37,50,000- ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದರು.
    ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಟಿ.ಜಯಕುಮಾರ್ ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡ ರಚನೆ ಮಾಡಿದ್ದು ಮಹಾರಾಷ್ಟ್ರಪೊಲೀಸರ ಸಹಕಾರದೊಂದಿಗೆ ಸಾಂಗ್ಲಿಯಲ್ಲಿ ಮೂವರು ಆರೋಪಿ ಗಳನ್ನು ಬಂಧಿಸಲಾಗಿದೆ.

    ನೇಪಾಳದ ರಾಜ್ಯದ ರಾಜೇಂದ್ರ, ಏಕೇಂದ್ರ ಕುಟಲ್ ಬದ್ವಾಲ್ ,ಕರಂ ಸಿಂಗ್ ಬಹಾದ್ದೂರ್ ಇವರನ್ನು ವಶಕ್ಕೆ ಪಡೆದು ಆರೋಪಿಗಳಿಂದ ಅಂದಾಜು 1,50,00,000 ಮೌಲ್ಯದ 1 ಕೆಜಿ 800 ಗ್ರಾಂ.ತೂಕದ ಚಿನ್ನ, 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ (ಎರಡು ಕಾರುಗಳ ಬೆಲೆ 25,00,000 ಆಗಿದ್ದು )ಅಂದಾಜು ಒಟ್ಟು 1.75.00,000 ರೂ ಮೌಲ್ಯದ ಸ್ವತ್ತುಗಳನ್ನು ವಶಕ್ಕೆಪ ಪಡೆಯಲಾಗಿದೆ.

    Gold ornaments worth one and a half crores seized

  • ಹಕ್ಕಿಮಕ್ಕಿ ಗ್ರಾಮದಲ್ಲಿ ಮಗನಿಂದ ತಾಯಿಯ ಹತ್ಯೆ

    ಹಕ್ಕಿಮಕ್ಕಿ ಗ್ರಾಮದಲ್ಲಿ ಮಗನಿಂದ ತಾಯಿಯ ಹತ್ಯೆ

    ಆಲ್ದೂರು: ತಾಯಿಯನ್ನು ಮಗನೇ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಪವನ್ (28) ತಾಯಿಯನ್ನ ಕೊಂದ ಪಾಪಿ ಮಗ. ತಾಯಿ ಭವಾನಿ (52) ಅವರನ್ನು ಬೆಂಕಿ ಹಾಕಿ ಅರೆಬರೆ ಸುಟ್ಟು ಮನೆಯಲ್ಲೇ ಮಲಗಿದ್ದಾನೆ ಎಂದು ತಿಳಿದುಬಂದಿದೆ.

    ಇವರದು ಒಂಟಿ ಮನೆಯಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಟ್ಟದ ಮೇಲೆ ಇದ್ದು, ಜನವಸತಿ ಪ್ರದೇಶದಿಂದ ಹೊರಗೆ ವಾಸವಾಗಿದ್ದರು ಎನ್ನಲಾಗಿದೆ. ಮನೆಯಲ್ಲಿ ತಂದೆ ತಾಯಿ ಮಗ ಮೂವರು ವಾಸವಾಗಿದ್ದರು ಎನ್ನಲಾಗಿದೆ.

    ತಂದೆ ಮಗ ಇಬ್ಬರು ಮದ್ಯವ್ಯಸನಿಗಳಾಗಿದ್ದರು ಎನ್ನಲಾಗಿದೆ. ಪ್ರಕರಣದ ಬಗ್ಗೆ ತಂದೆಯೇ ಆಲ್ಲೂರು ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

    ಬುಧವಾರ ತಡರಾತ್ರಿಯಲ್ಲಿ ಪೊಲೀಸರು ಮತ್ತು ಸ್ಥಳೀಯರು ಮೃತದೇಹವನ್ನು ಕಿಲೋಮೀಟರ್ ಗಟ್ಟಲೇ ಹೊತ್ತು ತಂದಿದ್ದು ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಆಲ್ಲೂರು ಪಿಎಸ್‌ಐ ಹಾಗೂ ಇನ್ಸ್‌ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪವನ್‌ನನ್ನು ಬಂಧಿಸಿದ್ದಾರೆ.

    Mother murdered by son in Hakkimaki village

  • ಅಯ್ಯನಕೆರೆ ಅಭಿವೃದ್ಧಿಗೆ ಐದು ಕೋಟಿ ಮಂಜೂರು

    ಅಯ್ಯನಕೆರೆ ಅಭಿವೃದ್ಧಿಗೆ ಐದು ಕೋಟಿ ಮಂಜೂರು

    ಚಿಕ್ಕಮಗಳೂರು: ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅಯ್ಯನಕೆರೆಯಲ್ಲಿ ತೂಬು ಮತ್ತು ಕೆರೆ ದುರಸ್ತಿಗೆ ಐದು ಕೋಟಿ ಹಣವನ್ನು ಒದಗಿಸಲಾಗಿದ್ದು, ಮಳೆಗಾಲ ಮುಗಿದ ಕೂಡಲೇ ಏರಿಯನ್ನು ಸೌಂದರ್ಯ ವರ್ಧಿಸಿ ಪ್ರವಾಸಿಗರನ್ನು ಹೆಚ್ಚು ಆಕರ್ಷಣೀಯಗೊಳಿಸಲಾಗುವುದು ಎಂದು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.

    ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪವಿರುವ ಅಯ್ಯನಕೆರೆಗೆ ಇಂದು ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಸಣ್ಣ ನೀರಾವರಿ ಇಲಾಖೆಯಿಂದ ಇಂದು ನಗರದ ಅಯ್ಯನಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಈ ಕೆರೆ ಸುಮಾರು ಐದು ಸಾವಿರಕ್ಕೂ ಹೆಚ್ಚು ಹೆಕ್ಷ್ಟೇರ್‌ಗಳಷ್ಟು ಅಚ್ಚುಕಟ್ಟುದಾರರಿದ್ದಾರೆ, ಅದರ ಜೊತೆ ಅಧಿಕೃತವಾಗಿ ಇನ್ನೂ ಐದು ಸಾವಿರ ಅಚ್ಚುಕಟ್ಟುದಾರರಿದ್ದಾರೆ. ಈ ಕೆರೆಯನ್ನು ಇಲಾಖೆ ವತಿಯಿಂದ ಸ್ವಚ್ಚಗೊಳಿಸಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಇಲ್ಲಿ ಬಲ್ಲಾಳೇಶ್ವರ ದೇವಸ್ಥಾನವಿದ್ದು ದೇವರ ಅನುಗ್ರಹ ಹಾಗೂ ಎಲ್ಲ ಯತಿವರ್ಯರ ಆಶೀರ್ವಾದಿಂದ ಇಲ್ಲಿನ ಎಲ್ಲಾ ಅಚ್ಚುಕಟ್ಟುದಾರರ ಸಹಕಾರದೊಂದಿಗೆ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.

    ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೆಗೌಡ ಮಾತನಾಡಿ, ಪ್ರತೀ ವರ್ಷದಂತೆ ಈ ವರ್ಷವೂ ಗುರುಗಳು ಹಾಗೂ ಗ್ರಾಮಸ್ಥರು ಸೇರಿದಂತೆ ಸರ್ವರ ಸಮ್ಮುಖದಲ್ಲಿ ಇಂದು ಬಾಗಿನ ಅರ್ಪಣೆಯಾಗಿದೆ. ನಮ್ಮ ಹಿರಿಯರು ಅಂದು ಸ್ಥಾಪನೆ ಮಾಡಿರುವ ಕೆರೆಯಿದು. ಈ ಕೆರೆಗೆ ಪ್ರಕೃತಿಯೇ ಹೆಚ್ಚು ಸಹಾಯ ಮಾಡಿದೆ. ಇಂತಹ ನೈಸರ್ಗಿಕ ಮೂಲ ಹೊಂದಿದ ಕೆರೆ ಇದಾಗಿದೆ. ರೈತರು ಈ ಕೆರೆಯ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಈ ನೀರನ್ನು ಸರಿಯಾಗಿ ಬಳಕೆ ಮಾಡಿದರೆ ಐದು ಹದ ಮಾಡಬಹುದು.

    ಆದರೆ ಇದು ಎರಡೇ ಹದವಾಗಿದೆ. ಆದ್ದರಿಂದ ಇದು ನಮ್ಮ ಜೀವಾಳ ಮುಂದಿನ ದಿನಗಳಲ್ಲಿ ಅಚ್ಚುಕಟ್ಟುದಾರರು ಜಾಗರೂಕತೆಯಿಂದ ನೋಡಿಕೊಳ್ಳಬೇಕು. ನೀರಾವರಿ ಇಲಾಖೆಯವರು ಚಾನಲ್ ಹಾಗೂ ಕೆರೆಯನ್ನು ಪ್ರತಿ ತಿಂಗಳಿಗೊಮ್ಮೆ ಸ್ವಚ್ಚತೆ ಮಾಡಬೇಕು. ಕುಡಿಯುವ ನೀರಿನ ಸೌಲಭ್ಯ ಸುತ್ತಮುತ್ತಲ ಜನರಿಗೆ ಈ ಕೆರೆಯಿಂದ ಒದಗಿಸಲಾಗಿದ್ದು, ನೀರಾವರಿಗೆ ಇದನ್ನು ಬಳಸಿಕೊಳ್ಳುವುದರಿಂದ ಈ ಕೆರೆಯನ್ನು ಅಭಿವೃದ್ದಿಪಡಿಸುವಂತೆ ಶಾಸಕರನ್ನು ಕೋರಿದರು.

    ಬಸವ ತತ್ವ ಪೀಠದ ಪೀಠಾಧ್ಯಕ್ಷರಾದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ ನಿರ್ವಾಣ ಸ್ವಾಮಿಗಳ ಆಶೀರ್ವಾದದಿಂದ ನಿರ್ಮಾಣವಾಗಿರುವ ಅಯ್ಯನಕೆರೆ ಈ ಕೆರೆಕಟ್ಟೆ ಒಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ಜೀವವನ್ನು ಪಣಕಿಟ್ಟು ಪವಾಡ ಸದೃಶರಾಗಿ ಬದುಕಿ ಈ ಕೆರೆಯನ್ನು ಉಳಿಸಿರುವುದರಿಂದ ಈ ಭಾಗದ ಸುತ್ತಮುತ್ತಲಿನ ಎಲ್ಲಾ ಜನರ ಜೀವನಾಡಿಯಾಗಿದೆ. ಕೆರೆಯನ್ನು ಆಶೀರ್ವದಿಸಿದ ಕಾರಣಕ್ಕೆ ಇದಕ್ಕೆ ಅಯ್ಯನಕೆರೆ ಎಂಬ ಹೆಸರು ಬಂದಿದೆ ಎಂದರು.

    ಎಲ್ಲಿ ನೀರಿನ ಸೌಕರ್ಯ ಇದೆಯೋ ಅಲ್ಲಿ ವಿಶೇಷವಾಗಿ ನಾಗರಿಕತೆಗಳು ಬೆಳೆದಿವೆ. ಆ ಹಿನ್ನೆಲೆಯಲ್ಲಿ ಸಖರಾಯಪಟ್ಟಣ ಸುತ್ತಮುತ್ತ ಒಂದಿಷ್ಟು ಸಮೃದ್ಧಿಯಾಗಿರುವ ಜನರು ಇದ್ದಾರೆ ಎಂಬುದಕ್ಕೆ ಇಂತಹ ಅಯ್ಯನಕೆರೆಯೇ ಕಾರಣ. ಕೆರೆಯನ್ನು ಅವಲಂಬಿಸಿ ಸಾವಿರಾರು ಜೀವರಾಶಿಗಳು ವಾಸವಾಗಿರುವುದು ನಾವು ಗಮನಿಸಬಹುದು ಇದರಿಂದ ಜೀವ ವೈವಿಧ್ಯತೆ, ಪ್ರಾಕೃತಿಕ ಸಂಪನ್ಮೂಲ ಹೆಚ್ಚಳವಾಗಿರುವುದನ್ನು ನಾವು ಮರೆಯಬಾರದು. ಈ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೆರೆ ತುಂಬಿದ್ದು ನಾಲ್ಕೈದು ವರ್ಷಗಳಿಗೆ ಹೋಲಿಸಿದರೆ ಹದಿನೈದು ದಿನ ಮುಂಚಿತವಾಗಿಯೇ ಕೆರೆ ತುಂಬಿದೆ. ಈ ಭಾಗದ ಜನರಿಗೆ ಭವಿಷ್ಯದ ಭರವಸೆ ನೀಡಿರುವ ಇಂತಹ ಕೆರೆಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ಹೇಳಿದರು.

    ಮುಖಂಡ ಮಹಡಿಮನೆಸತೀಶ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ ಹುಲಿಕೆರೆ ಶ್ರೀ ವೀರಪ್ಪ ಲಿಂಗ ಸ್ವಾಮೀಜಿ, ಶ್ರೀ ಕಡೂರಿನ ಜ್ಞಾನಪ್ರಭ ಸಿದ್ಧರಾಮ ದೇಶೀಕೇಂದ್ರ ಸ್ವಾಮೀಜಿ, ಶ್ರೀ ಶಿವಯೋಗಿ ಶಂಕರ ಸ್ವಾಮೀಜಿ, ಗ್ರಾ.ಪಂ. ಅಧ್ಯಕ್ಷರಾದ ರಾಜಮ್ಮ, ಮಂಗಳ ಹೆಚ್.ಡಿ.ತಮ್ಮಯ್ಯ, ಮುಖಂಡರುಗಳಾದ ಸಿಡಿಎ ಅಧ್ಯಕ್ಷ ನಯಾಜ್ ಅಹ್ಮದ್, ಹೆಚ್.ಪಿ.ಮಂಜೇಗೌಡ, ಪ್ರವೀಣ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

    Five crores sanctioned for the development of Ayyanakere

  • ಮಾಜಿ ಸೈನಿಕ ಮಲ್ಲಿಕಾರ್ಜುನ್ ಸ್ವಾಮಿಗೆ ‘ಭಾರತ ಸೇವಾರತ್ನ’ ಪ್ರಶಸ್ತಿ

    ಮಾಜಿ ಸೈನಿಕ ಮಲ್ಲಿಕಾರ್ಜುನ್ ಸ್ವಾಮಿಗೆ ‘ಭಾರತ ಸೇವಾರತ್ನ’ ಪ್ರಶಸ್ತಿ

    ಚಿಕ್ಕಮಗಳೂರು: ಮಾಜಿ ಸೈನಿಕ ಅಧಿಕಾರಿ ಗೌರವಾನ್ವಿತ ಸುಬೇದಾರ್ ಮೇಜರ್ ಹಾಗೂ ಬೆಂಗಳೂರಿನ ವಸತಿ ಶಿಕ್ಷಣ ಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ್ ಸ್ವಾಮಿ ಅವರಿಗೆ ಕರ್ನಾಟಕ ಕಲಾ ವೇದಿಕೆ ‘ಭಾರತ ಸೇವಾರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

    ಜು.೨೬ ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಕಲಾವೇದಿಕೆಯ ೫೦ನೇ ಸುವರ್ಣ ಮಹೋತ್ಸವ ಮತ್ತು ೧೭ ಸಾಂಸ್ಕೃತಿಕ ಸಿಂಚನ ವೇದಿಕೆ ಏರ್ಪಡಿಸಿದ್ದ ಡಾ. ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಗೌರವ ಸಮರ್ಪಣೆ ಸಮಾರಂಭವನ್ನು ಉದ್ಘಾಟಿಸಿದ ನಿವೃತ್ತ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ ಅವರು ಮಾತನಾಡಿ ಸನ್ಮಾನಿಸಿ ಗೌರವಿಸಿದರು.

    ಕಲಾ ವೇದಿಕೆ ಅಧ್ಯಕ್ಷ ಕಿಶೋರ್ ಕುಮಾರ್ ಅವರು ಪ್ರಶಸ್ತಿಯನ್ನು ನೀಡಿದ್ದು, ಭಾರತ ದೇಶಾದ್ಯಂತ ಮಲ್ಲಿಕಾರ್ಜುನ್ ಸ್ವಾಮಿಯವರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಇವರನ್ನು ಭಾರತ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಹೇಳಿದರು.

    ಮಲ್ಲಿಕಾರ್ಜುನ್ ಸ್ವಾಮಿಯವರು ಜಿಲ್ಲೆಯ ಅಂಬಳೆ ರಸ್ತೆಯಲ್ಲಿರುವ ಲಕ್ಷ್ಮೀಪುರ ಗ್ರಾಮದವರಾಗಿದ್ದು, ವೇದಮೂರ್ತಿ ಬಸವಣ್ಣಯ್ಯ ಕುಟುಂಬಸ್ಥರಾದ ವೇದಮೂರ್ತಿ ಶಿವಕುಮಾರ್‌ಸ್ವಾಮಿ ಹಾಗೂ ಭಾಗೀರಥಮ್ಮ ಇವರ ಜೇಷ್ಠ ಪುತ್ರರಾಗಿದ್ದಾರೆ.

    ಕಾರ್ಯಕ್ರಮದಲ್ಲಿ ಪತ್ರಕರ್ತ ಗಂಡಸಿ ಸದಾನಂದಸ್ವಾಮಿ, ಡಾ. ಟಿ. ಶಿವಕುಮಾರ್, ಶುಭಾಧನಂಜಯ್, ನೃತ್ಯ ನಿರ್ದೇಶಕ ಮುರುಳಿ ಮಾಸ್ಟರ್, ಲಿಖಿತ್ ಮತ್ತಿತರರು ಭಾಗವಹಿಸಿದ್ದರು.

    Former soldier Mallikarjuna Swamy awarded ‘Bharat Sevaratna’