ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು
ಚಿಕ್ಕಮಗಳೂರು: ತಾಲೂಕಿನ ಹೆಸರಾಂತ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ. ಸೋಮವಾರ ಸಂಜೆ ವೇಳೆ ಕಿಡಿಗೇಡಿಗಳು ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತಗಳ...
